Skip to content
ThuthiThuthiThuthi
Exodus · chapter 36 of 40 · 38 verses

Exodus 36 in Kannada

ವಿಮೋಚನಕಾಂಡ 36

  1. ತರುವಾಯ ಬೆಚಲೇಲನೂ ಒಹೋಲಿ ಯಾಬನೂ ಪರಿಶುದ್ಧ ಸ್ಥಳದ ಸೇವೆ ಗೋಸ್ಕರ ಎಲ್ಲಾ ವಿಧವಾದ ಕೆಲಸವನ್ನು ಹೇಗೆ ಮಾಡಬೇಕೆಂದು ತಿಳಿಯುವ ಹಾಗೆ ಕರ್ತನಿಂದ ಜ್ಞಾನ ವಿವೇಕಗಳನ್ನು ಹೊಂದಿದ ಹೃದಯದವರೆಲ್ಲರೂ ಕರ್ತನು ಆಜ್ಞಾಪಿಸಿದಂತೆಯೇ ಎಲ್ಲವುಗಳನ್ನು ಮಾಡಿ ದರು. ತರುವಾಯ ಪರಿಶುದ್ಧ ಸ್ಥಳದ ಸೇವೆಗೋಸ್ಕರ ಪ್ರತಿ ವಿಧವಾದ ಕೆಲಸ ಮಾಡುವದನ್ನು ತಿಳುಕೊಳ್ಳುವ ದಕ್ಕಾಗಿ ಆತನು ಜ್ಞಾನ ವಿವೇಕಗಳನ್ನು ಅನುಗ್ರಹಿಸಿದ ಬೆಚಲೇಲನೂ ಒಹೋಲಿಯಾಬನೂ ಜ್ಞಾನ ವಿವೇಕ ವಿದ್ದವರೆಲ್ಲರೂ ಎಲ್ಲವನ್ನೂ ಕರ್ತನು ಆಜ್ಞಾಪಿಸಿದಂತೆ ಮಾಡಿದರು.

    Then wrought Bezaleel and Aholiab, and every wise hearted man, in whom the LORD put wisdom and understanding to know how to work all manner of work for the service of the sanctuary, according to all that the LORD had commanded.

  2. ಬೆಚಲೇಲನನ್ನೂ ಒಹೋಲಿಯಾಬನನ್ನೂ ಕರ್ತನು ಯಾರ ಹೃದಯಗಳಲ್ಲಿ ಜ್ಞಾನವಿಟ್ಟನೋ ಆ ಜ್ಞಾನ ಹೃದಯವಿದ್ದ ಪ್ರತಿಯೊಬ್ಬನನ್ನೂ ಆ ಕೆಲಸ ಮಾಡುವದಕ್ಕೆ ಹೃದಯವು ಪ್ರೇರೇಪಿಸಲ್ಪಟ್ಟ ಪ್ರತಿ ಯೊಬ್ಬನನ್ನೂ ಮೋಶೆಯು ಕರೆದನು.

    And Moses called Bezaleel and Aholiab, and every wise hearted man, in whose heart the LORD had put wisdom, [even] every one whose heart stirred him up to come unto the work to do it:

  3. ಆಗ ಇಸ್ರಾ ಯೇಲ್‌ ಮಕ್ಕಳು ಪರಿಶುದ್ಧ ಆಲಯದ ಸೇವೆಯ ಕೆಲಸಕ್ಕೋಸ್ಕರವೂ ಅದನ್ನು ಮಾಡಿಸುವದಕ್ಕೋಸ್ಕ ರವೂ ತಂದ ಕಾಣಿಕೆಗಳನ್ನೆಲ್ಲಾ ಮೋಶೆಯ ಬಳಿಯಿಂದ ಅವರು ತಕ್ಕೊಂಡರು. ಇದಲ್ಲದೆ ಅವರು ಪ್ರತಿ ಉದಯ ದಲ್ಲಿ ಅವನಿಗೆ ಇನ್ನೂ ಉಚಿತವಾದ ಕಾಣಿಕೆಗಳನ್ನು ತರುತ್ತಿದ್ದರು.

    And they received of Moses all the offering, which the children of Israel had brought for the work of the service of the sanctuary, to make it [withal]. And they brought yet unto him free offerings every morning.

  4. ಆಗ ಪರಿಶುದ್ಧ ಸ್ಥಳದ ಕೆಲಸವನ್ನು ಮಾಡುವ ಜ್ಞಾನಿಗಳೆಲ್ಲರೂ ತಾವು ಮಾಡುತ್ತಿದ್ದ ಕೆಲಸದಿಂದ ಬಂದು

    And all the wise men, that wrought all the work of the sanctuary, came every man from his work which they made;

  5. ಮೋಶೆಯ ಸಂಗಡ ಮಾತನಾಡಿ ಕರ್ತನು ಮಾಡಬೇಕೆಂದು ಆಜ್ಞಾಪಿಸಿದ ಸೇವೆಯ ಕೆಲಸಕ್ಕೆ ಬೇಕಾಗಿರುವದಕ್ಕಿಂತಲೂ ಹೆಚ್ಚಾದದ್ದನ್ನು ಈ ಜನರು ತರುತ್ತಿದ್ದಾರೆ ಎಂದು ಹೇಳಿದರು.

    And they spake unto Moses, saying, The people bring much more than enough for the service of the work, which the LORD commanded to make.

  6. ಆಗ ಮೋಶೆಯು ಇನ್ನು ಮೇಲೆ ಪರಿಶುದ್ಧ ಸ್ಥಳದ ಕಾಣಿಕೆ ಗೋಸ್ಕರ ಯಾವ ಗಂಡಸಾಗಲಿ ಹೆಂಗಸಾಗಲಿ ಕೆಲಸ ಮಾಡಬಾರದೆಂದು ಪಾಳೆಯದಲ್ಲೆಲ್ಲಾ ಪ್ರಕಟಿಸ ಬೇಕೆಂಬದಾಗಿ ಆಜ್ಞಾಪಿಸಬೇಕು ಎಂದು ಹೇಳಿದನು. ಹೀಗೆ ಜನರು ತರುವದನ್ನು ನಿಲ್ಲಿಸಿಬಿಟ್ಟರು.

    And Moses gave commandment, and they caused it to be proclaimed throughout the camp, saying, Let neither man nor woman make any more work for the offering of the sanctuary. So the people were restrained from bringing.

  7. ಅವರಿಗೆ ಎಲ್ಲಾ ಕೆಲಸವನ್ನು ಮಾಡುವದಕ್ಕೆ ಸಾಕಾಗಿ ಮಿಕ್ಕುವಷ್ಟು ಸಾಮಾನು ಇತ್ತು.

    For the stuff they had was sufficient for all the work to make it, and too much.

  8. ಹೀಗಿರಲಾಗಿ ಕೆಲಸದವರಲ್ಲಿ ಜ್ಞಾನ ಹೃದಯವುಳ್ಳ ಪ್ರತಿಯೊಬ್ಬನೂ ಗುಡಾರವನ್ನು ಹತ್ತು ತೆರೆಗಳಿಂದ ಮಾಡಿ ಹೊಸೆದ ನಾರಿನಿಂದಲೂ ನೀಲಿ, ಧೂಮ್ರ, ರಕ್ತವರ್ಣದ ಹೊಸೆದ ನಯವಾದ ನೂಲಿನಿಂದಲೂ ಕೌಶಲ್ಯದ ಕೆಲಸದಿಂದಲೂ ಕೆರೂಬಿಗಳನ್ನು ಮಾಡಿ ದನು.

    And every wise hearted man among them that wrought the work of the tabernacle made ten curtains [of] fine twined linen, and blue, and purple, and scarlet: [with] cherubims of cunning work made he them.

  9. ಒಂದು ತೆರೆಯು ಇಪ್ಪತ್ತೆಂಟು ಮೊಳ ಉದ್ದ ವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇತ್ತು. ತೆರೆಗಳೆಲ್ಲಾ ಒಂದೇ ಅಳತೆಯವುಗಳಾಗಿದ್ದವು.

    The length of one curtain [was] twenty and eight cubits, and the breadth of one curtain four cubits: the curtains [were] all of one size.

  10. ಅವನು ಐದು ತೆರೆಗಳನ್ನು ಒಂದಕ್ಕೊಂದು ಜೋಡಿ ಸಿದನು, ಬೇರೆ ಐದು ತೆರೆಗಳನ್ನೂ ಒಂದಕ್ಕೊಂದು ಜೋಡಿಸಿದನು.

    And he coupled the five curtains one unto another: and [the other] five curtains he coupled one unto another.

  11. ಈ ಎರಡು ಜೋಡನೆಗಳಲ್ಲಿ ಒಂದೊಂದರ ಕೊನೇ ಬಟ್ಟೆಯ ಅಂಚಿನಲ್ಲಿ ನೀಲಿ ದಾರದಿಂದ ಕುಣಿಕೆಗಳನ್ನು ಮಾಡಿದರು;

    And he made loops of blue on the edge of one curtain from the selvedge in the coupling: likewise he made in the uttermost side of [another] curtain, in the coupling of the second.

  12. ಒಂದು ತೆರೆಯಲ್ಲಿ ಐವತ್ತು ಕುಣಿಕೆಗಳನ್ನು ಮಾಡಿ ಇನ್ನೊಂದು ತೆರೆಯ ಅಂಚನ್ನು ಜೋಡಿಸುವ ಸ್ಥಳದಲ್ಲಿ ಐವತ್ತು ಕುಣಿಕೆಗಳನ್ನು ಮಾಡಿದನು. ಆ ಕುಣಿಕೆಗಳು ಒಂದು ತೆರೆಯನ್ನು ಮತ್ತೊಂದು ತೆರೆಯು ಹಿಡಿದುಕೊಳ್ಳುವಂತೆ ಮಾಡಿದನು.

    Fifty loops made he in one curtain, and fifty loops made he in the edge of the curtain which [was] in the coupling of the second: the loops held one [curtain] to another.

  13. ಅವನು ಚಿನ್ನದ ಐವತ್ತು ಕೊಂಡಿಗಳನ್ನು ಮಾಡಿ ಆ ಕೊಂಡಿಗಳಿಂದ ತೆರೆಗಳನ್ನು ಒಂದ ಕ್ಕೊಂದಾಗಿ ಜೋಡಿಸಿದನು. ಹೀಗೆ ಅದು ಒಂದೇ ಗುಡಾರವಾಯಿತು.

    And he made fifty taches of gold, and coupled the curtains one unto another with the taches: so it became one tabernacle.

  14. ಈ ಗುಡಾರದ ಮೇಲಿನ ಡೇರೆಗೋಸ್ಕರ ಅವನು ಮೇಕೆಯ ಕೂದಲಿನ ಹನ್ನೊಂದು ತೆರೆಗಳನ್ನು ಮಾಡಿ ಸಿದನು.

    And he made curtains [of] goats’ [hair] for the tent over the tabernacle: eleven curtains he made them.

  15. ಒಂದು ತೆರೆಯು ಮೂವತ್ತು ಮೊಳ ಉದ್ದ ವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇತ್ತು. ಹನ್ನೊಂದು ತೆರೆಗಳೂ ಒಂದೇ ಅಳತೆಯಾಗಿದ್ದವು.

    The length of one curtain [was] thirty cubits, and four cubits [was] the breadth of one curtain: the eleven curtains [were] of one size.

  16. ಅವನು ಐದು ತೆರೆಗಳನ್ನು ಬೇರೆಯಾಗಿಯೂ ಆರು ತೆರೆಗಳನ್ನು ಬೇರೆಯಾಗಿಯೂ ಜೋಡಿಸಿದನು.

    And he coupled five curtains by themselves, and six curtains by themselves.

  17. ಅವನು ತೆರೆಯ ಕೊನೇ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನೂ ಎರಡನೆಯ ತೆರೆಯನ್ನು ಜೋಡಿಸುವ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನೂ ಮಾಡಿದನು.

    And he made fifty loops upon the uttermost edge of the curtain in the coupling, and fifty loops made he upon the edge of the curtain which coupleth the second.

  18. ಅದು ಒಂದೇ ಡೇರೆ ಆಗುವಂತೆ ಅವುಗಳ ಜೋಡ ಣೆಗೆ ಅವನು ಐವತ್ತು ಹಿತ್ತಾಳೆಯ ಕೊಂಡಿಗಳನ್ನು ಮಾಡಿದನು.

    And he made fifty taches [of] brass to couple the tent together, that it might be one.

  19. ಅವನು ಆ ಡೇರೆಗಾಗಿ ಕೆಂಪು ಬಣ್ಣದಲ್ಲಿ ಅದ್ದಿ ತೆಗೆದ ಟಗರುಗಳ ಚರ್ಮದ ಹೊದಿಕೆಯನ್ನು ಮಾಡಿದನು. ಅದರ ಮೇಲೆ ಕಡಲ ಹಂದಿಯ ಚರ್ಮದ ಮೇಲ್ಹೊದಿಕೆಯನ್ನು ಮಾಡಿದನು.

    And he made a covering for the tent [of] rams’ skins dyed red, and a covering [of] badgers’ skins above [that].

  20. ಗುಡಾರವು ನಿಂತುಕೊಂಡಿರುವದಕ್ಕೆ ಅವನು ಜಾಲೀ ಮರದಿಂದ ಹಲಗೆಗಳನ್ನು ಮಾಡಿದನು.

    And he made boards for the tabernacle [of] shittim wood, standing up.

  21. ಒಂದು ಹಲಗೆಯ ಉದ್ದಳತೆ ಹತ್ತು ಮೊಳದ್ದಾಗಿಯೂಆ ಹಲಗೆಯ ಅಗಲಳತೆ ಒಂದುವರೆ ಮೊಳದ್ದಾಗಿಯೂ ಇತ್ತು.

    The length of a board [was] ten cubits, and the breadth of a board one cubit and a half.

  22. ಒಂದು ಹಲಗೆಗೆ ಒಂದಕ್ಕೊಂದು ಸರಿಯಾದ ಅಂತರದಲ್ಲಿ ಎರಡು ಕೈಗಳನ್ನು ಮಾಡಿದನು; ಅದೇ ಪ್ರಕಾರ ಅವನು ಗುಡಾರದ ಎಲ್ಲಾ ಹಲಗೆಗಳಿಗೆ ಮಾಡಿದನು.

    One board had two tenons, equally distant one from another: thus did he make for all the boards of the tabernacle.

  23. ಅವನು ಗುಡಾರಕ್ಕೋಸ್ಕರ ಹಲಗೆ ಗಳನ್ನು ಮಾಡಿದನು. ದಕ್ಷಿಣ ದಿಕ್ಕಿಗೆ ದಕ್ಷಿಣಭಾಗಕ್ಕೆ ಇಪ್ಪತ್ತು ಹಲಗೆಗಳನ್ನು ಮಾಡಿದನು.

    And he made boards for the tabernacle; twenty boards for the south side southward:

  24. ಅವನು ಇಪ್ಪತ್ತು ಹಲಗೆಗಳ ಕೆಳಗೆ ನಾಲ್ವತ್ತು ಬೆಳ್ಳಿಯ ಕಾಲುಗಳನ್ನು ಮಾಡಿದನು; ಒಂದು ಹಲಗೆಯ ಕೆಳಗೆ ಇರುವ ಎರಡು ಕೈಗಳಿಗೋಸ್ಕರ ಎರಡು ಕಾಲುಗಳನ್ನೂ ಇನ್ನೊಂದು ಹಲಗೆಯ ಕೆಳಗೆ ಇರುವ ಎರಡು ಕೈಗಳಿಗೋಸ್ಕರ ಎರಡು ಕಾಲುಗಳನ್ನೂ

    And forty sockets of silver he made under the twenty boards; two sockets under one board for his two tenons, and two sockets under another board for his two tenons.

  25. ಗುಡಾರದ ಉತ್ತರ ದಿಕ್ಕಿನ ಮೂಲೆಯ ಇನ್ನೊಂದು ಭಾಗಕ್ಕೆ ಅವನು ಇಪ್ಪತ್ತು ಹಲಗೆಗಳನ್ನೂ ಮಾಡಿದನು.

    And for the other side of the tabernacle, [which is] toward the north corner, he made twenty boards,

  26. ಒಂದೊಂದು ಹಲಗೆಯ ಕೆಳಗೆ ಎರಡೆರಡಾಗಿ ನಾಲ್ವತ್ತು ಬೆಳ್ಳಿಯ ಕಾಲುಗಳನ್ನು ಮಾಡಿದನು.

    And their forty sockets of silver; two sockets under one board, and two sockets under another board.

  27. ಗುಡಾರದ ಪಶ್ಚಿಮ ಭಾಗದ ಮಗ್ಗಲುಗಳಿಗೆ ಆರು ಹಲಗೆಗಳನ್ನು ಮಾಡಿ ದನು.

    And for the sides of the tabernacle westward he made six boards.

  28. ಅವನು ಗುಡಾರದ ಎರಡು ಪಾರ್ಶ್ವಗಳಲ್ಲಿ ರುವ ಮೂಲೆಗಳಿಗೆ ಎರಡು ಹಲಗೆಗಳನ್ನು ಮಾಡಿದನು.

    And two boards made he for the corners of the tabernacle in the two sides.

  29. ಅವುಗಳು ಅಡಿಯಲ್ಲಿಯೂ ಮೇಲ್ಗಡೆಯಲ್ಲಿಯೂ ಒಂದೇ ಉಂಗುರದಿಂದ ಜೋಡಿಸಲ್ಪಟ್ಟವು. ಇದೇ ರೀತಿಯಲ್ಲಿ ಅವನು ಎರಡೂ ಮೂಲೆಗಳಲ್ಲಿರುವ ಎರಡಕ್ಕೂ ಮಾಡಿದನು.

    And they were coupled beneath, and coupled together at the head thereof, to one ring: thus he did to both of them in both the corners.

  30. ಇಂಥ ಎಂಟು ಹಲಗೆ ಗಳಿದ್ದವು; ಪ್ರತಿಯೊಂದು ಹಲಗೆಯ ಕೆಳಗೆ ಎರಡೆರಡು ಕಾಲುಗಳಂತೆ ಅವುಗಳಿಗೆ ಹದಿನಾರು ಬೆಳ್ಳಿಯ ಕಾಲು ಗಳಿದ್ದವು.

    And there were eight boards; and their sockets [were] sixteen sockets of silver, under every board two sockets.

  31. ಅವನು ಜಾಲೀ ಮರದ ಅಗುಳಿಗಳನ್ನು ಮಾಡಿದನು; ಗುಡಾರದ ಒಂದು ಭಾಗದ ಹಲಗೆಗಳಿಗೆ ಐದು ಅಗುಳಿಗಳು,

    And he made bars of shittim wood; five for the boards of the one side of the tabernacle,

  32. ಗುಡಾರದ ಇನ್ನೊಂದು ಭಾಗದ ಹಲಗೆಗಳಿಗೆ ಐದು ಅಗುಳಿಗಳು, ಗುಡಾರದ ಪಶ್ಚಿಮ ಭಾಗಗಳಲ್ಲಿರುವ ಹಲಗೆಗಳಿಗೆ ಐದು ಅಗುಳಿಗಳನ್ನು ಮಾಡಿದನು.

    And five bars for the boards of the other side of the tabernacle, and five bars for the boards of the tabernacle for the sides westward.

  33. ಮಧ್ಯದ ಅಗುಳಿಯು ಹಲಗೆಗಳ ನಡುವೆ ಒಂದು ಬದಿಯಿಂದ ಇನ್ನೊಂದು ಬದಿಯ ವರೆಗೆ ಹಾದು ಹೋಗುವ ಹಾಗೆ ಮಾಡಿದನು.

    And he made the middle bar to shoot through the boards from the one end to the other.

  34. ಆ ಹಲಗೆಗಳನ್ನು ಚಿನ್ನದಿಂದ ಹೊದಿಸಿ ಅಗುಳಿಗಳಿಗೆ ಬಳೆಗಳಾಗಿರುವ ಉಂಗುರಗಳನ್ನು ಚಿನ್ನದಿಂದ ಮಾಡಿ ಅಗುಳಿಗಳನ್ನು ಚಿನ್ನದಿಂದ ಹೊದಿಸಿದನು.

    And he overlaid the boards with gold, and made their rings [of] gold [to be] places for the bars, and overlaid the bars with gold.

  35. ನೀಲಿ, ಧೂಮ್ರ, ರಕ್ತವರ್ಣ, ನಯವಾಗಿ ಹೊಸೆದ ನಾರುಗಳಿಂದ ತೆರೆಯನ್ನು ಮಾಡಿದನು. ಅದರ ಮೇಲೆ ಕುಶಲ ಕೆಲಸದಿಂದ ಕೆರೂಬಿಗಳನ್ನು ಮಾಡಿದನು.

    And he made a vail [of] blue, and purple, and scarlet, and fine twined linen: [with] cherubims made he it of cunning work.

  36. ಇದಲ್ಲದೆ ಜಾಲೀ ಮರದ ನಾಲ್ಕು ಸ್ತಂಭಗಳನ್ನು ಮಾಡಿ ಚಿನ್ನದಿಂದ ಅವುಗಳನ್ನು ಹೊದಿಸಿ ದನು. ಅವುಗಳ ಮೊಳೆಗಳು ಚಿನ್ನದವುಗಳಾಗಿದ್ದವು; ಅವನು ಅವುಗಳಿಗೆ ಬೆಳ್ಳಿಯ ನಾಲ್ಕು ಕಾಲುಗಳನ್ನು ಎರಕಹೊಯ್ದನು.

    And he made thereunto four pillars [of] shittim [wood], and overlaid them with gold: their hooks [were of] gold; and he cast for them four sockets of silver.

  37. ಬಾಗಲಿಗೆ ನೀಲಿ, ಧೂಮ್ರ, ರಕ್ತವರ್ಣದ ಹೊಸೆದ ನಯವಾದ ನಾರುಗಳಿಂದ ಕಸೂತಿ ಹಾಕಿ ತೆರೆಯನ್ನು ಮಾಡಿದನು;ಕೊಂಡಿ ಇರುವ ಐದು ಕಂಬಗಳನ್ನು ಮಾಡಿ ಅವುಗಳ ತಲೆಗಳನ್ನೂ ಕಂಬ ಗಳನ್ನೂ ಚಿನ್ನದಿಂದ ಹೊದಿಸಿದನು. ಆದರೆ ಅವುಗಳ ಐದು ಕಾಲುಗಳು ಹಿತ್ತಾಳೆಯದ್ದಾಗಿದ್ದವು.

    And he made an hanging for the tabernacle door [of] blue, and purple, and scarlet, and fine twined linen, of needlework;

  38. ಕೊಂಡಿ ಇರುವ ಐದು ಕಂಬಗಳನ್ನು ಮಾಡಿ ಅವುಗಳ ತಲೆಗಳನ್ನೂ ಕಂಬ ಗಳನ್ನೂ ಚಿನ್ನದಿಂದ ಹೊದಿಸಿದನು. ಆದರೆ ಅವುಗಳ ಐದು ಕಾಲುಗಳು ಹಿತ್ತಾಳೆಯದ್ದಾಗಿದ್ದವು.

    And the five pillars of it with their hooks: and he overlaid their chapiters and their fillets with gold: but their five sockets [were of] brass.

All chapters of Exodus · Kannada Bible · Exodus 36 in Tamil

Kannada Bible: Kannada Old Version, public domain.

King James Version: public domain.