Exodus · chapter 32 · verse 2
Exodus 32:2 in Kannada
ಅದಕ್ಕೆ ಆರೋನನು ಅವರಿಗೆ--ನಿಮ್ಮ ಹೆಂಡತಿಯರ ಮತ್ತು ನಿಮ್ಮ ಕುಮಾರ ಕುಮಾರ್ತೆಯರ ಕಿವಿಗಳಲ್ಲಿರುವ ಚಿನ್ನದ ವಾಲೆಗಳನ್ನು ಕಿತ್ತು ನನ್ನ ಬಳಿಗೆ ತನ್ನಿರಿ ಅಂದನು.
Adakke aaronanu avarige--nimma hendatiyara mattu nimma kumaara kumaarteyara kivigalalliruva chinnada vaalegalannu kittu nanna balige tanniri andanu.
Exodus 32:2 in English
- King James Version (KJV)
- And Aaron said unto them, Break off the golden earrings, which [are] in the ears of your wives, of your sons, and of your daughters, and bring [them] unto me.
- World English Bible (WEB)
- Aaron said to them, “Take off the golden rings, which are in the ears of your wives, of your sons, and of your daughters, and bring them to me.”
- American Standard Version (ASV)
- And Aaron said unto them, Break off the golden rings, which are in the ears of your wives, of your sons, and of your daughters, and bring them unto me.
- Bible in Basic English (BBE)
- Then Aaron said to them, Take off the gold rings which are in the ears of your wives and your sons and your daughters, and give them to me.
- Darby Translation (DBY)
- And Aaron said to them, Break off the golden rings that are in the ears of your wives, of your sons, and of your daughters, and bring [them] to me.
- Webster's Bible (WBS)
- And Aaron said to them, Break off the golden ear-rings which [are] in the ears of your wives, of your sons, and of your daughters, and bring [them] to me.
- Young's Literal Translation (YLT)
- And Aaron saith unto them, 'Break off the rings of gold which [are] in the ears of your wives, your sons, and your daughters, and bring in unto me;'
Read in context
- 1ಮೋಶೆಯು ಬೆಟ್ಟದಿಂದ ಇಳಿದುಬರುವದರಲ್ಲಿ ತಡವಾದದ್ದನ್ನು ಜನರು ನೋಡಿದಾಗ ಅವರು ಆರೋನನ ಬಳಿಗೆ ಕೂಡಿ ಬಂದು ಅವನಿಗೆ--ನೀನು ಎದ್ದು ನಮ್ಮ ಮುಂದೆ ಹೋಗುವ ದೇವರುಗಳನ್ನು ನಮಗಾಗಿ ಮಾಡು, ಐಗುಪ್ತದೇಶದೊಳಗಿಂದ ನಮ್ಮನ್ನು ಕರೆದುಕೊಂಡು ಬಂದ ಮನುಷ್ಯನಾದ ಈ ಮೋಶೆಗೆ ಏನಾಯಿತೋ ನಮಗೆ ತಿಳಿಯದು ಅಂದರು.
- 2ಅದಕ್ಕೆ ಆರೋನನು ಅವರಿಗೆ--ನಿಮ್ಮ ಹೆಂಡತಿಯರ ಮತ್ತು ನಿಮ್ಮ ಕುಮಾರ ಕುಮಾರ್ತೆಯರ ಕಿವಿಗಳಲ್ಲಿರುವ ಚಿನ್ನದ ವಾಲೆಗಳನ್ನು ಕಿತ್ತು ನನ್ನ ಬಳಿಗೆ ತನ್ನಿರಿ ಅಂದನು.
- 3ಆಗ ಜನರೆಲ್ಲರು ತಮ್ಮ ಕಿವಿಗಳಲ್ಲಿದ್ದ ಚಿನ್ನದ ವಾಲೆಗಳನ್ನು ಕಿತ್ತು ಆರೋನನ ಬಳಿಗೆ ತಂದರು.
- 4ಅವನು ಅವುಗಳನ್ನು ಅವರ ಕೈಗಳಿಂದ ತೆಗೆದುಕೊಂಡು ಉಳಿಯಿಂದ ರೂಪಿಸಿ ಎರಕಹೊಯ್ದ ಕರುವಾಗಿ ಮಾಡಿದನು. ಆಗ ಅವರು--ಓ ಇಸ್ರಾ ಯೇಲೇ, ನಿನ್ನನ್ನು ಐಗುಪ್ತದೇಶದೊಳಗಿಂದ ಬರ ಮಾಡಿದ ನಿನ್ನ ದೇವರುಗಳು ಇವೇ ಆಗಿರಲಿ ಅಂದರು.
Cross references
- Exodus 12:35–36 ವಿಮೋಚನಕಾಂಡ 12:35–36ಮೋಶೆಯು ಹೇಳಿದಂತೆ ಇಸ್ರಾ ಯೇಲ್ ಮಕ್ಕಳು ಮಾಡಿ ಬೆಳ್ಳಿ ಬಂಗಾರದ ಒಡವೆಗಳನ್ನೂ ವಸ್ತ್ರಗಳನ್ನೂ ಐಗುಪ್ತ್ಯರಿಂದ ಕೇಳಿ ಪಡೆದರು. ಕರ್ತನು ಐಗುಪ್ತ್ಯರ ಎದುರಿನಲ್ಲಿ ಜನರ ಮೇಲೆ ಕೃಪೆ ತೋರಿಸಿದ್ದರಿಂದ ಅವರು ಕೇಳಿದ್ದನ್ನು ಕೊಟ್ಟರು. ಹೀಗೆ ಅವರು ಐಗುಪ್ತ್ಯರನ್ನು ಸುಲು ಕೊಂಡರು.
- Judges 8:24–27 ನ್ಯಾಯಸ್ಥಾಪಕರು 8:24–27ಗಿದ್ಯೋನನು--ಒಂದು ಬಿನ್ನಹವನ್ನು ನಾನು ನಿಮಗೆ ಮಾಡುತ್ತೇನೆ. ಪ್ರತಿ ಯೊಬ್ಬನು ಕೊಳ್ಳೆ ಹೊಡೆದ ವಾಲೆಗಳನ್ನು ನನಗೆ ಕೊಡಿರಿ ಅಂದನು. (ಯಾಕಂದರೆ ಅವರು ಇಷ್ಮಾಯೇ ಲ್ಯರಾಗಿದ್ದದರಿಂದ ಅವರಿಗೆ ಬಂಗಾರದ ಮುರುವು ಗಳಿದ್ದವು). ಅವರು--ನಾವು ಇಷ್ಟಪೂರ್ವಕವಾಗಿ ಕೊಡುವೆವು ಎಂದು ಹೇಳಿ ಒಂದು ವಸ್ತ್ರವನ್ನು ಹಾಸಿ ಅಲ್ಲಿ ಅವರವರು ಕೊಳ್ಳೆ ಹೊಡೆದ ವಾಲೆಗಳನ್ನು ಹಾಕಿದರು. ಆದರೆ ಆಭರಣಗಳೂ ಕಂಠಮಾಲೆ ಗಳೂ ಮಿದ್ಯಾನ್ಯರ ಅರಸುಗಳು ಹೊದ್ದುಕೊಂಡಿದ್ದ ರಕ್ತಾಂಬರ ವಸ್ತ್ರಗಳೂ ಅವರ ಒಂಟೆಗಳ ಕೊರಳಿಗೆ ಇದ್ದ ಸರಪಣಿಗಳೂ ಹೊರತು ಅವನು ಕೇಳಿ ತೆಗೆದು ಕೊಂಡ ಬಂಗಾರದ ವಾಲೆಗಳ ತೂಕವು ಸಾವಿರದ ಏಳು ನೂರು ಶೆಕೆಲ್ ತೂಕವಾಗಿತ್ತು. ಆ ಬಂಗಾರ ದಿಂದ ಗಿದ್ಯೋನನು ಒಂದು ಏಫೋದನ್ನು ಮಾಡಿಸಿ ಅದನ್ನು ತನ್ನ ಊರಾದ ಒಫ್ರದಲ್ಲಿ ಇಟ್ಟನು. ಆದರೆ ಇಸ್ರಾಯೇಲ್ಯರೆಲ್ಲಾ ಅದರ ಹಿಂದೆ ಜಾರರಾಗಿ ಹೋದರು. ಅದು ಗಿದ್ಯೋನನಿಗೂ ಅವನ ಮನೆಗೂ ಉರುಲಾಯಿತು.
- Ezekiel 16:17 ಯೆಹೆಜ್ಕೇಲನು 16:17ಇದಲ್ಲದೆ ನಾನು ನಿನಗೆ ಬೆಳ್ಳಿ ಬಂಗಾರದಿಂದ ಮಾಡಿಸಿಕೊಟ್ಟಿದ್ದ ನಿನ್ನ ಅಂದವಾದ ಆಭರಣಗಳನ್ನು ತೆಗೆದು ಅವುಗಳಿಂದ ಪುರುಷ ರೂಪಗಳನ್ನು ಮಾಡಿಕೊಂಡು ಅದರ ಸಂಗಡ ವ್ಯಭಿಚಾರ ಮಾಡಿದಿ.
- Hosea 2:8 ಹೋಶೇಯ 2:8ಅವರು ಬಾಳನಿಗಾಗಿ ಸಿದ್ಧಮಾಡಿದ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ನಾನು ಕೊಟ್ಟು ಅವ ಳಿಗೆ ಬೆಳ್ಳಿ ಬಂಗಾರವನ್ನು ನಾನೇ ಹೆಚ್ಚಿಸಿದ್ದೇನೆಂದು ಅವಳಿಗೆ ತಿಳಿಯಲಿಲ್ಲ.
- Ezekiel 16:11–12 ಯೆಹೆಜ್ಕೇಲನು 16:11–12ನಾನು ಆಭರಣಗಳಿಂದಲೂ ನಿನ್ನನ್ನು ಅಲಂಕರಿಸಿದೆನು; ನಾನು ನಿನ್ನ ಕೈಗಳಿಗೆ ಕಡಗ ಗಳನ್ನು, ನಿನ್ನ ಕೊರಳಿಗೆ ಸರವನ್ನು ಹಾಕಿದೆನು. ನಿನ್ನ ಹಣೆಯ ಮೇಲೆ ರತ್ನಾಭರಣವನ್ನೂ ನಿನ್ನ ಕಿವಿಗಳಲ್ಲಿ ವಾಲೆಗಳನ್ನೂ ನಿನ್ನ ತಲೆಯ ಮೇಲೆ ಶೃಂಗಾರ ಕಿರೀಟವನ್ನೂ ಇಟ್ಟೆನು.
- Exodus 35:22 ವಿಮೋಚನಕಾಂಡ 35:22ಸ್ತ್ರೀಪುರುಷರೆಲ್ಲರೂ ಮನಃಪೂರ್ವಕವಾಗಿ ಬಂದು ಬಳೆಗಳನ್ನೂ ಮುರುವುಗಳನ್ನೂ ಉಂಗುರಗಳನ್ನೂ ಮುದ್ರೆಗಳನ್ನೂ ಚಿನ್ನದ ಎಲ್ಲಾ ಒಡವೆಗಳನ್ನೂ ತಂದರು. ಪ್ರತಿಯೊಬ್ಬನೂ ಚಿನ್ನದ ಕಾಣಿಕೆಯನ್ನು ಕರ್ತನಿಗೆ ಅರ್ಪಿಸಿದನು.
- Genesis 24:47 ಆದಿಕಾಂಡ 24:47ನಾನು ಆಕೆಗೆ--ನೀನು ಯಾರ ಮಗಳು ಎಂದು ಕೇಳಿದೆನು. ಅದಕ್ಕವಳು--ನಾಹೋರ ನಿಗೆ ಮಿಲ್ಕಳು ಹೆತ್ತ ಮಗನಾದ ಬೆತೊವೇಲನ ಮಗಳು ಅಂದಳು. ಆಗ ನಾನು ಆಕೆಗೆ ವಾಲೆಯನ್ನೂ ಕೈಗಳಿಗೆ ಕಡಗಗಳನ್ನೂ ಇಟ್ಟು
- Genesis 24:22 ಆದಿಕಾಂಡ 24:22ಒಂಟೆಗಳು ಕುಡಿದ ಮೇಲೆ ಆ ಮನುಷ್ಯನು ಅರ್ಧ ಶೆಕೆಲ್ ತೂಕದ ಚಿನ್ನದ ವಾಲೆಯನ್ನು ಹತ್ತು ಶೆಕೆಲ್ ತೂಕದ ಎರಡು ಕಡಗಗಳನ್ನು ಆಕೆಯ ಕೈಗಳಿಗೆ ಕೊಟ್ಟನು.