Exodus · chapter 32 · verse 22
Exodus 32:22 in Kannada
ಅದಕ್ಕೆ ಆರೋನನು--ನನ್ನ ಒಡೆಯನ ಕೋಪ ಉರಿಯದೆ ಇರಲಿ. ಈ ಜನರು ಕೇಡಿನ ಮನಸ್ಸಿನವರಾಗಿದ್ದಾರೆಂದು ನೀನು ಬಲ್ಲೆ.
Adakke aaronanu--nanna odeyana kopa uriyade irali. Ee janaru kedina manassinavaraagiddaarendu neenu balle.
Exodus 32:22 in English
- King James Version (KJV)
- And Aaron said, Let not the anger of my lord wax hot: thou knowest the people, that they [are set] on mischief.
- World English Bible (WEB)
- Aaron said, “Don’t let the anger of my lord grow hot. You know the people, that they are set on evil.
- American Standard Version (ASV)
- And Aaron said, Let not the anger of my lord wax hot: thou knowest the people, that they are [set] on evil.
- Bible in Basic English (BBE)
- And Aaron said, Let not my lord be angry; you have seen how the purposes of this people are evil.
- Darby Translation (DBY)
- And Aaron said, Let not the anger of my lord burn! thou knowest the people, that they are [set] on mischief.
- Webster's Bible (WBS)
- And Aaron said, Let not the anger of my lord wax hot: thou knowest the people that they [are set] on mischief.
- Young's Literal Translation (YLT)
- and Aaron saith, 'Let not the anger of my lord burn; thou — thou hast known the people that it [is] in evil;
Read in context
- 20ಅವರು ಮಾಡಿದ ಕರುವನ್ನು ಅವನು ತೆಗೆದುಕೊಂಡು ಅದನ್ನು ಬೆಂಕಿಯಲ್ಲಿ ಸುಟ್ಟು ಪುಡಿಯಾಗುವ ವರೆಗೆ ಅರೆಸಿ ನೀರಿನ ಮೇಲೆ ಚೆಲ್ಲಿ ಆ ನೀರನ್ನು ಇಸ್ರಾಯೇಲ್ ಮಕ್ಕಳು ಕುಡಿಯುವಂತೆ ಮಾಡಿದನು.
- 21ಮೋಶೆಯು ಆರೋನನಿಗೆ--ಈ ಜನರ ಮೇಲೆ ದೊಡ್ಡ ಪಾಪವನ್ನು ನೀನು ಬರಮಾಡುವಂತೆ ಅವರು ನಿನಗೆ ಏನು ಮಾಡಿದರು ಎಂದು ಕೇಳಿದನು.
- 22ಅದಕ್ಕೆ ಆರೋನನು--ನನ್ನ ಒಡೆಯನ ಕೋಪ ಉರಿಯದೆ ಇರಲಿ. ಈ ಜನರು ಕೇಡಿನ ಮನಸ್ಸಿನವರಾಗಿದ್ದಾರೆಂದು ನೀನು ಬಲ್ಲೆ.
- 23ನಮಗೋಸ್ಕರ ನಮ್ಮ ಮುಂದೆ ಹೋಗುವ ದೇವರುಗಳನ್ನು ಮಾಡು. ಯಾಕಂದರೆ ಐಗುಪ್ತದೇಶದೊಳಗಿಂದ ನಮ್ಮನ್ನು ಬರಮಾಡಿದ ಈ ಮೋಶೆಗೆ ಏನಾಯಿತೋ ನಮಗೆ ತಿಳಿಯದು ಎಂದು ನನಗೆ ಅವರು ಹೇಳಿದರು.
- 24ಆದದರಿಂದ ನಾನು ಅವರಿಗೆ--ಚಿನ್ನ ಇದ್ದವರು ಅದನ್ನು ಕಿತ್ತು ಬಿಡಲಿ ಅಂದೆನು. ಅವರು ಅದನ್ನು ನನಗೆ ಕೊಟ್ಟರು. ನಾನು ಅದನ್ನು ಬೆಂಕಿಯಲ್ಲಿ ಹಾಕಿದಾಗ ಈ ಕರುವು ಉಂಟಾ ಯಿತು ಅಂದೆನು.
Cross references
- Deuteronomy 9:24 ಧರ್ಮೋಪದೇಶಕಾಂಡ 9:24ನಾನು ನಿಮ್ಮನ್ನು ತಿಳಿದಂದಿನಿಂದ ನೀವು ಕರ್ತನಿಗೆ ವಿರೋಧವಾಗಿ ತಿರುಗಿಬೀಳುವವರಾಗಿದ್ದಿರಿ.
- Exodus 16:20 ವಿಮೋಚನಕಾಂಡ 16:20ಆದಾಗ್ಯೂ ಅವರು ಮೋಶೆಯ ಮಾತನ್ನು ಕೇಳಲಿಲ್ಲ. ಕೆಲವರು ಅದನ್ನು ಬೆಳಗಿನ ವರೆಗೆ ಇಟ್ಟುಕೊಂಡಾಗ ಅದು ಹುಳಬಿದ್ದು ನಾತ ಹುಟ್ಟಿತು. ಆಗ ಮೋಶೆಯು ಅವರ ಮೇಲೆ ಕೋಪಿಸಿ ಕೊಂಡನು.
- 1 Samuel 15:24 1 ಸಮುವೇಲನು 15:24ಆಗ ಸೌಲನು ಸಮುವೇಲನಿಗೆ--ನಾನು ಕರ್ತನ ವಾಕ್ಯವನ್ನೂ ನಿನ್ನ ಮಾತುಗಳನ್ನೂ ವಿಾರಿ ಪಾಪಮಾಡಿದೆನು. ನಾನು ಜನರಿಗೆ ಭಯಪಟ್ಟು ಅವರ ಮಾತನ್ನು ಕೇಳಿದೆನು.
- Psalm 36:4 ಕೀರ್ತನೆಗಳು 36:4ಕುಯುಕ್ತಿಯನ್ನು ತನ್ನ ಹಾಸಿಗೆಯ ಮೇಲೆ ಕಲ್ಪಿಸುತ್ತಾನೆ; ಒಳ್ಳೇದಲ್ಲದ ಮಾರ್ಗದಲ್ಲಿ ನಿಂತು ಕೊಳ್ಳುತ್ತಾನೆ; ಕೆಟ್ಟದ್ದನ್ನು ಅಸಹ್ಯಿಸುವದಿಲ್ಲ.
- Exodus 15:24 ವಿಮೋಚನಕಾಂಡ 15:24ಆದದ ರಿಂದ ಜನರು--ನಾವು ಏನು ಕುಡಿಯೋಣ ಎಂದು ಹೇಳಿ ಮೋಶೆಗೆ ವಿರೋಧವಾಗಿ ಗುಣುಗುಟ್ಟಿದರು.
- Proverbs 4:16 ಜ್ಞಾನೋಕ್ತಿಗಳು 4:16ಕೇಡು ಮಾಡದಿದ್ದರೆ ಅವರು ನಿದ್ರೆಹೋಗುವದಿಲ್ಲ; ಯಾರ ನ್ನಾದರೂ ಬೀಳಿಸದೆ ಇದ್ದರೆ ಅವರ ನಿದ್ರೆಗೆ ಭಂಗ ವಾಗುವದು.
- Exodus 14:11 ವಿಮೋಚನಕಾಂಡ 14:11ಅವರು ಮೋಶೆಗೆ--ಐಗುಪ್ತದಲ್ಲಿ ಸಮಾಧಿ ಗಳು ಇಲ್ಲದ ಕಾರಣ ನಾವು ಅರಣ್ಯದಲ್ಲಿ ಸಾಯುವ ಹಾಗೆ ನಮ್ಮನ್ನು ಕರಕೊಂಡು ಬಂದಿಯೋ? ಯಾಕೆ ನೀನು ಈ ಪ್ರಕಾರ ನಮಗೆ ಮಾಡಿ ನಮ್ಮನ್ನು ಐಗುಪ್ತ ದಿಂದ ಕರಕೊಂಡು ಬಂದಿ?
- Deuteronomy 9:7 ಧರ್ಮೋಪದೇಶಕಾಂಡ 9:7ನೀನು ಅರಣ್ಯದಲ್ಲಿ ನಿನ್ನ ದೇವರಾದ ಕರ್ತನಿಗೆ ಕೋಪವನ್ನೆಬ್ಬಿಸಿದ್ದನ್ನು ಜ್ಞಾಪಕಮಾಡು, ಮರೆಯಬೇಡ; ನೀನು ಐಗುಪ್ತದೇಶದಿಂದ ಹೊರಟ ದಿವಸ ಮೊದಲು ಗೊಂಡು ಈ ಸ್ಥಳಕ್ಕೆ ಬರುವ ವರೆಗೆ ಕರ್ತನಿಗೆ ವಿರೋಧ ವಾಗಿ ತಿರುಗಿಬೀಳುತ್ತಿದ್ದಿರಿ.
- Deuteronomy 31:27 ಧರ್ಮೋಪದೇಶಕಾಂಡ 31:27ನಿನ್ನ ದ್ರೋಹವನ್ನೂ ನಿನ್ನ ಬಗ್ಗದ ಕುತ್ತಿಗೆಯನ್ನೂ ನಾನು ಬಲ್ಲೆನು; ಇಗೋ, ಈಹೊತ್ತು ನಾನು ಇನ್ನೂ ನಿಮ್ಮ ಸಂಗಡ ಬದುಕಿರು ವಾಗಲೇ ಕರ್ತನಿಗೆ ದ್ರೋಹಮಾಡಿದವರಾದಿರಿ; ನಾನು ಸತ್ತ ಮೇಲೆ ಇನ್ನೇನ್ನಾಗುವದು?
- Exodus 16:2–4 ವಿಮೋಚನಕಾಂಡ 16:2–4ಆಗ ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಅರಣ್ಯದಲ್ಲಿ ಮೋಶೆಗೂ ಆರೋನನಿಗೂ ವಿರೋಧ ವಾಗಿ ಗುಣುಗುಟ್ಟಿತು. ಇಸ್ರಾಯೇಲ್ ಮಕ್ಕಳು ಅವರಿಗೆ--ನಾವು ಐಗುಪ್ತದೇಶದಲ್ಲಿ ಮಾಂಸದ ಪಾತ್ರೆ ಗಳ ಬಳಿಯಲ್ಲಿ ಕೂತುಕೊಂಡು ಸಾಕಾಗುವಷ್ಟು ರೊಟ್ಟಿ ಯನ್ನು ತಿನ್ನುತ್ತಿದ್ದಾಗ ಕರ್ತನ ಕೈಯಿಂದ ಸತ್ತುಹೋಗಿದ್ದರೆ ಒಳ್ಳೆದಾಗಿತ್ತು. ಈ ಸಭೆಯನ್ನೆಲ್ಲಾ ಸಾಯಿಸುವಂತೆ ನಮ್ಮನ್ನು ಈ ಅರಣ್ಯಕ್ಕೆ ಬರಮಾಡಿದ್ದೀರಿ ಅಂದರು. ಆಗ ಕರ್ತನು ಮೋಶೆಗೆ--ಇಗೋ, ರೊಟ್ಟಿಯನ್ನು ನಿಮಗಾಗಿ ನಾನು ಆಕಾಶದಿಂದ ಸುರಿಸುತ್ತೇನೆ; ಅವರು ನನ್ನ ನ್ಯಾಯಪ್ರಮಾಣದ ಪ್ರಕಾರ ನಡೆದುಕೊಳ್ಳುವರೋ ಇಲ್ಲವೋ ಎಂದು ನಾನು ಅವರನ್ನು ಪರೀಕ್ಷಿಸುವ ಹಾಗೆ ಜನರು ಹೊರಗೆಹೋಗಿ ಪ್ರತಿದಿನ ಆ ದಿನಕ್ಕೆ ಬೇಕಾದ ದ್ದನ್ನು ಕೂಡಿಸಲಿ.
- Exodus 17:2–4 ವಿಮೋಚನಕಾಂಡ 17:2–4ಆದಕಾರಣ ಜನರು ಮೋಶೆಯ ಸಂಗಡ ವಿವಾದಮಾಡಿ--ನಮಗೆ ಕುಡಿ ಯುವದಕ್ಕೆ ನೀರು ಕೊಡು ಅಂದಾಗ ಮೋಶೆಯು ಅವರಿಗೆ--ಯಾಕೆ ನನ್ನ ಸಂಗಡ ವಿವಾದ ಮಾಡುತ್ತೀರಿ? ಕರ್ತನನ್ನು ಯಾಕೆ ಪರೀಕ್ಷಿಸುತ್ತೀರಿ ಅಂದನು. ಅಲ್ಲಿ ಜನರು ದಾಹಗೊಂಡು ಮೋಶೆಗೆ ವಿರುದ್ಧವಾಗಿ ಗುಣು ಗುಟ್ಟಿ--ನಮ್ಮನ್ನೂ ನಮ್ಮ ಮಕ್ಕಳನ್ನೂ ನಮ್ಮ ದನಗಳನ್ನೂ ದಾಹದಿಂದ ಕೊಲ್ಲುವದಕ್ಕಾಗಿ ಯಾಕೆ ಐಗುಪ್ತದೊಳ ಗಿಂದ ಇಲ್ಲಿಗೆ ಬರಮಾಡಿದಿ ಅಂದರು. ಆಗ ಮೋಶೆಯು ಕರ್ತನಿಗೆ ಮೊರೆಯಿಟ್ಟು--ಈ ಜನರಿಗೆ ನಾನೇನು ಮಾಡಲಿ? ಅವರು ಬಹಳ ಮಟ್ಟಿಗೆ ನನ್ನನ್ನು ಕಲ್ಲೆಸೆಯುವದಕ್ಕಿದ್ದಾರೆ ಅಂದನು.
- Exodus 16:28 ವಿಮೋಚನಕಾಂಡ 16:28ಆಗ ಕರ್ತನು ಮೋಶೆಗೆ--ಎಷ್ಟು ಕಾಲ ನನ್ನ ಕಟ್ಟಳೆಗಳನ್ನೂ ನ್ಯಾಯಪ್ರಮಾಣಗಳನ್ನೂ ಕೈಕೊಳ್ಳದೆ ನಿರಾಕರಿಸುವಿರಿ ಅಂದನು.