Exodus · chapter 31 · verse 10
Exodus 31:10 in Kannada
ಯಾಜಕನಾದ ಆರೋನನ ಸೇವಾ ವಸ್ತ್ರಗಳನ್ನೂ ಪರಿಶುದ್ಧ ವಸ್ತ್ರ ಗಳನ್ನೂ ಯಾಜಕನ ಕೆಲಸಮಾಡುವದಕ್ಕೆ ಅವನ ಮಕ್ಕಳ ವಸ್ತ್ರಗಳನ್ನೂ
Yaajakanaada aaronana sevaa vastragalannoo parishuddha vastra galannoo yaajakana kelasamaaduvadakke avana makkala vastragalannoo
Exodus 31:10 in English
- King James Version (KJV)
- And the cloths of service, and the holy garments for Aaron the priest, and the garments of his sons, to minister in the priest’s office,
- World English Bible (WEB)
- the finely worked garments—the holy garments for Aaron the priest, the garments of his sons to minister in the priest’s office—
- American Standard Version (ASV)
- and the finely wrought garments, and the holy garments for Aaron the priest, and the garments of his sons, to minister in the priest’s office,
- Bible in Basic English (BBE)
- And the robes of needlework, the holy robes for Aaron and for his sons, for their use when acting as priests,
- Darby Translation (DBY)
- and the garments of service, both the holy garments of Aaron the priest, and the garments of his sons, to serve as priests;
- Webster's Bible (WBS)
- And the clothes of service, and the holy garments for Aaron the priest, and the garments of his sons, to minister in the priest's office,
- Young's Literal Translation (YLT)
- and the coloured garments, and the holy garments for Aaron the priest, and the garments of his sons, for acting as priests in;
Read in context
- 8ಮೇಜನ್ನೂ ಅದರ ಉಪಕರಣಗಳನ್ನೂ ಶುದ್ಧವಾದ ದೀಪಸ್ತಂಭವನ್ನೂ ಅದರ ಎಲ್ಲಾ ಉಪಕರಣಗಳನ್ನೂ ಧೂಪವೇದಿಯನ್ನೂ
- 9ದಹನಬಲಿಯ ವೇದಿಯನ್ನೂ ಅದರ ಎಲ್ಲಾ ಉಪಕರಣಗಳನ್ನೂ ಗಂಗಾಳವನ್ನೂ ಅದರ ಪೀಠವನ್ನೂ
- 10ಯಾಜಕನಾದ ಆರೋನನ ಸೇವಾ ವಸ್ತ್ರಗಳನ್ನೂ ಪರಿಶುದ್ಧ ವಸ್ತ್ರ ಗಳನ್ನೂ ಯಾಜಕನ ಕೆಲಸಮಾಡುವದಕ್ಕೆ ಅವನ ಮಕ್ಕಳ ವಸ್ತ್ರಗಳನ್ನೂ
- 11ಅಭಿಷೇಕಿಸುವ ತೈಲವನ್ನೂ ಪರಿಶುದ್ಧ ಸ್ಥಳಕ್ಕೋಸ್ಕರ ವಿರುವ ಪರಿಮಳ ಧೂಪವನ್ನೂ ನಾನು ನಿನಗೆ ಆಜ್ಞಾಪಿಸಿ ದವುಗಳೆಲ್ಲವನ್ನೂ ಅವರು ಮಾಡುವರು ಅಂದನು.
- 12ಕರ್ತನು ಮೋಶೆಯೊಂದಿಗೆ ಮಾತನಾಡಿ--
Cross references
- Leviticus 8:7–8 ಯಾಜಕಕಾಂಡ 8:7–8ಅವನಿಗೆ ಮೇಲಂಗಿಯನ್ನು ಹೊದಿಸಿ ನಡುಕಟ್ಟಿ ನಿಂದ ಅವನ ನಡುವನ್ನು ಕಟ್ಟಿ ನಿಲುವಂಗಿಯನ್ನು ತೊಡಿಸಿ ಅವನ ಮೇಲೆ ಎಫೋದನ್ನು ಹಾಕಿ ಎಫೋದಿನ ವಿಚಿತ್ರವಾದ ನಡುಕಟ್ಟಿನಿಂದ ನಡುವನ್ನು ಕಟ್ಟಿ ಅದ ರಿಂದ ಅವನನ್ನು ಬಿಗಿದನು. ಅವನ ಮೇಲೆ ಎದೆ ಕವಚವನ್ನು ಹಾಕಿ ಆ ಎದೆ ಕವಚದಲ್ಲಿ ಊರೀಮ್ ತುವ್ಮೆಾಮ್ ಇವುಗಳನ್ನು ಸಹ ಹಾಕಿದನು.
- Exodus 28:1–43 ವಿಮೋಚನಕಾಂಡ 28:1–43ಇದಲ್ಲದೆ ನನಗೆ ಯಾಜಕನ ಸೇವೆಮಾಡುವದಕ್ಕೆ ನೀನು ನಿನ್ನ ಅಣ್ಣನಾದ ಆರೋನನನ್ನೂ ಅವನ ಮಕ್ಕಳಾದ ನಾದಾಬ್ ಅಬೀಹೂ ಎಲಿಯೇಜರ್ ಈತಾಮಾರ್ ಎಂಬವರನ್ನೂ ಇಸ್ರಾಯೇಲ್ ಮಕ್ಕಳಿಂದ ನಿನ್ನ ಹತ್ತಿರ ಬರಮಾಡ ಬೇಕು. ನಿನ್ನ ಸಹೋದರನಾದ ಆರೋನನ ಗೌರವ ಕ್ಕೋಸ್ಕರವೂ ಅಲಂಕಾರಕ್ಕೋಸ್ಕರವೂ ಪರಿಶುದ್ಧ ವಸ್ತ್ರಗಳನ್ನು ನೀನು ಮಾಡಿಸಬೇಕು. ಇದಲ್ಲದೆ ನಾನು ಜ್ಞಾನದ ಆತ್ಮವನ್ನು ತುಂಬಿಸಿದ ವಿವೇಕ ಹೃದಯ ವಿರುವವರ ಸಂಗಡ ನೀನು ಮಾತನಾಡು, ಅವರು ಆರೋನನ ವಸ್ತ್ರಗಳನ್ನು ಮಾಡಲಿ. ಅವನು ನನಗೆ ಯಾಜಕ ಸೇವೆಮಾಡುವಂತೆ ನೀನು ಅವನನ್ನು ಪ್ರತಿಷ್ಠಿಸ ಬೇಕು. ಅವರು ಮಾಡಬೇಕಾದ ವಸ್ತ್ರಗಳು ಇವೇ: ಎದೆಪದಕವು ಎಫೋದ ನಿಲುವಂಗಿ ಕಸೂತಿಯ ಕೆಲಸದ ಮೇಲಂಗಿ ಮುಂಡಾಸ ನಡುಕಟ್ಟು; ನಿನ್ನ ಸಹೋದರ ನಾದ ಆರೋನನೂ ಅವನ ಕುಮಾರರೂ ನನಗೆ ಯಾಜಕ ಸೇವೆಮಾಡುವದಕ್ಕೆ ಅವರಿಗಾಗಿ ಪರಿಶುದ್ಧ ವಸ್ತ್ರಗಳನ್ನು ಮಾಡಬೇಕು. ಅವರು ಬಂಗಾರವನ್ನೂ ನೀಲಿ ಧೂಮ್ರ ರಕ್ತವರ್ಣದ ನೂಲನ್ನೂ ನಯವಾದ ನಾರು ಮಡಿಯನ್ನೂ ತಕ್ಕೊಳ್ಳಬೇಕು. ಎಫೋದನ್ನು ಬಂಗಾರದಿಂದಲೂ ನೀಲಿ ಧೂಮ್ರ ರಕ್ತವರ್ಣದ ನೂಲಿನಿಂದಲೂ ನಯವಾದ ಹೊಸೆದ ನಾರಿನಿಂದಲೂ ಕುಶಲ ಕಲೆಯಿಂದಲೂ ಮಾಡಬೇಕು. ಅದರ ಎರಡೂ ಅಂಚುಗಳಲ್ಲಿ ಜೋಡಿಸುವದಕ್ಕೆ ಅದಕ್ಕೆ ಎರಡು ಹೆಗಲು ಭಾಗಗಳಿರಬೇಕು, ಅವು ಜೋಡಿಸಲ್ಪಡಬೇಕು. ಅದರ ಮೇಲಿರುವ ವಿಚಿತ್ರ ವಾದ ಎಫೋದಿನ ನಡುಕಟ್ಟು ಅದೇ ಕೆಲಸದ್ದಾಗಿ ಅಂದರೆ ಬಂಗಾರದಿಂದಲೂ ನೀಲಿ ಧೂಮ್ರ ರಕ್ತ ವರ್ಣದ ನೂಲಿನಿಂದಲೂ ನಯವಾದ ಹೊಸೆದ ನಾರಿನಿಂದಲೂ ಮಾಡಿದ್ದಾಗಿರಬೇಕು. ನೀನು ಎರಡು ಗೋಮೇಧಿಕ ಕಲ್ಲುಗಳನ್ನು ತೆಗೆದುಕೊಂಡು ಇಸ್ರಾ ಯೇಲ್ ಮಕ್ಕಳ ಹೆಸರುಗಳನ್ನು ಅವುಗಳ ಮೇಲೆ ಕೆತ್ತಬೇಕು. ಒಂದು ಕಲ್ಲಿನ ಮೇಲೆ ಆರು ಹೆಸರು ಗಳನ್ನೂ ಇನ್ನೊಂದು ಕಲ್ಲಿನ ಮೇಲೆ ಉಳಿದ ಆರು ಹೆಸರುಗಳನ್ನೂ ಅವರವರ ಜನನದ ಪ್ರಕಾರ ಕೆತ್ತಬೇಕು. ಕಲ್ಲು ಕೆತ್ತುವವರ ಕೆಲಸದಿಂದ ಮುದ್ರೆ ಕೆತ್ತುವ ಪ್ರಕಾರ ಆ ಎರಡು ಕಲ್ಲುಗಳನ್ನು ಇಸ್ರಾಯೇಲ್ ಮಕ್ಕಳ ಹೆಸರುಗಳಿಗನುಸಾರವಾಗಿ ಕೆತ್ತಿಸಿ ಅವುಗಳನ್ನು ಬಂಗಾ ರದ ಜವೆಗಳಲ್ಲಿ ಹೊದಿಸಿದ್ದಾಗಿ ಮಾಡಬೇಕು. ಆ ಎರಡು ಕಲ್ಲುಗಳನ್ನು ಎಫೋದಿನ ಹೆಗಲು ಭಾಗದ ಮೇಲೆ ಇಸ್ರಾಯೇಲ್ ಮಕ್ಕಳ ಜ್ಞಾಪಕಾರ್ಥವಾದ ಕಲ್ಲುಗಳಾಗಿ ಇಡಬೇಕು. ಆರೋನನು ತನ್ನ ಎರಡು ಹೆಗಲುಗಳ ಮೇಲೆ ಅವರ ಹೆಸರುಗಳನ್ನು ಕರ್ತನ ಸನ್ನಿಧಿಯಲ್ಲಿ ಜ್ಞಾಪಕಾರ್ಥವಾಗಿ ಹೊರಬೇಕು. ನೀನು ಬಂಗಾರದ ಜವೆಗಳನ್ನು ಮಾಡಬೇಕು. ಶುದ್ಧ ಬಂಗಾರದ ಎರಡು ಸರಪಣಿಗಳನ್ನು ಹೆಣಿಗೇ ಕೆಲಸದಿಂದ ಮಾಡಿ ಆ ಹೆಣೆದ ಸರಪಣಿಗಳ ಕೊನೆ ಗಳನ್ನು ಜವೆಗಳಿಗೆ ಸೇರಿಸಬೇಕು. ನ್ಯಾಯದ ಎದೆ ಪದಕವನ್ನು ಕುಶಲ ಕಲೆಯ ಕೆಲಸದಿಂದ ಅಂದರೆ ಎಫೋದಿನ ಕೆಲಸದ ಹಾಗೆಯೇ ಚಿನ್ನದಿಂದಲೂ ನೀಲಿ ಧೂಮ್ರ ರಕ್ತವರ್ಣದ ನೂಲಿ ನಿಂದಲೂ ನಯವಾದ ಹೊಸೆದ ನಾರಿನಿಂದಲೂ ನೀನು ಮಾಡಿಸಬೇಕು. ಅದು ಚಚ್ಚೌಕವಾಗಿಯೂ ಇಮ್ಮಡಿ ಸಿದ್ದಾಗಿಯೂ ಇದ್ದು ಗೇಣುದ್ದವಾಗಿಯೂ ಗೇಣಗಲ ವಾಗಿಯೂ ಇರಬೇಕು. ನೀನು ಅದರಲ್ಲಿ ನಾಲ್ಕು ಕಲ್ಲುಗಳ ನಾಲ್ಕು ಸಾಲುಗಳಾಗಿ ಕಲ್ಲು ಜವೆಗಳನ್ನು ಮಾಡಬೇಕು; ಮೊದಲನೆಯ ಸಾಲಿನಲ್ಲಿ ಪದ್ಮರಾಗ ಗೋಮೇಧಕ ಮಾಣಿಕ್ಯಗಳಿರಬೇಕು. ಇದೇ ಮೊದಲ ನೆಯ ಸಾಲು. ಎರಡನೆಯ ಸಾಲಿನಲ್ಲಿ ಪಚ್ಚೆ ನೀಲ ವಜ್ರ ಇರಬೇಕು. ಮೂರನೆಯ ಸಾಲಿನಲ್ಲಿ ಸುವರ್ಣ ವೈದೂರ್ಯ ಸುಗಂಧಿಗಳಿರಬೇಕು. ನಾಲ್ಕನೆಯ ಸಾಲಿನಲ್ಲಿ ಬೆರುಲ್ಲ ಗೋಮೇಧಕ ವಜ್ರಗಳಿರಬೇಕು. ಇವು ಚಿನ್ನದ ಜವೆಗಳಲ್ಲಿ ಸೇರಿಸಿದವುಗಳಾಗಿರಬೇಕು. ಈ ಕಲ್ಲುಗಳು ಇಸ್ರಾಯೇಲ್ ಮಕ್ಕಳ ಹೆಸರುಗಳು ಳ್ಳವುಗಳಾಗಿ ಅವರ ಹೆಸರುಗಳ ಪ್ರಕಾರ ಅವು ಹನ್ನೆರಡಾ ಗಿರಬೇಕು. ಅವು ಒಂದೊಂದರ ಮೇಲೆ ಒಂದೊಂದು ಹೆಸರಿದ್ದು ಹನ್ನೆರಡು ಕುಲಗಳ ಪ್ರಕಾರ ಮುದ್ರೆಗಳ ಹಾಗೆ ಕೆತ್ತಿರಬೇಕು. ಎದೆಪದಕದ ಮೇಲಿನ ಕೊನೆಯಲ್ಲಿ ಶುದ್ಧ ಬಂಗಾರದಿಂದ ಹೆಣೆದ ಸರಪಣಿಗಳನ್ನು ಮಾಡಬೇಕು. ಆ ಎದೆಪದಕದ ಮೇಲೆ ಬಂಗಾರದ ಎರಡು ಬಳೆ ಗಳನ್ನು ಮಾಡಿ ಆ ಎರಡು ಬಳೆಗಳನ್ನು ಎದೆಪದಕದ ಎರಡು ಕೊನೆಗಳಲ್ಲಿ ಹಾಕಬೇಕು. ಚಿನ್ನದಿಂದ ಹೆಣೆದ ಆ ಎರಡು ಸರಪಣಿಗಳನ್ನು ಎದೆಪದಕದ ಕೊನೆಗಳ ಲ್ಲಿರುವ ಎರಡು ಬಳೆಗಳಲ್ಲಿ ಸೇರಿಸಬೇಕು. ಹೆಣೆದ ಆ ಎರಡು ಸರಪಣಿಗಳ ಕೊನೆಗಳನ್ನು ಎರಡು ಜವೆಗಳಲ್ಲಿ ಸೇರಿಸಿ ಎಫೋದಿನ ಹೆಗಲು ಭಾಗಗಳ ಮುಂದುಗಡೆ ಯಲ್ಲಿ ಇರಿಸಬೇಕು. ಬಂಗಾರದಿಂದ ಎರಡು ಬಳೆ ಗಳನ್ನು ಮಾಡಿ ಎದೆಪದಕದ ಎರಡು ಅಂಚುಗಳಲ್ಲಿ ಸೇರಿಸಿ ಎಫೋದಿನ ಬದಿಗೆ ಒಳಗಡೆಯಲ್ಲಿ ಹಾಕಬೇಕು. ಚಿನ್ನದ ಬೇರೆ ಎರಡು ಬಳೆಗಳನ್ನು ಮಾಡಿ ಎಫೋದಿನ ಎರಡು ಹೆಗಲ ಭಾಗಗಳಲ್ಲಿ ಕೆಳಗೆ ಮುಂದುಗಡೆಯಲ್ಲಿ ಎಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಅದನ್ನು ಜೋಡಣೆಯ ಎದುರಾಗಿ ಇರಿಸಬೇಕು. ಆ ಎದೆ ಪದಕವನ್ನು ಎಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಇರುವಂತೆಯೂ ಎದೆಪದಕವು ಎಫೋದನ್ನು ಬಿಟ್ಟು ಅಲ್ಲಾಡದಂತೆಯೂ ಅದರ ಬಳೆಗಳನ್ನು ಎಫೋ ದಿನ ಉಂಗುರಗಳಿಗೆ ನೀಲಿ ನೂಲಿನ ದಾರದಿಂದ ಕಟ್ಟಬೇಕು. ಹೀಗೆ ಆರೋನನು ಪರಿಶುದ್ಧ ಸ್ಥಳಕ್ಕೆ ಬರುವಾಗ ಇಸ್ರಾಯೇಲ್ ಮಕ್ಕಳ ಹೆಸರುಗಳನ್ನು ಯಾವಾಗಲೂ ಕರ್ತನ ಮುಂದೆ ಜ್ಞಾಪಕಮಾಡುವದಕ್ಕಾಗಿ ನ್ಯಾಯದ ಎದೆ ಪದಕವನ್ನು ತನ್ನ ಹೃದಯದ ಮೇಲೆ ಹೊರಬೇಕು. ನ್ಯಾಯದ ಎದೆಪದಕದಲ್ಲಿ ಊರೀಮ್ ತುವ್ಮೆಾಮ್ ಗಳನ್ನು ಇಡಬೇಕು. ಆರೋನನು ಕರ್ತನ ಸನ್ನಿಧಿಗೆ ಬರುವ ಸಮಯದಲ್ಲಿ ಅವು ಅವನ ಹೃದಯದ ಮೇಲೆ ಇರಬೇಕು. ಹೀಗೆ ಆರೋನನು ಕರ್ತನ ಮುಂದೆ ಯಾವಾಗಲೂ ಇಸ್ರಾಯೇಲ್ ಮಕ್ಕಳ ನ್ಯಾಯವನ್ನು ತನ್ನ ಹೃದಯದ ಮೇಲೆ ಹೊರಬೇಕು. ಇದಲ್ಲದೆ ಎಫೋದಿನ ನಿಲುವಂಗಿಯನ್ನೆಲ್ಲಾ ನೀಲಿ ಬಣ್ಣದ ನೂಲಿನಲ್ಲಿ ಮಾಡಬೇಕು. ಅದರ ಮಧ್ಯದಲ್ಲಿ ಮೇಲ್ಗಡೆ (ತಲೆದೂರಿಸುವದಕ್ಕೆ) ರಂಧ್ರವಿರಬೇಕು. ಆ ರಂಧ್ರದ ಸುತ್ತಲೂ ಹೆಣಿಗೆಯ ಕೆಲಸದ ಗೋಟಿರ ಬೇಕು. ಅದು ಹರಿಯದ ಹಾಗೆ ಅದಕ್ಕೆ ರಂಧ್ರದ ಕವಚವಿರಬೇಕು. ನಿಲುವಂಗಿಯ ಅಂಚಿನ ಮೇಲೆ ನೀಲ ಧೂಮ್ರ ರಕ್ತವರ್ಣಗಳ ದಾಳಿಂಬರಗಳನ್ನು ಅದರ ಅಂಚಿನ ಸುತ್ತಲೂ ಮಾಡಿ ಅವುಗಳ ಮಧ್ಯದಲ್ಲಿ ಬಂಗಾರದ ಗಂಟೆಗಳನ್ನು ಸುತ್ತಲೂ ಇರಿಸ ಬೇಕು. ಬಂಗಾರದ ಗಂಟೆಯೂ ದಾಳಿಂಬರವೂ ಮೇಲಂಗಿಯ ಅಂಚಿನ ಸುತ್ತಲೂ ಇರಬೇಕು. ಇದು ಸೇವೆಗಾಗಿ ಆರೋನನ ಮೇಲೆ ಇರಬೇಕು. ಕರ್ತನ ಸಮ್ಮುಖದಲ್ಲಿ ಪರಿಶುದ್ಧ ಸ್ಥಳಕ್ಕೆ ಬರುತ್ತಾ ಹೋಗುತ್ತಾ ಇರುವ ಸಮಯದಲ್ಲಿ ಅವನು ಸಾಯದಂತೆ ಅವುಗಳ ಶಬ್ದವು ಕೇಳಿಸಬೇಕು. ಶುದ್ಧ ಬಂಗಾರದ ತಗಡು ಗಳನ್ನು ಮಾಡಿ ಮುದ್ರೆ ಕೆತ್ತುವ ಪ್ರಕಾರ ಕರ್ತನಿಗೆ ಪರಿಶುದ್ಧ ಎಂದು ಅದರ ಮೇಲೆ ಕೆತ್ತಬೇಕು. ಅದು ಮುಂಡಾಸದ ಮುಂಭಾಗದಲ್ಲಿರುವಂತೆ ನೀನು ಅದನ್ನು ನೀಲಿ ನೂಲಿನಿಂದ ಕಟ್ಟಬೇಕು. ಇಸ್ರಾಯೇಲ್ ಮಕ್ಕಳು ತಮ್ಮ ಪರಿಶುದ್ಧ ದಾನಗಳನ್ನೆಲ್ಲಾ ಪರಿಶುದ್ಧ ಮಾಡುವ ಪರಿಶುದ್ಧ ಕಾರ್ಯಗಳ ಅಕ್ರಮವನ್ನು ಆರೋನನು ಹೊರುವ ಹಾಗೆ ಅದು ಆರೋನನ ಹಣೆಯ ಮೇಲಿರಬೇಕು. ಕರ್ತನ ಮುಂದೆ ಅವುಗಳೆಲ್ಲಾ ಅಂಗೀಕಾರವಾಗುವ ಹಾಗೆ ಅದು ಯಾವಾಗಲೂ ಅವನ ಹಣೆಯ ಮೇಲೆ ಇರಬೇಕು. ನಯವಾದ ನಾರಿನಿಂದ ಕಸೂತಿ ಮಾಡಿದ ಮೇಲಂಗಿಯನ್ನೂ ನಯವಾದ ನಾರಿನ ಮುಂಡಾಸ ವನ್ನೂ ಹೆಣಿಗೆಯ ಕೆಲಸದ ನಡುಕಟ್ಟನ್ನೂ ಮಾಡಿಸ ಬೇಕು. ಆರೋನನ ಕುಮಾರರಿಗೆ ಅಂಗಿಗಳನ್ನು ನಡುಕ ಟ್ಟುಗಳನ್ನು ಮಾಡಿಸಿ ಅವರಿಗೆ ಗೌರವಾರ್ಥವಾಗಿಯೂ ಅಂದಕ್ಕಾಗಿಯೂ ಕುಲಾಯಿಗಳನ್ನೂ ಮಾಡಿಸಬೇಕು. ಅವುಗಳನ್ನು ನಿನ್ನ ಸಹೋದರನಾದ ಆರೋನ ನಿಗೂ ಅವನ ಕುಮಾರರಿಗೂ ತೊಡಿಸಿ ಅವರನ್ನು ಅಭಿಷೇಕಿಸಿ ಪ್ರತಿಷ್ಠೆಮಾಡು. ಅವರು ನನಗೆ ಯಾಜಕ ಸೇವೆಮಾಡುವ ಹಾಗೆ ಅವರನ್ನು ಶುದ್ಧಮಾಡು. ಅವರ ಬೆತ್ತಲೆಯನ್ನು ಮುಚ್ಚುವ ಹಾಗೆ ನಾರಿನ ಇಜಾರುಗಳನ್ನು ಮಾಡಿಸು. ಅವು ಸೊಂಟದಿಂದ ತೊಡೆಯ ವರೆಗೆ ಇರಬೇಕು.ಆರೋನನೂ ಅವನ ಕುಮಾರರೂ ಸಭೆಯ ಗುಡಾರಕ್ಕೆ ಹೋಗುವಾಗಲೂ ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವದಕ್ಕೆ ಯಜ್ಞವೇದಿಯ ಸವಿಾಪಕ್ಕೆ ಬರುವಾಗಲೂ ತಮ್ಮ ಅಕ್ರಮವನ್ನು ಹೊತ್ತು ಸಾಯದ ಹಾಗೆ ಇವುಗಳನ್ನು ಹಾಕಿಕೊಂಡಿರಬೇಕು. ಇದೇ ಅವನಿಗೂ ಅವನ ತರುವಾಯ ಅವನ ಸಂತತಿಯ ವರಿಗೂ ಇರಬೇಕಾದ ನಿತ್ಯವಾದ ಕಟ್ಟಳೆ. ಆರೋನನೂ ಅವನ ಕುಮಾರರೂ ಸಭೆಯ ಗುಡಾರಕ್ಕೆ ಹೋಗುವಾಗಲೂ ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವದಕ್ಕೆ ಯಜ್ಞವೇದಿಯ ಸವಿಾಪಕ್ಕೆ ಬರುವಾಗಲೂ ತಮ್ಮ ಅಕ್ರಮವನ್ನು ಹೊತ್ತು ಸಾಯದ ಹಾಗೆ ಇವುಗಳನ್ನು ಹಾಕಿಕೊಂಡಿರಬೇಕು. ಇದೇ ಅವನಿಗೂ ಅವನ ತರುವಾಯ ಅವನ ಸಂತತಿಯ ವರಿಗೂ ಇರಬೇಕಾದ ನಿತ್ಯವಾದ ಕಟ್ಟಳೆ.
- Numbers 4:5–14 ಅರಣ್ಯಕಾಂಡ 4:5–14ಪಾಳೆಯವು ಹೊರಡು ವಾಗ ಆರೋನನೂ ಅವನ ಮಕ್ಕಳೂ ಒಳಗೆ ಹೋಗಿ ತೆರೆಯನ್ನು ಇಳಿಸಿ ಅದರಿಂದ ಸಾಕ್ಷಿಯ ಮಂಜೂಷವನ್ನು ಮುಚ್ಚಿ ಅದರ ಮೇಲೆ ಕಡಲು ಹಂದಿಯ ಚರ್ಮದ ಹೊದಿಕೆಯನ್ನು ಹೊದಿಸಬೇಕು. ಅದರ ಮೇಲ್ಭಾಗ ದಲ್ಲಿ ಪೂರ್ಣವಾದ ನೀಲಿ ವಸ್ತ್ರವನ್ನು ಹಾಸಿ ಅದರ ಕೋಲುಗಳನ್ನು ಇಡಬೇಕು. 7 ಸಮ್ಮುಖದ ರೊಟ್ಚಿಯ ಮೇಜಿನ ಮೇಲೆ ಅವರು ನೀಲಿ ವಸ್ತ್ರವನ್ನು ಹಾಸಿ ಅದರ ಮೇಲೆ ಪಾತ್ರೆ ಚಮಟಿಕೆ ಪಾನದ ಅರ್ಪ ಣೆಯ ಹೂಜಿ ಇವುಗಳನ್ನು ಇಡಬೇಕು. ನಿತ್ಯವಾದ ರೊಟ್ಟಿಯೂ ಅದರ ಮೇಲೆ ಇರಬೇಕು. ಅವೆ ಲ್ಲವುಗಳ ಮೇಲೆ ಕಡುಗೆಂಪಾದ ವಸ್ತ್ರವನ್ನು ಹಾಸಿ ಅದನ್ನು ಕಡಲು ಹಂದಿಯ ಚರ್ಮಗಳ ಹೊದಿಕೆಯಿಂದ ಹೊದಿಸಿ ಅದರ ಕೋಲುಗಳನ್ನು ಇಡಬೇಕು. ಇದ ಲ್ಲದೆ ಅವರು ನೀಲಿ ವಸ್ತ್ರವನ್ನು ತಕ್ಕೊಂಡು ಅದರಿಂದ ದೀಪಸ್ತಂಭವನ್ನೂ ಅದರ ದೀಪಗಳನ್ನೂ ಚಮಟಿಕೆಗಳನ್ನೂ ದೀಪದ ಕುಡಿತೆಗೆಯುವ ಬಟ್ಟಲುಗಳನ್ನೂ ಅದಕ್ಕೆ ಸೇವೆ ಮಾಡುವ ಸಕಲ ಎಣ್ಣೆಯ ಪಾತ್ರೆಗಳನ್ನೂ ಮುಚ್ಚಬೇಕು. ಅವರು ಅದನ್ನೂ ಅದರ ಎಲ್ಲಾ ವಸ್ತುಗಳನ್ನೂ ಕಡಲು ಹಂದಿಯ ಚರ್ಮಗಳ ಮುಚ್ಚಳ ದೊಳಗೆ ಇಟ್ಟು ಅಡ್ಡದಂಡೆಯ ಮೇಲೆ ಹಾಕಬೇಕು. ಇದಲ್ಲದೆ ಬಂಗಾರದ ಬಲಿಪೀಠದ ಮೇಲೆ ಅವರು ನೀಲಿ ವಸ್ತ್ರವನ್ನು ಹಾಸಿ ಅದನ್ನು ಕಡಲು ಹಂದಿಯ ಚರ್ಮವನ್ನು ಮುಚ್ಚಳ ಹೊದಿಸಿ ಅದರ ಕೋಲುಗಳನ್ನು ಇಡಬೇಕು. ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವ ಸೇವೆಯ ಎಲ್ಲಾ ವಸ್ತುಗಳನ್ನು ಅವರು ತಕ್ಕೊಂಡು ನೀಲಿ ವಸ್ತ್ರದಿಂದ ಕಟ್ಟಿ ಕಡಲು ಹಂದಿಯ ಚರ್ಮಗಳ ಹೊದಿಕೆಯಿಂದ ಮುಚ್ಚಿ ಅಡ್ಡದಂಡೆಯ ಮೇಲೆ ಹಾಕಬೇಕು. ಬಲಿಪೀಠದ ಬೂದಿಯನ್ನು ತೆಗೆದು ಅದರ ಮೇಲೆ ಕಡುಗೆಂಪಾದ ವಸ್ತ್ರವನ್ನು ಹಾಸಿ ಸೇವೆ ಮಾಡುವ ಎಲ್ಲಾ ವಸ್ತುಗಳನ್ನೂ ಅಗ್ನಿಪಾತ್ರೆಗಳನ್ನೂ ಮುಳ್ಳುಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಬಲಿಪೀಠದ ಎಲ್ಲಾ ವಸ್ತುಗಳನ್ನೂ ಅದರ ಮೇಲಿಟ್ಟು ಕಡಲು ಹಂದಿಯ ಚರ್ಮದ ಹೊದಿಕೆಯನ್ನು ಹಾಕಿ ಅದರ ಕೋಲುಗಳನ್ನು ಇಡಬೇಕು.
- Leviticus 8:13 ಯಾಜಕಕಾಂಡ 8:13ಮೋಶೆಯು ಆರೋನನ ಮಕ್ಕಳನ್ನು ಕರತಂದು ಅವರ ಮೇಲೆ ಮೇಲಂಗಿಗಳನ್ನು ಹಾಕಿ ಅವರ ನಡುಗಳನ್ನು ಕಟ್ಟಿ ಕರ್ತನು ಮೋಶೆಗೆ ಆಜ್ಞಾಪಿಸಿದಂತೆ ಅವರ ಮೇಲೆ ಕುಲಾಯಿಗಳನ್ನು ಇಟ್ಟನು.
- Exodus 39:1–43 ವಿಮೋಚನಕಾಂಡ 39:1–43ಕರ್ತನು ಮೋಶೆಗೆ ಆಜ್ಞಾಪಿಸಿದ ಮೇರೆಗೆನೀಲಿ ಧೂಮ್ರ ರಕ್ತವರ್ಣದ ನೂಲಿನಿಂದ ಪವಿತ್ರ ಆಲಯದ ಸೇವೆಮಾಡುವದಕ್ಕೆ ಸೇವಾ ವಸ್ತ್ರಗಳನ್ನೂ ಆರೋನನಿಗೆ ಪರಿಶುದ್ಧ ವಸ್ತ್ರಗಳನ್ನು ಮಾಡಿದರು. ಅವನು ಎಫೋದನ್ನು ಚಿನ್ನದಿಂದಲೂ ನೀಲಿ ಧೂಮ್ರ ಮತ್ತು ರಕ್ತವರ್ಣ ನಯವಾಗಿ ಹೊಸೆದ ನೂಲು ಇವುಗಳಿಂದ ಮಾಡಿದನು. ಅವರು ಚಿನ್ನವನ್ನು ಹೊಡೆದು ತೆಳುವಾದ ತಗಡುಗಳನ್ನಾಗಿಮಾಡಿ ಅದನ್ನು ಕತ್ತರಿಸಿ ತೆಳುವಾದ ಎಳೆಗಳನ್ನಾಗಿಮಾಡಿ ಆ ಎಳೆಗಳನ್ನೂ ನೀಲಿ ಧೂಮ್ರ ರಕ್ತವರ್ಣ ನಯವಾಗಿ ಹೊಸೆದ ನೂಲುಗಳೊಂದಿಗೆ ಸೇರಿಸಿ ಕಸೂತಿ ಕೆಲಸ ಮಾಡು ವದಕ್ಕೆ ಉಪಯೋಗಿಸುತ್ತಿದ್ದರು. (ಎಫೋದಕ್ಕೆ) ಜೋಡಿಸಲು ಹೆಗಲ ಪಟ್ಟಿಯನ್ನು ತಯಾರಿಸಿದರು; ಅದರ ಎರಡೂ ಅಂಚುಗಳು ಜೋಡಿಸಲ್ಪಟ್ಟಿದ್ದವು. ಅದರ ಮೇಲಿರುವ ವಿಚಿತ್ರವಾದ ಎಫೋದಿನ ನಡು ಕಟ್ಟು ಅದೇ ಕೆಲಸಕ್ಕನುಸಾರವಾಗಿ ಚಿನ್ನ ನೀಲಿ ಧೂಮ್ರ ರಕ್ತವರ್ಣ ಹೊಸೆದ ನಯವಾದ ನಾರುಗಳುಳ್ಳದ್ದಾಗಿದ್ದು ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಇತ್ತು. ಗೋಮೇಧಕ ಕಲ್ಲುಗಳನ್ನು ಮುದ್ರೆಯನ್ನು ಕೆತ್ತು ವಂತೆ ಬಂಗಾರದಲ್ಲಿ ಕೆತ್ತಲ್ಪಟ್ಟವುಗಳಾಗಿ ಇಸ್ರಾಯೇಲಿನ ಮಕ್ಕಳ ಹೆಸರುಗಳ ಪ್ರಕಾರ ಮಾಡಿದರು. ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವನು ಅವುಗಳನ್ನು ಎಫೋದಿನ ಹೆಗಲಿನ ಭಾಗಗಳ ಮೇಲೆ ಇಸ್ರಾ ಯೇಲ್ಯರ ಮಕ್ಕಳ ಜ್ಞಾಪಕಾರ್ಥವಾದ ಕಲ್ಲುಗಳಿರ ತಕ್ಕದ್ದೆಂದು ಅವುಗಳನ್ನು ಇಟ್ಟನು. ಎದೆಪದಕವನ್ನು ಕೌಶಲ್ಯ ಕೆಲಸದಿಂದ ಎಫೋದಿನ ಕೆಲಸದ ಹಾಗೆಯೇ ಬಂಗಾರ ನೀಲಿ ಧೂಮ್ರ ರಕ್ತವರ್ಣ ಹೊಸೆದ ನಯವಾದ ನಾರುಗಳಿಂದ ಮಾಡಿದರು. ಅದು ಚಚ್ಚೌಕವಾಗಿತ್ತು; ಎದೆಪದಕವನ್ನು ಇಮ್ಮಡಿ ಸಿದ್ದಾಗಿ ಮಾಡಿದರು. ಅದು ಗೇಣುದ್ದವಾಗಿಯೂ ಗೇಣಗಲವಾಗಿಯೂ ಇಮ್ಮಡಿಸಿದ್ದಾಗಿತ್ತು. ಅದರಲ್ಲಿ ಕಲ್ಲುಗಳನ್ನು ನಾಲ್ಕು ಸಾಲುಗಳಾಗಿ ಕೂಡ್ರಿಸಿದರು; ಮಾಣಿಕ್ಯ ಪುಷ್ಯರಾಗ ಸ್ಪಟಿಕ ಇವು ಮೊದಲನೆಯ ಸಾಲಿನಲ್ಲಿ ಇದ್ದವು. ಕೆಂಪರಳು ನೀಲ ವಜ್ರ ಇವು ಎರಡನೆಯ ಸಾಲಿನಲ್ಲಿ ಇದ್ದವು. ಪದ್ಮರಾಗ, ವೈದೂರ್ಯ, ಸುಗಂಧ ಇವು ಮೂರನೆಯ ಸಾಲಿ ನಲ್ಲಿದ್ದವು. ಬೆರುಲ್ಲ ಗೋಮೇಧಕ ವೈದೂರ್ಯ ಇವು ನಾಲ್ಕನೆಯ ಸಾಲಿನಲ್ಲಿ ಇದ್ದವು. ಇವು ಕೆತ್ತಲ್ಪಟ್ಟ ಚಿನ್ನದಲ್ಲಿ ಕೂಡ್ರಿಸಿದವುಗಳಾಗಿದ್ದವು. ಆ ಕಲ್ಲುಗಳು ಇಸ್ರಾಯೇಲ್ಯರ ಮಕ್ಕಳ ಹೆಸರುಗಳ ಪ್ರಕಾರ ಹನ್ನೆರಡಾಗಿ ಅವರ ಹೆಸರುಗಳಿಗನುಸಾರವಾಗಿ ಇದ್ದವು. ಒಂದೊಂದಕ್ಕೆ ಒಂದೊಂದು ಹೆಸರಾಗಿ ಹನ್ನೆರಡು ಕಲ್ಲುಗಳಿಗೋಸ್ಕರ ಮುದ್ರೆಗಳ ಹಾಗೆ ಕೆತ್ತಿದವುಗಳಾ ಗಿದ್ದವು. ಎದೆಪದಕದ ಮೇಲಿರುವ ಕೊನೆಗಳಲ್ಲಿ ಶುದ್ಧ ಬಂಗಾರದಿಂದ ನೂಲಿನ ಹಾಗೆ ಹೆಣೆದಿರುವ ಸರಪಣಿಯನ್ನು ಮಾಡಿದರು. ಬಂಗಾರದ ಆ ಎರಡು ಜಡೆಗಳನ್ನು ಮಾಡಿ ಆ ಎರಡು ಉಂಗುರಗಳನ್ನು ಎದೆಪದಕದ ಎರಡು ಕೊನೆಗಳಲ್ಲಿ ಸೇರಿಸಿದನು. ಆ ಎರಡು ಹೆಣೆದ ಬಂಗಾರದ ಸರಪಣಿಗಳನ್ನು ಪದಕದ ಕೊನೆಗಳಲ್ಲಿರುವ ಎರಡು ಉಂಗುರಗಳಲ್ಲಿ ಸೇರಿಸಿದನು. ಆ ಎರಡು ಹೆಣೆದ ಸರಪಣಿಗಳ ಎರಡು ಕೊನೆಗಳನ್ನು ಆ ಎರಡು ಜವೆಗಳಲ್ಲಿ ಸಿಕ್ಕಿಸಿ ಎಫೋದಿನ ಹೆಗಲು ಭಾಗಗಳ ಮುಂದುಗಡೆ ಇರಿಸಿ ದರು. ಬಂಗಾರದ ಎರಡು ಉಂಗುರಗಳನ್ನು ಮಾಡಿ ಎದೆಪದಕದ ಎರಡು ಕೊನೆಗಳಲ್ಲಿ ಎಫೋದಿನ ಕಡೆಗೆ ಒಳಗಡೆಯಲ್ಲಿ ಹಾಕಿದರು. ಚಿನ್ನದ ಬೇರೆ ಎರಡು ಉಂಗುರಗಳನ್ನು ಮಾಡಿ ಎಫೋದಿನ ಮುಂಬದಿಯ ಕೆಳಗಿನ ಎರಡು ಭಾಗಗಳಲ್ಲಿ ಎಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಅದನ್ನು ಜೋಡಿಸುವ ಸ್ಥಳಕ್ಕೆ ಎದುರಾಗಿ ಇರಿಸಿದರು. ಕರ್ತನು ಮೋಶೆಗೆ ಆಜ್ಞಾಪಿ ಸಿದ ಹಾಗೆಯೇ ಆ ಎದೆಪದಕವನ್ನು ಎಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಇರುವ ಹಾಗೆಯೂ ಎದೆಪದಕವು ಎಫೋದನ್ನು ಬಿಟ್ಟು ಅಲ್ಲಾಡದ ಹಾಗೆ ಯೂ ಅದರ ಉಂಗುರಗಳ ಮೂಲಕವಾಗಿ ನೀಲಿ ನೂಲಿನಿಂದ ಎಫೋದಿನ ಉಂಗುರಗಳಿಗೆ ಕಟ್ಟಿದರು. ಎಫೋದಿನ ನಿಲುವಂಗಿಗಳನ್ನೆಲ್ಲಾ ನೇತ ಕೆಲಸ ಕ್ಕನುಸಾರ ನೀಲಿಯಿಂದ ಮಾಡಿದರು. ನಿಲುವಂಗಿಯ ರಂಧ್ರ ಕವಚ ರಂಧ್ರದ ಹಾಗೆ ಅದರ ಮಧ್ಯದಲ್ಲಿ ಇತ್ತು. ಅದು ಹರಿಯದ ಹಾಗೆ ಆ ರಂಧ್ರದ ಸುತ್ತಲೂ ಗೋಟು ಇತ್ತು. ನಿಲುವಂಗಿಯ ಅಂಚಿನ ಮೇಲೆ ಹೊಸೆದ ನೀಲಿ ಧೂಮ್ರ ರಕ್ತವರ್ಣದ ದಾಳಿಂಬರ ಗಳನ್ನು ಮಾಡಿದನು. ಶುದ್ಧ ಬಂಗಾರದ ಗಂಟೆಗಳನ್ನು ಮಾಡಿ ಆ ಗಂಟೆಗಳನ್ನು ದಾಳಿಂಬರಗಳ ನಡುವೆ ಇಟ್ಟು ನಿಲುವಂಗಿಗಳ ಅಂಚಿನ ಮೇಲೆ ಸುತ್ತಲೂ ದಾಳಿಂಬರಗಳ ನಡುವೆಯೇ ಇರಿಸಿದನು. ಸೇವೆ ಗೋಸ್ಕರ ಮಾಡಿದ ನಿಲುವಂಗಿಯ ಅಂಚಿನ ಮೇಲೆ ಸುತ್ತಲೂ ಒಂದು ಗಂಟೆ ಒಂದು ದಾಳಿಂಬರದ ಮೇರೆಗೆ ಇಟ್ಟರು, ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅದು ಇತ್ತು. ಆರೋನನಿಗೂ ಅವನ ಮಕ್ಕಳಿಗೂ ನಾರು ನೂಲಿನಿಂದ ಮಾಡಿದ ನೇಯ್ಗೆ ಕೆಲಸದ ಅಂಗಿಗಳನ್ನೂ ನಾರಿನ ಮುಂಡಾಸವನ್ನೂ ಸೌಂದರ್ಯವುಳ್ಳ ನಾರಿನ ಕುಲಾವಿಗಳನ್ನೂ ನಾರು ಗಳಿಂದ ಮಾಡಿದ ಇಜಾರುಗಳನ್ನೂ ಹೊಸೆದ ನಯ ವಾದ ನಾರು ನೀಲಿ ಧೂಮ್ರ ರಕ್ತವರ್ಣದ ಹೆಣಿಗೆಯ ಕೆಲಸದ ಪ್ರಕಾರ ನಡುಕಟ್ಟನ್ನೂ ಮಾಡಿದರು. ಇವು ಗಳನ್ನು ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಮಾಡಿದರು. ಪರಿಶುದ್ಧ ಕಿರೀಟವಾಗಿರುವ ತಗಡನ್ನು ಶುದ್ಧ ಬಂಗಾರದಿಂದ ಮಾಡಿ ಕರ್ತನಿಗೆ ಪರಿಶುದ್ಧ ಎಂದು ಮುದ್ರೆ ಕೆತ್ತುವವರ ಬರಹದಿಂದ ಅದರ ಮೇಲೆ ಬರೆದು ಅದನ್ನು ಮುಂಡಾಸದ ಮೇಲೆ ಬಿಗಿಸುವದ ಕ್ಕೋಸ್ಕರ ನೀಲಿ ನೂಲಿನಿಂದ ಕಟ್ಟಿದರು. ಇದನ್ನು ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಮಾಡಿದರು. ಈ ಪ್ರಕಾರ ಸಭೆ ಡೇರೆಯ ಗುಡಾರದ ಕೆಲಸವೆಲ್ಲಾ ಮುಗಿಯಿತು. ಕರ್ತನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಇಸ್ರಾಯೇಲ್ ಮಕ್ಕಳು ಅದರಂತೆಯೇ ಮಾಡಿದರು. ಆಗ ಅವರು ಗುಡಾರವನ್ನು ಮೋಶೆಯ ಬಳಿಗೆ ತಂದರು. ಅದರ ಎಲ್ಲಾ ಸಾಮಾನುಗಳನ್ನು ಹಲಗೆಗಳನ್ನು ಅಗುಳಿಗಳನ್ನು ಸ್ತಂಭಗಳನ್ನು ಕುಣಿಕೆಗಳನ್ನು; ಕೆಂಪು ಬಣ್ಣದಲ್ಲಿ ಅದ್ದಿದ ಟಗರುಗಳ ಹೊದಿಕೆಯನ್ನು, ಕಡಲು ಹಂದಿಗಳ ಚರ್ಮಗಳ ಹೊದಿಕೆಗಳನ್ನು ಮರೆಯ ತೆರೆಯನ್ನು; ಮಂಜೂಷದ ಸಾಕ್ಷಿಯ ಪೆಟ್ಟಿಗೆ ಯನ್ನು, ಅದರ ಕೋಲುಗಳನ್ನು, ಕರುಣಾಸನವನ್ನು; ಮೇಜನ್ನು ಅದರ ಎಲ್ಲಾ ಸಾಮಾನುಗಳನ್ನು, ಸಮ್ಮು ಖದ ರೊಟ್ಟಿಯನ್ನು; ಶುದ್ಧವಾದ ದೀಪ ಸ್ತಂಭವನ್ನು, ಅದರ ದೀಪಗಳನ್ನು ಕ್ರಮವಾಗಿಡುವ ದೀಪಗಳನ್ನು ಅದರ ಎಲ್ಲಾ ಸಾಮಾನುಗಳನ್ನು, ದೀಪಸ್ತಂಭಕ್ಕಾಗಿ ಎಣ್ಣೆಯನ್ನು; ಚಿನ್ನದ ಬಲಿಪೀಠವನ್ನು, ಅಭಿಷೇಕಿಸುವ ತೈಲವನ್ನು, ಪರಿಮಳ ಧೂಪವನ್ನು, ಗುಡಾರದ ಬಾಗಿಲಿನ ತೆರೆಯನ್ನು; ಹಿತ್ತಾಳೆಯ ಬಲಿಪೀಠವನ್ನು, ಅದಕ್ಕಿರುವ ಹಿತ್ತಾಳೆಯ ಜಲ್ಲಡಿಯನ್ನು, ಕೋಲುಗಳನ್ನು, ಎಲ್ಲಾ ಸಾಮಾನುಗಳನ್ನು, ಕುಣಿಕೆಗಳನ್ನು, ಅಂಗಳದ ತೆರೆಗಳನ್ನು, ಸ್ತಂಭಗಳನ್ನು, ಕುಣಿಕೆಗಳನ್ನು, ಅಂಗಳದ ಬಾಗಿಲಿನ ತೆರೆಯನ್ನು, ಹಗ್ಗಗಳನ್ನು, ಗೂಟಗಳನ್ನು, ಸಭೆಯ ಗುಡಾರಕ್ಕೆ ಬೇಕಾದ ಎಲ್ಲಾ ಸಾಮಾನುಗಳನ್ನು; ಪರಿಶುದ್ಧ ಸ್ಥಳದ ಸೇವೆಗೋಸ್ಕರ ಸೇವಾ ವಸ್ತ್ರಗಳನ್ನು, ಯಾಜಕನಾದ ಆರೋನನ ಪರಿಶುದ್ಧ ವಸ್ತ್ರಗಳನ್ನು, ಅವನ ಕುಮಾರರಿಗೆ ಯಾಜಕ ಸೇವೆಗೋಸ್ಕರ ಬೇಕಾದ ವಸ್ತ್ರಗಳನ್ನು ತಂದರು. ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಇಸ್ರಾಯೇಲ್ ಮಕ್ಕಳು ಈ ಕೆಲಸಗಳನ್ನೆಲ್ಲಾ ಮಾಡಿ ದರು.ಮೋಶೆಯು ಆ ಕೆಲಸವನ್ನೆಲ್ಲಾ ನೋಡಿದಾಗ ಇಗೋ, ಕರ್ತನು ಆಜ್ಞಾಪಿಸಿದ ಪ್ರಕಾರವೇ ಅವರು ಅದನ್ನು ಮಾಡಿದ್ದರು. ಆಗ ಮೋಶೆಯು ಅವರನ್ನು ಆಶೀರ್ವದಿಸಿದನು. ಮೋಶೆಯು ಆ ಕೆಲಸವನ್ನೆಲ್ಲಾ ನೋಡಿದಾಗ ಇಗೋ, ಕರ್ತನು ಆಜ್ಞಾಪಿಸಿದ ಪ್ರಕಾರವೇ ಅವರು ಅದನ್ನು ಮಾಡಿದ್ದರು. ಆಗ ಮೋಶೆಯು ಅವರನ್ನು ಆಶೀರ್ವದಿಸಿದನು.