Exodus · chapter 34 · verse 22
Exodus 34:22 in Kannada
ಪ್ರಥಮ ಗೋದಿ ಸುಗ್ಗಿಯ ವಾರಗಳ ಹಬ್ಬವನ್ನೂ ಸಂವತ್ಸರದ ಕೊನೆಯಲ್ಲಿ (ಬೆಳೆ) ಸಂಗ್ರಹದ ಹಬ್ಬ ವನ್ನೂ ಆಚರಿಸಬೇಕು.
Prathama godi suggiya vaaragala habbavannoo sanvatsarada koneyalli (bele) sangrahada habba vannoo aacharisabeku.
Exodus 34:22 in English
- King James Version (KJV)
- And thou shalt observe the feast of weeks, of the firstfruits of wheat harvest, and the feast of ingathering at the year’s end.
- World English Bible (WEB)
- “You shall observe the feast of weeks with the first fruits of wheat harvest, and the feast of harvest at the year’s end.
- American Standard Version (ASV)
- And thou shalt observe the feast of weeks, [even] of the first-fruits of wheat harvest, and the feast of ingathering at the year’s end.
- Bible in Basic English (BBE)
- And you are to keep the feast of weeks when you get in the first-fruits of the grain, and the feast at the turn of the year when you take in the produce of your fields.
- Darby Translation (DBY)
- — And thou shalt observe the feast of weeks, of the first-fruits of wheat-harvest, and the feast of ingathering at the turn of the year.
- Webster's Bible (WBS)
- And thou shalt observe the feast of weeks, of the first-fruits of wheat-harvest, and the feast of in-gathering at the year's end.
- Young's Literal Translation (YLT)
- 'And a feast of weeks thou dost observe for thyself; first-fruits of wheat-harvest; and the feast of in-gathering, at the revolution of the year.
Read in context
- 20ಕತ್ತೆಗಳಲ್ಲಿ ಗರ್ಭ ತೆರೆಯುವಂಥದ್ದನ್ನು ಕುರಿಮರಿ ಯಿಂದ ವಿಮೋಚಿಸಬೇಕು. ನೀನು ವಿಮೋಚಿಸದೆ ಹೋದರೆ ಅದರ ಕುತ್ತಿಗೆಯನ್ನು ಮುರಿಯಬೇಕು. ನಿನ್ನ ಕುಮಾರರ ಚೊಚ್ಚಲಾದವರನ್ನೆಲ್ಲಾ ವಿಮೋಚಿಸ ಬೇಕು. ನನ್ನ ಮುಂದೆ ಯಾರೂ ಬರೀಗೈಯಿಂದ ಕಾಣಿಸಿ ಕೊಳ್ಳಬಾರದು.
- 21ಆರು ದಿನಗಳು ಕೆಲಸಮಾಡಿ ಏಳನೆಯ ದಿನದಲ್ಲಿ ವಿಶ್ರಮಿಸಿಕೊಳ್ಳಬೇಕು. ಬಿತ್ತುವ ಕಾಲದಲ್ಲಿಯೂ ಕೊಯ್ಯುವ ಕಾಲದಲ್ಲಿಯೂ (ಏಳನೆಯ ದಿನದಲ್ಲಿ) ವಿಶ್ರಮಿಸಿಕೊಳ್ಳಬೇಕು.
- 22ಪ್ರಥಮ ಗೋದಿ ಸುಗ್ಗಿಯ ವಾರಗಳ ಹಬ್ಬವನ್ನೂ ಸಂವತ್ಸರದ ಕೊನೆಯಲ್ಲಿ (ಬೆಳೆ) ಸಂಗ್ರಹದ ಹಬ್ಬ ವನ್ನೂ ಆಚರಿಸಬೇಕು.
- 23ವರುಷಕ್ಕೆ ಮೂರುಸಾರಿ ನಿಮ್ಮ ಗಂಡು ಮಕ್ಕಳೆಲ್ಲಾ ಕರ್ತನಾದ ದೇವರ ಮುಂದೆ ಅಂದರೆ ಇಸ್ರಾಯೇಲಿನ ದೇವರ ಮುಂದೆ ಬರಬೇಕು.
- 24ನಾನು ಜನಾಂಗಗಳನ್ನು ನಿಮ್ಮ ಎದುರಿನಿಂದ ಹೊರ ಡಿಸಿಬಿಟ್ಟು ನಿಮ್ಮ ಮೇರೆಗಳನ್ನು ವಿಸ್ತಾರಮಾಡುವೆನು. ವರುಷಕ್ಕೆ ಮೂರು ಸಾರಿ ನೀವು ನಿಮ್ಮ ದೇವರಾದ ಕರ್ತನ ಸನ್ನಿಧಿಗೆ ಹೋಗುವ ಸಮಯದಲ್ಲಿ ಯಾರೂ ನಿಮ್ಮ ದೇಶವನ್ನು ಆಶಿಸರು.
Cross references
- Exodus 23:16 ವಿಮೋಚನಕಾಂಡ 23:16ನಿನ್ನ ಹೊಲದಲ್ಲಿ ಬಿತ್ತಿದ ಬೆಳೆಯ ಪ್ರಥಮ ಫಲಗಳ ಸುಗ್ಗಿ ಹಬ್ಬವನ್ನೂ ನಿನ್ನ ಬೆಳೆಯನ್ನು ಹೊಲದಿಂದ ಕೂಡಿಸಿದ ಮೇಲೆ ವರುಷದ ಅಂತ್ಯದಲ್ಲಿ ಕೂಡಿಸುವ ಹಬ್ಬವನ್ನೂ ಆಚರಿಸಬೇಕು.
- Deuteronomy 16:10–15 ಧರ್ಮೋಪದೇಶಕಾಂಡ 16:10–15ಆಗ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸಿದ ಪ್ರಕಾರ ನಿನ್ನ ಕೈಕೊಡುವ ಉಚಿತವಾದ ಕಾಣಿಕೆಯ ಮೇರೆಗೆ ನಿನ್ನ ದೇವರಾದ ಕರ್ತನಿಗೆ ವಾರಗಳ ಹಬ್ಬಮಾಡಬೇಕು. ಆಗ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ಬಾಗಲು ಗಳಲ್ಲಿರುವ ಲೇವಿಯನೂ ನಿನ್ನ ಮಧ್ಯದಲ್ಲಿರುವ ಅನ್ಯನೂ ದಿಕ್ಕಿಲ್ಲದವನೂ ವಿಧವೆಯೂ ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನಿನ್ನ ದೇವರಾದ ಕರ್ತನ ಮುಂದೆ ಸಂತೋಷ ಪಡಬೇಕು. ನೀನು ಐಗುಪ್ತದಲ್ಲಿ ದಾಸನಾಗಿದ್ದಿ ಎಂದು ಜ್ಞಾಪಕಮಾಡಿಕೊಂಡು ಈ ನಿಯಮಗಳನ್ನು ಕೈಕೊಂಡು ನಡೆಯಬೇಕು. ನಿನ್ನ ಧಾನ್ಯವನ್ನೂ ನಿನ್ನ ದ್ರಾಕ್ಷೆಯನ್ನೂ ಕೂಡಿಸಿದ ಮೇಲೆ ಏಳು ದಿವಸ ಗುಡಾರಗಳ ಹಬ್ಬಮಾಡಬೇಕು. ಆ ಹಬ್ಬದಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ನಿನ್ನ ಬಾಗಲುಗಳಲ್ಲಿರುವ ಲೇವಿಯನೂ ಅನ್ಯನೂ ದಿಕ್ಕಿಲ್ಲದವನೂ ವಿಧವೆಯೂ ಸಂತೋಷಪಡಬೇಕು. ನಿನ್ನ ದೇವರಾದ ಕರ್ತನಿಗೆ ಏಳು ದಿವಸ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ಹಬ್ಬ ಮಾಡಬೇಕು; ನಿನ್ನ ದೇವರಾದ ಕರ್ತನು ನಿನ್ನನ್ನು ಎಲ್ಲಾ ಆದಾಯದಲ್ಲಿಯೂ ಎಲ್ಲಾ ಕೈಕೆಲಸದಲ್ಲಿಯೂ ಆಶೀರ್ವದಿಸುವದರಿಂದ ನೀನು ನಿಜವಾಗಿಯೂ ಸಂತೋಷದಿಂದ ಇರಬೇಕು.
- John 7:2 ಯೋಹಾನನು 7:2ಆಗ ಯೆಹೂದ್ಯರ ಗುಡಾರಗಳ ಹಬ್ಬವು ಹತ್ತಿರವಾಗಿತ್ತು.
- Numbers 28:16–31 ಅರಣ್ಯಕಾಂಡ 28:16–31ಆದರೆ ಮೊದಲನೇ ತಿಂಗಳಿನ ಹದಿನಾಲ್ಕನೇ ದಿವಸವು ಕರ್ತನ ಪಸ್ಕವಾಗಿರಬೇಕು. ಆ ತಿಂಗಳಿನ ಹದಿನೈದನೇ ದಿವಸವು ಹಬ್ಬವಾಗಿದೆ; ಏಳು ದಿವಸಗಳ ವರೆಗೂ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು. ಮೊದಲನೇ ದಿವಸದಲ್ಲಿ ಪರಿಶುದ್ಧ ಸಭೆಯನ್ನು ಕೂಡಿಸಬೇಕು. ಯಾವ ತರವಾದ ಕಷ್ಟಕರವಾದ ಕೆಲಸ ವನ್ನು ನೀವು ಆ ದಿವಸದಲ್ಲಿ ಮಾಡಬಾರದು. ಆದರೆ ನೀವು ಕರ್ತನಿಗೆ ಬೆಂಕಿಯಿಂದ ಮಾಡಿದ ದಹನ ಬಲಿಯನ್ನು ಅರ್ಪಿಸಬೇಕು. ಯಾವದಂದರೆ--ಎರಡು ಎಳೇ ಹೋರಿಗಳು, ಒಂದು ಟಗರು, ವರುಷದ ಏಳು ಕುರಿಮರಿಗಳು; ನಿಮಗೆ ಇವು ದೋಷವಿಲ್ಲದ ಪೂರ್ಣಾಂಗಗಳಾಗಿರಬೇಕು. ಅವುಗಳ ಆಹಾರದ ಅರ್ಪಣೆಯನ್ನೂ ಎಣ್ಣೇ ಕಲಸಿದ ಹಿಟ್ಟನ್ನೂ ಹೋರಿಗೆ ಮೂರು ದಶಾಂಶಗಳನ್ನೂ ಟಗರಿಗೆ ಎರಡು ದಶಾಂಶ ಗಳನ್ನೂ ಅರ್ಪಿಸಬೇಕು. ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ಒಂದು ದಶಾಂಶವನ್ನು ಅರ್ಪಿಸಬೇಕು. ನಿಮಗೋಸ್ಕರ ಪ್ರಾಯಶ್ಚಿತ್ತಕ್ಕೆ ಪಾಪ ಬಲಿಗಾಗಿ ಒಂದು ಹೋತವನ್ನು ಅರ್ಪಿಸಬೇಕು. ಇವುಗಳನ್ನು ನಿತ್ಯವಾದ ದಹನಬಲಿಯಾಗಿರುವ ಉದಯದ ದಹನಬಲಿಯ ಹೊರತಾಗಿ ನೀವು ಅರ್ಪಿಸಬೇಕು. ಈ ಪ್ರಕಾರ ನೀವು ಏಳು ದಿವಸಗಳ ಮಟ್ಟಿಗೂ ದಿನ ದಿನಕ್ಕೆ ಕರ್ತನಿಗೆ ಸುವಾಸೆನೆಗಾಗಿ ದಹನಬಲಿಯ ಆಹಾರವನ್ನು ಅರ್ಪಿಸಬೇಕು; ಅದನ್ನೂ ಅದಕ್ಕೆ ತಕ್ಕ ಪಾನದ ಅರ್ಪಣೆಯನ್ನೂ ನಿತ್ಯವಾದ ದಹನಬಲಿಯ ಹೊರತಾಗಿ ಅರ್ಪಿಸಬೇಕು. ಏಳನೇ ದಿವಸದಲ್ಲಿ ನಿಮಗೆ ಪರಿಶುದ್ಧವಾದ ಸಭೆಯು ಇರಬೇಕು; ಯಾವ ಕೆಲಸವನ್ನೂ ನೀವು ಮಾಡಬಾರದು. ಪ್ರಥಮ ಫಲಗಳ ದಿವಸದಲ್ಲಿಯೂ ನೀವು ಕರ್ತ ನಿಗೆ ನಿಮ್ಮ ವಾರಗಳಲ್ಲಿ ಹೊಸ ಆಹಾರದ ಅರ್ಪಣೆ ಯನ್ನು ಅರ್ಪಿಸುವಾಗ ನಿಮಗೆ ಪರಿಶುದ್ಧವಾದ ಸಭೆ ಇರಬೇಕು; ಯಾವ ಕೆಲಸವನ್ನಾದರೂ ಮಾಡಬಾರದು. ನೀವು ಕರ್ತನಿಗೆ ಸುವಾಸನೆಯುಳ್ಳ ದಹನಬಲಿಗಾಗಿ ಎರಡು ಎಳೇ ಹೋರಿಗಳನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿಗಳನ್ನೂ ಅವುಗಳ ಆಹಾರದ ಅರ್ಪಣೆಗಾಗಿ ಎಣ್ಣೇ ಕಲಸಿದ ಹಿಟ್ಟನ್ನೂ ಹೋರಿಗೆ ಮೂರು ದಶಾಂಶಗಳನ್ನೂ ಟಗರಿಗೆ ಎರಡು ದಶಾಂಶಗಳನ್ನೂ ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ದಶಾಂಶವನ್ನೂ ನಿಮಗೋಸ್ಕರ ಪ್ರಾಯಶ್ಚಿತ್ತಕ್ಕೆ ಮೇಕೆಮರಿಯನ್ನೂ ಅರ್ಪಿಸಬೇಕು.ನಿತ್ಯವಾದ ದಹನಬಲಿಯನ್ನೂ ಅದರ ಆಹಾರದ ಅರ್ಪಣೆಯನ್ನೂ ಹೊರತಾಗಿ ನೀವು ದೋಷವಿಲ್ಲದ ಇವುಗಳನ್ನೂ ಅವುಗಳಿಗೆ ತಕ್ಕ ಪಾನದ ಅರ್ಪಣೆ ಗಳನ್ನೂ ಅರ್ಪಿಸಬೇಕು. ನಿತ್ಯವಾದ ದಹನಬಲಿಯನ್ನೂ ಅದರ ಆಹಾರದ ಅರ್ಪಣೆಯನ್ನೂ ಹೊರತಾಗಿ ನೀವು ದೋಷವಿಲ್ಲದ ಇವುಗಳನ್ನೂ ಅವುಗಳಿಗೆ ತಕ್ಕ ಪಾನದ ಅರ್ಪಣೆ ಗಳನ್ನೂ ಅರ್ಪಿಸಬೇಕು.
- Acts 2:1 ಅಪೊಸ್ತಲರ ಕೃತ್ಯಗಳು 2:1ಪಂಚಾಶತ್ತಮ ದಿನವು ಪೂರ್ಣವಾಗಿ ಬಂದಾಗ ಅವರೆಲ್ಲರೂ ಒಂದೇ ಮನಸ್ಸಿ ನಿಂದ ಒಂದೇ ಸ್ಥಳದಲ್ಲಿ ಇದ್ದರು.
- Numbers 29:12–39 ಅರಣ್ಯಕಾಂಡ 29:12–39ಏಳನೇ ತಿಂಗಳಿನ ಹದಿನೈದನೇ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿ ಕೂಡಬೇಕು; ಕಷ್ಟಕರವಾದ ಕೆಲಸವನ್ನು ಮಾಡಬಾರದು. ಕರ್ತನಿಗೆ ಏಳು ದಿವಸ ಹಬ್ಬವನ್ನು ಮಾಡಬೇಕು. ಕರ್ತನಿಗೆ ಸುವಾಸನೆಯ ಬೆಂಕಿಯಿಂದ ಮಾಡಿದ ದಹನಬಲಿಗಾಗಿ ಬಲಿಯನ್ನು ಅರ್ಪಿಸಬೇಕು; ಏನಂದರೆ, ಹದಿಮೂರು ಎಳೇ ಹೋರಿ ಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ; ಅವು ದೋಷವಿಲ್ಲದ್ದಾಗಿರಬೇಕು; ಅವುಗಳ ಆಹಾರ ಸಮರ್ಪಣೆಯು ಎಣ್ಣೇ ಕಲಸಿದ ಹಿಟ್ಟು; ಹದಿಮೂರು ಹೋರಿಗಳಲ್ಲಿ ಒಂದೊಂದಕ್ಕೆ ಮೂರು ದಶಾಂಶಗಳು; ಎರಡು ಟಗರುಗಳಲ್ಲಿ ಒಂದೊಂದಕ್ಕೆ ಎರಡು ದಶಾಂಶಗಳು; ಹದಿನಾಲ್ಕು ಕುರಿಮರಿಗಳಲ್ಲಿ ಒಂದೊಂದಕ್ಕೆ ಒಂದು ದಶಾಂಶ; ಪಾಪಬಲಿಗೆ ಒಂದು ಮೇಕೆಮರಿ; ಇದಲ್ಲದೆ ನಿತ್ಯ ದಹನ ಬಲಿಯನ್ನೂ ಅದರ ಆಹಾರ ಸಮರ್ಪಣೆ ಯನ್ನೂ ಪಾನದ ಅರ್ಪಣೆಯನ್ನೂ ಅರ್ಪಿಸಬೇಕು. ಎರಡನೇ ದಿವಸದಲ್ಲಿ ಮಚ್ಚೆಯಿಲ್ಲದ ಹನ್ನೆರಡು ಎಳೇ ಹೋರಿಗಳನ್ನೂ ಎರಡು ಟಗರುಗಳನ್ನೂ ವರು ಷದ ಹದಿನಾಲ್ಕು ಕುರಿಮರಿಗಳನ್ನೂ ಹೋರಿಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನದ ಅರ್ಪಣೆಗಳನ್ನೂ ಪಾಪಬಲಿಯಾಗಿ ಒಂದು ಮೇಕೆ ಮರಿಯನ್ನಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು. ಮೂರನೇ ದಿವಸದಲ್ಲಿ ದೋಷವಿಲ್ಲದ ಹನ್ನೊಂದು ಹೋರಿಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ ಹೋರಿ ಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನಗಳ ಅರ್ಪಣೆಗಳನ್ನೂ ಪಾಪಬಲಿಯಾಗಿ ಒಂದು ಮೇಕೆ ಮರಿಯನ್ನಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು. ನಾಲ್ಕನೇ ದಿವಸದಲ್ಲಿ ದೋಷವಿಲ್ಲದ ಹತ್ತು ಹೋರಿಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ ಹೋರಿಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನಗಳ ಅರ್ಪಣೆಗಳನ್ನೂ ಪಾಪಬಲಿಯಾಗಿ ಒಂದು ಮೇಕೆ ಮರಿಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು. ಐದನೇ ದಿವಸದಲ್ಲಿ ಮಚ್ಚೆಯಿಲ್ಲದ ಒಂಭತ್ತು ಹೋರಿಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ ಹೋರಿಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರಪಾನ ಬಲಿ ಗಳನ್ನೂ ಪಾಪಬಲಿಯಾಗಿ ಒಂದು ಮೇಕೆ ಮರಿ ಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು. ಆರನೇ ದಿವಸದಲ್ಲಿ ದೋಷವಿಲ್ಲದ ಎಂಟು ಹೋರಿಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ ಹೋರಿಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನದ ಅರ್ಪಣೆಗಳನ್ನೂ ಪಾಪಬಲಿಯಾಗಿ ಒಂದು ಮೇಕೆ ಮರಿಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು. ಏಳನೇ ದಿವಸದಲ್ಲಿ ದೋಷವಿಲ್ಲದ ಏಳು ಹೋರಿ ಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ ಹೋರಿಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನದ ಅರ್ಪಣೆಗಳನ್ನೂ ಪಾಪ ಬಲಿಯಾಗಿ ಒಂದು ಮೇಕೆಮರಿಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು. ಎಂಟನೇ ದಿವಸದಲ್ಲಿ ನಿಮಗೆ ಹಬ್ಬದ ಸಭೆಯಾಗ ಬೇಕು. ಕಷ್ಟಕರವಾದ ಕೆಲಸವನ್ನು ನೀವು ಮಾಡ ಬಾರದು. ಕರ್ತನಿಗೆ ಬೆಂಕಿಯಿಂದ ಮಾಡಿದ ಸುವಾ ಸನೆಯ ದಹನಬಲಿಗಾಗಿ ದೋಷವಿಲ್ಲದ ಒಂದು ಹೋರಿಯನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿಗಳನ್ನೂ ಹೋರಿಗೆ ಟಗರಿಗೆ ಮತ್ತು ಕುರಿ ಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನದ ಅರ್ಪಣೆಗಳನ್ನೂ ಪಾಪ ಬಲಿಯಾಗಿ ಒಂದು ಮೇಕೆಮರಿಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು. ಇದಲ್ಲದೆ ನಿಮ್ಮ ಪ್ರಮಾಣಗಳನ್ನೂ ಉಚಿತವಾದ ಬಲಿಗಳನ್ನೂ ದಹನಬಲಿಗಳನ್ನೂ ಆಹಾರ ಪಾನದ ಅರ್ಪಣೆಗಳನ್ನೂ ಸಮಾಧಾನ ಬಲಿಗಳನ್ನೂ ನೀವು ನಿಮ್ಮ ಹಬ್ಬಗಳಲ್ಲಿ ಕರ್ತನಿಗೆ ಮಾಡತಕ್ಕ ಅರ್ಪಣೆಗಳು ಇವೇ ಎಂದುಕರ್ತನು ತನಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಹೇಳಿದನು.