Exodus · chapter 32 · verse 29
Exodus 32:29 in Kannada
ಮೋಶೆಯು--ಈ ದಿನ ಆತನು ನಿಮ್ಮ ಮೇಲೆ ತನ್ನ ಆಶೀರ್ವಾದವನ್ನು ಅನುಗ್ರಹಿಸುವಂತೆ ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಮಗನಿಗೋಸ್ಕರವೂ ತನ್ನ ಸಹೋದರನಿಗೋಸ್ಕರವೂ ಈ ದಿನ ಕರ್ತನಿಗೆ ಪ್ರತಿಷ್ಠೆ ಮಾಡಿಕೊಳ್ಳಲಿ ಅಂದನು.
Mosheyu--ee dina aatanu nimma mele tanna aasheervaadavannu anugrahisuvante nimmalli pratiyobbanu tanna maganigoskaravoo tanna sahodaranigoskaravoo ee dina kartanige pratishthe maadikollali andanu.
Exodus 32:29 in English
- King James Version (KJV)
- For Moses had said, Consecrate yourselves to day to the LORD, even every man upon his son, and upon his brother; that he may bestow upon you a blessing this day.
- World English Bible (WEB)
- Moses said, “Consecrate yourselves today to the LORD, for every man was against his son and against his brother, that he may give you a blessing today.”
- American Standard Version (ASV)
- And Moses said, Consecrate yourselves to-day to Jehovah, yea, every man against his son, and against his brother; that he may bestow upon you a blessing this day.
- Bible in Basic English (BBE)
- And Moses said, You have made yourselves priests to the Lord this day; for every one of you has made the offering of his son and his brother; the blessing of the Lord is on you this day.
- Darby Translation (DBY)
- And Moses said, Consecrate yourselves to-day to Jehovah, yea, every man with his son, and with his brother, and bring on yourselves a blessing to-day.
- Webster's Bible (WBS)
- For Moses had said, Consecrate yourselves to-day to the LORD, even every man upon his son, and upon his brother; that he may bestow upon you a blessing this day.
- Young's Literal Translation (YLT)
- and Moses saith, 'Consecrate your hand to-day to Jehovah, for a man [is] against his son, and against his brother, so as to bring on you to-day a blessing.'
Read in context
- 27ಅವನು ಅವರಿಗೆ--ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಪ್ರತಿಯೊಬ್ಬನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡು ಪಾಳೆಯದಲ್ಲೆಲ್ಲಾ ಒಳಗಿನಿಂದ ಹೊರಕ್ಕೆ ದ್ವಾರದಿಂದ ದ್ವಾರಕ್ಕೆ ಹೋಗಿ ತನ್ನ ಸಹೋದರನನ್ನೂ ತನ್ನ ಜೊತೆಗಾರನನ್ನೂ ತನ್ನ ನೆರೆಯವನನ್ನೂ ಕೊಲ್ಲಲಿ ಎಂದು ಹೇಳಿದನು.
- 28ಲೇವಿಯ ಮಕ್ಕಳು ಮೋಶೆಯ ಮಾತಿನಂತೆ ಮಾಡಿದರು. ಆ ದಿನದಲ್ಲಿ ಜನರೊಳಗೆ ಹೆಚ್ಚು ಕಡಿಮೆ ಮೂರುಸಾವಿರ ಜನರು ಸತ್ತರು.
- 29ಮೋಶೆಯು--ಈ ದಿನ ಆತನು ನಿಮ್ಮ ಮೇಲೆ ತನ್ನ ಆಶೀರ್ವಾದವನ್ನು ಅನುಗ್ರಹಿಸುವಂತೆ ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಮಗನಿಗೋಸ್ಕರವೂ ತನ್ನ ಸಹೋದರನಿಗೋಸ್ಕರವೂ ಈ ದಿನ ಕರ್ತನಿಗೆ ಪ್ರತಿಷ್ಠೆ ಮಾಡಿಕೊಳ್ಳಲಿ ಅಂದನು.
- 30ಮರುದಿನದಲ್ಲಿ ಆದದ್ದೇನಂದರೆ, ಮೋಶೆಯು ಜನರಿಗೆ-ನೀವು ದೊಡ್ಡ ಪಾಪವನ್ನು ಮಾಡಿದ್ದೀರಿ, (ಆದದರಿಂದ) ಈಗ ನಾನು ಕರ್ತನ ಬಳಿಗೆ ಹೋಗು ವೆನು, ಒಂದು ವೇಳೆ ನಿಮ್ಮ ಪಾಪಕ್ಕಾಗಿ ನಾನು ಪ್ರಾಯ ಶ್ಚಿತ್ತ ಮಾಡಿಯೇನು ಅಂದನು.
- 31ಹೀಗೆ ಮೋಶೆಯು ಕರ್ತನ ಬಳಿಗೆ ತಿರಿಗಿ ಹೋಗಿ ಹೇಳಿದ್ದೇನಂದರೆ, ಅಯ್ಯೋ, ಈ ಜನರು ದೊಡ್ಡ ಪಾಪವನ್ನು ಮಾಡಿದ್ದಾರೆ. ಅವರು ತಮಗೆ ಚಿನ್ನದ ದೇವರುಗಳನ್ನು ಮಾಡಿಕೊಂಡಿದ್ದಾರೆ.
Cross references
- Numbers 25:11–13 ಅರಣ್ಯಕಾಂಡ 25:11–13ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನಾದ ಯಾಜಕ ನಾಗಿರುವ ಫೀನೆಹಾಸನು ಇಸ್ರಾಯೇಲಿನ ಮಕ್ಕಳಲ್ಲಿ ನನಗೋಸ್ಕರ ಆಸಕ್ತನಾಗಿದ್ದು ನಾನು ನನ್ನ ರೋಷದಿಂದ ಅವರನ್ನು ನಾಶಮಾಡದ ಹಾಗೆ ನನ್ನ ಕೋಪವನ್ನು ಅವರ ಮೇಲಿನಿಂದ ತಿರುಗಿಸಿ ಬಿಟ್ಟಿದ್ದಾನೆ. ಆದ ಕಾರಣ--ಇಗೋ, ನಾನು ಅವನೊಂದಿಗೆ ನನ್ನ ಸಮಾಧಾನದ ಒಡಂಬಡಿಕೆಯನ್ನು ಮಾಡುತ್ತೇನೆ ಎಂದು ಹೇಳು. ಅವನು ತನ್ನ ದೇವರಿಗೋಸ್ಕರ ಆಸಕ್ತನಾಗಿದ್ದು ಇಸ್ರಾಯೇಲಿನ ಮಕ್ಕಳಿಗೋಸ್ಕರ ಪಾಪ ಪ್ರಾಯಶ್ಚಿತ್ತ ಮಾಡಿದ್ದರಿಂದ ಅವನಿಗೂ ಅವನ ಹಿಂದೆ ಬರುವ ಅವನ ಸಂತತಿಗೂ ನಿತ್ಯ ಯಾಜಕತ್ವದ ಒಡಂಬಡಿಕೆಯಾಗಿರುವದು ಎಂದು ಹೇಳಿದನು.
- Zechariah 13:3 ಜೆಕರ್ಯ 13:3ಆಗುವದೇನಂದರೆ, ಯಾವನಾದರೂ ಇನ್ನು ಪ್ರವಾದಿ ಸಿದರೆ ಅವನ ಹೆತ್ತವರಾದ ತಂದೆತಾಯಿಗಳು ಅವ ನಿಗೆ--ನೀನು ಬದುಕಬಾರದು, ಕರ್ತನ ಹೆಸರಿನಲ್ಲಿ ಸುಳ್ಳು ಹೇಳುತ್ತೀ ಎಂದು ಹೇಳುವರು; ಅವನು ಪ್ರವಾದಿಸುವಾಗ ಅವನ ಹೆತ್ತವರಾದ ತಂದೆತಾಯಿ ಗಳು ಅವನನ್ನು ನೂಕಿಬಿಡುವರು.
- Matthew 10:37 ಮತ್ತಾಯನು 10:37ನನಗಿಂತ ಹೆಚ್ಚಾಗಿ ತಂದೆಯನ್ನಾಗಲೀ ತಾಯಿಯನ್ನಾಗಲೀ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ; ಮತ್ತು ಮಗನ ನ್ನಾಗಲೀ ಮಗಳನ್ನಾಗಲೀ ನನಗಿಂತ ಹೆಚ್ಚಾಗಿ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ.
- Deuteronomy 13:6–11 ಧರ್ಮೋಪದೇಶಕಾಂಡ 13:6–11ನಿನ್ನ ತಾಯಿಯ ಮಗನಾದ ನಿನ್ನ ಸಹೋದರ ನಾಗಲಿ ಮಗನಾಗಲಿ ಮಗಳಾಗಲಿ ಮಗ್ಗುಲಲ್ಲಿರುವ ಹೆಂಡತಿಯಾಗಲಿ ನಿನ್ನ ಪ್ರಾಣದಂತೆ ನಿನಗಿರುವ ಸ್ನೇಹಿತ ನಾಗಲಿ ನೀನೂ ನಿನ್ನ ಪಿತೃಗಳೂ ತಿಳಿಯದ ಬೇರೆ ದೇವರುಗಳನ್ನು ನಿನಗೆ ಸವಿಾಪವಾಗಲಿ ನಿನಗೆ ದೂರವಾಗಲಿ ಭೂಮಿಯ ಒಂದು ಕಡೆಯಿಂದ ಅದರ ಮತ್ತೊಂದು ಕಡೆಯ ವರೆಗೆ ನಿನ್ನ ಸುತ್ತಲಿರುವ ಜನಗಳ ದೇವರುಗಳನ್ನು ಹೋಗಿ ಸೇವಿಸೋಣ ಎಂದು ನಿನ್ನನ್ನು ಅಂತರಂಗದಲ್ಲಿ ಪ್ರೇರೇಪಿಸಿದರೆ ನೀನು ಅವನಿಗೆ ಸಮ್ಮತಿಸಬಾರದು; ಅವನ ಮಾತನ್ನು ಕೇಳಬಾರದು; ನಿನ್ನ ಕಣ್ಣು ಅವನನ್ನು ಕರುಣಿಸಬಾರದು; ನೀನು ಅವ ನನ್ನು ಕನಿಕರಿಸಬಾರದು ಇಲ್ಲವೆ ಬಚ್ಚಿಡಬಾರದು. ಅವನನ್ನು ಖಂಡಿತವಾಗಿ ಕೊಲ್ಲಬೇಕು. ಅವನನ್ನು ಕೊಲ್ಲುವ ಹಾಗೆ ಮೊದಲು ನಿನ್ನ ಕೈ, ಆ ಮೇಲೆ ಎಲ್ಲಾ ಜನರ ಕೈ ಅವನ ಮೇಲೆ ಇರಬೇಕು. ಐಗುಪ್ತ ದೇಶದೊಳಗಿಂದಲೂ ದಾಸತ್ವದ ಮನೆಯೊ ಳಗಿಂದಲೂ ನಿನ್ನನ್ನು ಹೊರಗೆ ಬರಮಾಡಿದ ನಿನ್ನ ದೇವರಾದ ಕರ್ತನ ಬಳಿಯಿಂದ ನಿನ್ನನ್ನು ದೂಡುವದಕ್ಕೆ ಅವನು ಪ್ರಯತ್ನಮಾಡಿದ್ದರಿಂದ ಅವನು ಸಾಯುವಹಾಗೆ ಕಲ್ಲೆಸೆಯಬೇಕು. ಆಗ ಇಸ್ರಾಯೇ ಲೆಲ್ಲಾ ಕೇಳಿ ಭಯಪಟ್ಟು ಇನ್ನು ಮೇಲೆ ನಿನ್ನ ಮಧ್ಯದಲ್ಲಿ ಇಂಥಾ ಕೆಟ್ಟಕಾರ್ಯವನ್ನು ಮಾಡುವದಿಲ್ಲ.
- Proverbs 21:3 ಜ್ಞಾನೋಕ್ತಿಗಳು 21:3ಯಜ್ಞಕ್ಕಿಂತ ನೀತಿನ್ಯಾಯಗಳನ್ನು ನಡಿಸುವದು ಕರ್ತ ನಿಗೆ ಎಷ್ಟೋ ಮೆಚ್ಚಿಕೆಯಾಗಿದೆ.
- 1 Samuel 15:18–22 1 ಸಮುವೇಲನು 15:18–22ಪಾಪಿಷ್ಠರಾದ ಅಮಾಲೇಕ್ಯರನ್ನು ಸಂಪೂರ್ಣ ನಾಶಮಾಡಿ ಅವರು ತೀರಿಹೋಗುವ ವರೆಗೂ ಅವರ ಸಂಗಡ ಯುದ್ಧಮಾಡಬೇಕೆಂದು ಕರ್ತನು ನಿನ್ನನ್ನು ಕಳುಹಿಸಿದನು. ಹೀಗಿರುವಾಗ ನೀನು ಯಾಕೆ ಕರ್ತನ ಮಾತಿಗೆ ವಿಧೇಯನಾಗದೆ ಕೊಳ್ಳೆಯ ಮೇಲೆ ಬಿದ್ದು ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದಿ ಅಂದನು. ಆಗ ಸೌಲನು ಸಮುವೇಲನಿಗೆ--ಹೌದು, ನಾನು ಕರ್ತನ ಮಾತಿಗೆ ವಿಧೇಯನಾಗಿ, ಕರ್ತನು ನನ್ನನ್ನು ಕಳುಹಿಸಿದಲ್ಲಿಗೆ ಹೋಗಿ ಅಮಾಲೇಕ್ಯರ ಅರಸನಾದ ಅಗಾಗನನ್ನು ಹಿಡಿದುಕೊಂಡು ಬಂದು ಅಮಾಲೇಕ್ಯರನ್ನು ಸಂಪೂರ್ಣ ನಾಶಮಾಡಿದೆನು. ಆದರೆ ಜನರು ನಿನ್ನ ದೇವರಾದ ಕರ್ತನಿಗೆ ಗಿಲ್ಗಾಲಿ ನಲ್ಲಿ ಬಲಿ ಕೊಡುವದಕ್ಕಾಗಿ ಕೊಳ್ಳೆಯಲ್ಲಿ ಸಂಪೂರ್ಣ ವಾಗಿ ನಾಶಮಾಡಬೇಕೆಂದಿರುವ ಕುರಿ ಪಶುಗಳಲ್ಲಿ ಮೇಲ್ತರವಾದವುಗಳನ್ನು ಹಿಡುಕೊಂಡು ಬಂದರು ಅಂದನು. ಅದಕ್ಕೆ ಸಮುವೇಲನು--ಕರ್ತನ ವಾಕ್ಯಕ್ಕೆ ವಿಧೇಯನಾದರೆ ಕರ್ತನಿಗೆ ಆಗುವ ಸಂತೋಷ ದಹನ ಬಲಿಗಳಲ್ಲಿಯೂ ಬಲಿಗಳಲ್ಲಿಯೂ ಆಗುವದೋ? ಇಗೋ, ಬಲಿಗಿಂತ ವಿಧೇಯವಾಗುವದು ಟಗರುಗಳ ಕೊಬ್ಬಿಗಿಂತ ಆಲೈಸುವದು ಉತ್ತಮವಾಗಿರುವದು.
- Joel 2:12–14 ಯೋವೇಲ 2:12–14ಹೀಗಿರುವದರಿಂದ ಈಗ ಕರ್ತನು ಅನ್ನುವದೇ ನಂದರೆ--ಪೂರ್ಣ ಹೃದಯದಿಂದಲೂ ಉಪವಾಸ ದಿಂದಲೂ ಅಳುವಿಕೆಯಿಂದಲೂ ಗೋಳಾಟದಿಂದ ಲೂ ನನ್ನ ಕಡೆಗೆ ತಿರುಗಿಕೊಳ್ಳಿರಿ. ನಿಮ್ಮ ಬಟ್ಟೆಗಳನ್ನಲ್ಲ, ನಿಮ್ಮ ಹೃದಯವನ್ನು ಹರಕೊಂಡು ನಿಮ್ಮ ದೇವರಾದ ಕರ್ತನ ಕಡೆಗೆ ತಿರುಗಿಕೊಳ್ಳಿರಿ; ಆತನು ದಯೆ ಕರುಣೆ ದೀರ್ಘಶಾಂತಿ ಮಹಾ ಕೃಪೆಯೂ ಉಳ್ಳವನಾಗಿ ಕೇಡಿಗೆ ಪಶ್ಚಾತ್ತಾಪಪಡುತ್ತಾನೆ. ಆತನು ತಿರುಗಿಕೊಂಡು ಪಶ್ಚಾತ್ತಾಪಪಟ್ಟು ತನ್ನ ಹಿಂದೆ ಆಶೀರ್ವಾದವನ್ನು ಅಂದರೆ ನಿಮ್ಮ ದೇವರಾದ ಕರ್ತನಿಗಾಗಿ ಆಹಾರ ದರ್ಪಣೆಯನ್ನೂ ಪಾನದರ್ಪಣೆಯನ್ನೂ ಉಳಿಸುವ ನೇನೋ ಯಾರು ಬಲ್ಲರು?
- Deuteronomy 33:9–10 ಧರ್ಮೋಪದೇಶಕಾಂಡ 33:9–10ಅವನು ತನ್ನ ತಂದೆ ತಾಯಿಗಳಿಗೆ--ನಾನು ಅವ ನನ್ನು ನೋಡಲಿಲ್ಲ ಅಂದನು. ತನ್ನ ಸಹೋದರರ ಗುರುತನ್ನು ತಿಳುಕೊಳ್ಳಲಿಲ್ಲ. ತನ್ನ ಸ್ವಂತ ಮಕ್ಕಳನ್ನು ಅರಿಯಲಿಲ್ಲ. ಯಾಕಂದರೆ ಅವರು (ಲೇವಿಯರು) ನಿನ್ನ ವಾಕ್ಯವನ್ನು ಕೈಕೊಂಡು ನಿನ್ನ ಒಡಂಬಡಿಕೆಯನ್ನು ಕಾಪಾಡಿದ್ದಾರೆ. ಅವರು ಯಾಕೋಬನಿಗೆ ನಿನ್ನ ನ್ಯಾಯಗಳನ್ನೂ ಇಸ್ರಾಯೇಲಿಗೆ ನಿನ್ನ ನ್ಯಾಯಪ್ರಮಾಣವನ್ನೂ ಬೋಧಿಸುವರು; ನಿನ್ನ ಮುಂದೆ ಧೂಪವನ್ನೂ ನಿನ್ನ ಬಲಿಪೀಠದ ಮೇಲೆ ಸರ್ವಾಂಗ ದಹನಬಲಿಯನ್ನೂ ಇಡುವರು.