Ezekiel · chapter 11 · verse 6
Ezekiel 11:6 in Kannada
ನೀವು ಈ ಪಟ್ಟಣದಲ್ಲಿ ನರಹತ್ಯವನ್ನು ಹೆಚ್ಚೆಚ್ಚಾಗಿ ಮಾಡಿ ಹತರಾದವರಿಂದ ಬೀದಿಗಳನ್ನು ತುಂಬಿಸಿದ್ದೀರಿ.
Neevu ee pattanadalli narahatyavannu hechchechchaagi maadi hataraadavarinda beedigalannu tumbisiddeeri.
Ezekiel 11:6 in English
- King James Version (KJV)
- Ye have multiplied your slain in this city, and ye have filled the streets thereof with the slain.
- World English Bible (WEB)
- You have multiplied your slain in this city, and you have filled its streets with the slain.”
- American Standard Version (ASV)
- Ye have multiplied your slain in this city, and ye have filled the streets thereof with the slain.
- Bible in Basic English (BBE)
- You have made great the number of your dead in this town, you have made its streets full of dead men.
- Darby Translation (DBY)
- Ye have multiplied your slain in this city, and ye have filled the streets thereof with the slain.
- Webster's Bible (WBS)
- Ye have multiplied your slain in this city, and ye have filled its streets with the slain.
- Young's Literal Translation (YLT)
- Ye multiplied your wounded in this city, And filled its out-places with the wounded.
Read in context
- 4ಆದದರಿಂದ ಓ ಮನುಷ್ಯ ಪುತ್ರನೇ, ಅವರಿಗೆ ವಿರೋಧವಾಗಿ ಪ್ರವಾದಿಸು.
- 5ಕರ್ತನ ಆತ್ಮನು ನನ್ನ ಮೇಲೆ ಬಂದು ನನಗೆ ಹೇಳಿದ್ದೇನಂದರೆ--ಮಾತನಾಡು; ಕರ್ತನು--ಇಸ್ರಾ ಯೇಲಿನ ಮನೆತನದವರೇ, ನೀವು ಹೀಗೆ ಹೇಳಿದ್ದೀರಿ. ಯಾಕಂದರೆ ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಎಲ್ಲವುಗಳನ್ನೂ ನಾನು ಬಲ್ಲೆನು.
- 6ನೀವು ಈ ಪಟ್ಟಣದಲ್ಲಿ ನರಹತ್ಯವನ್ನು ಹೆಚ್ಚೆಚ್ಚಾಗಿ ಮಾಡಿ ಹತರಾದವರಿಂದ ಬೀದಿಗಳನ್ನು ತುಂಬಿಸಿದ್ದೀರಿ.
- 7ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನೀವು ಅದರ ಮಧ್ಯದಲ್ಲಿ ಇಟ್ಟಿರುವ ಹತರಾದವರು ಅವರೇ ಮಾಂಸವಾಗಿದ್ದಾರೆ, ಈ ಪಟ್ಟಣವು ಹಂಡೆಯಾಗಿದೆ. ಆದರೆ ನಾನು ನಿಮ್ಮನ್ನು ಆದರಿಂದ ಹೊರಗೆ ತರುತ್ತೇನೆ.
- 8ನೀವು ಕತ್ತಿಗೆ ಭಯಪಟ್ಟಿರಿ; ನಾನು ನಿಮ್ಮ ಮೇಲೆ ಒಂದು ಕತ್ತಿ ಯನ್ನು ತರುತ್ತೇನೆ ಎಂದು ದೇವರಾದ ಕರ್ತನು ಹೇಳುತ್ತಾನೆ.
Cross references
- Ezekiel 7:23 ಯೆಹೆಜ್ಕೇಲನು 7:23ಒಂದು ಸರಪಳಿಯನ್ನು ಮಾಡು; ಯಾಕಂದರೆ ದೇಶವು ರಕ್ತಾಪರಾಧದಿಂದ ತುಂಬಿದೆ ಮತ್ತು ನಗರವು ಹಿಂಸೆಯಿಂದ ತುಂಬಿದೆ.
- Ezekiel 22:2–6 ಯೆಹೆಜ್ಕೇಲನು 22:2–6ಈಗ ಮನುಷ್ಯ ಪುತ್ರನೇ, ನೀನು ನ್ಯಾಯತೀರಿಸುವೆಯಾ? ರಕ್ತಾಪರಾಧ ವುಳ್ಳ ಪಟ್ಟಣಕ್ಕೆ ನ್ಯಾಯತೀರಿಸುವೆಯಾ ಹೌದು ಅದರ ಅಸಹ್ಯವಾದವುಗಳನ್ನೆಲ್ಲಾ ಅದಕ್ಕೆ ತಿಳಿಸುವಿ. ನೀನು ಹೇಳಬೇಕಾದದ್ದೇನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಪಟ್ಟಣವು ಅದರ ಮಧ್ಯದಲ್ಲಿ ಅದರ ಕಾಲ ಬರುವ ಹಾಗೆ ರಕ್ತವನ್ನು ಚೆಲ್ಲುತ್ತದೆ. ತನ್ನನ್ನು ಅಶುದ್ಧ ಮಾಡುವ ಹಾಗೆ ತನ್ನಲ್ಲಿ ವಿಗ್ರಹಗಳನ್ನು ಮಾಡಿಕೊಂಡಿದೆ. ನೀನು ಚೆಲ್ಲಿದ ನಿನ್ನ ರಕ್ತದಿಂದ ನಿನಗೆ ಅಪರಾಧ ಬಂದಿತು; ನೀನು ಮಾಡಿದ ನಿನ್ನ ವಿಗ್ರಹಗಳಿಂದ ನೀನು ಅಶುದ್ಧವಾದೆ; ನಿನ್ನ ದಿನಗಳನ್ನು ಸವಿಾಪಿಸಿರುವೆ; ನಿನ್ನ ವರುಷಗಳನ್ನು ಮುಟ್ಟಿರುವೆ. ಆದದರಿಂದ ನಿನ್ನನ್ನು ಅನ್ಯಜನಾಂಗಗಳಿಗೆ ನಾಚಿಕೆ ಯಾಗಿಯೂ ಎಲ್ಲಾ ದೇಶಗಳಿಗೆ ನಿಂದೆಯಾಗಿಯೂ ಮಾಡಿದ್ದೇನೆ. ಅಶುದ್ಧ ಹೆಸರುಳ್ಳವಳೇ, ಬಹಳ ತೊಂದರೆಗೊಳಗಾದವಳೇ, ನಿನಗೆ ಹತ್ತಿರದವರೂ ದೂರದವರೂ ನಿಂದಿಸುವರು. ಇಗೋ ಇಸ್ರಾ ಯೇಲಿನ ಪ್ರಭುಗಳಲ್ಲಿ ಪ್ರತಿಯೊಬ್ಬನು ತನ್ನ ತನ್ನ ಶಕ್ತ್ಯಾನುಸಾರವಾಗಿ ರಕ್ತವನ್ನು ನಿನ್ನ ಮೇಲೆ ಚೆಲ್ಲುತ್ತಲೇ ಇದ್ದಾನೆ.
- Ezekiel 22:12 ಯೆಹೆಜ್ಕೇಲನು 22:12ನಿನ್ನಲ್ಲಿ ರಕ್ತ ಚೆಲ್ಲುವ ಹಾಗೆ ಲಂಚತಿಂದಿದ್ದಾರೆ; ಬಡ್ಡಿಯನ್ನೂ ಲಾಭವನ್ನೂ ತೆಗೆದುಕೊಂಡಿದ್ದಾರೆ; ಬಲಾತ್ಕಾರದಿಂದ ನಿನ್ನ ನೆರೆಯವರಲ್ಲಿ ದುರ್ಲಾಭಮಾಡಿಕೊಂಡಿದ್ದಾರೆ; ನನ್ನನ್ನು ಮರೆತುಬಿಟ್ಟಿ ದ್ದಾರೆಂದು ದೇವರಾದ ಕರ್ತನು ಹೇಳುತ್ತಾನೆ.
- Ezekiel 22:27 ಯೆಹೆಜ್ಕೇಲನು 22:27ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ ಪ್ರಾಣ ಗಳನ್ನು ನುಂಗುವ ಹಾಗೆ ಬೇಟೆಯ ತೋಳಗಳಂತಿ ದ್ದಾರೆ.
- Isaiah 1:15 ಯೆಶಾಯ 1:15ನೀವು ನಿಮ್ಮ ಕೈಗಳನ್ನು ಚಾಚಲು ನಾನು ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿ ದರೂ ನಾನು ಕೇಳೆನು, ನಿಮ್ಮ ಕೈಗಳು ರಕ್ತದಿಂದ ತುಂಬಿಯವೆ.
- Micah 3:2–3 ಮೀಕ 3:2–3ಒಳ್ಳೇದನ್ನು ಹಗೆಮಾಡಿ ಕೆಟ್ಟದ್ದನ್ನು ಪ್ರೀತಿಮಾಡುವವರೇ, ಅವರ ಮೇಲಿನಿಂದ ಅವರ ಚರ್ಮವನ್ನೂ ಅವರ ಎಲುಬುಗಳ ಮೇಲಿನಿಂದ ಅವರ ಮಾಂಸವನ್ನೂ ಕಿತ್ತುಕೊಳ್ಳು ವವರೇ, ನನ್ನ ಜನರ ಮಾಂಸವನ್ನು ತಿಂದು ಅವರ ಚರ್ಮವನ್ನು ಸುಲಿದು ಅವರ ಎಲುಬುಗಳನ್ನು ಮುರಿದು ಮಡಿಕೆಯಂತೆ ಅವರ ಮಾಂಸವನ್ನು ತುಂಡು ಮಾಡಿ ಕೊಪ್ಪರಿಗೆಯಲ್ಲಿ ಹಾಕುತ್ತೀರಿ.
- Hosea 4:2–3 ಹೋಶೇಯ 4:2–3ಆಣೆಯಿಡುವದೂ ಸುಳ್ಳು ಹೇಳು ವದೂ ಕೊಲ್ಲುವದೂ ಕದಿಯುವದೂ ವ್ಯಭಿಚಾರ ಮಾಡುವದೂ ಹೆಚ್ಚಾಗಿಬಿಟ್ಟಿವೆ; ರಕ್ತಕ್ಕೆ ರಕ್ತ ಸೇರುತ್ತದೆ; ಆದದರಿಂದ ದೇಶವು ದುಃಖಪಡುವದು; ಅದರಲ್ಲಿ ವಾಸಿಸುವ ಪ್ರತಿಯೊಬ್ಬನೂ ಕುಗ್ಗಿ ಹೋಗುವನು; ಅಡವಿಯ ಮೃಗಗಳೂ ಆಕಾಶದ ಪಕ್ಷಿಗಳೂ ಸಮುದ್ರದ ವಿಾನುಗಳೂ ತೆಗೆದುಹಾಕಲ್ಪಡುವವು.
- Ezekiel 9:9 ಯೆಹೆಜ್ಕೇಲನು 9:9ಆಗ ಆತನು ನನಗೆ ಹೇಳಿದ್ದೇನಂದರೆಇಸ್ರಾಯೇಲಿನ ಮತ್ತು ಯೆಹೂದ ಮನೆತನದವರ ಅಕ್ರಮವು ಅತಿ ದೊಡ್ಡದಾಗಿದೆ; ದೇಶವು ರಕ್ತದಿಂದ ತುಂಬಿದೆ; ಪಟ್ಟಣವು ವಕ್ರತ್ವದಿಂದ ತುಂಬಿದೆ; ಯಾಕಂದರೆ ಕರ್ತನು ಭೂಮಿಯನ್ನು ತೊರೆದುಬಿಟ್ಟಿದ್ದಾನೆ; ಕರ್ತನು ನೋಡುವದಿಲ್ಲ ಎಂದು ಅವರು ಹೇಳುತ್ತಾರೆ.
- Lamentations 4:13 ಪ್ರಲಾಪಗಳು 4:13ಅವಳ ಪ್ರವಾದಿಗಳ ಪಾಪಗಳಿಗೋಸ್ಕರವೂ ಅವಳ ಯಾಜಕರ ಅಕ್ರಮಗಳಿ ಗೋಸ್ಕರವೂ ಹೀಗಾಯಿತು. ಯಾಕಂದರೆ ಇವರು ನೀತಿವಂತರ ರಕ್ತವನ್ನು ಅವಳ ಮಧ್ಯ ಚೆಲ್ಲಿದ್ದರು.
- Ezekiel 22:9 ಯೆಹೆಜ್ಕೇಲನು 22:9ನಿನ್ನಲ್ಲಿ ರಕ್ತಚೆಲ್ಲುವ ಹಾಗೆ ಚಾಡಿ ಹೇಳುವ ಜನ ಇದ್ದಾರೆ; ಬೆಟ್ಟಗಳ ಮೇಲೆ ತಿನ್ನುವವರಿದ್ದಾರೆ; ದುರಾ ಚಾರಿಗಳು ನಿನ್ನ ಮಧ್ಯದಲ್ಲಿದ್ದಾರೆ.
- Matthew 23:35 ಮತ್ತಾಯನು 23:35ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು.
- Jeremiah 2:30 ಯೆರೆಮೀಯ 2:30ನಾನು ನಿಮ್ಮ ಮಕ್ಕಳನ್ನು ಹೊಡೆದದ್ದು ವ್ಯರ್ಥವಾಯಿತು. ಅವರು ಶಿಕ್ಷೆಯನ್ನು ತಕ್ಕೊಳ್ಳಲಿಲ್ಲ. ನಿಮ್ಮ ಸ್ವಂತ ಕತ್ತಿಯು ನಾಶಮಾಡುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿವೆ.