Exodus · chapter 40 · verse 6
Exodus 40:6 in Kannada
ನೀನು ದಹನಬಲಿಪೀಠವನ್ನು ಸಭೆಯ ಡೇರೆಯಾದ ಗುಡಾರದ ಬಾಗಿಲಿಗೆ ಎದುರಾಗಿ ಇಡ ಬೇಕು.
Neenu dahanabalipeethavannu sabheya dereyaada gudaarada baagilige eduraagi ida beku.
Exodus 40:6 in English
- King James Version (KJV)
- And thou shalt set the altar of the burnt offering before the door of the tabernacle of the tent of the congregation.
- World English Bible (WEB)
- “You shall set the altar of burnt offering before the door of the tabernacle of the Tent of Meeting.
- American Standard Version (ASV)
- And thou shalt set the altar of burnt-offering before the door of the tabernacle of the tent of meeting.
- Bible in Basic English (BBE)
- And put the altar of burned offerings before the doorway of the House of the Tent of meeting.
- Darby Translation (DBY)
- And thou shalt set the altar of burnt-offering before the entrance of the tabernacle of the tent of meeting.
- Webster's Bible (WBS)
- And thou shalt set the altar of the, burnt-offering before the door of the tabernacle of the tent of the congregation.
- Young's Literal Translation (YLT)
- and hast put the altar of the burnt-offering before the opening of the tabernacle of the tent of meeting,
Read in context
- 4ಮೇಜನ್ನು ಒಳಗೆ ತಂದು ಅದರ ಮೇಲಿಡಬೇಕಾದದ್ದನ್ನು ಸರಿಯಾಗಿ ಇಡಬೇಕು. ದೀಪ ಸ್ತಂಭವನ್ನು ಒಳಗೆ ತಂದು ನೀನು ಅದರ ದೀಪಗಳನ್ನು ಅಂಟಿಸಬೇಕು.
- 5ನೀನು ಧೂಪಕ್ಕೋಸ್ಕರ ಮಾಡಿದ ಚಿನ್ನದ ಬಲಿಪೀಠವನ್ನು ಮಂಜೂಷದ ಸಾಕ್ಷಿಯ ಪೆಟ್ಟಿಗೆಗೆ ಎದುರಾಗಿ ಇಟ್ಟು, ಗುಡಾರದ ಬಾಗಿಲಿಗೆ ತೆರೆಯನ್ನು ಹಾಕಬೇಕು.
- 6ನೀನು ದಹನಬಲಿಪೀಠವನ್ನು ಸಭೆಯ ಡೇರೆಯಾದ ಗುಡಾರದ ಬಾಗಿಲಿಗೆ ಎದುರಾಗಿ ಇಡ ಬೇಕು.
- 7ನೀನು ಸಭೆಯ ಡೇರೆಗೂ ಯಜ್ಞವೇದಿಗೂ ಮಧ್ಯದಲ್ಲಿ ಗಂಗಾಳವನ್ನಿಟ್ಟು ಅದರಲ್ಲಿ ನೀರನ್ನು ಹೊಯ್ಯ ಬೇಕು.
- 8ಅದರ ಸುತ್ತಲೂ ಆವರಣವನ್ನು ನಿಲ್ಲಿಸಿ, ಆ ಆವರಣದ ಬಾಗಿಲಿನ ಬಳಿಯಲ್ಲಿ ನೀನು ತೆರೆಯನ್ನು ತೂಗುಹಾಕಬೇಕು.
Cross references
- Exodus 40:29 ವಿಮೋಚನಕಾಂಡ 40:29ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ದಹನಬಲಿಯನ್ನೂ ಆಹಾರಸಮರ್ಪಣೆಯನ್ನೂ ಅರ್ಪಿಸಿದನು.
- Hebrews 13:10 ಇಬ್ರಿಯರಿಗೆ 13:10ನಮಗೊಂದು ಯಜ್ಞವೇದಿ ಉಂಟು, ಅದರ ಪದಾರ್ಥವನ್ನು ತಿನ್ನುವದಕ್ಕೆ ಗುಡಾರದಲ್ಲಿ ಸೇವೆಯನ್ನು ನಡಿಸುವವರಿಗೆ ಹಕ್ಕಿಲ್ಲ.
- Ephesians 1:6–7 ಎಫೆಸದವರಿಗೆ 1:6–7ತನ್ನ ಕೃಪಾಮಹಿಮೆಯ ಸ್ತುತಿಗಾಗಿ ಆತನು ನಮ್ಮನ್ನು ಆ ಪ್ರಿಯನಲ್ಲಿ ಅಂಗೀಕರಿಸಿದ್ದಾನೆ. ಆತನ ಕೃಪಾ ಐಶ್ವರ್ಯ ಕ್ಕನುಸಾರವಾಗಿ ಆತನ ರಕ್ತದ ಮೂಲಕ ಆತನಲ್ಲಿ ನಮಗೆ ವಿಮೋಚನೆಯು ಅಂದರೆ ಪಾಪಗಳ ಕ್ಷಮಾ ಪಣೆಯು ಉಂಟಾಯಿತು.
- Exodus 38:1–7 ವಿಮೋಚನಕಾಂಡ 38:1–7ಅವನು ಜಾಲೀ ಮರದಿಂದ ದಹನ ಬಲಿಪೀಠವನ್ನು ಮಾಡಿದನು. ಅದು ಐದು ಮೊಳ ಉದ್ದವಾಗಿಯೂ ಐದು ಮೊಳ ಅಗಲವಾ ಗಿಯೂ ಚಚ್ಚೌಕವಾಗಿತ್ತು; ಅದರ ಎತ್ತರ ಮೂರು ಮೊಳವಾಗಿತ್ತು. ಇದಲ್ಲದೆ ಅವನು ಅದರ ನಾಲ್ಕು ಮೂಲೆಗಳಲ್ಲಿ ಕೊಂಬುಗಳನ್ನು ಮಾಡಿದನು; ಅದರ ಕೊಂಬುಗಳು ಜಾಲೀ ಮರದ್ದೇ ಆಗಿದ್ದವು; ಅವನು ಅವುಗಳನ್ನು ಹಿತ್ತಾಳೆಯಿಂದ ಹೊದಿಸಿದನು. ಅನಂತರ ಅವನು ಬಲಿಪೀಠದ ಎಲ್ಲಾ ಸಾಮಾನುಗಳನ್ನು ಮಾಡಿ ದನು: ಕೊಡಗಳು, ಸಲಿಕೆಗಳು, ಬೋಗುಣಿಗಳು, ಮಾಂಸ ಸಿಕ್ಕಿಸುವ ಕೊಂಡಿಗಳು, ಅಗ್ಗಿಷ್ಟಿಗೆಗಳು; ಇವೆಲ್ಲ ವುಗಳನ್ನು ಅವನು ಹಿತ್ತಾಳೆಯಿಂದ ಮಾಡಿದನು. ಬಲಿಪೀಠದ ಕೆಳಗಿನ ಆವರಣದಲ್ಲಿ ನೆಲದಿಂದ ಪೀಠದ ಮಧ್ಯದ ವರೆಗೆ ಬರುವಂತೆ ಜಾಲರೀ ಕೆಲಸದಿಂದ ಹಿತ್ತಾಳೆಯ ಬೆಂಕಿಗೂಡನ್ನು ಮಾಡಿದನು. ಆ ಹಿತ್ತಾಳೆ ಯ ಬೆಂಕಿಯ ಗೂಡನ್ನು ಹೊರುವಾಗ ಕೋಲು ಸಿಕ್ಕಿಸುವದಕ್ಕೋಸ್ಕರ ಅದರ ನಾಲ್ಕು ತುದಿಗಳಲ್ಲಿ ನಾಲ್ಕು ಉಂಗುರಗಳನ್ನು ಎರಕಹೊಯ್ದನು. ಅವನು ಜಾಲೀ ಮರದಿಂದ ಕೋಲುಗಳನ್ನು ಮಾಡಿ ಅವುಗಳಿಗೆ ಹಿತ್ತಾ ಳೆಯ ಹೊದಿಕೆಯನ್ನು ಹೊದಿಸಿದನು. ಬಲಿಪೀಠವನ್ನು ಹೊರುವದಕ್ಕೆ ಅದರ ಬದಿಯಲ್ಲಿ ಮಾಡಿದ ಉಂಗುರ ಗಳಲ್ಲಿ ಆ ಕೋಲುಗಳನ್ನು ಸಿಕ್ಕಿಸಿದನು; ಅವನು ಆ ಬಲಿಪೀಠವನ್ನು ಹಲಗೆಗಳಿಂದ ಪೊಳ್ಳಾಗಿ ಮಾಡಿದನು.
- 1 John 4:9–10 1 ಯೋಹಾನನು 4:9–10ನಾವು ಆತನ ಮೂಲಕ ಜೀವಿಸು ವದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮ ಕಡೆಗೆ ಪ್ರತ್ಯಕ್ಷವಾಗಿದೆ. ನಾವು ದೇವರನ್ನು ಪ್ರೀತಿಸಿ ದ್ದರಲ್ಲಿಯಲ್ಲ, ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತವಾಗಿ ತನ್ನ ಮಗನನ್ನು ಕಳುಹಿಸಿ ಕೊಟ್ಟದ್ದರಲ್ಲಿಯೇ ಆತನ ಪ್ರೀತಿಯು ಇರುತ್ತದೆ.
- Exodus 27:1–8 ವಿಮೋಚನಕಾಂಡ 27:1–8ಇದಲ್ಲದೆ ಜಾಲೀ ಮರದಿಂದ ಯಜ್ಞವೇದಿಯನ್ನು ಐದು ಮೊಳ ಉದ್ದವಾಗಿಯೂ ಐದು ಮೊಳ ಅಗಲವಾಗಿಯೂ ಮಾಡಬೇಕು. ಆ ಯಜ್ಞವೇದಿಯು ಚಚ್ಚೌಕವಾಗಿರಬೇಕು. ಅದರ ಎತ್ತ ರವು ಮೂರು ಮೊಳ ಇರಬೇಕು. ಅದರ ನಾಲ್ಕು ಮೂಲೆಗಳಲ್ಲಿ ಕೊಂಬುಗಳನ್ನು ಮಾಡಬೇಕು. ಆ ಕೊಂಬುಗಳು ಯಜ್ಞವೇದಿಗೆ ಎತ್ತರವಾಗಿರಬೇಕು; ನೀನು ಅದನ್ನು ಹಿತ್ತಾಳೆಯಿಂದ ಹೊದಿಸಬೇಕು. ಅದರ ಬೂದಿಗಾಗಿ ತಟ್ಟೆಗಳನ್ನು ಸಲಿಕೆಗಳನ್ನು ಬೋಗುಣಿಗಳನ್ನು ಮುಳ್ಳುಗಳನ್ನು ಅಗ್ನಿಪಾತ್ರೆಗಳನ್ನು ಎಲ್ಲಾ ಉಪಕರಣಗಳನ್ನು ಹಿತ್ತಾಳೆಯಿಂದ ಮಾಡಬೇಕು. ಅದಕ್ಕೆ ಹಿತ್ತಾಳೆಯ ಜಾಳಿಗೆಯನ್ನು ಮಾಡಿ ಆ ಜಾಳಿಗೆಯ ಮೇಲೆ ನಾಲ್ಕು ಮೂಲೆಗಳಿಗೆ ಹಿತ್ತಾಳೆಯ ನಾಲ್ಕು ಬಳೆಗಳನ್ನು ಮಾಡಬೇಕು. ಆ ಜಾಳಿಗೆಯು ಯಜ್ಞವೇದಿಯ ಸುತ್ತಲಿರುವ ಕಟ್ಟೆಯ ಕೆಳಗೆ ಇದ್ದು, ಯಜ್ಞವೇದಿಯ ಬುಡದಿಂದ ನಡುವಿನ ತನಕ ಇರು ವಂತೆ ಹಾಕಿಸಬೇಕು. ಯಜ್ಞವೇದಿಗೆ ಜಾಲೀ ಮರ ದಿಂದ ಕೋಲುಗಳನ್ನು ಮಾಡಿ ಅವುಗಳನ್ನು ಹಿತ್ತಾಳೆ ಯಿಂದ ಹೊದಿಸಬೇಕು. ಆ ಕೋಲುಗಳನ್ನು ಬಳೆ ಗಳಲ್ಲಿ ಸೇರಿಸಬೇಕು. ಅವುಗಳು ಯಜ್ಞವೇದಿಯನ್ನು ಹೊರುವದಕ್ಕೆ ಅದರ ಎರಡೂ ಪಾರ್ಶ್ವಗಳಲ್ಲಿ ಇರ ಬೇಕು. ಹಲಗೆಗಳಿಂದ ಅದನ್ನು ಪೊಳ್ಳಾಗಿರುವಂತೆ ಮಾಡಬೇಕು. ಬೆಟ್ಟದಲ್ಲಿ ನಿನಗೆ ತೋರಿಸಿದಂತೆಯೇ ಅದನ್ನು ಮಾಡಬೇಕು.
- 1 John 2:2 1 ಯೋಹಾನನು 2:2ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತವಾಗಿದ್ದಾನೆ; ನಮ್ಮ ಪಾಪಗಳಿಗೆ ಮಾತ್ರ ವಲ್ಲದೆ ಸಮಸ್ತ ಲೋಕದ ಪಾಪಗಳಿಗಾಗಿಯೂ ಪ್ರಾಯಶ್ಚಿತ್ತವಾಗಿದ್ದಾನೆ.