Ezekiel · chapter 11 · verse 9
Ezekiel 11:9 in Kannada
ನಾನು ನಿಮ್ಮನ್ನು ಅದರ ಮಧ್ಯದಿಂದ ಹೊರಗೆ ತೆಗೆದು ನಿಮ್ಮನ್ನು ಪರಕೀಯರ ಕೈಗಳಿಗೆ ಒಪ್ಪಿಸುವೆನು ಮತ್ತು ನಿಮ್ಮಲ್ಲಿ ನ್ಯಾಯ ತೀರ್ಪುಗಳನ್ನು ನಡಿಸುವೆನು.
Naanu nimmannu adara madhyadinda horage tegedu nimmannu parakeeyara kaigalige oppisuvenu mattu nimmalli nyaaya teerpugalannu nadisuvenu.
Ezekiel 11:9 in English
- King James Version (KJV)
- And I will bring you out of the midst thereof, and deliver you into the hands of strangers, and will execute judgments among you.
- World English Bible (WEB)
- “I will bring you out of the middle of it, and deliver you into the hands of strangers, and will execute judgments among you.
- American Standard Version (ASV)
- And I will bring you forth out of the midst thereof, and deliver you into the hands of strangers, and will execute judgments among you.
- Bible in Basic English (BBE)
- I will make you come out from inside the town and will give you up into the hands of men from other lands, and will be judge among you.
- Darby Translation (DBY)
- And I will bring you out of the midst of it, and give you into the hands of strangers, and will execute judgments among you.
- Webster's Bible (WBS)
- And I will bring you out of the midst of it, and deliver you into the hands of strangers, and will execute judgments among you.
- Young's Literal Translation (YLT)
- And I have brought you out of its midst, And given you into the hand of strangers, And I have done among you judgments.
Read in context
- 7ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನೀವು ಅದರ ಮಧ್ಯದಲ್ಲಿ ಇಟ್ಟಿರುವ ಹತರಾದವರು ಅವರೇ ಮಾಂಸವಾಗಿದ್ದಾರೆ, ಈ ಪಟ್ಟಣವು ಹಂಡೆಯಾಗಿದೆ. ಆದರೆ ನಾನು ನಿಮ್ಮನ್ನು ಆದರಿಂದ ಹೊರಗೆ ತರುತ್ತೇನೆ.
- 8ನೀವು ಕತ್ತಿಗೆ ಭಯಪಟ್ಟಿರಿ; ನಾನು ನಿಮ್ಮ ಮೇಲೆ ಒಂದು ಕತ್ತಿ ಯನ್ನು ತರುತ್ತೇನೆ ಎಂದು ದೇವರಾದ ಕರ್ತನು ಹೇಳುತ್ತಾನೆ.
- 9ನಾನು ನಿಮ್ಮನ್ನು ಅದರ ಮಧ್ಯದಿಂದ ಹೊರಗೆ ತೆಗೆದು ನಿಮ್ಮನ್ನು ಪರಕೀಯರ ಕೈಗಳಿಗೆ ಒಪ್ಪಿಸುವೆನು ಮತ್ತು ನಿಮ್ಮಲ್ಲಿ ನ್ಯಾಯ ತೀರ್ಪುಗಳನ್ನು ನಡಿಸುವೆನು.
- 10ನೀವು ಕತ್ತಿಯ ಮೂಲಕ ಬೀಳುವಿರಿ; ನಾನು ನಿಮ್ಮ ಇಸ್ರಾಯೇಲಿನ ಮೇರೆಯಲ್ಲಿ ನ್ಯಾಯತೀರಿಸುವೆನು; ಆಗ ನಾನೇ ಕರ್ತನೆಂದು ನಿಮಗೆ ತಿಳಿಯುವದು.
- 11ಈ ಪಟ್ಟಣವು ನಿಮ್ಮ ಹಂಡೆ ಯಾಗುವದಿಲ್ಲ, ನೀವು ಅದರ ಮಧ್ಯದಲ್ಲಿ ಮಾಂಸ ವಾಗುವದಿಲ್ಲ; ಆದರೆ ಇಸ್ರಾಯೇಲಿನ ಮೇರೆಯಲ್ಲಿ ನಿಮಗೆ ನ್ಯಾಯತೀರಿ ಸುವೆನು.
Cross references
- Ezekiel 5:8 ಯೆಹೆಜ್ಕೇಲನು 5:8ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು, ನಾನೇ, ನಿನಗೆ ವಿರೋಧವಾಗಿದ್ದೇನೆ; ಜನಾಂಗಗಳ ಕಣ್ಣುಗಳ ಮುಂದೆ ನಿನ್ನ ಮಧ್ಯದಲ್ಲಿ ನ್ಯಾಯತೀರ್ಪನ್ನು ಮಾಡುತ್ತೇನೆ.
- Deuteronomy 28:36 ಧರ್ಮೋಪದೇಶಕಾಂಡ 28:36ಕರ್ತನು ನಿನ್ನನ್ನೂ ನೀನು ನಿನ್ನ ಮೇಲೆ ಇರಿಸಿಕೊಳ್ಳುವ ಅರಸನನ್ನೂ ನೀನೂ ನಿನ್ನ ಪಿತೃಗಳೂ ಅರಿಯದ ಜನಾಂಗದ ಬಳಿಗೆ ಹೋಗ ಮಾಡುವನು; ಅಲ್ಲಿ ಮರವೂ ಕಲ್ಲೂ ಆಗಿರುವ ಬೇರೆ ದೇವರುಗಳನ್ನು ನೀನು ಸೇವಿಸುವಿ.
- Psalm 106:41 ಕೀರ್ತನೆಗಳು 106:41ಅವರನ್ನು ಅನ್ಯಜನಾಂಗಗಳ ಕೈಗೆಕೊಟ್ಟನು; ಅವರ ಹಗೆಯವರು ಅವರನ್ನು ಆಳಿದರು.
- Deuteronomy 28:49–50 ಧರ್ಮೋಪದೇಶಕಾಂಡ 28:49–50ಕರ್ತನು ದೂರದಿಂದ ಅಂದರೆ ಭೂಮಿಯ ಅಂತ್ಯದಿಂದ ಹಾರುವ ಹದ್ದಿಗೆ ಸಮಾನವಾದ ಜನಾಂಗ ವನ್ನೂ ನಿನಗೆ ತಿಳಿಯದ ಭಾಷೆಯ ಜನಾಂಗವನ್ನೂ ಮುದುಕರ ಮುಖದಾಕ್ಷಿಣ್ಯ ನೋಡದೆಯೂ ಚಿಕ್ಕವ ರಿಗೆ ದಯೆತೋರಿಸದೆ ಇರುವಂಥ ಕಠಿಣ ಮುಖವುಳ್ಳ ಜನಾಂಗವನ್ನೂ ನಿನ್ನ ಮೇಲೆ ಬರಮಾಡುವನು.
- Ezekiel 16:41 ಯೆಹೆಜ್ಕೇಲನು 16:41ಅವರು ನಿನ್ನ ಮನೆಗಳನ್ನು ಸುಟ್ಟು ಬಹಳ ಸ್ತ್ರೀಯರ ಕಣ್ಣುಗಳ ಮುಂದೆ ನಿನಗೆ ನ್ಯಾಯ ತೀರಿಸುವರು; ನೀನು ವ್ಯಭಿಚಾರ ಮಾಡುವದನ್ನು ನಾನು ನಿಲ್ಲಿಸುವೆನು; ಆಗ ನೀನು ಕೂಲಿ ಸಹ ಕೊಡುವದನ್ನು ನಿಲ್ಲಿಸುವೆನು;
- Jeremiah 5:15–17 ಯೆರೆಮೀಯ 5:15–17ಇಗೋ, ಇಸ್ರಾಯೇಲ್ಯನ ಮನೆತನವೇ, ನಾನು ದೂರದಿಂದ ನಿಮ್ಮ ಮೇಲೆ ಒಂದು ಜನಾಂಗವನ್ನು ತರಿಸುತ್ತೇನೆಂದು ಕರ್ತನು ಅನ್ನುತ್ತಾನೆ. ಅದು ಬಲವಾದ ಜನಾಂಗವು ಪೂರ್ವಕಾಲದ ಜನಾಂಗವು, ಆ ಜನಾಂಗದ ಭಾಷೆಯನ್ನು ನೀನರಿಯೆ; ಇಲ್ಲವೆ ಅವರು ಹೇಳುವಂಥದ್ದು ನಿನಗೆ ತಿಳಿಯದು. ಅವರ ಬತ್ತಳಿಕೆ ತೆರೆದ ಸಮಾಧಿಯ ಹಾಗಿದೆ; ಅವರೆಲ್ಲರೂ ಪರಾಕ್ರಮ ಶಾಲಿಗಳೇ. ನಿನ್ನ ಕುಮಾರರು, ಕುಮಾರ್ತೆಯರು ತಿನ್ನತಕ್ಕ ನಿನ್ನ ಪೈರನ್ನೂ ರೊಟ್ಟಿಯನ್ನೂ ತಿನ್ನುವರು, ಕುರಿಗಳನ್ನೂ ದನಗಳನ್ನೂ ತಿನ್ನುವರು, ದ್ರಾಕ್ಷೇ ಗಿಡ ಗಳನ್ನೂ ಅಂಜೂರದ ಗಿಡಗಳನ್ನೂ ತಿನ್ನುವರು. ನೀನು ನಂಬಿಕೊಂಡಿದ್ದ ಕೋಟೆಯುಳ್ಳ ಪಟ್ಟಣಗಳನ್ನು ಕತ್ತಿಯಿಂದ ಬಡವಾಗ ಮಾಡುವರು.
- 2 Kings 24:4 2 ಅರಸುಗಳು 24:4ಇದಲ್ಲದೆ ಅವನು ಚೆಲ್ಲಿದ ನಿರಪರಾಧದ ರಕ್ತದ ನಿಮಿತ್ತ ಇದು ಉಂಟಾಯಿತು. ಅವನು ನಿರಪರಾಧದ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ್ದನು. ಕರ್ತನು ಅದನ್ನು ಮನ್ನಿಸಲೊಲ್ಲದೆ ಇದ್ದನು.
- Ezekiel 21:31 ಯೆಹೆಜ್ಕೇಲನು 21:31ನನ್ನ ಕ್ರೋಧವನ್ನು ನಿನ್ನ ಮೇಲೆ ಸುರಿಸುವೆನು. ನನ್ನ ಉಗ್ರದ ಬೆಂಕಿಯನ್ನು ನಿನ್ನ ಮೇಲೆ ಊದಿ ನಾಶಪಡಿಸುವದರಲ್ಲಿ ಗಟ್ಟಿಗರಾದಂಥ ಕ್ರೂರ ಜನರ ಕೈಗೆ ನಿನ್ನನ್ನು ಒಪ್ಪಿಸು ವೆನು.ನೀನು ಅಗ್ನಿಗೆ ಆಹುತಿಯಾಗುವ ಸೌದೆಯಾ ಗುವಿ, ನಿನ್ನ ರಕ್ತವು ದೇಶದ ಮಧ್ಯದಲ್ಲೆಲ್ಲಾ ಇರುವದು; ನೀನು ಇನ್ನು ಮೇಲೆ ಜ್ಞಾಪಕಕ್ಕೆ ಬರುವದಿಲ್ಲವೆಂದು ಕರ್ತನಾದ ನಾನೇ ಹೇಳಿದ್ದೇನೆ.
- John 5:27 ಯೋಹಾನನು 5:27ಆತನು ಮನುಷ್ಯಕುಮಾರ ನಾಗಿರುವದರಿಂದ ನ್ಯಾಯತೀರಿಸುವ ಅಧಿಕಾರವನ್ನು ಸಹ ಆತನಿಗೆ ಕೊಟ್ಟಿದ್ದಾನೆ.
- Ezekiel 5:10 ಯೆಹೆಜ್ಕೇಲನು 5:10ಆದದರಿಂದ ನಿನ್ನ ಮಧ್ಯದಲ್ಲಿ ತಂದೆಗಳೇ ಮಕ್ಕಳನ್ನು ತಿನ್ನುವರು; ಮಕ್ಕಳು ಅವರ ತಂದೆಗಳನ್ನು ತಿನ್ನುವರು; ಹೀಗೆ ನಿನ್ನಲ್ಲಿ ನ್ಯಾಯ ತೀರ್ಪನ್ನು ನಡಿಸುವೆನು. ನಿನ್ನಲ್ಲಿ ಉಳಿದವರನ್ನೆಲ್ಲಾ ಗಾಳಿ ಬೀಸುವ ಎಲ್ಲಾ ದಿಕ್ಕಿಗೂ ಚದರಿಸುವೆನು.
- Ezekiel 16:38 ಯೆಹೆಜ್ಕೇಲನು 16:38ದಾಂಪತ್ಯವನ್ನು ಮುರಿದು ರಕ್ತ ಸುರಿಸುವಂಥ ಹೆಂಗಸರಿಗೆ ವಿಧಿಸುವಂಥ ತಕ್ಕ ದಂಡನೆಗಳನ್ನು ನಿನಗೂ ವಿಧಿಸಿ, ಕೋಪೋದ್ರೇಕದಿಂದಲೂ ರೋಷಾವೇಶ ದಿಂದಲೂ ನಿನಗೆ ರಕ್ತವನ್ನು ಸುರಿಸುವೆನು.
- Ecclesiastes 8:11 ಪ್ರಸಂಗಿ 8:11ದುಷ್ಟ ಕೆಲಸಕ್ಕೆ ದಂಡನೆಯು ಕೂಡಲೇ ಆಗದಿರುವದರಿಂದ ಮನುಷ್ಯಪುತ್ರರ ಹೃದ ಯವು ಅವರನ್ನು ಕೆಟ್ಟದ್ದನ್ನು ಮಾಡುವದರಲ್ಲಿಯೇ ತುಂಬಿಸುವದು.