Exodus · chapter 33 · verse 19
Exodus 33:19 in Kannada
ಅದಕ್ಕೆ ಆತನು--ನಾನು ನನ್ನ ಸರ್ವೋತ್ತಮತ್ವವನ್ನು ನಿನ್ನೆದುರಿಗೆ ಹಾದು ಹೋಗಗೊಡಿಸಿ ಕರ್ತನ ಹೆಸರನ್ನು ನಿನ್ನ ಮುಂದೆ ಪ್ರಕಟಮಾಡಿ ನಾನು ಯಾರಿಗೆ ಕೃಪೆಯುಳ್ಳವ ನಾಗಿರಬೇಕೋ ಅವರಿಗೆ ಕೃಪೆಯುಳ್ಳವನಾಗಿರುವೆನು; ನಾನು ಯಾರಿಗೆ ಕರುಣೆಯನ್ನು ತೋರಿಸಬೇಕೋ ಅವರಿಗೆ ಕರುಣೆಯನ್ನು ತೋರಿಸುವೆನು ಅಂದನು.
Adakke aatanu--naanu nanna sarvottamatvavannu ninnedurige haadu hogagodisi kartana hesarannu ninna munde prakatamaadi naanu yaarige krupeyullava naagirabeko avarige krupeyullavanaagiruvenu; naanu yaarige karuneyannu torisabeko avarige karuneyannu torisuvenu andanu.
Exodus 33:19 in English
- King James Version (KJV)
- And he said, I will make all my goodness pass before thee, and I will proclaim the name of the LORD before thee; and will be gracious to whom I will be gracious, and will shew mercy on whom I will shew mercy.
- World English Bible (WEB)
- He said, “I will make all my goodness pass before you, and will proclaim the LORD’s name before you. I will be gracious to whom I will be gracious, and will show mercy on whom I will show mercy.”
- American Standard Version (ASV)
- And he said, I will make all my goodness pass before thee, and will proclaim the name of Jehovah before thee; and I will be gracious to whom I will be gracious, and will show mercy on whom I will show mercy.
- Bible in Basic English (BBE)
- And he said, I will make all the light of my being come before you, and will make clear to you what I am; I will be kind to those to whom I will be kind, and have mercy on those on whom I will have mercy.
- Darby Translation (DBY)
- And he said, I will make all my goodness pass before thy face, and I will proclaim the name of Jehovah before thee; and I will be gracious to whom I will be gracious, and I will shew mercy on whom I will shew mercy.
- Webster's Bible (WBS)
- And he said, I will make all my goodness pass before thee, and I will proclaim the name of the LORD before thee; and will be gracious to whom I will be gracious, and will show mercy on whom I will show mercy.
- Young's Literal Translation (YLT)
- and He saith, 'I cause all My goodness to pass before thy face, and have called concerning the Name of Jehovah before thee, and favoured him whom I favour, and loved him whom I love.'
Read in context
- 17ಅದಕ್ಕೆ ಕರ್ತನು ಮೋಶೆಗೆ--ನೀನು ಆಡಿದ ಈ ಮಾತಿನಂತೆಯೇ ನಾನು ಇದನ್ನು ಮಾಡುತ್ತೇನೆ. ನನ್ನ ದೃಷ್ಟಿಯಲ್ಲಿ ನಿನಗೆ ಕೃಪೆ ದೊರಕಿತು. ನಾನು ನಿನ್ನನ್ನು ಹೆಸರಿನಿಂದ ತಿಳಿದಿದ್ದೇನೆ ಅಂದನು.
- 18ಅವನು--ನಿನ್ನ ಮಹಿಮೆಯನ್ನು ನನಗೆ ತೋರಿಸು ಎಂದು ನಾನು ನಿನ್ನನ್ನು ಬೇಡುತ್ತೇನೆ ಅಂದನು.
- 19ಅದಕ್ಕೆ ಆತನು--ನಾನು ನನ್ನ ಸರ್ವೋತ್ತಮತ್ವವನ್ನು ನಿನ್ನೆದುರಿಗೆ ಹಾದು ಹೋಗಗೊಡಿಸಿ ಕರ್ತನ ಹೆಸರನ್ನು ನಿನ್ನ ಮುಂದೆ ಪ್ರಕಟಮಾಡಿ ನಾನು ಯಾರಿಗೆ ಕೃಪೆಯುಳ್ಳವ ನಾಗಿರಬೇಕೋ ಅವರಿಗೆ ಕೃಪೆಯುಳ್ಳವನಾಗಿರುವೆನು; ನಾನು ಯಾರಿಗೆ ಕರುಣೆಯನ್ನು ತೋರಿಸಬೇಕೋ ಅವರಿಗೆ ಕರುಣೆಯನ್ನು ತೋರಿಸುವೆನು ಅಂದನು.
- 20ಆತನು ಅವನಿಗೆ--ನೀನು ನನ್ನ ಮುಖವನ್ನು ನೋಡ ಲಾರಿ; ಯಾವ ಮನುಷ್ಯನೂ ನನ್ನನ್ನು ನೋಡಿ ಬದುಕುವದಿಲ್ಲ ಅಂದನು.
- 21ಇದಲ್ಲದೆ ಕರ್ತನುಇಗೋ, ನನ್ನ ಬಳಿಯಲ್ಲಿ ಒಂದು ಸ್ಥಳವಿದೆ; ನೀನು ಬಂಡೆಯ ಮೇಲೆ ನಿಂತುಕೊಳ್ಳುವಿ.
Cross references
- Romans 9:15–18 ರೋಮಾಪುರದವರಿಗೆ 9:15–18ಆತನು ಮೋಶೆಗೆ--ಯಾವನ ಮೇಲೆ ನನಗೆ ಕರುಣೆ ಇದೆಯೋ ಅವನನ್ನು ಕರುಣಿಸುವೆನು ಮತ್ತು ಯಾವನ ಮೇಲೆ ನನಗೆ ದಯೆ ಇದೆಯೋ ಅವನಿಗೆ ದಯೆ ತೋರಿಸುವೆನು ಎಂದು ಹೇಳುತ್ತಾನೆ. ಹೀಗಿರುವಾಗ ಅದು ಇಚ್ಛಿಸುವವನಿಂದಾಗಲೀ ಪ್ರಯಾಸಪಡುವವನಿಂದಾಗಲೀ ಆಗದೆ ಕರುಣೆ ತೋರಿ ಸುವ ದೇವರಿಂದಲೇ ಆಗುವದು. ಬರಹವು ಫರೋ ಹನಿಗೆ--ನನ್ನ ಬಲವನ್ನು ನಿನ್ನಲ್ಲಿ ತೋರಿಸುವ ಹಾಗೆಯೂ ನನ್ನ ನಾಮವು ಭೂಮಿಯ ಎಲ್ಲಾ ಕಡೆಯಲ್ಲಿ ಪ್ರಸಿದ್ಧಿ ಹೊಂದಬೇಕೆಂಬ ಉದ್ದೇಶದಿಂದಲೂ ನಾನು ನಿನ್ನನ್ನು ಉನ್ನತ ಸ್ಥಿತಿಗೆ ತಂದಿದ್ದೇನೆ ಎಂದು ಹೇಳುತ್ತದೆ. ಆದದರಿಂದ ಆತನು ಯಾವನನ್ನು ಕರುಣಿಸಬೇಕೆಂದಿ ರುವನೋ ಅವನನ್ನು ಕರುಣಿಸುವನು; ಯಾವನನ್ನು ಕಠಿಣಪಡಿಸಬೇಕೆಂದಿರುವನೋ ಅವನನ್ನು ಕಠಿಣ ಪಡಿಸುವನು.
- Ephesians 1:6–8 ಎಫೆಸದವರಿಗೆ 1:6–8ತನ್ನ ಕೃಪಾಮಹಿಮೆಯ ಸ್ತುತಿಗಾಗಿ ಆತನು ನಮ್ಮನ್ನು ಆ ಪ್ರಿಯನಲ್ಲಿ ಅಂಗೀಕರಿಸಿದ್ದಾನೆ. ಆತನ ಕೃಪಾ ಐಶ್ವರ್ಯ ಕ್ಕನುಸಾರವಾಗಿ ಆತನ ರಕ್ತದ ಮೂಲಕ ಆತನಲ್ಲಿ ನಮಗೆ ವಿಮೋಚನೆಯು ಅಂದರೆ ಪಾಪಗಳ ಕ್ಷಮಾ ಪಣೆಯು ಉಂಟಾಯಿತು. ಹೀಗೆ ಆತನು ತನ್ನ ಕೃಪಾತಿಶಯದಲ್ಲಿ ಸಕಲ ಜ್ಞಾನವನ್ನೂ ಬುದ್ದಿಯನ್ನೂ ಇನ್ನೂ ಹೆಚ್ಚಾಗಿ ನಮ್ಮ ಕಡೆಗೆ ತೋರಿಸಿದ್ದಾನೆ.
- Jeremiah 31:14 ಯೆರೆಮೀಯ 31:14ಇದಲ್ಲದೆ ಯಾಜಕರ ಪ್ರಾಣವನ್ನು ಕೊಬ್ಬಿನಿಂದ ತುಂಬಿಸುವೆನು; ನನ್ನ ಜನರು ನನ್ನ ಒಳ್ಳೇತನದಿಂದ ತೃಪ್ತಿಪಡುವರೆಂದು ಕರ್ತನು ಅನ್ನುತ್ತಾನೆ.
- Jeremiah 31:12 ಯೆರೆಮೀಯ 31:12ಆದದರಿಂದ ಅವರು ಬಂದು ಚೀಯೋನಿನ ಉನ್ನತದಲ್ಲಿ ಹಾಡಿ ಕರ್ತನ ಒಳ್ಳೇತನದ ಬಳಿಗೆ ಗೋಧಿಯ ನಿಮಿತ್ತವೂ ದ್ರಾಕ್ಷಾರಸದ ನಿಮಿತ್ತವೂ ಎಣ್ಣೆಯ ನಿಮಿತ್ತವೂ ಮಂದೆ ದನ ಮರಿಗಳ ನಿಮಿತ್ತವೂ ಪ್ರವಾಹದಂತೆ ಬರುವರು; ಅವರ ಪ್ರಾಣವು ಚೆನ್ನಾಗಿ ನೀರು ಹಾಕಿದ ತೋಟದ ಹಾಗೆ ಇರುವದು; ಅವರು ಇನ್ನು ಮೇಲೆ ಯಾವಾಗಲೂ ದುಃಖಪಡುವದಿಲ್ಲ.
- Isaiah 7:14 ಯೆಶಾಯ 7:14ಆದಕಾರಣ ಕರ್ತನು ತಾನೇ ಒಂದು ಗುರುತನ್ನು ನಿನಗೆ ಕೊಡು ವನು; ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆಯುವಳು. ಆತನನ್ನು ಇಮ್ಮಾನು ವೇಲ್ ಎಂದು ಕರೆಯುವರು.
- Exodus 34:5–7 ವಿಮೋಚನಕಾಂಡ 34:5–7ಆಗ ಕರ್ತನು ಮೇಘದಲ್ಲಿ ಇಳಿದು ಬಂದು ಅವನ ಸಂಗಡ ಅಲ್ಲಿ ನಿಂತುಕೊಂಡು ಕರ್ತನ ಹೆಸರನ್ನು ಪ್ರಕಟ ಮಾಡಿದನು. ಕರ್ತನು ಅವನೆದುರಿಗೆ ಹಾದು ಹೋಗುತ್ತಾ--ಕರ್ತನು, ಕರ್ತನಾದ ದೇವರು, ಕರುಣಾಳುವೂ ಕೃಪಾಳುವೂ ದೀರ್ಘಶಾಂತನೂ ಒಳ್ಳೇತನದಲ್ಲಿ ಮತ್ತು ಸತ್ಯದಲ್ಲಿ ಸಮೃದ್ಧಿಯಾದಾತನೂ ಸಾವಿರ (ತಲೆಗಳ) ವರೆಗೂ ಕರುಣೆ ತೋರಿಸುವಾತನೂ ದೋಷಾಪರಾಧ ವನ್ನೂ ಪಾಪವನ್ನೂ ಕ್ಷಮಿಸುವಾತನೂ ಅಪರಾಧಿ ಯನ್ನು ನಿರಪರಾಧಿಯೆಂದು ಎಣಿಸದವನೂ ತಂದೆಗಳ ದೋಷವನ್ನು ಮಕ್ಕಳ ಮೇಲೆಯೂ ಮೊಮ್ಮಕ್ಕಳ ಮೇಲೆಯೂ ಮೂರನೆಯ ಮತ್ತು ನಾಲ್ಕನೆಯ ತಲೆ ಗಳವರೆಗೂ ವಿಚಾರಿಸುವಾತನೂ ಎಂದು ಪ್ರಕಟಿಸಿ ಕೊಂಡನು.
- Exodus 3:13–15 ವಿಮೋಚನಕಾಂಡ 3:13–15ಅದಕ್ಕೆ ಮೋಶೆಯು ದೇವರಿಗೆ--ಇಗೋ, ಇಸ್ರಾಯೇಲ್ ಮಕ್ಕಳ ಬಳಿಗೆ ಹೋಗಿ--ನಿಮ್ಮ ಪಿತೃಗಳ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ಹೇಳುವಾಗ ಅವರು ನನಗೆ--ಆತನ ಹೆಸರು ಏನು ಎಂದು ಕೇಳಿದರೆ ನಾನು ಅವರಿಗೆ ಏನು ಹೇಳಬೇಕು ಅಂದನು. ಆಗ ದೇವರು ಮೋಶೆಗೆ--ಇರುವಾತನೇ ಆಗಿದ್ದೇನೆ, ಆ ಇರುವಾತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಎಂದು ಇಸ್ರಾಯೇಲ್ ಮಕ್ಕಳಿಗೆ ಹೇಳಬೇಕು ಅಂದನು. ದೇವರು ಮೋಶೆಗೆ--ನಿಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರ ದೇವರು ಆಗಿರುವ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿ ದ್ದಾನೆಂದು ಇಸ್ರಾಯೇಲ್ ಮಕ್ಕಳಿಗೆ ಹೇಳಬೇಕು; ಇದೇ ಯುಗ ಯುಗಕ್ಕೆ ನನ್ನ ಹೆಸರೂ ತಲತಲಾಂತರಕ್ಕೆ ನನ್ನ ಸ್ಮರಣೆಯೂ ಆಗಿದೆ ಎಂದು ಹೇಳಿದನು.
- Isaiah 12:4 ಯೆಶಾಯ 12:4ನೀವು--ಕರ್ತನನ್ನು ಕೊಂಡಾ ಡಿರಿ; ಜನರ ಮಧ್ಯದಲ್ಲಿ ಆತನ ಹೆಸರನ್ನೆತ್ತಿ ಕ್ರಿಯೆಗ ಳನ್ನು ಪ್ರಕಟಿಸಿರಿ. ಆತನ ನಾಮವನ್ನು ಉನ್ನತೋನ್ನತ ವೆಂದು ಎತ್ತಿ ಹೇಳಿರಿ ಎಂದು ಆ ದಿನದಲ್ಲಿ ಹೇಳುವಿರಿ.
- Nehemiah 9:25 ನೆಹೆಮೀಯ 9:25ಅವರು ಬಲವಾದ ಪಟ್ಟಣ ಗಳನ್ನೂ ರಸವತ್ತಾದ ಭೂಮಿಯನ್ನೂ ತೆಗೆದುಕೊಂಡು ಸಮಸ್ತ ಉತ್ತಮವಾದವುಗಳಿಂದ ತುಂಬಿದ ಮನೆ ಗಳನ್ನೂ ತೋಡಿದ ಬಾವಿಗಳನ್ನೂ ದ್ರಾಕ್ಷೇ ತೋಟ ಗಳನ್ನೂ ಇಪ್ಪೇತೋಪುಗಳನ್ನೂ ಸಮೃದ್ಧಿಯಾದ ಹಣ್ಣಿನ ಮರಗಳನ್ನೂ ಬಹಳವಾಗಿ ಸ್ವಾಧೀನಮಾಡಿಕೊಂಡರು. ಹೀಗೆ ಅವರು ತಿಂದು ತೃಪ್ತಿಪಟ್ಟು ಪುಷ್ಟಿಯಾಗಿ ನಿನ್ನ ದೊಡ್ಡ ಉಪಕಾರದಲ್ಲಿ ಆನಂದಪಟ್ಟರು.
- Isaiah 9:6 ಯೆಶಾಯ 9:6ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
- Romans 2:4 ರೋಮಾಪುರದವರಿಗೆ 2:4ಇಲ್ಲವೆ ದೇವರ ದಯೆಯು ನಿನ್ನನ್ನು ಮಾನಸಾಂತರಕ್ಕೆ ನಡಿಸುತ್ತದೆಯೆಂದು ನೀನು ತಿಳಿಯದೆ ಆತನ ಅಪಾರವಾದ ದಯೆ ಸಹನೆ ದೀರ್ಘ ಶಾಂತಿ ಇವುಗಳನ್ನು ಅಸಡ್ಡೆಮಾಡುತ್ತೀಯೋ?
- Zechariah 9:17 ಜೆಕರ್ಯ 9:17ಆತನ ಒಳ್ಳೇತನವು ಎಷ್ಟೋ ದೊಡ್ಡದು; ಆತನ ಸೌಂದರ್ಯವು ಎಷ್ಟು ಮಹತ್ತಾ ದದ್ದು! ಧಾನ್ಯವು ಯೌವನಸ್ಥರನ್ನೂ ದ್ರಾಕ್ಷಾರಸವು ಯುವತಿಯರನ್ನೂ ಹರ್ಷಗೊಳಿಸುವವು.