Exodus · chapter 35 · verse 14
Exodus 35:14 in Kannada
ಬೆಳಕಿಗಾಗಿ ದೀಪಸ್ತಂಭವನ್ನೂ ಅದರ ಉಪಕರಣಗಳನ್ನೂ ಅದರ ದೀಪಗಳನ್ನೂ ಬೆಳಕಿಗಾಗಿ ಎಣ್ಣೆಯನ್ನೂ
Belakigaagi deepastambhavannoo adara upakaranagalannoo adara deepagalannoo belakigaagi enneyannoo
Exodus 35:14 in English
- King James Version (KJV)
- The candlestick also for the light, and his furniture, and his lamps, with the oil for the light,
- World English Bible (WEB)
- the lamp stand also for the light, with its vessels, its lamps, and the oil for the light;
- American Standard Version (ASV)
- the candlestick also for the light, and its vessels, and its lamps, and the oil for the light;
- Bible in Basic English (BBE)
- And the support for the lights, with its vessels and its lights and the oil for the light;
- Darby Translation (DBY)
- and the lamp-stand for the light, and its utensils, and its lamps, and the oil for the light;
- Webster's Bible (WBS)
- The candlestick also for the light, and its furniture, and its lamps, with the oil for the light,
- Young's Literal Translation (YLT)
- 'And the candlestick for the light, and its vessels, and its lamps, and the oil for the light,
Read in context
- 12ಮಂಜೂಷವನ್ನೂ ಅದರ ಕೋಲುಗಳನ್ನೂ ಅವುಗಳೊಂದಿಗೆ ಕರುಣಾಸನ ವನ್ನೂ ಮರೆಮಾಡುವ ತೆರೆಯನ್ನೂ
- 13ಮೇಜನ್ನೂ ಅದರ ಕೋಲುಗಳನ್ನೂ ಅದರ ಎಲ್ಲಾ ಉಪಕರಣ ಗಳನ್ನೂ ಸಮ್ಮುಖದ ರೊಟ್ಟಿಯನ್ನೂ
- 14ಬೆಳಕಿಗಾಗಿ ದೀಪಸ್ತಂಭವನ್ನೂ ಅದರ ಉಪಕರಣಗಳನ್ನೂ ಅದರ ದೀಪಗಳನ್ನೂ ಬೆಳಕಿಗಾಗಿ ಎಣ್ಣೆಯನ್ನೂ
- 15ಧೂಪ ವೇದಿಯನ್ನೂ ಅದರ ಕೋಲುಗಳನ್ನೂ ಅಭಿಷೇಕಿಸುವ ಎಣ್ಣೆಯನ್ನೂ ಪರಿಮಳ ಧೂಪವನ್ನೂ ಗುಡಾರದಲ್ಲಿ ಪ್ರವೇಶಿಸುವ ಬಾಗಲಿನ ತೆರೆಯನ್ನೂ
- 16ಯಜ್ಞವೇದಿ ಯನ್ನೂ ಅದರೊಂದಿಗೆ ಹಿತ್ತಾಳೆಯ ಜಲ್ಲಡಿಯನ್ನೂ ಅದರ ಕೋಲುಗಳನ್ನೂ ಅದರ ಎಲ್ಲಾ ಉಪಕರಣ ಗಳನ್ನೂ ಗಂಗಾಳವನ್ನೂ ಅದರ ಪೀಠ
Cross references
- Exodus 25:31–39 ವಿಮೋಚನಕಾಂಡ 25:31–39ಇದಲ್ಲದೆ ಶುದ್ಧ ಬಂಗಾರದಿಂದ ದೀಪಸ್ತಂಭವನ್ನು ಮಾಡಬೇಕು. ಆ ದೀಪಸ್ತಂಭವನ್ನು ನಕ್ಷೆಯ ಕೆಲಸದಿಂದ ಮಾಡಬೇಕು. ಅದರ ಕಂಬವೂ ಕೊಂಬೆಗಳೂ ಹಣತೆ ಗಳೂ ಗುಂಡುಗಳೂ ಪುಷ್ಪಗಳೂ ಅದರಂತೆಯೇ ಇರ ಬೇಕು. ದೀಪಸ್ತಂಭದ ಉಭಯ ಪಾರ್ಶ್ವಗಳಿಂದ ಆರು ಕೊಂಬೆಗಳು, ಒಂದು ಭಾಗದಿಂದ ಮೂರು ಕೊಂಬೆಗಳೂ ಮತ್ತೊಂದು ಭಾಗದಿಂದ ಮೂರು ಕೊಂಬೆಗಳೂ ಹೊರಗೆ ಬರಬೇಕು. ಒಂದು ಕೊಂಬೆ ಯಲ್ಲಿ ಬಾದಾಮಿಯ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಮತ್ತೊಂದು ಕೊಂಬೆಯಲ್ಲಿ ಬಾದಾಮಿ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಬಾದಾಮಿ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಈ ಪ್ರಕಾರ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳಲ್ಲಿ ಇರಬೇಕು. ದೀಪಸ್ತಂಭದಲ್ಲಿಯೇ ಗುಂಡುಗಳೂ ಪುಷ್ಪಗಳೂ ಸೇರಿದಂತೆ ಬಾದಾಮಿ ಪುಷ್ಪವಿರುವ ನಾಲ್ಕು ಹಣತೆಗಳು ಇರಬೇಕು. ಇದಲ್ಲದೆ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳ ಪ್ರಕಾರ ಅದರಿಂದ ಬರುವ ಎರಡೆರಡು ಕೊಂಬೆಗಳ ಕೆಳಗೆ ಒಂದೊಂದು ಗುಂಡು ಇರಬೇಕು. ಅದರ ಗುಂಡುಗಳೂ ಕೊಂಬೆಗಳೂ ಅದರಿಂದಲೇ ಬಂದಿರಬೇಕು. ಅದೆಲ್ಲಾ ಶುದ್ಧ ಬಂಗಾ ರದ ಒಂದೇ ನಕ್ಷೆಯ ಕೆಲಸವಾಗಿರಬೇಕು. ಅದರ ಏಳು ದೀಪಗಳನ್ನು ಮಾಡಿ ಅವು ಮುಂದುಗಡೆಯಲ್ಲಿ ಪ್ರಕಾಶ ಕೊಡುವಂತೆ ಅವುಗಳನ್ನು ಹೊತ್ತಿಸಬೇಕು. ಇದಲ್ಲದೆ ಅದರ ಚಿಮಟಿಗೆಗಳನ್ನೂ ಬೂದಿಯ ಪಾತ್ರೆಗಳನ್ನೂ ಶುದ್ಧ ಬಂಗಾರದಿಂದಲೇ ಮಾಡಬೇಕು. ಒಂದು ತಲಾಂತು ಶುದ್ಧ ಬಂಗಾರದಿಂದ ದೀಪ ಸ್ತಂಭವನ್ನೂ ಅದರ ಎಲ್ಲಾ ಸಾಮಾನುಗಳನ್ನೂ ಮಾಡ ಬೇಕು.ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಅವುಗಳನ್ನು ಮಾಡುವಂತೆ ನೋಡಿಕೋ.
- Exodus 37:17–24 ವಿಮೋಚನಕಾಂಡ 37:17–24ಅವನು ಚೊಕ್ಕ ಬಂಗಾರದ ದೀಪಸ್ತಂಭವನ್ನು ಮಾಡಿದನು; ಆ ದೀಪಸ್ತಂಭವನ್ನು ಅವನು ನಕ್ಷೆಯ ಕೆಲಸಮಾಡಿದ ಅಚ್ಚಿನ ಮೇಲೆ ಬಡಿದು ತಯಾರಿಸಿದನು. ಆ ದೀಪ ಸ್ತಂಭದಿಂದ ಆರು ಕೊಂಬೆಗಳು ಹೊರ ಬಂದಿದ್ದವು. ಒಂದು ಭಾಗದಿಂದ ಮೂರು ಮತ್ತೊಂದು ಭಾಗದಿಂದ ಮೂರು. ಒಂದು ಕೊಂಬೆಯಲ್ಲಿ ಬಾದಾ ಮಿಯ ಹೂವುಳ್ಳ ಮೂರು ಹಣತೆಗಳೂ, ಗುಂಡೂ ಹೂವೂ, ಮತ್ತೊಂದು ಕೊಂಬೆಯಲ್ಲಿ ಬಾದಾಮಿ ಹೂವುಳ್ಳ ಮೂರು ಹಣತೆಗಳೂ ಗುಂಡೂ ಹೂವೂ; ಈ ಪ್ರಕಾರ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳಲ್ಲಿ ಇದ್ದವು. ದೀಪಸ್ತಂಭದಲ್ಲಿ ಗೂಡುಗಳೂ ಹೂವುಗಳೂ ಕೂಡಿದ ಬಾದಾವಿ ಹೂವುಳ್ಳ ನಾಲ್ಕು ಹಣತೆಗಳು. ದೀಪಸ್ತಂಭದೊಳ ಗಿಂದ ಹೊರಗೆ ಬರುವ ಆರು ಕೊಂಬೆಗಳಿಗೆ ಅದರಿಂದ ಬರುವ ಎರಡೆರಡು ಕೊಂಬೆಗಳ ಕೆಳಗೆ ಒಂದೊಂದು ಗೂಡು. ಅದರ ಗೂಡುಗಳೂ ಕೊಂಬೆಗಳೂ ಅದರಿಂದಲೇ ಉಂಟಾಗಿದ್ದವು; ಅದೆಲ್ಲಾ ಚೊಕ್ಕ ಬಂಗಾರದ ಒಂದೇ ಕಲಾಕೃತಿಯಾಗಿತ್ತು. ಅವನು ಏಳು ಬತ್ತಿಯ ದೀವಿಗೆಗಳನ್ನೂ ಕುಡಿ ಕತ್ತರಿಸಲು ಕತ್ತರಿ ಗಳನ್ನೂ ಕುಡಿ ಹಾಕಲು ಪಾತ್ರೆಗಳನ್ನೂ ಚೊಕ್ಕ ಬಂಗಾರ ದಿಂದ ಮಾಡಿದನು. ಇವೆಲ್ಲವುಗಳನ್ನೂ ಸಮಸ್ತ ಪಾತ್ರೆಗಳನ್ನೂ ಅವನು ಒಂದು ತಲಾಂತು ಚೊಕ್ಕ ಬಂಗಾರದಿಂದ ಮಾಡಿದನು.
- Matthew 5:14–15 ಮತ್ತಾಯನು 5:14–15ನೀವು ಲೋಕಕ್ಕೆ ಬೆಳಕಾಗಿದ್ದೀರಿ. ಬೆಟ್ಟದ ಮೇಲೆ ಇರುವ ಪಟ್ಟಣವು ಮರೆಯಾಗಿರಲಾರದು. ಇಲ್ಲವೆ ಮನುಷ್ಯರು ದೀಪವನ್ನು ಹೊತ್ತಿಸಿ ಕೊಳಗದೊಳಗೆ ಇಡದೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕು ಕೊಡುವದು.
- Psalm 148:3 ಕೀರ್ತನೆಗಳು 148:3ಸೂರ್ಯ ಚಂದ್ರರೇ, ಆತನನ್ನು ಸ್ತುತಿಸಿರಿ; ಹೊಳೆಯುವ ನಕ್ಷತ್ರಗಳೇ, ಆತ ನನ್ನು ಸ್ತುತಿಸಿರಿ.