Exodus · chapter 35 · verse 3
Exodus 35:3 in Kannada
ನೀವು ವಾಸಿಸುವ ಯಾವ ಸ್ಥಳದಲ್ಲಿಯಾದರೂ ಸಬ್ಬತ್ ದಿನದಲ್ಲಿ ಬೆಂಕಿಯನ್ನೂ ಹೊತ್ತಿಸಬಾರದು ಎಂದು ಹೇಳಿದನು.
Neevu vaasisuva yaava sthaladalliyaadaroo sabbat dinadalli benkiyannoo hottisabaaradu endu helidanu.
Exodus 35:3 in English
- King James Version (KJV)
- Ye shall kindle no fire throughout your habitations upon the sabbath day.
- World English Bible (WEB)
- You shall kindle no fire throughout your habitations on the Sabbath day.’”
- American Standard Version (ASV)
- Ye shall kindle no fire throughout your habitations upon the sabbath day.
- Bible in Basic English (BBE)
- No fire is to be lighted in any of your houses on the Sabbath day.
- Darby Translation (DBY)
- Ye shall kindle no fire throughout your dwellings upon the sabbath day.
- Webster's Bible (WBS)
- Ye shall kindle no fire throughout your habitations upon the sabbath-day.
- Young's Literal Translation (YLT)
- ye do not burn a fire in any of your dwellings on the sabbath-day.'
Read in context
- 1ಮೋಶೆಯು ಇಸ್ರಾಯೇಲ್ ಮಕ್ಕಳ ಸಭೆಯನ್ನು ಒಟ್ಟುಗೂಡಿಸಿ ಅವರಿಗೆ--ನೀವು ಮಾಡುವದಕ್ಕೆ ಕರ್ತನು ಆಜ್ಞಾಪಿಸಿದ ವಾಕ್ಯಗಳು ಇವೇ.
- 2ಆರು ದಿನಗಳು ಕೆಲಸ ಮಾಡಬೇಕು. ಆದರೆ ಏಳನೆಯ ದಿನವು ನಿಮಗೆ ಪರಿಶುದ್ಧದಿನವಾಗಿಯೂ ಕರ್ತನಿಗೆ ವಿಶ್ರಾಂತಿಯ ಸಬ್ಬತ್ತಾಗಿಯೂ ಇರಬೇಕು. ಆ ದಿನದಲ್ಲಿ ಕೆಲಸ ಮಾಡುವವನು ಕೊಲ್ಲಲ್ಪಡಬೇಕು.
- 3ನೀವು ವಾಸಿಸುವ ಯಾವ ಸ್ಥಳದಲ್ಲಿಯಾದರೂ ಸಬ್ಬತ್ ದಿನದಲ್ಲಿ ಬೆಂಕಿಯನ್ನೂ ಹೊತ್ತಿಸಬಾರದು ಎಂದು ಹೇಳಿದನು.
- 4ಮೋಶೆಯು ಇಸ್ರಾಯೇಲ್ ಮಕ್ಕಳ ಸಭೆಗೆಲ್ಲಾ-- ಕರ್ತನು ಆಜ್ಞಾಪಿಸಿದ್ದು ಇದೇ. ಅದೇನಂದರೆ--
- 5ಕರ್ತನಿಗೋಸ್ಕರ ನಿಮ್ಮೊಳಗಿಂದ ಕಾಣಿಕೆಗಳನ್ನು ತೆಗೆದು ಕೊಳ್ಳಿರಿ. ಮನಃಪೂರ್ವಕವಾಗಿ ಕರ್ತನಿಗೆ ತರಬೇಕಾದವುಗಳು; ಚಿನ್ನ, ಬೆಳ್ಳಿ, ಹಿತ್ತಾಳೆ
Cross references
- Exodus 16:23 ವಿಮೋಚನಕಾಂಡ 16:23ಅವನು ಅವರಿಗೆ--ಕರ್ತನು ಹೇಳಿದ ಮಾತು ಇದೇ--ನಾಳೆ ಕರ್ತನಿಗೆ ವಿಶ್ರಾಂತಿಯ ಪರಿಶುದ್ಧ ಸಬ್ಬತ್ ದಿನವಾಗಿದೆ, ಇಂದೇ ಸುಡಬೇಕಾ ದದ್ದನ್ನು ಸುಡಿರಿ, ಬೇಯಿಸಬೇಕಾದದ್ದನ್ನು ಬೇಯಿಸಿರಿ. ಇದರಲ್ಲಿ ಮಿಕ್ಕಾದದ್ದನ್ನೆಲ್ಲಾ ಬೆಳಗಿನ ವರೆಗೆ ಇಟ್ಟು ಕೊಳ್ಳಿರಿ ಅಂದನು.
- Numbers 15:32–36 ಅರಣ್ಯಕಾಂಡ 15:32–36ಇಸ್ರಾಯೇಲ್ ಮಕ್ಕಳು ಅರಣ್ಯದಲ್ಲಿದ್ದಾಗ ಸಬ್ಬತ್ ದಿನದಲ್ಲಿ ಕಟ್ಟಿಗೆಗಳನ್ನು ಕೂಡಿಸುವ ಮನುಷ್ಯನನ್ನು ಕಂಡರು. ಆಗ ಕಟ್ಟಿಗೆಗಳನ್ನು ಕೂಡಿಸುವದರಲ್ಲಿ ಅವನನ್ನು ಕಂಡುಕೊಂಡವರು ಅವನನ್ನು ಮೋಶೆ ಆರೋನರ ಬಳಿಗೂ ಸಮಸ್ತಸಭೆಗೂ ತಂದು ಅವ ನಿಗೆ ಏನು ಮಾಡಬೇಕೆಂದು ಸ್ಪಷ್ಟವಾಗಿ ತಿಳಿಯದ ಕಾರಣ ಅವನನ್ನು ಕಾವಲಲ್ಲಿ ಹಾಕಿದರು. ಆಗ ಕರ್ತನು ಮೋಶೆಗೆ--ಆ ಮನುಷ್ಯನು ಖಂಡಿತವಾ ಗಿಯೂ ಸಾಯಲೇಬೇಕು; ಸಭೆಯೆಲ್ಲಾ ಪಾಳೆಯದ ಹೊರಗೆ ಅವನನ್ನು ಕಲ್ಲೆಸೆಯಬೇಕು ಎಂದು ಹೇಳಿದನು. ಆಗ ಸಭೆಯೆಲ್ಲಾ ಅವನನ್ನು ಪಾಳೆಯದ ಹೊರಗೆ ತಕ್ಕೊಂಡು ಹೋಗಿ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನು ಸಾಯುವ ಹಾಗೆ ಅವನಿಗೆ ಕಲ್ಲೆಸೆದರು.
- Exodus 12:16 ವಿಮೋಚನಕಾಂಡ 12:16ಇದಲ್ಲದೆ ಮೊದಲನೆಯ ದಿನದಲ್ಲಿ ಪರಿಶುದ್ಧ ಸಭೆಯೂ ಏಳನೆಯ ದಿನದಲ್ಲಿ ಪರಿಶುದ್ಧ ಸಭೆಯೂ ನಿಮಗೆ ಇರಬೇಕು. ಊಟಮಾಡುವದನ್ನು ಬಿಟ್ಟು ಆ ದಿನಗಳಲ್ಲಿ ಯಾವ ತರವಾದ ಕೆಲಸವನ್ನೂ ಮಾಡ ಬಾರದು.
- Isaiah 58:13 ಯೆಶಾಯ 58:13ನೀನು ಸಬ್ಬತ್ತಿನಲ್ಲಿ ನಿನ್ನ ಕಾಲನ್ನು ಹಿಂದೆಗೆದು, ನನ್ನ ಪರಿಶುದ್ಧ ದಿವಸದಲ್ಲಿ ನಿನ್ನ ಇಷ್ಟ ವನ್ನು ಮಾಡದೇ ಹೋದರೆ ಸಬ್ಬತ್ತನ್ನು ಆನಂದಕರ ವಾದದ್ದೆಂದೂ ಕರ್ತನ ಪರಿಶುದ್ಧ ದಿವಸವನ್ನು ಘನವುಳ್ಳದ್ದೆಂದೂ ಕರೆದರೆ, ಸ್ವಂತ ಕೆಲಸಗಳನ್ನು ಮಾಡದೆ ಸ್ವಂತ ಇಷ್ಟವನ್ನು ಕಂಡುಕೊಳ್ಳದೆ, ಸ್ವಂತ ಮಾತುಗಳನ್ನು ಆಡದೆ, ಅದನ್ನು ಘನಪಡಿಸಿದರೆ,ಆಗ ಕರ್ತನಲ್ಲಿ ಆನಂದಗೊಳ್ಳುವಿ; ಭೂಮಿಯ ಎತ್ತರವಾದ ಸ್ಥಳಗಳ ಮೇಲೆ ನಿನ್ನನ್ನು ಹತ್ತಿಸಿ, ನಿನ್ನ ತಂದೆಯಾದ ಯಾಕೋಬನ ಬಾಧ್ಯತೆಯನ್ನು ಅನುಭವಿ ಸುವಂತೆ ನಿನಗೆ ಮಾಡುವೆನು. ಕರ್ತನೇ ಇದನ್ನು ನುಡಿದಿದ್ದಾನೆ.