Exodus · chapter 37 · verse 9
Exodus 37:9 in Kannada
ಆ ಕೆರೂಬಿ ಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಹರಡಿಕೊಂಡು ಕರುಣಾಸನವನ್ನು ಮುಚ್ಚಿದಂತಿದ್ದವು, ಆ ಕೆರೂಬಿಯರ ಮುಖಗಳು ಒಂದನ್ನೊಂದು ನೋಡುತ್ತಿರುವಂತೆಯೂ ಕರುಣಾಸನವನ್ನು ನೋಡುತ್ತಿರುವಂತೆಯೂ ಇದ್ದವು.
Aa keroobi galu tamma rekkegalannu melakke haradikondu karunaasanavannu muchchidantiddavu, aa keroobiyara mukhagalu ondannondu noduttiruvanteyoo karunaasanavannu noduttiruvanteyoo iddavu.
Exodus 37:9 in English
- King James Version (KJV)
- And the cherubims spread out [their] wings on high, [and] covered with their wings over the mercy seat, with their faces one to another; [even] to the mercy seatward were the faces of the cherubims.
- World English Bible (WEB)
- The cherubim spread out their wings above, covering the mercy seat with their wings, with their faces toward one another. The faces of the cherubim were toward the mercy seat.
- American Standard Version (ASV)
- And the cherubim spread out their wings on high, covering the mercy-seat with their wings, with their faces one to another; toward the mercy-seat were the faces of the cherubim.
- Bible in Basic English (BBE)
- And their wings were stretched out over the cover; the faces of the winged ones were opposite one another and facing the cover.
- Darby Translation (DBY)
- And the cherubim spread out [their] wings over it, covering over with their wings the mercy-seat; and their faces were opposite to one another: the faces of the cherubim were [turned] toward the mercy-seat.
- Webster's Bible (WBS)
- And the cherubim spread out [their] wings on high, [and] covered with their wings over the mercy-seat, with their faces one to another; [even] towards the mercy-seat were the faces of the cherubim.
- Young's Literal Translation (YLT)
- and the cherubs are spreading out wings on high, covering over the mercy-seat with their wings, and their faces [are] one towards another; towards the mercy-seat have the faces of the cherubs been.
Read in context
- 7ಅವನು ಕರುಣಾಸನದ ಎರಡು ತುದಿಗಳಲ್ಲಿ ಎರಡು ಚಿನ್ನದ ಕೆರೂಬಿಗಳನ್ನು ಮಾಡಿದನು. ಅವು ಒಂದೇ ತುಂಡಿನಲ್ಲಿ ಹೊಡೆದು ಮಾಡಿದ್ದಾಗಿದ್ದವು.
- 8ಒಂದು ಬದಿಯ ಕೊನೆಯಲ್ಲಿ ಒಂದು ಕೆರೂಬಿಯನ್ನು ಇನ್ನೊಂದು ಬದಿಯ ಕೊನೆಯಲ್ಲಿ ಇನ್ನೊಂದು ಕೆರೂಬಿ ಯನ್ನು ಮಾಡಿದನು. ಹೀಗೆ ಕರುಣಾಸನದ ಎರಡೂ ಬದಿಗಳಲ್ಲಿ ಕೆರೂಬಿಯರನ್ನು ಮಾಡಿದನು.
- 9ಆ ಕೆರೂಬಿ ಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಹರಡಿಕೊಂಡು ಕರುಣಾಸನವನ್ನು ಮುಚ್ಚಿದಂತಿದ್ದವು, ಆ ಕೆರೂಬಿಯರ ಮುಖಗಳು ಒಂದನ್ನೊಂದು ನೋಡುತ್ತಿರುವಂತೆಯೂ ಕರುಣಾಸನವನ್ನು ನೋಡುತ್ತಿರುವಂತೆಯೂ ಇದ್ದವು.
- 10ಅವನು ಜಾಲೀ ಮರದಿಂದ ಒಂದು ಮೇಜನ್ನು ಮಾಡಿದನು; ಅದು ಎರಡು ಮೊಳ ಉದ್ದವೂ ಒಂದು ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಆಗಿತ್ತು.
- 11ಅವನು ಅದನ್ನು ಚೊಕ್ಕ ಬಂಗಾರದಿಂದ ಹೊದಿಸಿ ಅದರ ಸುತ್ತಲೂ ಚಿನ್ನದ ಕೀರೀಟವನ್ನು ಮಾಡಿದನು.
Cross references
- 1 Peter 1:12 1 ಪೇತ್ರನು 1:12ಪರಲೋಕದಿಂದ ಕಳುಹಿಸಲ್ಪಟ್ಟ ಪರಿಶುದ್ಧಾತ್ಮನಿಂದ ನಿಮಗೆ ಸುವಾರ್ತೆಯನ್ನು ಸಾರಿದವರು ಈಗ ನಿಮಗೆ ತಿಳಿಸುವಂಥ ಮತ್ತು ದೂತರು ಕಣ್ಣಿಟ್ಟು ನೋಡಬೇಕೆಂದು ಅಪೇಕ್ಷಿಸುವಂಥ ಕಾರ್ಯಗಳಲ್ಲಿ ತಮಗೋಸ್ಕರವಲ್ಲ ನಮಗೋಸ್ಕರವೇ ಸೇವೆ ಮಾಡಿದರೆಂದು ಅವರಿಗೆ ಪ್ರಕಟವಾಯಿತು.
- Hebrews 1:14 ಇಬ್ರಿಯರಿಗೆ 1:14ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿ ಸಲ್ಪಟ್ಟ ಊಳಿಗದ ಆತ್ಮಗಳಲ್ಲವೋ?
- Genesis 28:12 ಆದಿಕಾಂಡ 28:12ಆಗ ಅವನು ಕನಸು ಕಂಡನು. ಇಗೋ, ಏಣಿಯು ಭೂಮಿಯ ಮೇಲೆ ನಿಲ್ಲಿಸಲ್ಪಟ್ಟಿತ್ತು. ಅದರ ತುದಿಯು ಆಕಾಶಕ್ಕೆ ಮುಟ್ಟಿತ್ತು. ಇಗೋ, ದೇವದೂತರು ಅದರ ಮೇಲೆ ಏರುತ್ತಾ ಇಳಿಯುತ್ತಾ ಇದ್ದರು.
- 1 Timothy 3:16 1 ತಿಮೊಥೆಯನಿಗೆ 3:16ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ
- Genesis 3:24 ಆದಿಕಾಂಡ 3:24ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವದಕ್ಕೆ ಏದೆನ್ ತೋಟದ ಪೂರ್ವದಿಕ್ಕಿನಲ್ಲಿ ಕೆರೂಬಿಯರನ್ನೂ ಎಲ್ಲಾ ಕಡೆಯಲ್ಲಿ ಸುತ್ತುವ ಜ್ವಾಲೆಯ ಕತ್ತಿಯನ್ನೂ ಇರಿಸಿದನು.
- Isaiah 6:2 ಯೆಶಾಯ 6:2ಅದರ ಮೇಲೆ ಸೆರಾಫಿಯರು ನಿಂತಿದ್ದರು! ಪ್ರತಿಯೊಬ್ಬನಿಗೂ ಆರು ರೆಕ್ಕೆಗಳಿದ್ದವು, ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು, ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದನು.
- Ezekiel 10:1–22 ಯೆಹೆಜ್ಕೇಲನು 10:1–22ಆಗ ನಾನು ನೋಡಲಾಗಿ ಇಗೋ,ಕೆರೂಬಿಯರ ತಲೆಯ ಮೇಲಿದ್ದ ವಿಶಾಲ ವಾದ ಆಕಾಶದಲ್ಲಿ ಅವರ ಮೇಲೆ ನೀಲಮಣಿಯಂತೆ ಸಿಂಹಾಸನಾಕಾರದಂತಿರುವ ರೂಪವು ತೋರಿತು. ಆತನು ನಾರುಮಡಿಯನ್ನು ಧರಿಸಿ ಕೊಂಡಿದ್ದ ಮನುಷ್ಯನಿಗೆ ಹೇಳಿದ್ದೇನಂದರೆ--ನೀನು ಕೆರೂಬಿಗಳ ಕೆಳಗೆ ಇರುವ ಚಕ್ರಗಳ ನಡುವೆ ಪ್ರವೇಶಿಸಿ, ಕೆರೂಬಿಗಳ ನಡುವೆ ಇರುವ ಉರಿಕೆಂಡಗಳ ತಳದಲಿ ನಿನ್ನ ಕೈತುಂಬ ಎತ್ತಿ ಅದನ್ನು ಪಟ್ಟಣದ ಮೇಲೆ ಚೆಲ್ಲು ಅಂದನು. ಹಾಗೆಯೇ ನಾನು ಕಂಡಂತೆ ಒಳಗೆ ಪ್ರವೇಶಿಸಿದನು. ಆ ಮನುಷ್ಯನು ಒಳಗೆ ಹೋಗು ವಾಗ ಕೆರೂಬಿಯರು ಆಲಯದ ಬಳಿಯಲ್ಲಿ ನಿಂತಿ ದ್ದರು. ಮೇಘವು ಒಳಗಿನ ಅಂಗಳವನ್ನು ತುಂಬಿಸಿ ಕೊಂಡಿತ್ತು. ಆಗ ಕರ್ತನ ಮಹಿಮೆಯು ಕೆರೂಬಿಗಳನ್ನು ಬಿಟ್ಟು ಮೇಲಕ್ಕೆ ಹೋಗಿ ಆಲಯದ ಹೊಸ್ತಿಲಲ್ಲಿ ನಿಂತಿತು, ಆಲಯವು ಮೇಘದಿಂದ ತುಂಬಿತ್ತು. ಆಗ ಕರ್ತನ ಮಹಿಮೆಯ ಪ್ರಕಾಶವು ಅಂಗಳದಲ್ಲಿ ತುಂಬಿತ್ತು. ಕೆರೂಬಿಗಳ ರೆಕ್ಕೆಗಳ ಶಬ್ದವು ಮಾತನಾಡುವ ಸರ್ವಶಕ್ತನ ದೇವರ ಹಾಗೆ ಹೊರಗಣ ಅಂಗಳದ ವರೆಗೂ ಕೇಳಿಬಂತು. ಆತನು ನಾರು ಮಡಿಯನ್ನು ಧರಿಸಿಕೊಂಡ ಮನುಷ್ಯನಿಗೆ--ಚಕ್ರಗಳ ಮಧ್ಯದಿಂದಲೂ ಕೆರೂಬಿಯರ ಮಧ್ಯದಿಂದಲೂ ಬೆಂಕಿ ಯನ್ನು ತೆಗೆದುಕೊಳ್ಳಲು ಆಜ್ಞಾಪಿಸಿದನು. ಅವನು ಒಳಗೆ ಹೋಗಿ ಚಕ್ರಗಳ ಬಳಿಯಲ್ಲಿ ನಿಂತನು. ಒಬ್ಬ ಕೆರೂಬಿಯನು ಕೆರೂಬಿಯರ ಮಧ್ಯದೊಳಗಿಂದ ತನ್ನ ಕೈಯನ್ನು ಕೆರೂಬಿಯರ ಮಧ್ಯದೊಳಗಿರುವ ಬೆಂಕಿಗೆ ಚಾಚಿ, ತಕ್ಕೊಂಡು ನಾರುಮಡಿಯನ್ನು ಧರಿಸಿಕೊಂಡಿ ದ್ದವನ ಕೈಗೆ ಇಟ್ಟನು. ಇವನು ಅದನ್ನು ತೆಗೆದುಕೊಂಡು ಹೊರಗೆ ಹೋದನು. ಕೆರೂಬಿಯರಲ್ಲಿ ಅವರ ರೆಕ್ಕೆ ಗಳ ಕೆಳಗೆ ಮನುಷ್ಯನ ಕೈಗೆ ಸಮಾನವಾದದ್ದು ಕಂಡುಬಂತು. ನಾನು ನೋಡಿದಾಗ ಇಗೋ, ಒಬ್ಬೊಬ್ಬ ಕೆರೂ ಬಿಯನ ಬಳಿಯಲ್ಲಿ ಒಂದು ಚಕ್ರ, ಈ ಪ್ರಕಾರ ಕೆರೂಬಿಯರ ಬಳಿಯಲ್ಲಿ ನಾಲ್ಕು ಚಕ್ರಗಳಿದ್ದವು; ಆ ಚಕ್ರಗಳ ವರ್ಣವು ಪೀತರತ್ನದ ಹಾಗೆ ಇತ್ತು. ಅವುಗಳ ಆಕಾರವು ನಾಲ್ಕಕ್ಕೂ ಒಂದೇ ರೂಪ ವಿತ್ತು; ಚಕ್ರದಲ್ಲಿ ಚಕ್ರವು ಇದ್ದ ಹಾಗೆ ಇದ್ದವು. ಅವು ಹೋಗುತ್ತಿರುವಾಗ ಅವುಗಳು ನಾಲ್ಕು ಕಡೆಗಳಲ್ಲೂ ಹೋಗುತ್ತಿದ್ದವು. ಹೋಗುವಾಗ ತಿರುಗಿ ಕೊಳ್ಳಲಿಲ್ಲ. ಆದರೆ ಅವುಗಳ ತಲೆ ಯಾವ ಸ್ಥಳವನ್ನು ನೋಡುತ್ತಿತ್ತೋ ಅಲ್ಲಿಗೆ ಅದರ ಹಿಂದೆಯೇ ಹೋದವು, ಹೋಗುವಾಗ ತಿರುಗಲಿಲ್ಲ. ಅವುಗಳ ಪೂರ್ತಿ ದೇಹವು, ಬೆನ್ನುಗಳು, ಕೈಗಳು, ರೆಕ್ಕೆಗಳು, ಮತ್ತು ಚಕ್ರಗಳು, ಇವುಗಳಿಗೆ ಸುತ್ತಲೂ ಕಣ್ಣುಗಳು ಇದ್ದವು. ಅಲ್ಲಿ ನಾಲ್ಕೂ ಚಕ್ರಗಳ ಮೇಲೂ ಇದ್ದವು. ಚಕ್ರಗಳೋ ಅವುಗಳಿಗೆ ನಾನು ಕೇಳುವ ಹಾಗೆ ಓ ಚಕ್ರಗಳೇ ಎಂದು ಕೂಗಲ್ಪಟ್ಟಿತು. ಒಬ್ಬೊಬ್ಬ ನಿಗೆ ನಾಲ್ಕು ಮುಖಗಳಿದ್ದವು, ಮೊದಲನೆಯ ಮುಖವು ಕೆರೂಬಿಯನ ಮುಖ, ಎರಡನೆಯ ಮುಖವು ಮನು ಷ್ಯನ ಮುಖ ಮೂರನೆಯದು ಸಿಂಹದ ಮುಖ ಮತ್ತು ನಾಲ್ಕನೆಯದು ಹದ್ದಿನ ಮುಖಗಳಾಗಿದ್ದವು. ಆಗ ಕೆರೂಬಿಯರು ಮೇಲಕ್ಕೆತ್ತಲ್ಪಟ್ಟರು. ನಾನು ಕೆಬಾರ್ ನದಿಯ ಬಳಿಯಲ್ಲಿ ನೋಡಿದ ಜೀವಿಯು ಇದೇ. ಕೆರೂಬಿಯರು ಹೋದಾಗ, ಚಕ್ರಗಳು ಅವರ ಸಂಗಡ ಹೋದವು. ಕೆರೂಬಿಯರು ಭೂಮಿಯನ್ನು ಬಿಟ್ಟು ಮೇಲೇರುವಾಗ ತಮ್ಮ ರೆಕ್ಕೆಗಳನ್ನು ಚಾಚಿದಾಗ, ಅವರ ಚಕ್ರಗಳು ಪಕ್ಕಕ್ಕೆ ತಿರುಗಲಿಲ್ಲ. ಅವು ನಿಂತಾಗ ಇವೂ ನಿಂತವು. ಅವು ಎತ್ತಲ್ಪಟ್ಟಾಗ ಇವೂ ಅವುಗಳ ಸಂಗಡ ಎತ್ತಲ್ಪಟ್ಟವು; ಯಾಕಂದರೆ ಇವುಗಳಲ್ಲಿ ಆ ಜೀವಿಗಳ ಆತ್ಮವು ಇತ್ತು. ಆಗ ಕರ್ತನ ಮಹಿಮೆಯು ಆಲಯದ ಹೊಸ್ತಿಲನ್ನು ಬಿಟ್ಟು ಕೆರೂಬಿಯರ ಮೇಲೆ ನಿಂತಿತು. ಕೆರೂಬಿಯರು ತಮ್ಮ ರೆಕ್ಕೆಗಳನ್ನು ಎತ್ತಿ ಕೊಂಡು ನಾನು ನೋಡುವಾಗಲೇ ಭೂಮಿಯನ್ನು ಬಿಟ್ಟು ಮೇಲೆಕ್ಕೇರಿ ಹೋದರು. ಅವು ಹೊರಟಾಗ ಚಕ್ರಗಳೂ ಅವರ ಸಂಗಡ ಇದ್ದವು, ಅವರು ಕರ್ತನ ಆಲಯದ ಮೂಡಣ ಬಾಗಲಿನ ದ್ವಾರದ ಬಳಿಯಲ್ಲಿ ನಿಂತಿದ್ದರು. ಮತ್ತು ಇಸ್ರಾಯೇಲಿನ ದೇವರ ಮಹಿ ಮೆಯು ಅವರ ಮೇಲೆ ಇತ್ತು. ಕೆಬಾರ್ ನದಿಯ ಬಳಿಯಲ್ಲಿ ನಾನು ನೋಡಿದ ಜೀವಿಯು ಇದೇ. ಅವು ಕೆರೂಬಿಯರೆಂದು ತಿಳಿದುಕೊಂಡೆನು. ಪ್ರತಿಯೊಬ್ಬ ನಿಗೂ ನಾಲ್ಕು ಮುಖಗಳು ಮತ್ತು ನಾಲ್ಕು ರೆಕ್ಕೆಗಳು ಇದ್ದವು, ಅವರ ರೆಕ್ಕೆಗಳ ಕೆಳಗೆ ಮನುಷ್ಯರ ಕೈಗಳ ರೂಪವಿತ್ತು;ಅವುಗಳ ಮುಖಗಳ ರೂಪವು ನಾನು ಕೆಬಾರ್ ನದಿಯ ಬಳಿಯಲ್ಲಿ ನೋಡಿದ ಆ ಮುಖಗಳ ಹಾಗೆ ಇತ್ತು. ಅವರ ಆಕಾರವೂ ಅವರೂ ಹಾಗೆಯೇ ಇದ್ದರು. ಅವರಲ್ಲಿ ಪ್ರತಿಯೊಬ್ಬರೂ ನೇರವಾಗಿ ಹೋಗುತ್ತಿದ್ದರು. ಅವುಗಳ ಮುಖಗಳ ರೂಪವು ನಾನು ಕೆಬಾರ್ ನದಿಯ ಬಳಿಯಲ್ಲಿ ನೋಡಿದ ಆ ಮುಖಗಳ ಹಾಗೆ ಇತ್ತು. ಅವರ ಆಕಾರವೂ ಅವರೂ ಹಾಗೆಯೇ ಇದ್ದರು. ಅವರಲ್ಲಿ ಪ್ರತಿಯೊಬ್ಬರೂ ನೇರವಾಗಿ ಹೋಗುತ್ತಿದ್ದರು.
- 2 Corinthians 3:18 2 ಕೊರಿಂಥದವರಿಗೆ 3:18ಆದರೆ ನಾವೆಲ್ಲರೂ ತೆರೆದ ಮುಖವುಳ್ಳವರಾಗಿ ದರ್ಪಣದಲ್ಲಿ ಕಾಣುವಂತೆ ಕರ್ತನ ಮಹಿಮೆಯನ್ನು ನೋಡುತ್ತಾ ಕರ್ತನ ಆತ್ಮನಿಂದಲೋ ಎಂಬಂತೆ ಅದೇ ಸಾರೂಪ್ಯಕ್ಕೆ ಮಹಿಮೆಯಿಂದ ಮಹಿಮೆಗೆ ಮಾರ್ಪಡುತ್ತೇವೆ.
- Philippians 3:8 ಫಿಲಿಪ್ಪಿಯವರಿಗೆ 3:8ಹೌದು, ನಿಸ್ಸಂದೇಹವಾಗಿ ನನ್ನ ಕರ್ತನಾದ ಕ್ರಿಸ್ತ ಯೇಸುವಿನ ವಿಷಯವಾಗಿರುವ ಅತಿ ಶ್ರೇಷ್ಟವಾದ ಜ್ಞಾನದ ನಿಮಿತ್ತವಾಗಿ ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ನಾನು ಕ್ರಿಸ್ತನನ್ನು ಸಂಪಾದಿಸಿ ಕೊಳ್ಳಬೇಕೆಂದು ಆತನ ನಿಮಿತ್ತ ಎಲ್ಲವನ್ನು ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ.
- Ephesians 3:10 ಎಫೆಸದವರಿಗೆ 3:10ನಾನಾ ವಿಧವಾದ ದೇವರ ಜ್ಞಾನವು ಪರಲೋಕದಲ್ಲಿ ಈಗ ರಾಜತ್ವಗಳಿಗೂ ಅಧಿಕಾರಗಳಿಗೂ ಸಭೆಯ ಮೂಲಕ ಗೊತ್ತಾಗಬೇಕೆಂಬದಾಗಿಯೂ ಆತನು ಉದ್ದೇಶಿಸಿದ್ದನು.
- John 1:51 ಯೋಹಾನನು 1:51ಆತನು ಅವನಿಗೆ--ನಿನಗೆ ನಿಜನಿಜವಾಗಿ ಹೇಳುತ್ತೇನೆ. ಇಂದಿನಿಂದ ಪರಲೋಕವು ತೆರೆದಿರುವದನ್ನೂ ದೇವದೂತರು ಮನುಷ್ಯಕುಮಾರನ ಮೇಲೆ ಏರುವದನ್ನೂ ಇಳಿಯುವದನ್ನೂ ನೀವು ನೋಡುವಿರಿ ಅಂದನು.
- Exodus 25:20 ವಿಮೋಚನಕಾಂಡ 25:20ಆ ಕೆರೂಬಿಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಚಾಚಿದವುಗ ಳಾಗಿಯೂ ರೆಕ್ಕೆಗಳಿಂದ ಕರುಣಾಸನವನ್ನು ಮುಚ್ಚುವವು ಗಳಾಗಿಯೂ ಒಂದರ ಮುಖವನ್ನು ಒಂದು ನೋಡು ವವುಗಳಾಗಿಯೂ ಇರಬೇಕು. ಕೆರೂಬಿಗಳ ಮುಖಗಳು ಕರುಣಾಸನದ ಕಡೆಗೆ ತಿರುಗಿರಬೇಕು.
Original words (Hebrew)
- cherubims · H3742כְּרוּב kᵉrûwb
- out · H6566פָּרַשׂ pâras
- wings · H3671כָּנָף kânâph
- high · H4605מַעַל maʻal
- covered · H5526סָכַךְ çâkak
- wings · H3671כָּנָף kânâph
- seat · H3727כַּפֹּרֶת kappôreth
- faces · H6440פָּנִים pânîym
- one · H376אִישׁ ʼîysh
- another · H251אָח ʼâch
- seatward · H3727כַּפֹּרֶת kappôreth
- faces · H6440פָּנִים pânîym
- cherubims · H3742כְּרוּב kᵉrûwb