Ezekiel · chapter 10 · verse 1
Ezekiel 10:1 in Kannada
ಆಗ ನಾನು ನೋಡಲಾಗಿ ಇಗೋ,ಕೆರೂಬಿಯರ ತಲೆಯ ಮೇಲಿದ್ದ ವಿಶಾಲ ವಾದ ಆಕಾಶದಲ್ಲಿ ಅವರ ಮೇಲೆ ನೀಲಮಣಿಯಂತೆ ಸಿಂಹಾಸನಾಕಾರದಂತಿರುವ ರೂಪವು ತೋರಿತು.
Aaga naanu nodalaagi igo,keroobiyara taleya melidda vishaala vaada aakaashadalli avara mele neelamaniyante sinhaasanaakaaradantiruva roopavu toritu.
Ezekiel 10:1 in English
- King James Version (KJV)
- Then I looked, and, behold, in the firmament that was above the head of the cherubims there appeared over them as it were a sapphire stone, as the appearance of the likeness of a throne.
- World English Bible (WEB)
- Then I looked, and see, in the expanse that was over the head of the cherubim there appeared above them as it were a sapphire stone, as the appearance of the likeness of a throne.
- American Standard Version (ASV)
- Then I looked, and, behold, in the firmament that was over the head of the cherubim there appeared above them as it were a sapphire stone, as the appearance of the likeness of a throne.
- Bible in Basic English (BBE)
- Then looking, I saw that on the arch which was over the head of the winged ones there was seen over them what seemed like a sapphire stone, having the form of a king's seat.
- Darby Translation (DBY)
- And I looked, and behold, in the expanse that was over the head of the cherubim there appeared above them as it were a sapphire stone, as the appearance of the likeness of a throne.
- Webster's Bible (WBS)
- Then I looked, and behold, in the firmament that was above the head of the cherubim there appeared over them as it were a sapphire stone, as the appearance of the likeness of a throne.
- Young's Literal Translation (YLT)
- And I look, and lo, on the expanse that [is] above the head of the cherubs, as a sapphire stone, as the appearance of the likeness of a throne, He hath been seen over them.
Read in context
- 1ಆಗ ನಾನು ನೋಡಲಾಗಿ ಇಗೋ,ಕೆರೂಬಿಯರ ತಲೆಯ ಮೇಲಿದ್ದ ವಿಶಾಲ ವಾದ ಆಕಾಶದಲ್ಲಿ ಅವರ ಮೇಲೆ ನೀಲಮಣಿಯಂತೆ ಸಿಂಹಾಸನಾಕಾರದಂತಿರುವ ರೂಪವು ತೋರಿತು.
- 2ಆತನು ನಾರುಮಡಿಯನ್ನು ಧರಿಸಿ ಕೊಂಡಿದ್ದ ಮನುಷ್ಯನಿಗೆ ಹೇಳಿದ್ದೇನಂದರೆ--ನೀನು ಕೆರೂಬಿಗಳ ಕೆಳಗೆ ಇರುವ ಚಕ್ರಗಳ ನಡುವೆ ಪ್ರವೇಶಿಸಿ, ಕೆರೂಬಿಗಳ ನಡುವೆ ಇರುವ ಉರಿಕೆಂಡಗಳ ತಳದಲಿ ನಿನ್ನ ಕೈತುಂಬ ಎತ್ತಿ ಅದನ್ನು ಪಟ್ಟಣದ ಮೇಲೆ ಚೆಲ್ಲು ಅಂದನು. ಹಾಗೆಯೇ ನಾನು ಕಂಡಂತೆ ಒಳಗೆ ಪ್ರವೇಶಿಸಿದನು.
- 3ಆ ಮನುಷ್ಯನು ಒಳಗೆ ಹೋಗು ವಾಗ ಕೆರೂಬಿಯರು ಆಲಯದ ಬಳಿಯಲ್ಲಿ ನಿಂತಿ ದ್ದರು. ಮೇಘವು ಒಳಗಿನ ಅಂಗಳವನ್ನು ತುಂಬಿಸಿ ಕೊಂಡಿತ್ತು.
Cross references
- Exodus 24:10 ವಿಮೋಚನಕಾಂಡ 24:10ಅವರು ಇಸ್ರಾಯೇಲಿನ ದೇವರನ್ನು ನೋಡಿದರು. ಆತನ ಪಾದಗಳ ಕೆಳಗೆ ನೀಲವರ್ಣದ ಕಲ್ಲಿನ ಕೆಲಸಕ್ಕೆ ಸಮಾನವಾದದ್ದೂ ಆಕಾಶದ ಹಾಗೆ ನಿರ್ಮಲವಾದದ್ದೂ ಇತ್ತು.
- Ezekiel 1:22–26 ಯೆಹೆಜ್ಕೇಲನು 1:22–26ಜೀವಿಯ ತಲೆಗಳ ಮೇಲೆ ಗಗನಮಂಡಲ ವಿಶಾಲ ರೂಪವು ಭೀಕರ ವಜ್ರದ ಬಣ್ಣದ್ದಾಗಿತ್ತು; ಅದು ಅವುಗಳ ತಲೆಗಳ ಮೇಲೆ ಹರ ಡಿತ್ತು (ಹಾಸಲ್ಪಟ್ಟಿತ್ತು). ಆ ಗಗನಮಂಡಲದ (ರೂಪದ) ಕೆಳಗೆ ಅವುಗಳ ರೆಕ್ಕೆಗಳು ನೆಟ್ಟಗೆ (ನೇರ ವಾಗಿ) ಒಂದಕ್ಕೊಂದು ಸರಿಯಾಗಿದ್ದವು; ಅವುಗಳ ಶರೀರಗಳನ್ನು ಮುಚ್ಚಿಕೊಳ್ಳುವ ಎರಡೆರೆಡು ರೆಕ್ಕೆಗಳು ಎರಡು ಕಡೆಗಳಲ್ಲೂ ಇರುವ ಪ್ರತಿಯೊಂದನ್ನು ಮುಚ್ಚಿ ಕೊಂಡಿದ್ದವು. ಅವು ಹೋದಾಗ ನಾನು ಅವುಗಳ ರೆಕ್ಕೆಗಳ ಶಬ್ದವನ್ನು ಕೇಳಿದೆನು; ಅದು ಜಲಪ್ರವಾಹದ ಶಬ್ದದಂತೆಯೂ ಸರ್ವಶಕ್ತನ ಶಬ್ದದ ಹಾಗೆಯೂ ಸಂದಣಿಯ ಶಬ್ದದಂತೆಯೂ ಸೈನ್ಯದ ಶಬ್ದದ ಹಾಗೆಯೂ ಇತ್ತು; ಅವು ನಿಲ್ಲುವಾಗ ತಮ್ಮ ರೆಕ್ಕೆಗಳನ್ನು ಕೆಳಗೆ ಇಳಿಸುತ್ತಿದ್ದವು. ಅವುಗಳು ನಿಂತು ತಮ್ಮ ರೆಕ್ಕೆಗಳನ್ನು ಕೆಳಗೆ ಇಳಿಸಿದಾಗ ಅವುಗಳ ತಲೆಗಳ ಮೇಲಿರುವ ಗಗನಮಂಡಲದೊಳಗಿಂದ ಒಂದು ಶಬ್ದವಾಯಿತು. ಅವುಗಳ ತಲೆಗಳ ಮೇಲಿರುವ ಗಗನಮಂಡಲದ ಮೇಲ್ಭಾಗದಲ್ಲಿ ಇಂದ್ರನೀಲಮಣಿಯ ಹಾಗೆ ಇರುವ ಒಂದು ಸಿಂಹಾಸನದ ರೂಪವಿತ್ತು. ಅದರ ಮೇಲೆ ಮನುಷ್ಯನ ಹಾಗೆ ಕಾಣಿಸುವ ಒಂದು ರೂಪವೂ ಇತ್ತು.
- Revelation 1:13 ಪ್ರಕಟನೆ 1:13ಆ ಏಳು ದೀಪಸ್ತಂಭಗಳ ಮಧ್ಯದಲ್ಲಿ ಮನುಷ್ಯಕುಮಾರನಂತಿದ್ದಾತನನ್ನು ಕಂಡೆನು. ಆತನು ಪಾದದವರೆಗೆ ಇರುವ ನಿಲುವಂಗಿಯನ್ನು ತೊಟ್ಟು ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದನು.
- Revelation 4:2–3 ಪ್ರಕಟನೆ 4:2–3ಕೂಡಲೆ ನಾನು ಆತ್ಮವಶ ನಾದೆನು; ಆಗ ಇಗೋ, ಪರಲೋಕದಲ್ಲಿ ಒಂದು ಸಿಂಹಾಸನವಿತ್ತು; ಸಿಂಹಾಸನದ ಮೇಲೆ ಒಬ್ಬಾತನು ಕೂತಿದ್ದನು. ಕೂತಿದ್ದಾತನು ಸೂರ್ಯಕಾಂತ ಪದ್ಮರಾಗ ಕಲ್ಲುಗಳಂತೆ ಕಾಣುತ್ತಿದ್ದನು; ಸಿಂಹಾಸನದ ಸುತ್ತಲೂ ಪಚ್ಚೆಯಂತೆ ತೋರುತ್ತಿದ್ದ ಮಳೆ ಬಿಲ್ಲು ಇತ್ತು.
- Genesis 18:31 ಆದಿಕಾಂಡ 18:31ಅವನು--ಇಗೋ, ಕರ್ತನ ಸಂಗಡ ಮಾತನಾಡು ವದಕ್ಕೆ ಮುಂಗೊಂಡಿದ್ದೇನೆ; ಒಂದು ವೇಳೆ ಇಪ್ಪತ್ತು ಮಂದಿ ಅಲ್ಲಿ ಸಿಕ್ಕಾರು ಅಂದಾಗ ಆತನು-- ಆ ಇಪ್ಪತ್ತು ಮಂದಿಗೋಸ್ಕರ ನಾನು ಅದನ್ನು ನಾಶಮಾಡುವದಿಲ್ಲ ಅಂದನು.
- Ephesians 1:20 ಎಫೆಸದವರಿಗೆ 1:20ಬಲಾತಿಶಯವು ಕ್ರಿಸ್ತನಲ್ಲಿ ತೋರಿಬಂದಿದೆ; ಹೇಗಂ ದರೆ ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿ
- Joshua 5:13–15 ಯೆಹೋಶುವ 5:13–15ಇದಾದ ಮೇಲೆ ಯೆಹೋಶುವನು ಯೆರಿ ಕೋವಿನ ಬಳಿಯಲ್ಲಿ ಇದ್ದಾಗ ಆದದ್ದೇನಂದರೆ, ತನ್ನ ಕಣ್ಣುಗಳನ್ನೆತ್ತಿ ನೋಡಿದಾಗ ಇಗೋ, ಒಬ್ಬ ಮನು ಷ್ಯನು ಅವನಿಗೆದುರಾಗಿ ನಿಂತಿದ್ದನು; ಆತನ ಕೈಯಲ್ಲಿ ಬಿಚ್ಚುಕತ್ತಿ ಇತ್ತು. ಯೆಹೋಶುವನು ಆತನ ಬಳಿಗೆ ಹೋಗಿ ಆತನಿಗೆ--ನೀನು ನಮಗೋಸ್ಕರವೋ? ನಮ್ಮ ವೈರಿಗಳಿಗೋಸ್ಕರವೋ? ಅಂದನು. ಅದಕ್ಕೆ ಅವನು--ಅಲ್ಲ; ನಾನು ಈಗ ಕರ್ತನ ಸೈನ್ಯದ ಅಧಿಪತಿ ಯಾಗಿ ಬಂದಿದ್ದೇನೆ ಅಂದನು; ಆಗ ಯೆಹೋಶುವನು ಬೋರಲು ಬಿದ್ದು ಆತನನ್ನು ಆರಾಧಿಸಿ ಆತನಿಗೆನನ್ನ ಒಡೆಯನು ತನ್ನ ಸೇವಕನಿಗೆ ಏನು ಹೇಳುತ್ತಾನೆ ಅಂದನು.ಅದಕ್ಕೆ ಕರ್ತನ ಸೈನ್ಯದ ಅಧಿಪತಿಯು ಯೆಹೋಶುವನಿಗೆ--ನಿನ್ನ ಕಾಲಿನಿಂದ ಕೆರಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ವಾದದ್ದು ಅಂದನು. ಹಾಗೆಯೇ ಯೆಹೋಶುವನು ಮಾಡಿದನು. ಅದಕ್ಕೆ ಕರ್ತನ ಸೈನ್ಯದ ಅಧಿಪತಿಯು ಯೆಹೋಶುವನಿಗೆ--ನಿನ್ನ ಕಾಲಿನಿಂದ ಕೆರಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ವಾದದ್ದು ಅಂದನು. ಹಾಗೆಯೇ ಯೆಹೋಶುವನು ಮಾಡಿದನು.
- Habakkuk 2:1 ಹಬಕ್ಕೂಕ 2:1ನನ್ನ ಕಾವಲಲ್ಲಿ ನಿಂತು ಗೋಪುರದ ಮೇಲೆ ನೆಲೆಯಾಗಿದ್ದು ಆತನು ನನಗೆ ಏನು ಹೇಳುವನೋ, ನನ್ನ ತರ್ಕದ ವಿಷಯ ಏನು ಉತ್ತರ ಕೊಡಬೇಕೋ ನೋಡುವದಕ್ಕೆ ಕಾದುಕೊಂಡಿರುವೆನು.
- Ezekiel 10:20 ಯೆಹೆಜ್ಕೇಲನು 10:20ಕೆಬಾರ್ ನದಿಯ ಬಳಿಯಲ್ಲಿ ನಾನು ನೋಡಿದ ಜೀವಿಯು ಇದೇ. ಅವು ಕೆರೂಬಿಯರೆಂದು ತಿಳಿದುಕೊಂಡೆನು.
- Ezekiel 11:22 ಯೆಹೆಜ್ಕೇಲನು 11:22ಆಮೇಲೆ ಕೆರೂಬಿಯರು ತಮ್ಮ ರೆಕ್ಕೆಗಳನ್ನು ಎತ್ತಿದರು, ಅವರ ಪಕ್ಕದಲ್ಲಿ ಚಕ್ರಗಳಿದ್ದವು; ಇಸ್ರಾ ಯೇಲಿನ ದೇವರ ಮಹಿಮೆ ಅವರ ಮೇಲೆ ಇತ್ತು.
- Jeremiah 13:18–22 ಯೆರೆಮೀಯ 13:18–22ಅರಸನಿಗೂ ರಾಣಿಗೂ ನೀನು ಹೇಳತಕ್ಕದ್ದೇ ನಂದರೆ--ನೀವು ತಗ್ಗಿಸಿಕೊಂಡು ಕೂತುಕೊಳ್ಳಿರಿ; ನಿಮ್ಮ ದೊರೆತನಗಳು ಅಂದರೆ ನಿಮ್ಮ ಗೌರವದ ಕಿರೀಟವು ಕೆಳಗೆ ಬರುವದು. ದಕ್ಷಿಣದ ಪಟ್ಟಣಗಳು ತೆರೆಯುವ ವನಿಲ್ಲದೆ ಮುಚ್ಚಲ್ಪಡುವವು, ಯೆಹೂದವೆಲ್ಲವೂ ಸಂಪೂರ್ಣವಾಗಿ ಸೆರೆಯಾಗಿ ಒಯ್ಯಲ್ಪಡುವದು. ನಿಮ್ಮ ಕಣ್ಣುಗಳನ್ನು ಎತ್ತಿ ಉತ್ತರದಿಂದ ಬರುವವ ರನ್ನು ನೋಡಿರಿ; ನಿನಗೆ ಕೊಡಲ್ಪಟ್ಟ ಹಿಂಡೂ ನನ್ನ ಶೃಂಗಾರದ ಮಂದೆಯೂ ಎಲ್ಲಿ? ಆತನು ನಿನ್ನನ್ನು ಶಿಕ್ಷಿಸುವಾಗ ಏನು ಹೇಳುವಿ? ನಿನ್ನ ಮೇಲೆ ಅವರು ಮುಖ್ಯ ಪ್ರಭುಗಳೂ ಮುಖ್ಯಸ್ಥರೂ ಆಗಿರುವದಕ್ಕೆ ನೀನೇ ಅವರಿಗೆ ಕಲಿಸಿದಿಯಲ್ಲಾ? ಹೆರುವ ಸ್ತ್ರೀಯ ಪ್ರಕಾರ ನಿನ್ನನ್ನು ದುಃಖಗಳು ಹಿಡಿಯುವವಲ್ಲವೋ? ಇವು ನನಗೆ ಯಾಕೆ ಸಂಭವಿಸಿದವೆಂದು ನೀನು ನಿನ್ನ ಹೃದಯದಲ್ಲಿ ಅಂದುಕೊಂಡರೆ, ಬಹಳವಾದ ನಿನ್ನ ಅಕ್ರಮದ ನಿಮಿತ್ತ ನಿನ್ನ ಬಟ್ಟೆಗಳು ತೆಗೆಯಲ್ಪಟ್ಟು ನಿನ್ನ ಹಿಮ್ಮಡಿಗಳು ಬೆತ್ತಲೆಯಾದವು.
- Psalm 68:17–18 ಕೀರ್ತನೆಗಳು 68:17–18ದೇವರ ರಥಗಳು ಇಪ್ಪತ್ತು ಸಾವಿರವು, ಸಾವಿರಾರು ದೂತರು ಗಳು; ಕರ್ತನು ಸೀನಾಯಿಯಲ್ಲಿ ಇದ್ದ ಹಾಗೆ ಅವರೊಳಗೆ ಪರಿಶುದ್ಧ ಸ್ಥಳದಲ್ಲಿ ಇದ್ದಾನೆ. ನೀನು ಉನ್ನತಕ್ಕೆ ಏರಿಹೋಗಿ ಸೆರೆಯವರನ್ನು ಸೆರೆಯಾಗಿ ನಡೆಸಿದಿ, ಕರ್ತನಾದ ದೇವರು ಅವರ ಮಧ್ಯದಲ್ಲಿ ವಾಸಿಸುವ ಹಾಗೆ ಮನುಷ್ಯರಿಗಾಗಿಯೂ ಹೌದು, ತಿರುಗಿ ಬಿದ್ದವರಿಗಾಗಿಯೂ ಸ್ವೀಕರಿಸಿದಿ.