Exodus · chapter 9 · verse 26
Exodus 9:26 in Kannada
ಇಸ್ರಾಯೇಲ್ ಮಕ್ಕಳು ಇದ್ದ ಗೋಷೆನ್ ಸೀಮೆಯಲ್ಲಿ ಆನೆಕಲ್ಲಿನ ಮಳೆಯು ಬೀಳಲಿಲ್ಲ.
Israayel makkalu idda goshen seemeyalli aanekallina maleyu beelalilla.
Exodus 9:26 in English
- King James Version (KJV)
- Only in the land of Goshen, where the children of Israel [were], was there no hail.
- World English Bible (WEB)
- Only in the land of Goshen, where the children of Israel were, there was no hail.
- American Standard Version (ASV)
- Only in the land of Goshen, where the children of Israel were, was there no hail.
- Bible in Basic English (BBE)
- Only in the land of Goshen, where the children of Israel were, there was no ice-storm.
- Darby Translation (DBY)
- Only in the land of Goshen, where the children of Israel were, was there no hail.
- Webster's Bible (WBS)
- Only in the land of Goshen, where the children of Israel [were], there was no hail.
- Young's Literal Translation (YLT)
- only in the land of Goshen, where the sons of Israel [are], there hath been no hail.
Read in context
- 24ಹೀಗೆ ಮಹಾ ಕಠಿಣವಾದ ಆನೆಕಲ್ಲಿನ ಮಳೆಯೂ ಅಗ್ನಿಯಿಂದೊಡ ಗೂಡಿದ ಆನೆಕಲ್ಲಿನ ಮಳೆಯೂ ಸುರಿಯಿತು. ಐಗುಪ್ತವು ಜನಾಂಗವಾದಂದಿನಿಂದ ಇಂಥದ್ದು ಆ ದೇಶದಲ್ಲಿ ಆಗಿರಲಿಲ್ಲ.
- 25ಆ ಆನೆಕಲ್ಲಿನ ಮಳೆಯು ಐಗುಪ್ತದೇಶದಲ್ಲೆಲ್ಲಾ ಮನುಷ್ಯರನ್ನೂ ಪಶುಗಳನ್ನೂ ಹೊಲದಲ್ಲಿದ್ದದ್ದನ್ನೆಲ್ಲಾ ಹಾಳುಮಾಡಿತು. ಹೊಲದ ಎಲ್ಲಾ ಸೊಪ್ಪನ್ನೂ ಹಾಳುಮಾಡಿ ಎಲ್ಲಾ ಮರಗಳನ್ನೂ ಮುರಿದು ಹಾಕಿತು.
- 26ಇಸ್ರಾಯೇಲ್ ಮಕ್ಕಳು ಇದ್ದ ಗೋಷೆನ್ ಸೀಮೆಯಲ್ಲಿ ಆನೆಕಲ್ಲಿನ ಮಳೆಯು ಬೀಳಲಿಲ್ಲ.
- 27ಆಗ ಫರೋಹನು ಮೋಶೆ ಆರೋನರನ್ನು ಕರೇ ಕಳುಹಿಸಿ ಅವರಿಗೆ--ಈ ಸಾರಿ ನಾನು ಪಾಪಮಾಡಿ ದ್ದೇನೆ. ಕರ್ತನು ನೀತಿವಂತನು, ನಾನೂ ನನ್ನ ಜನರೂ ದುಷ್ಟರಾಗಿದ್ದೇವೆ.
- 28ಆದದರಿಂದ (ಈಗ ಇದು ಸಾಕು.) ಇನ್ನು ಬಲವಾದ ಗುಡುಗುಗಳೂ ಆನೆಕಲ್ಲಿನ ಮಳೆಯೂ ನಿಂತುಹೋಗುವಂತೆ ಕರ್ತನನ್ನು ಬೇಡಿ ಕೊಳ್ಳಿರಿ, ನೀವು ಇಲ್ಲಿ ಇನ್ನು ಇರದಂತೆ ನಾನು ನಿಮ್ಮನ್ನು ಕಳುಹಿಸಿಬಿಡುವೆನು ಅಂದನು.
Cross references
- Exodus 11:7 ವಿಮೋಚನಕಾಂಡ 11:7ಆದರೆ ಕರ್ತನು ಐಗುಪ್ತ್ಯರಿಗೂ ಇಸ್ರಾಯೇಲ್ಯರಿಗೂ ಮಧ್ಯದಲ್ಲಿಟ್ಟಿರುವ ವ್ಯತ್ಯಾಸವನ್ನು ನೀವು ತಿಳಿದುಕೊಳ್ಳುವಂತೆ ಇಸ್ರಾಯೇಲ್ ಮಕ್ಕಳೆಲ್ಲರ ಮೇಲೆ ಮನುಷ್ಯರು ಮೊದಲುಗೊಂಡು ಪಶುಗಳ ವರೆಗೆ ಒಂದು ನಾಯಿಯಾದರೂ ತನ್ನ ನಾಲಿಗೆಯನ್ನು ಅಲ್ಲಾಡಿಸುವದಿಲ್ಲ.
- Exodus 9:4 ವಿಮೋಚನಕಾಂಡ 9:4ಇದಲ್ಲದೆ ಕರ್ತನು ಇಸ್ರಾಯೇಲ್ಯರ ಪಶುಗಳನ್ನು ವಿಂಗಡಿಸುವನು; ಇಸ್ರಾಯೇಲ್ ಮಕ್ಕಳಿಗಿರುವವು ಗಳಲ್ಲಿ ಒಂದೂ ಸಾಯುವದಿಲ್ಲ.
- Exodus 10:23 ವಿಮೋಚನಕಾಂಡ 10:23ಮೂರು ದಿನಗಳ ವರೆಗೆ ಅವರು ಒಬ್ಬರನ್ನೊಬ್ಬರು ನೋಡಲಿಲ್ಲ, ಯಾರೂ ತಮ್ಮ ಸ್ಥಳ ವನ್ನು ಬಿಟ್ಟು ಏಳಲೂ ಇಲ್ಲ. ಆದರೆ ಇಸ್ರಾಯೇಲ್ ಮಕ್ಕಳಿಗೆಲ್ಲಾ ಅವರು ವಾಸಿಸುವ ಸ್ಥಳದಲ್ಲಿ ಅವರಿಗೆ ಬೆಳಕಿತ್ತು.
- Exodus 9:6 ವಿಮೋಚನಕಾಂಡ 9:6ಮರುದಿನ ಕರ್ತನು ಆ ಕಾರ್ಯವನ್ನು ಮಾಡಿ ದನು; ಐಗುಪ್ತ್ಯರ ಪಶುಗಳೆಲ್ಲಾ ಸತ್ತುಹೋದವು. ಇಸ್ರಾಯೇಲ್ ಮಕ್ಕಳ ಪಶುಗಳಲ್ಲಿ ಒಂದೂ ಸಾಯ ಲಿಲ್ಲ.
- Exodus 12:13 ವಿಮೋಚನಕಾಂಡ 12:13ಆದರೆ ನೀವು ಇರುವ ಎಲ್ಲಾ ಮನೆಗಳ ಮೇಲೆ ರಕ್ತವು ನಿಮಗೆ ಗುರುತಾಗಿರುವದು. ಆ ರಕ್ತವನ್ನು ನಾನು ನೋಡುವಾಗ ನಿಮ್ಮನ್ನು ದಾಟಿಹೋಗುವೆನು. ಐಗುಪ್ತದೇಶವನ್ನು ನಾನು ಹೊಡೆಯುವ ಸಮಯದಲ್ಲಿ ನಿಮ್ಮನ್ನು ನಾಶಮಾಡುವ ಯಾವ ಬಾಧೆಯೂ ನಿಮ್ಮ ಮೇಲೆ ಬರುವದಿಲ್ಲ.
- Exodus 8:22–32 ವಿಮೋಚನಕಾಂಡ 8:22–32ಆದರೆ ಆ ದಿವಸದಲ್ಲಿ ನಾನೇ ಭೂಲೋಕದಲ್ಲಿ ಕರ್ತನೆಂದು ನೀನು ತಿಳಿದುಕೊಳ್ಳುವಂತೆ ನನ್ನ ಜನರು ವಾಸಿಸುವ ಗೋಷೆನ್ ಸೀಮೆಯಲ್ಲಿ ನೊಣಗಳು ಇರದ ಹಾಗೆ ಅದನ್ನು ನಾನು ಪ್ರತ್ಯೇಕಿಸುವೆನು. ನನ್ನ ಜನರನ್ನೂ ನಿನ್ನ ಜನರನ್ನೂ ವಿಂಗಡಿಸುವೆನು. ನಾಳೆ ಈ ಗುರುತು ಇರುವದು ಎಂದು ಹೇಳು ಅಂದನು. ಕರ್ತನು ಹಾಗೆಯೇ ಮಾಡಿದನು; ಬಾಧಿಸುವ ನೊಣಗಳು ಫರೋಹನ ಮನೆಯಲ್ಲಿಯೂ ಅವನ ಸೇವಕರ ಮನೆಗಳಲ್ಲಿಯೂ ಸಮಸ್ತ ಐಗುಪ್ತದೇಶ ದಲ್ಲಿಯೂ ತುಂಬಿಕೊಂಡವು; ಅವುಗಳಿಂದ ದೇಶವು ಕೆಟ್ಟುಹೋಯಿತು. ಆಗ ಫರೋಹನು ಮೋಶೆ ಆರೋನರನ್ನು ಕರೆ ಯಿಸಿ ಅವರಿಗೆ--ನೀವು ಹೋಗಿ ದೇಶದಲ್ಲಿಯೇ ನಿಮ್ಮ ದೇವರಿಗೆ ಯಜ್ಞವನ್ನರ್ಪಿಸಿರಿ ಅಂದನು. ಆದರೆ ಮೋಶೆಯು ಫರೋಹನಿಗೆ--ಹಾಗೆ ಮಾಡುವದು ಯುಕ್ತವಲ್ಲ, ನಮ್ಮ ಕರ್ತನಾದ ದೇವರಿಗೆ ಯಜ್ಞವನ್ನ ರ್ಪಿಸುವದು ಐಗುಪ್ತ್ಯರಿಗೆ ಅಸಹ್ಯವಾಗಿದೆ; ಇಗೋ, ಐಗುಪ್ತ್ಯರಿಗೆ ಅಸಹ್ಯವಾಗಿರುವದನ್ನು ಅವರ ಕಣ್ಣೆ ದುರಿಗೆ ಅರ್ಪಿಸಿದರೆ ಅವರು ನಮಗೆ ಕಲ್ಲೆಸೆದಾರು. ಅರಣ್ಯದಲ್ಲಿ ಮೂರು ದಿನಗಳು ಪ್ರಯಾಣಮಾಡಿ ನಮ್ಮ ದೇವರಾದ ಕರ್ತನಿಗೆ ಆತನ ಅಪ್ಪಣೆಯಂತೆ ಯಜ್ಞಮಾಡುವೆವು ಎಂದು ಹೇಳಿದನು. ಅದಕ್ಕೆ ಫರೋಹನು ಅವರಿಗೆ--ನಿಮ್ಮ ದೇವರಾದ ಕರ್ತನಿಗೆ ಅರಣ್ಯದಲ್ಲಿ ಯಜ್ಞವನ್ನರ್ಪಿಸುವಂತೆ ನಿಮ್ಮನ್ನು ಕಳುಹಿ ಸುತ್ತೇನೆ; ಆದರೆ ದೂರ ಹೋಗಬೇಡಿರಿ; ನನಗೋಸ್ಕರ ಪ್ರಾರ್ಥನೆ ಮಾಡಿರಿ ಅಂದನು. ಆಗ ಮೋಶೆಯು ಅವನಿಗೆ--ಇಗೋ, ನಾನು ನಿನ್ನನ್ನು ಬಿಟ್ಟುಹೋಗಿ ಕರ್ತನಿಗೆ ಪ್ರಾರ್ಥನೆ ಮಾಡುವೆನು. ನೊಣಗಳು ನಾಳೆ ಫರೋಹನನ್ನೂ ಅವನ ಸೇವಕರನ್ನೂ ಅವನ ಜನರನ್ನೂ ಬಿಟ್ಟುಹೋಗುವವು. ಆದರೆ ಕರ್ತನಿಗೆ ಯಜ್ಞವನ್ನರ್ಪಿಸುವದಕ್ಕೆ ಫರೋಹನು ಜನರನ್ನು ಕಳು ಹಿಸದೆ ಇನ್ನು ಮೇಲೆ ವಂಚಿಸಬಾರದು ಅಂದನು. ತರುವಾಯ ಮೋಶೆಯು ಫರೋಹನನ್ನು ಬಿಟ್ಟು ಹೋಗಿ ಕರ್ತನನ್ನು ಬೇಡಿಕೊಂಡನು. ಮೋಶೆಯು ಹೇಳಿದಂತೆಯೇ ಕರ್ತನು ಮಾಡಿದನು. ಹೇಗಂದರೆ, ಆತನು ಫರೋಹನಿಂದಲೂ ಅವನ ಸೇವಕರಿಂದಲೂ ಅವನ ಜನರಿಂದಲೂ ನೊಣಗಳನ್ನು ತೆಗೆದುಹಾಕಿ ದನು. ಅಲ್ಲಿ ಒಂದಾದರೂ ಉಳಿಯಲಿಲ್ಲ.ಆದರೆ ಫರೋಹನು ಆ ಸಮಯದಲ್ಲಿಯೂ ತನ್ನ ಹೃದಯವನ್ನು ಕಠಿಣಮಾಡಿಕೊಂಡದ್ದಲ್ಲದೆ ಜನರನ್ನು ಹೋಗ ಗೊಡಿಸಲಿಲ್ಲ. ಆದರೆ ಫರೋಹನು ಆ ಸಮಯದಲ್ಲಿಯೂ ತನ್ನ ಹೃದಯವನ್ನು ಕಠಿಣಮಾಡಿಕೊಂಡದ್ದಲ್ಲದೆ ಜನರನ್ನು ಹೋಗ ಗೊಡಿಸಲಿಲ್ಲ.
- Isaiah 32:18–19 ಯೆಶಾಯ 32:18–19ಆಗ ನನ್ನ ಜನರು ಸಮಾಧಾನದ ನಿವಾಸಗಳಲ್ಲಿಯೂ ಭದ್ರವಾದ ಸ್ಥಾನಗಳಲ್ಲಿಯೂ ನೆಮ್ಮದಿಯ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು. ಆದರೆ ಕಲ್ಮಳೆ ಸುರಿಯುವಾಗ ವನವು ಹಾಳಾಗು ವದು; ಪಟ್ಟಣವು ತಗ್ಗಾದ ಸ್ಥಳಕ್ಕೆ ತಗ್ಗಿಸಲ್ಪಡುವದು.ಎಲ್ಲಾ ನೀರುಗಳ ಬಳಿಯಲ್ಲಿ ಬಿತ್ತುತ್ತಲೂ ಎತ್ತು ಕತ್ತೆಗಳನ್ನು (ಕಾವಲಿಗೆ) ಮೇಯ ಬಿಡುತ್ತಲೂ ಇರುವ ನೀವು ಧನ್ಯರೇ ಸರಿ.