Exodus · chapter 40 · verse 19
Exodus 40:19 in Kannada
ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಗುಡಾರದ ಮೇಲೆ ಡೇರೆಯನ್ನು ಹರಡಿಸಿ ಡೇರೆಯ ಹೊದಿಕೆಯನ್ನು ಅದರ ಮೇಲೆ ಹಾಕಿದನು.
Kartanu moshege aajnyaapisida haage gudaarada mele dereyannu haradisi dereya hodikeyannu adara mele haakidanu.
Exodus 40:19 in English
- King James Version (KJV)
- And he spread abroad the tent over the tabernacle, and put the covering of the tent above upon it; as the LORD commanded Moses.
- World English Bible (WEB)
- He spread the covering over the tent, and put the roof of the tabernacle above on it, as the LORD commanded Moses.
- American Standard Version (ASV)
- And he spread the tent over the tabernacle, and put the covering of the tent above upon it; as Jehovah commanded Moses.
- Bible in Basic English (BBE)
- Stretching the outer tent over it, and covering it, as the Lord had given him orders.
- Darby Translation (DBY)
- And he spread the tent over the tabernacle, and put the covering of the tent above over it; as Jehovah had commanded Moses.
- Webster's Bible (WBS)
- And he spread abroad the tent over the tabernacle, and put the covering of the tent above upon it; as the LORD commanded Moses.
- Young's Literal Translation (YLT)
- and spreadeth the tent over the tabernacle, and putteth the covering of the tent upon it above, as Jehovah hath commanded Moses.
Read in context
- 17ಎರಡನೆಯ ವರುಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಗುಡಾರವು ನಿಲ್ಲಿಸಲ್ಪಟ್ಟಿತು.
- 18ಆಗ ಮೋಶೆಯು ಗುಡಾರವನ್ನು ನಿಲ್ಲಿಸಿ ಅದರ ಕಾಲುಗಳನ್ನು ಬಿಗಿದು ಅದರ ಹಲಗೆಗಳನ್ನು ಇರಿಸಿ ಅಗುಳಿಗಳನ್ನು ಹಾಕಿ ಅದರ ಸ್ತಂಭಗಳನ್ನು ನಿಲ್ಲಿಸಿದನು.
- 19ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಗುಡಾರದ ಮೇಲೆ ಡೇರೆಯನ್ನು ಹರಡಿಸಿ ಡೇರೆಯ ಹೊದಿಕೆಯನ್ನು ಅದರ ಮೇಲೆ ಹಾಕಿದನು.
- 20ಅವನು ಪ್ರಮಾಣವನ್ನು ತೆಗೆದುಕೊಂಡು ಮಂಜೂಷದ ಪೆಟ್ಟಿಗೆಯಲ್ಲಿ ಇಟ್ಟು ಮಂಜೂಷಕ್ಕೆ ಕೋಲುಗಳನ್ನು ಸೇರಿಸಿ ಮಂಜೂಷದ ಮೇಲೆ ಕರುಣಾ ಸನವನ್ನು ಇಟ್ಟನು.
- 21ಅವನು ಮಂಜೂಷವನ್ನು ಗುಡಾರಕ್ಕೆ ತಂದು ಮರೆಮಾಡುವ ತೆರೆಯನ್ನಿರಿಸಿದನು. ಕರ್ತನು ಹೇಳಿದ ಹಾಗೆಯೇ ಮೋಶೆಯು ಮಾಡಿದನು.
Cross references
- Exodus 36:8–19 ವಿಮೋಚನಕಾಂಡ 36:8–19ಹೀಗಿರಲಾಗಿ ಕೆಲಸದವರಲ್ಲಿ ಜ್ಞಾನ ಹೃದಯವುಳ್ಳ ಪ್ರತಿಯೊಬ್ಬನೂ ಗುಡಾರವನ್ನು ಹತ್ತು ತೆರೆಗಳಿಂದ ಮಾಡಿ ಹೊಸೆದ ನಾರಿನಿಂದಲೂ ನೀಲಿ, ಧೂಮ್ರ, ರಕ್ತವರ್ಣದ ಹೊಸೆದ ನಯವಾದ ನೂಲಿನಿಂದಲೂ ಕೌಶಲ್ಯದ ಕೆಲಸದಿಂದಲೂ ಕೆರೂಬಿಗಳನ್ನು ಮಾಡಿ ದನು. ಒಂದು ತೆರೆಯು ಇಪ್ಪತ್ತೆಂಟು ಮೊಳ ಉದ್ದ ವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇತ್ತು. ತೆರೆಗಳೆಲ್ಲಾ ಒಂದೇ ಅಳತೆಯವುಗಳಾಗಿದ್ದವು. ಅವನು ಐದು ತೆರೆಗಳನ್ನು ಒಂದಕ್ಕೊಂದು ಜೋಡಿ ಸಿದನು, ಬೇರೆ ಐದು ತೆರೆಗಳನ್ನೂ ಒಂದಕ್ಕೊಂದು ಜೋಡಿಸಿದನು. ಈ ಎರಡು ಜೋಡನೆಗಳಲ್ಲಿ ಒಂದೊಂದರ ಕೊನೇ ಬಟ್ಟೆಯ ಅಂಚಿನಲ್ಲಿ ನೀಲಿ ದಾರದಿಂದ ಕುಣಿಕೆಗಳನ್ನು ಮಾಡಿದರು; ಒಂದು ತೆರೆಯಲ್ಲಿ ಐವತ್ತು ಕುಣಿಕೆಗಳನ್ನು ಮಾಡಿ ಇನ್ನೊಂದು ತೆರೆಯ ಅಂಚನ್ನು ಜೋಡಿಸುವ ಸ್ಥಳದಲ್ಲಿ ಐವತ್ತು ಕುಣಿಕೆಗಳನ್ನು ಮಾಡಿದನು. ಆ ಕುಣಿಕೆಗಳು ಒಂದು ತೆರೆಯನ್ನು ಮತ್ತೊಂದು ತೆರೆಯು ಹಿಡಿದುಕೊಳ್ಳುವಂತೆ ಮಾಡಿದನು. ಅವನು ಚಿನ್ನದ ಐವತ್ತು ಕೊಂಡಿಗಳನ್ನು ಮಾಡಿ ಆ ಕೊಂಡಿಗಳಿಂದ ತೆರೆಗಳನ್ನು ಒಂದ ಕ್ಕೊಂದಾಗಿ ಜೋಡಿಸಿದನು. ಹೀಗೆ ಅದು ಒಂದೇ ಗುಡಾರವಾಯಿತು. ಈ ಗುಡಾರದ ಮೇಲಿನ ಡೇರೆಗೋಸ್ಕರ ಅವನು ಮೇಕೆಯ ಕೂದಲಿನ ಹನ್ನೊಂದು ತೆರೆಗಳನ್ನು ಮಾಡಿ ಸಿದನು. ಒಂದು ತೆರೆಯು ಮೂವತ್ತು ಮೊಳ ಉದ್ದ ವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇತ್ತು. ಹನ್ನೊಂದು ತೆರೆಗಳೂ ಒಂದೇ ಅಳತೆಯಾಗಿದ್ದವು. ಅವನು ಐದು ತೆರೆಗಳನ್ನು ಬೇರೆಯಾಗಿಯೂ ಆರು ತೆರೆಗಳನ್ನು ಬೇರೆಯಾಗಿಯೂ ಜೋಡಿಸಿದನು. ಅವನು ತೆರೆಯ ಕೊನೇ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನೂ ಎರಡನೆಯ ತೆರೆಯನ್ನು ಜೋಡಿಸುವ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನೂ ಮಾಡಿದನು. ಅದು ಒಂದೇ ಡೇರೆ ಆಗುವಂತೆ ಅವುಗಳ ಜೋಡ ಣೆಗೆ ಅವನು ಐವತ್ತು ಹಿತ್ತಾಳೆಯ ಕೊಂಡಿಗಳನ್ನು ಮಾಡಿದನು. ಅವನು ಆ ಡೇರೆಗಾಗಿ ಕೆಂಪು ಬಣ್ಣದಲ್ಲಿ ಅದ್ದಿ ತೆಗೆದ ಟಗರುಗಳ ಚರ್ಮದ ಹೊದಿಕೆಯನ್ನು ಮಾಡಿದನು. ಅದರ ಮೇಲೆ ಕಡಲ ಹಂದಿಯ ಚರ್ಮದ ಮೇಲ್ಹೊದಿಕೆಯನ್ನು ಮಾಡಿದನು.
- Exodus 26:1–14 ವಿಮೋಚನಕಾಂಡ 26:1–14ಗುಡಾರವನ್ನು ಹತ್ತು ತೆರೆಗಳಿಂದ ಮಾಡ ಬೇಕು. ಅವು ನಯವಾಗಿ ಹೊಸೆದ ನಾರಿನಿಂದಲೂ ನೀಲಿ, ಧೂಮ್ರ, ರಕ್ತವರ್ಣಗ ಳಿಂದಲೂ ಕೌಶಲ್ಯದಿಂದ ಮಾಡಿದ ಕೆರೂಬಿಗಳುಳ್ಳವು ಗಳಾಗಿಯೂ ಇರಬೇಕು. ಒಂದು ತೆರೆಯ ಉದ್ದವು ಇಪ್ಪತ್ತೆಂಟು ಮೊಳ, ಅದರ ಅಗಲವು ನಾಲ್ಕು ಮೊಳ ವಾಗಿರಬೇಕು ಪ್ರತಿಯೊಂದು ತೆರೆಯು ಒಂದೇ ಅಳತೆ ಯುಳ್ಳದ್ದಾಗಿರಬೇಕು. ಐದು ತೆರೆಗಳು ಒಂದಕ್ಕೊಂದು ಜೋಡಿಸಲ್ಪಟ್ಟಿರಬೇಕು, ಬೇರೆ ಐದು ತೆರೆಗಳು ಒಂದ ಕ್ಕೊಂದು ಜೋಡಿಸಲ್ಪಟ್ಟಿರಬೇಕು. ಒಂದು ತೆರೆಯ ಅಂಚಿನ ಕೊನೆಗೆ ಜೋಡಿಸುವ ಸ್ಥಳದಲ್ಲಿ ನೀಲಿ ನೂಲಿನ ಕುಣಿಕೆಗಳನ್ನು ಮಾಡಿ ಎರಡನೇ ಜೋಡನೆಯ ಕಡೇ ತೆರೆಯ ಕೊನೆಯಲ್ಲಿಯೂ ಹಾಗೆಯೇ ಮಾಡಬೇಕು. ಒಂದು ತೆರೆಯನ್ನು ಜೋಡಿಸುವ ಸ್ಥಳದಲ್ಲಿ ಇರುವ ಇನ್ನೊಂದು ತೆರೆಯ ಕೊನೆಯಲ್ಲಿ ಐವತ್ತು ಕುಣಿಕೆಗಳನ್ನು ಮಾಡಬೇಕು. ಆ ಕುಣಿಕೆಗಳು ಒಂದಕ್ಕೊಂದು ಸರಿ ಯಾಗಿ ಹಿಡುಕೊಳ್ಳುವವುಗಳಾಗಿರಬೇಕು. ಬಂಗಾರದ ಐವತ್ತು ಕೊಂಡಿಗಳನ್ನು ಮಾಡಿ ಅವುಗಳಿಂದ ತೆರೆಗಳನ್ನು ಒಂದಕ್ಕೊಂದು ಜೋಡಿಸಬೇಕು. ಹೀಗೆ ಅದು ಒಂದೇ ಗುಡಾರವಾಗುವದು. ಇದಲ್ಲದೆ ನೀನು ಗುಡಾರದ ಮೇಲೆ ಹೊದಿಸು ವದಕ್ಕಾಗಿ ಮೇಕೆ ಕೂದಲಿನಿಂದ ಹನ್ನೊಂದು ತೆರೆಗಳನ್ನು ಮಾಡಬೇಕು. ಒಂದು ತೆರೆಯ ಉದ್ದವು ಮೂವತ್ತು ಮೊಳ, ಅದರ ಅಗಲವು ನಾಲ್ಕು ಮೊಳ, ಹನ್ನೊಂದು ತೆರೆಗಳಿಗೂ ಅದೇ ಅಳತೆ ಇರಬೇಕು. ಐದು ತೆರೆಗಳನ್ನು ಬೇರೆಯಾಗಿಯೂ ಆರು ತೆರೆಗಳನ್ನು ಬೇರೆಯಾಗಿಯೂ ಜೋಡಿಸಿ ಆರನೆಯ ತೆರೆಯನ್ನು ಗುಡಾರದ ಮುಂಭಾಗ ದಲ್ಲಿ ಇಮ್ಮಡಿ ಮಾಡಬೇಕು. ಜೋಡಿಸುವಾಗ ಕಡೇ ಒಂದು ತೆರೆಯ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನೂ ಜೋಡಣೆಯಲ್ಲಿರುವ ಎರಡನೇ ತೆರೆಯ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನೂ ಮಾಡಬೇಕು. ಇದಲ್ಲದೆ ಹಿತ್ತಾಳೆಯ ಐವತ್ತು ಕೊಂಡಿಗಳನ್ನು ಮಾಡಿ ಕೊಂಡಿಗಳನ್ನು ಕುಣಿಕೆಗಳಲ್ಲಿ ಸಿಕ್ಕಿಸಿ ಗುಡಾರವು ಒಂದಾಗುವ ಹಾಗೆ ಜೋಡಿಸಬೇಕು. ಗುಡಾರದ ತೆರೆಗಳಲ್ಲಿ ಮಿಕ್ಕಿ ಉಳಿದ ಅರ್ಧ ತೆರೆಯು ಗುಡಾರದ ಹಿಂಭಾಗದಲ್ಲಿ ತೂಗಾಡಲಿ. ಗುಡಾರದ ತೆರೆಗಳ ಉದ್ದದಲ್ಲಿ ಆಚೆ ಈಚೆ ಮಿಕ್ಕಿದ ಒಂದು ಮೊಳವು ಗುಡಾರದ ಈಚೆ ಆಚೆಯಲ್ಲಿ ಅದನ್ನು ಮುಚ್ಚುವದಕ್ಕಾಗಿ ತೂಗಾಡಲಿ. ಕೆಂಪು ಬಣ್ಣದ ಟಗರಿನ ಚರ್ಮಗಳಿಂದ ಗುಡಾರಕ್ಕೆ ಹೊದಿಕೆಯನ್ನೂ ಕಡಲು ಹಂದಿಯ ಚರ್ಮ ಗಳಿಂದ ಮೇಲು ಹೊದಿಕೆಯನ್ನೂ ಮಾಡಬೇಕು.