Ezekiel · chapter 11 · verse 4
Ezekiel 11:4 in Kannada
ಆದದರಿಂದ ಓ ಮನುಷ್ಯ ಪುತ್ರನೇ, ಅವರಿಗೆ ವಿರೋಧವಾಗಿ ಪ್ರವಾದಿಸು.
Aadadarinda o manushya putrane, avarige virodhavaagi pravaadisu.
Ezekiel 11:4 in English
- King James Version (KJV)
- Therefore prophesy against them, prophesy, O son of man.
- World English Bible (WEB)
- Therefore prophesy against them. Prophesy, son of man.”
- American Standard Version (ASV)
- Therefore prophesy against them, prophesy, O son of man.
- Bible in Basic English (BBE)
- For this cause be a prophet against them, be a prophet, O son of man.
- Darby Translation (DBY)
- Therefore prophesy against them, prophesy, son of man.
- Webster's Bible (WBS)
- Therefore prophesy against them, prophesy, O son of man.
- Young's Literal Translation (YLT)
- Therefore prophesy concerning them, prophesy, son of man.'
Read in context
- 2ಆಮೇಲೆ ಆತನು ನನಗೆ ಹೇಳಿದ್ದೇನಂದರೆ --ಮನುಷ್ಯಪುತ್ರನೇ, ಈ ಪಟ್ಟಣದಲ್ಲಿ ಕುತಂತ್ರಗ ಳನ್ನು ಕಲ್ಪಿಸಿ ದುರಾಲೋಚನೆಗಳನ್ನು ಹೇಳಿ ಕೊಡುವ ವರಾದ ಈ ಜನರು--
- 3ಅದು ಸವಿಾಪವಲ್ಲ, ಮನೆಗ ಳನ್ನು ಕಟ್ಟೋಣ; ಈ ಪಟ್ಟಣವು ಅಂಡೆ, ನಾವು ಮಾಂಸವು ಎನ್ನುತ್ತಾರೆ.
- 4ಆದದರಿಂದ ಓ ಮನುಷ್ಯ ಪುತ್ರನೇ, ಅವರಿಗೆ ವಿರೋಧವಾಗಿ ಪ್ರವಾದಿಸು.
- 5ಕರ್ತನ ಆತ್ಮನು ನನ್ನ ಮೇಲೆ ಬಂದು ನನಗೆ ಹೇಳಿದ್ದೇನಂದರೆ--ಮಾತನಾಡು; ಕರ್ತನು--ಇಸ್ರಾ ಯೇಲಿನ ಮನೆತನದವರೇ, ನೀವು ಹೀಗೆ ಹೇಳಿದ್ದೀರಿ. ಯಾಕಂದರೆ ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಎಲ್ಲವುಗಳನ್ನೂ ನಾನು ಬಲ್ಲೆನು.
- 6ನೀವು ಈ ಪಟ್ಟಣದಲ್ಲಿ ನರಹತ್ಯವನ್ನು ಹೆಚ್ಚೆಚ್ಚಾಗಿ ಮಾಡಿ ಹತರಾದವರಿಂದ ಬೀದಿಗಳನ್ನು ತುಂಬಿಸಿದ್ದೀರಿ.
Cross references
- Hosea 8:1 ಹೋಶೇಯ 8:1ನಿನ್ನ ಬಾಯಿಗೆ ತುತೂರಿಯನ್ನು ಇಟ್ಟುಕೋ, ಅವರು ನನ್ನ ಒಡಂಬಡಿಕೆಯನ್ನು ವಿಾರಿ ನನ್ನ ನ್ಯಾಯಪ್ರಮಾಣಕ್ಕೆ ವಿರುದ್ಧವಾಗಿ ಅಪರಾಧ ಮಾಡಿದ್ದರಿಂದ ಅವನು ಹದ್ದಿನ ಹಾಗೆ ಕರ್ತನ ಆಲಯಕ್ಕೆ ವಿರುದ್ಧವಾಗಿ ಬರುತ್ತಾನೆ.
- Isaiah 58:1 ಯೆಶಾಯ 58:1ಗಟ್ಟಿಯಾಗಿ ಕೂಗು, ಹಿಂತೆಗೆಯಬೇಡ. ತುತೂರಿಯಂತೆ ನಿನ್ನ ಸ್ವರವನ್ನೆತ್ತು, ನನ್ನ ಜನರಿಗೆ ಅವರ ದ್ರೋಹವನ್ನೂ ಯಾಕೋಬನ ಮನೆಯವರಿಗೆ ಅವರ ಪಾಪವನ್ನೂ ತೋರಿಸು.
- Ezekiel 3:2–15 ಯೆಹೆಜ್ಕೇಲನು 3:2–15ಆಗ ನಾನು ನನ್ನ ಬಾಯನ್ನು ತೆರೆದೆನು, ಆತನು ನನಗೆ ಆ ಸುರಳಿಯನ್ನು ತಿನ್ನಿಸಿದನು. ಆಗ ಆತನು ನನಗೆ ಹೇಳಿದ್ದೇನಂದರೆ--ಮನುಷ್ಯ ಪುತ್ರನೇ, ನಾನು ಕೊಡುವ ಈ ಸುರಳಿಯನ್ನು ತಿಂದು ಹೊಟ್ಟೆಯ ಕರುಳುಗಳನ್ನು ತುಂಬಿಸಿಕೋ ಅಂದನು. ಆಗ ನಾನು ಅದನ್ನು ತಿನ್ನಲು ಅದು ನನ್ನ ಬಾಯಲ್ಲಿ ಜೇನಿನ ಹಾಗೆ ಸಿಹಿಯಾಗಿತ್ತು. ನನಗೆ ಆತನು--ಮನುಷ್ಯಪುತ್ರನೇ, ಹೋಗು; ಇಸ್ರಾಯೇಲ್ಯರ ಮನೆಯವರ ಬಳಿಗೆ ಹೋಗಿ ಅವರ ಸಂಗಡ ನನ್ನ ಮಾತುಗಳನ್ನು ಮಾತನಾಡು. ನೀನು ಕಠಿಣವಾದ ಭಾಷೆಯಲ್ಲಿ ಸೋಜಿಗದ ಮಾತುಗಳ ನ್ನಾಡುವ ಜನರ ಬಳಿಗೆ ಕಳುಹಿಸದೆ ಇಸ್ರಾಯೇಲಿನ ಮನೆಯವರ ಬಳಿಗೆ ಕಳುಹಿಸಲ್ಪಟ್ಟಿರುವಿ. ನೀನು ಕಠಿಣ ಭಾಷೆಯಲ್ಲಿ ಸೋಜಿಗದ ಮಾತುಗಳನ್ನಾಡುವವರ ಬಳಿಗೆ ಕಳುಹಿಸಲ್ಪಟ್ಟವನಲ್ಲ; ಇಂಥವರ ಕಡೆಗೆ ನಾನು ನಿನ್ನನ್ನು ಕಳುಹಿಸಿದ್ದ ಪಕ್ಷದಲ್ಲಿ ನಿಶ್ಚಯವಾಗಿ ಅವರು ನಿನ್ನ ಮಾತಿಗೆ ಕಿವಿಗೊಡುತ್ತಿದ್ದರು. ಆದರೆ ಇಸ್ರಾ ಯೇಲಿನ ಮನೆತನದವರು ನಿನಗೆ ಕಿವಿಗೊಡುವದಿಲ್ಲ; ಅವರು ನನಗೆ ಕಿವಿಗೊಟ್ಟಿಲ್ಲ. ಯಾಕಂದರೆ ಎಲ್ಲಾ ಇಸ್ರಾಯೇಲಿನ ಮನೆತನದವರು ಕಠಿಣ ಹೃದಯ ದವರೂ ನಿರ್ಲಜ್ಜರೂ (ನಾಚಿಕೆಗೆಟ್ಟವರೂ) ಆಗಿದ್ದಾರೆ. ಇಗೋ, ನಾನು ನಿನ್ನ ಮುಖವನ್ನು ಅವರ ಮುಖಗಳ ಎದುರಿಗೆ ಕಠಿಣ ಮಾಡಿದ್ದೇನೆ; ಮತ್ತು ನಿನ್ನ ಹಣೆಯನ್ನು ಅವರ ಹಣೆಗಳ ಎದುರಾಗಿ ಬಲಪಡಿಸಿದ್ದೇನೆ. ನಾನು ನಿನ್ನ ಹಣೆಯನ್ನು ಅಭೇದ್ಯವಾದ ಕಲ್ಲಿಗಿಂತ ಗಟ್ಟಿಯಾಗಿ ವಜ್ರದಂತೆ ಮಾಡಿದ್ದೇನೆ; ಇಲ್ಲವೆ ತಿರುಗಿ ಬೀಳುವ ಮನೆತನದವರಾದರೂ ನೀನು ಅವರಿಗೆ ಭಯಪಡ ಬೇಡ; ಮತ್ತು ಅವರ ನೋಟಕ್ಕೆ ನೀನು ಗಾಬರಿಯಾಗ ಬೇಡ. ಇದಲ್ಲದೆ ಆತನು ನನಗೆ--ನರಪುತ್ರನೇ, ನಾನು ನಿನ್ನ ಸಂಗಡ ಆಡುವ ಈ ನನ್ನ ಮಾತುಗಳನ್ನೆಲಾ ನಿನ್ನ ಕಿವಿಗಳಿಂದ ಕೇಳಿ ಹೃದಯದಲ್ಲಿ ಅಂಗೀಕರಿಸಿಕೋ. ಹೋಗು, ಸೆರೆಯಾಗಿರುವ ನಿನ್ನ ಜನರ ಮಕ್ಕಳ ಬಳಿಗೆ ಹೋಗಿ, ಅವರ ಸಂಗಡ ಮಾತನಾಡು, ಅವರು ಕೇಳಿದರೂ ಕೇಳದಿದ್ದರೂ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು. ಆಮೇಲೆ ಆತ್ಮನು ನನ್ನನ್ನು ಮೇಲೆ ತೆಗೆದುಕೊಂಡು ಹೋದನು. ನಾನು--ಕರ್ತನ ಮಹಿಮೆ ತನ್ನ ಸ್ಥಳ ದೊಳಗಿಂದ ಹರಸಲ್ಪಡಲೆಂದು ಘೋಷಿಸುವ ಒಂದು ಮಹಾಧ್ವನಿಯು ನನ್ನ ಹಿಂದೆ ನುಗ್ಗಿಕೊಂಡು ಬರುವ ದನ್ನು ನಾನು ಕೇಳಿಸಿಕೊಂಡೆನು. ಇದಲ್ಲದೆ ನಾನು ಒಂದಕ್ಕೊಂದು ತಗಲುವ ಆ ಜೀವಿಗಳ ರೆಕ್ಕೆಗಳ ಶಬ್ದ ವನ್ನೂ ಅವುಗಳ ಬಳಿಯಲ್ಲಿದ್ದ ಚಕ್ರಗಳ ಶಬ್ದವನ್ನೂ ಮಹಾಘೋಷದ ಶಬ್ದವು ನುಗ್ಗಿ ಬರುತ್ತಿರುವದನ್ನೂ ಕೇಳಿದೆನು. ಹೀಗೆ ಆತ್ಮನು ನನ್ನನ್ನು ಎತ್ತಿಕೊಂಡು ಹೋದನು; ನಾನು ಕಹಿಯಲ್ಲಿಯೂ ಆತ್ಮನ ಉರಿಯ ಲ್ಲಿಯೂ ಹೋದೆನು; ಅದರೆ ಕರ್ತನ ಕೈ ನನ್ನ ಮೇಲೆ ಬಲವಾಗಿತ್ತು. ಆಮೇಲೆ ನಾನು ಕೆಬಾರ್ ನದಿಯ ದಡದಲ್ಲಿ ವಾಸಿಸುತ್ತಿದ್ದ ತೇಲ್ ಆಬೀಬಿನ ಸೆರೆಯವರ ಬಳಿಗೆ ಬಂದೆನು; ಅವರು ಕುಳಿತಿದ್ದ ಕಡೆಗೆ ನಾನು ಕುಳಿತು ಏಳು ದಿವಸಗಳು ಅವರ ಜೊತೆ ಆಶ್ಚರ್ಯವಾಗಿ ಉಳಿದೆನು.
- Hosea 6:5 ಹೋಶೇಯ 6:5ಆದದರಿಂದ ನಾನು ಪ್ರವಾದಿಗಳ ಮುಖಾಂತರ ಕಡಿದುಬಿಟ್ಟು ನನ್ನ ಬಾಯಿ ಮಾತುಗಳಿಂದ ಅವರನ್ನು ಕೊಂದುಹಾಕಿದ್ದೇನೆ; ನಿನ್ನ ನ್ಯಾಯತೀರ್ಪುಗಳು ಬೆಳಕಿನ ಹಾಗೆ ಹೊರಟವು.
- Ezekiel 3:17–21 ಯೆಹೆಜ್ಕೇಲನು 3:17–21ಮನುಷ್ಯಪುತ್ರನೇ, ನಾನು ನಿನ್ನನ್ನು ಇಸ್ರಾಯೇ ಲಿನ ಮನೆಯನ್ನು ಕಾಯಲು ಕಾವಲುಗಾರನನ್ನಾಗಿ ಮಾಡಿದ್ದೇನೆ. ಆದದರಿಂದ ನನ್ನ ವಾಕ್ಯವನ್ನು ನನ್ನ ಬಾಯಿಂದ ಕೇಳಿ ನನ್ನಿಂದ ಅವರಿಗೆ ಎಚ್ಚರಿಕೆ ಕೊಡು. ನಾನು ದುಷ್ಟನಿಗೆ--ನೀನು ನಿಶ್ಚಯವಾಗಿ ಸಾಯುವಿ ಯೆಂದು ಹೇಳುವಾಗ ನೀನು ಅವನನ್ನು ಎಚ್ಚರಿಸದೆ ಅವನನ್ನು ಬದುಕಿಸುವ ಹಾಗೆ ದುಷ್ಟನನ್ನು ಅವನ ದುಷ್ಟಮಾರ್ಗದ ವಿಷಯದಲ್ಲಿ ಎಚ್ಚರಿಸಿ ಮಾತನಾಡದೆ ಹೋದರೆ ಆ ದುಷ್ಟನು ತನ್ನ ಅಕ್ರಮದಲ್ಲೇ ಸಾಯು ವನು. ಆದರೆ ಅವನ ರಕ್ತವನ್ನು ನಿನ್ನ ಕೈಯಿಂದ ದುಷ್ಟತ್ವ ಕ್ಕಾಗಿ ನಾನು ವಿಚಾರಿಸುವೆನು. ಆದರೆ ನೀನು ದುಷ್ಟ ನನ್ನು ಎಚ್ಚರಿಸಿದ ಮೇಲೆ ಅವನು ತನ್ನ ದುಷ್ಟತ್ವವನ್ನೂ ದುಷ್ಟಮಾರ್ಗವನ್ನೂ ಬಿಟ್ಟು ತಿರುಗದೆ ಹೋದರೆ ಅವನು ತನ್ನ ದುಷ್ಟತ್ವದಲ್ಲಿಯೇ ಸಾಯುವನು. ಆದರೆ ನೀನು ನಿನ್ನ ಪ್ರಾಣವನ್ನು ಉಳಿಸಿಕೊಂಡಿರುವಿ. ಮತ್ತೆ ಯಾವಾಗ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡುವನೋ, ಆಗ ನಾನು ಅವನ ಮುಂದೆ ಅಡಚಣೆಯನ್ನು ಇಡುವೆನು, ಅವನು ಸಾಯು ವನು; ನೀನು ಅವನನ್ನು ಎಚ್ಚರಿಸದೆ ಇದ್ದದರಿಂದಲೇ ಅವನು ತನ್ನ ಪಾಪದಲ್ಲಿ ಸಾಯುವನು; ಅವನು ಮಾಡಿರುವ ಅವನ ನೀತಿಯು ಜ್ಞಾಪಕ ಮಾಡಲ್ಪಡು ವದಿಲ್ಲ; ಆದರೆ ಅವನ ರಕ್ತವನ್ನು ನಾನು ನಿನ್ನ ಕೈಯಿಂದ ವಿಚಾರಿಸುವೆನು; ಆದಾಗ್ಯೂ ನೀತಿವಂತನು ಪಾಪ ಮಾಡದ ಹಾಗೆ ನೀನು ನೀತಿವಂತನನ್ನು ಎಚ್ಚರಿಸುವಾಗ ಅವನು ಪಾಪಮಾಡದೆ ಎಚ್ಚರಿಕೆಯಾದದರಿಂದ ನಿಶ್ಚಯವಾಗಿ ಬದುಕುವನು; ನೀನು ನಿನ್ನ ಪ್ರಾಣವನ್ನು ಸಹ ಉಳಿಸಿಕೊಂಡಿರುವಿ.
- Ezekiel 21:2 ಯೆಹೆಜ್ಕೇಲನು 21:2ಮನುಷ್ಯಪುತ್ರನೇ, ನೀನು ಯೆರೂಸಲೇಮಿಗೆ ಅಭಿಮುಖನಾಗಿ ಅಲ್ಲಿನ ಪರಿಶುದ್ಧ ಸ್ಥಳಗಳ ಕಡೆಗೆ ಮಾತನಾಡುತ್ತಾ ಇಸ್ರಾ ಯೇಲ್ ದೇಶಕ್ಕೆ ವಿರುದ್ಧವಾಗಿ ಪ್ರವಾದಿಸು.
- Ezekiel 20:46–47 ಯೆಹೆಜ್ಕೇಲನು 20:46–47ಮನುಷ್ಯಪುತ್ರನೇ, ದಕ್ಷಿಣದ ಕಡೆಗೆ ಮುಖಮಾಡಿ ತೆಂಕಣದ ಕಡೆಗೆ ಮಾತ ನಾಡು; ದಕ್ಷಿಣ ಬಯಲು ಅರಣ್ಯಕ್ಕೆ ವಿರೋಧವಾಗಿ ಪ್ರವಾದಿಸು. ದಕ್ಷಿಣದ ಅರಣ್ಯಕ್ಕೆ ಹೇಳಬೇಕಾದ ದ್ದೇನಂದರೆ--ಕರ್ತನ ವಾಕ್ಯವನ್ನು ಕೇಳು, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನಲ್ಲಿ ಬೆಂಕಿ ಹಚ್ಚುತ್ತೇನೆ; ಅದು ನಿನ್ನಲ್ಲಿರುವ ಎಲ್ಲಾ ಹಸೀ ಮರಗಳನ್ನು ಮತ್ತು ಎಲ್ಲಾ ಒಣಮರಗಳನ್ನು ತಿಂದುಬಿಡುವದು; ಉರಿಯುವ ಉರಿ ಆರಿಹೋಗು ವದಿಲ್ಲ; ದಕ್ಷಿಣ ಮೊದಲುಗೊಂಡು ಉತ್ತರದ ವರೆಗೂ ಎಲ್ಲಾ ಮುಖಗಳು ಅದರಲ್ಲಿ ಸುಟ್ಟು ಹೋಗುವವು.
- Ezekiel 25:2 ಯೆಹೆಜ್ಕೇಲನು 25:2ಮನುಷ್ಯಪುತ್ರನೇ, ನೀನು ಅಮ್ಮೋನನ ಕುಮಾರರಿಗೆ ಅಭಿಮುಖನಾಗಿ ಅವರಿಗೆ ವಿರೋಧವಾಗಿ ಪ್ರವಾದಿಸು;