Exodus · chapter 35 · verse 1
Exodus 35:1 in Kannada
ಮೋಶೆಯು ಇಸ್ರಾಯೇಲ್ ಮಕ್ಕಳ ಸಭೆಯನ್ನು ಒಟ್ಟುಗೂಡಿಸಿ ಅವರಿಗೆ--ನೀವು ಮಾಡುವದಕ್ಕೆ ಕರ್ತನು ಆಜ್ಞಾಪಿಸಿದ ವಾಕ್ಯಗಳು ಇವೇ.
Mosheyu israayel makkala sabheyannu ottugoodisi avarige--neevu maaduvadakke kartanu aajnyaapisida vaakyagalu ive.
Exodus 35:1 in English
- King James Version (KJV)
- And Moses gathered all the congregation of the children of Israel together, and said unto them, These [are] the words which the LORD hath commanded, that [ye] should do them.
- World English Bible (WEB)
- Moses assembled all the congregation of the children of Israel, and said to them, “These are the words which the LORD has commanded, that you should do them.
- American Standard Version (ASV)
- And Moses assembled all the congregation of the children of Israel, and said unto them, These are the words which Jehovah hath commanded, that ye should do them.
- Bible in Basic English (BBE)
- And Moses sent for all the children of Israel to come together, and said to them, This is what the Lord has said and these are his orders.
- Darby Translation (DBY)
- And Moses collected all the assembly of the children of Israel, and said to them, These are the things which Jehovah has commanded, to do them.
- Webster's Bible (WBS)
- And Moses assembled all the congregation of the children of Israel, and said to them, These [are] the words which the LORD hath commanded, that [ye] should do them.
- Young's Literal Translation (YLT)
- And Moses assembleth all the company of the sons of Israel, and saith unto them, 'These [are] the things which Jehovah hath commanded — to do them:
Read in context
- 1ಮೋಶೆಯು ಇಸ್ರಾಯೇಲ್ ಮಕ್ಕಳ ಸಭೆಯನ್ನು ಒಟ್ಟುಗೂಡಿಸಿ ಅವರಿಗೆ--ನೀವು ಮಾಡುವದಕ್ಕೆ ಕರ್ತನು ಆಜ್ಞಾಪಿಸಿದ ವಾಕ್ಯಗಳು ಇವೇ.
- 2ಆರು ದಿನಗಳು ಕೆಲಸ ಮಾಡಬೇಕು. ಆದರೆ ಏಳನೆಯ ದಿನವು ನಿಮಗೆ ಪರಿಶುದ್ಧದಿನವಾಗಿಯೂ ಕರ್ತನಿಗೆ ವಿಶ್ರಾಂತಿಯ ಸಬ್ಬತ್ತಾಗಿಯೂ ಇರಬೇಕು. ಆ ದಿನದಲ್ಲಿ ಕೆಲಸ ಮಾಡುವವನು ಕೊಲ್ಲಲ್ಪಡಬೇಕು.
- 3ನೀವು ವಾಸಿಸುವ ಯಾವ ಸ್ಥಳದಲ್ಲಿಯಾದರೂ ಸಬ್ಬತ್ ದಿನದಲ್ಲಿ ಬೆಂಕಿಯನ್ನೂ ಹೊತ್ತಿಸಬಾರದು ಎಂದು ಹೇಳಿದನು.
Cross references
- Exodus 34:32 ವಿಮೋಚನಕಾಂಡ 34:32ತರುವಾಯ ಇಸ್ರಾ ಯೇಲ್ ಮಕ್ಕಳೆಲ್ಲರೂ ಹತ್ತಿರ ಬಂದರು. ಅವನು ತನಗೆ ಕರ್ತನು ಸೀನಾಯಿ ಬೆಟ್ಟದಲ್ಲಿ ಹೇಳಿದವುಗಳ ನ್ನೆಲ್ಲಾ ಅವರಿಗೆ ಆಜ್ಞಾಪಿಸಿ ಹೇಳಿದನು.
- Romans 2:13 ರೋಮಾಪುರದವರಿಗೆ 2:13(ನ್ಯಾಯ ಪ್ರಮಾಣವನ್ನು ಕೇಳುವವರು ದೇವರ ಸನ್ನಿಧಿಯಲಿ ನೀತಿವಂತರಾಗುವದಿಲ್ಲ; ನ್ಯಾಯಪ್ರಮಾಣವನ್ನು ಕೈ ಕೊಂಡು ನಡೆಯುವವರೇ ನೀತಿವಂತರೆಂದು ಎಣಿಸ ಲ್ಪಡುವರು.
- Matthew 7:21–27 ಮತ್ತಾಯನು 7:21–27ಕರ್ತನೇ, ಕರ್ತನೇ ಎಂದು ನನಗೆ ಹೇಳುವ ಪ್ರತಿಯೊಬ್ಬನು ಪರಲೋಕರಾಜ್ಯದಲ್ಲಿ ಪ್ರವೇಶಿಸು ವದಿಲ್ಲ; ಆದರೆ ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ಅದರಲ್ಲಿ ಪ್ರವೇಶಿ ಸುವನು. ಆ ದಿನದಲ್ಲಿ--ಕರ್ತನೇ, ಕರ್ತನೇ ನಿನ್ನ ಹೆಸರಿನಲ್ಲಿ ನಾವು ಪ್ರವಾದಿಸಲಿಲ್ಲವೇ? ಮತ್ತು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ಇದಲ್ಲದೆ ನಿನ್ನ ಹೆಸರಿನಲ್ಲಿ ಬಹಳ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ಬಹಳ ಜನರು ನನಗೆ ಹೇಳುವರು. ಆಗ ನಾನು ಅವರಿಗೆ--ನಾನು ನಿಮ್ಮನ್ನು ಎಂದಿಗೂ ಅರಿಯೆನು; ದುಷ್ಟತನ ಮಾಡುವ ನೀವು ನನ್ನಿಂದ ತೊಲಗಿ ಹೋಗಿರಿ ಎಂದು ಹೇಳಿಬಿಡುವೆನು. ಆದದರಿಂದ ಯಾವನಾದರೂ ನಾನು ಹೇಳುವ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವವನನ್ನು ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಹೋಲಿಸುವೆನು. ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆದರೂ ಅದು ಬೀಳಲಿಲ್ಲ; ಯಾಕಂದರೆ ಅದರ ಅಸ್ತಿವಾರವು ಬಂಡೆಯ ಮೇಲೆ ಹಾಕಲ್ಪಟ್ಟಿತು. ಈ ನನ್ನ ಮಾತುಗಳನ್ನು ಕೇಳುವ ಪ್ರತಿಯೊಬ್ಬನು ಅವುಗಳಂತೆ ನಡೆಯದೆ ಹೋದರೆ ಅವನು ಮರಳಿನ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿಹೀನನಿಗೆ ಹೋಲಿಕೆಯಾಗಿರುವನು. ಹೇಗಂದರೆ ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆಗ ಅದು ಬಿತ್ತು; ಮತ್ತು ಅದರ ಬೀಳುವಿಕೆಯು ದೊಡ್ಡದಾಗಿತ್ತು.
- Exodus 31:1–11 ವಿಮೋಚನಕಾಂಡ 31:1–11ಕರ್ತನು ಮೋಶೆಯ ಸಂಗಡ ಮಾತನಾಡಿಅವನಿಗೆ-- ನೋಡು, ನಾನು ಯೆಹೂದ ಕುಲದವನಾದ ಹೂರನ ಮೊಮ್ಮಗನೂ ಊರಿಯನ ಮಗನೂ ಆಗಿರುವ ಬೆಚಲೇಲನನ್ನು ಹೆಸರು ಹೇಳಿ ಕರೆದಿದ್ದೇನೆ. ನಾನು ಅವನನ್ನು ದೇವರ ಆತ್ಮನಿಂದಲೂ ಜ್ಞಾನದಿಂದಲೂ ತಿಳುವಳಿಕೆಯಿಂದಲೂ ವಿವೇಕ ದಿಂದಲೂ ಎಲ್ಲಾ ತರವಾದ ಕೆಲಸದ ಕಲೆಯಿಂದಲೂ ತುಂಬಿಸಿದ್ದೇನೆ. ಅವನು ಚಿನ್ನ ಬೆಳ್ಳಿ ಹಿತ್ತಾಳೆಯ ಕೌಶಲ್ಯದ ಕೆಲಸವನ್ನು ಕಲ್ಪಿಸುವದಕ್ಕೂ ಶಿಲ್ಪಿಯ ಕೆಲಸವನ್ನೂ ಮರ ಕೆತ್ತನೆಯನ್ನೂ ಸಕಲ ವಿಧವಾದ ಕೆಲಸಗಳನ್ನೂ ಬಲ್ಲವನಾಗಿರುವನು. ನಾನು ಇಗೋ, ನಾನೇ ಅವನೊಂದಿಗೆ ದಾನ್ ಕುಲದವನೂ ಅಹೀಸಾ ಮಾಕನ ಮಗನೂ ಆದ ಒಹೊಲೀಯಾಬನನ್ನು ಕೊಟ್ಟಿ ದ್ದೇನೆ. ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡುವ ದಕ್ಕೆ ಜಾಣನಾದವರೆಲ್ಲರ ಹೃದಯಗಳಲ್ಲಿ ಜ್ಞಾನವನ್ನು ಇಟ್ಟಿದ್ದೇನೆ. ಸಭೆಯ ಗುಡಾರವನ್ನೂ ಸಾಕ್ಷಿಯ ಹಲಗೆ ಗಳ ಮಂಜೂಷವನ್ನೂ ಅದರ ಮೇಲಿರುವ ಕರುಣಾಸ ನವನ್ನೂ ಗುಡಾರದ ಎಲ್ಲಾ ಉಪಕರಣಗಳನ್ನೂ ಮೇಜನ್ನೂ ಅದರ ಉಪಕರಣಗಳನ್ನೂ ಶುದ್ಧವಾದ ದೀಪಸ್ತಂಭವನ್ನೂ ಅದರ ಎಲ್ಲಾ ಉಪಕರಣಗಳನ್ನೂ ಧೂಪವೇದಿಯನ್ನೂ ದಹನಬಲಿಯ ವೇದಿಯನ್ನೂ ಅದರ ಎಲ್ಲಾ ಉಪಕರಣಗಳನ್ನೂ ಗಂಗಾಳವನ್ನೂ ಅದರ ಪೀಠವನ್ನೂ ಯಾಜಕನಾದ ಆರೋನನ ಸೇವಾ ವಸ್ತ್ರಗಳನ್ನೂ ಪರಿಶುದ್ಧ ವಸ್ತ್ರ ಗಳನ್ನೂ ಯಾಜಕನ ಕೆಲಸಮಾಡುವದಕ್ಕೆ ಅವನ ಮಕ್ಕಳ ವಸ್ತ್ರಗಳನ್ನೂ ಅಭಿಷೇಕಿಸುವ ತೈಲವನ್ನೂ ಪರಿಶುದ್ಧ ಸ್ಥಳಕ್ಕೋಸ್ಕರ ವಿರುವ ಪರಿಮಳ ಧೂಪವನ್ನೂ ನಾನು ನಿನಗೆ ಆಜ್ಞಾಪಿಸಿ ದವುಗಳೆಲ್ಲವನ್ನೂ ಅವರು ಮಾಡುವರು ಅಂದನು.
- Exodus 25:1–40 ವಿಮೋಚನಕಾಂಡ 25:1–40ಆಗ ಕರ್ತನು ಮಾತನಾಡಿ ಮೋಶೆಗೆ-- ನನಗೆ ಕಾಣಿಕೆಗಳನ್ನು ತಕ್ಕೊಂಡು ಬರು ವಂತೆ ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡು; ಮನಃಪೂರ್ವಕವಾಗಿಯೂ ಹೃದಯಪೂರ್ವಕವಾ ಗಿಯೂ ಕೊಡುವ ನನ್ನ ಕಾಣಿಕೆಯನ್ನು ನೀವು ತೆಗೆದು ಕೊಳ್ಳಬೇಕು. ನೀವು ಅವರಿಂದ ತೆಗೆದುಕೊಳ್ಳಬೇಕಾದ ಕಾಣಿಕೆಗಳು: ಚಿನ್ನ ಬೆಳ್ಳಿ ತಾಮ್ರ ನೀಲಿ ರಕ್ತವರ್ಣ ಲಾಕಿಬಣ್ಣ ನಾರು ಮೇಕೆಯ ಕೂದಲು ಕೆಂಪು ಬಣ್ಣದಲ್ಲಿ ಅದ್ದಿದ ಟಗರುಗಳ ಚರ್ಮಗಳು ಕಡಲು ಹಂದಿಯ ಚರ್ಮಗಳು ಜಾಲಿ ಮರಗಳು. ದೀಪಕ್ಕಾಗಿ ಎಣ್ಣೆ ಮತ್ತು ಅಭಿಷೇಕಿಸುವ ಎಣ್ಣೆಗೋಸ್ಕರವೂ ಪರಿಮಳ ಧೂಪಕ್ಕೋಸ್ಕರ ಸುಗಂಧ ದ್ರವ್ಯಗಳೂ ಎಫೋದಿ ಗಾಗಿ ಮತ್ತು ಪದಕಕ್ಕಾಗಿ ಗೋಮೇಧಿಕಗಳೂ ಕೆತ್ತಿದ ರತ್ನಗಳೂ ಇವೇ. ನಾನು ಅವರ ಮಧ್ಯದಲ್ಲಿ ವಾಸಿಸುವ ಹಾಗೆ ಅವರು ನನಗೆ ಒಂದು ಪರಿಶುದ್ಧ ಆಲಯವನ್ನು ಕಟ್ಟಬೇಕು. ಗುಡಾರದ ಮಾದರಿಯನ್ನೂ ಅದರ ಎಲ್ಲಾ ಸಾಮಾನುಗಳ ಮಾದರಿಯನ್ನೂ ನಾನು ನಿನಗೆ ತೋರಿಸುವಂತೆಯೇ ನೀನು ಮಾಡಬೇಕು. ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಇರುವ ಮಂಜೂಷವನ್ನು ಜಾಲೀ ಮರದಿಂದ ಮಾಡಬೇಕು. ಅದನ್ನು ಶುದ್ಧ ಬಂಗಾರದಿಂದ ಹೊರಗೂ ಒಳಗೂ ಹೊದಿಸಬೇಕು. ಅದರ ಸುತ್ತಲೂ ಬಂಗಾರದ ಗೋಟು ಮಾಡಬೇಕು. ಅದಕ್ಕೆ ಬಂಗಾರದ ನಾಲ್ಕು ಬಳೆಗಳನ್ನು ಎರಕಹೊಯ್ದು ಅದರ ನಾಲ್ಕು ಮೂಲೆಗಳಲ್ಲಿ ಅಂದರೆ ಒಂದು ಕಡೆಯಲ್ಲಿ ಎರಡು ಬಳೆಗಳನ್ನು ಮತ್ತೊಂದು ಕಡೆಯಲ್ಲಿ ಎರಡು ಬಳೆಗಳನ್ನು ಇಡಬೇಕು. ಜಾಲೀ ಮರದ ಕೋಲುಗಳನ್ನು ಬಂಗಾರದಿಂದ ಹೊದಿಸ ಬೇಕು, ಮಂಜೂಷವನ್ನು ಹೊತ್ತುಕೊಂಡು ಹೋಗು ವದಕ್ಕಾಗಿ ಕೋಲುಗಳನ್ನು ಮಂಜೂಷದ ಉಭಯ ಪಾರ್ಶ್ವಗಳಲ್ಲಿರುವ ಬಳೆಗಳಲ್ಲಿ ಸೇರಿಸಬೇಕು. ಮಂಜೂಷದ ಬಳೆಗಳಲ್ಲಿಯೇ ಕೋಲುಗಳನ್ನು ಇಡ ಬೇಕು. ಅವುಗಳೊಳಗಿಂದ ಕೋಲುಗಳನ್ನು ತೆಗೆಯ ಬಾರದು. ನಾನು ನಿನಗೆ ಕೊಡುವ ಸಾಕ್ಷಿಯ ಹಲಗೆ ಗಳನ್ನು ಮಂಜೂಷದಲ್ಲಿ ಇಡಬೇಕು. ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಆಗಿರುವ ಕರುಣಾಸನವನ್ನು ಶುದ್ಧ ಬಂಗಾರದಿಂದ ಮಾಡಬೇಕು. ಬಂಗಾರದಿಂದ ಎರಡು ಕೆರೂಬಿಗಳನ್ನು ನಕ್ಷೆಯ ಕೆಲಸದಿಂದ ಕರುಣಾ ಸನದ ಎರಡು ಬದಿಗಳಲ್ಲಿ ಮಾಡಿಸಬೇಕು. ಈ ಬದಿಯಲ್ಲಿ ಒಂದು ಕೆರೂಬಿಯನ್ನೂ ಆ ಬದಿಯಲ್ಲಿ ಮತ್ತೊಂದು ಕೆರೂಬಿಯನ್ನೂ ಹೀಗೆ ಕರುಣಾಸನದ ಮೇಲೆಯೇ ಎರಡೂ ಬದಿಗಳಲ್ಲಿ ಮಾಡಬೇಕು. ಆ ಕೆರೂಬಿಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಚಾಚಿದವುಗ ಳಾಗಿಯೂ ರೆಕ್ಕೆಗಳಿಂದ ಕರುಣಾಸನವನ್ನು ಮುಚ್ಚುವವು ಗಳಾಗಿಯೂ ಒಂದರ ಮುಖವನ್ನು ಒಂದು ನೋಡು ವವುಗಳಾಗಿಯೂ ಇರಬೇಕು. ಕೆರೂಬಿಗಳ ಮುಖಗಳು ಕರುಣಾಸನದ ಕಡೆಗೆ ತಿರುಗಿರಬೇಕು. ಕರುಣಾಸನ ವನ್ನು ಮಂಜೂಷದ ಮೇಲೆ ಇಡಬೇಕು ಮತ್ತು ನೀನು ಮಂಜೂಷದಲ್ಲಿ ನಾನು ನಿನಗೆ ಕೊಡುವ ಸಾಕ್ಷಿ ಹಲಗೆಗಳನ್ನು ಇಡಬೇಕು. ನಾನು ಅಲ್ಲಿ ನಿನ್ನನ್ನು ಸಂಧಿಸಿ ಕರುಣಾಸನದ ಮೇಲಿನಿಂದ ಮಂಜೂಷದ ಮೇಲಿರುವ ಎರಡು ಕೆರೂಬಿಗಳ ಮಧ್ಯದಿಂದ ಇಸ್ರಾಯೇಲ್ ಮಕ್ಕಳ ವಿಷಯದಲ್ಲಿ ಆಜ್ಞಾಪಿಸುವವು ಗಳನ್ನೆಲ್ಲಾ ನಿನಗೆ ತಿಳಿಸುವೆನು. ಇದಲ್ಲದೆ ಎರಡು ಮೊಳ ಉದ್ದವೂ ಒಂದು ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಇರುವ ಮೇಜನ್ನು ಜಾಲೀ ಮರದಿಂದ ಮಾಡಬೇಕು. ಶುದ್ಧ ಬಂಗಾರದಿಂದ ಅದನ್ನು ಹೊದಿಸಿ ಅದರ ಸುತ್ತಲೂ ಬಂಗಾರದ ಗೋಟನ್ನು ಮಾಡಬೇಕು. ಅದರ ಸುತ್ತಲೂ ಗೇಣುದ್ದ ಅಂಚನ್ನು ಮಾಡಿ ಅಂಚಿನ ಸುತ್ತಲೂ ಬಂಗಾರದ ಗೋಟನ್ನು ಮಾಡ ಬೇಕು. ಇದಲ್ಲದೆ ಅದಕ್ಕೆ ಬಂಗಾರದ ನಾಲ್ಕು ಬಳೆಗಳನ್ನು ಮಾಡಿ, ಬಳೆಗಳನ್ನು ಅದರ ನಾಲ್ಕು ಕಾಲು ಗಳಲ್ಲಿರುವ ನಾಲ್ಕು ಮೂಲೆಗಳಲ್ಲಿಡಬೇಕು. ಅಂಚಿಗೆ ಸವಿಾಪವಾಗಿ ಮೇಜನ್ನು ಹೊರುವದಕ್ಕೋಸ್ಕರ ಇರುವ ಕೋಲುಗಳಿಗೆ ಬಳೆಗಳು ಇರಬೇಕು. ಮೇಜನ್ನು ಹೊರುವದಕ್ಕಾಗಿ ಕೋಲುಗಳನ್ನು ಜಾಲೀ ಮರದಿಂದ ಮಾಡಿ ಬಂಗಾರದಿಂದ ಹೊದಿಸಬೇಕು. ಇದಲ್ಲದೆ ನೀನು ಪಾತ್ರೆಗಳನ್ನೂ ಸೌಟುಗಳನ್ನೂ ಮುಚ್ಚಳಗಳನ್ನೂ ಬಟ್ಟಲುಗಳನ್ನೂ ಒಯ್ಯುವದಕ್ಕೋಸ್ಕರ ಶುದ್ಧ ಬಂಗಾರ ದಿಂದ ಮಾಡಬೇಕು. ಮೇಜಿನ ಮೇಲೆ ಸಮ್ಮುಖದ ರೊಟ್ಟಿಯನ್ನು ಯಾವಾಗಲೂ ನನ್ನ ಮುಂದೆ ಇಡಬೇಕು. ಇದಲ್ಲದೆ ಶುದ್ಧ ಬಂಗಾರದಿಂದ ದೀಪಸ್ತಂಭವನ್ನು ಮಾಡಬೇಕು. ಆ ದೀಪಸ್ತಂಭವನ್ನು ನಕ್ಷೆಯ ಕೆಲಸದಿಂದ ಮಾಡಬೇಕು. ಅದರ ಕಂಬವೂ ಕೊಂಬೆಗಳೂ ಹಣತೆ ಗಳೂ ಗುಂಡುಗಳೂ ಪುಷ್ಪಗಳೂ ಅದರಂತೆಯೇ ಇರ ಬೇಕು. ದೀಪಸ್ತಂಭದ ಉಭಯ ಪಾರ್ಶ್ವಗಳಿಂದ ಆರು ಕೊಂಬೆಗಳು, ಒಂದು ಭಾಗದಿಂದ ಮೂರು ಕೊಂಬೆಗಳೂ ಮತ್ತೊಂದು ಭಾಗದಿಂದ ಮೂರು ಕೊಂಬೆಗಳೂ ಹೊರಗೆ ಬರಬೇಕು. ಒಂದು ಕೊಂಬೆ ಯಲ್ಲಿ ಬಾದಾಮಿಯ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಮತ್ತೊಂದು ಕೊಂಬೆಯಲ್ಲಿ ಬಾದಾಮಿ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಬಾದಾಮಿ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಈ ಪ್ರಕಾರ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳಲ್ಲಿ ಇರಬೇಕು. ದೀಪಸ್ತಂಭದಲ್ಲಿಯೇ ಗುಂಡುಗಳೂ ಪುಷ್ಪಗಳೂ ಸೇರಿದಂತೆ ಬಾದಾಮಿ ಪುಷ್ಪವಿರುವ ನಾಲ್ಕು ಹಣತೆಗಳು ಇರಬೇಕು. ಇದಲ್ಲದೆ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳ ಪ್ರಕಾರ ಅದರಿಂದ ಬರುವ ಎರಡೆರಡು ಕೊಂಬೆಗಳ ಕೆಳಗೆ ಒಂದೊಂದು ಗುಂಡು ಇರಬೇಕು. ಅದರ ಗುಂಡುಗಳೂ ಕೊಂಬೆಗಳೂ ಅದರಿಂದಲೇ ಬಂದಿರಬೇಕು. ಅದೆಲ್ಲಾ ಶುದ್ಧ ಬಂಗಾ ರದ ಒಂದೇ ನಕ್ಷೆಯ ಕೆಲಸವಾಗಿರಬೇಕು. ಅದರ ಏಳು ದೀಪಗಳನ್ನು ಮಾಡಿ ಅವು ಮುಂದುಗಡೆಯಲ್ಲಿ ಪ್ರಕಾಶ ಕೊಡುವಂತೆ ಅವುಗಳನ್ನು ಹೊತ್ತಿಸಬೇಕು. ಇದಲ್ಲದೆ ಅದರ ಚಿಮಟಿಗೆಗಳನ್ನೂ ಬೂದಿಯ ಪಾತ್ರೆಗಳನ್ನೂ ಶುದ್ಧ ಬಂಗಾರದಿಂದಲೇ ಮಾಡಬೇಕು. ಒಂದು ತಲಾಂತು ಶುದ್ಧ ಬಂಗಾರದಿಂದ ದೀಪ ಸ್ತಂಭವನ್ನೂ ಅದರ ಎಲ್ಲಾ ಸಾಮಾನುಗಳನ್ನೂ ಮಾಡ ಬೇಕು.ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಅವುಗಳನ್ನು ಮಾಡುವಂತೆ ನೋಡಿಕೋ. ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಅವುಗಳನ್ನು ಮಾಡುವಂತೆ ನೋಡಿಕೋ.
- James 1:22 ಯಾಕೋಬನು 1:22ನೀವು ವಾಕ್ಯದ ಪ್ರಕಾರ ನಡೆಯುವವರಾಗಿರ್ರಿ; ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸ ಬೇಡಿರಿ.