Exodus · chapter 34 · verse 16
Exodus 34:16 in Kannada
ಇದಲ್ಲದೆ ಅವರ ಕುಮಾರ್ತೆಯರನ್ನು ನಿನ್ನ ಕುಮಾರರಿಗೋಸ್ಕರ ತಕ್ಕೊಳ್ಳಬೇಕಾಗಬಹುದು. ತಕ್ಕೊಂಡರೆ ಅವರ ಕುಮಾರ್ತೆಯರು ತಮ್ಮ ದೇವರುಗಳನ್ನು ಆರಾಧಿಸಿ ನಿಮ್ಮ ಕುಮಾರರು ತಮ್ಮ ದೇವರುಗಳನ್ನು ಆರಾಧಿಸುವಂತೆ ಮಾಡಾರು.
Idallade avara kumaarteyarannu ninna kumaararigoskara takkollabekaagabahudu. Takkondare avara kumaarteyaru tamma devarugalannu aaraadhisi nimma kumaararu tamma devarugalannu aaraadhisuvante maadaaru.
Exodus 34:16 in English
- King James Version (KJV)
- And thou take of their daughters unto thy sons, and their daughters go a whoring after their gods, and make thy sons go a whoring after their gods.
- World English Bible (WEB)
- and you take of their daughters to your sons, and their daughters play the prostitute after their gods, and make your sons play the prostitute after their gods.
- American Standard Version (ASV)
- and thou take of their daughters unto thy sons, and their daughters play the harlot after their gods, and make thy sons play the harlot after their gods.
- Bible in Basic English (BBE)
- Or take their daughters for your sons; for when their daughters give worship before their gods, they will make your sons take part with them.
- Darby Translation (DBY)
- and thou take of their daughters unto thy sons, and their daughters go a whoring after their gods, and make thy sons go a whoring after their gods.
- Webster's Bible (WBS)
- And thou take of their daughters to thy sons, and their daughters go astray after their gods, and make thy sons go astray after their gods.
- Young's Literal Translation (YLT)
- and thou hast taken of their daughters to thy sons, and their daughters have gone a-whoring after their gods, and have caused thy sons to go a-whoring after their gods;
Read in context
- 14ರೋಷವುಳ್ಳವನೆಂದು ಹೆಸರುಳ್ಳ ಕರ್ತನು ರೋಷ ವುಳ್ಳ ದೇವರಾಗಿರುವದರಿಂದ ನೀನು ಬೇರೆ ದೇವರು ಗಳನ್ನು ಆರಾಧಿಸಬಾರದು.
- 15ಆ ದೇಶ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡಬಾರದು. ಅವರು ಅನ್ಯ ದೇವರುಗಳನ್ನು ಆರಾಧಿಸಿ, ಅವುಗಳಿಗೆ ಯಜ್ಞಗಳನ್ನು ಮಾಡುವಾಗ ಒಬ್ಬನು ನಿನ್ನನ್ನು ಕರೆದಾನು; ನೀನು ಅವನ ಬಲಿಯನ್ನು ತಿನ್ನ ಬೇಕಾದೀತು.
- 16ಇದಲ್ಲದೆ ಅವರ ಕುಮಾರ್ತೆಯರನ್ನು ನಿನ್ನ ಕುಮಾರರಿಗೋಸ್ಕರ ತಕ್ಕೊಳ್ಳಬೇಕಾಗಬಹುದು. ತಕ್ಕೊಂಡರೆ ಅವರ ಕುಮಾರ್ತೆಯರು ತಮ್ಮ ದೇವರುಗಳನ್ನು ಆರಾಧಿಸಿ ನಿಮ್ಮ ಕುಮಾರರು ತಮ್ಮ ದೇವರುಗಳನ್ನು ಆರಾಧಿಸುವಂತೆ ಮಾಡಾರು.
- 17ನೀನು ಎರಕಹೊಯ್ದ ವಿಗ್ರಹಗಳನ್ನು ಮಾಡಿ ಕೊಳ್ಳಬಾರದು.
- 18ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ನಾನು ನಿಮಗೆ ಆಜ್ಞಾಪಿಸಿದಂತೆ ಅಬೀಬ್ ತಿಂಗಳಿನಲ್ಲಿ ಏಳು ದಿವಸ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಯಾಕಂದರೆ ಅಬೀಬ್ ತಿಂಗಳಿ ನಲ್ಲಿ ನೀವು ಐಗುಪ್ತದೇಶವನ್ನು ಬಿಟ್ಟು ಬಂದಿದ್ದೀರಿ.
Cross references
- 1 Kings 11:2–4 1 ಅರಸುಗಳು 11:2–4ಈ ಜನಾಂಗಗಳನ್ನು ಕುರಿತು ಕರ್ತನು ಇಸ್ರಾಯೇಲ್ ಮಕ್ಕಳಿಗೆ--ನಿಮಗೂ ಅವರಿಗೂ ಕೊಟ್ಟುಕೊಳ್ಳುವದು ಇರಬಾರದು, ಅವರು ನಿಶ್ಚಯವಾಗಿ ನಿಮ್ಮ ಹೃದಯವನ್ನು ತಮ್ಮ ದೇವರುಗಳ ಕಡೆಗೆ ತಿರುಗಿಸುವರು ಎಂದು ಹೇಳಿದ್ದನು. ಆದರೆ ಸೊಲೊಮೋನನು ಪ್ರೀತಿಯಲ್ಲಿ ಇವರನ್ನು ಅಂಟಿಕೊಂಡನು. ಅವನಿಗೆ ಅರಸುಗಳ ಕುಮಾರ್ತೆಯರಾದ ಏಳು ನೂರು ಮಂದಿ ಪತ್ನಿಯರೂ ಮುನ್ನೂರು ಮಂದಿ ಉಪಪತ್ನಿಗಳೂ ಇದ್ದರು. ಅವನ ಪತ್ನಿಯರು ಅವನ ಹೃದಯವನ್ನು ತಿರುಗಿಸಿದರು. ಸೊಲೊಮೋನನು ಮುದುಕನಾದ ಕಾಲದಲ್ಲಿ ಏನಾಯಿತಂದರೆ, ಅವನ ಪತ್ನಿಯರು ಅನ್ಯದೇವರುಗಳ ಕಡೆಗೆ ಅವನ ಹೃದಯವನ್ನು ತಿರುಗ ಮಾಡಿದರು. ಅವನ ಹೃದಯವು ತನ್ನ ತಂದೆಯಾದ ದಾವೀದನ ಹೃದಯದ ಹಾಗೆ ತನ್ನ ದೇವರಾದ ಕರ್ತನ ಸಂಗಡ ಪರಿಪೂರ್ಣವಾಗಿ ಇರಲಿಲ್ಲ.
- Deuteronomy 7:3–4 ಧರ್ಮೋಪದೇಶಕಾಂಡ 7:3–4ಇಲ್ಲವೆ ಅವರ ಸಂಗಡ ಮದುವೆಮಾಡಿ ಕೊಳ್ಳಬಾರದು; ನಿನ್ನ ಕುಮಾರ್ತೆಯನ್ನು ಅವನ ಮಗ ನಿಗೆ ಕೊಡಬಾರದು. ನಿನ್ನ ಕುಮಾರನಿಗೆ ಅವನ ಕುಮಾರ್ತೆಯನ್ನು ತಕ್ಕೊಳ್ಳಬಾರದು. ಯಾಕಂದರೆ ಅವರು ಬೇರೆ ದೇವರುಗಳನ್ನು ನಿನ್ನ ಕುಮಾರರು ಸೇವಿಸುವ ಹಾಗೆ ನನ್ನಿಂದ ತೊಲಗಿಸಾರು. ಆಗ ಕರ್ತನ ಕೋಪವು ನಿಮ್ಮ ಮೇಲೆ ಉರಿಯಲು ಆತನು ನಿನ್ನನ್ನು ಬೇಗ ನಾಶಮಾಡಿಯಾನು.
- Ezra 9:2 ಎಜ್ರನು 9:2ಏನಂದರೆ, ಅವರು ತಮಗೂ ತಮ್ಮ ಕುಮಾರರಿಗೂ ಅವರ ಕುಮಾರ್ತೆಯರನ್ನು ತಕ್ಕೊಂಡರು. ಆದಕಾರಣ ಪರಿಶುದ್ಧ ಸಂತಾನದವರು ಈ ದೇಶದ ಜನರ ಸಂಗಡ ಬೆರೆತುಕೊಂಡಿದ್ದಾರೆ; ನಿಶ್ಚಯವಾಗಿ ಪ್ರಧಾನರ, ಅಧಿಕಾರಸ್ಥರ ಕೈ ಈ ಅಕೃತ್ಯದಲ್ಲಿ ಮುಖ್ಯವಾಗಿದೆ ಎಂದು ಹೇಳಿದರು.
- Numbers 25:1–2 ಅರಣ್ಯಕಾಂಡ 25:1–2ಆಗ ಇಸ್ರಾಯೇಲ್ಯರು ಶಿಟ್ಟೀಮಿನಲ್ಲಿ ವಾಸವಾಗಿದ್ದಾಗ ಜನರು ಮೋವಾಬಿನ ಕುಮಾರ್ತೆಯರ ಸಂಗಡ ಜಾರತ್ವ ಮಾಡಲಾರಂಭಿ ಸಿದರು. ಇವರು ಜನರನ್ನು ತಮ್ಮ ದೇವರುಗಳ ಬಲಿಗಳಿಗೆ ಕರೆದರು; ಜನರು ತಿಂದು ಅವರ ದೇವರು ಗಳಿಗೆ ಅಡ್ಡಬಿದ್ದರು.
- Nehemiah 13:25 ನೆಹೆಮೀಯ 13:25ಆಗ ನಾನು ಅವರನ್ನು ಗದರಿಸಿ ಶಪಿಸಿ ಅವರಲ್ಲಿ ಕೆಲವರನ್ನು ಹೊಡೆದು ಅವರ ಕೂದಲನ್ನು ಕಿತ್ತು--ನೀವು ನಿಮ್ಮ ಕುಮಾರ್ತೆಯರನ್ನು ಅವರ ಕುಮಾರರಿಗೂ ಅವರ ಕುಮಾರ್ತೆಯರನ್ನು ನಿಮ್ಮ ಕುಮಾರರಿಗೂ ನಿಮಗೂ ತಕ್ಕೊಳ್ಳದೆ ಮತ್ತು ಕೊಡದೆ ಇರ್ರಿ ಎಂದು ದೇವರ ಹೆಸರಿನಲ್ಲಿ ಅವರಿಗೆ ಆಣೆ ಇಟ್ಟೆನು;
- Nehemiah 13:23 ನೆಹೆಮೀಯ 13:23ಆ ದಿವಸಗಳಲ್ಲಿ ಅಮ್ಮೋನು ಮೋವಾಬು ಅಷ್ಡೋದು ಎಂಬ ದೇಶಗಳ ಸ್ತ್ರೀಯರನ್ನು ಮದುವೆ ಮಾಡಿಕೊಂಡ ಯೆಹೂದ್ಯರನ್ನು ಕಂಡೆನು.
- 2 Corinthians 6:14–17 2 ಕೊರಿಂಥದವರಿಗೆ 6:14–17ನೀವು ಅವಿಶ್ವಾಸಿಗಳೊಂದಿಗೆ ಸೇರಿ ಸಮವಲ್ಲದ ನೊಗವನ್ನು ಹೊರಬೇಡಿರಿ; ಯಾಕಂದರೆ ಅನೀತಿಯ ಕೂಡ ನೀತಿಗೆ ಅನ್ಯೋನ್ಯತೆ ಏನು? ಕತ್ತಲೆಯ ಕೂಡ ಬೆಳಕಿಗೆ ಐಕ್ಯವೇನು? ಬೆಲಿಯಾಳನ ಕೂಡ ಕ್ರಿಸ್ತನಿಗೆ ಒಪ್ಪಂದವೇನು? ನಂಬದಿರುವವನ ಕೂಡ ನಂಬುವ ವನಿಗೆ ಪಾಲುಗಾರಿಕೆ ಏನು? ವಿಗ್ರಹಗಳ ಕೂಡ ದೇವರ ಮಂದಿರಕ್ಕೆ ಒಪ್ಪಿಗೆ ಏನು? ಯಾಕಂದರೆ ನೀವು ಜೀವವುಳ್ಳ ದೇವರ ಮಂದಿರವಾಗಿದ್ದೀರಲ್ಲಾ, ಇದರ ಸಂಬಂಧವಾಗಿ ದೇವರು--ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ. ಆದದರಿಂದ--ಅವರ ಮಧ್ಯದಲ್ಲಿಂದ ನೀವು ಹೊರಗೆ ಬಂದು ಪ್ರತ್ಯೇಕವಾಗಿರಿ. ಇದಲ್ಲದೆ ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.