Exodus · chapter 40 · verse 5
Exodus 40:5 in Kannada
ನೀನು ಧೂಪಕ್ಕೋಸ್ಕರ ಮಾಡಿದ ಚಿನ್ನದ ಬಲಿಪೀಠವನ್ನು ಮಂಜೂಷದ ಸಾಕ್ಷಿಯ ಪೆಟ್ಟಿಗೆಗೆ ಎದುರಾಗಿ ಇಟ್ಟು, ಗುಡಾರದ ಬಾಗಿಲಿಗೆ ತೆರೆಯನ್ನು ಹಾಕಬೇಕು.
Neenu dhoopakkoskara maadida chinnada balipeethavannu manjooshada saakshiya pettigege eduraagi ittu, gudaarada baagilige tereyannu haakabeku.
Exodus 40:5 in English
- King James Version (KJV)
- And thou shalt set the altar of gold for the incense before the ark of the testimony, and put the hanging of the door to the tabernacle.
- World English Bible (WEB)
- You shall set the golden altar for incense before the ark of the covenant, and put the screen of the door to the tabernacle.
- American Standard Version (ASV)
- And thou shalt set the golden altar for incense before the ark of the testimony, and put the screen of the door to the tabernacle.
- Bible in Basic English (BBE)
- And put the gold altar for burning perfumes in front of the ark of the law, hanging the curtain over the doorway of the House.
- Darby Translation (DBY)
- And thou shalt set the golden altar for the incense before the ark of the testimony; and hang up the curtain of the entrance to the tabernacle.
- Webster's Bible (WBS)
- And thou shalt set the altar of gold for the incense before the ark of the testimony, and put the hanging of the door to the tabernacle.
- Young's Literal Translation (YLT)
- 'And thou hast put the golden altar for perfume before the ark of the testimony, and hast put the covering of the opening to the tabernacle,
Read in context
- 3ಮಂಜೂಷದ ಸಾಕ್ಷಿಯ ಪೆಟ್ಟಿಗೆಯನ್ನು ಒಳಗಿಟ್ಟು ಅದನ್ನು ನೀನು ತೆರೆಯಿಂದ ಮುಚ್ಚಬೇಕು.
- 4ಮೇಜನ್ನು ಒಳಗೆ ತಂದು ಅದರ ಮೇಲಿಡಬೇಕಾದದ್ದನ್ನು ಸರಿಯಾಗಿ ಇಡಬೇಕು. ದೀಪ ಸ್ತಂಭವನ್ನು ಒಳಗೆ ತಂದು ನೀನು ಅದರ ದೀಪಗಳನ್ನು ಅಂಟಿಸಬೇಕು.
- 5ನೀನು ಧೂಪಕ್ಕೋಸ್ಕರ ಮಾಡಿದ ಚಿನ್ನದ ಬಲಿಪೀಠವನ್ನು ಮಂಜೂಷದ ಸಾಕ್ಷಿಯ ಪೆಟ್ಟಿಗೆಗೆ ಎದುರಾಗಿ ಇಟ್ಟು, ಗುಡಾರದ ಬಾಗಿಲಿಗೆ ತೆರೆಯನ್ನು ಹಾಕಬೇಕು.
- 6ನೀನು ದಹನಬಲಿಪೀಠವನ್ನು ಸಭೆಯ ಡೇರೆಯಾದ ಗುಡಾರದ ಬಾಗಿಲಿಗೆ ಎದುರಾಗಿ ಇಡ ಬೇಕು.
- 7ನೀನು ಸಭೆಯ ಡೇರೆಗೂ ಯಜ್ಞವೇದಿಗೂ ಮಧ್ಯದಲ್ಲಿ ಗಂಗಾಳವನ್ನಿಟ್ಟು ಅದರಲ್ಲಿ ನೀರನ್ನು ಹೊಯ್ಯ ಬೇಕು.
Cross references
- Hebrews 10:19–22 ಇಬ್ರಿಯರಿಗೆ 10:19–22ಹೀಗಿರುವಲ್ಲಿ ಸಹೋದರರೇ, ಯೇಸುವಿನ ರಕ್ತದ ಮೂಲಕ ಅತಿಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವದಕ್ಕೆ ನಮಗೆ ಧೈರ್ಯವುಂಟಾಯಿತು. ಹೇಗೆಂದರೆ, ಆತನು ನಮಗೋಸ್ಕರ ಪ್ರತಿಷ್ಠಿಸಿದ ಮತ್ತು ಹೊಸ ಜೀವವುಳ್ಳ ದಾರಿಯಲ್ಲಿ ಆತನ ಶರೀರವೆಂಬ ತೆರೆಯ ಮುಖಾಂತರವೇ ಇದಾಯಿತು. ದೇವರ ಮನೆಯ ಮೇಲೆ ಮಹಾಯಾಜಕನು ನಮಗಿರುವದರಿಂದ ನಾವು ಸತ್ಯವಾದ ಹೃದಯದಿಂದಲೂ ವಿಶ್ವಾಸದ ಪೂರ್ಣ ನಿಶ್ಚಯತ್ವದಿಂದಲೂ ಕೆಟ್ಟ ಮನಸ್ಸಾಕ್ಷಿಯ ಪರಿಹಾರಕ್ಕಾಗಿ ಚಿಮುಕಿಸಲ್ಪಟ್ಟ ಹೃದಯಗಳುಳ್ಳವ ರಾಗಿಯೂ ನಮ್ಮ ಶರೀರಗಳನ್ನು ನಿರ್ಮೂಲವಾದ ನೀರಿನಿಂದ ತೊಳೆದು ಕೊಂಡವರಾಗಿಯೂ ಆತನ ಸವಿಾಪಕ್ಕೆ ಬರೋಣ.
- 1 John 2:1–2 1 ಯೋಹಾನನು 2:1–2ನನ್ನ ಚಿಕ್ಕಮಕ್ಕಳೇ, ನೀವು ಪಾಪಮಾಡ ದಂತೆ ಇವುಗಳನ್ನು ನಾನು ನಿಮಗೆ ಬರೆಯು ತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನು ನಮಗೆ ಪಕ್ಷವಾದಿಯಾಗಿದ್ದಾನೆ. ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತವಾಗಿದ್ದಾನೆ; ನಮ್ಮ ಪಾಪಗಳಿಗೆ ಮಾತ್ರ ವಲ್ಲದೆ ಸಮಸ್ತ ಲೋಕದ ಪಾಪಗಳಿಗಾಗಿಯೂ ಪ್ರಾಯಶ್ಚಿತ್ತವಾಗಿದ್ದಾನೆ.
- Hebrews 9:24 ಇಬ್ರಿಯರಿಗೆ 9:24ಯಾಕಂದರೆ ಕ್ರಿಸ್ತನು ನಿಜವಾದವುಗಳಿಗೆ ಸಾಮ್ಯ ವಾಗಿದ್ದು ಕೈಯಿಂದ ಕಟ್ಟಿದ್ದ ಪರಿಶುದ್ಧ ಸ್ಥಳಗಳಲ್ಲಿ ಪ್ರವೇಶಿಸದೆ ದೇವರ ಸಮ್ಮುಖದಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳು ವದಕ್ಕೆ ಪರಲೋಕದಲ್ಲಿಯೇ ಪ್ರವೇಶಿಸಿದನು.
- John 14:6 ಯೋಹಾನನು 14:6ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.
- Exodus 26:36–37 ವಿಮೋಚನಕಾಂಡ 26:36–37ಗುಡಾರದ ಬಾಗಲಿಗೆ ನೀಲಿ ಧೂಮ್ರ ರಕ್ತವರ್ಣ ಗಳಿರುವ ನಯವಾಗಿ ಹೊಸೆದ ನಾರುಗಳಿಂದ ಕಸೂತಿ ಕೆಲಸದ ತೆರೆಯನ್ನು ತೂಗುಹಾಕಬೇಕು.ಆ ತೆರೆಗೆ ಜಾಲೀ ಮರದ ಐದು ಸ್ತಂಭಗಳನ್ನು ಮಾಡಿ ಅವುಗಳನ್ನು ಬಂಗಾರದಿಂದ ಹೊದಿಸಬೇಕು. ಅವುಗಳ ಕೊಂಡಿಗಳು ಬಂಗಾರದವುಗಳಾಗಿರಬೇಕು. ಅವುಗಳಿಗೆ ಹಿತ್ತಾಳೆಯ ಐದು ಕುಳಿಗಳನ್ನು ಎರಕ ಹೊಯ್ಯಬೇಕು. ಆ ತೆರೆಗೆ ಜಾಲೀ ಮರದ ಐದು ಸ್ತಂಭಗಳನ್ನು ಮಾಡಿ ಅವುಗಳನ್ನು ಬಂಗಾರದಿಂದ ಹೊದಿಸಬೇಕು. ಅವುಗಳ ಕೊಂಡಿಗಳು ಬಂಗಾರದವುಗಳಾಗಿರಬೇಕು. ಅವುಗಳಿಗೆ ಹಿತ್ತಾಳೆಯ ಐದು ಕುಳಿಗಳನ್ನು ಎರಕ ಹೊಯ್ಯಬೇಕು.
- Exodus 37:25–28 ವಿಮೋಚನಕಾಂಡ 37:25–28ಅವನು ಜಾಲೀ ಮರದಿಂದ ಧೂಪಪೀಠವನ್ನು ಮಾಡಿದನು; ಅದು ಒಂದು ಮೊಳ ಉದ್ದ, ಒಂದು ಮೊಳ ಅಗಲವಾಗಿ ಚಚ್ಚೌಕವಾಗಿತ್ತು; ಅದು ಎರಡು ಮೊಳ ಎತ್ತರವಾಗಿತ್ತು. ಅದರ ಕೊಂಬುಗಳು ಸಹ ಜಾಲೀ ಮರದಿಂದಲೇ ಮಾಡಲ್ಪಟ್ಟಿದ್ದವು. ಅವನು ಅದರ ಮೇಲ್ಭಾಗವನ್ನೂ ಅದರ ಸುತ್ತಲಿನ ಬದಿಗಳನ್ನೂ ಅದರ ಕೊಂಬುಗಳನ್ನೂ ಚೊಕ್ಕ ಬಂಗಾರದಿಂದ ಹೊದಿಸಿದನು; ಅದರ ಸುತ್ತಲೂ ಬಂಗಾರದ ಕಿರೀಟ ವನ್ನಿಟ್ಟನು. ಅದನ್ನು ಹೊರುವದಕ್ಕೆ ಕೋಲುಗಳನ್ನು ಸಿಕ್ಕಿಸುವದಕ್ಕೋಸ್ಕರ ಅದರ ಕಿರೀಟದ ಕೆಳಗೆ ಎರಡು ಬದಿಗಿರುವ ಎರಡು ಮೂಲೆಗಳಲ್ಲಿ ಚಿನ್ನದ ಎರಡು ಉಂಗುರಗಳನ್ನು ಮಾಡಿದನು. ಅವನು ಜಾಲೀ ಮರದಿಂದ ಕೋಲುಗಳನ್ನು ಮಾಡಿ ಅವುಗಳನ್ನು ಚಿನ್ನದಿಂದ ಹೊದಿಸಿದನು.ಅನಂತರ ಅವನು ವೈದ್ಯನ ಪದ್ಧತಿಯ ಪ್ರಕಾರ ಪವಿತ್ರವಾದ ಅಭಿಷೇಕ ತೈಲವನ್ನೂ ಪರಿಮಳ ದ್ರವ್ಯ ದಿಂದ ಶುದ್ಧವಾದ ಧೂಪವನ್ನೂ ತಯಾರಿಸಿದನು.
- Exodus 40:26–28 ವಿಮೋಚನಕಾಂಡ 40:26–28ಚಿನ್ನದ ವೇದಿಯನ್ನು ಸಭೆಯ ಡೇರೆಯಲ್ಲಿ ತೆರೆಯ ಮುಂದೆ ಇಟ್ಟನು. ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ಪರಿಮಳ ಧೂಪವನ್ನು ಸುಟ್ಟನು. ಗುಡಾರದ ಬಾಗಿಲಿನ ತೆರೆಯನ್ನು ತೂಗುಹಾಕಿ ದನು. ಸಭೆ ಡೇರೆಯ ಗುಡಾರದ ಬಳಿಯಲ್ಲಿ ದಹನ ಬಲಿಪೀಠವನ್ನು ಇಟ್ಟನು.
- Exodus 35:25–28 ವಿಮೋಚನಕಾಂಡ 35:25–28ಜ್ಞಾನ ಹೃದಯವುಳ್ಳ ಸ್ತ್ರೀಯರೆಲ್ಲರೂ ತಮ್ಮ ಕೈಗಳಿಂದ ನೇಯ್ದ ನೀಲಿ, ಧೂಮ್ರ, ರಕ್ತವರ್ಣ ಮತ್ತು ನಯವಾದ ನಾರುಮಡಿ ಇವುಗಳನ್ನು ತಂದರು. ಜ್ಞಾನದಲ್ಲಿ ಹೃದಯ ಪ್ರೇರಣೆ ಹೊಂದಿದ ಸ್ತ್ರೀಯರೆಲ್ಲರೂ ಮೇಕೆ ಕೂದಲುಗಳನ್ನೂ ನೇಯ್ದರು. ಅಧಿಪತಿಗಳು ಎಫೋ ದಿನಲ್ಲಿಯೂ ಎದೆಪದಕದಲ್ಲಿಯೂ ಕೂಡ್ರಿಸುವದಕ್ಕೆ ಗೋಮೇಧಿಕಗಳನ್ನೂ ರತ್ನಗಳನ್ನೂ ಸುಗಂಧದ್ರವ್ಯ ಗಳನ್ನೂ ದೀಪಕ್ಕೋಸ್ಕರವೂ ಅಭಿಷೇಕಿಸುವ ತೈಲ ಕ್ಕೋಸ್ಕರವೂ ಪರಿಮಳ ಧೂಪಕ್ಕೋಸ್ಕರವೂ ಎಣ್ಣೆ ಯನ್ನೂ ತಂದರು.
- Exodus 30:1–5 ವಿಮೋಚನಕಾಂಡ 30:1–5ನೀನು ಧೂಪ ಸುಡುವ ವೇದಿಯನ್ನು ಮಾಡಬೇಕು; ಜಾಲೀ ಮರದಿಂದ ಅದನ್ನು ಮಾಡಬೇಕು. ಅದರ ಉದ್ದ ಒಂದು ಮೊಳ, ಅಗಲ ಒಂದು ಮೊಳ, ಎತ್ತರ ಎರಡು ಮೊಳ ಇದ್ದು ಅದು ಚಚ್ಚೌಕವಾಗಿರಬೇಕು. ಅದಕ್ಕೆ ಕೊಂಬುಗಳನ್ನು ಅದ ರಿಂದಲೇ ಮಾಡಬೇಕು. ಮೇಲ್ಭಾಗವನ್ನೂ ಸುತ್ತಲಿನ ಭಾಗಗಳನ್ನೂ ಕೊಂಬುಗಳನ್ನೂ ಶುದ್ಧ ಬಂಗಾರದಿಂದ ಹೊದಿಸಿ ಸುತ್ತಲೂ ಬಂಗಾರದ ಗೋಟನ್ನು ಮಾಡ ಬೇಕು. ಗೋಟಿನ ಕೆಳಗೆ ಎರಡೂ ಪಕ್ಕಗಳ ಎರಡು ಮೂಲೆಗಳಲ್ಲಿ ಎರಡು ಬಂಗಾರದ ಬಳೆಗಳನ್ನು ಮಾಡ ಬೇಕು. ಇವುಗಳನ್ನು ಹೊರುವದಕ್ಕಾಗಿ ಅವುಗಳಲ್ಲಿ ಸಿಕ್ಕಿಸಬೇಕು. ಆ ಕೋಲುಗಳನ್ನು ಜಾಲೀ ಮರದಿಂದ ಮಾಡಿ ಅವುಗಳನ್ನು ಬಂಗಾರದಿಂದ ಹೊದಿಸಬೇಕು.