Exodus · chapter 30 · verse 6
Exodus 30:6 in Kannada
ಅದನ್ನು ಸಾಕ್ಷಿ ಹಲಗೆಗಳಿದ್ದ ಮಂಜೂಷದ ಮುಂದೆ ಇರುವ ತೆರೆಯ ಮುಂದೆಯೂ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಇರುವ ಮಂಜೂಷದ ಮೇಲಿನ ಕರುಣಾ ಸನದ ಮುಂದೆಯೂ ಇಡಬೇಕು.
Adannu saakshi halagegalidda manjooshada munde iruva tereya mundeyoo naanu ninnannu sandhisuva sthaladalli iruva manjooshada melina karunaa sanada mundeyoo idabeku.
Exodus 30:6 in English
- King James Version (KJV)
- And thou shalt put it before the vail that [is] by the ark of the testimony, before the mercy seat that [is] over the testimony, where I will meet with thee.
- World English Bible (WEB)
- You shall put it before the veil that is by the ark of the covenant, before the mercy seat that is over the covenant, where I will meet with you.
- American Standard Version (ASV)
- And thou shalt put it before the veil that is by the ark of the testimony, before the mercy-seat that is over the testimony, where I will meet with thee.
- Bible in Basic English (BBE)
- And let it be placed in front of the veil before the ark of the law, before the cover which is over the law, where I will come face to face with you.
- Darby Translation (DBY)
- And thou shalt put it in front of the veil which is before the ark of the testimony in front of the mercy-seat which is over the testimony, where I will meet with thee.
- Webster's Bible (WBS)
- And thou shalt put it before the vail that [is] by the ark of the testimony, before the mercy-seat that [is] over the testimony, where I will meet with thee.
- Young's Literal Translation (YLT)
- and thou hast put it before the vail, which [is] by the ark of the testimony, before the mercy-seat which [is] over the testimony, whither I am met with thee.
Read in context
- 4ಗೋಟಿನ ಕೆಳಗೆ ಎರಡೂ ಪಕ್ಕಗಳ ಎರಡು ಮೂಲೆಗಳಲ್ಲಿ ಎರಡು ಬಂಗಾರದ ಬಳೆಗಳನ್ನು ಮಾಡ ಬೇಕು. ಇವುಗಳನ್ನು ಹೊರುವದಕ್ಕಾಗಿ ಅವುಗಳಲ್ಲಿ ಸಿಕ್ಕಿಸಬೇಕು.
- 5ಆ ಕೋಲುಗಳನ್ನು ಜಾಲೀ ಮರದಿಂದ ಮಾಡಿ ಅವುಗಳನ್ನು ಬಂಗಾರದಿಂದ ಹೊದಿಸಬೇಕು.
- 6ಅದನ್ನು ಸಾಕ್ಷಿ ಹಲಗೆಗಳಿದ್ದ ಮಂಜೂಷದ ಮುಂದೆ ಇರುವ ತೆರೆಯ ಮುಂದೆಯೂ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಇರುವ ಮಂಜೂಷದ ಮೇಲಿನ ಕರುಣಾ ಸನದ ಮುಂದೆಯೂ ಇಡಬೇಕು.
- 7ಪ್ರತಿದಿನ ಬೆಳಿಗ್ಗೆ ಆರೋನನು ಪರಿಮಳ ಧೂಪ ವನ್ನು ಅದರ ಮೇಲೆ ಸುಡಬೇಕು. ಅವನು ದೀಪಗಳನ್ನು ಸಿದ್ಧಮಾಡುವಾಗ ಪರಿಮಳ ಧೂಪವನ್ನು ಅದರ ಮೇಲೆ ಸುಡಬೇಕು.
- 8ಆರೋನನು ಸಾಯಂಕಾಲ ದೀಪಗಳನ್ನು ಅಂಟಿಸುವ ಸಮಯದಲ್ಲಿ ಧೂಪವೇದಿಯ ಮೇಲೆ ಧೂಪವನ್ನು ಸುಡಬೇಕು. ಅದೇ ನಿಮ್ಮ ಸಂತತಿಯವರಿಗೆ ಕರ್ತನ ಮುಂದೆ ಅರ್ಪಿಸಬೇಕಾದ ನಿತ್ಯವಾದ ಧೂಪ ವು.
Cross references
- Exodus 25:21–22 ವಿಮೋಚನಕಾಂಡ 25:21–22ಕರುಣಾಸನ ವನ್ನು ಮಂಜೂಷದ ಮೇಲೆ ಇಡಬೇಕು ಮತ್ತು ನೀನು ಮಂಜೂಷದಲ್ಲಿ ನಾನು ನಿನಗೆ ಕೊಡುವ ಸಾಕ್ಷಿ ಹಲಗೆಗಳನ್ನು ಇಡಬೇಕು. ನಾನು ಅಲ್ಲಿ ನಿನ್ನನ್ನು ಸಂಧಿಸಿ ಕರುಣಾಸನದ ಮೇಲಿನಿಂದ ಮಂಜೂಷದ ಮೇಲಿರುವ ಎರಡು ಕೆರೂಬಿಗಳ ಮಧ್ಯದಿಂದ ಇಸ್ರಾಯೇಲ್ ಮಕ್ಕಳ ವಿಷಯದಲ್ಲಿ ಆಜ್ಞಾಪಿಸುವವು ಗಳನ್ನೆಲ್ಲಾ ನಿನಗೆ ತಿಳಿಸುವೆನು.
- 1 Chronicles 28:11 1 ಪೂರ್ವಕಾಲವೃತ್ತಾಂತ 28:11ಆಗ ದಾವೀದನು ತನ್ನ ಮಗನಾದ ಸೊಲೊ ಮೋನನಿಗೆ -- ದ್ವಾರಾಂಗಳದ ಮಾದರಿಯನ್ನೂ ಅದರ ಮನೆಗಳು, ಉಗ್ರಾಣಗಳು, ಮೇಲಿನ ಕೊಠಡಿ ಗಳು, ಅಂತರಂಗದ ಕೊಠಡಿಗಳು, ಕೃಪಾಸನದ ಸ್ಥಾನವು,
- Matthew 27:51 ಮತ್ತಾಯನು 27:51ಆಗ ಇಗೋ, ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೆ ಹರಿದು ಎರಡು ಭಾಗವಾಯಿತು; ಭೂಮಿಯು ಕಂಪಿಸಿತು; ಮತ್ತು ಬಂಡೆ ಗಳು ಸೀಳಿದವು;
- Exodus 30:36 ವಿಮೋಚನಕಾಂಡ 30:36ಅದರಲ್ಲಿ ಸ್ವಲ್ಪ ಪುಡಿಮಾಡಿ ಸಭೆಯ ಗುಡಾರ ದಲ್ಲಿ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಸಾಕ್ಷಿ ಹಲಗೆಗಳ ಮುಂದೆ ಇಡು. ಅದು ನಿಮಗೆ ಅತಿಪರಿಶುದ್ಧ ವಾಗಿರಲಿ.
- Exodus 40:3 ವಿಮೋಚನಕಾಂಡ 40:3ಮಂಜೂಷದ ಸಾಕ್ಷಿಯ ಪೆಟ್ಟಿಗೆಯನ್ನು ಒಳಗಿಟ್ಟು ಅದನ್ನು ನೀನು ತೆರೆಯಿಂದ ಮುಚ್ಚಬೇಕು.
- Leviticus 16:13 ಯಾಜಕಕಾಂಡ 16:13ಅವನು ಸಾಯದ ಹಾಗೆ ಆ ಧೂಪದ ಹೊಗೆಯು ಸಾಕ್ಷಿಯ ಮೇಲಿರುವ ಕೃಪಾಸನವು ಮುಚ್ಚಿಕೊಳ್ಳುವಂತೆ ಆ ಧೂಪವನ್ನು ಕರ್ತನ ಎದುರಿನಲ್ಲಿ ಉರಿಯುವ ಕೆಂಡಗಳ ಮೇಲೆ ಹಾಕಬೇಕು.
- Exodus 26:31–35 ವಿಮೋಚನಕಾಂಡ 26:31–35ನೀಲಿ ಧೂಮ್ರ ರಕ್ತವರ್ಣಗಳಿರುವ ನಯವಾದ ನಾರುಗಳಿಂದ ಹೊಸೆದ ತೆರೆಯನ್ನು ಮಾಡಬೇಕು. ಕೌಶಲ್ಯದಿಂದ ಮಾಡಿದ ಕೆರೂಬಿಗಳುಳ್ಳದ್ದನ್ನಾಗಿ ಅದನ್ನು ಮಾಡಬೇಕು. ಅದನ್ನು ಬಂಗಾರದಿಂದ ಹೊದಿಸಿದ ಬಂಗಾರದ ಕೊಂಡಿಗಳಿದ್ದ ಬೆಳ್ಳಿಯ ನಾಲ್ಕು ಕುಳಿಗಳಲ್ಲಿ ಊರಿಕೊಂಡಿರುವ ನಾಲ್ಕು ಜಾಲೀ ಮರದ ಸ್ತಂಭಗಳಲ್ಲಿ ಅದನ್ನು ತೂಗುಹಾಕಬೇಕು. ಆ ತೆರೆಯನ್ನು ಕೊಂಡಿಗಳ ಕೆಳಗೆ ತೂಗುಹಾಕಿ ತೆರೆಯೊಳಗೆ ಸಾಕ್ಷಿ ಹಲಗೆಗಳ ಮಂಜೂಷವನ್ನು ತರ ಬೇಕು. ಪರಿಶುದ್ಧ ಸ್ಥಳವನ್ನೂ ಅತಿಪರಿಶುದ್ಧ ಸ್ಥಳವನ್ನೂ ಆ ತೆರೆಯು ವಿಂಗಡಿಸುವದು. ಅತಿಪರಿಶುದ್ಧ ಸ್ಥಳದಲ್ಲಿ ಸಾಕ್ಷಿ ಹಲಗೆಗಳ ಮಂಜೂಷದ ಮೇಲೆ ಕರುಣಾಸನ ವನ್ನು ಇಡಬೇಕು. ತೆರೆಯ ಹೊರಗೆ ಮೇಜನ್ನು ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ಭಾಗದಲ್ಲಿ ದೀಪಸ್ತಂಭವನ್ನು ಇಡಬೇಕು. ಉತ್ತರ ಭಾಗದಲ್ಲಿ ಮೇಜನ್ನು ಇಡಬೇಕು.
- Hebrews 4:16 ಇಬ್ರಿಯರಿಗೆ 4:16ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.
- Exodus 40:5 ವಿಮೋಚನಕಾಂಡ 40:5ನೀನು ಧೂಪಕ್ಕೋಸ್ಕರ ಮಾಡಿದ ಚಿನ್ನದ ಬಲಿಪೀಠವನ್ನು ಮಂಜೂಷದ ಸಾಕ್ಷಿಯ ಪೆಟ್ಟಿಗೆಗೆ ಎದುರಾಗಿ ಇಟ್ಟು, ಗುಡಾರದ ಬಾಗಿಲಿಗೆ ತೆರೆಯನ್ನು ಹಾಕಬೇಕು.
- Exodus 40:26 ವಿಮೋಚನಕಾಂಡ 40:26ಚಿನ್ನದ ವೇದಿಯನ್ನು ಸಭೆಯ ಡೇರೆಯಲ್ಲಿ ತೆರೆಯ ಮುಂದೆ ಇಟ್ಟನು.
- Hebrews 9:3–5 ಇಬ್ರಿಯರಿಗೆ 9:3–5ಎರಡನೆಯ ತೆರೆಯ ಆಚೆಯಲ್ಲಿ ಅತಿಪವಿತ್ರ ಸ್ಥಳವೆನಿಸಿಕೊಳ್ಳುವ ಇನ್ನೊಂದು ಗುಡಾರವಿತ್ತು; ಅದರಲ್ಲಿ ಚಿನ್ನದ ಧೂಪಾರತಿ, ಒಳಗೂ ಹೊರಗೂ ಚಿನ್ನದಿಂದ ಹೊದಿಸಿದ್ದ ಒಡಂಬಡಿಕೆಯ ಮಂಜೂಷ ಇವುಗಳಿದ್ದವು; ಆ ಮಂಜೂಷದೊಳಗೆ ಮನ್ನಾ ಇಟ್ಟಿದ್ದ ಚಿನ್ನದ ಪಾತ್ರೆಯೂ ಆರೋನನ ಚಿಗುರಿದ ಕೋಲೂ ಒಡಂಬಡಿಕೆಯ ಕಲ್ಲಿನ ಹಲಿಗೆ ಗಳೂ ಇದ್ದವು; ಅದರ ಮೇಲೆ ಪ್ರಭಾವದ ಕೆರೂಬಿ ಯರು ಕೃಪಾಸನವನ್ನು ಮುಚ್ಚಿಕೊಂಡಿದ್ದರು. ಸದ್ಯಕ್ಕೆ ಈ ವಿಷಯಗಳನ್ನು ಪ್ರತ್ಯೇಕವಾಗಿ ನಾವು ವಿವರಿಸು ವದಕ್ಕೆ ಆಗುವದಿಲ್ಲ.
- Numbers 17:4 ಅರಣ್ಯಕಾಂಡ 17:4ಅವುಗಳನ್ನು ಸಭೆಯ ಗುಡಾರದಲ್ಲಿ ನಾನು ನಿಮ್ಮ ಸಂಗಡ ಸಂಧಿಸುವ ಸಾಕ್ಷಿಯ ವಿಧಿಗಳ ಮುಂದೆ ಇಡಬೇಕು.