Exodus · chapter 9 · verse 14
Exodus 9:14 in Kannada
ಭೂಲೋಕ ದಲ್ಲೆಲ್ಲಾ ನನ್ನ ಹಾಗೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವ ಹಾಗೆ ಈ ಸಾರಿ ನಾನು ಎಲ್ಲಾ ಬಾಧೆಗಳನ್ನು ನಿನ್ನ ಮೇಲೆಯೂ ನಿನ್ನ ಸೇವಕರ ಮೇಲೆಯೂ ನಿನ್ನ ಜನರ ಮೇಲೆಯೂ ಬರಮಾಡು ವೆನು.
Bhooloka dallellaa nanna haage yaaroo illavendu neenu tilidukolluva haage ee saari naanu ellaa baadhegalannu ninna meleyoo ninna sevakara meleyoo ninna janara meleyoo baramaadu venu.
Exodus 9:14 in English
- King James Version (KJV)
- For I will at this time send all my plagues upon thine heart, and upon thy servants, and upon thy people; that thou mayest know that [there is] none like me in all the earth.
- World English Bible (WEB)
- For this time I will send all my plagues against your heart, against your officials, and against your people; that you may know that there is no one like me in all the earth.
- American Standard Version (ASV)
- For I will this time send all my plagues upon thy heart, and upon thy servants, and upon thy people; that thou mayest know that there is none like me in all the earth.
- Bible in Basic English (BBE)
- For this time I will send all my punishments on yourself and on your servants and on your people; so that you may see that there is no other like me in all the earth.
- Darby Translation (DBY)
- For I will at this time send all my plagues to thy heart, and on thy bondmen, and on thy people; that thou mayest know that there is none like me in all the earth.
- Webster's Bible (WBS)
- For I will at this time send all my plagues upon thy heart, and upon thy servants, and upon thy people: that thou mayest know that [there is] none like me in all the earth.
- Young's Literal Translation (YLT)
- for, at this time I am sending all My plagues unto thy heart, and on thy servants, and on thy people, so that thou knowest that there is none like Me in all the earth,
Read in context
- 12ಆದರೆ ಕರ್ತನು ಫರೋಹನ ಹೃದಯವನ್ನು ಕಠಿಣ ಮಾಡಿ ದನು. ಕರ್ತನು ಮೋಶೆಗೆ ಹೇಳಿದಂತೆಯೇ ಅವನು ಅವರ ಮಾತನ್ನು ಕೇಳಲಿಲ್ಲ.
- 13ಕರ್ತನು ಮೋಶೆಗೆ--ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೊಂಡು ಅವನಿಗೆ--ಇಬ್ರಿಯರ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನನ್ನು ಸೇವಿಸುವ ಹಾಗೆ ನನ್ನ ಜನರನ್ನು ಕಳುಹಿಸು.
- 14ಭೂಲೋಕ ದಲ್ಲೆಲ್ಲಾ ನನ್ನ ಹಾಗೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವ ಹಾಗೆ ಈ ಸಾರಿ ನಾನು ಎಲ್ಲಾ ಬಾಧೆಗಳನ್ನು ನಿನ್ನ ಮೇಲೆಯೂ ನಿನ್ನ ಸೇವಕರ ಮೇಲೆಯೂ ನಿನ್ನ ಜನರ ಮೇಲೆಯೂ ಬರಮಾಡು ವೆನು.
- 15ಈಗ ನನ್ನ ಕೈಚಾಚಿ ನಿನ್ನನ್ನೂ ನಿನ್ನ ಜನರನ್ನೂ ವ್ಯಾಧಿಯಿಂದ ಹೊಡೆಯುವೆನು; ನಿನ್ನನ್ನೂ ಭೂಮಿ ಯೊಳಗಿಂದ ನಿರ್ಮೂಲ ಮಾಡುವೆನು.
- 16ಆದರೆ ನಿಶ್ಚಯವಾಗಿ ನನ್ನ ಬಲವನ್ನು ನಿನಗೆ ತೋರಿಸುವ ಹಾಗೆಯೂ ನನ್ನ ಹೆಸರು ಭೂಲೋಕದಲ್ಲೆಲ್ಲಾ ತಿಳಿಸಲ್ಪಡುವಂತೆಯೂ ನಿನ್ನನ್ನು ಎಬ್ಬಿಸಿದ್ದೇನೆ.
Cross references
- Exodus 8:10 ವಿಮೋಚನಕಾಂಡ 8:10ಅವನು ಮೋಶೆಗೆ--ನಾಳೆ ಅಂದನು. ಆಗ ಮೋಶೆಯು--ನಮ್ಮ ದೇವರಾಗಿರುವ ಕರ್ತನ ಹಾಗೆ ಯಾರು ಇಲ್ಲವೆಂದು ನೀನು ತಿಳಿದುಕೊಳ್ಳುವ ಹಾಗೆ ನಿನ್ನ ಮಾತಿನ ಪ್ರಕಾರ ಆಗಲಿ.
- Revelation 18:8 ಪ್ರಕಟನೆ 18:8ಆದದರಿಂದ ಅವಳಿಗೆ ಮರಣ ದುಃಖ ಕ್ಷಾಮ ಎಂಬೀ ಉಪದ್ರವಗಳು ಒಂದೇ ದಿನದಲ್ಲಿ ಸಂಭವಿ ಸುವವು; ಅವಳು ಬೆಂಕಿಯಿಂದ ಸಂಪೂರ್ಣವಾಗಿ ಸುಟ್ಟುಹೋಗುವಳು. ಅವಳಿಗೆ ದಂಡನೆಯನ್ನು ವಿಧಿಸಿದ ದೇವರಾಗಿರುವ ಕರ್ತನು ಬಲಿಷ್ಠನಾಗಿದ್ದಾನೆ.
- Deuteronomy 29:20–22 ಧರ್ಮೋಪದೇಶಕಾಂಡ 29:20–22ಅಂಥವನನ್ನು ಕರ್ತನು ಉಳಿಸುವದಿಲ್ಲ; ಆಗಲೇ ಕರ್ತನ ಕೋಪವೂ ರೋಷವೂ ಆ ಮನುಷ್ಯನ ಮೇಲೆ ಹೊಗೆ ಹಾಯುವವು. ಈ ಪುಸ್ತಕದಲ್ಲಿ ಬರೆದಿ ರುವ ಶಾಪವೆಲ್ಲಾ ಅವನ ಮೇಲೆ ನೆಲೆಯಾಗುವದು; ಕರ್ತನು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವನು. ಈ ನ್ಯಾಯಪ್ರಮಾಣದ ಪುಸ್ತಕ ದಲ್ಲಿ ಬರೆದಿರುವ ಒಡಂಬಡಿಕೆಯ ಎಲ್ಲಾ ಶಾಪಗಳ ಪ್ರಕಾರ ಕರ್ತನು ಅವನನ್ನು ಇಸ್ರಾಯೇಲಿನ ಎಲ್ಲಾ ಗೋತ್ರಗಳೊಳಗಿಂದ ಕೇಡಿಗೆ ಪ್ರತ್ಯೇಕಿಸುವನು. ಹೀಗೆ ನಿಮ್ಮ ತರುವಾಯ ಹುಟ್ಟುವ ನಿಮ್ಮ ಮಕ್ಕಳ ಮುಂದಿನ ಸಂತತಿಯೂ ದೂರ ದೇಶದಿಂದ ಬರುವ ಅನ್ಯನೂ ಆ ದೇಶದ ಬಾಧೆಗಳನ್ನೂ ಕರ್ತನು ಅದರಲ್ಲಿ ಬರಮಾಡಿದ ರೋಗಗಳನ್ನೂ ನೋಡಿ
- 1 Samuel 4:8 1 ಸಮುವೇಲನು 4:8ನಮಗೆ ಅಯ್ಯೋ! ಆ ಪರಾಕ್ರಮಿಯಾದ ದೇವರುಗಳ ಕೈಯಿಂದ ನಮ್ಮನ್ನು ತಪ್ಪಿಸುವವನಾರು ಐಗುಪ್ತ್ಯರನ್ನು ಅರಣ್ಯದಲ್ಲಿ ಸಕಲ ಬಾಧೆಗಳಿಂದ ಹೊಡೆದ ದೇವರುಗಳು ಇವರೇ.
- Isaiah 46:9 ಯೆಶಾಯ 46:9ಪುರಾತನದ ಹಳೇ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ; ನಾನೇ ದೇವರು, ಮತ್ತೊಬ್ಬನಿಲ್ಲ; ನಾನೇ ದೇವರು, ನನಗೆ ಸರಿಸಮಾ ನನು ಇಲ್ಲ.
- Leviticus 26:18 ಯಾಜಕಕಾಂಡ 26:18ಇಷ್ಟಾದರು ನನ್ನ ಮಾತನ್ನು ಕೇಳದೆಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ಹೆಚ್ಚಾಗಿ ನಿಮ್ಮನ್ನು ಶಿಕ್ಷಿಸುವೆನು.
- Jeremiah 19:8 ಯೆರೆಮೀಯ 19:8ಈ ಪಟ್ಟಣಗಳನ್ನು ಹಾಳಾಗಿಯೂ ತಿರಸ್ಕರಿಸಲ್ಪಡುವಂತೆಯೂ ಮಾಡುವೆನು; ಅದನ್ನು ಹಾದುಹೋಗುವವರೆಲ್ಲರು ಅದರ ಎಲ್ಲಾ ಬಾಧೆಗಳ ನಿಮಿತ್ತ ವಿಸ್ಮಯಹೊಂದಿ ಸಿಳ್ಳು ಹಾಕುವರು.
- Deuteronomy 32:39–42 ಧರ್ಮೋಪದೇಶಕಾಂಡ 32:39–42ನಾನು ಆತನೇ ಎಂದೂ ನನ್ನ ಹಾಗೆ ಬೇರೆ ದೇವರಿಲ್ಲವೆಂದೂ ಈಗ ನೋಡಿರಿ; ನಾನೇ ಸಾಯಿಸು ತ್ತೇನೆ, ಬದುಕಿಸುತ್ತೇನೆ; ಗಾಯ ಮಾಡುತ್ತೇನೆ, ನಾನೇ ಸ್ವಸ್ಥ ಮಾಡುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ. ನಾನು ಆಕಾಶಕ್ಕೆ ನನ್ನ ಕೈಯನ್ನು ಎತ್ತಿ--ನಾನು ನಿತ್ಯವಾಗಿ ಬದುಕುತ್ತೇನೆಂದು ಹೇಳುತ್ತೇನೆ. ನಾನು ಮಿಂಚುವ ಕತ್ತಿಯನ್ನು ಹದಮಾಡುವಾಗ, ನನ್ನ ಕೈ ನ್ಯಾಯವನ್ನು ಹಿಡುಕೊಳ್ಳುವಾಗ, ನನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ ನನ್ನನ್ನು ಹಗೆಮಾಡುವವರಿಗೆ ಮುಯ್ಯಿ ತೀರಿಸುವೆನು. ಸತ್ತವರ ಮತ್ತು ಸೆರೆಯವರ ರಕ್ತದಿಂದಲೂ ಆರಂಭದ ಶತ್ರುವಿನ ಪ್ರತೀಕಾರದಿಂದಲೂ ನನ್ನ ಬಾಣಗಳನ್ನು ರಕ್ತದಿಂದ ಅಮಲೇರುವಂತೆ ಮಾಡು ವೆನು. ನನ್ನ ಕತ್ತಿ ಮಾಂಸವನ್ನು ತಿನ್ನುವದು.
- Deuteronomy 28:59–61 ಧರ್ಮೋಪದೇಶಕಾಂಡ 28:59–61ಕರ್ತನು ನಿನ್ನ ಬಾಧೆಗಳನ್ನೂ ನಿನ್ನ ಸಂತತಿಯ ಬಾಧೆಗಳನ್ನೂ ಆಶ್ಚರ್ಯವಾಗ ಮಾಡುವನು; ಅವು ದೊಡ್ಡದಾದ ಮತ್ತು ಸ್ಥಿರವಾದ ಬಾಧೆಗಳೂ ಘೋರ ವಾದ ಮತ್ತು ಸ್ಥಿರವಾದ ರೋಗಗಳೂ ಆಗುವವು. ಇದಲ್ಲದೆ ನೀನು ಹೆದರಿಕೊಂಡ ಐಗುಪ್ತದ ರೋಗ ಗಳನ್ನೆಲ್ಲಾ ಆತನು ತಿರಿಗಿ ನಿನ್ನ ಮೇಲೆ ಬರಮಾಡು ವನು; ಅವು ನಿನ್ನನ್ನು ಅಂಟಿಕೊಳ್ಳುವವು. ನೀನು ಪೂರ್ಣವಾಗಿ ನಾಶವಾಗುವ ವರೆಗೆ ಈ ನ್ಯಾಯ ಪ್ರಮಾಣದ ಪುಸ್ತಕದಲ್ಲಿ ಬರೆಯದ ರೋಗಗಳನ್ನೂ ಬೇನೆಗಳನ್ನೂ ಕರ್ತನು ನಿನ್ನ ಮೇಲೆ ತರುವನು.
- Psalm 86:8 ಕೀರ್ತನೆಗಳು 86:8ಕರ್ತನೇ, ದೇವರುಗಳಲ್ಲಿ ನಿನ್ನ ಹಾಗೆ ಒಬ್ಬನೂ ಇಲ್ಲ; ನಿನ್ನ ಕೆಲಸಗಳ ಹಾಗೆ ಒಂದೂ ಇಲ್ಲ.
- Deuteronomy 28:15–17 ಧರ್ಮೋಪದೇಶಕಾಂಡ 28:15–17ಆದರೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಳ್ಳದೆ ಹೋದರೆ ಈ ಎಲ್ಲಾ ಶಾಪಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು. ಪಟ್ಟಣದಲ್ಲಿ ನಿನಗೆ ಶಾಪ; ಹೊಲದಲ್ಲಿ ನಿನಗೆ ಶಾಪ; ನಿನ್ನ ಪುಟ್ಟಿಗೂ ಕಣಜಕ್ಕೂ ಶಾಪ.
- Jeremiah 10:6 ಯೆರೆಮೀಯ 10:6ಓ ಕರ್ತನೇ, ನಿನ್ನ ಹಾಗೆ ಯಾರೂ ಇಲ್ಲ; ನೀನು ಮಹೋ ತ್ತಮನು, ನಿನ್ನ ಹೆಸರು ಪರಾಕ್ರಮದಲ್ಲಿ ದೊಡ್ಡದು.