Ezekiel · chapter 10 · verse 20
Ezekiel 10:20 in Kannada
ಕೆಬಾರ್ ನದಿಯ ಬಳಿಯಲ್ಲಿ ನಾನು ನೋಡಿದ ಜೀವಿಯು ಇದೇ. ಅವು ಕೆರೂಬಿಯರೆಂದು ತಿಳಿದುಕೊಂಡೆನು.
Kebaar nadiya baliyalli naanu nodida jeeviyu ide. Avu keroobiyarendu tilidukondenu.
Ezekiel 10:20 in English
- King James Version (KJV)
- This [is] the living creature that I saw under the God of Israel by the river of Chebar; and I knew that they [were] the cherubims.
- World English Bible (WEB)
- This is the living creature that I saw under the God of Israel by the river Chebar; and I knew that they were cherubim.
- American Standard Version (ASV)
- This is the living creature that I saw under the God of Israel by the river Chebar; and I knew that they were cherubim.
- Bible in Basic English (BBE)
- This is the living being which I saw under the God of Israel by the river Chebar; and it was clear to me that they were the winged ones.
- Darby Translation (DBY)
- This is the living creature that I saw under the God of Israel by the river Chebar; and I knew that they were cherubim.
- Webster's Bible (WBS)
- This [is] the living creature that I saw under the God of Israel by the river of Kebar; and I knew that they [were] the cherubim.
- Young's Literal Translation (YLT)
- It [is] the living creature that I saw under the God of Israel by the river Chebar, and I know that they are cherubs.
Read in context
- 18ಆಗ ಕರ್ತನ ಮಹಿಮೆಯು ಆಲಯದ ಹೊಸ್ತಿಲನ್ನು ಬಿಟ್ಟು ಕೆರೂಬಿಯರ ಮೇಲೆ ನಿಂತಿತು.
- 19ಕೆರೂಬಿಯರು ತಮ್ಮ ರೆಕ್ಕೆಗಳನ್ನು ಎತ್ತಿ ಕೊಂಡು ನಾನು ನೋಡುವಾಗಲೇ ಭೂಮಿಯನ್ನು ಬಿಟ್ಟು ಮೇಲೆಕ್ಕೇರಿ ಹೋದರು. ಅವು ಹೊರಟಾಗ ಚಕ್ರಗಳೂ ಅವರ ಸಂಗಡ ಇದ್ದವು, ಅವರು ಕರ್ತನ ಆಲಯದ ಮೂಡಣ ಬಾಗಲಿನ ದ್ವಾರದ ಬಳಿಯಲ್ಲಿ ನಿಂತಿದ್ದರು. ಮತ್ತು ಇಸ್ರಾಯೇಲಿನ ದೇವರ ಮಹಿ ಮೆಯು ಅವರ ಮೇಲೆ ಇತ್ತು.
- 20ಕೆಬಾರ್ ನದಿಯ ಬಳಿಯಲ್ಲಿ ನಾನು ನೋಡಿದ ಜೀವಿಯು ಇದೇ. ಅವು ಕೆರೂಬಿಯರೆಂದು ತಿಳಿದುಕೊಂಡೆನು.
- 21ಪ್ರತಿಯೊಬ್ಬ ನಿಗೂ ನಾಲ್ಕು ಮುಖಗಳು ಮತ್ತು ನಾಲ್ಕು ರೆಕ್ಕೆಗಳು ಇದ್ದವು, ಅವರ ರೆಕ್ಕೆಗಳ ಕೆಳಗೆ ಮನುಷ್ಯರ ಕೈಗಳ ರೂಪವಿತ್ತು;ಅವುಗಳ ಮುಖಗಳ ರೂಪವು ನಾನು ಕೆಬಾರ್ ನದಿಯ ಬಳಿಯಲ್ಲಿ ನೋಡಿದ ಆ ಮುಖಗಳ ಹಾಗೆ ಇತ್ತು. ಅವರ ಆಕಾರವೂ ಅವರೂ ಹಾಗೆಯೇ ಇದ್ದರು. ಅವರಲ್ಲಿ ಪ್ರತಿಯೊಬ್ಬರೂ ನೇರವಾಗಿ ಹೋಗುತ್ತಿದ್ದರು.
- 22ಅವುಗಳ ಮುಖಗಳ ರೂಪವು ನಾನು ಕೆಬಾರ್ ನದಿಯ ಬಳಿಯಲ್ಲಿ ನೋಡಿದ ಆ ಮುಖಗಳ ಹಾಗೆ ಇತ್ತು. ಅವರ ಆಕಾರವೂ ಅವರೂ ಹಾಗೆಯೇ ಇದ್ದರು. ಅವರಲ್ಲಿ ಪ್ರತಿಯೊಬ್ಬರೂ ನೇರವಾಗಿ ಹೋಗುತ್ತಿದ್ದರು.
Cross references
- Ezekiel 1:1 ಯೆಹೆಜ್ಕೇಲನು 1:1ನಾನು ಸೆರೆಯವರ ಜೊತೆ ಕೆಬಾರ್ ನದಿಯ ಬಳಿಯಲ್ಲಿರುವಾಗ ಮೂವತ್ತ ನೆಯ ವರುಷದ ನಾಲ್ಕನೆಯ ತಿಂಗಳಿನ ಐದನೆಯ ದಿನದಲ್ಲಿ ಆದದ್ದೇನಂದರೆ, ಆಕಾಶಗಳು ತೆರೆಯಲ್ಪ ಟ್ಟವು; ನಾನು ದೇವರ ದರ್ಶನಗಳನ್ನು ಕಂಡೆನು.
- Ezekiel 10:15 ಯೆಹೆಜ್ಕೇಲನು 10:15ಆಗ ಕೆರೂಬಿಯರು ಮೇಲಕ್ಕೆತ್ತಲ್ಪಟ್ಟರು. ನಾನು ಕೆಬಾರ್ ನದಿಯ ಬಳಿಯಲ್ಲಿ ನೋಡಿದ ಜೀವಿಯು ಇದೇ.
- 1 Kings 7:36 1 ಅರಸುಗಳು 7:36ಅದರದರ ಪ್ರಮಾಣದ ಪ್ರಕಾರ ಹಲಿಗೆಗಳ ಕೈಹಿಡಿಗಳ ಮೇಲೆಯೂ ಅಂಚು ಗಳ ಮೇಲೆಯೂ ಕೆರೂಬಿಗಳನ್ನೂ ಸಿಂಹಗಳನ್ನೂ ಖರ್ಜೂರ ಗಿಡಗಳನ್ನೂ ಚಿತ್ರಿಸಿದನು; ಸುತ್ತಲೂ ಅದ ರದರ ಪ್ರಮಾಣದ ಪ್ರಕಾರ ಚಿತ್ರಿಸಿದನು.
- 1 Kings 6:29–35 1 ಅರಸುಗಳು 6:29–35ಮನೆಯ ಗೋಡೆಗಳನ್ನೆಲ್ಲಾ ಅವನು ಸುತ್ತಲೂ ಒಳ ಹೊರ ಭಾಗಗಳಲ್ಲಿ ಕೆರೂಬಿಗಳನ್ನೂ ಖರ್ಜೂರದ ಗಿಡಗಳನ್ನೂ ವಿಕಸಿಸಿದ ಪುಷ್ಪಗಳನ್ನೂ ಕೆತ್ತಿದ ಕೆಲಸದಿಂದ ಮಾಡಿಸಿದನು. ಮನೆಯ ಒಳ ಹೊರ ಭಾಗವಾಗಿರುವ ನೆಲವನ್ನು ಚಿನ್ನದಿಂದ ಹೊದಿಸಿ ದನು. ಅವನು ದೈವೋಕ್ತಿಯ ಸ್ಥಾನದಬಾಗಲಿಗೆ ಇಪ್ಪೇ ಮರಗಳಿಂದ ಜೋಡು ಕದಗಳನ್ನು ಮಾಡಿಸಿ ದನು. ದ್ವಾರಬಂಧವೂ ನಿಲುವುಗಳೂ ಐದರಲ್ಲಿ ಒಂದು ಭಾಗವಾಗಿದ್ದವು. ಇಪ್ಪೇ ಮರದ ಆ ಎರಡು ಕದಗಳ ಮೇಲೆ ಅವನು ಕೆರೂಬಿಗಳೂ ಖರ್ಜೂರ ಗಿಡಗಳೂ ಅರಳಿದ ಪುಷ್ಪಗಳೂ ಆದ ಚಿತ್ರಗಳನ್ನು ಮಾಡಿಸಿ ಚಿನ್ನದಿಂದ ಹೊದಿಸಿದನು. ಆ ಕೆರೂಬಿಗಳನ್ನೂ ಖರ್ಜೂರ ಗಿಡಗಳನ್ನೂ ಚಿನ್ನದಿಂದ ಹೊದಿಸಿದನು. ಇದಲ್ಲದೆ ಮಂದಿರದ ಬಾಗಲಿಗೆ ಇಪ್ಪೇ ಮರದ ನಿಲುವುಗಳನ್ನು ಮಾಡಿಸಿದನು. ಅದು ನಾಲ್ಕರಲ್ಲಿ ಒಂದು ಭಾಗವಾಗಿತ್ತು. ಅದರ ಎರಡು ಕದಗಳು ತುರಾಯಿ ಮರದ ಹಲಿಗೆಗಳಾಗಿದ್ದವು. ಒಂದು ಕದಕ್ಕೆ ಎರಡು ಮಡಿಸುವ ಹಲಿಗೆಗಳಾಗಿಯೂ ಮತ್ತೊಂದು ಕದಕ್ಕೆ ಎರಡು ಮಡಿಸುವ ಹಲಿಗೆಗಳಾಗಿಯೂ ಇತ್ತು. ಅದರ ಮೇಲೆ ಕೆರೂಬಿಗಳೂ ಖರ್ಜೂರ ಗಿಡಗಳೂ ಅರಳಿದ ಪುಷ್ಪಗಳೂ ಆದ ಕೆತ್ತಿದ ಕೆಲಸವನ್ನು ಮಾಡಿಸಿ ಕೆತ್ತಿದ ಕೆಲಸಕ್ಕೆ ಸರಿಯಾಗಿ ಚಿನ್ನದಿಂದ ಅವುಗಳನ್ನು ಹೊದಿಸಿದನು.
- Ezekiel 3:23 ಯೆಹೆಜ್ಕೇಲನು 3:23ಆಮೇಲೆ ನಾನು ಎದ್ದು ಬಯಲು ಸೀಮೆಯ ಕಡೆಗೆ ಹೋದೆನು; ಇಗೋ, ಕರ್ತನ ಮಹಿಮೆಯ ಅಲ್ಲಿ ನಿಂತಿದೆ. ಅದು ಕೆಬಾರ್ ನದಿಯ ಹತ್ತಿರ ನಾನು ನೋಡಿದ ಮಹಿಮೆಯ ಪ್ರಕಾರವಾಗಿದೆ. ಆಗ ನಾನು ಮುಖ ಕೆಳಗಾಗಿ ಬಿದ್ದೆನು.
- Ezekiel 1:22–28 ಯೆಹೆಜ್ಕೇಲನು 1:22–28ಜೀವಿಯ ತಲೆಗಳ ಮೇಲೆ ಗಗನಮಂಡಲ ವಿಶಾಲ ರೂಪವು ಭೀಕರ ವಜ್ರದ ಬಣ್ಣದ್ದಾಗಿತ್ತು; ಅದು ಅವುಗಳ ತಲೆಗಳ ಮೇಲೆ ಹರ ಡಿತ್ತು (ಹಾಸಲ್ಪಟ್ಟಿತ್ತು). ಆ ಗಗನಮಂಡಲದ (ರೂಪದ) ಕೆಳಗೆ ಅವುಗಳ ರೆಕ್ಕೆಗಳು ನೆಟ್ಟಗೆ (ನೇರ ವಾಗಿ) ಒಂದಕ್ಕೊಂದು ಸರಿಯಾಗಿದ್ದವು; ಅವುಗಳ ಶರೀರಗಳನ್ನು ಮುಚ್ಚಿಕೊಳ್ಳುವ ಎರಡೆರೆಡು ರೆಕ್ಕೆಗಳು ಎರಡು ಕಡೆಗಳಲ್ಲೂ ಇರುವ ಪ್ರತಿಯೊಂದನ್ನು ಮುಚ್ಚಿ ಕೊಂಡಿದ್ದವು. ಅವು ಹೋದಾಗ ನಾನು ಅವುಗಳ ರೆಕ್ಕೆಗಳ ಶಬ್ದವನ್ನು ಕೇಳಿದೆನು; ಅದು ಜಲಪ್ರವಾಹದ ಶಬ್ದದಂತೆಯೂ ಸರ್ವಶಕ್ತನ ಶಬ್ದದ ಹಾಗೆಯೂ ಸಂದಣಿಯ ಶಬ್ದದಂತೆಯೂ ಸೈನ್ಯದ ಶಬ್ದದ ಹಾಗೆಯೂ ಇತ್ತು; ಅವು ನಿಲ್ಲುವಾಗ ತಮ್ಮ ರೆಕ್ಕೆಗಳನ್ನು ಕೆಳಗೆ ಇಳಿಸುತ್ತಿದ್ದವು. ಅವುಗಳು ನಿಂತು ತಮ್ಮ ರೆಕ್ಕೆಗಳನ್ನು ಕೆಳಗೆ ಇಳಿಸಿದಾಗ ಅವುಗಳ ತಲೆಗಳ ಮೇಲಿರುವ ಗಗನಮಂಡಲದೊಳಗಿಂದ ಒಂದು ಶಬ್ದವಾಯಿತು. ಅವುಗಳ ತಲೆಗಳ ಮೇಲಿರುವ ಗಗನಮಂಡಲದ ಮೇಲ್ಭಾಗದಲ್ಲಿ ಇಂದ್ರನೀಲಮಣಿಯ ಹಾಗೆ ಇರುವ ಒಂದು ಸಿಂಹಾಸನದ ರೂಪವಿತ್ತು. ಅದರ ಮೇಲೆ ಮನುಷ್ಯನ ಹಾಗೆ ಕಾಣಿಸುವ ಒಂದು ರೂಪವೂ ಇತ್ತು. ಆತನ ನಡುವು ಕಾಣಿಸುವಂತೆ ಮೇಲೆಯೂ ಒಳಗೂ ಸುತ್ತಲೂ ಬೆಂಕಿಯಂತೆ ಇರುವ ಸುಂದರವಾದ ಒಂದು ಬಣ್ಣದ ರೂಪವು ಇರುವದನ್ನು ನಾನು ನೋಡಿದೆನು; ಆತನ ನಡುವು ಕಾಣಿಸುವಂತೆ ಕೆಳಗೆ ಬೆಂಕಿಯ ಹಾಗೆ ಅದರ ಸುತ್ತಲೂ ಪ್ರಕಾಶವಿರುವದನ್ನು ನೋಡಿದೆನು.ಮಳೆ ಬೀಳುವ ದಿನದಲ್ಲಿ ಮೇಘ ದೊಳಗೆ ಬಿಲ್ಲು ಹೇಗೆ ಕಾಣಿಸಲ್ಪಡುವದೋ ಹಾಗೆಯೇ ಅದರ ಸುತ್ತ ಆ ಪ್ರಕಾಶವು ಕಾಣಿಸಿತು. ಇದೇ ಕರ್ತನ ಮಹಿಮೆಯ ರೂಪದ ದರ್ಶನವಾಗಿತ್ತು. ಅದನ್ನು ನಾನು ನೋಡಿದಾಗ ನನ್ನ ಮುಖವನ್ನು ಕೆಳಗೆಮಾಡಿ ಬಿದ್ದೆನು. ಆಗ ಮಾತನಾಡುವ ಒಬ್ಬನ ಸ್ವರವನ್ನು ಕೇಳಿದೆನು. ಮಳೆ ಬೀಳುವ ದಿನದಲ್ಲಿ ಮೇಘ ದೊಳಗೆ ಬಿಲ್ಲು ಹೇಗೆ ಕಾಣಿಸಲ್ಪಡುವದೋ ಹಾಗೆಯೇ ಅದರ ಸುತ್ತ ಆ ಪ್ರಕಾಶವು ಕಾಣಿಸಿತು. ಇದೇ ಕರ್ತನ ಮಹಿಮೆಯ ರೂಪದ ದರ್ಶನವಾಗಿತ್ತು. ಅದನ್ನು ನಾನು ನೋಡಿದಾಗ ನನ್ನ ಮುಖವನ್ನು ಕೆಳಗೆಮಾಡಿ ಬಿದ್ದೆನು. ಆಗ ಮಾತನಾಡುವ ಒಬ್ಬನ ಸ್ವರವನ್ನು ಕೇಳಿದೆನು.
- Ezekiel 1:5 ಯೆಹೆಜ್ಕೇಲನು 1:5ಅದರ ಮಧ್ಯದೊಳಗಿಂದ ನಾಲ್ಕು ಜೀವಿಗಳ ರೂಪವು ಹೊರ ಟಿತು. ಅವುಗಳ ಆಕಾರವೇನಂದರೆ--ಅವುಗಳಿಗೆ ಮನುಷ್ಯನ ರೂಪವಿತ್ತು.