Exodus · chapter 40 · verse 36
Exodus 40:36 in Kannada
ಮೇಘವು ಗುಡಾರದ ಮೇಲಕ್ಕೆ ಎತ್ತಲ್ಪಟ್ಟಾಗ ಇಸ್ರಾಯೇಲ್ ಮಕ್ಕಳು ತಮ್ಮ ಎಲ್ಲಾ ಪ್ರಯಾಣಗಳನ್ನು ಮುಂದುವರಿಸುತ್ತಿದ್ದರು.
Meghavu gudaarada melakke ettalpattaaga israayel makkalu tamma ellaa prayaanagalannu munduvarisuttiddaru.
Exodus 40:36 in English
- King James Version (KJV)
- And when the cloud was taken up from over the tabernacle, the children of Israel went onward in all their journeys:
- World English Bible (WEB)
- When the cloud was taken up from over the tabernacle, the children of Israel went onward, throughout all their journeys;
- American Standard Version (ASV)
- And when the cloud was taken up from over the tabernacle, the children of Israel went onward, throughout all their journeys:
- Bible in Basic English (BBE)
- And whenever the cloud was taken up from the House, the children of Israel went forward on their journey:
- Darby Translation (DBY)
- And when the cloud was taken up from over the tabernacle, the children of Israel journeyed in all their journeys.
- Webster's Bible (WBS)
- And when the cloud was taken up from over the tabernacle, the children of Israel went onward in all their journeys:
- Young's Literal Translation (YLT)
- And in the going up of the cloud from off the tabernacle the sons of Israel journey in all their journeys;
Read in context
- 34ಆಗ ಮೇಘವು ಸಭೆಯ ಡೇರೆಯನ್ನು ಮುಚ್ಚಿಕೊಂಡು ಕರ್ತನ ಮಹಿಮೆಯು ಗುಡಾರವನ್ನು ತುಂಬಿಕೊಂಡಿತು.
- 35ಸಭೆ ಡೇರೆಯ ಮೇಲೆ ಮೇಘವು ನೆಲೆಯಾಗಿದದ್ದರಿಂದಲೂ ಕರ್ತನ ಮಹಿಮೆಯು ಗುಡಾರವನ್ನು ತುಂಬಿದ್ದರಿಂದಲೂ ಮೋಶೆಯು ಒಳಗೆ ಪ್ರವೇಶಿಸಲಾರದೆ ಇದ್ದನು.
- 36ಮೇಘವು ಗುಡಾರದ ಮೇಲಕ್ಕೆ ಎತ್ತಲ್ಪಟ್ಟಾಗ ಇಸ್ರಾಯೇಲ್ ಮಕ್ಕಳು ತಮ್ಮ ಎಲ್ಲಾ ಪ್ರಯಾಣಗಳನ್ನು ಮುಂದುವರಿಸುತ್ತಿದ್ದರು.
- 37ಆದರೆ ಮೇಘವು ಎತ್ತಲ್ಪ ಡದೆ ಇರುವಾಗ ಅದು ಎತ್ತಲ್ಪಡುವ ದಿವಸದ ವರೆಗೆ ಅವರು ಪ್ರಯಾಣ ಮಾಡಲಿಲ್ಲ,ಇಸ್ರಾಯೇಲ್ಯರ ಮನೆಯವರೆಲ್ಲರ ಕಣ್ಣುಗಳ ಮುಂದೆ ಅವರ ಎಲ್ಲಾ ಪ್ರಯಾಣಗಳಲ್ಲಿ ಹಗಲಿನಲ್ಲಿ ಕರ್ತನ ಮೇಘವು ಗುಡಾರದ ಮೇಲೆ ಇತ್ತು. ರಾತ್ರಿಯಲ್ಲಿ ಅಗ್ನಿಯು ಅದರ ಮೇಲೆ ಇತ್ತು.
- 38ಇಸ್ರಾಯೇಲ್ಯರ ಮನೆಯವರೆಲ್ಲರ ಕಣ್ಣುಗಳ ಮುಂದೆ ಅವರ ಎಲ್ಲಾ ಪ್ರಯಾಣಗಳಲ್ಲಿ ಹಗಲಿನಲ್ಲಿ ಕರ್ತನ ಮೇಘವು ಗುಡಾರದ ಮೇಲೆ ಇತ್ತು. ರಾತ್ರಿಯಲ್ಲಿ ಅಗ್ನಿಯು ಅದರ ಮೇಲೆ ಇತ್ತು.
Cross references
- Nehemiah 9:19 ನೆಹೆಮೀಯ 9:19ನೀನು ನಿನ್ನ ಹೇರಳವಾದ ಕರುಣೆಯಿಂದ ಅರಣ್ಯದಲ್ಲಿ ಅವರನ್ನು ಕೈಬಿಡದೆ ಇದ್ದಿ. ಹಗಲಿನಲ್ಲಿ ಅವರಿಗೆ ದಾರಿ ತೋರಿಸತಕ್ಕ ಮೇಘಸ್ತಂಭವಾದರೂ ರಾತ್ರಿಯಲ್ಲಿ ಅವರಿಗೆ ಬೆಳಕನ್ನು, ಅವರು ನಡೆಯತಕ್ಕ ಮಾರ್ಗವನ್ನು ತೋರಿಸುವ ಅಗ್ನಿಸ್ತಂಭವಾದರೂ ಅವರನ್ನು ಬಿಟ್ಟು ಹೋಗಲಿಲ್ಲ.
- Numbers 9:17 ಅರಣ್ಯಕಾಂಡ 9:17ಆ ಮೇಘವು ಗುಡಾರದ ಮೇಲಿನಿಂದ ತೆಗಯಲ್ಪಟ್ಟಾಗ ಇಸ್ರಾಯೇಲ್ ಮಕ್ಕಳು ಪ್ರಯಾಣ ಮಾಡುತ್ತಿದ್ದರು; ಮೇಘವು ನೆಲೆಸಿದ ಸ್ಥಳದಲ್ಲಿ ಇಸ್ರಾಯೇಲ್ ಮಕ್ಕಳು ತಮ್ಮ ಗುಡಾರಗಳನ್ನು ಹಾಕಿದರು.
- Exodus 13:21–22 ವಿಮೋಚನಕಾಂಡ 13:21–22ಇದಲ್ಲದೆ ಅವರು ಹಗಲಿರುಳು ಪ್ರಯಾಣ ಮಾಡುವ ಹಾಗೆ ಕರ್ತನು ಹಗಲಲ್ಲಿ ಅವರಿಗೆ ದಾರಿ ತೋರಿಸುವದಕ್ಕೆ ಮೇಘಸ್ತಂಭದಲ್ಲಿಯೂ ರಾತ್ರಿಯಲ್ಲಿ ಅವರಿಗೆ ಬೆಳಕು ಕೊಡುವದಕ್ಕೆ ಅಗ್ನಿಸ್ತಂಭದಲ್ಲಿಯೂ ಅವರ ಮುಂದೆ ಹೋದನು.ಆತನು ಹಗಲಲ್ಲಿ ಮೇಘಸ್ತಂಭವನ್ನೂ ರಾತ್ರಿಯಲ್ಲಿ ಅಗ್ನಿಸ್ತಂಭವನ್ನೂ ಜನರ ಎದುರಿನಿಂದ ತೆಗೆದು ಬಿಡಲಿಲ್ಲ. ಆತನು ಹಗಲಲ್ಲಿ ಮೇಘಸ್ತಂಭವನ್ನೂ ರಾತ್ರಿಯಲ್ಲಿ ಅಗ್ನಿಸ್ತಂಭವನ್ನೂ ಜನರ ಎದುರಿನಿಂದ ತೆಗೆದು ಬಿಡಲಿಲ್ಲ.
- Numbers 10:11–13 ಅರಣ್ಯಕಾಂಡ 10:11–13ಎರಡನೆಯ ವರುಷದ ಎರಡನೇ ತಿಂಗಳಿನ ಇಪ್ಪತ್ತನೇ ದಿವಸದಲ್ಲಿ ಮೇಘವು ಸಾಕ್ಷಿ ಗುಡಾರದ ಮೇಲಿನಿಂದ ಎತ್ತಲ್ಪಟ್ಟಿತು. ಆಗ ಇಸ್ರಾಯೇಲ್ ಮಕ್ಕಳು ತಮ್ಮ ಕ್ರಮಗಳ ಪ್ರಕಾರ ಸೀನಾಯಿ ಅರಣ್ಯ ದಿಂದ ಪ್ರಯಾಣ ಮಾಡಿದರು; ಮೇಘವು ಪಾರಾನೆಂಬ ಅರಣ್ಯದಲ್ಲಿ ನಿಂತಿತು. ಆಗ ಅವರು ಮೊದಲನೇ ಸಾರಿ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಪ್ರಯಾಣಮಾಡಿದರು.
- 1 Corinthians 10:1 1 ಕೊರಿಂಥದವರಿಗೆ 10:1ಇದಲ್ಲದೆ ಸಹೋದರರೇ, ನೀವು ಈ ವಿಷಯಗಳನ್ನು ಅರಿಯದವರಾಗಿರ ಬಾರದೆಂದು ನನ್ನ ಅಪೇಕ್ಷೆಯಲ್ಲ; ಅದೇನಂದರೆ--ನಮ್ಮ ಪಿತೃಗಳೆಲ್ಲರೂ ಮೇಘದ ಕೆಳಗೆ ಇದ್ದು ಸಮುದ್ರವನ್ನು ದಾಟಿದರು;
- Psalm 105:39 ಕೀರ್ತನೆಗಳು 105:39ಆತನು ನೆರಳಿಗಾಗಿ ಮೇಘ ವನ್ನೂ ರಾತ್ರಿಯಲ್ಲಿ ಬೆಳಕಿಗೋಸ್ಕರ ಬೆಂಕಿಯನ್ನೂ ವಿಸ್ತರಿಸಿದನು.
- Psalm 78:14 ಕೀರ್ತನೆಗಳು 78:14ಹಗಲಿನಲ್ಲಿ ಮೇಘದಿಂದ, ರಾತ್ರಿಯೆಲ್ಲಾ ಬೆಂಕಿಯ ಬೆಳಕಿನಿಂದ ಅವರನ್ನು ನಡಿಸಿದನು.
- Numbers 10:33–36 ಅರಣ್ಯಕಾಂಡ 10:33–36ಅವರು ಕರ್ತನ ಪರ್ವತದ ಬಳಿಯಿಂದ ಮೂರು ದಿವಸಗಳ ವರೆಗೆ ಪ್ರಯಾಣಮಾಡಿದರು. ಕರ್ತನ ಒಡಂಬಡಿಕೆಯ ಮಂಜೂಷವು ಅವರಿಗೆ ಇಳು ಕೊಳ್ಳುವ ಸ್ಥಳವನ್ನು ಹುಡುಕುವದಕ್ಕಾಗಿ ಮೂರು ದಿವಸ ಗಳ ಪ್ರಯಾಣದಷ್ಟು ಅವರ ಮುಂದಾಗಿ ಹೋಯಿತು. ಅವರು ಪಾಳೆಯದಿಂದ ಹೊರಟಾಗ ಕರ್ತನ ಮೇಘವು ಹಗಲಿನಲ್ಲಿ ಅವರ ಮೇಲೆ ಇತ್ತು. ಇದ ಲ್ಲದೆ ಮಂಜೂಷವು ಹೊರಡುವಾಗ ಮೋಶೆಯುಕರ್ತನೇ, ಎದ್ದೇಳು, ನಿನ್ನ ಶತ್ರುಗಳು ಚದರಿಹೋಗಲಿ; ನಿನ್ನನ್ನು ಹಗೆಮಾಡುವವರು ನಿನ್ನ ಎದುರಿನಿಂದ ಓಡಿ ಹೋಗಲಿ ಎಂದು ಹೇಳಿದನು.ಅದು ಇಳಿದಾಗ ಅವನು--ಓ ಕರ್ತನೇ, ಅನೇಕ ಸಹಸ್ರ ಇಸ್ರಾಯೇ ಲ್ಯರ ಬಳಿಗೆ ಹಿಂದಿರುಗು ಅಂದನು. ಅದು ಇಳಿದಾಗ ಅವನು--ಓ ಕರ್ತನೇ, ಅನೇಕ ಸಹಸ್ರ ಇಸ್ರಾಯೇ ಲ್ಯರ ಬಳಿಗೆ ಹಿಂದಿರುಗು ಅಂದನು.
- Numbers 19:17–22 ಅರಣ್ಯಕಾಂಡ 19:17–22ಅಪವಿತ್ರನಾದವನಿಗೋಸ್ಕರ ಸುಡಲ್ಪಟ್ಟ ಪಾಪ ಕಳೆಯುವ ಹಸುವಿನ ಬೂದಿಯನ್ನು ತಕ್ಕೊಂಡು ಒಂದು ಪಾತ್ರೆಯೊಳಗಿಟ್ಟು ಅದರ ಮೇಲೆ ಹರಿಯುವ ನೀರನ್ನು ಹಾಕಬೇಕು ಪವಿತ್ರನಾದವನೊಬ್ಬನು ಹಿಸ್ಸೋಪನ್ನು ತಕ್ಕೊಂಡು ನೀರಿನಲ್ಲಿ ಅದ್ದಿ ಆ ಡೇರೆಯ ಮೇಲೆಯೂ ಸಮಸ್ತ ಸಾಮಾನುಗಳ ಮೇಲೆಯೂ ಅದರಲ್ಲಿರುವ ಮನುಷ್ಯರ ಮೇಲೆಯೂ ಎಲುಬನ್ನಾದರೂ ಕೊಲ್ಲಲ್ಪಟ್ಟ ವನನ್ನಾದರೂ ಸತ್ತವನನ್ನಾದರೂ ಸಮಾಧಿಯನ್ನಾದರೂ ಮುಟ್ಟಿದವನ ಮೇಲೆ ಚಿಮುಕಿಸಬೇಕು. ಪವಿತ್ರನಾ ದವನು ಅಪವಿತ್ರನಾದವನ ಮೇಲೆ ಮೂರನೇ ದಿವಸ ದಲ್ಲಿಯೂ ಏಳನೇ ದಿವಸದಲ್ಲಿಯೂ ಚಿಮುಕಿಸಲಿ. ಏಳನೇ ದಿವಸದಲ್ಲಿ ಅವನು ತನ್ನನ್ನು ಪವಿತ್ರಮಾಡಿ ಕೊಂಡು ತನ್ನ ವಸ್ತ್ರಗಳನ್ನು ಒಗೆದುಕೊಂಡು ಅವನು ಸ್ನಾನಮಾಡಿ ಸಾಯಂಕಾಲದಲ್ಲಿ ಪವಿತ್ರನಾಗುವನು. ಆದರೆ ಅಪವಿತ್ರನಾಗಿದ್ದು ತನ್ನನ್ನು ಶುದ್ಧಪಡಿಸಿ ಕೊಳ್ಳದವನು ಸಭೆಯ ಮಧ್ಯದಿಂದ ತೆಗೆದು ಹಾಕಲ್ಪ ಡಲಿ; ಅವನು ಕರ್ತನ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಿದ್ದಾನೆ; ಪ್ರತ್ಯೇಕಿಸಲ್ಪಟ್ಟ ನೀರು ಅವನ ಮೇಲೆ ಚಿಮುಕಿಸಲ್ಪಡಲಿಲ್ಲ; ಅವನು ಅಪವಿತ್ರನೇ. ಇದು ಅವರಿಗೆ ನಿತ್ಯ ಕಟ್ಟಳೆಯಾಗಿರಬೇಕು; ಪ್ರತ್ಯೇಕಿಸಲ್ಪಟ್ಟ ನೀರನ್ನು ಚಿಮುಕಿಸುವವನು ತನ್ನ ವಸ್ತ್ರ ಗಳನ್ನು ಒಗೆಯಬೇಕು; ಪ್ರತ್ಯೇಕಿಸಲ್ಪಟ್ಟ ನೀರನ್ನು ಮುಟ್ಟಿದವನು ಸಾಯಂಕಾಲದ ವರೆಗೆ ಅಪವಿತ್ರನಾಗಿರ ಬೇಕು.ಇದಲ್ಲದೆ ಅಪವಿತ್ರನಾದವನು ಮುಟ್ಟು ವಂಥದ್ದೆಲ್ಲಾ ಅಪವಿತ್ರವಾಗುವದು; ಅವನನ್ನು ಮುಟ್ಟಿ ದವನು ಸಾಯಂಕಾಲದ ವರೆಗೆ ಅಪವಿತ್ರನಾಗಿರಬೇಕು ಎಂದು ಹೇಳಿದನು. ಇದಲ್ಲದೆ ಅಪವಿತ್ರನಾದವನು ಮುಟ್ಟು ವಂಥದ್ದೆಲ್ಲಾ ಅಪವಿತ್ರವಾಗುವದು; ಅವನನ್ನು ಮುಟ್ಟಿ ದವನು ಸಾಯಂಕಾಲದ ವರೆಗೆ ಅಪವಿತ್ರನಾಗಿರಬೇಕು ಎಂದು ಹೇಳಿದನು.
- 2 Corinthians 5:19–20 2 ಕೊರಿಂಥದವರಿಗೆ 5:19–20ಅದೇನಂದರೆ, ದೇವರು ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೆ ಲೋಕವನ್ನು ಕ್ರಿಸ್ತನಲ್ಲಿ ತನಗೆ ಸಮಾಧಾನಪಡಿಸಿ ಕೊಳ್ಳುತ್ತಿದ್ದನೆಂಬದೇ; ಆ ಸಮಾಧಾನದ ವಾಕ್ಯವನ್ನು ನಮ್ಮ ವಶಕ್ಕೆ ಕೊಟ್ಟಿದ್ದಾನೆ. ದೇವರೇ ನಮ್ಮ ಮೂಲಕ ನಿಮ್ಮನ್ನು ಬೇಡಿ ಕೊಳ್ಳುತ್ತಾನೋ ಎಂಬಂತೆ ನಾವು ಈಗ ಕ್ರಿಸ್ತನ ರಾಯಭಾರಿಗಳಾಗಿದ್ದೇವೆ. ದೇವರೊಂದಿಗೆ ಸಮಾ ಧಾನವಾಗಿರೆಂದು ಕ್ರಿಸ್ತನಿಗೆ ಬದಲಾಗಿ ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ.ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.