Exodus · chapter 35 · verse 15
Exodus 35:15 in Kannada
ಧೂಪ ವೇದಿಯನ್ನೂ ಅದರ ಕೋಲುಗಳನ್ನೂ ಅಭಿಷೇಕಿಸುವ ಎಣ್ಣೆಯನ್ನೂ ಪರಿಮಳ ಧೂಪವನ್ನೂ ಗುಡಾರದಲ್ಲಿ ಪ್ರವೇಶಿಸುವ ಬಾಗಲಿನ ತೆರೆಯನ್ನೂ
Dhoopa vediyannoo adara kolugalannoo abhishekisuva enneyannoo parimala dhoopavannoo gudaaradalli praveshisuva baagalina tereyannoo
Exodus 35:15 in English
- King James Version (KJV)
- And the incense altar, and his staves, and the anointing oil, and the sweet incense, and the hanging for the door at the entering in of the tabernacle,
- World English Bible (WEB)
- and the altar of incense with its poles, the anointing oil, the sweet incense, the screen for the door, at the door of the tabernacle;
- American Standard Version (ASV)
- and the altar of incense, and its staves, and the anointing oil, and the sweet incense, and the screen for the door, at the door of the tabernacle;
- Bible in Basic English (BBE)
- And the altar for burning spices, with its rods, and the holy oil and the sweet perfume, and the curtain for the door, at the door of the House;
- Darby Translation (DBY)
- and the altar of incense, and its staves; and the anointing-oil, and the incense of fragrant drugs; and the entrance-curtain at the entrance of the tabernacle;
- Webster's Bible (WBS)
- And the incense-altar, and its staffs, and the anointing oil, and the sweet incense, and the hanging for the door at the entrance of the tabernacle,
- Young's Literal Translation (YLT)
- 'And the altar of perfume, and its staves, and the anointing oil, and the spice perfume, and the covering of the opening at the opening of the tabernacle,
Read in context
- 13ಮೇಜನ್ನೂ ಅದರ ಕೋಲುಗಳನ್ನೂ ಅದರ ಎಲ್ಲಾ ಉಪಕರಣ ಗಳನ್ನೂ ಸಮ್ಮುಖದ ರೊಟ್ಟಿಯನ್ನೂ
- 14ಬೆಳಕಿಗಾಗಿ ದೀಪಸ್ತಂಭವನ್ನೂ ಅದರ ಉಪಕರಣಗಳನ್ನೂ ಅದರ ದೀಪಗಳನ್ನೂ ಬೆಳಕಿಗಾಗಿ ಎಣ್ಣೆಯನ್ನೂ
- 15ಧೂಪ ವೇದಿಯನ್ನೂ ಅದರ ಕೋಲುಗಳನ್ನೂ ಅಭಿಷೇಕಿಸುವ ಎಣ್ಣೆಯನ್ನೂ ಪರಿಮಳ ಧೂಪವನ್ನೂ ಗುಡಾರದಲ್ಲಿ ಪ್ರವೇಶಿಸುವ ಬಾಗಲಿನ ತೆರೆಯನ್ನೂ
- 16ಯಜ್ಞವೇದಿ ಯನ್ನೂ ಅದರೊಂದಿಗೆ ಹಿತ್ತಾಳೆಯ ಜಲ್ಲಡಿಯನ್ನೂ ಅದರ ಕೋಲುಗಳನ್ನೂ ಅದರ ಎಲ್ಲಾ ಉಪಕರಣ ಗಳನ್ನೂ ಗಂಗಾಳವನ್ನೂ ಅದರ ಪೀಠ
- 17ಅಂಗಳದ ಪರದೆಗಳನ್ನೂ ಅದರ ಸ್ತಂಭಗಳನ್ನೂ ಅದರ ಕುಳಿಗ ಳನ್ನೂ ಅಂಗಳದ ಬಾಗಲಿನ ತೆರೆಗಳನ್ನೂ
Cross references
- Exodus 30:1–10 ವಿಮೋಚನಕಾಂಡ 30:1–10ನೀನು ಧೂಪ ಸುಡುವ ವೇದಿಯನ್ನು ಮಾಡಬೇಕು; ಜಾಲೀ ಮರದಿಂದ ಅದನ್ನು ಮಾಡಬೇಕು. ಅದರ ಉದ್ದ ಒಂದು ಮೊಳ, ಅಗಲ ಒಂದು ಮೊಳ, ಎತ್ತರ ಎರಡು ಮೊಳ ಇದ್ದು ಅದು ಚಚ್ಚೌಕವಾಗಿರಬೇಕು. ಅದಕ್ಕೆ ಕೊಂಬುಗಳನ್ನು ಅದ ರಿಂದಲೇ ಮಾಡಬೇಕು. ಮೇಲ್ಭಾಗವನ್ನೂ ಸುತ್ತಲಿನ ಭಾಗಗಳನ್ನೂ ಕೊಂಬುಗಳನ್ನೂ ಶುದ್ಧ ಬಂಗಾರದಿಂದ ಹೊದಿಸಿ ಸುತ್ತಲೂ ಬಂಗಾರದ ಗೋಟನ್ನು ಮಾಡ ಬೇಕು. ಗೋಟಿನ ಕೆಳಗೆ ಎರಡೂ ಪಕ್ಕಗಳ ಎರಡು ಮೂಲೆಗಳಲ್ಲಿ ಎರಡು ಬಂಗಾರದ ಬಳೆಗಳನ್ನು ಮಾಡ ಬೇಕು. ಇವುಗಳನ್ನು ಹೊರುವದಕ್ಕಾಗಿ ಅವುಗಳಲ್ಲಿ ಸಿಕ್ಕಿಸಬೇಕು. ಆ ಕೋಲುಗಳನ್ನು ಜಾಲೀ ಮರದಿಂದ ಮಾಡಿ ಅವುಗಳನ್ನು ಬಂಗಾರದಿಂದ ಹೊದಿಸಬೇಕು. ಅದನ್ನು ಸಾಕ್ಷಿ ಹಲಗೆಗಳಿದ್ದ ಮಂಜೂಷದ ಮುಂದೆ ಇರುವ ತೆರೆಯ ಮುಂದೆಯೂ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಇರುವ ಮಂಜೂಷದ ಮೇಲಿನ ಕರುಣಾ ಸನದ ಮುಂದೆಯೂ ಇಡಬೇಕು. ಪ್ರತಿದಿನ ಬೆಳಿಗ್ಗೆ ಆರೋನನು ಪರಿಮಳ ಧೂಪ ವನ್ನು ಅದರ ಮೇಲೆ ಸುಡಬೇಕು. ಅವನು ದೀಪಗಳನ್ನು ಸಿದ್ಧಮಾಡುವಾಗ ಪರಿಮಳ ಧೂಪವನ್ನು ಅದರ ಮೇಲೆ ಸುಡಬೇಕು. ಆರೋನನು ಸಾಯಂಕಾಲ ದೀಪಗಳನ್ನು ಅಂಟಿಸುವ ಸಮಯದಲ್ಲಿ ಧೂಪವೇದಿಯ ಮೇಲೆ ಧೂಪವನ್ನು ಸುಡಬೇಕು. ಅದೇ ನಿಮ್ಮ ಸಂತತಿಯವರಿಗೆ ಕರ್ತನ ಮುಂದೆ ಅರ್ಪಿಸಬೇಕಾದ ನಿತ್ಯವಾದ ಧೂಪ ವು. ನೀವು ಅದರ ಮೇಲೆ ಬೇರೆ ಧೂಪವನ್ನಾಗಲಿ ದಹನಬಲಿಗಳನ್ನಾಗಲಿ ಆಹಾರಾರ್ಪಣೆಯನ್ನಾಗಲಿ ಅರ್ಪಿಸಬಾರದು. ಇಲ್ಲವೆ ಪಾನಾರ್ಪಣೆಯನ್ನು ಅದರ ಮೇಲೆ ಹೊಯ್ಯಬಾರದು. ಆರೋನನು ಅದರ ಕೊಂಬುಗಳಿಗೆ ವರುಷಕ್ಕೆ ಒಂದು ಸಾರಿ ಪ್ರಾಯಶ್ಚಿತ್ತದ ಬಲಿಯ ರಕ್ತದಿಂದ ಪ್ರಾಯಶ್ಚಿತ್ತ ಮಾಡಬೇಕು. ವರುಷಕ್ಕೊಂದು ಸಾರಿ ನಿಮ್ಮ ಸಂತತಿಗಳಲ್ಲೆಲ್ಲಾ ಅದನ್ನು ಮಾಡಬೇಕು. ಅದು ಕರ್ತನಿಗೆ ಅತಿಪರಿಶುದ್ಧವಾದದ್ದು.
- Exodus 37:25–28 ವಿಮೋಚನಕಾಂಡ 37:25–28ಅವನು ಜಾಲೀ ಮರದಿಂದ ಧೂಪಪೀಠವನ್ನು ಮಾಡಿದನು; ಅದು ಒಂದು ಮೊಳ ಉದ್ದ, ಒಂದು ಮೊಳ ಅಗಲವಾಗಿ ಚಚ್ಚೌಕವಾಗಿತ್ತು; ಅದು ಎರಡು ಮೊಳ ಎತ್ತರವಾಗಿತ್ತು. ಅದರ ಕೊಂಬುಗಳು ಸಹ ಜಾಲೀ ಮರದಿಂದಲೇ ಮಾಡಲ್ಪಟ್ಟಿದ್ದವು. ಅವನು ಅದರ ಮೇಲ್ಭಾಗವನ್ನೂ ಅದರ ಸುತ್ತಲಿನ ಬದಿಗಳನ್ನೂ ಅದರ ಕೊಂಬುಗಳನ್ನೂ ಚೊಕ್ಕ ಬಂಗಾರದಿಂದ ಹೊದಿಸಿದನು; ಅದರ ಸುತ್ತಲೂ ಬಂಗಾರದ ಕಿರೀಟ ವನ್ನಿಟ್ಟನು. ಅದನ್ನು ಹೊರುವದಕ್ಕೆ ಕೋಲುಗಳನ್ನು ಸಿಕ್ಕಿಸುವದಕ್ಕೋಸ್ಕರ ಅದರ ಕಿರೀಟದ ಕೆಳಗೆ ಎರಡು ಬದಿಗಿರುವ ಎರಡು ಮೂಲೆಗಳಲ್ಲಿ ಚಿನ್ನದ ಎರಡು ಉಂಗುರಗಳನ್ನು ಮಾಡಿದನು. ಅವನು ಜಾಲೀ ಮರದಿಂದ ಕೋಲುಗಳನ್ನು ಮಾಡಿ ಅವುಗಳನ್ನು ಚಿನ್ನದಿಂದ ಹೊದಿಸಿದನು.ಅನಂತರ ಅವನು ವೈದ್ಯನ ಪದ್ಧತಿಯ ಪ್ರಕಾರ ಪವಿತ್ರವಾದ ಅಭಿಷೇಕ ತೈಲವನ್ನೂ ಪರಿಮಳ ದ್ರವ್ಯ ದಿಂದ ಶುದ್ಧವಾದ ಧೂಪವನ್ನೂ ತಯಾರಿಸಿದನು.
- Psalm 141:2 ಕೀರ್ತನೆಗಳು 141:2ನನ್ನ ಪ್ರಾರ್ಥನೆ ನಿನ್ನ ಮುಂದೆ ಧೂಪವಾಗಿಯೂ ನನ್ನ ಕೈ ಎತ್ತುವದು ಸಾಯಂಕಾಲದ ಬಲಿಯಾಗಿಯೂ ಸಿದ್ಧವಾಗಿರಲಿ.
- Exodus 36:37–38 ವಿಮೋಚನಕಾಂಡ 36:37–38ಬಾಗಲಿಗೆ ನೀಲಿ, ಧೂಮ್ರ, ರಕ್ತವರ್ಣದ ಹೊಸೆದ ನಯವಾದ ನಾರುಗಳಿಂದ ಕಸೂತಿ ಹಾಕಿ ತೆರೆಯನ್ನು ಮಾಡಿದನು;ಕೊಂಡಿ ಇರುವ ಐದು ಕಂಬಗಳನ್ನು ಮಾಡಿ ಅವುಗಳ ತಲೆಗಳನ್ನೂ ಕಂಬ ಗಳನ್ನೂ ಚಿನ್ನದಿಂದ ಹೊದಿಸಿದನು. ಆದರೆ ಅವುಗಳ ಐದು ಕಾಲುಗಳು ಹಿತ್ತಾಳೆಯದ್ದಾಗಿದ್ದವು. ಕೊಂಡಿ ಇರುವ ಐದು ಕಂಬಗಳನ್ನು ಮಾಡಿ ಅವುಗಳ ತಲೆಗಳನ್ನೂ ಕಂಬ ಗಳನ್ನೂ ಚಿನ್ನದಿಂದ ಹೊದಿಸಿದನು. ಆದರೆ ಅವುಗಳ ಐದು ಕಾಲುಗಳು ಹಿತ್ತಾಳೆಯದ್ದಾಗಿದ್ದವು.
- Exodus 26:36–37 ವಿಮೋಚನಕಾಂಡ 26:36–37ಗುಡಾರದ ಬಾಗಲಿಗೆ ನೀಲಿ ಧೂಮ್ರ ರಕ್ತವರ್ಣ ಗಳಿರುವ ನಯವಾಗಿ ಹೊಸೆದ ನಾರುಗಳಿಂದ ಕಸೂತಿ ಕೆಲಸದ ತೆರೆಯನ್ನು ತೂಗುಹಾಕಬೇಕು.ಆ ತೆರೆಗೆ ಜಾಲೀ ಮರದ ಐದು ಸ್ತಂಭಗಳನ್ನು ಮಾಡಿ ಅವುಗಳನ್ನು ಬಂಗಾರದಿಂದ ಹೊದಿಸಬೇಕು. ಅವುಗಳ ಕೊಂಡಿಗಳು ಬಂಗಾರದವುಗಳಾಗಿರಬೇಕು. ಅವುಗಳಿಗೆ ಹಿತ್ತಾಳೆಯ ಐದು ಕುಳಿಗಳನ್ನು ಎರಕ ಹೊಯ್ಯಬೇಕು. ಆ ತೆರೆಗೆ ಜಾಲೀ ಮರದ ಐದು ಸ್ತಂಭಗಳನ್ನು ಮಾಡಿ ಅವುಗಳನ್ನು ಬಂಗಾರದಿಂದ ಹೊದಿಸಬೇಕು. ಅವುಗಳ ಕೊಂಡಿಗಳು ಬಂಗಾರದವುಗಳಾಗಿರಬೇಕು. ಅವುಗಳಿಗೆ ಹಿತ್ತಾಳೆಯ ಐದು ಕುಳಿಗಳನ್ನು ಎರಕ ಹೊಯ್ಯಬೇಕು.
- Exodus 30:22–38 ವಿಮೋಚನಕಾಂಡ 30:22–38ಇದಲ್ಲದೆ ಕರ್ತನು ಮೋಶೆಗೆ-- ಉತ್ತಮ ವಾದ ತೈಲಗಳನ್ನು ಅಂದರೆ ಐದುನೂರು ಶೆಕೆಲ್ ಸ್ವಚ್ಚವಾದ ರಕ್ತ ಬೋಳವು, ಅದರ ಅರ್ಧದಷ್ಟು ಅಂದರೆ ಇನ್ನೂರೈವತ್ತು ಶೆಕೆಲಿನ ಸುಗಂಧವಾದ ಲವಂಗ ಪಟ್ಟೆ ಯನ್ನು ಮತ್ತು ಇನ್ನೂರೈವತ್ತು ಶೆಕೆಲ್ ಸುಗಂಧವಾದ ಬಜೆಯನ್ನು, ಐದುನೂರು ಶೆಕೆಲ್ದಾಲ್ಚಿನ್ನಿಯನ್ನು, ಪರಿಶುದ್ಧ ಸ್ಥಳದ ಶೆಕೆಲಿನ ಮೇರೆಗೆ ಇವುಗಳನ್ನು ನೀನು ತೆಗೆದುಕೊಳ್ಳಬೇಕು. ಹಿಪ್ಪೆ ಎಣ್ಣೆಯ ಒಂದು ಹಿನ್ನೆಯನ್ನು ಸಹ ತೆಗೆದುಕೊಂಡು, ಅದರಿಂದ ತೈಲಗಾರರ ವಿದ್ಯೆಯ ಪ್ರಕಾರ ಪರಿಶುದ್ಧವಾದ ಅಭಿಷೇಕ ತೈಲವನ್ನು ಮಾಡು, ಇದು ಪರಿಶುದ್ಧವಾದ ಅಭಿಷೇಕದ ತೈಲವಾಗಿ ರುವದು. ಅದರಿಂದ ಸಭೆಯ ಗುಡಾರವನ್ನೂ ಸಾಕ್ಷಿಯ ಹಲಗೆಗಳ ಮಂಜೂಷವನ್ನೂ ನೀನು ಅಭಿಷೇ ಕಿಸಬೇಕು. ಮೇಜನ್ನೂ ಅದರ ಎಲ್ಲಾ ಸಾಮಾನು ಗಳನ್ನೂ ದೀಪಸ್ತಂಭವನ್ನೂ ಅದರ ಎಲ್ಲಾ ಸಾಮಾನು ಗಳನ್ನೂ ಧೂಪವೇದಿಯನ್ನೂ ದಹನಬಲಿಯ ವೇದಿಯನ್ನೂ ಅದರ ಎಲ್ಲಾ ಸಾಮಾನುಗಳನ್ನೂ ಗಂಗಾ ಳವನ್ನೂ ಅದರ ಪೀಠವನ್ನೂ ಅಭಿಷೇಕಿಸು. ಅವು ಅತಿಪರಿಶುದ್ಧವಾಗುವಂತೆ ಅವುಗಳನ್ನು ಶುದ್ಧಮಾಡು. ಅವುಗಳನ್ನು ಮುಟ್ಟುವದೆಲ್ಲವೂ ಪರಿಶುದ್ಧವಾಗಿರ ಬೇಕು. ಆರೋನನನ್ನೂ ಅವನ ಕುಮಾರರನ್ನೂ ಅಭಿಷೇಕಿಸಿ ಅವರು ನನಗೆ ಯಾಜಕ ಸೇವೆಮಾಡುವಂತೆ ಅವರನ್ನು ಪ್ರತಿಷ್ಠೆಮಾಡು ಅಂದನು. ಇಸ್ರಾಯೇಲ್ ಮಕ್ಕಳಿಗೆ ನೀನು--ಇದೇ ನಿಮ್ಮ ತಲತಲಾಂತರಗಳಲ್ಲಿ ನನಗೆ ಪರಿಶುದ್ಧವಾದ ಅಭಿಷೇಕಿ ಸುವ ಎಣ್ಣೆಯಾಗಿರಬೇಕು. ಅದನ್ನು ಮನುಷ್ಯರ ಮೇಲೆ ಹೊಯ್ಯಬಾರದು, ಇಲ್ಲವೆ ಅದರ ಮಾದರಿ ಯಂತೆ ಅದಕ್ಕೆ ಸಮಾನವಾದದ್ದನ್ನು ಮಾಡಬಾರದು. ಅದು ಪರಿಶುದ್ಧವಾದದ್ದು, ಅದು ನಿಮಗೆ ಪರಿಶುದ್ಧ ವಾಗಿರಬೇಕು. ಅದರ ಹಾಗೆ ತೈಲ ಮಾಡುವವನೂ ಅದನ್ನು ಅನ್ಯನಿಗೆ ಕೊಡುವವನೂ ತನ್ನ ಜನರೊಳಗಿಂದ ತೆಗೆದುಹಾಕಲ್ಪಡಬೇಕು ಎಂದು ಹೇಳು ಅಂದನು. ಕರ್ತನು ಮೋಶೆಗೆ--ನೀನು ಪರಿಮಳಗಳನ್ನು ಅಂದರೆ ಹಾಲುಮಡ್ಡಿ ಗುಗ್ಗುಲ ಗಂಧದ ಚೆಕ್ಕೆ ಎಂಬ ಪರಿಮಳಗಳನ್ನೂ ಶುದ್ಧವಾದ ಸಾಂಬ್ರಾಣಿಯನ್ನೂ ತೆಗೆದುಕೋ. ಅವು ಸಮತೂಕವಾಗಿರಲಿ. ಅದನ್ನು ಸುಗಂಧತೈಲ ಮಾಡುವವರ ವಿದ್ಯೆ ಪ್ರಕಾರ ಬೆರಸಿ ಶುದ್ಧವಾದ ಮತ್ತು ಪವಿತ್ರವಾದ ತೈಲವನ್ನು ಮಾಡ ಬೇಕು. ಅದರಲ್ಲಿ ಸ್ವಲ್ಪ ಪುಡಿಮಾಡಿ ಸಭೆಯ ಗುಡಾರ ದಲ್ಲಿ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಸಾಕ್ಷಿ ಹಲಗೆಗಳ ಮುಂದೆ ಇಡು. ಅದು ನಿಮಗೆ ಅತಿಪರಿಶುದ್ಧ ವಾಗಿರಲಿ. ನೀನು ಮಾಡುವ ಧೂಪದ ಮಾದರಿ ಯಂತೆ ನಿಮಗೋಸ್ಕರ ಮಾಡಿಕೊಳ್ಳಬಾರದು. ಕರ್ತನಿ ಗೋಸ್ಕರ ಅದು ನಿನಗೆ ಪರಿಶುದ್ಧವಾಗಿರಬೇಕು.ಅದರ ಪರಿಮಳವನ್ನು ನೋಡುವದಕ್ಕೆ ಅದರ ಹಾಗೆ ಮಾಡುವವನು ತನ್ನ ಜನರೊಳಗಿಂದ ತೆಗೆದು ಹಾಕಲ್ಪಡ ಬೇಕು ಅಂದನು. ಅದರ ಪರಿಮಳವನ್ನು ನೋಡುವದಕ್ಕೆ ಅದರ ಹಾಗೆ ಮಾಡುವವನು ತನ್ನ ಜನರೊಳಗಿಂದ ತೆಗೆದು ಹಾಕಲ್ಪಡ ಬೇಕು ಅಂದನು.