Ezekiel · chapter 10 · verse 18
Ezekiel 10:18 in Kannada
ಆಗ ಕರ್ತನ ಮಹಿಮೆಯು ಆಲಯದ ಹೊಸ್ತಿಲನ್ನು ಬಿಟ್ಟು ಕೆರೂಬಿಯರ ಮೇಲೆ ನಿಂತಿತು.
Aaga kartana mahimeyu aalayada hostilannu bittu keroobiyara mele nintitu.
Ezekiel 10:18 in English
- King James Version (KJV)
- Then the glory of the LORD departed from off the threshold of the house, and stood over the cherubims.
- World English Bible (WEB)
- The LORD’s glory went out from over the threshold of the house and stood over the cherubim.
- American Standard Version (ASV)
- And the glory of Jehovah went forth from over the threshold of the house, and stood over the cherubim.
- Bible in Basic English (BBE)
- Then the glory of the Lord went out from the doorstep of the house, and came to rest over the winged ones.
- Darby Translation (DBY)
- And the glory of Jehovah departed from over the threshold of the house, and stood over the cherubim.
- Webster's Bible (WBS)
- Then the glory of the LORD departed from off the threshhold of the house, and stood over the cherubim.
- Young's Literal Translation (YLT)
- And go forth doth the honour of Jehovah from off the threshold of the house, and standeth over the cherubs,
Read in context
- 16ಕೆರೂಬಿಯರು ಹೋದಾಗ, ಚಕ್ರಗಳು ಅವರ ಸಂಗಡ ಹೋದವು. ಕೆರೂಬಿಯರು ಭೂಮಿಯನ್ನು ಬಿಟ್ಟು ಮೇಲೇರುವಾಗ ತಮ್ಮ ರೆಕ್ಕೆಗಳನ್ನು ಚಾಚಿದಾಗ, ಅವರ ಚಕ್ರಗಳು ಪಕ್ಕಕ್ಕೆ ತಿರುಗಲಿಲ್ಲ.
- 17ಅವು ನಿಂತಾಗ ಇವೂ ನಿಂತವು. ಅವು ಎತ್ತಲ್ಪಟ್ಟಾಗ ಇವೂ ಅವುಗಳ ಸಂಗಡ ಎತ್ತಲ್ಪಟ್ಟವು; ಯಾಕಂದರೆ ಇವುಗಳಲ್ಲಿ ಆ ಜೀವಿಗಳ ಆತ್ಮವು ಇತ್ತು.
- 18ಆಗ ಕರ್ತನ ಮಹಿಮೆಯು ಆಲಯದ ಹೊಸ್ತಿಲನ್ನು ಬಿಟ್ಟು ಕೆರೂಬಿಯರ ಮೇಲೆ ನಿಂತಿತು.
- 19ಕೆರೂಬಿಯರು ತಮ್ಮ ರೆಕ್ಕೆಗಳನ್ನು ಎತ್ತಿ ಕೊಂಡು ನಾನು ನೋಡುವಾಗಲೇ ಭೂಮಿಯನ್ನು ಬಿಟ್ಟು ಮೇಲೆಕ್ಕೇರಿ ಹೋದರು. ಅವು ಹೊರಟಾಗ ಚಕ್ರಗಳೂ ಅವರ ಸಂಗಡ ಇದ್ದವು, ಅವರು ಕರ್ತನ ಆಲಯದ ಮೂಡಣ ಬಾಗಲಿನ ದ್ವಾರದ ಬಳಿಯಲ್ಲಿ ನಿಂತಿದ್ದರು. ಮತ್ತು ಇಸ್ರಾಯೇಲಿನ ದೇವರ ಮಹಿ ಮೆಯು ಅವರ ಮೇಲೆ ಇತ್ತು.
- 20ಕೆಬಾರ್ ನದಿಯ ಬಳಿಯಲ್ಲಿ ನಾನು ನೋಡಿದ ಜೀವಿಯು ಇದೇ. ಅವು ಕೆರೂಬಿಯರೆಂದು ತಿಳಿದುಕೊಂಡೆನು.
Cross references
- Psalm 18:10 ಕೀರ್ತನೆಗಳು 18:10ಆತನು ಕೆರೂಬಿನ ಮೇಲೆ ಕೂತು ಹಾರಿದನು; ಹೌದು, ಗಾಳಿಯ ರೆಕ್ಕೆಗಳ ಮೇಲೆ ಹಾರಿದನು.
- Psalm 78:60–61 ಕೀರ್ತನೆಗಳು 78:60–61ಸಿಲೋವಿನ ಗುಡಾರವನ್ನೂ ಮನುಷ್ಯರೊಳಗೆ ಆತನು ಹಾಕಿದ ಗುಡಾರವನ್ನೂ ಬಿಟ್ಟು, ತನ್ನ ಬಲ ವನ್ನು ಸೆರೆಗೂ ಮಹಿಮೆಯನ್ನು ವೈರಿಯ ಕೈಗೂ ಕೊಟ್ಟುಬಿಟ್ಟನು.
- Matthew 23:37–39 ಮತ್ತಾಯನು 23:37–39ಓ ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸ ಲ್ಪಟ್ಟವರನ್ನು ಕಲ್ಲೆಸೆಯುವವಳೇ, ಕೋಳಿಯು ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಿನ್ನ ಮಕ್ಕಳನ್ನು ಕೂಡಿಸುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನ ಇಗೋ, ನಿಮ್ಮ ಮನೆಯು ನಿಮಗೆ ಹಾಳಾದದ್ದಾಗಿ ಬಿಡಲ್ಪಡುವದು.ಇಂದಿನಿಂದ ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ವರೆಗೆ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು. ಇಂದಿನಿಂದ ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ವರೆಗೆ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- Genesis 3:24 ಆದಿಕಾಂಡ 3:24ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವದಕ್ಕೆ ಏದೆನ್ ತೋಟದ ಪೂರ್ವದಿಕ್ಕಿನಲ್ಲಿ ಕೆರೂಬಿಯರನ್ನೂ ಎಲ್ಲಾ ಕಡೆಯಲ್ಲಿ ಸುತ್ತುವ ಜ್ವಾಲೆಯ ಕತ್ತಿಯನ್ನೂ ಇರಿಸಿದನು.
- Jeremiah 7:12–14 ಯೆರೆಮೀಯ 7:12–14ಆದರೆ ಈಗ ಶಿಲೋವಿನಲ್ಲಿದ್ದ ನನ್ನ ಸ್ಥಳಕ್ಕೆ ಅಂದರೆ ನಾನು ಮೊದಲು ನನ್ನ ಹೆಸರನ್ನು ಇಟ್ಟಲ್ಲಿಗೆ ಹೋಗಿರಿ; ಅದಕ್ಕೆ ನಾನು ನನ್ನ ಜನರಾದ ಇಸ್ರಾಯೇಲಿನ ಕೆಟ್ಟತನದ ನಿಮಿತ್ತ ಏನು ಮಾಡಿದೆನೆಂದು ನೋಡಿರಿ. ಈಗ ಕರ್ತನು ಅನ್ನುವದೇನಂದರೆ--ನೀವು ಈ ಕೆಲಸಗಳ ನ್ನೆಲ್ಲಾ ಮಾಡಿದ್ದರಿಂದ ನಾನು ಬೆಳಿಗ್ಗೆ ಎದ್ದು ನಿಮ್ಮ ಸಂಗಡ ಮಾತಾಡಿದರೂ ನೀವು ಕೇಳದೆ ಹೋದಿರಿ. ನಾನು ನಿಮ್ಮನ್ನು ಕರೆದರೂ ನೀವು ಉತ್ತರ ಕೊಡದೆ ಹೋದಿರಿ. ಆದಕಾರಣ ನನ್ನ ಹೆಸರಿನಿಂದ ಕರೆ ಯಲ್ಪಟ್ಟಂಥ ನೀವು ನಂಬಿಕೊಂಡಿರುವಂಥ ಈ ಆಲಯಕ್ಕೂ ನಾನು ನಿಮಗೂ ನಿಮ್ಮ ಪಿತೃಗಳಿಗೂ ಕೊಟ್ಟ ಸ್ಥಳಕ್ಕೂ ಶಿಲೋವಿಗೆ ಮಾಡಿದ ಹಾಗೆ ಮಾಡುವೆನು.
- 2 Kings 2:11 2 ಅರಸುಗಳು 2:11ಅವರು ನಡೆದು ಬಂದು ಮಾತನಾಡಿಕೊಂಡಿರುವಾಗ ಆದದ್ದೇನಂದರೆ, ಇಗೋ, ಬೆಂಕಿಯ ರಥವೂ ಬೆಂಕಿಯ ಕುದುರೆ ಗಳೂ ಅವರಿಬ್ಬರನ್ನು ವಿಂಗಡಿಸಿದವು; ಎಲೀಯನು ಬಿರುಗಾಳಿಯಲ್ಲಿ ಆಕಾಶಕ್ಕೆ ಏರಿಹೋದನು.
- Psalm 68:17–18 ಕೀರ್ತನೆಗಳು 68:17–18ದೇವರ ರಥಗಳು ಇಪ್ಪತ್ತು ಸಾವಿರವು, ಸಾವಿರಾರು ದೂತರು ಗಳು; ಕರ್ತನು ಸೀನಾಯಿಯಲ್ಲಿ ಇದ್ದ ಹಾಗೆ ಅವರೊಳಗೆ ಪರಿಶುದ್ಧ ಸ್ಥಳದಲ್ಲಿ ಇದ್ದಾನೆ. ನೀನು ಉನ್ನತಕ್ಕೆ ಏರಿಹೋಗಿ ಸೆರೆಯವರನ್ನು ಸೆರೆಯಾಗಿ ನಡೆಸಿದಿ, ಕರ್ತನಾದ ದೇವರು ಅವರ ಮಧ್ಯದಲ್ಲಿ ವಾಸಿಸುವ ಹಾಗೆ ಮನುಷ್ಯರಿಗಾಗಿಯೂ ಹೌದು, ತಿರುಗಿ ಬಿದ್ದವರಿಗಾಗಿಯೂ ಸ್ವೀಕರಿಸಿದಿ.
- Ezekiel 7:20–22 ಯೆಹೆಜ್ಕೇಲನು 7:20–22ಅವನ ಆಭರಣದ ಸೌಂದರ್ಯವಾ ದರೋ ಅವನು ಅದನ್ನು ಘನತೆಗಾಗಿ ಇಟ್ಟನು. ಆದರೆ ಅವರು ತಮ್ಮ ಅಸಹ್ಯಗಳ ವಿಗ್ರಹಗಳನ್ನೂ ಹೇಸಿಗೆ ಗಳನ್ನೂ ಅದರಲ್ಲಿ ಮಾಡಿದ್ದರಿಂದ ಅದನ್ನು ನಾನು ಅವರಿಂದ ದೂರಮಾಡಿದ್ದೇನೆ. ನಾನು ಅದನ್ನು ಅಪರಿಚಿತರ ಕೈಗೆ ಕೊಳ್ಳೆಯಾಗಿಯೂ ಭೂಮಿಯ ದುಷ್ಟರಿಗೆ ಸೂರೆಯಾಗಿಯೂ ಒಪ್ಪಿಸುವೆನು ಮತ್ತು ಅವರು ಅದನ್ನು ಅಪವಿತ್ರಪಡಿಸುವರು. ನನ್ನ ಮುಖವನ್ನು ನಾನು ಅವರ ಕಡೆಯಿಂದ ತಿರುಗಿಸುವೆನು; ನನ್ನ ರಹಸ್ಯ ಸ್ಥಳವನ್ನು ಅಪವಿತ್ರಪಡಿಸುವರು. ದರೋಡೆ ಕೋರರು ಅದರಲ್ಲಿ ಸೇರಿ ಅದನ್ನು ಅಪವಿತ್ರ ಪಡಿಸುವರು.
- Hosea 9:12 ಹೋಶೇಯ 9:12ಅವರು ತಮ್ಮ ಮಕ್ಕಳನ್ನು ಬೆಳೆಸಿದಾಗ್ಯೂ ಒಬ್ಬ ಮನುಷ್ಯನು ಉಳಿಯದ ಹಾಗೆ ನಾನು ಅವರನ್ನು ಅನಾಥರನ್ನಾಗಿ ಮಾಡುವೆನು. ಹೌದು, ನಾನು ಅವ ರನ್ನು ಬಿಟ್ಟು ಹೋಗುವಾಗ ಅವರಿಗೆ ಅಯ್ಯೋ!
- Jeremiah 6:8 ಯೆರೆಮೀಯ 6:8ಯೆರೂಸಲೇಮೇ, ನನ್ನ ಪ್ರಾಣವು ನಿನ್ನ ಕಡೆಯಿಂದ ಹೊರಟು ಹೋಗದ ಹಾಗೆ ನಾನು ನಿಮ್ಮನ್ನು ಹಾಳಾಗಿಯೂ ನಿವಾಸಿಗಳಿಲ್ಲದ ದೇಶವಾಗಿಯೂ ಮಾಡದ ಹಾಗೆ ಶಿಕ್ಷಣವನ್ನು ತಕ್ಕೋ.
- Ezekiel 10:3–4 ಯೆಹೆಜ್ಕೇಲನು 10:3–4ಆ ಮನುಷ್ಯನು ಒಳಗೆ ಹೋಗು ವಾಗ ಕೆರೂಬಿಯರು ಆಲಯದ ಬಳಿಯಲ್ಲಿ ನಿಂತಿ ದ್ದರು. ಮೇಘವು ಒಳಗಿನ ಅಂಗಳವನ್ನು ತುಂಬಿಸಿ ಕೊಂಡಿತ್ತು. ಆಗ ಕರ್ತನ ಮಹಿಮೆಯು ಕೆರೂಬಿಗಳನ್ನು ಬಿಟ್ಟು ಮೇಲಕ್ಕೆ ಹೋಗಿ ಆಲಯದ ಹೊಸ್ತಿಲಲ್ಲಿ ನಿಂತಿತು, ಆಲಯವು ಮೇಘದಿಂದ ತುಂಬಿತ್ತು. ಆಗ ಕರ್ತನ ಮಹಿಮೆಯ ಪ್ರಕಾಶವು ಅಂಗಳದಲ್ಲಿ ತುಂಬಿತ್ತು.