Ezekiel · chapter 10 · verse 4
Ezekiel 10:4 in Kannada
ಆಗ ಕರ್ತನ ಮಹಿಮೆಯು ಕೆರೂಬಿಗಳನ್ನು ಬಿಟ್ಟು ಮೇಲಕ್ಕೆ ಹೋಗಿ ಆಲಯದ ಹೊಸ್ತಿಲಲ್ಲಿ ನಿಂತಿತು, ಆಲಯವು ಮೇಘದಿಂದ ತುಂಬಿತ್ತು. ಆಗ ಕರ್ತನ ಮಹಿಮೆಯ ಪ್ರಕಾಶವು ಅಂಗಳದಲ್ಲಿ ತುಂಬಿತ್ತು.
Aaga kartana mahimeyu keroobigalannu bittu melakke hogi aalayada hostilalli nintitu, aalayavu meghadinda tumbittu. Aaga kartana mahimeya prakaashavu angaladalli tumbittu.
Ezekiel 10:4 in English
- King James Version (KJV)
- Then the glory of the LORD went up from the cherub, [and stood] over the threshold of the house; and the house was filled with the cloud, and the court was full of the brightness of the LORD’s glory.
- World English Bible (WEB)
- The LORD’s glory mounted up from the cherub, and stood over the threshold of the house; and the house was filled with the cloud, and the court was full of the brightness of the LORD’s glory.
- American Standard Version (ASV)
- And the glory of Jehovah mounted up from the cherub, [and stood] over the threshold of the house; and the house was filled with the cloud, and the court was full of the brightness of Jehovah’s glory.
- Bible in Basic English (BBE)
- And the glory of the Lord went up from the winged ones and came to rest over the doorstep of the house; and the house was full of the cloud and the open square was full of the shining of the Lord's glory.
- Darby Translation (DBY)
- And the glory of Jehovah mounted up from the cherub, [and came] over the threshold of the house; and the house was filled with the cloud, and the court was full of the brightness of Jehovah's glory.
- Webster's Bible (WBS)
- Then the glory of the LORD went up from the cherub, [and stood] over the threshhold of the house; and the house was filled with the cloud, and the court was full of the brightness of the LORD'S glory.
- Young's Literal Translation (YLT)
- and become high doth the honour of Jehovah above the cherub, over the threshold of the house, and the house is filled with the cloud, and the court hath been filled with the brightness of the honour of Jehovah.
Read in context
- 2ಆತನು ನಾರುಮಡಿಯನ್ನು ಧರಿಸಿ ಕೊಂಡಿದ್ದ ಮನುಷ್ಯನಿಗೆ ಹೇಳಿದ್ದೇನಂದರೆ--ನೀನು ಕೆರೂಬಿಗಳ ಕೆಳಗೆ ಇರುವ ಚಕ್ರಗಳ ನಡುವೆ ಪ್ರವೇಶಿಸಿ, ಕೆರೂಬಿಗಳ ನಡುವೆ ಇರುವ ಉರಿಕೆಂಡಗಳ ತಳದಲಿ ನಿನ್ನ ಕೈತುಂಬ ಎತ್ತಿ ಅದನ್ನು ಪಟ್ಟಣದ ಮೇಲೆ ಚೆಲ್ಲು ಅಂದನು. ಹಾಗೆಯೇ ನಾನು ಕಂಡಂತೆ ಒಳಗೆ ಪ್ರವೇಶಿಸಿದನು.
- 3ಆ ಮನುಷ್ಯನು ಒಳಗೆ ಹೋಗು ವಾಗ ಕೆರೂಬಿಯರು ಆಲಯದ ಬಳಿಯಲ್ಲಿ ನಿಂತಿ ದ್ದರು. ಮೇಘವು ಒಳಗಿನ ಅಂಗಳವನ್ನು ತುಂಬಿಸಿ ಕೊಂಡಿತ್ತು.
- 4ಆಗ ಕರ್ತನ ಮಹಿಮೆಯು ಕೆರೂಬಿಗಳನ್ನು ಬಿಟ್ಟು ಮೇಲಕ್ಕೆ ಹೋಗಿ ಆಲಯದ ಹೊಸ್ತಿಲಲ್ಲಿ ನಿಂತಿತು, ಆಲಯವು ಮೇಘದಿಂದ ತುಂಬಿತ್ತು. ಆಗ ಕರ್ತನ ಮಹಿಮೆಯ ಪ್ರಕಾಶವು ಅಂಗಳದಲ್ಲಿ ತುಂಬಿತ್ತು.
- 5ಕೆರೂಬಿಗಳ ರೆಕ್ಕೆಗಳ ಶಬ್ದವು ಮಾತನಾಡುವ ಸರ್ವಶಕ್ತನ ದೇವರ ಹಾಗೆ ಹೊರಗಣ ಅಂಗಳದ ವರೆಗೂ ಕೇಳಿಬಂತು.
- 6ಆತನು ನಾರು ಮಡಿಯನ್ನು ಧರಿಸಿಕೊಂಡ ಮನುಷ್ಯನಿಗೆ--ಚಕ್ರಗಳ ಮಧ್ಯದಿಂದಲೂ ಕೆರೂಬಿಯರ ಮಧ್ಯದಿಂದಲೂ ಬೆಂಕಿ ಯನ್ನು ತೆಗೆದುಕೊಳ್ಳಲು ಆಜ್ಞಾಪಿಸಿದನು. ಅವನು ಒಳಗೆ ಹೋಗಿ ಚಕ್ರಗಳ ಬಳಿಯಲ್ಲಿ ನಿಂತನು.
Cross references
- Ezekiel 1:28 ಯೆಹೆಜ್ಕೇಲನು 1:28ಮಳೆ ಬೀಳುವ ದಿನದಲ್ಲಿ ಮೇಘ ದೊಳಗೆ ಬಿಲ್ಲು ಹೇಗೆ ಕಾಣಿಸಲ್ಪಡುವದೋ ಹಾಗೆಯೇ ಅದರ ಸುತ್ತ ಆ ಪ್ರಕಾಶವು ಕಾಣಿಸಿತು. ಇದೇ ಕರ್ತನ ಮಹಿಮೆಯ ರೂಪದ ದರ್ಶನವಾಗಿತ್ತು. ಅದನ್ನು ನಾನು ನೋಡಿದಾಗ ನನ್ನ ಮುಖವನ್ನು ಕೆಳಗೆಮಾಡಿ ಬಿದ್ದೆನು. ಆಗ ಮಾತನಾಡುವ ಒಬ್ಬನ ಸ್ವರವನ್ನು ಕೇಳಿದೆನು.
- Ezekiel 9:3 ಯೆಹೆಜ್ಕೇಲನು 9:3ಇಸ್ರಾಯೇಲಿನ ದೇವರ ಮಹಿ ಮೆಯು ಯಾವದರ ಮೇಲಿತ್ತೋ ಆ ಕೆರೂಬಿಯನ್ನು ಬಿಟ್ಟು ಮನೆಯ ಹೊಸ್ತಿಲಿಗೆ ಹೋಯಿತು; ತನ್ನ ಪಕ್ಕದಲ್ಲಿ ಲೇಖಕನ ದೌತಿ ಇಟ್ಟುಕೊಂಡು ಆ ನಾರುಮಡಿಯನ್ನು ಧರಿಸಿದ್ದ ಆ ಮನುಷ್ಯನ ಕಡೆಗೆ ಕೂಗಿ
- Revelation 15:8 ಪ್ರಕಟನೆ 15:8ದೇವರ ಮಹಿಮೆ ಯಿಂದಲೂ ಆತನ ಶಕ್ತಿಯಿಂದಲೂ ಉಂಟಾದ ಹೊಗೆ ಯಿಂದ ಆಲಯವು ತುಂಬಿದ ಕಾರಣ ಆ ಏಳುಮಂದಿ ದೂತರ ಏಳು ಉಪದ್ರವಗಳು ತೀರುವ ತನಕ ಆ ಆಲಯದೊಳಗೆ ಪ್ರವೇಶಿಸುವದಕ್ಕೆ ಯಾರಿಂದಲೂ ಆಗಲಿಲ್ಲ.
- Ezekiel 11:22–23 ಯೆಹೆಜ್ಕೇಲನು 11:22–23ಆಮೇಲೆ ಕೆರೂಬಿಯರು ತಮ್ಮ ರೆಕ್ಕೆಗಳನ್ನು ಎತ್ತಿದರು, ಅವರ ಪಕ್ಕದಲ್ಲಿ ಚಕ್ರಗಳಿದ್ದವು; ಇಸ್ರಾ ಯೇಲಿನ ದೇವರ ಮಹಿಮೆ ಅವರ ಮೇಲೆ ಇತ್ತು. ಕರ್ತನ ಮಹಿಮೆಯು ಪಟ್ಟಣದ ಮಧ್ಯದೊಳಗಿಂದ ಮೇಲಕ್ಕೇರಿ ಪಟ್ಟಣದ ಮೂಡಣದಲ್ಲಿರುವ ಪರ್ವತದ ಮೇಲೆ ನಿಂತಿತು.
- Ezekiel 10:18 ಯೆಹೆಜ್ಕೇಲನು 10:18ಆಗ ಕರ್ತನ ಮಹಿಮೆಯು ಆಲಯದ ಹೊಸ್ತಿಲನ್ನು ಬಿಟ್ಟು ಕೆರೂಬಿಯರ ಮೇಲೆ ನಿಂತಿತು.
- 2 Chronicles 5:13–14 2 ಪೂರ್ವಕಾಲವೃತ್ತಾಂತ 5:13–14ತುತೂರಿ ಊದುವವರೂ ಸಂಗೀತಗಾರರೂ ಕರ್ತನನ್ನು ಕೊಂಡಾ ಡುತ್ತಾ ಹೊಗಳುತ್ತಾ ಏಕವಾಗಿ ಒಂದೇ ಶಬ್ದ ಮಾಡಿ ದಾಗ ತುತೂರಿ ತಾಳ ಮೊದಲಾದ ಗೀತ ವಾದ್ಯಗಳಿಂದ ತಮ್ಮ ಶಬ್ದವನ್ನೆತ್ತಿ--ಆತನು ಒಳ್ಳೆಯವನೆಂದೂ ಆತನ ಕೃಪೆಯು ಯುಗಯುಗಕ್ಕೂ ಇರುವದೆಂದೂ ಕರ್ತನನ್ನು ಕೀರ್ತಿಸುವಾಗ ಕರ್ತನ ಆಲಯವು ಮೇಘದಿಂದ ತುಂಬಲ್ಪಟ್ಟಿತು.ಮೇಘದ ನಿಮಿತ್ತ ಯಾಜಕರು ಸೇವೆ ಗಾಗಿ ನಿಲ್ಲಲಾರದೆ ಇದ್ದರು; ಕರ್ತನ ಮಹಿಮೆಯು ದೇವರ ಆಲಯವನ್ನು ತುಂಬಿತ್ತು. ಮೇಘದ ನಿಮಿತ್ತ ಯಾಜಕರು ಸೇವೆ ಗಾಗಿ ನಿಲ್ಲಲಾರದೆ ಇದ್ದರು; ಕರ್ತನ ಮಹಿಮೆಯು ದೇವರ ಆಲಯವನ್ನು ತುಂಬಿತ್ತು.
- Exodus 40:35 ವಿಮೋಚನಕಾಂಡ 40:35ಸಭೆ ಡೇರೆಯ ಮೇಲೆ ಮೇಘವು ನೆಲೆಯಾಗಿದದ್ದರಿಂದಲೂ ಕರ್ತನ ಮಹಿಮೆಯು ಗುಡಾರವನ್ನು ತುಂಬಿದ್ದರಿಂದಲೂ ಮೋಶೆಯು ಒಳಗೆ ಪ್ರವೇಶಿಸಲಾರದೆ ಇದ್ದನು.
- Haggai 2:9 ಹಗ್ಗಾಯ 2:9ಈ ಆಲಯದ ಮುಂದಿನ ಮಹಿಮೆಯು ಹಿಂದಿನ ಮಹಿಮೆಗಿಂತ ವಿಶೇಷವಾಗಿರುವದು ಎಂದು ಸೈನ್ಯಗಳ ಕರ್ತನು ಹೇಳು ತ್ತಾನೆ; ಈ ಸ್ಥಳದಲ್ಲಿ ಸಮಾಧಾನ ಕೊಡುವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Ezekiel 43:5 ಯೆಹೆಜ್ಕೇಲನು 43:5ಆಗ ಆತ್ಮವು ನನ್ನನ್ನು ಎತ್ತಿಕೊಂಡು ಒಳಗಿನ ಅಂಗಳಕ್ಕೆ ಕರೆ ತಂದಿತು; ಇಗೋ, ಕರ್ತನ ಮಹಿಮೆ ಯಿಂದ ಆಲಯವು ತುಂಬಿಕೊಂಡಿತ್ತು.
- Numbers 16:19 ಅರಣ್ಯಕಾಂಡ 16:19ಕೋರಹನು ಅವರಿಗೆ ಎದುರಾಗಿ ಸಮಸ್ತ ಸಮೂಹವನ್ನು ಸಭೆಯ ಗುಡಾರದ ಬಾಗಲಿನ ಹತ್ತಿರ ಕೂಡಿಸಿದನು. ಆಗ ಕರ್ತನ ಮಹಿಮೆಯು ಸಮಸ್ತ ಸಭೆಗೆ ತೋರಿಬಂತು.
- 1 Kings 8:10–12 1 ಅರಸುಗಳು 8:10–12ಯಾಜಕರು ಪರಿಶುದ್ಧ ಸ್ಥಳದಿಂದ ಬಂದಾಗ ಮೇಘವು ಕರ್ತನ ಮಂದಿರವನ್ನು ತುಂಬಿತ್ತು. ಕರ್ತನ ತೇಜಸ್ಸಿ ನಿಂದ ವ್ಯಾಪ್ತವಾಗಿದ್ದ ಮೇಘವು ಆಲಯವನ್ನು ತುಂಬಿ ಕೊಂಡದರಿಂದ ಯಾಜಕರು ಅಲ್ಲಿ ನಿಂತು ಸೇವೆಮಾಡ ಲಾರದವರಾದರು. ಆಗ ಸೊಲೊಮೋನನು--ಕಾರ್ಗತ್ತಲಲ್ಲಿ ವಾಸ ವಾಗಿರುವೆನೆಂದು ಕರ್ತನು ಹೇಳಿದ್ದಾನೆ.
Original words (Hebrew)
- glory · H3519כָּבוֹד kâbôwd
- up · H7311רוּם rûwm
- cherub · H3742כְּרוּב kᵉrûwb
- threshold · H4670מִפְתָּן miphtân
- house · H1004בַּיִת bayith
- house · H1004בַּיִת bayith
- filled · H4390מָלֵא mâlêʼ
- cloud · H6051עָנָן ʻânân
- court · H2691חָצֵר châtsêr
- full · H4390מָלֵא mâlêʼ
- brightness · H5051נֹגַהּ nôgahh
- glory · H3519כָּבוֹד kâbôwd