Exodus · chapter 7 · verse 20
Exodus 7:20 in Kannada
ಮೋಶೆ ಆರೋನರು ಕರ್ತನು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಅವನು ಕೋಲನ್ನು ಎತ್ತಿ ನದಿಯಲ್ಲಿರುವ ನೀರನ್ನು ಫರೋಹನ ಕಣ್ಣುಗಳ ಮುಂದೆಯೂ ಅವನ ಸೇವಕರ ಕಣ್ಣುಗಳ ಮುಂದೆಯೂ ಹೊಡೆದನು. ಆಗ ನದಿಯ ನೀರೆಲ್ಲಾ ರಕ್ತವಾಯಿತು.
Moshe aaronaru kartanu tamage aajnyaapisidanteye maadidaru. Avanu kolannu etti nadiyalliruva neerannu pharohana kannugala mundeyoo avana sevakara kannugala mundeyoo hodedanu. Aaga nadiya neerellaa raktavaayitu.
Exodus 7:20 in English
- King James Version (KJV)
- And Moses and Aaron did so, as the LORD commanded; and he lifted up the rod, and smote the waters that [were] in the river, in the sight of Pharaoh, and in the sight of his servants; and all the waters that [were] in the river were turned to blood.
- World English Bible (WEB)
- Moses and Aaron did so, as the LORD commanded; and he lifted up the rod, and struck the waters that were in the river, in the sight of Pharaoh, and in the sight of his servants; and all the waters that were in the river were turned to blood.
- American Standard Version (ASV)
- And Moses and Aaron did so, as Jehovah commanded; and he lifted up the rod, and smote the waters that were in the river, in the sight of Pharaoh, and in the sight of his servants; and all the waters that were in the river were turned to blood.
- Bible in Basic English (BBE)
- And Moses and Aaron did as the Lord had said; and when his rod had been lifted up and stretched out over the waters of the Nile before the eyes of Pharaoh and his servants, all the water in the Nile was turned to blood;
- Darby Translation (DBY)
- And Moses and Aaron did so, as Jehovah had commanded; and he lifted up the staff, and smote the waters that were in the river before the eyes of Pharaoh, and before the eyes of his bondmen; and all the waters that were in the river were turned into blood.
- Webster's Bible (WBS)
- And Moses and Aaron did so, as the LORD commanded; and he lifted up the rod and smote the waters that [were] in the river, in the sight of Pharaoh, and in the sight of his servants; and all the waters that [were] in the river were turned into blood.
- Young's Literal Translation (YLT)
- And Moses and Aaron do so, as Jehovah hath commanded, and he lifteth up [his hand] with the rod, and smiteth the waters which [are] in the River, before the eyes of Pharaoh, and before the eyes of his servants, and all the waters which [are] in the River are turned to blood,
Read in context
- 18ನದಿಯ ಲ್ಲಿರುವ ವಿಾನುಗಳು ಸಾಯುವವು; ನದಿಯು ನಾರು ವದು. ಐಗುಪ್ತ್ಯರು ನದಿಯ ನೀರನ್ನು ಕುಡಿಯುವದಕ್ಕೆ ಅಸಹ್ಯಪಡುವರು ಎಂದು ಹೇಳು ಅಂದನು.
- 19ಕರ್ತನು ಮೋಶೆಗೆ--ನೀನು ಆರೋನನಿಗೆ--ನಿನ್ನ ಕೋಲನ್ನು ತಕ್ಕೊಂಡು ಐಗುಪ್ತದಲ್ಲಿರುವ ನೀರುಗಳ ಮೇಲೆಯೂ ನದಿ ಪ್ರವಾಹ ಕೆರೆ ಕೊಳ ಕುಂಟೆಗಳ ಮೇಲೆಯೂ ಕೈಚಾಚು ಎಂದು ಹೇಳು. ಆಗ ಅವು ರಕ್ತವಾಗುವವು; ಐಗುಪ್ತದೇಶದಲ್ಲೆಲ್ಲಾ ಮರದ ಪಾತ್ರೆ ಗಳಲ್ಲಾಗಲಿ ಕಲ್ಲಿನ ಪಾತ್ರೆಗಳಲ್ಲಾಗಲಿ ರಕ್ತವಿರುವದು ಎಂದು ಹೇಳಿದನು.
- 20ಮೋಶೆ ಆರೋನರು ಕರ್ತನು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಅವನು ಕೋಲನ್ನು ಎತ್ತಿ ನದಿಯಲ್ಲಿರುವ ನೀರನ್ನು ಫರೋಹನ ಕಣ್ಣುಗಳ ಮುಂದೆಯೂ ಅವನ ಸೇವಕರ ಕಣ್ಣುಗಳ ಮುಂದೆಯೂ ಹೊಡೆದನು. ಆಗ ನದಿಯ ನೀರೆಲ್ಲಾ ರಕ್ತವಾಯಿತು.
- 21ನದಿಯಲ್ಲಿದ್ದ ವಿಾನುಗಳು ಸತ್ತವು; ನದಿಯು ದುರ್ವಾಸನೆಗೊಂಡಿತು. ಐಗುಪ್ತ್ಯರು ನದಿಯ ನೀರನ್ನು ಕುಡಿಯಲಾರದೆ ಹೋದರು. ಆಗ ಐಗುಪ್ತದೇಶದಲ್ಲೆಲ್ಲಾ ರಕ್ತವೇ ಆಗಿತ್ತು.
- 22ಐಗುಪ್ತದ ಮಂತ್ರಗಾರರು ತಮ್ಮ ಮಂತ್ರಗಳಿಂದ ಹಾಗೆಯೇ ಮಾಡಿದ್ದರಿಂದ ಫರೋಹನ ಹೃದಯವು ಕಠಿಣವಾಯಿತು. ಕರ್ತನು ಹೇಳಿದಂತೆಯೇ ಅವನು ಅವರ ಮಾತನ್ನು ಕೇಳಲಿಲ್ಲ.
Cross references
- Psalm 105:29 ಕೀರ್ತನೆಗಳು 105:29ಅವರ ನೀರನ್ನು ರಕ್ತವಾಗಿ ಮಾರ್ಪ ಡಿಸಿ; ವಿಾನುಗಳನ್ನು ಸಾಯಿಸಿದನು.
- Psalm 78:44 ಕೀರ್ತನೆಗಳು 78:44ಅವರು ಕುಡಿ ಯಲಾರದ ಹಾಗೆ ಅವರ ನದಿಗಳನ್ನೂ ಹೊಳೆಗ ಳನ್ನೂ ಆತನು ರಕ್ತಕ್ಕೆ ಮಾರ್ಪಡಿಸಿದನು.
- Revelation 8:8 ಪ್ರಕಟನೆ 8:8ಎರಡನೆಯ ದೂತನು ಊದಿದಾಗ ಬೆಂಕಿಯಿಂದ ಉರಿಯುವ ದೊಡ್ಡ ಬೆಟ್ಟವೋ ಎಂಬಂತಿದ್ದದ್ದು ಸಮುದ್ರದಲ್ಲಿ ಹಾಕಲ್ಪಟ್ಟಿತು. ಆಗ ಸಮುದ್ರದ ಮೂರ ರಲ್ಲಿ ಒಂದು ಭಾಗ ರಕ್ತವಾಯಿತು;
- Numbers 20:8–12 ಅರಣ್ಯಕಾಂಡ 20:8–12ಕೋಲನ್ನು ತಕ್ಕೊಂಡು ನೀನು ನಿನ್ನ ಸಹೋದರನಾದ ಆರೋನನು ಸಭೆಯನ್ನು ಕೂಡಿಸಿ ಕೊಂಡು ಅವರ ಕಣ್ಣುಗಳ ಮುಂದೆ ಬಂಡೆಯ ಸಂಗಡ ಮಾತನಾಡಿರಿ; ಅದು ತನ್ನ ನೀರನ್ನು ಕೊಡುವದು; ನೀನು ಅವರಿಗೋಸ್ಕರ ಬಂಡೆಯೊಳಗಿಂದ ನೀರನ್ನು ಹೊರಗೆ ತರುವಿ; ಸಭೆಗೂ ಅವರ ಪಶುಗಳಿಗೂ ನೀನು ಕುಡಿಯಲು ಕೊಡುವಿ ಎಂದು ಹೇಳಿದನು. ಆಗ ಕರ್ತನು ಆಜ್ಞಾಪಿಸಿದ ಹಾಗೆ ಮೋಶೆಯು ಆತನ ಸನ್ನಿಧಿಯಿಂದ ಕೋಲನ್ನು ತಕ್ಕೊಂಡನು. ಮೋಶೆಯೂ ಆರೋನನೂ ಸಭೆಯನ್ನು ಬಂಡೆಯ ಮುಂದೆ ಕೂಡಿಸಿ ಅವರಿಗೆ--ತಿರುಗಿಬಿದ್ದವರೇ, ಕೇಳಿರಿ; ನಾವು ನಿಮಗೋಸ್ಕರ ಈ ಬಂಡೆಯೊಳಗಿಂದ ನೀರನ್ನು ಹೊರಡಿಸಬೇಕೋ ಎಂದು ಹೇಳಿದರು. ಮೋಶೆಯು ತನ್ನ ಕೈಯನ್ನು ಎತ್ತಿ ತನ್ನ ಕೋಲಿನಿಂದ ಬಂಡೆಯನ್ನು ಎರಡು ಸಾರಿ ಹೊಡೆದನು; ಆಗ ಬಹಳ ನೀರು ಹೊರಗೆ ಬಂತು; ಸಭೆಯೂ ಅವರ ಪಶುಗಳೂ ಕುಡಿದವು. ಆಗ ಕರ್ತನು ಮೋಶೆ ಆರೋನನ ಸಂಗಡ ಮಾತನಾಡಿ--ನೀವು ಇಸ್ರಾಯೇಲ್ ಮಕ್ಕಳ ಕಣ್ಣುಗಳ ಮುಂದೆ ನನ್ನನ್ನು ಪರಿಶುದ್ಧಮಾಡುವದಕ್ಕೆ ನನ್ನಲ್ಲಿ ವಿಶ್ವಾಸಿ ಸದೆ ಇದ್ದ ಕಾರಣ ನಾನು ಅವರಿಗೆ ಕೊಟ್ಟ ದೇಶದಲ್ಲಿ ನೀವು ಸಮೂಹವನ್ನು ಸೇರಿಸುವದಿಲ್ಲ ಅಂದನು.
- Exodus 7:17–18 ವಿಮೋಚನಕಾಂಡ 7:17–18ಕರ್ತನು ಹೀಗೆ ಹೇಳುತ್ತಾನೆ--ನಾನೇ ಕರ್ತನೆಂದು ಇದರಿಂದ ತಿಳುಕೊಳ್ಳುವಿ. ಇಗೋ, ನನ್ನ ಸೇವಕನ ಕೈಯಲ್ಲಿರುವ ಕೋಲಿನಿಂದ ನದಿಯ ನೀರನ್ನು ಹೊಡೆ ಯುವೆನು, ಆಗ ಅದು ರಕ್ತವಾಗುವದು. ನದಿಯ ಲ್ಲಿರುವ ವಿಾನುಗಳು ಸಾಯುವವು; ನದಿಯು ನಾರು ವದು. ಐಗುಪ್ತ್ಯರು ನದಿಯ ನೀರನ್ನು ಕುಡಿಯುವದಕ್ಕೆ ಅಸಹ್ಯಪಡುವರು ಎಂದು ಹೇಳು ಅಂದನು.
- John 2:9–11 ಯೋಹಾನನು 2:9–11ಔತಣದ ಪಾರುಪತ್ಯ ಗಾರನು ದ್ರಾಕ್ಷಾರಸವಾದ ನೀರನ್ನು ರುಚಿ ನೋಡಿದಾಗ ಅದು ಎಲ್ಲಿಂದ ಬಂತೆಂದು ತಿಳಿಯದವನಾಗಿ (ನೀರನ್ನು ತೋಡಿಕೊಂಡ ಸೇವಕರಿಗೆ ತಿಳಿದಿತ್ತು) ಮದಲಿಂಗನನ್ನು ಕರೆದು ಅವನಿಗೆ--ಪ್ರತಿ ಮನುಷ್ಯನು ಮೊದಲು ಒಳ್ಳೇ ದ್ರಾಕ್ಷಾರಸವನ್ನು ಕೊಟ್ಟು ಜನರು ಚೆನ್ನಾಗಿ ಕುಡಿದ ಮೇಲೆ ಕನಿಷ್ಠವಾದದ್ದನ್ನು ಕೊಡುತ್ತಾನೆ; ಆದರೆ ನೀನು ಇದು ವರೆಗೆ ಒಳ್ಳೇ ದ್ರಾಕ್ಷಾರಸವನ್ನು ಇಟ್ಟು ಕೊಂಡಿದ್ದೀ ಅಂದನು. ಯೇಸು ಈ ಮೊದಲನೆಯ ಅದ್ಭುತ ಕಾರ್ಯವನ್ನು ಗಲಿಲಾಯದ ಕಾನಾದಲ್ಲಿ ಮಾಡಿ ತನ್ನ ಮಹಿಮೆಯನ್ನು ತೋರ್ಪಡಿಸಿದನು; ಮತ್ತು ಆತನ ಶಿಷ್ಯರು ಆತನ ಮೇಲೆ ನಂಬಿಕೆ ಇಟ್ಟರು.
- Exodus 17:5–6 ವಿಮೋಚನಕಾಂಡ 17:5–6ಆಗ ಕರ್ತನು ಮೋಶೆಗೆ--ಜನರ ಮುಂದೆ ಹಾದು ಹೋಗಿ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರನ್ನು ಕರಕೊಂಡು ನೀನು ನದಿಯನ್ನು ಹೊಡೆದ ಕೋಲನ್ನು ಕೈಯಲ್ಲಿ ತೆಗೆದುಕೊಂಡು ಹೋಗು. ಅಲ್ಲಿ ಇಗೋ, ನಾನು ಹೋರೇಬಿನಲ್ಲಿ ಬಂಡೆಯ ಮೇಲೆ ನಿನ್ನ ಮುಂದೆ ನಿಂತುಕೊಳ್ಳುವೆನು ನೀನು ಬಂಡೆಯನ್ನು ಹೊಡೆಯ ಬೇಕು. ಆಗ ಜನರು ಕುಡಿಯುವಂತೆ ನೀರು ಹೊರಗೆ ಬರುವದು ಅಂದನು. ಮೋಶೆಯು ಇಸ್ರಾಯೇಲ್ಯರ ಹಿರಿಯರ ಎದುರಿನಲ್ಲಿ ಹಾಗೆಯೇ ಮಾಡಿದನು.
- Exodus 17:9–12 ವಿಮೋಚನಕಾಂಡ 17:9–12ಆಗ ಮೋಶೆಯು ಯೆಹೋಶುವನಿಗೆ--ನೀನು ನಮ ಗಾಗಿ ಮನುಷ್ಯರನ್ನು ಆರಿಸಿಕೊಂಡು ಅಮಾಲೇಕ್ಯರ ಸಂಗಡ ಯುದ್ಧಮಾಡುವದಕ್ಕೆ ಹೊರಟುಹೋಗು; ನಾಳೆ ನಾನು ದೇವರ ಕೋಲನ್ನು ಕೈಯಲ್ಲಿ ಹಿಡಿದು ಕೊಂಡು ಗುಡ್ಡದ ಮೇಲೆ ನಿಂತುಕೊಳ್ಳುವೆನು ಅಂದನು. ಮೋಶೆಯು ತನಗೆ ಹೇಳಿದಂತೆ ಯೆಹೋಶುವನು ಅಮಾಲೇಕ್ಯರೊಂದಿಗೆ ಯುದ್ಧಮಾಡಿದನು. ಮೋಶೆ ಯೂ ಆರೋನನೂ ಹೂರನೂ ಗುಡ್ಡದ ಮೇಲೆ ಏರಿಹೋದರು. ಮೋಶೆಯು ತನ್ನ ಕೈಯನ್ನು ಎತ್ತಿದಾಗ ಇಸ್ರಾಯೇಲ್ಯರು ಜಯಿಸಿದರು. ಅವನು ತನ್ನ ಕೈಯನ್ನು ಇಳಿಸಿದಾಗ ಅಮಾಲೇಕ್ಯರು ಜಯಿಸಿದರು. ಆದರೆ ಮೋಶೆಯ ಕೈಗಳು ಭಾರವಾಗಿರಲಾಗಿ ಅವರು ಒಂದು ಕಲ್ಲನ್ನು ತಂದು ಅವನ ಕೆಳಗೆ ಇಟ್ಟಾಗ ಅವನು ಅದರ ಮೇಲೆ ಕೂತುಕೊಂಡನು. ಆರೋನನೂ ಹೂರನೂ ಒಬ್ಬನು ಒಂದು ಕಡೆಯಲ್ಲಿಯೂ ಇನ್ನೊಬ್ಬನು ಇನ್ನೊಂದು ಕಡೆಯಲ್ಲಿಯೂ ಅವನ ಕೈಗಳಿಗೆ ಆಧಾರ ಕೊಟ್ಟರು. ಹೀಗೆ ಸೂರ್ಯನು ಮುಳುಗುವ ವರೆಗೆ ಅವನ ಕೈಗಳು ಇಳಿಯದೇ ಇದ್ದವು.
Original words (Hebrew)
- Moses · H4872מֹשֶׁה Môsheh
- Aaron · H175אַהֲרוֹן ʼAhărôwn
- did · H6213עָשָׂה ʻâsâh
- commanded · H6680צָוָה tsâvâh
- up · H7311רוּם rûwm
- rod · H4294מַטֶּה maṭṭeh
- smote · H5221נָכָה nâkâh
- waters · H4325מַיִם mayim
- river · H2975יְאֹר yᵉʼôr
- sight · H5869עַיִן ʻayin
- Pharaoh · H6547פַּרְעֹה Parʻôh
- sight · H5869עַיִן ʻayin
- servants · H5650עֶבֶד ʻebed
- waters · H4325מַיִם mayim
- river · H2975יְאֹר yᵉʼôr
- turned · H2015הָפַךְ hâphak
- blood · H1818דָּם dâm