Ezekiel · chapter 11 · verse 7
Ezekiel 11:7 in Kannada
ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನೀವು ಅದರ ಮಧ್ಯದಲ್ಲಿ ಇಟ್ಟಿರುವ ಹತರಾದವರು ಅವರೇ ಮಾಂಸವಾಗಿದ್ದಾರೆ, ಈ ಪಟ್ಟಣವು ಹಂಡೆಯಾಗಿದೆ. ಆದರೆ ನಾನು ನಿಮ್ಮನ್ನು ಆದರಿಂದ ಹೊರಗೆ ತರುತ್ತೇನೆ.
Aadadarinda devaraada kartanu heege helu ttaane--neevu adara madhyadalli ittiruva hataraadavaru avare maansavaagiddaare, ee pattanavu handeyaagide. Aadare naanu nimmannu aadarinda horage taruttene.
Ezekiel 11:7 in English
- King James Version (KJV)
- Therefore thus saith the Lord GOD; Your slain whom ye have laid in the midst of it, they [are] the flesh, and this [city is] the caldron: but I will bring you forth out of the midst of it.
- World English Bible (WEB)
- “‘Therefore the Lord GOD says: “Your slain whom you have laid in the middle of it, they are the meat, and this is the cauldron; but you will be brought out of the middle of it.
- American Standard Version (ASV)
- Therefore thus saith the Lord Jehovah: Your slain whom ye have laid in the midst of it, they are the flesh, and this [city] is the caldron; but ye shall be brought forth out of the midst of it.
- Bible in Basic English (BBE)
- For this reason the Lord has said: Your dead whom you have put down in its streets, they are the flesh, and this town is the cooking-pot: but I will make you come out from inside it.
- Darby Translation (DBY)
- Therefore thus saith the Lord Jehovah: Your slain whom ye have laid in the midst of it, they are the flesh, and it is the cauldron; but you will I bring forth out of the midst of it.
- Webster's Bible (WBS)
- Therefore thus saith the Lord God; Your slain whom ye have laid in the midst of it, they [are] the flesh, and this [city is] the caldron: but I will bring you forth out of the midst of it.
- Young's Literal Translation (YLT)
- Therefore, thus said the Lord Jehovah: Your wounded whom ye placed in its midst, They [are] the flesh, and it [is] the pot, And you he hath brought out from its midst.
Read in context
- 5ಕರ್ತನ ಆತ್ಮನು ನನ್ನ ಮೇಲೆ ಬಂದು ನನಗೆ ಹೇಳಿದ್ದೇನಂದರೆ--ಮಾತನಾಡು; ಕರ್ತನು--ಇಸ್ರಾ ಯೇಲಿನ ಮನೆತನದವರೇ, ನೀವು ಹೀಗೆ ಹೇಳಿದ್ದೀರಿ. ಯಾಕಂದರೆ ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಎಲ್ಲವುಗಳನ್ನೂ ನಾನು ಬಲ್ಲೆನು.
- 6ನೀವು ಈ ಪಟ್ಟಣದಲ್ಲಿ ನರಹತ್ಯವನ್ನು ಹೆಚ್ಚೆಚ್ಚಾಗಿ ಮಾಡಿ ಹತರಾದವರಿಂದ ಬೀದಿಗಳನ್ನು ತುಂಬಿಸಿದ್ದೀರಿ.
- 7ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನೀವು ಅದರ ಮಧ್ಯದಲ್ಲಿ ಇಟ್ಟಿರುವ ಹತರಾದವರು ಅವರೇ ಮಾಂಸವಾಗಿದ್ದಾರೆ, ಈ ಪಟ್ಟಣವು ಹಂಡೆಯಾಗಿದೆ. ಆದರೆ ನಾನು ನಿಮ್ಮನ್ನು ಆದರಿಂದ ಹೊರಗೆ ತರುತ್ತೇನೆ.
- 8ನೀವು ಕತ್ತಿಗೆ ಭಯಪಟ್ಟಿರಿ; ನಾನು ನಿಮ್ಮ ಮೇಲೆ ಒಂದು ಕತ್ತಿ ಯನ್ನು ತರುತ್ತೇನೆ ಎಂದು ದೇವರಾದ ಕರ್ತನು ಹೇಳುತ್ತಾನೆ.
- 9ನಾನು ನಿಮ್ಮನ್ನು ಅದರ ಮಧ್ಯದಿಂದ ಹೊರಗೆ ತೆಗೆದು ನಿಮ್ಮನ್ನು ಪರಕೀಯರ ಕೈಗಳಿಗೆ ಒಪ್ಪಿಸುವೆನು ಮತ್ತು ನಿಮ್ಮಲ್ಲಿ ನ್ಯಾಯ ತೀರ್ಪುಗಳನ್ನು ನಡಿಸುವೆನು.
Cross references
- Micah 3:2–3 ಮೀಕ 3:2–3ಒಳ್ಳೇದನ್ನು ಹಗೆಮಾಡಿ ಕೆಟ್ಟದ್ದನ್ನು ಪ್ರೀತಿಮಾಡುವವರೇ, ಅವರ ಮೇಲಿನಿಂದ ಅವರ ಚರ್ಮವನ್ನೂ ಅವರ ಎಲುಬುಗಳ ಮೇಲಿನಿಂದ ಅವರ ಮಾಂಸವನ್ನೂ ಕಿತ್ತುಕೊಳ್ಳು ವವರೇ, ನನ್ನ ಜನರ ಮಾಂಸವನ್ನು ತಿಂದು ಅವರ ಚರ್ಮವನ್ನು ಸುಲಿದು ಅವರ ಎಲುಬುಗಳನ್ನು ಮುರಿದು ಮಡಿಕೆಯಂತೆ ಅವರ ಮಾಂಸವನ್ನು ತುಂಡು ಮಾಡಿ ಕೊಪ್ಪರಿಗೆಯಲ್ಲಿ ಹಾಕುತ್ತೀರಿ.
- Ezekiel 24:3–13 ಯೆಹೆಜ್ಕೇಲನು 24:3–13ತಿರುಗಿ ಬೀಳುವ ಮನೆತನ ದವರಿಗೆ ಸಾಮ್ಯವನ್ನು ತಿಳಿಸಿ ಅವರಿಗೆ ಹೇಳಬೇಕಾದದ್ದೇ ನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಹಂಡೆಯನ್ನು ಒಲೆಯ ಮೇಲಿಡು, ಅದರಲ್ಲಿ ನೀರನ್ನು ಸುರಿ. ತೊಡೆಯನ್ನೂ ಹೆಗಲನ್ನೂ ಎಲ್ಲಾ ಒಳ್ಳೇ ತುಂಡುಗಳನ್ನೂ ಒಟ್ಟಿಗೆ ಸೇರಿಸಿ ಒಳ್ಳೆ ಎಲುಬುಗಳ ಜೊತೆ ಅದನ್ನು ತುಂಬಿಸಿ; ಹಿಂಡಿನಲ್ಲಿ ಶ್ರೇಷ್ಠವಾದ ದ್ದನ್ನು ತೆಗೆದುಕೊಂಡು ಎಲುಬಿನ ರಾಶಿಯನ್ನೂ ಅದರ ಕೆಳಗೆ ಇಟ್ಟು ಅದನ್ನು ಚೆನ್ನಾಗಿ ಕುದಿಸು; ಆ ಎಲುಬುಗಳೂ ಅದರಲ್ಲಿ ಚೆನ್ನಾಗಿ ಬೇಯಲಿ. ಆದಕಾರಣ ದೇವರಾದ ಕರ್ತನು ಹೀಗೆ ಹೇಳು ತ್ತಾನೆ; ರಕ್ತಮಯವಾದ ಆ ಪಟ್ಟಣಕ್ಕೆ ಅಯ್ಯೋ! ಯಾವದರ ಕಲ್ಮಶವು ಹೊರಗೆ ಬಾರದೆ ಅದರಲ್ಲಿ ಉಳಿದಿರುವದೋ ಆ ಹಂಡೆಗೆ ಅಯ್ಯೋ, ಅದರಿಂದ ತುಂಡು ತುಂಡಾಗಿ ಹೊರಗೆ ತೆಗೆ; ಆಯ್ಕೆಯ ಚೀಟಿಯು ಅದರ ಮೇಲೆ ಬೀಳದಿರಲಿ. ಅದರ ರಕ್ತವು ಅದರ ಮಧ್ಯದಲ್ಲಿದೆ; ಅದು ಅದನ್ನು ಬಂಡೆಯ ತುದಿಯಲ್ಲಿ ಇಟ್ಟಿದೆ; ದೂಳು ಮುಚ್ಚುವ ಹಾಗೆ ನೆಲದ ಮೇಲೆ ಚೆಲ್ಲಲಿಲ್ಲ; ಮುಯ್ಯಿಗೆಮುಯ್ಯಿ ತೀರಿಸುವದಕ್ಕೆ ರೋಷ ವನ್ನೆಬ್ಬಿಸುವ ಹಾಗೆ ನಾನು ಅದರ ರಕ್ತಾಪರಾಧವನ್ನು ಮುಚ್ಚಿಬಿಡದಂತೆ ಬಂಡೆಯ ತುದಿಯ ಮೇಲೆ ಇಟ್ಟಿ ದ್ದೇನೆ; ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಆ ರಕ್ತಾಪರಾಧವುಳ್ಳ ಪಟ್ಟಣವು ಹಾಳಾ ಗಲಿ, ನಾನೇ ಬೆಂಕಿಯನ್ನು ರಾಶಿಯಾಗಿ ಹೆಚ್ಚಿಸುವೆನು. ಬಹಳ ಸೌದೆ ಹಾಕಿ, ಬೆಂಕಿಯನ್ನು ಹೆಚ್ಚಿಸಿ, ಮಾಂಸ ವನ್ನು ಬೇಯಿಸು; ಮಸಾಲೆ ಚೆನ್ನಾಗಿ ಇರಲಿ, ಮತ್ತು ಎಲುಬುಗಳು ಸುಡಲಿ. ಆಮೇಲೆ ಅದರ ಹಿತ್ತಾಳೆ ಬಿಸಿಯಾಗಿ ಮೈಲಿಗೆ ಕರಗಿ ಕಲ್ಮಶವು ಹೋಗುವ ಹಾಗೆ ಅದನ್ನು ಬರಿದು ಮಾಡಿ ಕೆಂಡಗಳ ಮೇಲೆ ಇಡು. ಅದರ ಕಲ್ಮಶವು ಆಯಾಸವನ್ನುಂಟು ಮಾಡಿತೇ ಹೊರತು ಅದಕ್ಕೆ ಹತ್ತಿದ್ದ ಆ ಬಹಳವಾದ ಕಿಲುಬು ಹೋಗಲಿಲ್ಲ, ಅದು ಬೆಂಕಿಯಲ್ಲಿರಲಿ; ನಿನ್ನ ಅಶುದ್ಧ ತ್ವವು ದುಷ್ಕರ್ಮವುಳ್ಳದ್ದು; ನಾನು ನಿನ್ನನ್ನು ಪರಿಶುದ್ಧ ಮಾಡಿದರೂ ನೀನು ಶುದ್ಧವಾಗದ ಕಾರಣ ನಾನು ನನ್ನ ರೋಷವನ್ನು ನಿನ್ನ ಮೇಲೆ ಕಳುಹಿಸುವಷ್ಟು ಕಾಲದ ವರೆಗೂ ಇನ್ನು ಮೇಲೆ ನೀನು ನಿನ್ನ ಅಪವಿತ್ರತ್ವದಿಂದ ಇನ್ನು ಶುದ್ಧವಾಗುವದಿಲ್ಲ.
- Jeremiah 52:24–27 ಯೆರೆಮೀಯ 52:24–27ಕಾವಲಿನ ಅಧಿಪತಿಯು ಪ್ರಧಾನ ಯಾಜಕನಾದ ಸೆರಾಯನನ್ನೂ ಎರಡನೇ ಯಾಜಕನಾದ ಚೆಫನ್ಯನನ್ನೂ ಮೂವರು ದ್ವಾರಪಾಲಕರನ್ನೂ ತಕ್ಕೊಂಡನು. ಯುದ್ಧಸ್ಥರ ಮೇಲೆ ನೇಮಿಸಲ್ಪಟ್ಟಿದ್ದ ಒಬ್ಬ ಮನೇವಾರ್ತೆಯವನನ್ನೂ ಅರಸನ ಸನ್ನಿಧಾನದಲ್ಲಿ ನಿಂತವರೊಳಗೆ ಪಟ್ಟಣದಲ್ಲಿ ಸಿಕ್ಕಿದ ಏಳು ಮನುಷ್ಯರನ್ನೂ ದೇಶಸ್ಥರನ್ನೂ ದಂಡಿನವರ ಲೆಕ್ಕದಲ್ಲಿ ಸೇರಿಸಿದ ಸೈನ್ಯಾಧಿಪತಿಯ ಲೇಖಕನನ್ನೂ ಪಟ್ಟಣದ ಮಧ್ಯದಲ್ಲಿ ಸಿಕ್ಕಿದ ದೇಶಸ್ಥರಲ್ಲಿ ಅರುವತ್ತು ಮನುಷ್ಯರನ್ನೂ ಪಟ್ಟಣದೊಳಗಿಂದ ತಕ್ಕೊಂಡನು. ಇವರನ್ನು ಕಾವಲಿನ ಅಧಿಪತಿಯಾದ ನೆಬೂಜರ ದಾನನು ತಕ್ಕೊಂಡು ಬಾಬೆಲಿನ ಅರಸನ ಬಳಿಗೆ ರಿಬ್ಲಕ್ಕೆ ಒಯ್ದನು. ಆಗ ಬಾಬೆಲಿನ ಅರಸನು ಅವರನ್ನು ಹೊಡಿಸಿ, ಹಮಾತ್ ದೇಶದ ರಿಬ್ಲದಲ್ಲಿ ಕೊಂದು ಹಾಕಿಸಿದನು. ಈ ಪ್ರಕಾರ ಯೆಹೂದನು ತನ್ನ ದೇಶದಿಂದ ಸೆರೆಯಾಗಿ ಒಯ್ಯಲ್ಪಟ್ಟನು.
- 2 Kings 25:18–22 2 ಅರಸುಗಳು 25:18–22ಕಾವಲುಗಾರರ ಅಧಿಪತಿಯು ಪ್ರಧಾನ ಯಾಜಕನಾದ ಸೆರಾಯನನ್ನೂ ಎರಡನೇ ಯಾಜಕನಾದ ಚೆಫನ್ಯನನ್ನೂ ಮೂರು ಮಂದಿ ದ್ವಾರಪಾಲಕರನ್ನೂ ಹಿಡಿದನು. ಇದಲ್ಲದೆ ಪಟ್ಟಣದೊಳಗಿಂದ ಯುದ್ಧಸ್ಥರ ಮೇಲಿದ್ದ ಒಬ್ಬ ಅಧಿ ಕಾರಿಯನ್ನೂ ಪಟ್ಟಣದಲ್ಲಿ ಸಿಕ್ಕಿದ ಅರಸನ ಸಮ್ಮುಖ ದಲ್ಲಿದ್ದ ಐದು ಮಂದಿಯನ್ನೂ ದೇಶದ ಜನರನ್ನೂ ಸೈನ್ಯದ ತರಬೇತು ಮಾಡಿದ ಪ್ರಧಾನನ ಲೇಖಕನೂ ಪಟ್ಟಣದಲ್ಲಿ ಸಿಕ್ಕಿದ ದೇಶದ ಜನರಾದ ಅರವತ್ತು ಮಂದಿಯನ್ನೂ ಅವನು ಹಿಡಿದನು. ಕಾವಲಿನ ವರ ಅಧಿಪತಿಯಾದ ನೆಬೂಜರದಾನನು ಇವರನ್ನು ತಕ್ಕೊಂಡು ರಿಬ್ಲದಲ್ಲಿದ್ದ ಬಾಬೆಲಿನ ಅರಸನ ಬಳಿಗೆ ಬಂದನು. ಬಾಬೆಲಿನ ಅರಸನು ಹಮಾತ್ ರಿಬ್ಲ ದಲ್ಲಿ ಅವರನ್ನು ಹೊಡೆದು ಕೊಂದುಹಾಕಿದನು. ಈ ಪ್ರಕಾರವೇ ಯೆಹೂದ್ಯರು ತಮ್ಮ ದೇಶದಲ್ಲಿಂದ ಸೆರೆ ಯಾಗಿ ಒಯ್ಯಲ್ಪಟ್ಟರು. ಆದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತಾನು ಯೆಹೂದ ದೇಶದಲ್ಲಿ ಉಳಿಸಿದ ಜನರ ಮೇಲೆ ಶಾಫಾನನ ಮೊಮ್ಮಗನೂ ಅಹೀಕಾಮನ ಮಗನೂ ಆದ ಗೆದಲ್ಯನನ್ನು ಅಧಿಪತಿಯಾಗಿ ಮಾಡಿದನು.
- Ezekiel 3:9–11 ಯೆಹೆಜ್ಕೇಲನು 3:9–11ನಾನು ನಿನ್ನ ಹಣೆಯನ್ನು ಅಭೇದ್ಯವಾದ ಕಲ್ಲಿಗಿಂತ ಗಟ್ಟಿಯಾಗಿ ವಜ್ರದಂತೆ ಮಾಡಿದ್ದೇನೆ; ಇಲ್ಲವೆ ತಿರುಗಿ ಬೀಳುವ ಮನೆತನದವರಾದರೂ ನೀನು ಅವರಿಗೆ ಭಯಪಡ ಬೇಡ; ಮತ್ತು ಅವರ ನೋಟಕ್ಕೆ ನೀನು ಗಾಬರಿಯಾಗ ಬೇಡ. ಇದಲ್ಲದೆ ಆತನು ನನಗೆ--ನರಪುತ್ರನೇ, ನಾನು ನಿನ್ನ ಸಂಗಡ ಆಡುವ ಈ ನನ್ನ ಮಾತುಗಳನ್ನೆಲಾ ನಿನ್ನ ಕಿವಿಗಳಿಂದ ಕೇಳಿ ಹೃದಯದಲ್ಲಿ ಅಂಗೀಕರಿಸಿಕೋ. ಹೋಗು, ಸೆರೆಯಾಗಿರುವ ನಿನ್ನ ಜನರ ಮಕ್ಕಳ ಬಳಿಗೆ ಹೋಗಿ, ಅವರ ಸಂಗಡ ಮಾತನಾಡು, ಅವರು ಕೇಳಿದರೂ ಕೇಳದಿದ್ದರೂ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು.