Exodus · chapter 32 · verse 18
Exodus 32:18 in Kannada
ಅದಕ್ಕೆ ಮೋಶೆಯು--ಅದು ಜಯಧ್ವನಿಯು ಅಲ್ಲ, ಅಪ ಜಯದ ಧ್ವನಿಯೂ ಅಲ್ಲ, ಆದರೆ ಹಾಡುವವರ ಧ್ವನಿ ಯನ್ನು ನಾನು ಕೇಳುತ್ತೇನೆ ಅಂದನು.
Adakke mosheyu--adu jayadhvaniyu alla, apa jayada dhvaniyoo alla, aadare haaduvavara dhvani yannu naanu keluttene andanu.
Exodus 32:18 in English
- King James Version (KJV)
- And he said, [It is] not the voice of [them that] shout for mastery, neither [is it] the voice of [them that] cry for being overcome: [but] the noise of [them that] sing do I hear.
- World English Bible (WEB)
- He said, “It isn’t the voice of those who shout for victory. It is not the voice of those who cry for being overcome; but the noise of those who sing that I hear.”
- American Standard Version (ASV)
- And he said, It is not the voice of them that shout for mastery, neither is it the voice of them that cry for being overcome; but the noise of them that sing do I hear.
- Bible in Basic English (BBE)
- And Moses said, It is not the voice of men who are overcoming in the fight, or the cry of those who have been overcome; it is the sound of songs which comes to my ear.
- Darby Translation (DBY)
- And he said, It is not the sound of a shout of victory, neither is it the sound of a shout of defeat: it is the noise of alternate singing I hear.
- Webster's Bible (WBS)
- And he said, [It is] not the voice of [them that] shout for mastery, neither [is it] the voice of [them that] cry for being overcome: [but] the noise of [them that] sing do I hear.
- Young's Literal Translation (YLT)
- and he saith, 'It is not the voice of the crying of might, nor is it the voice of the crying of weakness — a voice of singing I am hearing.'
Read in context
- 16ಆ ಹಲಗೆಗಳು ದೇವರ ಕೆಲಸವಾಗಿದ್ದವು. ಆ ಬರಹವು ಹಲಗೆಗಳ ಮೇಲೆ ಕೆತ್ತಿದ ದೇವರ ಬರಹವೇ.
- 17ಜನರು ಕೂಗುತ್ತಿದ್ದ ಶಬ್ದವನ್ನು ಯೆಹೋಶುವನು ಕೇಳಿದಾಗ ಮೋಶೆಗೆ--ಪಾಳೆಯದಲ್ಲಿ ಯುದ್ಧದ ಶಬ್ದವು ಇದೆ ಎಂದು ಹೇಳಿದನು.
- 18ಅದಕ್ಕೆ ಮೋಶೆಯು--ಅದು ಜಯಧ್ವನಿಯು ಅಲ್ಲ, ಅಪ ಜಯದ ಧ್ವನಿಯೂ ಅಲ್ಲ, ಆದರೆ ಹಾಡುವವರ ಧ್ವನಿ ಯನ್ನು ನಾನು ಕೇಳುತ್ತೇನೆ ಅಂದನು.
- 19ಇದಾದ ಮೇಲೆ ಮೋಶೆಯು ಪಾಳೆಯದ ಸವಿಾಪಕ್ಕೆ ಬಂದು ಆ ಕರುವನ್ನೂ ಅವರ ನಾಟ್ಯವನ್ನೂ ನೋಡಿ ಕೋಪ ಗೊಂಡು ಕೈಯಲ್ಲಿದ್ದ ಹಲಗೆಗಳನ್ನು ಬಿಸಾಡಿ ಬೆಟ್ಟದ ಅಡಿಯಲ್ಲಿ ಅವುಗಳನ್ನು ಒಡೆದುಬಿಟ್ಟನು.
- 20ಅವರು ಮಾಡಿದ ಕರುವನ್ನು ಅವನು ತೆಗೆದುಕೊಂಡು ಅದನ್ನು ಬೆಂಕಿಯಲ್ಲಿ ಸುಟ್ಟು ಪುಡಿಯಾಗುವ ವರೆಗೆ ಅರೆಸಿ ನೀರಿನ ಮೇಲೆ ಚೆಲ್ಲಿ ಆ ನೀರನ್ನು ಇಸ್ರಾಯೇಲ್ ಮಕ್ಕಳು ಕುಡಿಯುವಂತೆ ಮಾಡಿದನು.
Cross references
- Exodus 15:1–18 ವಿಮೋಚನಕಾಂಡ 15:1–18ಆಗ ಮೋಶೆಯೂ ಇಸ್ರಾಯೇಲ್ ಮಕ್ಕಳೂ ಕರ್ತನಿಗೆ ಈ ಹಾಡನ್ನು ಹಾಡಿ ಹೇಳಿದ್ದೇನಂದರೆ--ನಾನು ಕರ್ತನಿಗೆ ಹಾಡುತ್ತೇನೆ; ಆತನು ಪ್ರಭಾವದಿಂದ ಜಯಶಾಲಿಯಾದನು; ಕುದುರೆ ಯನ್ನೂ (ಕುದುರೆಯ) ಸವಾರನನ್ನೂ ಸಮುದ್ರದಲ್ಲಿ ದೊಬ್ಬಿದ್ದಾನೆ. ಕರ್ತನು ನನ್ನ ಬಲವೂ ಕೀರ್ತನೆಯೂ ಆಗಿದ್ದಾನೆ, ಆತನು ನನ್ನ ರಕ್ಷಣೆಯಾದನು, ಆತನು ನನ್ನ ದೇವರು, ಆತನಿಗಾಗಿ ನಾನು ಒಂದು ನಿವಾಸವನ್ನು ಸಿದ್ಧಮಾಡುವೆನು. ಆತನು ನನ್ನ ತಂದೆಯ ದೇವರು, ನಾನು ಆತನನ್ನು ಘನಪಡಿಸುವೆನು. ಕರ್ತನು ಯುದ್ಧ ಶೂರನು; ಕರ್ತನು ಎಂಬದೇ ಆತನ ಹೆಸರು. ಆತನು ಫರೋಹನ ರಥಗಳನ್ನೂ ಅವನ ಸೈನ್ಯವನ್ನೂ ಸಮುದ್ರ ದಲ್ಲಿ ನೂಕಿದ್ದಾನೆ; ಆಯಲ್ಪಟ್ಟ ಅವನ ಅಧಿಪತಿಗಳು ಸಹ ಕೆಂಪು ಸಮುದ್ರದಲ್ಲಿ ಮುಳುಗಿಹೋದರು. ಅಗಾಧಗಳು ಅವರನ್ನು ಮುಚ್ಚಿಕೊಂಡವು. ಅವರು ಕಲ್ಲಿನಂತೆ (ಸಮುದ್ರದ) ತಳಕ್ಕೆ ಮುಳುಗಿದರು. ಓ ಕರ್ತನೇ, ನಿನ್ನ ಬಲಗೈ ಶಕ್ತಿಯಲ್ಲಿ ಮಹಿಮೆಯುಳ್ಳ ದ್ದಾಗಿದೆ. ಓ ಕರ್ತನೇ, ನಿನ್ನ ಬಲಗೈ ಶತ್ರುವನ್ನು ಜಜ್ಜಿ ಪುಡಿಮಾಡಿತು. ನಿನ್ನ ಮಹತ್ತಾದ ಘನತೆಯಲ್ಲಿ ನಿನಗೆ ವಿರೋಧವಾಗಿ ಎದ್ದವರನ್ನು ಕೆಡವಿ ಬಿಟ್ಟಿರುವಿ. ನಿನ್ನ ರೌದ್ರವು ಹೊರಟು ಅವರನ್ನು ಹುಲ್ಲಿನಂತೆ ದಹಿಸಿಬಿಟ್ಟಿತು. ನಿನ್ನ ಮೂಗಿನ ಬಿರುಸಾದ ಗಾಳಿ ಯಿಂದ ನೀರುಗಳು ಒಟ್ಟುಗೂಡಿದವು. ಪ್ರವಾಹಗಳು ರಾಶಿಯಂತೆ ನಿಂತವು; ಸಮುದ್ರದ ಅಗಾಧಗಳ ನೀರು ಗಟ್ಟಿಯಾದವು. ಶತ್ರುವು--ನಾನು ಹಿಂದಟ್ಟಿ, ಹಿಡಿ ಯುವೆನು, ಕೊಳ್ಳೆಯನ್ನು ಹಂಚಿಕೊಳ್ಳುವೆನು, ನನ್ನ ಆಶೆಗಳು ಅವರಿಂದ ತೃಪ್ತಿಹೊಂದುವವು. ನಾನು ನನ್ನ ಖಡ್ಗವನ್ನು ಹಿರಿಯುವೆನು, ನನ್ನ ಕೈ ಅವರನ್ನು ಸಂಹಾರ ಮಾಡುವದು ಅಂದನು. ನೀನು ನಿನ್ನ ಗಾಳಿಯನ್ನು ಊದಿದಾಗ ಸಮುದ್ರವು ಅವರನ್ನು ಮುಚ್ಚಿಕೊಂಡಿತು. ಅವರು ಸೀಸದಂತೆ ಮಹಾಜಲಗಳಲ್ಲಿ ಮುಳುಗಿ ಹೊದರು. ದೇವರುಗಳಲ್ಲಿ ಓ ಕರ್ತನೇ, ನಿನ್ನ ಹಾಗೆ ಯಾರಿದ್ದಾರೆ? ಪರಿಶುದ್ಧತ್ವದಲ್ಲಿ ಮಹಿಮೆ ಹೊಂದಿದವನೂ ಸ್ತೋತ್ರಗಳಲ್ಲಿ ಭಯಂಕರನೂ ಅದ್ಭುತಗಳನ್ನು ಮಾಡುವಾತನೂ ಆದ ನಿನ್ನ ಹಾಗೆ ಯಾರಿದ್ದಾರೆ? ನೀನು ನಿನ್ನ ಬಲಗೈಯನ್ನು ಚಾಚಲು ಭೂಮಿಯು ಅವರನ್ನು ನುಂಗಿತು. ನೀನು ವಿಮೋಚಿ ಸಿದ ಜನರನ್ನು ಕರುಣೆಯಿಂದ ನಡಿಸಿದಿ; ನೀನು ಅವ ರನ್ನು ನಿನ್ನ ಬಲದಿಂದ ನಿನ್ನ ಪರಿಶುದ್ಧ ನಿವಾಸಕ್ಕೆ ನಡಿಸಿದಿ. ಜನರು ಇದನ್ನು ಕೇಳಿ ಭಯಪಡುವರು; ದುಃಖವು ಫಿಲಿಷ್ಟಿಯದಲ್ಲಿ ವಾಸಿಸುವವರನ್ನು ಹಿಡಿಯುವದು. ಆಗ ಎದೋಮಿನ ಪ್ರಭುಗಳು ದಿಗ್ಭ್ರಮೆಗೊಳ್ಳು ವರು; ಮೋವಾಬಿನ ಬಲಿಷ್ಠರನ್ನು ಕಂಪನವು ಹಿಡಿಯು ವದು. ಕಾನಾನಿನ ನಿವಾಸಿಗಳೆಲ್ಲಾ ಕರಗಿ ಹೋಗುವರು. ಭಯವೂ ಹೆದರಿಕೆಯೂ ಅವರ ಮೇಲೆ ಬೀಳು ವದು; ನಿನ್ನ ಜನರು ದಾಟಿ ಹೋಗುವ ವರೆಗೆ ಓ ಕರ್ತನೇ, ನೀನು ಕೊಂಡುಕೊಂಡ ಜನರು ದಾಟಿ ಹೋಗುವ ವರೆಗೆ ನಿನ್ನ ಬಾಹುವಿನ ದೊಡ್ಡಸ್ತಿಕೆಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗುವರು. ನೀನು ಅವರನ್ನು ಒಳಗೆ ಬರಮಾಡಿ ಓ ಕರ್ತನೇ, ನಿನ್ನ ಕೈಗಳು ಸ್ಥಾಪಿಸಿದ ಪರಿಶುದ್ಧ ನಿವಾಸದಲ್ಲಿಯೂ (ಓ ಕರ್ತನೇ,) ನೀನು ವಾಸಿಸುವದಕ್ಕೆ ಮಾಡಿಕೊಂಡಿರುವ ನಿನ್ನ ಸ್ವಾಸ್ಥ್ಯದ ಪರ್ವತದಲ್ಲಿಯೂ ಅವರನ್ನು ಸ್ಥಾಪಿಸುವಿ. ಕರ್ತನು ಯುಗಯುಗಾಂತರಗಳ ವರೆಗೆ ಆಳುವನು.
- Daniel 5:4 ದಾನಿಯೇಲನು 5:4ಅವರು ದ್ರಾಕ್ಷಾರಸವನ್ನು ಕುಡಿದು ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಹೊಗಳತೊಡಗಿದರು.
- Daniel 5:23 ದಾನಿಯೇಲನು 5:23ಪರಲೋಕದ ಕರ್ತನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು, ಆಗ ನೀನು, ನಿನ್ನ ಪ್ರಭುಗಳು ಮತ್ತು ಪತ್ನಿ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿಗಳಿಲ್ಲದ ಬೆಳ್ಳಿ ಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗಳು ಯಾರ ಅಧೀನದಲ್ಲಿವೆಯೋ ಆ ದೇವರನ್ನು ಘನಪಡಿಸಲೇ ಇಲ್ಲ.