Ezekiel · chapter 10 · verse 5
Ezekiel 10:5 in Kannada
ಕೆರೂಬಿಗಳ ರೆಕ್ಕೆಗಳ ಶಬ್ದವು ಮಾತನಾಡುವ ಸರ್ವಶಕ್ತನ ದೇವರ ಹಾಗೆ ಹೊರಗಣ ಅಂಗಳದ ವರೆಗೂ ಕೇಳಿಬಂತು.
Keroobigala rekkegala shabdavu maatanaaduva sarvashaktana devara haage horagana angalada varegoo kelibantu.
Ezekiel 10:5 in English
- King James Version (KJV)
- And the sound of the cherubims’ wings was heard [even] to the outer court, as the voice of the Almighty God when he speaketh.
- World English Bible (WEB)
- The sound of the wings of the cherubim was heard even to the outer court, as the voice of God Almighty when he speaks.
- American Standard Version (ASV)
- And the sound of the wings of the cherubim was heard even to the outer court, as the voice of God Almighty when he speaketh.
- Bible in Basic English (BBE)
- And the sound of the wings of the winged ones was clear even in the outer square, like the voice of the Ruler of all.
- Darby Translation (DBY)
- And the sound of the wings of the cherubim was heard to the outer court, as the voice of the Almighty God when he speaketh.
- Webster's Bible (WBS)
- And the sound of the cherubim's wings was heard [even] to the outer court, as the voice of the Almighty God when he speaketh.
- Young's Literal Translation (YLT)
- And a noise of the wings of the cherubs hath been heard unto the outer court, as the voice of God — the Mighty One — in His speaking.
Read in context
- 3ಆ ಮನುಷ್ಯನು ಒಳಗೆ ಹೋಗು ವಾಗ ಕೆರೂಬಿಯರು ಆಲಯದ ಬಳಿಯಲ್ಲಿ ನಿಂತಿ ದ್ದರು. ಮೇಘವು ಒಳಗಿನ ಅಂಗಳವನ್ನು ತುಂಬಿಸಿ ಕೊಂಡಿತ್ತು.
- 4ಆಗ ಕರ್ತನ ಮಹಿಮೆಯು ಕೆರೂಬಿಗಳನ್ನು ಬಿಟ್ಟು ಮೇಲಕ್ಕೆ ಹೋಗಿ ಆಲಯದ ಹೊಸ್ತಿಲಲ್ಲಿ ನಿಂತಿತು, ಆಲಯವು ಮೇಘದಿಂದ ತುಂಬಿತ್ತು. ಆಗ ಕರ್ತನ ಮಹಿಮೆಯ ಪ್ರಕಾಶವು ಅಂಗಳದಲ್ಲಿ ತುಂಬಿತ್ತು.
- 5ಕೆರೂಬಿಗಳ ರೆಕ್ಕೆಗಳ ಶಬ್ದವು ಮಾತನಾಡುವ ಸರ್ವಶಕ್ತನ ದೇವರ ಹಾಗೆ ಹೊರಗಣ ಅಂಗಳದ ವರೆಗೂ ಕೇಳಿಬಂತು.
- 6ಆತನು ನಾರು ಮಡಿಯನ್ನು ಧರಿಸಿಕೊಂಡ ಮನುಷ್ಯನಿಗೆ--ಚಕ್ರಗಳ ಮಧ್ಯದಿಂದಲೂ ಕೆರೂಬಿಯರ ಮಧ್ಯದಿಂದಲೂ ಬೆಂಕಿ ಯನ್ನು ತೆಗೆದುಕೊಳ್ಳಲು ಆಜ್ಞಾಪಿಸಿದನು. ಅವನು ಒಳಗೆ ಹೋಗಿ ಚಕ್ರಗಳ ಬಳಿಯಲ್ಲಿ ನಿಂತನು.
- 7ಒಬ್ಬ ಕೆರೂಬಿಯನು ಕೆರೂಬಿಯರ ಮಧ್ಯದೊಳಗಿಂದ ತನ್ನ ಕೈಯನ್ನು ಕೆರೂಬಿಯರ ಮಧ್ಯದೊಳಗಿರುವ ಬೆಂಕಿಗೆ ಚಾಚಿ, ತಕ್ಕೊಂಡು ನಾರುಮಡಿಯನ್ನು ಧರಿಸಿಕೊಂಡಿ ದ್ದವನ ಕೈಗೆ ಇಟ್ಟನು. ಇವನು ಅದನ್ನು ತೆಗೆದುಕೊಂಡು ಹೊರಗೆ ಹೋದನು.
Cross references
- Ezekiel 1:24 ಯೆಹೆಜ್ಕೇಲನು 1:24ಅವು ಹೋದಾಗ ನಾನು ಅವುಗಳ ರೆಕ್ಕೆಗಳ ಶಬ್ದವನ್ನು ಕೇಳಿದೆನು; ಅದು ಜಲಪ್ರವಾಹದ ಶಬ್ದದಂತೆಯೂ ಸರ್ವಶಕ್ತನ ಶಬ್ದದ ಹಾಗೆಯೂ ಸಂದಣಿಯ ಶಬ್ದದಂತೆಯೂ ಸೈನ್ಯದ ಶಬ್ದದ ಹಾಗೆಯೂ ಇತ್ತು; ಅವು ನಿಲ್ಲುವಾಗ ತಮ್ಮ ರೆಕ್ಕೆಗಳನ್ನು ಕೆಳಗೆ ಇಳಿಸುತ್ತಿದ್ದವು.
- Job 40:9 ಯೋಬನು 40:9ಇಲ್ಲವೆ ದೇವರ ಹಾಗೆ ತೋಳುಳ್ಳವನಾಗಿದ್ದೀಯೋ? ಇಲ್ಲವೆ ಆತನ ಹಾಗೆ ಗುಡುಗಿನಿಂದ ಆರ್ಭಟ ಮಾಡು ವಿಯೋ?
- Deuteronomy 4:12–13 ಧರ್ಮೋಪದೇಶಕಾಂಡ 4:12–13ಬೆಂಕಿಯ ಮಧ್ಯದೊಳಗಿಂದ ಕರ್ತನು ನಿಮ್ಮ ಸಂಗಡ ಮಾತನಾಡಿದನು; ವಾಕ್ಯಗಳ ಧ್ವನಿಯನ್ನು ನೀವು ಕೇಳಿದಿರಿ; ಆದರೆ ಆಕಾರವನ್ನು ನೋಡಲಿಲ್ಲ; ಧ್ವನಿಯನ್ನು ಮಾತ್ರ ಕೇಳಿದಿರಿ. ಆತನು ಹತ್ತು ಆಜ್ಞೆಗಳೆಂಬ ತನ್ನ ಒಡಂಬಡಿಕೆಯನ್ನು ನಿಮಗೆ ತಿಳಿಸಿ ಅದನ್ನು ಅನುಸರಿಸಬೇಕೆಂದು ನಿಮಗೆ ಆಜ್ಞಾಪಿಸಿ ಅವುಗಳನ್ನು ಕಲ್ಲಿನ ಎರಡು ಹಲಗೆಗಳ ಮೇಲೆ ಬರೆದನು.
- 1 Kings 7:9 1 ಅರಸುಗಳು 7:9ಇವೆಲ್ಲಾ ಒಳಗೂ ಹೊರಗೂ ಅಸ್ತಿವಾರ ಗಳು ಮೊದಲುಗೊಂಡು ಕಬೋದದ ವರೆಗೂ ಹೊರ ಗಿರುವ ದೊಡ್ಡ ಅಂಗಳದ ಮಟ್ಟಿಗೂ ಅಳತೆಯ ಪ್ರಕಾರ ಗರಗಸದಿಂದ ಕೊಯ್ಯಲ್ಪಟ್ಟ ಕೆತ್ತಿದ ಬೆಲೆಯುಳ್ಳ ಕಲ್ಲು ಗಳಾಗಿದ್ದವು.
- Job 37:2–5 ಯೋಬನು 37:2–5ಆತನ ಬಾಯಿಂದ ಹೊರಡುವ ಧ್ವನಿಯ ಶಬ್ದದ ಸ್ವರವನ್ನು ಲಕ್ಷ್ಯಕೊಟ್ಟು ಕೇಳಿರಿ. ಎಲ್ಲಾ ಆಕಾಶದ ಕೆಳಗೆ ಆತನು ಅದನ್ನು ನಡಿಸುತ್ತಾನೆ. ತನ್ನ ಮಿಂಚನ್ನು ಭೂಮಿಯ ಅಂಚುಗಳ ವರೆಗೆ ನಡಿಸುತ್ತಾನೆ. ಅದರ ತರುವಾಯ ಶಬ್ದವು ಗರ್ಜಿಸುತ್ತದೆ; ತನ್ನ ಮಹತ್ತಿನ ಶಬ್ದದಿಂದ ಗುಡುಗುತ್ತಾನೆ. ಆತನ ಶಬ್ದ ಕೇಳಲ್ಪಡುವಾಗ ಅವು ಗಳನ್ನು ಹಿಂದೆಗೆಯುವದಿಲ್ಲ. ದೇವರು ಆಶ್ಚರ್ಯವಾಗಿ ತನ್ನ ಶಬ್ದದಿಂದ ಗುಡುಗುತ್ತಾನೆ; ನಾವು ಗ್ರಹಿಸದ ಮಹತ್ತುಗಳನ್ನು ಆತನು ಮಾಡುತ್ತಾನೆ.
- Exodus 19:19 ವಿಮೋಚನಕಾಂಡ 19:19ತುತೂರಿಯ ಶಬ್ದವು ಬರಬರುತ್ತಾ ಹೆಚ್ಚಾಗುತಿತ್ತು. ಮೋಶೆಯು ಮಾತನಾಡಿದಾಗ ದೇವರು ಅವನಿಗೆ ತನ್ನ ಸ್ವರದಿಂದ ಉತ್ತರಕೊಟ್ಟನು.
- Exodus 19:16 ವಿಮೋಚನಕಾಂಡ 19:16ಮೂರನೆಯ ದಿನದಲ್ಲಿ ಉದಯವಾದಾಗ ಬೆಟ್ಟದ ಮೇಲೆ ಗುಡುಗುಗಳೂ ಮಿಂಚುಗಳೂ ಮಂದವಾದ ಮೇಘವೂ ಉಂಟಾಗಿ ಬಹು ಬಲವಾದ ತುತೂರಿಯ ಶಬ್ದವಾಯಿತು. ಪಾಳೆಯದಲ್ಲಿದ್ದ ಜನರೆಲ್ಲರೂ ನಡುಗಿ ದರು.
- Exodus 20:18–19 ವಿಮೋಚನಕಾಂಡ 20:18–19ಜನರೆಲ್ಲಾ ಗುಡುಗುಗಳನ್ನೂ ಮಿಂಚುಗಳನ್ನೂ ತುತೂರಿಯ ಶಬ್ದವನ್ನೂ ಬೆಟ್ಟವು ಹೊಗೆ ಹಾಯು ವದನ್ನೂ ನೋಡಿದರು; ಜನರು ಅದನ್ನು ನೋಡಿ ದೂರ ಹೋಗಿ ನಿಂತುಕೊಂಡರು. ಅವರು ಮೋಶೆಗೆ--ನೀನೇ ನಮ್ಮ ಸಂಗಡ ಮಾತನಾಡು, ಆಗ ನಾವು ಕೇಳುವೆವು. ನಾವು ಸಾಯದ ಹಾಗೆ ದೇವರು ನಮ್ಮ ಸಂಗಡ ಮಾತನಾಡದಿರಲಿ ಅಂದರು.
- Ezekiel 46:21 ಯೆಹೆಜ್ಕೇಲನು 46:21ಆಗ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಅಂಗಳದ ನಾಲ್ಕು ಮೂಲೆ ಗಳನ್ನು ಹಾದುಹೋಗುವಂತೆ ಮಾಡಿದನು; ಇಗೋ, ಅಂಗಳದ ಒಂದೊಂದು ಮೂಲೆಯಲ್ಲಿ ಒಂದು ಅಂಗಳ ಇತ್ತು.
- John 12:28–29 ಯೋಹಾನನು 12:28–29ತಂದೆಯೇ, ನಿನ್ನ ಹೆಸರನ್ನು ಮಹಿಮೆಪಡಿಸಿಕೋ ಅಂದನು. ಆಗ--ನಾನು ಮಹಿ ಮೆಪಡಿಸಿದ್ದೇನೆ, ತಿರಿಗಿ ಅದನ್ನು ಮಹಿಮೆಪಡಿಸುವೆನು ಎಂದು ಹೇಳುವ ಧ್ವನಿಯು ಪರಲೋಕದಿಂದ ಬಂತು. ಆಗ ಅಲ್ಲಿ ನಿಂತಿದ್ದ ಜನರು ಅದನ್ನು ಕೇಳಿ--ಗುಡುಗಿತು ಅಂದರು. ಬೇರೆಯವರು--ದೂತ ನೊಬ್ಬನು ಈತನ ಸಂಗಡ ಮಾತನಾಡಿದನು ಅಂದರು.
- Psalm 77:17 ಕೀರ್ತನೆಗಳು 77:17ಮೋಡಗಳು ನೀರನ್ನು ಸುರಿಸಿದವು; ಆಕಾಶಗಳು ಶಬ್ದ ಮಾಡಿದವು; ನಿನ್ನ ಬಾಣಗಳು ಸಹ ಹಾರಿ ಬಂದವು.
- Psalm 68:33 ಕೀರ್ತನೆಗಳು 68:33ಅನಾದಿಯಿಂದಿದ್ದ ಆಕಾಶಗಳಲ್ಲಿ ಸವಾರಿಮಾಡು ವಾತನಿಗೆ ಹಾಡಿರಿ; ಇಗೋ, ಆತನು ತನ್ನ ಮಹಾ ಧ್ವನಿಯಿಂದ ಧ್ವನಿಗೈಯುತ್ತಾನೆ.