Exodus · chapter 40 · verse 3
Exodus 40:3 in Kannada
ಮಂಜೂಷದ ಸಾಕ್ಷಿಯ ಪೆಟ್ಟಿಗೆಯನ್ನು ಒಳಗಿಟ್ಟು ಅದನ್ನು ನೀನು ತೆರೆಯಿಂದ ಮುಚ್ಚಬೇಕು.
Manjooshada saakshiya pettigeyannu olagittu adannu neenu tereyinda muchchabeku.
Exodus 40:3 in English
- King James Version (KJV)
- And thou shalt put therein the ark of the testimony, and cover the ark with the vail.
- World English Bible (WEB)
- You shall put the ark of the covenant in it, and you shall screen the ark with the veil.
- American Standard Version (ASV)
- And thou shalt put therein the ark of the testimony, and thou shalt screen the ark with the veil.
- Bible in Basic English (BBE)
- And inside it put the ark of the law, hanging the veil before it.
- Darby Translation (DBY)
- And thou shalt put in it the ark of the testimony, and shalt cover the ark with the veil.
- Webster's Bible (WBS)
- And thou shalt put in it the ark of the testimony, and cover the ark with the vail.
- Young's Literal Translation (YLT)
- and hast set there the ark of the testimony, and hast covered over the ark with the vail,
Read in context
- 1ಆಗ ಕರ್ತನು ಮೋಶೆಯ ಸಂಗಡ ಮಾತನಾಡಿ--
- 2ಮೊದಲನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಸಭೆಯ ಡೇರೆಯನ್ನು ಮತ್ತು ಗುಡಾರವನ್ನು ಎತ್ತಿ ನಿಲ್ಲಿಸು.
- 3ಮಂಜೂಷದ ಸಾಕ್ಷಿಯ ಪೆಟ್ಟಿಗೆಯನ್ನು ಒಳಗಿಟ್ಟು ಅದನ್ನು ನೀನು ತೆರೆಯಿಂದ ಮುಚ್ಚಬೇಕು.
- 4ಮೇಜನ್ನು ಒಳಗೆ ತಂದು ಅದರ ಮೇಲಿಡಬೇಕಾದದ್ದನ್ನು ಸರಿಯಾಗಿ ಇಡಬೇಕು. ದೀಪ ಸ್ತಂಭವನ್ನು ಒಳಗೆ ತಂದು ನೀನು ಅದರ ದೀಪಗಳನ್ನು ಅಂಟಿಸಬೇಕು.
- 5ನೀನು ಧೂಪಕ್ಕೋಸ್ಕರ ಮಾಡಿದ ಚಿನ್ನದ ಬಲಿಪೀಠವನ್ನು ಮಂಜೂಷದ ಸಾಕ್ಷಿಯ ಪೆಟ್ಟಿಗೆಗೆ ಎದುರಾಗಿ ಇಟ್ಟು, ಗುಡಾರದ ಬಾಗಿಲಿಗೆ ತೆರೆಯನ್ನು ಹಾಕಬೇಕು.
Cross references
- Numbers 4:5 ಅರಣ್ಯಕಾಂಡ 4:5ಪಾಳೆಯವು ಹೊರಡು ವಾಗ ಆರೋನನೂ ಅವನ ಮಕ್ಕಳೂ ಒಳಗೆ ಹೋಗಿ ತೆರೆಯನ್ನು ಇಳಿಸಿ ಅದರಿಂದ ಸಾಕ್ಷಿಯ ಮಂಜೂಷವನ್ನು ಮುಚ್ಚಿ
- Exodus 35:12 ವಿಮೋಚನಕಾಂಡ 35:12ಮಂಜೂಷವನ್ನೂ ಅದರ ಕೋಲುಗಳನ್ನೂ ಅವುಗಳೊಂದಿಗೆ ಕರುಣಾಸನ ವನ್ನೂ ಮರೆಮಾಡುವ ತೆರೆಯನ್ನೂ
- Revelation 11:19 ಪ್ರಕಟನೆ 11:19ಆಗ ಪರಲೋಕದಲ್ಲಿ ದೇವಾಲಯವು ತೆರೆಯ ಲ್ಪಟ್ಟಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.
- Leviticus 16:14 ಯಾಜಕಕಾಂಡ 16:14ಆ ಹೋರಿಯ ರಕ್ತದಿಂದ ತೆಗೆದು ಕೊಂಡು ಕೃಪಾಸನದ ಮೇಲೆ ಪೂರ್ವಕ್ಕೆ ತನ್ನ ಬೆರಳಿನಿಂದ ಚಿಮುಕಿಸಬೇಕು; ಕೃಪಾಸನದ ಮುಂದೆ ಆ ರಕ್ತವನ್ನು ತನ್ನ ಬೆರಳಿನಿಂದ ಏಳು ಸಾರಿ ಚಿಮುಕಿಸಬೆಕು.
- Exodus 25:22 ವಿಮೋಚನಕಾಂಡ 25:22ನಾನು ಅಲ್ಲಿ ನಿನ್ನನ್ನು ಸಂಧಿಸಿ ಕರುಣಾಸನದ ಮೇಲಿನಿಂದ ಮಂಜೂಷದ ಮೇಲಿರುವ ಎರಡು ಕೆರೂಬಿಗಳ ಮಧ್ಯದಿಂದ ಇಸ್ರಾಯೇಲ್ ಮಕ್ಕಳ ವಿಷಯದಲ್ಲಿ ಆಜ್ಞಾಪಿಸುವವು ಗಳನ್ನೆಲ್ಲಾ ನಿನಗೆ ತಿಳಿಸುವೆನು.
- Exodus 40:20–21 ವಿಮೋಚನಕಾಂಡ 40:20–21ಅವನು ಪ್ರಮಾಣವನ್ನು ತೆಗೆದುಕೊಂಡು ಮಂಜೂಷದ ಪೆಟ್ಟಿಗೆಯಲ್ಲಿ ಇಟ್ಟು ಮಂಜೂಷಕ್ಕೆ ಕೋಲುಗಳನ್ನು ಸೇರಿಸಿ ಮಂಜೂಷದ ಮೇಲೆ ಕರುಣಾ ಸನವನ್ನು ಇಟ್ಟನು. ಅವನು ಮಂಜೂಷವನ್ನು ಗುಡಾರಕ್ಕೆ ತಂದು ಮರೆಮಾಡುವ ತೆರೆಯನ್ನಿರಿಸಿದನು. ಕರ್ತನು ಹೇಳಿದ ಹಾಗೆಯೇ ಮೋಶೆಯು ಮಾಡಿದನು.
- Exodus 37:1–9 ವಿಮೋಚನಕಾಂಡ 37:1–9ಬೆಚಲೇಲನು ಜಾಲೀ ಮರದಿಂದಎರಡುವರೆ ಮೊಳ ಉದ್ದ, ಒಂದುವರೆ ಮೊಳ ಅಗಲ, ಒಂದುವರೆ ಮೊಳ ಎತ್ತರವಾಗಿರುವ ಮಂಜೂಷವನ್ನು ಮಾಡಿದನು. ಅದನ್ನು ಚೊಕ್ಕ ಬಂಗಾರದಿಂದ ಒಳಗೂ ಹೊರಗೂ ಹೊದಿಸಿ ಅದರ ಸುತ್ತಲೂ ಚಿನ್ನದ ಕಿರೀಟವನ್ನು ಮಾಡಿದನು. ಅವನು ಅದರ ನಾಲ್ಕು ಮೂಲೆಗಳಿಗೆ ನಾಲ್ಕು ಉಂಗುರಗಳನ್ನು ಎರಕ ಹೊಯ್ದನು; ಇದಲ್ಲದೆ ಅದರ ಒಂದು ಮಗ್ಗಲಿಗೆ ಎರಡು ಇನ್ನೊಂದು ಮಗ್ಗಲಿಗೆ ಎರಡು ಉಂಗುರಗಳನ್ನು ಎರಕ ಹೊಯ್ದನು. ಅವನು ಜಾಲೀ ಮರದಿಂದ ಕೋಲುಗಳನ್ನು ಮಾಡಿ ಚಿನ್ನದಿಂದ ಅವುಗಳನ್ನು ಹೊದಿ ಸಿದನು. ಮಂಜೂಷವನ್ನು ಹೊರುವದಕ್ಕಾಗಿ ಕೋಲು ಗಳನ್ನು ಮಂಜೂಷದ ಭಾಗಗಳಲ್ಲಿರುವ ಉಂಗುರ ಗಳಲ್ಲಿ ಸೇರಿಸಿದನು. ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಇರುವ ಕರುಣಾಸನವನ್ನು ಚೊಕ್ಕ ಬಂಗಾರ ದಿಂದ ಮಾಡಿದನು. ಅವನು ಕರುಣಾಸನದ ಎರಡು ತುದಿಗಳಲ್ಲಿ ಎರಡು ಚಿನ್ನದ ಕೆರೂಬಿಗಳನ್ನು ಮಾಡಿದನು. ಅವು ಒಂದೇ ತುಂಡಿನಲ್ಲಿ ಹೊಡೆದು ಮಾಡಿದ್ದಾಗಿದ್ದವು. ಒಂದು ಬದಿಯ ಕೊನೆಯಲ್ಲಿ ಒಂದು ಕೆರೂಬಿಯನ್ನು ಇನ್ನೊಂದು ಬದಿಯ ಕೊನೆಯಲ್ಲಿ ಇನ್ನೊಂದು ಕೆರೂಬಿ ಯನ್ನು ಮಾಡಿದನು. ಹೀಗೆ ಕರುಣಾಸನದ ಎರಡೂ ಬದಿಗಳಲ್ಲಿ ಕೆರೂಬಿಯರನ್ನು ಮಾಡಿದನು. ಆ ಕೆರೂಬಿ ಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಹರಡಿಕೊಂಡು ಕರುಣಾಸನವನ್ನು ಮುಚ್ಚಿದಂತಿದ್ದವು, ಆ ಕೆರೂಬಿಯರ ಮುಖಗಳು ಒಂದನ್ನೊಂದು ನೋಡುತ್ತಿರುವಂತೆಯೂ ಕರುಣಾಸನವನ್ನು ನೋಡುತ್ತಿರುವಂತೆಯೂ ಇದ್ದವು.
- Exodus 36:35–36 ವಿಮೋಚನಕಾಂಡ 36:35–36ನೀಲಿ, ಧೂಮ್ರ, ರಕ್ತವರ್ಣ, ನಯವಾಗಿ ಹೊಸೆದ ನಾರುಗಳಿಂದ ತೆರೆಯನ್ನು ಮಾಡಿದನು. ಅದರ ಮೇಲೆ ಕುಶಲ ಕೆಲಸದಿಂದ ಕೆರೂಬಿಗಳನ್ನು ಮಾಡಿದನು. ಇದಲ್ಲದೆ ಜಾಲೀ ಮರದ ನಾಲ್ಕು ಸ್ತಂಭಗಳನ್ನು ಮಾಡಿ ಚಿನ್ನದಿಂದ ಅವುಗಳನ್ನು ಹೊದಿಸಿ ದನು. ಅವುಗಳ ಮೊಳೆಗಳು ಚಿನ್ನದವುಗಳಾಗಿದ್ದವು; ಅವನು ಅವುಗಳಿಗೆ ಬೆಳ್ಳಿಯ ನಾಲ್ಕು ಕಾಲುಗಳನ್ನು ಎರಕಹೊಯ್ದನು.
- Exodus 26:31 ವಿಮೋಚನಕಾಂಡ 26:31ನೀಲಿ ಧೂಮ್ರ ರಕ್ತವರ್ಣಗಳಿರುವ ನಯವಾದ ನಾರುಗಳಿಂದ ಹೊಸೆದ ತೆರೆಯನ್ನು ಮಾಡಬೇಕು. ಕೌಶಲ್ಯದಿಂದ ಮಾಡಿದ ಕೆರೂಬಿಗಳುಳ್ಳದ್ದನ್ನಾಗಿ ಅದನ್ನು ಮಾಡಬೇಕು.
- Exodus 25:10 ವಿಮೋಚನಕಾಂಡ 25:10ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಇರುವ ಮಂಜೂಷವನ್ನು ಜಾಲೀ ಮರದಿಂದ ಮಾಡಬೇಕು.
- Exodus 26:33–34 ವಿಮೋಚನಕಾಂಡ 26:33–34ಆ ತೆರೆಯನ್ನು ಕೊಂಡಿಗಳ ಕೆಳಗೆ ತೂಗುಹಾಕಿ ತೆರೆಯೊಳಗೆ ಸಾಕ್ಷಿ ಹಲಗೆಗಳ ಮಂಜೂಷವನ್ನು ತರ ಬೇಕು. ಪರಿಶುದ್ಧ ಸ್ಥಳವನ್ನೂ ಅತಿಪರಿಶುದ್ಧ ಸ್ಥಳವನ್ನೂ ಆ ತೆರೆಯು ವಿಂಗಡಿಸುವದು. ಅತಿಪರಿಶುದ್ಧ ಸ್ಥಳದಲ್ಲಿ ಸಾಕ್ಷಿ ಹಲಗೆಗಳ ಮಂಜೂಷದ ಮೇಲೆ ಕರುಣಾಸನ ವನ್ನು ಇಡಬೇಕು.