Exodus · chapter 9 · verse 2
Exodus 9:2 in Kannada
ಅವರನ್ನು ಕಳುಹಿಸುವದಕ್ಕೆ ನಿರಾಕರಿಸಿ ಇನ್ನೂ ತಡೆದರೆ
Avarannu kaluhisuvadakke niraakarisi innoo tadedare
Exodus 9:2 in English
- King James Version (KJV)
- For if thou refuse to let [them] go, and wilt hold them still,
- World English Bible (WEB)
- For if you refuse to let them go, and hold them still,
- American Standard Version (ASV)
- For if thou refuse to let them go, and wilt hold them still,
- Bible in Basic English (BBE)
- For if you will not let them go, but still keep them in your power,
- Darby Translation (DBY)
- For if thou refuse to let them go, and shalt retain them still,
- Webster's Bible (WBS)
- For if thou shalt refuse to let [them] go, and wilt hold them still,
- Young's Literal Translation (YLT)
- for, if thou art refusing to send away, and art still keeping hold upon them,
Read in context
- 1ಕರ್ತನು ಮೋಶೆಗೆ--ಫರೋಹನ ಬಳಿಗೆ ಹೋಗಿ ಅವನಿಗೆ--ಇಬ್ರಿಯರ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನನ್ನು ಸೇವಿ ಸುವಂತೆ ನನ್ನ ಜನರನ್ನು ಕಳುಹಿಸು.
- 2ಅವರನ್ನು ಕಳುಹಿಸುವದಕ್ಕೆ ನಿರಾಕರಿಸಿ ಇನ್ನೂ ತಡೆದರೆ
- 3ಇಗೋ, ಕರ್ತನ ಕೈ ಹೊಲದಲ್ಲಿರುವ ನಿನ್ನ ಪಶುಗಳ ಮೇಲೆ ಇರುವದು. ಕುದುರೆ ಕತ್ತೆ ಒಂಟೆ ಎತ್ತು ಕುರಿ ಇವುಗಳ ಮೇಲೆ ಮಹಾ ಕಠಿಣವಾದ ರೋಗವು ಬರುವದು.
- 4ಇದಲ್ಲದೆ ಕರ್ತನು ಇಸ್ರಾಯೇಲ್ಯರ ಪಶುಗಳನ್ನು ವಿಂಗಡಿಸುವನು; ಇಸ್ರಾಯೇಲ್ ಮಕ್ಕಳಿಗಿರುವವು ಗಳಲ್ಲಿ ಒಂದೂ ಸಾಯುವದಿಲ್ಲ.
Cross references
- Exodus 8:2 ವಿಮೋಚನಕಾಂಡ 8:2ಕಳುಹಿಸುವದಕ್ಕೆ ನಿರಾಕರಿಸಿದರೆ ಇಗೋ, ನಾನು ನಿನ್ನ ಮೇರೆಗಳನ್ನೆಲ್ಲಾ ಕಪ್ಪೆಗಳಿಂದ ಹೊಡೆಯು ವೆನು.
- Leviticus 26:23–24 ಯಾಜಕಕಾಂಡ 26:23–24ನನ್ನಿಂದಾಗುವ ಇವುಗಳಿಂದ ನೀವು ಶಿಕ್ಷಿತರಾಗದೆ ನನಗೆ ವಿರೋಧವಾಗಿ ನಡೆದರೆ ನಾನು ಸಹ ನಿಮಗೆ ವಿರೋಧವಾಗಿ ನಡೆದು ಇನ್ನೂ ಹೆಚ್ಚಾಗಿ ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ನಿಮ್ಮನ್ನು ಶಿಕ್ಷಿಸುವೆನು.
- Leviticus 26:14–16 ಯಾಜಕಕಾಂಡ 26:14–16ನೀವು ನನ್ನ ಮಾತನ್ನು ಕೇಳದೆ ಈ ಎಲ್ಲಾ ಆಜ್ಞೆಗಳ ಪ್ರಕಾರ ನಡೆಯದೆ ಹೋದರೆ ನನ್ನ ನಿಯಮಗಳನ್ನು ನೀವು ಅಸಡ್ಡೆಮಾಡಿದರೆ ಇಲ್ಲವೆ ನನ್ನ ನಿರ್ಣಯಗಳಲ್ಲಿ ನಿಮ್ಮ ಪ್ರಾಣವು ಅಸಹ್ಯಪಟ್ಟರೆ ನೀವು ನನ್ನ ಒಡಂಬಡಿ ಕೆಯನ್ನು ವಿಾರಿ ನನ್ನ ಎಲ್ಲಾ ಆಜ್ಞೆಗಳ ಪ್ರಕಾರ ಮಾಡದೆ ಹೋದರೆ ನಾನು ಸಹ ಇದನ್ನು ನಿಮಗೆ ಮಾಡು ವೆನು; ನಿಮ್ಮ ಮೇಲೆ ಭೀತಿಯನ್ನೂ ಕಣ್ಣುಗಳನ್ನು ಕ್ಷೀಣಿಸು ವಂತೆಯೂ ಹೃದಯವು ಕುಗ್ಗಿ ದುಃಖಕ್ಕೊಳಗಾಗು ವಂತೆಯೂ ಮಾಡುವ ಕ್ಷಯರೋಗವನ್ನು ಚಳಿಜ್ವರ ವನ್ನೂ ಬರಮಾಡುವೆನು. ನೀವು ವ್ಯರ್ಥವಾಗಿ ನಿಮ್ಮ ಬೀಜವನ್ನು ಬಿತ್ತುವಿರಿ; ನಿಮ್ಮ ಶತ್ರುಗಳು ಅದನ್ನು ತಿಂದುಬಿಡುವರು.
- Psalm 68:21 ಕೀರ್ತನೆಗಳು 68:21ದೇವರು ತನ್ನ ಶತ್ರುಗಳ ತಲೆ ಯನ್ನೂ ತನ್ನ ಅಪರಾಧಗಳಲ್ಲಿ ಮುಂದುವರಿಯುವ ತುಂಬು ಗೂದಲಿನ ತಲೆಯನ್ನೂ ಗಾಯಪಡಿಸುತ್ತಾನೆ.
- Revelation 16:9 ಪ್ರಕಟನೆ 16:9ಮನುಷ್ಯರು ಬಲವಾದ ಕಾವಿನಿಂದ ಕಂದಿಹೋದರೂ ಅವರು ದೇವರನ್ನು ಘನಪಡಿಸುವ ಹಾಗೆ ಮಾನಸಾಂತರ ಮಾಡಿಕೊಳ್ಳದೆ ಈ ಉಪದ್ರವ ಗಳ ಮೇಲೆ ಅಧಿಕಾರವುಳ್ಳ ದೇವರ ನಾಮವನ್ನು ದೂಷಿಸಿದರು.
- Romans 2:8 ರೋಮಾಪುರದವರಿಗೆ 2:8ಕಲಹಪ್ರಿಯ ರಾಗಿದ್ದು ಸತ್ಯಕ್ಕೆ ವಿಧೇಯರಾಗದೆ ಅನೀತಿಗೆ ವಿಧೇಯ ರಾಗಿ
- Exodus 4:23 ವಿಮೋಚನಕಾಂಡ 4:23(ಫರೋಹನೇ) ನಾನು ನಿನಗೆ ಹೇಳುವದೇನಂದರೆ--ನನ್ನ ಸೇವೆಮಾಡು ವಂತೆ ನನ್ನ ಮಗನನ್ನು ಕಳುಹಿಸು. ನೀನು ಅವನನ್ನು ಕಳುಹಿಸುವದನ್ನು ನಿರಾಕರಿಸಿದರೆ ಇಗೋ, ನಾನು ನಿನ್ನ ಮಗನನ್ನು ಅಂದರೆ ನಿನ್ನ ಚೊಚ್ಚಲಮಗನನ್ನು ಕೊಲ್ಲುವೆನು ಅಂದನು.
- Psalm 7:11–12 ಕೀರ್ತನೆಗಳು 7:11–12ದೇವರು ನೀತಿವಂತರಿಗೆ ನ್ಯಾಯತೀರಿಸುತ್ತಾನೆ. ದೇವರು ಪ್ರತಿದಿನ ದುಷ್ಟರ ಮೇಲೆ ರೋಷವುಳ್ಳ ವನಾಗಿದ್ದಾನೆ. ಅವನು ತಿರಿಗಿಕೊಳ್ಳದಿದ್ದರೆ ಆತನು ತನ್ನ ಕತ್ತಿ ಮಸೆಯುವನು: ತನ್ನ ಬಿಲ್ಲು ಬಗ್ಗಿಸಿ ಅದನ್ನು ಸಿದ್ಧಮಾಡಿದ್ದಾನೆ.
- Revelation 2:21–22 ಪ್ರಕಟನೆ 2:21–22ಅವಳು ಮಾಡಿದ ಜಾರತ್ವಕ್ಕಾಗಿ ಮಾನ ಸಾಂತರಪಡುವದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು; ಆದರೆ ಅವಳು ಮಾನಸಾಂತರಪಡಲಿಲ್ಲ. ಇಗೋ, ನಾನು ಅವಳನ್ನು ಹಾಸಿಗೆಯಲ್ಲಿಯೂ ಅವಳೊಂದಿಗೆ ವ್ಯಭಿಚಾರ ಮಾಡಿದವರು ತಮ್ಮ ಕೃತ್ಯಗಳಿ ಗಾಗಿ ಮಾನಸಾಂತರಪಡದಿದ್ದರೆ ಅವರನ್ನು ಮಹಾಸಂಕ ಟದಲ್ಲಿಯೂ ಹಾಕುವೆನು.
- Exodus 10:4 ವಿಮೋಚನಕಾಂಡ 10:4ನೀನು ನನ್ನ ಜನರನ್ನು ಹೋಗಗೊಡಿಸದಿದ್ದರೆ ಇಗೋ, ನಾಳೆಯೇನಾನು ನಿನ್ನ ಮೇರೆಯಲ್ಲಿ ಮಿಡತೆಗಳನ್ನು ಬರಮಾಡು ವೆನು.
- Leviticus 26:27–28 ಯಾಜಕಕಾಂಡ 26:27–28ಇದೆಲ್ಲಾ ಆದಾಗ್ಯೂ ನೀವು ನನ್ನ ಮಾತನ್ನು ಕೇಳದೆ ನನಗೆ ವಿರೋಧವಾಗಿ ನಡೆದರೆ ನಾನು ಕೋಪದಿಂದ ನಿಮಗೆ ವಿರೋಧವಾಗಿ ನಡೆದು ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಶಿಕ್ಷಿಸುವೆನು.
- Isaiah 1:20 ಯೆಶಾಯ 1:20ನೀವು ತಿರಸ್ಕರಿಸಿ ತಿರುಗಿಬಿದ್ದರೆ ಕತ್ತಿಯ ಬಾಯಿಗೆ ತುತ್ತಾಗುವಿರಿ; ಕರ್ತನ ಬಾಯಿಯೇ ಇದನ್ನು ನುಡಿದಿದೆ.