Exodus · chapter 39 · verse 32
Exodus 39:32 in Kannada
ಈ ಪ್ರಕಾರ ಸಭೆ ಡೇರೆಯ ಗುಡಾರದ ಕೆಲಸವೆಲ್ಲಾ ಮುಗಿಯಿತು. ಕರ್ತನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಇಸ್ರಾಯೇಲ್ ಮಕ್ಕಳು ಅದರಂತೆಯೇ ಮಾಡಿದರು.
Ee prakaara sabhe dereya gudaarada kelasavellaa mugiyitu. Kartanu moshege aajnyaapisiddannellaa israayel makkalu adaranteye maadidaru.
Exodus 39:32 in English
- King James Version (KJV)
- Thus was all the work of the tabernacle of the tent of the congregation finished: and the children of Israel did according to all that the LORD commanded Moses, so did they.
- World English Bible (WEB)
- Thus all the work of the tabernacle of the Tent of Meeting was finished. The children of Israel did according to all that the LORD commanded Moses; so they did.
- American Standard Version (ASV)
- Thus was finished all the work of the tabernacle of the tent of meeting: and the children of Israel did according to all that Jehovah commanded Moses; so did they.
- Bible in Basic English (BBE)
- So all the work on the House of the Tent of meeting was done; as the Lord had given orders to Moses, so the children of Israel did it.
- Darby Translation (DBY)
- And all the labour of the tabernacle of the tent of meeting was ended; and the children of Israel had done [it] according to all that Jehovah had commanded Moses — so had they done [it].
- Webster's Bible (WBS)
- Thus was all the work of the tabernacle of the tent of the congregation finished: and the children of Israel did according to all that the LORD commanded Moses, so did they.
- Young's Literal Translation (YLT)
- And all the service of the tabernacle of the tent of meeting is completed; and the sons of Israel do according to all that Jehovah hath commanded Moses; so they have done.
Read in context
- 30ಪರಿಶುದ್ಧ ಕಿರೀಟವಾಗಿರುವ ತಗಡನ್ನು ಶುದ್ಧ ಬಂಗಾರದಿಂದ ಮಾಡಿ ಕರ್ತನಿಗೆ ಪರಿಶುದ್ಧ ಎಂದು ಮುದ್ರೆ ಕೆತ್ತುವವರ ಬರಹದಿಂದ ಅದರ ಮೇಲೆ ಬರೆದು
- 31ಅದನ್ನು ಮುಂಡಾಸದ ಮೇಲೆ ಬಿಗಿಸುವದ ಕ್ಕೋಸ್ಕರ ನೀಲಿ ನೂಲಿನಿಂದ ಕಟ್ಟಿದರು. ಇದನ್ನು ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಮಾಡಿದರು.
- 32ಈ ಪ್ರಕಾರ ಸಭೆ ಡೇರೆಯ ಗುಡಾರದ ಕೆಲಸವೆಲ್ಲಾ ಮುಗಿಯಿತು. ಕರ್ತನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಇಸ್ರಾಯೇಲ್ ಮಕ್ಕಳು ಅದರಂತೆಯೇ ಮಾಡಿದರು.
- 33ಆಗ ಅವರು ಗುಡಾರವನ್ನು ಮೋಶೆಯ ಬಳಿಗೆ ತಂದರು. ಅದರ ಎಲ್ಲಾ ಸಾಮಾನುಗಳನ್ನು ಹಲಗೆಗಳನ್ನು ಅಗುಳಿಗಳನ್ನು ಸ್ತಂಭಗಳನ್ನು ಕುಣಿಕೆಗಳನ್ನು;
- 34ಕೆಂಪು ಬಣ್ಣದಲ್ಲಿ ಅದ್ದಿದ ಟಗರುಗಳ ಹೊದಿಕೆಯನ್ನು, ಕಡಲು ಹಂದಿಗಳ ಚರ್ಮಗಳ ಹೊದಿಕೆಗಳನ್ನು ಮರೆಯ ತೆರೆಯನ್ನು;
Cross references
- Exodus 39:42–43 ವಿಮೋಚನಕಾಂಡ 39:42–43ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಇಸ್ರಾಯೇಲ್ ಮಕ್ಕಳು ಈ ಕೆಲಸಗಳನ್ನೆಲ್ಲಾ ಮಾಡಿ ದರು.ಮೋಶೆಯು ಆ ಕೆಲಸವನ್ನೆಲ್ಲಾ ನೋಡಿದಾಗ ಇಗೋ, ಕರ್ತನು ಆಜ್ಞಾಪಿಸಿದ ಪ್ರಕಾರವೇ ಅವರು ಅದನ್ನು ಮಾಡಿದ್ದರು. ಆಗ ಮೋಶೆಯು ಅವರನ್ನು ಆಶೀರ್ವದಿಸಿದನು. ಮೋಶೆಯು ಆ ಕೆಲಸವನ್ನೆಲ್ಲಾ ನೋಡಿದಾಗ ಇಗೋ, ಕರ್ತನು ಆಜ್ಞಾಪಿಸಿದ ಪ್ರಕಾರವೇ ಅವರು ಅದನ್ನು ಮಾಡಿದ್ದರು. ಆಗ ಮೋಶೆಯು ಅವರನ್ನು ಆಶೀರ್ವದಿಸಿದನು.
- Exodus 25:40 ವಿಮೋಚನಕಾಂಡ 25:40ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಅವುಗಳನ್ನು ಮಾಡುವಂತೆ ನೋಡಿಕೋ.
- Matthew 28:20 ಮತ್ತಾಯನು 28:20ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
- Hebrews 3:2 ಇಬ್ರಿಯರಿಗೆ 3:2ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತ ನಾಗಿದ್ದಂತೆಯೇ ಈತನೂ ತನ್ನನ್ನು ನೇಮಿಸಿದಾತನಿಗೆ ನಂಬಿಗಸ್ತನಾಗಿದ್ದಾನೆ.
- Numbers 3:25–26 ಅರಣ್ಯಕಾಂಡ 3:25–26ಸಭೆಯ ಗುಡಾರದಲ್ಲಿ ಗೇರ್ಷೋನನ ಕುಮಾರರು ಕಾಪಾಡಿಕೊಳ್ಳಬೇಕಾದವುಗಳು ಗುಡಾ ರವೂ ಅದರ ಹೊದಿಕೆಯೂ ಸಭೆಯ ಗುಡಾರದ ಬಾಗಲಿನ ತೆರೆಯೂ ಅಂಗಳದ ತೆರೆಗಳೂ ಗುಡಾರಕ್ಕೂ ಬಲಿಪೀಠಕ್ಕೂ ಸುತ್ತಲಿರುವ ಅಂಗಳದ ಪರದೆಯೂ ಅಂಗಳದ ಬಾಗಲಿನ ತೆರೆಯೂ ಅದರ ಸಮಸ್ತ ಸೇವೆಗೆ ಬೇಕಾದ ಹಗ್ಗಗಳೂ ಇವೆ.
- Deuteronomy 12:32 ಧರ್ಮೋಪದೇಶಕಾಂಡ 12:32ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಲಕ್ಷಿಸಿ ಕೈಕೊಳ್ಳಬೇಕು; ಅದಕ್ಕೆ ಕೂಡಿಸಬೇಡ; ಇಲ್ಲವೆ ಅದರಿಂದ ಕಡಿಮೆಮಾಡಬೇಡ.
- Exodus 39:33 ವಿಮೋಚನಕಾಂಡ 39:33ಆಗ ಅವರು ಗುಡಾರವನ್ನು ಮೋಶೆಯ ಬಳಿಗೆ ತಂದರು. ಅದರ ಎಲ್ಲಾ ಸಾಮಾನುಗಳನ್ನು ಹಲಗೆಗಳನ್ನು ಅಗುಳಿಗಳನ್ನು ಸ್ತಂಭಗಳನ್ನು ಕುಣಿಕೆಗಳನ್ನು;
- Leviticus 8:1–9 ಯಾಜಕಕಾಂಡ 8:1–9ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ -- ಆರೋನನನ್ನೂ ಅವನೊಂದಿಗೆ ಅವನ ಕುಮಾರರನ್ನೂ ಕರೆದು ಉಡುಪು ಗಳನ್ನೂ ಅಭಿಷೇಕ ತೈಲವನ್ನೂ ಪಾಪದ ಬಲಿಗಾಗಿ ಹೋರಿಯನ್ನೂ ಎರಡು ಟಗರುಗಳನ್ನೂ ಹುಳಿಯಿಲ್ಲದ ರೊಟ್ಟಿಯ ಬುಟ್ಟಿಯನ್ನೂ ತೆಗೆದುಕೊಂಡು. ಸಭೆ ಯವರನ್ನೆಲ್ಲಾ ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಒಟ್ಟಾಗಿ ಸೇರಿಸು ಅಂದನು. ಆಗ ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಅವನು ಮಾಡಿದನು. ಸಭೆಯು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಒಟ್ಟಾಗಿ ಸೇರಿಸಲ್ಪಟ್ಟಿತು. ಮೋಶೆಯು ಸಭೆಗೆ--ಕರ್ತನು ಮಾಡುವದಕ್ಕೆ ಆಜ್ಞಾಪಿಸಿರುವದು ಇದೇ. ಮೋಶೆಯು ಆರೋನನನ್ನೂ ಅವನ ಕುಮಾರ ರನ್ನೂ ಹತ್ತಿರಕ್ಕೆ ಬರಮಾಡಿ ಅವರಿಗೆ ಸ್ನಾನಮಾಡಿಸಿ ದನು. ಅವನಿಗೆ ಮೇಲಂಗಿಯನ್ನು ಹೊದಿಸಿ ನಡುಕಟ್ಟಿ ನಿಂದ ಅವನ ನಡುವನ್ನು ಕಟ್ಟಿ ನಿಲುವಂಗಿಯನ್ನು ತೊಡಿಸಿ ಅವನ ಮೇಲೆ ಎಫೋದನ್ನು ಹಾಕಿ ಎಫೋದಿನ ವಿಚಿತ್ರವಾದ ನಡುಕಟ್ಟಿನಿಂದ ನಡುವನ್ನು ಕಟ್ಟಿ ಅದ ರಿಂದ ಅವನನ್ನು ಬಿಗಿದನು. ಅವನ ಮೇಲೆ ಎದೆ ಕವಚವನ್ನು ಹಾಕಿ ಆ ಎದೆ ಕವಚದಲ್ಲಿ ಊರೀಮ್ ತುವ್ಮೆಾಮ್ ಇವುಗಳನ್ನು ಸಹ ಹಾಕಿದನು. ಅವನ ತಲೆಯ ಮೇಲೆ ಮುಂಡಾಸವನ್ನು ಇಟ್ಟು ಆ ಮುಂಡಾ ಸದ ಮುಂಭಾಗದಲ್ಲಿ ಬಂಗಾರದ ಪಟ್ಟಿಯನ್ನೂ ಪವಿತ್ರ ವಾದ ಕಿರೀಟವನ್ನೂ ಕರ್ತನು ಮೋಶೆಗೆ ಆಜ್ಞಾಪಿಸಿ ದಂತೆಯೇ ಇಟ್ಟನು.
- 1 Samuel 15:22 1 ಸಮುವೇಲನು 15:22ಅದಕ್ಕೆ ಸಮುವೇಲನು--ಕರ್ತನ ವಾಕ್ಯಕ್ಕೆ ವಿಧೇಯನಾದರೆ ಕರ್ತನಿಗೆ ಆಗುವ ಸಂತೋಷ ದಹನ ಬಲಿಗಳಲ್ಲಿಯೂ ಬಲಿಗಳಲ್ಲಿಯೂ ಆಗುವದೋ? ಇಗೋ, ಬಲಿಗಿಂತ ವಿಧೇಯವಾಗುವದು ಟಗರುಗಳ ಕೊಬ್ಬಿಗಿಂತ ಆಲೈಸುವದು ಉತ್ತಮವಾಗಿರುವದು.
- Numbers 3:31 ಅರಣ್ಯಕಾಂಡ 3:31ಅವರ ಅಪ್ಪಣೆಯೇನಂದರೆ: ಮಂಜೂಷವೂ ಮೇಜೂ ದೀಪಸ್ತಂಭವೂ ಬಲಿಪೀಠ ಗಳೂ ಅವರು ಸೇವೆಮಾಡುವ ಪರಿಶುದ್ಧ ಸ್ಥಳದ ವಸ್ತುಗಳೂ ತೆರೆಯೂ ಅವುಗಳ ಎಲ್ಲಾ ಸೇವೆಯೂ ಆಗಿದೆ.
- Exodus 35:1–35 ವಿಮೋಚನಕಾಂಡ 35:1–35ಮೋಶೆಯು ಇಸ್ರಾಯೇಲ್ ಮಕ್ಕಳ ಸಭೆಯನ್ನು ಒಟ್ಟುಗೂಡಿಸಿ ಅವರಿಗೆ--ನೀವು ಮಾಡುವದಕ್ಕೆ ಕರ್ತನು ಆಜ್ಞಾಪಿಸಿದ ವಾಕ್ಯಗಳು ಇವೇ. ಆರು ದಿನಗಳು ಕೆಲಸ ಮಾಡಬೇಕು. ಆದರೆ ಏಳನೆಯ ದಿನವು ನಿಮಗೆ ಪರಿಶುದ್ಧದಿನವಾಗಿಯೂ ಕರ್ತನಿಗೆ ವಿಶ್ರಾಂತಿಯ ಸಬ್ಬತ್ತಾಗಿಯೂ ಇರಬೇಕು. ಆ ದಿನದಲ್ಲಿ ಕೆಲಸ ಮಾಡುವವನು ಕೊಲ್ಲಲ್ಪಡಬೇಕು. ನೀವು ವಾಸಿಸುವ ಯಾವ ಸ್ಥಳದಲ್ಲಿಯಾದರೂ ಸಬ್ಬತ್ ದಿನದಲ್ಲಿ ಬೆಂಕಿಯನ್ನೂ ಹೊತ್ತಿಸಬಾರದು ಎಂದು ಹೇಳಿದನು. ಮೋಶೆಯು ಇಸ್ರಾಯೇಲ್ ಮಕ್ಕಳ ಸಭೆಗೆಲ್ಲಾ-- ಕರ್ತನು ಆಜ್ಞಾಪಿಸಿದ್ದು ಇದೇ. ಅದೇನಂದರೆ-- ಕರ್ತನಿಗೋಸ್ಕರ ನಿಮ್ಮೊಳಗಿಂದ ಕಾಣಿಕೆಗಳನ್ನು ತೆಗೆದು ಕೊಳ್ಳಿರಿ. ಮನಃಪೂರ್ವಕವಾಗಿ ಕರ್ತನಿಗೆ ತರಬೇಕಾದವುಗಳು; ಚಿನ್ನ, ಬೆಳ್ಳಿ, ಹಿತ್ತಾಳೆ ನೀಲಿ, ಧೂಮ್ರ, ಕೆಂಪುವರ್ಣದ ನಯವಾದ ನಾರುಮಡಿ, ಮೇಕೆಯ ಕೂದಲು, ಕೆಂಪು ಬಣ್ಣದಲ್ಲಿ ಅದ್ದಿದ ಟಗರಿನ ಚರ್ಮಗಳು, ಕಡಲು ಹಂದಿಯ ಚರ್ಮಗಳು ಜಾಲೀಮರವು. ದೀಪಕ್ಕೋಸ್ಕರ ಎಣ್ಣೆ, ಅಭಿಷೇಕಿಸುವ ತೈಲಕ್ಕೋಸ್ಕರ ಮತ್ತು ಪರಿಮಳ ಧೂಪಕ್ಕೋಸ್ಕರ ಸುಗಂಧತೈಲ, ಗೋಮೇಧಕ, ಎಫೋದ್ನ್ನು ಎದೆಯಲ್ಲಿಯೂ ಪದಕದಲ್ಲಿಯೂ ಕೂಡ್ರಿಸಲು ರತ್ನಗಳು ಇವೆ. ನಿಮ್ಮಲ್ಲಿ ಜ್ಞಾನದ ಹೃದಯವುಳ್ಳವರೆಲ್ಲರೂ ಬಂದು ಕರ್ತನು ಆಜ್ಞಾಪಿಸಿದವುಗಳನ್ನೆಲ್ಲಾ ಮಾಡಲಿ. ಅವು ಯಾವವಂದರೆ: ಗುಡಾರವನ್ನೂ ಅದರ ಡೇರೆಯನ್ನೂ ಅದರ ಹೊದಿಕೆಯನ್ನೂ ಅದರ ಕೊಂಡಿಗಳನ್ನೂ ಅದರ ಹಲಗೆಗಳನ್ನೂ ಅದರ ಅಗುಳಿಗಳನ್ನೂ ಅದರ ಸ್ತಂಭ ಗಳನ್ನೂ ಅದರ ಕುಳಿಗಳನ್ನೂ ಮಂಜೂಷವನ್ನೂ ಅದರ ಕೋಲುಗಳನ್ನೂ ಅವುಗಳೊಂದಿಗೆ ಕರುಣಾಸನ ವನ್ನೂ ಮರೆಮಾಡುವ ತೆರೆಯನ್ನೂ ಮೇಜನ್ನೂ ಅದರ ಕೋಲುಗಳನ್ನೂ ಅದರ ಎಲ್ಲಾ ಉಪಕರಣ ಗಳನ್ನೂ ಸಮ್ಮುಖದ ರೊಟ್ಟಿಯನ್ನೂ ಬೆಳಕಿಗಾಗಿ ದೀಪಸ್ತಂಭವನ್ನೂ ಅದರ ಉಪಕರಣಗಳನ್ನೂ ಅದರ ದೀಪಗಳನ್ನೂ ಬೆಳಕಿಗಾಗಿ ಎಣ್ಣೆಯನ್ನೂ ಧೂಪ ವೇದಿಯನ್ನೂ ಅದರ ಕೋಲುಗಳನ್ನೂ ಅಭಿಷೇಕಿಸುವ ಎಣ್ಣೆಯನ್ನೂ ಪರಿಮಳ ಧೂಪವನ್ನೂ ಗುಡಾರದಲ್ಲಿ ಪ್ರವೇಶಿಸುವ ಬಾಗಲಿನ ತೆರೆಯನ್ನೂ ಯಜ್ಞವೇದಿ ಯನ್ನೂ ಅದರೊಂದಿಗೆ ಹಿತ್ತಾಳೆಯ ಜಲ್ಲಡಿಯನ್ನೂ ಅದರ ಕೋಲುಗಳನ್ನೂ ಅದರ ಎಲ್ಲಾ ಉಪಕರಣ ಗಳನ್ನೂ ಗಂಗಾಳವನ್ನೂ ಅದರ ಪೀಠ ಅಂಗಳದ ಪರದೆಗಳನ್ನೂ ಅದರ ಸ್ತಂಭಗಳನ್ನೂ ಅದರ ಕುಳಿಗ ಳನ್ನೂ ಅಂಗಳದ ಬಾಗಲಿನ ತೆರೆಗಳನ್ನೂ ಗುಡಾರದ ಗೂಟಗಳನ್ನೂ ಅಂಗಳದ ಗೂಟಗಳನ್ನೂ ಅವುಗಳ ಹಗ್ಗಗಳನ್ನೂ ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವದ ಕ್ಕಾಗಿ ಸೇವೆಯ ವಸ್ತ್ರಗಳನ್ನೂ ಯಾಜಕನಾದ ಆರೋನನ ಪರಿಶುದ್ಧ ವಸ್ತ್ರಗಳನ್ನೂ ಯಾಜಕ ಸೇವೆಗೋಸ್ಕರ ಅವನ ಕುಮಾರರ ವಸ್ತ್ರಗಳನ್ನೂ ಮಾಡಲಿ ಅಂದನು. ಆಗ ಇಸ್ರಾಯೇಲ್ ಮಕ್ಕಳ ಸಭೆಯವರೆಲ್ಲರೂ ಮೋಶೆಯ ಎದುರಿನಿಂದ ಹೊರಟುಹೋದರು. ಅವರಲ್ಲಿ ಪ್ರತಿಯೊಬ್ಬನು ಹೃದಯ ಪ್ರೇರಣೆಯಿಂದ ಮತ್ತು ಪ್ರತಿಯೊಬ್ಬನು ತನ್ನ ಮನಸ್ಸು ಇಷ್ಟಪಡುವಂತೆ ಸಭೆಯ ಗುಡಾರದ ಕೆಲಸಕ್ಕಾಗಿಯೂ ಅದರ ಎಲ್ಲಾ ಸೇವೆಗಾಗಿಯೂ ಪರಿಶುದ್ಧ ವಸ್ತ್ರಗಳಿಗಾಗಿಯೂ ಕರ್ತನಿಗೆ ಕಾಣಿಕೆಗಳನ್ನು ತೆಗೆದುಕೊಂಡು ಬಂದರು. ಸ್ತ್ರೀಪುರುಷರೆಲ್ಲರೂ ಮನಃಪೂರ್ವಕವಾಗಿ ಬಂದು ಬಳೆಗಳನ್ನೂ ಮುರುವುಗಳನ್ನೂ ಉಂಗುರಗಳನ್ನೂ ಮುದ್ರೆಗಳನ್ನೂ ಚಿನ್ನದ ಎಲ್ಲಾ ಒಡವೆಗಳನ್ನೂ ತಂದರು. ಪ್ರತಿಯೊಬ್ಬನೂ ಚಿನ್ನದ ಕಾಣಿಕೆಯನ್ನು ಕರ್ತನಿಗೆ ಅರ್ಪಿಸಿದನು. ನೀಲಿ, ಧೂಮ್ರ, ರಕ್ತವರ್ಣ ನಯವಾದ ನಾರುಮಡಿ, ಮೇಕೆಯ ಕೂದಲು; ಟಗರುಗಳ ಕೆಂಪು ಬಣ್ಣದ ಚರ್ಮಗಳು, ಕಡಲು ಹಂದಿಯ ಚರ್ಮಗಳು, ಯಾರ ಬಳಿಯಲ್ಲಿದ್ದವೋ ಅವರೆಲ್ಲರು ತಂದರು. ಬೆಳ್ಳಿ ಹಿತ್ತಾಳೆಗಳ ಕಾಣಿಕೆ ಗಳನ್ನು ಅರ್ಪಿಸುವದಕ್ಕೆ ಮನಸ್ಸಿದ್ದವರೆಲ್ಲರೂ ಕರ್ತನಿಗೆ ಕಾಣಿಕೆಗಳನ್ನು ತಂದರು. ಸೇವೆಯ ಎಲ್ಲಾ ಕೆಲಸ ಕ್ಕೋಸ್ಕರ ಜಾಲೀ ಮರವಿದ್ದವರು ಅದನ್ನು ತಂದರು. ಜ್ಞಾನ ಹೃದಯವುಳ್ಳ ಸ್ತ್ರೀಯರೆಲ್ಲರೂ ತಮ್ಮ ಕೈಗಳಿಂದ ನೇಯ್ದ ನೀಲಿ, ಧೂಮ್ರ, ರಕ್ತವರ್ಣ ಮತ್ತು ನಯವಾದ ನಾರುಮಡಿ ಇವುಗಳನ್ನು ತಂದರು. ಜ್ಞಾನದಲ್ಲಿ ಹೃದಯ ಪ್ರೇರಣೆ ಹೊಂದಿದ ಸ್ತ್ರೀಯರೆಲ್ಲರೂ ಮೇಕೆ ಕೂದಲುಗಳನ್ನೂ ನೇಯ್ದರು. ಅಧಿಪತಿಗಳು ಎಫೋ ದಿನಲ್ಲಿಯೂ ಎದೆಪದಕದಲ್ಲಿಯೂ ಕೂಡ್ರಿಸುವದಕ್ಕೆ ಗೋಮೇಧಿಕಗಳನ್ನೂ ರತ್ನಗಳನ್ನೂ ಸುಗಂಧದ್ರವ್ಯ ಗಳನ್ನೂ ದೀಪಕ್ಕೋಸ್ಕರವೂ ಅಭಿಷೇಕಿಸುವ ತೈಲ ಕ್ಕೋಸ್ಕರವೂ ಪರಿಮಳ ಧೂಪಕ್ಕೋಸ್ಕರವೂ ಎಣ್ಣೆ ಯನ್ನೂ ತಂದರು. ಹೀಗೆ ಮಾಡಬೇಕೆಂದು ಕರ್ತನು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ ಎಲ್ಲಾ ಕೆಲಸಕ್ಕೋಸ್ಕರ ತರುವದಕ್ಕೆ ಹೃದಯ ಪ್ರೇರಿತರಾದ ಇಸ್ರಾಯೇಲಿನ ಎಲ್ಲಾ ಪುರುಷರೂ ಸ್ತ್ರೀಯರೂ ಕರ್ತ ನಿಗೆ ಮನಃಪೂರ್ವಕವಾದ ಕಾಣಿಕೆಯನ್ನು ತಂದರು. ಆಗ ಮೋಶೆಯು ಇಸ್ರಾಯೇಲ್ ಮಕ್ಕಳಿಗೆ--ನೋಡಿರಿ, ಕರ್ತನು ಯೂದ ಕುಲದ ಹೂರನ ಮೊಮ್ಮಗನೂ ಊರಿಯನ ಮಗನೂ ಆದ ಬೆಚಲೇಲ ನನ್ನು ಹೆಸರು ಹೇಳಿ ಕರೆದು ಅವನನ್ನು ದೇವರಾತ್ಮ ನಿಂದ ಜ್ಞಾನದಲ್ಲಿಯೂ ತಿಳುವಳಿಕೆಯಲ್ಲಿಯೂ ವಿವೇಕ ದಲ್ಲಿಯೂ ಎಲ್ಲಾ ವಿಧವಾದ ಕೌಶಲ್ಯದಲ್ಲಿಯೂ ಚಿನ್ನ ಬೆಳ್ಳಿ ಹಿತ್ತಾಳೆ ಇವುಗಳಿಂದ ವಿಚಿತ್ರವಾದ ಕಲ್ಪನೆಯ ಕೆಲಸವನ್ನು ಮಾಡುವದರಲ್ಲಿಯೂ ಕಲ್ಲುಗಳನ್ನು ಕೆತ್ತಿಡುವದರಲ್ಲಿಯೂ ಮರ ಕೆತ್ತನೆಯಲ್ಲಿಯೂ ಎಲ್ಲಾ ತರವಾದ ಕೌಶಲ್ಯದ ಕೆಲಸದಲ್ಲಿಯೂ ಜ್ಞಾನದಿಂದ ತುಂಬಿಸಿದ್ದಾನೆ. ಇದಲ್ಲದೆ ಅವನಿಗೂ ದಾನ ಕುಲದ ವನಾದ ಅಹೀಸಾಮಾಕನ ಮಗನಾದ ಒಹೋಲಿಯಾ ಬನಿಗೂ ಕಲಿಸುವ ಹೃದಯವನ್ನು ಕೊಟ್ಟಿದ್ದಾನೆ.ಅವರು ಕೆತ್ತನೆಯ ಕೆಲಸಗಳನ್ನು ಮಾಡುವದಕ್ಕೂ ಚಮತ್ಕಾರದ ಕೆಲಸವನ್ನು ಮಾಡುವದಕ್ಕೂ ನೀಲಿ, ಧೂಮ್ರ, ರಕ್ತವರ್ಣ ನಯವಾದ ನಾರುಮಡಿ ಇವು ಗಳಲ್ಲಿ ಕಸೂತಿ ಕೆಲಸ ಮಾಡುವದಕ್ಕೂ ನೇಯ್ಗೆಯ ಕೆಲಸ ಮಾಡುವದಕ್ಕೂ ಅಂದರೆ ಅವುಗಳಲ್ಲಿ ಯಾವ ಕೆಲಸವನ್ನಾದರೂ ಮಾಡುವದಕ್ಕೂ ಚಮತ್ಕಾರದ ಕೆಲಸವನ್ನು ಕಲ್ಪಿಸಿ ಮಾಡುವವರಂತೆಯೂ ಹೀಗೆ ಎಲ್ಲಾ ತರವಾದ ಕೆಲಸಮಾಡುವದಕ್ಕೆ ಜ್ಞಾನದ ಹೃದಯವನ್ನು ದೇವರು ಅವರಲ್ಲಿ ತುಂಬಿಸಿದ್ದಾನೆ. ಅವರು ಕೆತ್ತನೆಯ ಕೆಲಸಗಳನ್ನು ಮಾಡುವದಕ್ಕೂ ಚಮತ್ಕಾರದ ಕೆಲಸವನ್ನು ಮಾಡುವದಕ್ಕೂ ನೀಲಿ, ಧೂಮ್ರ, ರಕ್ತವರ್ಣ ನಯವಾದ ನಾರುಮಡಿ ಇವು ಗಳಲ್ಲಿ ಕಸೂತಿ ಕೆಲಸ ಮಾಡುವದಕ್ಕೂ ನೇಯ್ಗೆಯ ಕೆಲಸ ಮಾಡುವದಕ್ಕೂ ಅಂದರೆ ಅವುಗಳಲ್ಲಿ ಯಾವ ಕೆಲಸವನ್ನಾದರೂ ಮಾಡುವದಕ್ಕೂ ಚಮತ್ಕಾರದ ಕೆಲಸವನ್ನು ಕಲ್ಪಿಸಿ ಮಾಡುವವರಂತೆಯೂ ಹೀಗೆ ಎಲ್ಲಾ ತರವಾದ ಕೆಲಸಮಾಡುವದಕ್ಕೆ ಜ್ಞಾನದ ಹೃದಯವನ್ನು ದೇವರು ಅವರಲ್ಲಿ ತುಂಬಿಸಿದ್ದಾನೆ.
- Numbers 4:4–32 ಅರಣ್ಯಕಾಂಡ 4:4–32ಸಭೆಯ ಗುಡಾರದಲ್ಲಿ ಕೆಹಾತನ ಮಕ್ಕಳ ಸೇವೆಯು ಅತಿ ಪರಿಶುದ್ಧವಾದದ್ದೇ. ಪಾಳೆಯವು ಹೊರಡು ವಾಗ ಆರೋನನೂ ಅವನ ಮಕ್ಕಳೂ ಒಳಗೆ ಹೋಗಿ ತೆರೆಯನ್ನು ಇಳಿಸಿ ಅದರಿಂದ ಸಾಕ್ಷಿಯ ಮಂಜೂಷವನ್ನು ಮುಚ್ಚಿ ಅದರ ಮೇಲೆ ಕಡಲು ಹಂದಿಯ ಚರ್ಮದ ಹೊದಿಕೆಯನ್ನು ಹೊದಿಸಬೇಕು. ಅದರ ಮೇಲ್ಭಾಗ ದಲ್ಲಿ ಪೂರ್ಣವಾದ ನೀಲಿ ವಸ್ತ್ರವನ್ನು ಹಾಸಿ ಅದರ ಕೋಲುಗಳನ್ನು ಇಡಬೇಕು. 7 ಸಮ್ಮುಖದ ರೊಟ್ಚಿಯ ಮೇಜಿನ ಮೇಲೆ ಅವರು ನೀಲಿ ವಸ್ತ್ರವನ್ನು ಹಾಸಿ ಅದರ ಮೇಲೆ ಪಾತ್ರೆ ಚಮಟಿಕೆ ಪಾನದ ಅರ್ಪ ಣೆಯ ಹೂಜಿ ಇವುಗಳನ್ನು ಇಡಬೇಕು. ನಿತ್ಯವಾದ ರೊಟ್ಟಿಯೂ ಅದರ ಮೇಲೆ ಇರಬೇಕು. ಅವೆ ಲ್ಲವುಗಳ ಮೇಲೆ ಕಡುಗೆಂಪಾದ ವಸ್ತ್ರವನ್ನು ಹಾಸಿ ಅದನ್ನು ಕಡಲು ಹಂದಿಯ ಚರ್ಮಗಳ ಹೊದಿಕೆಯಿಂದ ಹೊದಿಸಿ ಅದರ ಕೋಲುಗಳನ್ನು ಇಡಬೇಕು. ಇದ ಲ್ಲದೆ ಅವರು ನೀಲಿ ವಸ್ತ್ರವನ್ನು ತಕ್ಕೊಂಡು ಅದರಿಂದ ದೀಪಸ್ತಂಭವನ್ನೂ ಅದರ ದೀಪಗಳನ್ನೂ ಚಮಟಿಕೆಗಳನ್ನೂ ದೀಪದ ಕುಡಿತೆಗೆಯುವ ಬಟ್ಟಲುಗಳನ್ನೂ ಅದಕ್ಕೆ ಸೇವೆ ಮಾಡುವ ಸಕಲ ಎಣ್ಣೆಯ ಪಾತ್ರೆಗಳನ್ನೂ ಮುಚ್ಚಬೇಕು. ಅವರು ಅದನ್ನೂ ಅದರ ಎಲ್ಲಾ ವಸ್ತುಗಳನ್ನೂ ಕಡಲು ಹಂದಿಯ ಚರ್ಮಗಳ ಮುಚ್ಚಳ ದೊಳಗೆ ಇಟ್ಟು ಅಡ್ಡದಂಡೆಯ ಮೇಲೆ ಹಾಕಬೇಕು. ಇದಲ್ಲದೆ ಬಂಗಾರದ ಬಲಿಪೀಠದ ಮೇಲೆ ಅವರು ನೀಲಿ ವಸ್ತ್ರವನ್ನು ಹಾಸಿ ಅದನ್ನು ಕಡಲು ಹಂದಿಯ ಚರ್ಮವನ್ನು ಮುಚ್ಚಳ ಹೊದಿಸಿ ಅದರ ಕೋಲುಗಳನ್ನು ಇಡಬೇಕು. ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವ ಸೇವೆಯ ಎಲ್ಲಾ ವಸ್ತುಗಳನ್ನು ಅವರು ತಕ್ಕೊಂಡು ನೀಲಿ ವಸ್ತ್ರದಿಂದ ಕಟ್ಟಿ ಕಡಲು ಹಂದಿಯ ಚರ್ಮಗಳ ಹೊದಿಕೆಯಿಂದ ಮುಚ್ಚಿ ಅಡ್ಡದಂಡೆಯ ಮೇಲೆ ಹಾಕಬೇಕು. ಬಲಿಪೀಠದ ಬೂದಿಯನ್ನು ತೆಗೆದು ಅದರ ಮೇಲೆ ಕಡುಗೆಂಪಾದ ವಸ್ತ್ರವನ್ನು ಹಾಸಿ ಸೇವೆ ಮಾಡುವ ಎಲ್ಲಾ ವಸ್ತುಗಳನ್ನೂ ಅಗ್ನಿಪಾತ್ರೆಗಳನ್ನೂ ಮುಳ್ಳುಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಬಲಿಪೀಠದ ಎಲ್ಲಾ ವಸ್ತುಗಳನ್ನೂ ಅದರ ಮೇಲಿಟ್ಟು ಕಡಲು ಹಂದಿಯ ಚರ್ಮದ ಹೊದಿಕೆಯನ್ನು ಹಾಕಿ ಅದರ ಕೋಲುಗಳನ್ನು ಇಡಬೇಕು. ಆರೋನನೂ ಅವನ ಕುಮಾರರೂ ಪರಿಶುದ್ಧ ಸ್ಥಳವನ್ನು ಅದರ ಎಲ್ಲಾ ವಸ್ತುಗಳನ್ನು ಮುಚ್ಚಿದಮೇಲೆ ಪಾಳೆಯವು ಹೊರಡುವಾಗ ಕೆಹಾತನ ಕುಮಾರರು ಅದನ್ನು ಹೊತ್ತು ಕೊಂಡು ಹೋಗುವದಕ್ಕೆ ಪ್ರವೇಶಿಸಬೇಕು; ಅವರು ಸಾಯದ ಹಾಗೆ ಪರಿಶುದ್ಧವಾದ ಯಾವದನ್ನೂ ಮುಟ್ಟ ಬಾರದು. ಸಭೆಯ ಗುಡಾರದಲ್ಲಿ ಕೆಹಾತನ ಕುಮಾರರ ಹೊರೆಗಳು ಇವೇ ಆಗಿವೆ. ಯಾಜಕನಾದ ಆರೋನನ ಮಗನಾದ ಎಲ್ಲಾಜಾ ರನ ಕೆಲಸ ಯಾವದಂದರೆ: ದೀಪದ ಎಣ್ಣೆಯೂ ಸುಗಂಧ ಧೂಪವೂ ನಿತ್ಯದ ಆಹಾರ ಸಮರ್ಪಣೆಯೂ ಅಭಿಷೇಕದ ತೈಲವೂ ಸಮಸ್ತಗುಡಾರವೂ ಅದರ ಲ್ಲಿರುವ ಸಕಲವೂ ಪರಿಶುದ್ಧ ಸ್ಥಳದಲ್ಲಿಯೂ ಅದರ ವಸ್ತುಗಳೂ ಅವನ ಮೇಲ್ವಿಚಾರಣೆಯಲ್ಲಿರಬೇಕು. ಕರ್ತನು ಮೋಶೆ ಆರೋನರ ಸಂಗಡ ಮಾತನಾಡಿ ಹೇಳಿದ್ದೇನಂದರೆ-- ನೀವು ಲೇವಿಯರೊಳಗಿಂದ ಕೆಹಾತಿಯರ ಗೋತ್ರದ ಕುಟುಂಬಗಳನ್ನು ಕಡಿದು ಹಾಕಬೇಡಿರಿ. ಆದರೆ ಅವರು ಅತಿ ಪರಿಶುದ್ಧವಾ ದವುಗಳನ್ನು ಸವಿಾಪಿಸುವಾಗ ಅವರು ಸಾಯದೆ ಬದುಕುವ ಹಾಗೆ ಅವರಿಗೆ ಮಾಡಬೇಕಾದದ್ದೇ ನೆಂದರೆ--ಆರೋನನೂ ಅವನ ಕುಮಾರರೂ ಒಳಗೆ ಪ್ರವೇಶಿಸಿ ಅವರಲ್ಲಿ ಒಬ್ಬೊಬ್ಬನನ್ನು ಅವನ ಕೆಲಸಕ್ಕೂ ಅವನ ಹೊರೆಗೂ ನೇಮಿಸಬೇಕು. ಆದರೆ ಅವರು ಸಾಯದ ಹಾಗೆ ಪರಿಶುದ್ಧವಾದವುಗಳನ್ನು ನೋಡಲು ಒಳಗೆ ಹೋಗಬಾರದು. ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿ ದ್ದೇನಂದರೆ-- ಗೇರ್ಷೋನನ ಕುಮಾರರ ಲೆಕ್ಕವನ್ನು ಸಹ ಅವರ ತಂದೆ ಮನೆಗಳ ಪ್ರಕಾರವಾಗಿಯೂ ಅವರ ಕುಟುಂಬಗಳ ಪ್ರಕಾರವಾಗಿಯೂ ತೆಗೆದುಕೊಳ್ಳ ಬೇಕು. ಮೂವತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಐವತ್ತು ವರುಷಗಳ ಪ್ರಾಯವುಳ್ಳವರನ್ನು ಸಭೆಯ ಗುಡಾರದಲ್ಲಿ ಸೇವೆಮಾಡುವದಕ್ಕೂ ಅದನ್ನು ಪೂರೈಸು ವದಕ್ಕೂ ಸೇರುವವರೆಲ್ಲರನ್ನೂ ಎಣಿಸು. ಗೇರ್ಷೋನಿಯರ ಕುಟುಂಬಗಳ ಸೇವೆಯೂ ಹೊರೆಯೂ ಯಾವದಂದರೆ-- ಅವರು ಗುಡಾರದ ತೆರೆಗಳನ್ನೂ ಸಭೆಯ ಗುಡಾರವನ್ನೂ ಅದರ ಹೊದಿಕೆ ಯನ್ನೂ ಅದರ ಮೇಲಿರುವ ಕಡಲು ಹಂದಿಯ ಚರ್ಮದ ಹೊದಿಕೆಯನ್ನೂ ಸಭೆಯ ಗುಡಾರದ ಬಾಗಲಿನ ತೆರೆಯನ್ನೂ ಅಂಗಳದ ಪರದೆಗಳನ್ನೂ ಗುಡಾರವನ್ನೂ ಬಲಿಪೀಠವನ್ನೂ ಇವುಗಳ ಸುತ್ತಲಿರುವ ಅಂಗಳದ ಬಾಗಲಿನ ತೆರೆಯನ್ನೂ ಅವುಗಳ ಹಗ್ಗಗ ಳನ್ನೂ ಅವುಗಳ ಸೇವೆಯ ಎಲ್ಲಾ ವಸ್ತುಗಳನ್ನೂ ಹೊತ್ತು ಕೊಳ್ಳಬೇಕು. ಅವುಗಳಿಗೆ ಮಾಡತಕ್ಕ ಎಲ್ಲಾ ಸೇವೆಯನ್ನು ಹೀಗೆ ಅವರು ಮಾಡಬೇಕು. ಆರೋನನೂ ಅವನ ಕುಮಾರರೂ ನೇಮಿಸುವ ಹಾಗೆಯೇ ಗೇರ್ಷೋನನ ಕುಮಾರರ ಸೇವೆಯೆಲ್ಲಾ ಅವರು ಹೊರತಕ್ಕದ್ದೆಲ್ಲವೂ ಮಾಡತಕ್ಕದ್ದೆಲ್ಲವೂ ಆಗಬೇಕು. ನೀವು ಅವರ ಸಮಸ್ತ ಹೊರೆಯನ್ನೂ ಅಪ್ಪಣೆಯ ಪ್ರಕಾರ ಅವರಿಗೆ ನೇಮಿಸ ಬೇಕು. ಗೇರ್ಷೋನನ ಕುಮಾರರು ಸಭೆಯ ಗುಡಾರದಲ್ಲಿ ಮಾಡುವ ಸೇವೆಯು ಇದೇ: ಯಾಜಕ ನಾದ ಆರೋನನ ಮಗನಾದ ಈತಾಮಾರನ ಕೈಕೆಳಗೆ ಇರುವದು ಅವರಿಗೆ ಕೊಡಲ್ಪಟ್ಟ ಅಪ್ಪಣೆಯಾಗಿದೆ. ಮೆರಾರೀಯ ಕುಮಾರರನ್ನು ಅವರ ಕುಟುಂಬಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ಎಣಿಸಬೇಕು. ಮೂವತ್ತು ವರುಷವು ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರನ್ನು ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದ ಸೇವೆಮಾಡುವ ದಕ್ಕಾಗಿ ಒಳಗೆ ಪ್ರವೇಶಿಸುವವರನ್ನೆಲ್ಲಾ ಎಣಿಸಬೇಕು. ಸಭೆಯ ಗುಡಾರದಲ್ಲಿ ಅವರು ಮಾಡತಕ್ಕ ಸಮಸ್ತ ಸೇವೆಯ ಪ್ರಕಾರ ಅವರು ಹೊರುವದಕ್ಕೆ ಕೊಡಲ್ಪಟ್ಟ ಅಪ್ಪಣೆಯು ಏನಂದರೆ, ಗುಡಾರದ ಹಲಿಗೆಗಳೂ ಅದರ ಅಡ್ಡ ತೊಲೆಗಳೂ ಕಂಬಗಳೂ ಕುಣಿಕೆಗಳೂ. ಸುತ್ತಲಿರುವ ಅಂಗಳದ ಕಂಬಗಳೂ ಕುಣಿಕೆಗಳೂ ಗೂಟಗಳೂ ಅವುಗಳ ಹಗ್ಗಗಳೂ ಎಲ್ಲಾ ವಸ್ತುಗಳ ಪ್ರಕಾರವಾಗಿಯೂ ಅವುಗಳ ಸಮಸ್ತ ಸೇವೆಯ ಪ್ರಕಾರವಾಗಿಯೂ ಅವರು ಹೊರುವದಕ್ಕೆ ಕೊಡಲ್ಪಟ್ಟ ಅಪ್ಪಣೆಯ ವಸ್ತುಗಳನ್ನು ನೀವು ಹೆಸರೆಸರಾಗಿ ಎಣಿಸ ಬೇಕು.
Original words (Hebrew)
- work · H5656עֲבֹדָה ʻăbôdâh
- tabernacle · H4908מִשְׁכָּן mishkân
- tent · H168אֹהֶל ʼôhel
- congregation · H4150מוֹעֵד môwʻêd
- finished · H3615כָּלָה kâlâh
- children · H1121בֵּן bên
- Israel · H3478יִשְׂרָאֵל Yisrâʼêl
- did · H6213עָשָׂה ʻâsâh
- commanded · H6680צָוָה tsâvâh
- Moses · H4872מֹשֶׁה Môsheh
- did · H6213עָשָׂה ʻâsâh