Ezekiel · chapter 11 · verse 10
Ezekiel 11:10 in Kannada
ನೀವು ಕತ್ತಿಯ ಮೂಲಕ ಬೀಳುವಿರಿ; ನಾನು ನಿಮ್ಮ ಇಸ್ರಾಯೇಲಿನ ಮೇರೆಯಲ್ಲಿ ನ್ಯಾಯತೀರಿಸುವೆನು; ಆಗ ನಾನೇ ಕರ್ತನೆಂದು ನಿಮಗೆ ತಿಳಿಯುವದು.
Neevu kattiya moolaka beeluviri; naanu nimma israayelina mereyalli nyaayateerisuvenu; aaga naane kartanendu nimage tiliyuvadu.
Ezekiel 11:10 in English
- King James Version (KJV)
- Ye shall fall by the sword; I will judge you in the border of Israel; and ye shall know that I [am] the LORD.
- World English Bible (WEB)
- You will fall by the sword. I will judge you in the border of Israel. Then you will know that I am the LORD.
- American Standard Version (ASV)
- Ye shall fall by the sword; I will judge you in the border of Israel; and ye shall know that I am Jehovah.
- Bible in Basic English (BBE)
- You will come to your death by the sword; and I will be your judge in the land of Israel; and you will be certain that I am the Lord.
- Darby Translation (DBY)
- Ye shall fall by the sword; I will judge you in the borders of Israel; and ye shall know that I [am] Jehovah.
- Webster's Bible (WBS)
- Ye shall fall by the sword; I will judge you in the border of Israel; and ye shall know that I [am] the LORD.
- Young's Literal Translation (YLT)
- By the sword ye do fall, On the border of Israel I do judge you, And ye have known that I [am] Jehovah.
Read in context
- 8ನೀವು ಕತ್ತಿಗೆ ಭಯಪಟ್ಟಿರಿ; ನಾನು ನಿಮ್ಮ ಮೇಲೆ ಒಂದು ಕತ್ತಿ ಯನ್ನು ತರುತ್ತೇನೆ ಎಂದು ದೇವರಾದ ಕರ್ತನು ಹೇಳುತ್ತಾನೆ.
- 9ನಾನು ನಿಮ್ಮನ್ನು ಅದರ ಮಧ್ಯದಿಂದ ಹೊರಗೆ ತೆಗೆದು ನಿಮ್ಮನ್ನು ಪರಕೀಯರ ಕೈಗಳಿಗೆ ಒಪ್ಪಿಸುವೆನು ಮತ್ತು ನಿಮ್ಮಲ್ಲಿ ನ್ಯಾಯ ತೀರ್ಪುಗಳನ್ನು ನಡಿಸುವೆನು.
- 10ನೀವು ಕತ್ತಿಯ ಮೂಲಕ ಬೀಳುವಿರಿ; ನಾನು ನಿಮ್ಮ ಇಸ್ರಾಯೇಲಿನ ಮೇರೆಯಲ್ಲಿ ನ್ಯಾಯತೀರಿಸುವೆನು; ಆಗ ನಾನೇ ಕರ್ತನೆಂದು ನಿಮಗೆ ತಿಳಿಯುವದು.
- 11ಈ ಪಟ್ಟಣವು ನಿಮ್ಮ ಹಂಡೆ ಯಾಗುವದಿಲ್ಲ, ನೀವು ಅದರ ಮಧ್ಯದಲ್ಲಿ ಮಾಂಸ ವಾಗುವದಿಲ್ಲ; ಆದರೆ ಇಸ್ರಾಯೇಲಿನ ಮೇರೆಯಲ್ಲಿ ನಿಮಗೆ ನ್ಯಾಯತೀರಿ ಸುವೆನು.
- 12ನಾನೇ ಕರ್ತನೆಂದು ನೀವು ತಿಳಿದುಕೊಳ್ಳು ವಿರಿ; ನೀವು ನನ್ನ ನಿಯಮಗಳಲ್ಲಿ ನಡೆಯಲಿಲ್ಲ; ನನ್ನ ನ್ಯಾಯಗಳನ್ನು ಪಾಲಿಸಲಿಲ್ಲ; ಆದರೂ ನಿಮ್ಮ ಸುತ್ತಲಿರುವ ಅನ್ಯ ಜನಾಂಗಗಳ ನ್ಯಾಯಗಳ ಪ್ರಕಾರ ಮಾಡಿದ್ದೀರಿ.
Cross references
- 2 Kings 14:25 2 ಅರಸುಗಳು 14:25ಇದ ಲ್ಲದೆ ಇಸ್ರಾಯೇಲಿನ ದೇವರಾದ ಕರ್ತನು ಗತ್ಹೇಫೆ ರಿನವನಾದ ಪ್ರವಾದಿಯಾಗಿರುವ ಅಮಿತ್ತೈನ ಮಗ ನಾದ ಯೋನನೆಂಬ ತನ್ನ ಸೇವಕನ ಮುಖಾಂತರ ಹೇಳಿದ ವಾಕ್ಯದ ಪ್ರಕಾರವೇ ಅವನು ಹಮಾತಿನ ಪ್ರವೇಶ ಮೊದಲುಗೊಂಡು ಬಯಲಿನ ಸಮುದ್ರದ ವರೆಗೂ ಇರುವ ಇಸ್ರಾಯೇಲಿನ ಮೇರೆಯನ್ನು ತಿರಿಗಿ ತಕ್ಕೊಂಡನು.
- Jeremiah 52:9–10 ಯೆರೆಮೀಯ 52:9–10ಆಗ ಅವರು ಅರಸನನ್ನು ಹಿಡಿದು, ಬಾಬೆಲಿನ ಅರಸನ ಬಳಿಗೆ ಹಮಾತ್ ದೇಶದಲ್ಲಿರುವ ರಿಬ್ಲಕ್ಕೆ ತಕ್ಕೊಂಡು ಹೋದರು; ಅಲ್ಲಿ ಅವನು ಅವನ ವಿಷಯ ನ್ಯಾಯತೀರ್ಪು ಮಾಡಿದನು. ಬಾಬೇಲಿನ ಅರಸನು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣುಗಳ ಮುಂದೆ ಕೊಂದು ಹಾಕಿಸಿದನು. ಯೆಹೂದದ ಪ್ರಧಾನರೆಲ್ಲ ರನ್ನೂ ಸಹ ರಿಬ್ಲದಲ್ಲಿ ಕೊಂದು ಹಾಕಿಸಿದನು.
- Ezekiel 6:7 ಯೆಹೆಜ್ಕೇಲನು 6:7ಹತವಾದವರು ನಿಮ್ಮ ಮಧ್ಯದಲ್ಲಿ ಬೀಳು ವರು, ಆಗ ನೀವು ನಾನೇ ಕರ್ತನೆಂದು ತಿಳಿಯುವಿರಿ.
- 2 Kings 25:19–21 2 ಅರಸುಗಳು 25:19–21ಇದಲ್ಲದೆ ಪಟ್ಟಣದೊಳಗಿಂದ ಯುದ್ಧಸ್ಥರ ಮೇಲಿದ್ದ ಒಬ್ಬ ಅಧಿ ಕಾರಿಯನ್ನೂ ಪಟ್ಟಣದಲ್ಲಿ ಸಿಕ್ಕಿದ ಅರಸನ ಸಮ್ಮುಖ ದಲ್ಲಿದ್ದ ಐದು ಮಂದಿಯನ್ನೂ ದೇಶದ ಜನರನ್ನೂ ಸೈನ್ಯದ ತರಬೇತು ಮಾಡಿದ ಪ್ರಧಾನನ ಲೇಖಕನೂ ಪಟ್ಟಣದಲ್ಲಿ ಸಿಕ್ಕಿದ ದೇಶದ ಜನರಾದ ಅರವತ್ತು ಮಂದಿಯನ್ನೂ ಅವನು ಹಿಡಿದನು. ಕಾವಲಿನ ವರ ಅಧಿಪತಿಯಾದ ನೆಬೂಜರದಾನನು ಇವರನ್ನು ತಕ್ಕೊಂಡು ರಿಬ್ಲದಲ್ಲಿದ್ದ ಬಾಬೆಲಿನ ಅರಸನ ಬಳಿಗೆ ಬಂದನು. ಬಾಬೆಲಿನ ಅರಸನು ಹಮಾತ್ ರಿಬ್ಲ ದಲ್ಲಿ ಅವರನ್ನು ಹೊಡೆದು ಕೊಂದುಹಾಕಿದನು. ಈ ಪ್ರಕಾರವೇ ಯೆಹೂದ್ಯರು ತಮ್ಮ ದೇಶದಲ್ಲಿಂದ ಸೆರೆ ಯಾಗಿ ಒಯ್ಯಲ್ಪಟ್ಟರು.
- Jeremiah 39:6 ಯೆರೆಮೀಯ 39:6ಬಾಬೆಲಿನ ಅರಸನು ಚಿದ್ಕೀಯನ ಕುಮಾರರನ್ನು ರಿಬ್ಲದಲ್ಲಿ ಅವನ ಕಣ್ಣುಗಳ ಮುಂದೆ ಕೊಂದುಹಾಕಿದನು; ಯೆಹೂದದ ಘನವುಳ್ಳವರೆಲ್ಲ ರನ್ನು ಸಹ ಬಾಬೆಲಿನ ಅರಸನು ಕೊಂದುಹಾಕಿದನು.
- Joshua 13:5 ಯೆಹೋಶುವ 13:5ಗೆಬಾಲ್ಯರ ಪ್ರಾಂತ್ಯ; ಸೂರ್ಯನು ಉದಯಿಸುವ ದಿಕ್ಕಿನಲ್ಲಿ ಹೆರ್ಮೋನ್ ಬೆಟ್ಟದ ಕೆಳಗೆ ಇರುವ ಬಾಳ್ಗಾದಿನಿಂದ ಹಾಮಾತಿನಲ್ಲಿ ಪ್ರವೇಶಿಸುವ ಸ್ಥಳದ ವರೆಗೂ ಇರುವ ಲೆಬನೋನೆಲ್ಲಾ ಇವುಗಳೇ.
- Ezekiel 13:21 ಯೆಹೆಜ್ಕೇಲನು 13:21ನಿಮ್ಮ ವಸ್ತ್ರಗಳನ್ನು ಹರಿದು ಬಿಟ್ಟು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುತ್ತೇನೆ. ಅವರು ಇನ್ನು ಮೇಲೆ ನಿಮ್ಮ ಕೈಗೆ ಬೇಟೆಯಾಗಿ ಸಿಕ್ಕು ವದಿಲ್ಲ. ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
- 1 Kings 8:65 1 ಅರಸುಗಳು 8:65ಅದೇ ಕಾಲದಲ್ಲಿ ಸೊಲೊಮೋನನೂ ಅವನ ಸಂಗಡ ಹಮಾತಿನ ಪ್ರದೇಶ ಮೊದಲುಗೊಂಡು ಐಗುಪ್ತದ ನದಿಯ ಮಟ್ಟಿಗೂ ಇರುವ ಮಹಾಸಭೆ ಯಾದ ಸಮಸ್ತ ಇಸ್ರಾಯೇಲ್ಯರೂ ನಮ್ಮ ದೇವರಾದ ಕರ್ತನ ಮುಂದೆ ಏಳೇಳು ಹದಿನಾಲ್ಕು ದಿವಸ ಹಬ್ಬವನ್ನು ಮಾಡಿದರು.ಎಂಟನೇ ದಿನದಲ್ಲಿ ಅವನು ಜನರಿಗೆ ಅಪ್ಪಣೆಯನ್ನು ಕೊಟ್ಟನು. ಆಗ ಅವರು ಅರಸನನ್ನು ಆಶೀರ್ವದಿಸಿ ಕರ್ತನು ತನ್ನ ಸೇವಕನಾದ ದಾವೀದನಿ ಗೋಸ್ಕರವೂ ತನ್ನ ಜನರಾದ ಇಸ್ರಾಯೇಲ್ಯರಿಗೋಸ್ಕ ರವೂ ಮಾಡಿದ ಸಮಸ್ತ ಉಪಕಾರದ ನಿಮಿತ್ತ ಸಂತೋಷಪಟ್ಟು ಹೃದಯದಲ್ಲಿ ಆನಂದವುಳ್ಳವರಾಗಿ ತಮ್ಮ ತಮ್ಮ ಡೇರೆಗಳಿಗೆ ಹೋದರು.
- Ezekiel 13:14 ಯೆಹೆಜ್ಕೇಲನು 13:14ನೀವು ಸುಣ್ಣ ಬಳಿದ ಗೋಡೆಯನ್ನು ನಾನು ಈಗ ಕೆಡವಿ ನೆಲಸಮ ಮಾಡಿ ಅದರ ಅಸ್ತಿವಾರ ವನ್ನು ಕಾಣದ ಹಾಗೆ ಮಾಡುವೆನು. ಅದು ಬಿದ್ದು ಹೋಗುವದು, ನೀವು ಅದರಲ್ಲಿ ನಾಶ ಮಾಡಲ್ಪಡು ವಿರಿ. ಆಗ ನಾನೇ ಕರ್ತನೆಂದು ನಿಮಗೆ ತಿಳಿದು ಬರುವದು.
- Ezekiel 13:23 ಯೆಹೆಜ್ಕೇಲನು 13:23ಆದದರಿಂದ ನೀವು ಇನ್ನು ಮೇಲೆ ವ್ಯರ್ಥವಾದದ್ದನ್ನು ಕಾಣುವದಿಲ್ಲ; ಭವಿಷ್ಯವನ್ನೂ ಕಾಣು ವದಿಲ್ಲ; ಯಾಕಂದರೆ ನಾನು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
- Psalm 9:16 ಕೀರ್ತನೆಗಳು 9:16ಕರ್ತನು ತಾನು ತೀರಿಸಿದ ನ್ಯಾಯತೀರ್ಪಿನಿಂದ ತನ್ನನ್ನು ಪ್ರಕಟಪಡಿಸಿಕೊಂಡಿ ದ್ದಾನೆ; ದುಷ್ಟನು ತನ್ನ ಕೈಕೆಲಸದಲ್ಲಿಯೇ ಸಿಕ್ಕಿಬಿದ್ದಿ ದ್ದಾನೆ. ಹಿಗ್ಗಾಯೋನ್. ಸೆಲಾ.
- Ezekiel 13:9 ಯೆಹೆಜ್ಕೇಲನು 13:9ವ್ಯರ್ಥವಾದದ್ದನ್ನು ದರ್ಶಿಸಿ, ಸುಳ್ಳು ಭವಿಷ್ಯಗಳನ್ನು ಹೇಳುವ ಪ್ರವಾದಿಗಳ ಮೇಲೆ ನನ್ನ ಕೈ ಮಾಡುವೆನು. ಅವರು ನನ್ನ ಜನರ ಸಭೆಯಲ್ಲಿ ಇರುವದೂ ಇಲ್ಲ, ಇಸ್ರಾಯೇಲನ ಮನೆತನದವರ ಪಟ್ಟಿಯಲ್ಲಿ ಬರೆಯಲ್ಪಡುವದೂ ಇಲ್ಲ; ಇಸ್ರಾಯೇಲಿನ ದೇಶದಲ್ಲಿ ಪ್ರವೇಶಿಸುವದೂ ಇಲ್ಲ; ನಾನೇ ದೇವರಾದ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.