Exodus · chapter 35 · verse 12
Exodus 35:12 in Kannada
ಮಂಜೂಷವನ್ನೂ ಅದರ ಕೋಲುಗಳನ್ನೂ ಅವುಗಳೊಂದಿಗೆ ಕರುಣಾಸನ ವನ್ನೂ ಮರೆಮಾಡುವ ತೆರೆಯನ್ನೂ
Manjooshavannoo adara kolugalannoo avugalondige karunaasana vannoo maremaaduva tereyannoo
Exodus 35:12 in English
- King James Version (KJV)
- The ark, and the staves thereof, [with] the mercy seat, and the vail of the covering,
- World English Bible (WEB)
- the ark, and its poles, the mercy seat, the veil of the screen;
- American Standard Version (ASV)
- the ark, and the staves thereof, the mercy-seat, and the veil of the screen;
- Bible in Basic English (BBE)
- The ark with its cover and its rods and the veil hanging before it;
- Darby Translation (DBY)
- the ark, and its staves; the mercy-seat, and the veil of separation;
- Webster's Bible (WBS)
- The ark, and its staffs, [with] the mercy-seat, and the vail of the covering,
- Young's Literal Translation (YLT)
- 'The ark and its staves, the mercy-seat, and the vail of the covering,
Read in context
- 10ನಿಮ್ಮಲ್ಲಿ ಜ್ಞಾನದ ಹೃದಯವುಳ್ಳವರೆಲ್ಲರೂ ಬಂದು ಕರ್ತನು ಆಜ್ಞಾಪಿಸಿದವುಗಳನ್ನೆಲ್ಲಾ ಮಾಡಲಿ.
- 11ಅವು ಯಾವವಂದರೆ: ಗುಡಾರವನ್ನೂ ಅದರ ಡೇರೆಯನ್ನೂ ಅದರ ಹೊದಿಕೆಯನ್ನೂ ಅದರ ಕೊಂಡಿಗಳನ್ನೂ ಅದರ ಹಲಗೆಗಳನ್ನೂ ಅದರ ಅಗುಳಿಗಳನ್ನೂ ಅದರ ಸ್ತಂಭ ಗಳನ್ನೂ ಅದರ ಕುಳಿಗಳನ್ನೂ
- 12ಮಂಜೂಷವನ್ನೂ ಅದರ ಕೋಲುಗಳನ್ನೂ ಅವುಗಳೊಂದಿಗೆ ಕರುಣಾಸನ ವನ್ನೂ ಮರೆಮಾಡುವ ತೆರೆಯನ್ನೂ
- 13ಮೇಜನ್ನೂ ಅದರ ಕೋಲುಗಳನ್ನೂ ಅದರ ಎಲ್ಲಾ ಉಪಕರಣ ಗಳನ್ನೂ ಸಮ್ಮುಖದ ರೊಟ್ಟಿಯನ್ನೂ
- 14ಬೆಳಕಿಗಾಗಿ ದೀಪಸ್ತಂಭವನ್ನೂ ಅದರ ಉಪಕರಣಗಳನ್ನೂ ಅದರ ದೀಪಗಳನ್ನೂ ಬೆಳಕಿಗಾಗಿ ಎಣ್ಣೆಯನ್ನೂ
Cross references
- Exodus 25:10–22 ವಿಮೋಚನಕಾಂಡ 25:10–22ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಇರುವ ಮಂಜೂಷವನ್ನು ಜಾಲೀ ಮರದಿಂದ ಮಾಡಬೇಕು. ಅದನ್ನು ಶುದ್ಧ ಬಂಗಾರದಿಂದ ಹೊರಗೂ ಒಳಗೂ ಹೊದಿಸಬೇಕು. ಅದರ ಸುತ್ತಲೂ ಬಂಗಾರದ ಗೋಟು ಮಾಡಬೇಕು. ಅದಕ್ಕೆ ಬಂಗಾರದ ನಾಲ್ಕು ಬಳೆಗಳನ್ನು ಎರಕಹೊಯ್ದು ಅದರ ನಾಲ್ಕು ಮೂಲೆಗಳಲ್ಲಿ ಅಂದರೆ ಒಂದು ಕಡೆಯಲ್ಲಿ ಎರಡು ಬಳೆಗಳನ್ನು ಮತ್ತೊಂದು ಕಡೆಯಲ್ಲಿ ಎರಡು ಬಳೆಗಳನ್ನು ಇಡಬೇಕು. ಜಾಲೀ ಮರದ ಕೋಲುಗಳನ್ನು ಬಂಗಾರದಿಂದ ಹೊದಿಸ ಬೇಕು, ಮಂಜೂಷವನ್ನು ಹೊತ್ತುಕೊಂಡು ಹೋಗು ವದಕ್ಕಾಗಿ ಕೋಲುಗಳನ್ನು ಮಂಜೂಷದ ಉಭಯ ಪಾರ್ಶ್ವಗಳಲ್ಲಿರುವ ಬಳೆಗಳಲ್ಲಿ ಸೇರಿಸಬೇಕು. ಮಂಜೂಷದ ಬಳೆಗಳಲ್ಲಿಯೇ ಕೋಲುಗಳನ್ನು ಇಡ ಬೇಕು. ಅವುಗಳೊಳಗಿಂದ ಕೋಲುಗಳನ್ನು ತೆಗೆಯ ಬಾರದು. ನಾನು ನಿನಗೆ ಕೊಡುವ ಸಾಕ್ಷಿಯ ಹಲಗೆ ಗಳನ್ನು ಮಂಜೂಷದಲ್ಲಿ ಇಡಬೇಕು. ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಆಗಿರುವ ಕರುಣಾಸನವನ್ನು ಶುದ್ಧ ಬಂಗಾರದಿಂದ ಮಾಡಬೇಕು. ಬಂಗಾರದಿಂದ ಎರಡು ಕೆರೂಬಿಗಳನ್ನು ನಕ್ಷೆಯ ಕೆಲಸದಿಂದ ಕರುಣಾ ಸನದ ಎರಡು ಬದಿಗಳಲ್ಲಿ ಮಾಡಿಸಬೇಕು. ಈ ಬದಿಯಲ್ಲಿ ಒಂದು ಕೆರೂಬಿಯನ್ನೂ ಆ ಬದಿಯಲ್ಲಿ ಮತ್ತೊಂದು ಕೆರೂಬಿಯನ್ನೂ ಹೀಗೆ ಕರುಣಾಸನದ ಮೇಲೆಯೇ ಎರಡೂ ಬದಿಗಳಲ್ಲಿ ಮಾಡಬೇಕು. ಆ ಕೆರೂಬಿಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಚಾಚಿದವುಗ ಳಾಗಿಯೂ ರೆಕ್ಕೆಗಳಿಂದ ಕರುಣಾಸನವನ್ನು ಮುಚ್ಚುವವು ಗಳಾಗಿಯೂ ಒಂದರ ಮುಖವನ್ನು ಒಂದು ನೋಡು ವವುಗಳಾಗಿಯೂ ಇರಬೇಕು. ಕೆರೂಬಿಗಳ ಮುಖಗಳು ಕರುಣಾಸನದ ಕಡೆಗೆ ತಿರುಗಿರಬೇಕು. ಕರುಣಾಸನ ವನ್ನು ಮಂಜೂಷದ ಮೇಲೆ ಇಡಬೇಕು ಮತ್ತು ನೀನು ಮಂಜೂಷದಲ್ಲಿ ನಾನು ನಿನಗೆ ಕೊಡುವ ಸಾಕ್ಷಿ ಹಲಗೆಗಳನ್ನು ಇಡಬೇಕು. ನಾನು ಅಲ್ಲಿ ನಿನ್ನನ್ನು ಸಂಧಿಸಿ ಕರುಣಾಸನದ ಮೇಲಿನಿಂದ ಮಂಜೂಷದ ಮೇಲಿರುವ ಎರಡು ಕೆರೂಬಿಗಳ ಮಧ್ಯದಿಂದ ಇಸ್ರಾಯೇಲ್ ಮಕ್ಕಳ ವಿಷಯದಲ್ಲಿ ಆಜ್ಞಾಪಿಸುವವು ಗಳನ್ನೆಲ್ಲಾ ನಿನಗೆ ತಿಳಿಸುವೆನು.
- Exodus 26:31–33 ವಿಮೋಚನಕಾಂಡ 26:31–33ನೀಲಿ ಧೂಮ್ರ ರಕ್ತವರ್ಣಗಳಿರುವ ನಯವಾದ ನಾರುಗಳಿಂದ ಹೊಸೆದ ತೆರೆಯನ್ನು ಮಾಡಬೇಕು. ಕೌಶಲ್ಯದಿಂದ ಮಾಡಿದ ಕೆರೂಬಿಗಳುಳ್ಳದ್ದನ್ನಾಗಿ ಅದನ್ನು ಮಾಡಬೇಕು. ಅದನ್ನು ಬಂಗಾರದಿಂದ ಹೊದಿಸಿದ ಬಂಗಾರದ ಕೊಂಡಿಗಳಿದ್ದ ಬೆಳ್ಳಿಯ ನಾಲ್ಕು ಕುಳಿಗಳಲ್ಲಿ ಊರಿಕೊಂಡಿರುವ ನಾಲ್ಕು ಜಾಲೀ ಮರದ ಸ್ತಂಭಗಳಲ್ಲಿ ಅದನ್ನು ತೂಗುಹಾಕಬೇಕು. ಆ ತೆರೆಯನ್ನು ಕೊಂಡಿಗಳ ಕೆಳಗೆ ತೂಗುಹಾಕಿ ತೆರೆಯೊಳಗೆ ಸಾಕ್ಷಿ ಹಲಗೆಗಳ ಮಂಜೂಷವನ್ನು ತರ ಬೇಕು. ಪರಿಶುದ್ಧ ಸ್ಥಳವನ್ನೂ ಅತಿಪರಿಶುದ್ಧ ಸ್ಥಳವನ್ನೂ ಆ ತೆರೆಯು ವಿಂಗಡಿಸುವದು.
- Exodus 36:35–36 ವಿಮೋಚನಕಾಂಡ 36:35–36ನೀಲಿ, ಧೂಮ್ರ, ರಕ್ತವರ್ಣ, ನಯವಾಗಿ ಹೊಸೆದ ನಾರುಗಳಿಂದ ತೆರೆಯನ್ನು ಮಾಡಿದನು. ಅದರ ಮೇಲೆ ಕುಶಲ ಕೆಲಸದಿಂದ ಕೆರೂಬಿಗಳನ್ನು ಮಾಡಿದನು. ಇದಲ್ಲದೆ ಜಾಲೀ ಮರದ ನಾಲ್ಕು ಸ್ತಂಭಗಳನ್ನು ಮಾಡಿ ಚಿನ್ನದಿಂದ ಅವುಗಳನ್ನು ಹೊದಿಸಿ ದನು. ಅವುಗಳ ಮೊಳೆಗಳು ಚಿನ್ನದವುಗಳಾಗಿದ್ದವು; ಅವನು ಅವುಗಳಿಗೆ ಬೆಳ್ಳಿಯ ನಾಲ್ಕು ಕಾಲುಗಳನ್ನು ಎರಕಹೊಯ್ದನು.
- Exodus 37:1–9 ವಿಮೋಚನಕಾಂಡ 37:1–9ಬೆಚಲೇಲನು ಜಾಲೀ ಮರದಿಂದಎರಡುವರೆ ಮೊಳ ಉದ್ದ, ಒಂದುವರೆ ಮೊಳ ಅಗಲ, ಒಂದುವರೆ ಮೊಳ ಎತ್ತರವಾಗಿರುವ ಮಂಜೂಷವನ್ನು ಮಾಡಿದನು. ಅದನ್ನು ಚೊಕ್ಕ ಬಂಗಾರದಿಂದ ಒಳಗೂ ಹೊರಗೂ ಹೊದಿಸಿ ಅದರ ಸುತ್ತಲೂ ಚಿನ್ನದ ಕಿರೀಟವನ್ನು ಮಾಡಿದನು. ಅವನು ಅದರ ನಾಲ್ಕು ಮೂಲೆಗಳಿಗೆ ನಾಲ್ಕು ಉಂಗುರಗಳನ್ನು ಎರಕ ಹೊಯ್ದನು; ಇದಲ್ಲದೆ ಅದರ ಒಂದು ಮಗ್ಗಲಿಗೆ ಎರಡು ಇನ್ನೊಂದು ಮಗ್ಗಲಿಗೆ ಎರಡು ಉಂಗುರಗಳನ್ನು ಎರಕ ಹೊಯ್ದನು. ಅವನು ಜಾಲೀ ಮರದಿಂದ ಕೋಲುಗಳನ್ನು ಮಾಡಿ ಚಿನ್ನದಿಂದ ಅವುಗಳನ್ನು ಹೊದಿ ಸಿದನು. ಮಂಜೂಷವನ್ನು ಹೊರುವದಕ್ಕಾಗಿ ಕೋಲು ಗಳನ್ನು ಮಂಜೂಷದ ಭಾಗಗಳಲ್ಲಿರುವ ಉಂಗುರ ಗಳಲ್ಲಿ ಸೇರಿಸಿದನು. ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಇರುವ ಕರುಣಾಸನವನ್ನು ಚೊಕ್ಕ ಬಂಗಾರ ದಿಂದ ಮಾಡಿದನು. ಅವನು ಕರುಣಾಸನದ ಎರಡು ತುದಿಗಳಲ್ಲಿ ಎರಡು ಚಿನ್ನದ ಕೆರೂಬಿಗಳನ್ನು ಮಾಡಿದನು. ಅವು ಒಂದೇ ತುಂಡಿನಲ್ಲಿ ಹೊಡೆದು ಮಾಡಿದ್ದಾಗಿದ್ದವು. ಒಂದು ಬದಿಯ ಕೊನೆಯಲ್ಲಿ ಒಂದು ಕೆರೂಬಿಯನ್ನು ಇನ್ನೊಂದು ಬದಿಯ ಕೊನೆಯಲ್ಲಿ ಇನ್ನೊಂದು ಕೆರೂಬಿ ಯನ್ನು ಮಾಡಿದನು. ಹೀಗೆ ಕರುಣಾಸನದ ಎರಡೂ ಬದಿಗಳಲ್ಲಿ ಕೆರೂಬಿಯರನ್ನು ಮಾಡಿದನು. ಆ ಕೆರೂಬಿ ಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಹರಡಿಕೊಂಡು ಕರುಣಾಸನವನ್ನು ಮುಚ್ಚಿದಂತಿದ್ದವು, ಆ ಕೆರೂಬಿಯರ ಮುಖಗಳು ಒಂದನ್ನೊಂದು ನೋಡುತ್ತಿರುವಂತೆಯೂ ಕರುಣಾಸನವನ್ನು ನೋಡುತ್ತಿರುವಂತೆಯೂ ಇದ್ದವು.
- Exodus 26:7 ವಿಮೋಚನಕಾಂಡ 26:7ಇದಲ್ಲದೆ ನೀನು ಗುಡಾರದ ಮೇಲೆ ಹೊದಿಸು ವದಕ್ಕಾಗಿ ಮೇಕೆ ಕೂದಲಿನಿಂದ ಹನ್ನೊಂದು ತೆರೆಗಳನ್ನು ಮಾಡಬೇಕು.