Exodus · chapter 40 · verse 15
Exodus 40:15 in Kannada
ಅವರ ತಂದೆಯನ್ನು ಅಭಿಷೇಕಿಸಿದ ಪ್ರಕಾರ ಅವರು ನನಗೆ ಯಾಜಕ ಸೇವೆಯನ್ನು ಮಾಡುವ ಹಾಗೆ ಅವ ರನ್ನೂ ನೀನು ಅಭಿಷೇಕಿಸು. ಅವರ ಅಭಿಷೇಕವು ನಿಶ್ಚಯವಾಗಿದ್ದು ಅವರ ಸಂತತಿಗಳಲ್ಲಿ ನಿತ್ಯವಾದ ಯಾಜಕತ್ವವಾಗಿರುವದು ಎಂದು ಹೇಳಿದನು.
Avara tandeyannu abhishekisida prakaara avaru nanage yaajaka seveyannu maaduva haage ava rannoo neenu abhishekisu. Avara abhishekavu nishchayavaagiddu avara santatigalalli nityavaada yaajakatvavaagiruvadu endu helidanu.
Exodus 40:15 in English
- King James Version (KJV)
- And thou shalt anoint them, as thou didst anoint their father, that they may minister unto me in the priest’s office: for their anointing shall surely be an everlasting priesthood throughout their generations.
- World English Bible (WEB)
- You shall anoint them, as you anointed their father, that they may minister to me in the priest’s office. Their anointing shall be to them for an everlasting priesthood throughout their generations.”
- American Standard Version (ASV)
- and thou shalt anoint them, as thou didst anoint their father, that they may minister unto me in the priest’s office: and their anointing shall be to them for an everlasting priesthood throughout their generations.
- Bible in Basic English (BBE)
- And put oil on them as you did on their father, so that they may be my priests: the putting on of oil will make them priests for ever, from generation to generation.
- Darby Translation (DBY)
- And thou shalt anoint them, as thou didst anoint their father, that they may serve me as priests. And their anointing shall be to them an everlasting priesthood throughout their generations.
- Webster's Bible (WBS)
- And thou shalt anoint them, as thou didst anoint their father, that they may minister to me in the priest's office: for their anointing shall surely be an everlasting priesthood throughout their generations.
- Young's Literal Translation (YLT)
- and anointed them as thou hast anointed their father, and they have acted as priests to Me, and their anointing hath been to be to them for a priesthood age-during, to their generations.'
Read in context
- 13ಆರೋನನು ನನಗೆ ಯಾಜಕ ಸೇವೆಮಾಡುವ ಹಾಗೆ ಅವನಿಗೆ ಪರಿಶುದ್ಧ ವಸ್ತ್ರಗಳನ್ನು ತೊಡಿಸಿ, ಅವನನ್ನು ಅಭಿಷೇಕಿಸಿ ಶುದ್ಧ ಮಾಡಬೇಕು.
- 14ಅವನ ಕುಮಾರರನ್ನು ನೀನು ಬರ ಮಾಡಿಕೊಂಡು ಅವರಿಗೆ ಅಂಗಿಗಳನ್ನು ತೊಡಿಸಿ
- 15ಅವರ ತಂದೆಯನ್ನು ಅಭಿಷೇಕಿಸಿದ ಪ್ರಕಾರ ಅವರು ನನಗೆ ಯಾಜಕ ಸೇವೆಯನ್ನು ಮಾಡುವ ಹಾಗೆ ಅವ ರನ್ನೂ ನೀನು ಅಭಿಷೇಕಿಸು. ಅವರ ಅಭಿಷೇಕವು ನಿಶ್ಚಯವಾಗಿದ್ದು ಅವರ ಸಂತತಿಗಳಲ್ಲಿ ನಿತ್ಯವಾದ ಯಾಜಕತ್ವವಾಗಿರುವದು ಎಂದು ಹೇಳಿದನು.
- 16ಮೋಶೆಯು ಹಾಗೆಯೇ ಮಾಡಿದನು. ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರವೇ ಅವನು ಎಲ್ಲವನ್ನು ಮಾಡಿದನು.
- 17ಎರಡನೆಯ ವರುಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಗುಡಾರವು ನಿಲ್ಲಿಸಲ್ಪಟ್ಟಿತು.
Cross references
- Numbers 25:13 ಅರಣ್ಯಕಾಂಡ 25:13ಅವನು ತನ್ನ ದೇವರಿಗೋಸ್ಕರ ಆಸಕ್ತನಾಗಿದ್ದು ಇಸ್ರಾಯೇಲಿನ ಮಕ್ಕಳಿಗೋಸ್ಕರ ಪಾಪ ಪ್ರಾಯಶ್ಚಿತ್ತ ಮಾಡಿದ್ದರಿಂದ ಅವನಿಗೂ ಅವನ ಹಿಂದೆ ಬರುವ ಅವನ ಸಂತತಿಗೂ ನಿತ್ಯ ಯಾಜಕತ್ವದ ಒಡಂಬಡಿಕೆಯಾಗಿರುವದು ಎಂದು ಹೇಳಿದನು.
- Hebrews 7:17–24 ಇಬ್ರಿಯರಿಗೆ 7:17–24ಆತನ ವಿಷಯದಲ್ಲಿ--ನೀನು ಸದಾಕಾಲವು ಮೆಲ್ಕಿಜೆದೇಕನ ತರಹದ ಯಾಜಕನಾಗಿದ್ದೀ ಎಂದು ಆತನು ಸಾಕ್ಷಿ ಕೊಡುತ್ತಾನೆ. ಮೊದಲಿದ್ದ ಆಜ್ಞೆಯು ನಿರ್ಬಲವಾಗಿಯೂ ನಿಷ್ಪ್ರಯೋಜಕವಾಗಿಯೂ ಇದ್ದು ನಿಜವಾಗಿಯೂ ರದ್ದಾಗಿಹೋಯಿತು. ನ್ಯಾಯ ಪ್ರಮಾಣವು ಯಾವದನ್ನೂ ಸಿದ್ದಿಗೆ ತಾರದಿರುವ ದರಿಂದ ಉತ್ತಮವಾಗಿರುವ ನಿರೀಕ್ಷೆಯು ಸಿದ್ಧಿಗೆ ತಂದಿತು. ಇದರಿಂದ ನಾವು ದೇವರ ಸವಿಾಪಕ್ಕೆ ಸೇರುತ್ತೇವೆ. ಆತನು ಆಣೆಯಿಲ್ಲದೆ ಯಾಜಕನಾಗಲೇ ಇಲ್ಲ. (ಆ ಯಾಜಕರೂ ಆಣೆಯಿಲ್ಲದೆ ಯಾಜಕರಾದರು); ಈತನಾದರೊ--ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನಾಗಿದ್ದೀ ಎಂದು ಆತನಿಗೆ ಹೇಳಿದ ಕರ್ತನು ಆಣೆಯಿಟ್ಟು ನುಡಿದನು, ಪಶ್ಚಾತ್ತಾಪಪಡುವದಿಲ್ಲ. ಇದರಿಂದಲೇ ಯೇಸು ಎಷ್ಟೋ ಶ್ರೇಷ್ಠವಾದ ಒಡಂಬಡಿಕೆಗೆ ಹೊಣೆಗಾರನಾದನು. ಅವರು (ಲೇವಿಯರು) ಶಾಶ್ವತವಾಗಿ ಉದ್ಯೋಗ ನಡಿಸುವದಕ್ಕೆ ಮರಣ ಕಾರಣದಿಂದ ನಿಜವಾಗಿಯೂ ಅವರಲ್ಲಿ ಯಾಜಕರಾದವರು ಅನೇಕರು; ಈತನಾ ದರೋ ಸದಾಕಾಲವಿರುವದರಿಂದ ಬದಲಾವಣೆಯಾ ಗದ ಯಾಜಕತ್ವವನ್ನು ಹೊಂದಿದ್ದಾನೆ.
- Hebrews 5:1–14 ಇಬ್ರಿಯರಿಗೆ 5:1–14ಪ್ರತಿಯೊಬ್ಬ ಮಹಾಯಾಜಕನು ಮನುಷ್ಯ ರೊಳಗಿಂದ ಆರಿಸಲ್ಪಟ್ಟು ಮನುಷ್ಯರಿ ಗೋಸ್ಕರ ದೇವರ ಕಾರ್ಯಗಳಿಗಾಗಿ ನೇಮಿಸಲ್ಪಡು ತ್ತಾನಲ್ಲಾ. ಅವನು ಕಾಣಿಕೆಗಳನ್ನೂ ಯಜ್ಞಗಳನ್ನೂ ಪಾಪಗಳಿಗೋಸ್ಕರ ಸಮರ್ಪಿಸಬೇಕು. ತಾನೂ ಬಲಹೀನನಾಗಿರುವದರಿಂದ ಅವನು ಜ್ಞಾನವಿಲ್ಲದವರ ಮೇಲೆಯೂ ಮಾರ್ಗ ತಪ್ಪಿದವರ ಮೇಲೆಯೂ ಕರುಣೆ ತೋರಿಸಬಲ್ಲನು. ಆ ಬಲಹೀನತೆಯ ಕಾರಣದಿಂದ ಅವನು ಜನರಿಗೋಸ್ಕರ ಹೇಗೋ ಹಾಗೆಯೇ ತನಗೋಸ್ಕರವೂ ಪಾಪಗಳಿಗಾಗಿ ಅರ್ಪಿಸಬೇಕಾದವ ನಾಗಿದ್ದಾನೆ. ಇದಲ್ಲದೆ ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವವನ್ನು ವಹಿಸಿಕೊಳ್ಳದೆ ಆರೋನನಂತೆ ದೇವರಿಂದ ಕರೆಯಲ್ಪಟ್ಟು ವಹಿಸಿಕೊಳ್ಳುತ್ತಾನೆ. ಹಾಗೆಯೇ ಕ್ರಿಸ್ತನು ಸಹ ಮಹಾಯಾಜಕನಾಗುವದಕ್ಕೆ ತನ್ನನ್ನು ತಾನೇ ಘನಪಡಿಸಿಕೊಳ್ಳಲಿಲ್ಲ; ಆದರೆ--ನೀನು ನನ್ನ ಮಗನು; ನಾನೇ ಈ ದಿನ ನಿನ್ನನ್ನು ಪಡೆದಿದ್ದೇನೆ ಎಂದು ಹೇಳಿದಾತನೇ ಈ ಗೌರವವನ್ನು ಆತನಿಗೆ ಕೊಟ್ಟನು. ಆತನು ಇನ್ನೊಂದು ಸ್ಥಳದಲ್ಲಿ--ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನು ಎಂದು ಹೇಳುತ್ತಾನೆ. ಆತನು ತನ್ನ ಶರೀರದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತನಾಗಿರುವಾತನಿಗೆ ಬಲ ವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ಭಯಪಟ್ಟದ್ದರಲ್ಲಿ ಕೇಳಲ್ಪ ಟ್ಟನು. ಹೀಗೆ ಆತನು ಮಗನಾಗಿದ್ದರೂ ತಾನು ಅನುಭ ವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತು ಕೊಂಡನು. ಇದಲ್ಲದೆ ಸಿದ್ಧಿಗೆ ಬಂದು ತನಗೆ ವಿಧೇಯ ರಾಗಿರುವವರೆಲ್ಲರಿಗೂ ನಿರಂತರವಾದ ರಕ್ಷಣೆಗೆ ಆತನು ಕರ್ತನಾದನು. ಆತನು ದೇವರಿಂದ ಮೆಲ್ಕಿಜೆದೇಕನ ತರಹದ ಮಹಾಯಾಜಕನೆಂದು ಕರೆಯಲ್ಪಟ್ಟನು. ಆತನ ವಿಷಯದಲ್ಲಿ ನಾವು ಹೇಳಬೇಕಾದ ಮಾತುಗಳು ಬಹಳ ಉಂಟು. ನಿಮ್ಮ ಕಿವಿಗಳು ಮಂದವಾದದರಿಂದ ಅದನ್ನು ವಿವರಿಸುವದು ಕಷ್ಟ ವಾಗಿದೆ. ನೀವು ಇಷ್ಟರೊಳಗೆ ಬೋಧಕರಾಗಿರ ಬೇಕಾಗಿದ್ದರೂ ಒಬ್ಬನು ನಿಮಗೆ ದೈವೋಕ್ತಿಗಳ ಮೂಲ ಪಾಠಗಳನ್ನು ತಿರಿಗಿ ಕಲಿಸಿಕೊಡಬೇಕಾಗಿದೆ; ನೀವು ಹಾಲು ಕುಡಿಯತಕ್ಕವರೇ ಹೊರತು ಗಟ್ಟಿಯಾದ ಆಹಾರವನ್ನು ತಿನ್ನತಕ್ಕವರಲ್ಲ. ಹಾಲು ಕುಡಿಯುವ ವನು ಕೂಸಿನಂತಿದ್ದು, ನೀತಿವಾಕ್ಯದಲ್ಲಿ ಅನುಭವವಿಲ್ಲದ ವನಾಗಿದ್ದಾನೆ.ಆದರೆ ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೊಸ್ಕರ ಅಂದರೆ ತಮ್ಮ ಜ್ಞಾನೇಂದ್ರಿ ಯಗಳನ್ನು ಸಾಧನೆಯಿಂದ ಶಿಕ್ಷಿಸಿಕೊಂಡು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿದವರಿಗೋಸ್ಕರವಾಗಿದೆ. ಆದರೆ ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೊಸ್ಕರ ಅಂದರೆ ತಮ್ಮ ಜ್ಞಾನೇಂದ್ರಿ ಯಗಳನ್ನು ಸಾಧನೆಯಿಂದ ಶಿಕ್ಷಿಸಿಕೊಂಡು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿದವರಿಗೋಸ್ಕರವಾಗಿದೆ.
- Hebrews 8:1–10 ಇಬ್ರಿಯರಿಗೆ 8:1–10ನಾವು ಈಗ ಹೇಳುವ ವಿಷಯಗಳ ಸಾರಾಂಶವೇನಂದರೆ--ಪರಲೋಕದೊ ಳಗೆ ಮಹಿಮೆಯುಳ್ಳಾತನ ಸಿಂಹಾಸನದ ಬಲಗಡೆಯಲ್ಲಿ ಕೂತುಕೊಂಡಿರುವ ಮಹಾಯಾಜಕನು ನಮಗಿದ್ದಾನೆ. ಈತನು ಪವಿತ್ರ ಸ್ಥಾನದಲ್ಲಿ ಅಂದರೆ ಮನುಷ್ಯನಿಂದಲ್ಲ, ಕರ್ತನೇ ಹಾಕಿದ ನಿಜವಾದ ಗುಡಾರದಲ್ಲಿ ಸೇವೆ ನಡಿಸುವಾತನಾಗಿದ್ದಾನೆ. ಪ್ರತಿಯೊಬ್ಬ ಮಹಾಯಾಜಕನು ಕಾಣಿಕೆಗಳನ್ನೂ ಯಜ್ಞಗಳನ್ನೂ ಸಮರ್ಪಿಸುವದಕ್ಕೆ ನೇಮಕವಾಗಿರು ತ್ತಾನಷ್ಟೆ. ಆದದರಿಂದ ಸಮರ್ಪಿಸುವದಕ್ಕೆ ಈತನಿಗೆ ಸಹ ಏನಾದರೂ ಇರುವದು ಅವಶ್ಯವಾಗಿದೆ. ಈತನು ಇನ್ನೂ ಭೂಮಿಯ ಮೇಲೆ ಇದ್ದದ್ದೇಯಾಗಿದ್ದರೆ ಯಾಜಕ ನಾಗುವ ಹಾಗಿದ್ದಿಲ್ಲ. ಯಾಕಂದರೆ ನ್ಯಾಯಪ್ರಮಾಣದ ಪ್ರಕಾರ ಕಾಣಿಕೆಗಳನ್ನು ಸಮರ್ಪಿಸುವ ಯಾಜಕರು ಇದ್ದೇ ಇರುತ್ತಾರೆ; ಅವರು ಪರಲೋಕದಲ್ಲಿರುವವಗಳ ನಿದರ್ಶನವೂ ಛಾಯೆಯೂ ಆಗಿರುವದರಲ್ಲಿ (ಆಲಯ ದಲ್ಲಿ) ಸೇವೆಯನ್ನು ನಡಿಸುವವರು. ಮೋಶೆಯು ದೇವರಿಂದ ಎಚ್ಚರಿಸಲ್ಪಟ್ಟು ಗುಡಾರವನ್ನು ಮಾಡುವದ ಕ್ಕಿದ್ದಾಗ--ನೋಡು, ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಮಾಡಬೇ ಆದರೆ ಆತನು ಅದಕ್ಕಿಂತ ಶ್ರೇಷ್ಠವಾದ ಸೇವೆಯನ್ನು ಹೊಂದಿದ ವನಾಗಿದ್ದಾನೆ; ಉತ್ತಮವಾದ ವಾಗ್ದಾನಗಳ ಮೇಲೆ ಸ್ಥಾಪಿತವಾದ ಶ್ರೇಷ್ಠವಾದ ಒಡಂಬಡಿಕೆಗೆ ಸಹ ಮಧ್ಯಸ್ಥನಾಗಿದ್ದಾನೆ. ಆ ಮೊದಲನೆಯ ಒಡಂಬಡಿಕೆಯು ದೋಷವಿಲ್ಲ ದ್ದಾಗಿದ್ದರೆ ಎರಡನೆಯದಕ್ಕೆ ಅವಕಾಶವು ಇರುತ್ತಿರಲಿಲ್ಲ. ಆತನು ಆದರ ಮೇಲೆ ತಪ್ಪುಹೊರಿಸಿ ಹೀಗೆಂ ದನು--ಇಗೋ, ನಾನು ಇಸ್ರಾಯೇಲ್ ಮನೆತನ ದೊಂದಿಗೂ ಯೆಹೂದ ಮನೆತನದೊಂದಿಗೂ ಹೊಸ ದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿ ಕೊಳ್ಳುವ ದಿನಗಳು ಬರುವವು. ಈ ಒಡಂಬಡಿಕೆಯು ನಾನು ಇವರ ಪಿತೃಗಳನ್ನು ಕೈಹಿಡಿದು ಐಗುಪ್ತದೇಶ ದೊಳಗಿಂದ ಕರಕೊಂಡು ಬಂದ ದಿನದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾ ದದರಿಂದ ನಾನು ಅವರನ್ನು ಲಕ್ಷ್ಯಕ್ಕೆ ತರಲಿಲ್ಲ ಎಂದು ಕರ್ತನು ಹೇಳುತ್ತಾನೆ. ಆ ದಿನಗಳ ತರುವಾಯ ನಾನು ಇಸ್ರಾಯೇಲ್ ಮನೆತನದ ವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು, ಅದೇನಂದರೆ--ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು; ಅವರ ಹೃದಯಗಳಲ್ಲಿ ಅವುಗಳನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರ
- Psalm 110:4 ಕೀರ್ತನೆಗಳು 110:4ನೀನು ಎಂದೆಂದಿಗೂ ಮೆಲ್ಕೀಜೆದೇಕನ ತರದ ಯಾಜಕನಾಗಿದ್ದೀ ಎಂದು ಕರ್ತನು ಆಣೆಯಿಟ್ಟು ನುಡಿ ದಿದ್ದಾನೆ; ಪಶ್ಚಾತ್ತಾಪಪಡನು.
- Exodus 30:33 ವಿಮೋಚನಕಾಂಡ 30:33ಅದರ ಹಾಗೆ ತೈಲ ಮಾಡುವವನೂ ಅದನ್ನು ಅನ್ಯನಿಗೆ ಕೊಡುವವನೂ ತನ್ನ ಜನರೊಳಗಿಂದ ತೆಗೆದುಹಾಕಲ್ಪಡಬೇಕು ಎಂದು ಹೇಳು ಅಂದನು.
- Exodus 29:9 ವಿಮೋಚನಕಾಂಡ 29:9ಆರೋನನಿಗೂ ಅವನ ಕುಮಾರರಿಗೂ ನಡುಕಟ್ಟುಗಳನ್ನು ಕಟ್ಟಿ ಅವರಿಗೆ ಕುಲಾಯಿಗಳನ್ನು ಇಡಬೇಕು. ಹೀಗೆ ಅವರಿಗೆ ಯಾಜಕ ಸೇವೆಯು ಶಾಶ್ವತ ಕಟ್ಟಳೆಯಾಗಿರುವದು. ಆರೋನ ನನ್ನೂ ಅವನ ಕುಮಾರರನ್ನೂ ನೀನು ಪ್ರತಿಷ್ಠೆ ಮಾಡಬೇಕು.
- Hebrews 7:7 ಇಬ್ರಿಯರಿಗೆ 7:7ಆಶೀರ್ವಾದ ಹೊಂದುವವ ನಿಗಿಂತ ಆಶಿರ್ವದಿಸುವವನು ದೊಡ್ಡವನು ಎಂಬದು ವಿವಾದವಿಲ್ಲದ ಮಾತಷ್ಟೆ. 8ಇಲ್ಲಿ ಸಾಯತಕ್ಕ ಮನುಷ್ಯರು ದಶಮ ಭಾಗಗಳನ್ನು ತಕ್ಕೊಳ್ಳುತ್ತಾರೆ; ಆದರೆ ಅಲ್ಲಿ ಜೀವಿಸುತ್ತಿದ್ದಾನೆಂದು ಸಾಕ್ಷಿಹೊಂದಿರುವಾತನು ತಕ್ಕೊಳ್ಳುತ್ತಾನೆ.
- Exodus 30:31 ವಿಮೋಚನಕಾಂಡ 30:31ಇಸ್ರಾಯೇಲ್ ಮಕ್ಕಳಿಗೆ ನೀನು--ಇದೇ ನಿಮ್ಮ ತಲತಲಾಂತರಗಳಲ್ಲಿ ನನಗೆ ಪರಿಶುದ್ಧವಾದ ಅಭಿಷೇಕಿ ಸುವ ಎಣ್ಣೆಯಾಗಿರಬೇಕು.
- Exodus 12:14 ವಿಮೋಚನಕಾಂಡ 12:14ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವದು; ನೀವು ಇದನ್ನು ಕರ್ತನಿಗೆ ಹಬ್ಬವಾಗಿ ತಲತಲಾಂತರ ಗಳಲ್ಲಿ ಆಚರಿಸಬೇಕು; ಇದನ್ನು ನಿತ್ಯ ಶಾಸನದಂತೆ ಎಂದೆಂದಿಗೂ ಆಚರಿಸಬೇಕು.
- Hebrews 7:3 ಇಬ್ರಿಯರಿಗೆ 7:3ಆತನಿಗೆ ತಂದೆಯೂ ತಾಯಿಯೂ ವಂಶಾವಳಿಯೂ ಇಲ್ಲ, ದಿವಸಗಳ ಆರಂಭವೂ ಜೀವದ ಅಂತ್ಯವೂ ಇಲ್ಲ. ಆದರೆ ಆತನು ದೇವರ ಮಗನಿಗೆ ಹೋಲಿಕೆಯಾಗಿ ಮಾಡಲ್ಪಟ್ಟಿದ್ದಾನೆ. ಇದಲ್ಲದೆ ಆತನು ನಿರಂತರವಾಗಿ ಯಾಜಕನಾಗಿದ್ದಾನೆ.