Exodus · chapter 40 · verse 34
Exodus 40:34 in Kannada
ಆಗ ಮೇಘವು ಸಭೆಯ ಡೇರೆಯನ್ನು ಮುಚ್ಚಿಕೊಂಡು ಕರ್ತನ ಮಹಿಮೆಯು ಗುಡಾರವನ್ನು ತುಂಬಿಕೊಂಡಿತು.
Aaga meghavu sabheya dereyannu muchchikondu kartana mahimeyu gudaaravannu tumbikonditu.
Exodus 40:34 in English
- King James Version (KJV)
- Then a cloud covered the tent of the congregation, and the glory of the LORD filled the tabernacle.
- World English Bible (WEB)
- Then the cloud covered the Tent of Meeting, and the LORD’s glory filled the tabernacle.
- American Standard Version (ASV)
- Then the cloud covered the tent of meeting, and the glory of Jehovah filled the tabernacle.
- Bible in Basic English (BBE)
- Then the cloud came down covering the Tent of meeting, and the House was full of the glory of the Lord;
- Darby Translation (DBY)
- And the cloud covered the tent of meeting, and the glory of Jehovah filled the tabernacle.
- Webster's Bible (WBS)
- Then a cloud covered the tent of the congregation, and the glory of the LORD filled the tabernacle.
- Young's Literal Translation (YLT)
- And the cloud covereth the tent of meeting, and the honour of Jehovah hath filled the tabernacle;
Read in context
- 32ಅವರು ಸಭೆಯ ಡೇರೆಯೊಳಗೆ ಸೇರುವ ಸಮಯದಲ್ಲಿಯೂ ಯಜ್ಞವೇದಿಯ ಸವಿಾಪಕ್ಕೆ ಬರುವ ಸಮಯದಲ್ಲಿಯೂ ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವರು ತೊಳೆದುಕೊಂಡರು.
- 33ಗುಡಾರಕ್ಕೂ ಯಜ್ಞವೇದಿಗೂ ಸುತ್ತಲೂ ಅಂಗಳ ವನ್ನು ನಿಲ್ಲಿಸಿ ಅಂಗಳದ ಬಾಗಿಲಿನ ತೆರೆಯನ್ನು ತೂಗು ಹಾಕಿದನು. ಈ ಪ್ರಕಾರ ಮೋಶೆಯು ಆ ಕೆಲಸವನ್ನು ತೀರಿಸಿದನು.
- 34ಆಗ ಮೇಘವು ಸಭೆಯ ಡೇರೆಯನ್ನು ಮುಚ್ಚಿಕೊಂಡು ಕರ್ತನ ಮಹಿಮೆಯು ಗುಡಾರವನ್ನು ತುಂಬಿಕೊಂಡಿತು.
- 35ಸಭೆ ಡೇರೆಯ ಮೇಲೆ ಮೇಘವು ನೆಲೆಯಾಗಿದದ್ದರಿಂದಲೂ ಕರ್ತನ ಮಹಿಮೆಯು ಗುಡಾರವನ್ನು ತುಂಬಿದ್ದರಿಂದಲೂ ಮೋಶೆಯು ಒಳಗೆ ಪ್ರವೇಶಿಸಲಾರದೆ ಇದ್ದನು.
- 36ಮೇಘವು ಗುಡಾರದ ಮೇಲಕ್ಕೆ ಎತ್ತಲ್ಪಟ್ಟಾಗ ಇಸ್ರಾಯೇಲ್ ಮಕ್ಕಳು ತಮ್ಮ ಎಲ್ಲಾ ಪ್ರಯಾಣಗಳನ್ನು ಮುಂದುವರಿಸುತ್ತಿದ್ದರು.
Cross references
- Revelation 15:8 ಪ್ರಕಟನೆ 15:8ದೇವರ ಮಹಿಮೆ ಯಿಂದಲೂ ಆತನ ಶಕ್ತಿಯಿಂದಲೂ ಉಂಟಾದ ಹೊಗೆ ಯಿಂದ ಆಲಯವು ತುಂಬಿದ ಕಾರಣ ಆ ಏಳುಮಂದಿ ದೂತರ ಏಳು ಉಪದ್ರವಗಳು ತೀರುವ ತನಕ ಆ ಆಲಯದೊಳಗೆ ಪ್ರವೇಶಿಸುವದಕ್ಕೆ ಯಾರಿಂದಲೂ ಆಗಲಿಲ್ಲ.
- Numbers 9:15–23 ಅರಣ್ಯಕಾಂಡ 9:15–23ಗುಡಾರವನ್ನು ಎತ್ತಿದ ದಿವಸದಲ್ಲಿ ಮೇಘವು ನಿವಾಸದ ಕಡೆಗೆ ಅಂದರೆ, ಸಾಕ್ಷೀ ಗುಡಾರವನ್ನು ಮುಚ್ಚಿತು. ಸಾಯಂಕಾಲದಿಂದ ಉದಯದ ವರೆಗೆ ಅದು ಬೆಂಕಿಯಂತೆ ಗುಡಾರದ ಮೇಲೆ ಇತ್ತು. ಈ ಪ್ರಕಾರ ಯಾವಾಗಲೂ ಅದು ಇತ್ತು; ಮೇಘವು ರಾತ್ರಿಯಲ್ಲಿ ಬೆಂಕಿಯಂತೆ ಅದನ್ನು ಮುಚ್ಚುತ್ತಿತ್ತು. ಆ ಮೇಘವು ಗುಡಾರದ ಮೇಲಿನಿಂದ ತೆಗಯಲ್ಪಟ್ಟಾಗ ಇಸ್ರಾಯೇಲ್ ಮಕ್ಕಳು ಪ್ರಯಾಣ ಮಾಡುತ್ತಿದ್ದರು; ಮೇಘವು ನೆಲೆಸಿದ ಸ್ಥಳದಲ್ಲಿ ಇಸ್ರಾಯೇಲ್ ಮಕ್ಕಳು ತಮ್ಮ ಗುಡಾರಗಳನ್ನು ಹಾಕಿದರು. ಕರ್ತನ ಆಜ್ಞೆಯ ಪ್ರಕಾರ ಇಸ್ರಾಯೇಲ್ ಮಕ್ಕಳು ಪ್ರಯಾಣ ಮಾಡಿ ದರು. ಕರ್ತನ ಆಜ್ಞೆಯ ಪ್ರಕಾರ ಗುಡಾರಗಳನ್ನು ಹಾಕಿದರು. ಮೇಘವು ಗುಡಾರದ ಮೇಲೆ ನೆಲೆಸಿರುವ ಕಾಲವೆಲ್ಲಾ ಅವರು ತಮ್ಮ ಗುಡಾರಗಳಲ್ಲಿ ವಾಸಿಸಿದರು. ಮೇಘವು ಗುಡಾರದ ಮೇಲೆ ಅನೇಕ ದಿವಸಗಳು ತಡಮಾಡಿದಾಗ ಇಸ್ರಾಯೇಲ್ ಮಕ್ಕಳು ಪ್ರಯಾಣ ಮಾಡದೆ ಕರ್ತನ ಅಪ್ಪಣೆಯನ್ನು ಕೈಕೊಳ್ಳುತ್ತಿದ್ದರು. ಇದಲ್ಲದೆ ಮೇಘವು ಗುಡಾರದ ಮೇಲೆ ಸ್ವಲ್ಪ ದಿವಸಗಳು ಇರುವಾಗ ಅವರು ಕರ್ತನ ಆಜ್ಞೆಯ ಪ್ರಕಾರ ಇಳುಕೊಂಡು ಕರ್ತನ ಆಜ್ಞೆಯ ಪ್ರಕಾರ ಪ್ರಯಾಣ ಮಾಡುತ್ತಿದ್ದರು. ಮೇಘವು ಸಾಯಂಕಾಲ ದಿಂದ ಉದಯದ ವರೆಗೆ ಇದ್ದು ಬೆಳಿಗ್ಗೆ ಮೇಲಕ್ಕೆ ತೆಗೆಯಲ್ಪಟ್ಟರೆ ಆಗ ಅವರು ಪ್ರಯಾಣ ಮಾಡುತ್ತಿದ್ದರು; ಇಲ್ಲವೆ ಹಗಲು ರಾತ್ರಿ ಇದ್ದು ಮೇಘವು ಮೇಲಕ್ಕೆ ಎತ್ತಲ್ಪಟ್ಟರೆ ಅವರು ಪ್ರಯಾಣ ಮಾಡುತ್ತಿದ್ದರು. ಇಲ್ಲವೆ ಆ ಮೇಘವು ಎರಡು ದಿವಸಗಳಾದರೂ ಒಂದು ತಿಂಗಳಾದರೂ ಒಂದು ವರ್ಷವಾದರೂ ಗುಡಾರದ ಮೇಲೆ ನೆಲೆಸಿ ತಡಮಾಡಿದರೆ ಇಸ್ರಾ ಯೇಲ್ ಮಕ್ಕಳು ಪ್ರಯಾಣಮಾಡದೆ ಇಳುಕೊಂಡಿ ದ್ದರು. ಅದು ಮೇಲಕ್ಕೆತ್ತಲ್ಪಟ್ಟಾಗಲೇ ಅವರು ಪ್ರಯಾಣ ಮಾಡುತ್ತಿದ್ದರು.ಕರ್ತನ ಆಜ್ಞೆಯ ಪ್ರಕಾರ ಅವರು ಇಳುಕೊಳ್ಳುತ್ತಾ ಕರ್ತನ ಆಜ್ಞೆಯ ಪ್ರಕಾರ ಪ್ರಯಾಣ ಮಾಡುತ್ತಾ ಇದ್ದರು. ಮೋಶೆಗೆ ಕರ್ತನು ಆಜ್ಞಾಪಿಸಿ ದಂತೆ ಕರ್ತನ ಅಪ್ಪಣೆಯನ್ನು ಕಾಪಾಡುತ್ತಿದ್ದರು. ಕರ್ತನ ಆಜ್ಞೆಯ ಪ್ರಕಾರ ಅವರು ಇಳುಕೊಳ್ಳುತ್ತಾ ಕರ್ತನ ಆಜ್ಞೆಯ ಪ್ರಕಾರ ಪ್ರಯಾಣ ಮಾಡುತ್ತಾ ಇದ್ದರು. ಮೋಶೆಗೆ ಕರ್ತನು ಆಜ್ಞಾಪಿಸಿ ದಂತೆ ಕರ್ತನ ಅಪ್ಪಣೆಯನ್ನು ಕಾಪಾಡುತ್ತಿದ್ದರು.
- 2 Chronicles 7:2 2 ಪೂರ್ವಕಾಲವೃತ್ತಾಂತ 7:2ಮಹಿಮೆಯು ಆಲಯವನ್ನು ತುಂಬಿತು. ಕರ್ತನ ಮಹಿಮೆಯು ಕರ್ತನ ಆಲಯವನ್ನು ತುಂಬಿದ್ದರಿಂದ ಯಾಜಕರು ಕರ್ತನ ಮನೆಯಲ್ಲಿ ಹೋಗಲಾರದೆ ಇದ್ದರು.
- Exodus 14:19–20 ವಿಮೋಚನಕಾಂಡ 14:19–20ಆಗ ಇಸ್ರಾಯೇಲ್ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದೆ ಬಂದನು. ಅವರ ಮುಂದೆ ಇದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು. ಅದು ಐಗುಪ್ತ್ಯರ ದಂಡಿಗೂ ಇಸ್ರಾಯೇಲ್ಯರ ದಂಡಿಗೂ ನಡುವೆ ಬಂದಿತು. ಅದು ಅವರಿಗೆ ಮೇಘವೂ ಕತ್ತಲೂ ಆಗಿದ್ದು ಇಸ್ರಾಯೇಲ್ಯರಿಗೆ ರಾತ್ರಿ ಯಲ್ಲಿ ಬೆಳಕು ಕೊಡುವಂಥದ್ದಾಗಿದ್ದದರಿಂದ ಆ ರಾತ್ರಿಯೆಲ್ಲಾ ಒಬ್ಬರ ಹತ್ತಿರ ಒಬ್ಬರು ಬರಲಿಲ್ಲ.
- Exodus 14:24 ವಿಮೋಚನಕಾಂಡ 14:24ಬೆಳಗಿನ ಜಾವದಲ್ಲಿ ಕರ್ತನು ಅಗ್ನಿ ಮೇಘಗಳ ಸ್ತಂಭದೊಳಗಿಂದ ಐಗುಪ್ತ್ಯರ ದಂಡಿನ ಕಡೆಗೆ ನೋಡಿ ಅದನ್ನು ತೊಂದರೆಪಡಿಸಿ
- Revelation 21:23–24 ಪ್ರಕಟನೆ 21:23–24ಪಟ್ಟಣದಲ್ಲಿ ಬೆಳಕನ್ನು ಕೊಡು ವದಕ್ಕಾಗಿ ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿಲ್ಲ. ಯಾಕಂದರೆ ಅದಕ್ಕೆ ದೇವರ ಪ್ರಭಾವವೇ ಬೆಳಕನ್ನು ಕೊಟ್ಟಿತು; ಕುರಿಮರಿಯಾದಾತನೇ ಅದರ ದೀಪ. ರಕ್ಷಿಸಲ್ಪಟ್ಟ ಜನಾಂಗದವರು ಅದರ ಬೆಳಕಿನಲಿ ನಡೆಯುವರು; ಭೂರಾಜರು ತಮ್ಮ ವೈಭವವನ್ನೂ ಘನವನ್ನೂ ಅಲ್ಲಿಗೆ ತರುವರು.
- Exodus 29:43 ವಿಮೋಚನಕಾಂಡ 29:43ಅಲ್ಲಿ ನಾನು ಇಸ್ರಾಯೇಲ್ ಮಕ್ಕಳನ್ನು ಸಂಧಿಸುವೆನು. ಗುಡಾರವು ನನ್ನ ಮಹಿಮೆಯಿಂದ ಪವಿತ್ರವಾಗುವದು.
- Exodus 13:21–22 ವಿಮೋಚನಕಾಂಡ 13:21–22ಇದಲ್ಲದೆ ಅವರು ಹಗಲಿರುಳು ಪ್ರಯಾಣ ಮಾಡುವ ಹಾಗೆ ಕರ್ತನು ಹಗಲಲ್ಲಿ ಅವರಿಗೆ ದಾರಿ ತೋರಿಸುವದಕ್ಕೆ ಮೇಘಸ್ತಂಭದಲ್ಲಿಯೂ ರಾತ್ರಿಯಲ್ಲಿ ಅವರಿಗೆ ಬೆಳಕು ಕೊಡುವದಕ್ಕೆ ಅಗ್ನಿಸ್ತಂಭದಲ್ಲಿಯೂ ಅವರ ಮುಂದೆ ಹೋದನು.ಆತನು ಹಗಲಲ್ಲಿ ಮೇಘಸ್ತಂಭವನ್ನೂ ರಾತ್ರಿಯಲ್ಲಿ ಅಗ್ನಿಸ್ತಂಭವನ್ನೂ ಜನರ ಎದುರಿನಿಂದ ತೆಗೆದು ಬಿಡಲಿಲ್ಲ. ಆತನು ಹಗಲಲ್ಲಿ ಮೇಘಸ್ತಂಭವನ್ನೂ ರಾತ್ರಿಯಲ್ಲಿ ಅಗ್ನಿಸ್ತಂಭವನ್ನೂ ಜನರ ಎದುರಿನಿಂದ ತೆಗೆದು ಬಿಡಲಿಲ್ಲ.
- Exodus 33:9 ವಿಮೋಚನಕಾಂಡ 33:9ತರುವಾಯ ಮೋಶೆಯು ಗುಡಾರದಲ್ಲಿ ಪ್ರವೇಶಿಸಿದಾಗ ಮೇಘಸ್ತಂಭವು ಇಳಿದು ಬಂದು ಗುಡಾರದ ಬಾಗಿಲಲ್ಲಿ ನಿಲ್ಲುತಿತ್ತು. ಕರ್ತನು ಮೋಶೆಯ ಸಂಗಡ ಮಾತನಾಡುವನು.
- Leviticus 16:2 ಯಾಜಕಕಾಂಡ 16:2ಆಗ ಕರ್ತನು ಮೋಶೆಗೆ--ಅವನು ಸಾಯದಂತೆ ಮಂಜೂಷದ ಮೇಲಿರುವ ಕರುಣಾಸನದ ಮುಂದಿ ರುವ ಪರದೆಯ ಒಳಗೆ ಪರಿಶುದ್ಧವಾದ ಸ್ಥಳಕ್ಕೆ ಎಲ್ಲಾ ಸಮಯಗಳಲ್ಲಿ ಬಾರದಿರಲಿ; ಕರುಣಾಸನದ ಮೇಲೆ ಮೇಘದೊಳಗೆ ನಾನು ಪ್ರತ್ಯಕ್ಷನಾಗುವೆನು.
- Ezekiel 43:4–7 ಯೆಹೆಜ್ಕೇಲನು 43:4–7ಆಗ ಕರ್ತನ ಮಹಿಮೆಯು ಪೂರ್ವದಿಕ್ಕಿಗೆ ಅಭಿಮುಖವಾಗಿದ್ದ ಬಾಗಲಿನ ಮಾರ್ಗವಾಗಿ ಆಲಯದೊಳಗೆ ಪ್ರವೇಶಿ ಸಿತು. ಆಗ ಆತ್ಮವು ನನ್ನನ್ನು ಎತ್ತಿಕೊಂಡು ಒಳಗಿನ ಅಂಗಳಕ್ಕೆ ಕರೆ ತಂದಿತು; ಇಗೋ, ಕರ್ತನ ಮಹಿಮೆ ಯಿಂದ ಆಲಯವು ತುಂಬಿಕೊಂಡಿತ್ತು. ನಾನು ಆಲಯದೊಳಗಿಂದ ನನ್ನ ಸಂಗಡ ಮಾತನಾಡುವದನ್ನು ಕೇಳಿದೆನು; ಆ ಪುರುಷನು ನನ್ನ ಬಳಿಯಲ್ಲಿಯೇ ನಿಂತಿ ದ್ದನು. ಆತನು ನನಗೆ--ಮನುಷ್ಯಪುತ್ರನೇ, ನನ್ನ ಸಿಂಹಾಸನದ ಸ್ಥಳವನ್ನೂ ಅಂಗಾಲುಗಳ ಸ್ಥಳವನ್ನೂ ಮತ್ತು ನಾನು ಇಸ್ರಾಯೇಲಿನ ಮಕ್ಕಳ ಮಧ್ಯದಲ್ಲಿ ನಿತ್ಯವಾಗಿ ವಾಸವಾಗಿರುವ ಸ್ಥಳವನ್ನೂ ನನ್ನ ಪರಿಶುದ್ಧ ಹೆಸರನ್ನೂ ಇಸ್ರಾಯೇಲಿನ ಮನೆತನದವರೂ ಅಂದರೆ ಅವರಾದರೂ ಅವರ ಅರಸರಾದರೂ ತಮ್ಮ ವ್ಯಭಿಚಾರ ದಿಂದಲೂ ಎತ್ತರ ಸ್ಥಳಗಳಲ್ಲಿರುವ ಅವರ ಅರಸರ ಹೆಣಗಳಿಂದಲೂ ಇನ್ನು ಮೇಲೆ ಅಪವಿತ್ರಮಾಡುವ ದಿಲ್ಲ.
- Revelation 21:3 ಪ್ರಕಟನೆ 21:3ಇದಲ್ಲದೆ ಪರಲೋಕದೊಳಗಿಂದ ಬಂದ ಮಹಾಶಬ್ದವು ನನಗೆ ಕೇಳಿಸಿತು. ಅದು-ಇಗೋ, ದೇವರ ಗುಡಾರವು ಮನುಷ್ಯರೊಂದಿಗೆ ಅದೆ; ಆತನು ಅವರೊಡನೆ ವಾಸ ಮಾಡುವನು, ಅವರು ಆತನ ಪ್ರಜೆಗಳಾಗಿರುವರು; ದೇವರು ತಾನೇ ಅವರ ಸಂಗಡ ಇರುವನು, ಇದಲ್ಲದೆ ಆತನು ಅವರ ದೇವರಾಗಿ