Exodus · chapter 8 · verse 12
Exodus 8:12 in Kannada
ಮೋಶೆ ಆರೋನರು ಫರೋಹನನ್ನು ಬಿಟ್ಟು ಹೊರಗೆ ಹೋದಾಗ ಮೋಶೆ ಫರೋಹನ ಮೇಲೆ ಬರಮಾಡಿದ ಕಪ್ಪೆಗಳ ನಿಮಿತ್ತ ಕರ್ತನಿಗೆ ಮೊರೆಯಿಟ್ಟನು.
Moshe aaronaru pharohanannu bittu horage hodaaga moshe pharohana mele baramaadida kappegala nimitta kartanige moreyittanu.
Exodus 8:12 in English
- King James Version (KJV)
- And Moses and Aaron went out from Pharaoh: and Moses cried unto the LORD because of the frogs which he had brought against Pharaoh.
- World English Bible (WEB)
- Moses and Aaron went out from Pharaoh, and Moses cried to the LORD concerning the frogs which he had brought on Pharaoh.
- American Standard Version (ASV)
- And Moses and Aaron went out from Pharaoh: and Moses cried unto Jehovah concerning the frogs which he had brought upon Pharaoh.
- Bible in Basic English (BBE)
- Then Moses and Aaron went out from Pharaoh; and Moses made prayer to the Lord about the frogs which he had sent on Pharaoh.
- Darby Translation (DBY)
- And Moses and Aaron went out from Pharaoh; and Moses cried to Jehovah because of the frogs that he had brought against Pharaoh.
- Webster's Bible (WBS)
- And Moses and Aaron went out from Pharaoh: and Moses cried to the LORD, because of the frogs which he had brought against Pharaoh.
- Young's Literal Translation (YLT)
- And Moses — Aaron also — goeth out from Pharaoh, and Moses crieth unto Jehovah, concerning the matter of the frogs which He hath set on Pharaoh;
Read in context
- 10ಅವನು ಮೋಶೆಗೆ--ನಾಳೆ ಅಂದನು. ಆಗ ಮೋಶೆಯು--ನಮ್ಮ ದೇವರಾಗಿರುವ ಕರ್ತನ ಹಾಗೆ ಯಾರು ಇಲ್ಲವೆಂದು ನೀನು ತಿಳಿದುಕೊಳ್ಳುವ ಹಾಗೆ ನಿನ್ನ ಮಾತಿನ ಪ್ರಕಾರ ಆಗಲಿ.
- 11ಕಪ್ಪೆಗಳು ನಿನ್ನಿಂದಲೂ ನಿನ್ನ ಮನೆಗಳಿಂದಲೂ ನಿನ್ನ ಸೇವಕರಿಂದಲೂ ನಿನ್ನ ಜನರಿಂದಲೂ ಹೊರಟುಹೋಗಿ ನದಿಯಲ್ಲಿ ಮಾತ್ರ ಅವು ಉಳಿಯುವವು ಅಂದನು.
- 12ಮೋಶೆ ಆರೋನರು ಫರೋಹನನ್ನು ಬಿಟ್ಟು ಹೊರಗೆ ಹೋದಾಗ ಮೋಶೆ ಫರೋಹನ ಮೇಲೆ ಬರಮಾಡಿದ ಕಪ್ಪೆಗಳ ನಿಮಿತ್ತ ಕರ್ತನಿಗೆ ಮೊರೆಯಿಟ್ಟನು.
- 13ಮೋಶೆ ಹೇಳಿದ ಪ್ರಕಾರ ಕರ್ತನು ಮಾಡಿದನು. ಮನೆಗಳಲ್ಲಿಯೂ ಹಳ್ಳಿಗಳ ಲ್ಲಿಯೂ ಹೊಲಗಳಲ್ಲಿಯೂ ಇದ್ದ ಕಪ್ಪೆಗಳು ಸತ್ತವು.
- 14ಅವರು ಅವುಗಳನ್ನು ರಾಶಿಗಳಾಗಿ ಕೂಡಿಸಿಟ್ಟಿದ್ದರಿಂದ ದೇಶವು ದುರ್ವಾಸನೆಯಿಂದ ತುಂಬಿತು.
Cross references
- James 5:16–18 ಯಾಕೋಬನು 5:16–18ನೀವು ಸ್ವಸ್ಥವಾಗಬೇಕಾದರೆ ನಿಮ್ಮ ತಪ್ಪುಗಳನ್ನು ಒಬ್ಬರಿಗೊಬ್ಬರು ಅರಿಕೆಮಾಡಿ ಒಬ್ಬರಿ ಗೋಸ್ಕರ ಒಬ್ಬರು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಫಲಕಾರಿಯಾಗುತ್ತದೆ. ಎಲೀಯನು ನಮ್ಮಂಥ ಸ್ವಭಾವವುಳ್ಳವ ನಾಗಿದ್ದನು; ಅವನು ಮಳೆ ಬರಬಾರದೆಂದು ಆಸಕ್ತಿ ಯಿಂದ ಪ್ರಾರ್ಥಿಸಲು ಮೂರು ವರುಷ ಆರು ತಿಂಗಳ ವರೆಗೂ ಮಳೆ ಬೀಳಲಿಲ್ಲ. ತಿರಿಗಿ ಅವನು ಪ್ರಾರ್ಥನೆ ಮಾಡಲು ಆಕಾಶವು ಮಳೆಗರೆಯಿತು, ಭೂಮಿಯು ಬೆಳೆಯಿತು.
- 1 Samuel 12:23 1 ಸಮುವೇಲನು 12:23ಉತ್ತಮವಾದ ಸರಿಯಾದ ಮಾರ್ಗವನ್ನು ನಿಮಗೆ ಬೋಧಿಸುವೆನು.
- Exodus 9:33 ವಿಮೋಚನಕಾಂಡ 9:33ಮೋಶೆಯು ಫರೋಹನನ್ನು ಬಿಟ್ಟು ಪಟ್ಟಣದ ಹೊರಗೆ ಬಂದು ತನ್ನ ಕೈಗಳನ್ನು ಕರ್ತನ ಕಡೆಗೆ ಚಾಚಿದನು. ಆಗ ಗುಡುಗುಗಳೂ ಆನೆಕಲ್ಲಿನ ಮಳೆಯೂ ನಿಂತುಹೋದವು. ಇನ್ನು ಮಳೆಯು ಭೂಮಿಯ ಮೇಲೆ ಬೀಳಲಿಲ್ಲ.
- Exodus 10:18 ವಿಮೋಚನಕಾಂಡ 10:18ಆಗ ಅವನು ಫರೋಹನನ್ನು ಬಿಟ್ಟುಹೋಗಿ ಕರ್ತನನ್ನು ಬೇಡಿಕೊಂಡನು.
- Exodus 32:11 ವಿಮೋಚನಕಾಂಡ 32:11ಅದಕ್ಕೆ ಮೋಶೆಯು ತನ್ನ ದೇವರಾದ ಕರ್ತನ ಸನ್ನಿಧಿಯಲ್ಲಿ ಬೇಡಿಕೊಂಡು ಹೇಳಿದ್ದೇನಂದರೆ--ಕರ್ತನೇ, ನೀನು ಮಹಾಶಕ್ತಿಯಿಂದಲೂ ಬಲವುಳ್ಳ ಕೈಯಿಂದಲೂ ಐಗುಪ್ತದೇಶದೊಳಗಿಂದ ಹೊರಗೆ ಬರಮಾಡಿದ ನಿನ್ನ ಜನರ ಮೇಲೆ ನಿನ್ನ ಕೋಪವು ಯಾಕೆ ಉರಿಯುವದು?
- Ezekiel 36:37 ಯೆಹೆಜ್ಕೇಲನು 36:37ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಇದನ್ನು ಅವರಿಗೆ ಮಾಡಲು ನಾನಿನ್ನೂ ಇಸ್ರಾಯೇಲನ ಮನೆ ತನದವರಿಂದ ವಿಚಾರಿಸುವೆನು; ನಾನು ಅವರನ್ನು ಮನುಷ್ಯರಲ್ಲಿ ಮಂದೆಯಂತೆ ಹೆಚ್ಚಿಸುವೆನು.ಪರಿ ಶುದ್ಧ ಮಂದೆಯ ಹಾಗೆಯೂ ಯೆರೂಸಲೇಮಿನ ಪರಿಶುದ್ಧ ಹಬ್ಬಗಳ ಮಂದೆಯ ಹಾಗೆಯೂ ಇರುವರು; ಆದಕಾರಣ ಬೀಡಾದ ಪಟ್ಟಣಗಳು ಮನುಷ್ಯರ ಮಂದೆಗಳಿಂದ ತುಂಬುವವು; ನಾನೇ ಕರ್ತನೆಂದು ಅವರಿಗೆ ತಿಳಿಯುವದು.
- Exodus 8:30 ವಿಮೋಚನಕಾಂಡ 8:30ತರುವಾಯ ಮೋಶೆಯು ಫರೋಹನನ್ನು ಬಿಟ್ಟು ಹೋಗಿ ಕರ್ತನನ್ನು ಬೇಡಿಕೊಂಡನು.
- Exodus 8:8 ವಿಮೋಚನಕಾಂಡ 8:8ಆಗ ಫರೋಹನು ಮೋಶೆ ಆರೋನರನ್ನು ಕರೆ ಯಿಸಿ--ನೀವು ಕರ್ತನನ್ನು ಬೇಡಿಕೊಂಡು ಈ ಕಪ್ಪೆ ಗಳನ್ನು ನನ್ನ ಬಳಿಯಿಂದಲೂ ನನ್ನ ಪ್ರಜೆಗಳ ಬಳಿ ಯಿಂದಲೂ ತೊಲಗಿಸಬೇಕು. ಹಾಗೆ ಮಾಡಿದರೆ ನಿಮ್ಮ ಜನರು ಕರ್ತನಿಗೋಸ್ಕರ ಯಜ್ಞಮಾಡುವಂತೆ ಅವರಿಗೆ ನಾನು ಅಪ್ಪಣೆ ಕೊಡುವೆನು ಅಂದನು.