Exodus · chapter 7 · verse 23
Exodus 7:23 in Kannada
ಫರೋಹನು ತಿರುಗಿ ಕೊಂಡು ತನ್ನ ಮನೆಗೆ ಹೋದನು. ಅವನು ಇದಕ್ಕಾ ದರೂ ತನ್ನ ಮನಸ್ಸುಕೊಡಲಿಲ್ಲ.
Pharohanu tirugi kondu tanna manege hodanu. Avanu idakkaa daroo tanna manassukodalilla.
Exodus 7:23 in English
- King James Version (KJV)
- And Pharaoh turned and went into his house, neither did he set his heart to this also.
- World English Bible (WEB)
- Pharaoh turned and went into his house, and he didn’t even take this to heart.
- American Standard Version (ASV)
- And Pharaoh turned and went into his house, neither did he lay even this to heart.
- Bible in Basic English (BBE)
- Then Pharaoh went into his house, and did not take even this to heart.
- Darby Translation (DBY)
- And Pharaoh turned and went into his house, and took not this to heart either.
- Webster's Bible (WBS)
- And Pharaoh turned and went into his house, neither did he regard this also.
- Young's Literal Translation (YLT)
- and Pharaoh turneth and goeth in unto his house, and hath not set his heart even to this;
Read in context
- 21ನದಿಯಲ್ಲಿದ್ದ ವಿಾನುಗಳು ಸತ್ತವು; ನದಿಯು ದುರ್ವಾಸನೆಗೊಂಡಿತು. ಐಗುಪ್ತ್ಯರು ನದಿಯ ನೀರನ್ನು ಕುಡಿಯಲಾರದೆ ಹೋದರು. ಆಗ ಐಗುಪ್ತದೇಶದಲ್ಲೆಲ್ಲಾ ರಕ್ತವೇ ಆಗಿತ್ತು.
- 22ಐಗುಪ್ತದ ಮಂತ್ರಗಾರರು ತಮ್ಮ ಮಂತ್ರಗಳಿಂದ ಹಾಗೆಯೇ ಮಾಡಿದ್ದರಿಂದ ಫರೋಹನ ಹೃದಯವು ಕಠಿಣವಾಯಿತು. ಕರ್ತನು ಹೇಳಿದಂತೆಯೇ ಅವನು ಅವರ ಮಾತನ್ನು ಕೇಳಲಿಲ್ಲ.
- 23ಫರೋಹನು ತಿರುಗಿ ಕೊಂಡು ತನ್ನ ಮನೆಗೆ ಹೋದನು. ಅವನು ಇದಕ್ಕಾ ದರೂ ತನ್ನ ಮನಸ್ಸುಕೊಡಲಿಲ್ಲ.
- 24ಆದರೆ ಐಗುಪ್ತ್ಯ ರೆಲ್ಲರೂ ನದಿಯ ನೀರನ್ನು ಕುಡಿಯಲಾರದೆ ಇದ್ದದರಿಂದ ಕುಡಿಯುವ ನೀರಿಗಾಗಿ ನದಿಯ ಸುತ್ತಲೂ ಅಗೆದರು.ಕರ್ತನು ನದಿಯನ್ನು ಹೊಡೆದಮೇಲೆ ಏಳು ದಿನಗಳು ಪೂರ್ತಿಯಾದವು.
- 25ಕರ್ತನು ನದಿಯನ್ನು ಹೊಡೆದಮೇಲೆ ಏಳು ದಿನಗಳು ಪೂರ್ತಿಯಾದವು.
Cross references
- Deuteronomy 32:46 ಧರ್ಮೋಪದೇಶಕಾಂಡ 32:46ನಾನು ಈ ಹೊತ್ತು ನಿಮಗೆ ಸಾಕ್ಷಿಯಾಗಿ ಹೇಳುವ ಮಾತುಗಳನ್ನೆಲ್ಲಾ ನಿಮ್ಮ ಹೃದಯಗಳಲ್ಲಿ ಇಡಿರಿ; ಈ ನ್ಯಾಯಪ್ರಮಾಣದ ಮಾತುಗಳನ್ನೆಲ್ಲಾ ಕೈಕೊಳ್ಳುವದಕ್ಕೆ ನಿಮ್ಮ ಮಕ್ಕಳಿಗೆ ಆಜ್ಞಾಪಿಸಬೇಕು.
- Job 7:17 ಯೋಬನು 7:17ನೀನು ಅವನನ್ನು ಹೆಚ್ಚಿಸುವ ಹಾಗೆಯೂ ಅವನ ಮೇಲೆ ನಿನ್ನ ಹೃದಯ ಇಡುವ ಹಾಗೆಯೂ
- Proverbs 29:1 ಜ್ಞಾನೋಕ್ತಿಗಳು 29:1ಅನೇಕ ಸಲ ಗದರಿಸಲ್ಪಟ್ಟರೂ ಬಗ್ಗದಕುತ್ತಿಗೆಯವನು ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.
- Ezekiel 40:4 ಯೆಹೆಜ್ಕೇಲನು 40:4ಆ ಮನುಷ್ಯನು ನನಗೆ--ಮನುಷ್ಯ ಪುತ್ರನೇ, ನಿನ್ನ ಕಣ್ಣುಗಳಿಂದ ನೋಡಿ ನಿನ್ನ ಕಿವಿಗಳಿಂದ ಕೇಳು ನಾನು ನಿನಗೆ ತೋರಿಸುವ ಎಲ್ಲಾ ಸಂಗತಿಗಳಿಗೆ ನಿನ್ನ ಮನಸ್ಸಿಡು, ನಾನು ನಿನಗೆ ತೋರಿಸುವ ಹಾಗೆಯೇ ನೀನು ಇಲ್ಲಿಗೆ ತರಲ್ಪಟ್ಟಿರುವೆ. ನೀನು ನೋಡುವವು ಗಳನ್ನೆಲ್ಲಾ ಇಸ್ರಾಯೇಲ್ಯರ ಮನೆತನದವರಿಗೆ ತಿಳಿಸು ಅಂದನು.
- Malachi 2:2 ಮಲಾಕಿಯ 2:2ಸೈನ್ಯಗಳ ಕರ್ತನು ಹೇಳುವದೇ ನಂದರೆ ನೀವು ಕೇಳದೆ, ಹೃದಯದಲ್ಲಿ ಇಟ್ಟುಕೊಳ್ಳದೆ, ನನ್ನ ಹೆಸರಿಗೆ ಮಹಿಮೆಯನ್ನು ಕೊಡದೆ ಹೋದರೆ ನಿಮ್ಮ ಮೇಲೆ ಶಾಪವನ್ನು ಕಳುಹಿಸುವೆನು, ನಿಮ್ಮ ಆಶೀರ್ವಾದಗಳನ್ನು ಶಪಿಸುವೆನು; ಹೌದು, ಅವು ಗಳನ್ನು ಆಗಲೇ ಶಪಿಸಿದ್ದಾಯಿತು; ನೀವು ಅವುಗಳನ್ನು ಹೃದಯದಲ್ಲಿ ಇಟ್ಟುಕೊಳ್ಳುವದಿಲ್ಲ.
- 1 Samuel 4:20 1 ಸಮುವೇಲನು 4:20ಅವಳು ಸಾಯುವ ವೇಳೆಯಲ್ಲಿ ಅವಳ ಬಳಿಯಲ್ಲಿ ನಿಂತಿರುವ ಸ್ತ್ರೀಯರು--ಭಯಪಡಬೇಡ; ಯಾಕಂದರೆ ಮಗನನ್ನು ಹೆತ್ತಿದ್ದೀ ಎಂದು ಅವಳಿಗೆ ಹೇಳಿದರು.
- Amos 4:7–12 ಆಮೋಸ 4:7–12ಸುಗ್ಗಿಯು ಇನ್ನು ಮೂರು ತಿಂಗಳು ಇರುವಾಗ ಮಳೆಯನ್ನು ನಿಮ್ಮಿಂದ ನಾನು ಹಿಂತೆಗೆದಿದ್ದೇನೆ; ಒಂದು ಪಟ್ಟಣದ ಮೇಲೆ ಮಳೆ ಸುರಿಸಿ ಮತ್ತೊಂದು ಪಟ್ಟಣದ ಮೇಲೆ ಮಳೆ ಸುರಿಸದ ಹಾಗೆ ಮಾಡಿದೆನು; ಮಳೆ ಸುರಿಯದ ಭಾಗವು ಒಣಗಿ ಹೋಯಿತು. ಆದ್ದರಿಂದ ನೀರು ಕುಡಿಯುವದಕ್ಕಾಗಿ ಒಂದು ಪಟ್ಟಣದವರು ಮತ್ತೊಂದು ಪಟ್ಟಣಕ್ಕೆ ಅಲೆದಾಡುತ್ತಾ ಹೋದರೂ ಅವರಿಗೆ ತೃಪ್ತಿಯಾಗಲಿಲ್ಲ, ಆದರೂ ನೀವು ನನ್ನ ಕಡೆಗೆ ಹಿಂತಿರುಗಿಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ. ನಿಮ್ಮ ಪೈರನ್ನು ಹಾಳುಮಾಡುವ ಬಿರುಗಾಳಿಯಿಂದ ಹೊಡೆದಿದ್ದೇನೆ; ನಿಮ್ಮ ತೋಟಗಳು, ದ್ರಾಕ್ಷೇತೋಟ ಗಳು, ಅಂಜೂರದ ಗಿಡಗಳು ಮತ್ತು ಎಣ್ಣೇ ಮರಗಳು ಹೆಚ್ಚಾದಾಗ ಕಂಬಳಿ ಹುಳಗಳು ಅವುಗಳನ್ನು ತಿಂದು ಬಿಟ್ಟವು; ಆದರೂ ನೀವು ನನ್ನ ಕಡೆಗೆ ಹಿಂತಿರುಗಿ ಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ. ಐಗುಪ್ತದ ವ್ಯಾಧಿಗಳಂಥ ವ್ಯಾಧಿಯನ್ನು ನಿಮ್ಮೊಳಗೆ ಕಳುಹಿಸಿದ್ದೇನೆ.ನಿಮ್ಮ ಕುದುರೆಗಳನ್ನು ತೆಗೆದುಕೊಂಡು ಹೋದವರ ಜೊತೆಯಲ್ಲಿ ನಿಮ್ಮ ಯೌವನಸ್ಥರನ್ನು ಕತ್ತಿಯಿಂದ ಕೊಂದುಹಾಕಿದ್ದೇನೆ. ನಿಮ್ಮ ದಂಡುಗಳ ದುರ್ವಾಸ ನೆಯು ನಿಮ್ಮ ಮೂಗುಗಳಲ್ಲಿ ಸೇರುವ ಹಾಗೆ ಮಾಡಿ ದ್ದೇನೆ. ಆದಾಗ್ಯೂ ನೀವು ನನ್ನ ಕಡೆಗೆ ಹಿಂತಿರುಗಿ ಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ. ದೇವರು ಸೊದೋಮನ್ನೂ ಗೊಮೋರವನ್ನೂ ಕೆಡವಿದ ಹಾಗೆ ನಾನು ನಿಮ್ಮಲ್ಲಿ ಕೆಲವರನ್ನು ಕೆಡವಿ ಹಾಕಿದ್ದೇನೆ; ಹೌದು, ಬೆಂಕಿ ಉರಿಯೊಳಗಿಂದ ತೆಗೆದ ಕೊಳ್ಳಿಯ ಹಾಗೆ ಇದ್ದೀರಿ. ಆದರೂ ನೀವು ನನ್ನ ಕಡೆಗೆ ಹಿಂತಿರುಗಿ ಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ. ಆದದ ರಿಂದ ಓ ಇಸ್ರಾಯೇಲೇ, ನಿನಗೆ ನಾನು ಹೀಗೆ ಮಾಡುತ್ತೇನೆ; ನಾನು ನಿನಗೆ ಇದನ್ನು ಮಾಡುವದರಿಂದ ನೀನು ನಿನ್ನ ದೇವರನ್ನು ಎದುರುಗೊಳ್ಳಲು ಸಿದ್ಧ ಮಾಡಿಕೊ.ಇಗೋ, ಬೆಟ್ಟಗಳನ್ನು ರೂಪಿಸಿ ಗಾಳಿ ಯನ್ನು ನಿರ್ಮಿಸಿ ಮನುಷ್ಯನಿಗೆ ಅವನ ಯೋಚನೆ ಏನೆಂದು ತಿಳಿಸಿ ಉದಯವನ್ನು ಅಂಧಕಾರವನ್ನಾಗಿ ಮಾಡಿ ಭೂಮಿಯ ಉನ್ನತ ಸ್ಥಳಗಳನ್ನು ತುಳಿದು ಬಿಡುವಾತನು ಆತನೇ. ಕರ್ತನೂ ಸೈನ್ಯಗಳ ದೇವರೂ ಎಂಬದು ಆತನ ಹೆಸರು.
- Proverbs 24:32 ಜ್ಞಾನೋಕ್ತಿಗಳು 24:32ಆಗ ನಾನು ನೋಡಿ ಮನಸ್ಸಿಟ್ಟೆನು; ದೃಷ್ಟಿಸಿ ಶಿಕ್ಷಿತನಾದೆನು.
- Jeremiah 5:3 ಯೆರೆಮೀಯ 5:3ಓ ಕರ್ತನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇವೆಯ ಲ್ಲವೋ? ಅವರನ್ನು ಹೊಡೆದಿ, ಆದರೆ ಅವರಿಗೆ ದುಃಖವಾಗಲಿಲ್ಲ; ಅವರನ್ನು ಸಂಹರಿಸಿದಿ, ಆದರೆ ಶಿಕ್ಷೆ ಹೊಂದಲೊಲ್ಲದೆ ಇದ್ದರು; ತಮ್ಮ ಮುಖಗಳನ್ನು ಬಂಡೆಗಿಂತ ಕಠಿಣ ಮಾಡಿಕೊಂಡಿದ್ದಾರೆ; ಅವರು ಹಿಂತಿರುಗುವದಕ್ಕೆ ನಿರಾಕರಿಸಿದ್ದಾರೆ.
- Habakkuk 1:5 ಹಬಕ್ಕೂಕ 1:5ಅನ್ಯಜನಾಂಗಗಳಲ್ಲಿ ನೋಡಿ ಲಕ್ಷ್ಯಗೊಟ್ಟು ಬಹಳ ವಾಗಿ ಆಶ್ಚರ್ಯಪಡಿರಿ; ತಿಳಿಸಿದರೂ ನೀವು ನಂಬದಂಥ ಕ್ರಿಯೆಯನ್ನು ನಿಮ್ಮ ದಿವಸಗಳಲ್ಲಿ ನಾನು ಮಾಡುತ್ತೇನೆ.
- Isaiah 26:11 ಯೆಶಾಯ 26:11ಕರ್ತನೇ, ನಿನ್ನ ಕೈ ಎತ್ತಿರಲು ಅವರು ನೋಡುವದಿಲ್ಲ, ಆದರೆ ಅವರು ನೋಡಿ ನಿನ್ನ ಜನರಿಗೋಸ್ಕರ ಹೊಟ್ಟೆಕಿಚ್ಚು ಪಟ್ಟದ್ದಕ್ಕೆ ನಾಚಿಕೆ ಪಡುವರು. ಹೌದು, ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವದು.
- Exodus 9:21 ವಿಮೋಚನಕಾಂಡ 9:21ಆದರೆ ಕರ್ತನ ವಾಕ್ಯಕ್ಕೆ ಮನಸ್ಸು ಕೊಡದವರು ತಮ್ಮ ದಾಸ ರನ್ನೂ ಪಶುಗಳನ್ನೂ ಹೊಲದಲ್ಲಿ ಬಿಟ್ಟರು.