Ezekiel · chapter 12 · verse 10
Ezekiel 12:10 in Kannada
ಅವರಿಗೆ ನೀನು ಹೀಗೆ ಹೇಳಬೇಕು ಎಂದು ದೇವರಾದ ಕರ್ತನು ಹೇಳುತ್ತಾನೆ--ಈ ಭಾರವು ಯೆರೂಸಲೇಮಿನಲ್ಲಿರುವ ಪ್ರಭುವನ್ನೂ ಅದರ ಮಧ್ಯದಲ್ಲಿರುವ ಸಮಸ್ತ ಇಸ್ರಾ ಯೇಲಿನ ಮನೆತನದವರನ್ನೂ ಕುರಿತದ್ದಾಗಿದೆ.
Avarige neenu heege helabeku endu devaraada kartanu heluttaane--ee bhaaravu yeroosaleminalliruva prabhuvannoo adara madhyadalliruva samasta israa yelina manetanadavarannoo kuritaddaagide.
Ezekiel 12:10 in English
- King James Version (KJV)
- Say thou unto them, Thus saith the Lord GOD; This burden [concerneth] the prince in Jerusalem, and all the house of Israel that [are] among them.
- World English Bible (WEB)
- “Say to them, ‘The Lord GOD says: “This burden concerns the prince in Jerusalem, and all the house of Israel among whom they are.”’
- American Standard Version (ASV)
- Say thou unto them, Thus saith the Lord Jehovah: This burden [concerneth] the prince in Jerusalem, and all the house of Israel among whom they are.
- Bible in Basic English (BBE)
- You are to say to them, This is what the Lord has said: This word has to do with the ruler in Jerusalem and all the children of Israel in it.
- Darby Translation (DBY)
- Say unto them, Thus saith the Lord Jehovah: This burden [concerneth] the prince in Jerusalem, and all the house of Israel that are among them.
- Webster's Bible (WBS)
- Say thou to them, Thus saith the Lord GOD, This burden [concerneth] the prince in Jerusalem, and all the house of Israel that [are] among them.
- Young's Literal Translation (YLT)
- say unto them, Thus said the Lord Jehovah: 'The prince [is] this burden in Jerusalem, and all the house of Israel who are in their midst.
Read in context
- 8ಬೆಳಗಿನ ಜಾವದಲ್ಲಿ ಕರ್ತನ ವಾಕ್ಯವು ನನ್ನ ಕಡೆಗೆ ಬಂದು ಹೇಳಿದ್ದೇನಂದರೆ--
- 9ಮನುಷ್ಯ ಪುತ್ರನೇ, ಆ ಇಸ್ರಾಯೇಲಿನ ಮನೆತನದವರು ತಿರುಗಿ ಬೀಳುವ ಮನೆತನದವರಲ್ಲವೇ? ನೀನು ಏನು ಮಾಡುತ್ತೀ ಎಂದು ಹೇಳುತ್ತಾರಲ್ಲಾ.
- 10ಅವರಿಗೆ ನೀನು ಹೀಗೆ ಹೇಳಬೇಕು ಎಂದು ದೇವರಾದ ಕರ್ತನು ಹೇಳುತ್ತಾನೆ--ಈ ಭಾರವು ಯೆರೂಸಲೇಮಿನಲ್ಲಿರುವ ಪ್ರಭುವನ್ನೂ ಅದರ ಮಧ್ಯದಲ್ಲಿರುವ ಸಮಸ್ತ ಇಸ್ರಾ ಯೇಲಿನ ಮನೆತನದವರನ್ನೂ ಕುರಿತದ್ದಾಗಿದೆ.
- 11ಹೀಗೆ ಹೇಳು--ನಾನು ನಿಮಗೆ ಗುರುತಾಗಿದ್ದೇನೆ. ನಾನು ಮಾಡಿದ ಹಾಗೆ ಅವರಿಗೆ ಮಾಡಲ್ಪಡುವದು, ಅವರು ಸಾಗಿ ಸೆರೆಗೆ ಹೋಗುವರು.
- 12ಅವರ ಮಧ್ಯದಲ್ಲಿರುವ ಪ್ರಭುವು ಹೆಗಲ ಮೇಲೆ ಹೊರೆಯನ್ನು ಹೊತ್ತು ಕೊಂಡು ಕತ್ತಲಲ್ಲಿ ಹೊರಟು ಹೋಗುವನು; ಅವರು ಗೋಡೆಯನ್ನು ಕೊರೆದು ಆ ಕಿಂಡಿಯ ಮೂಲಕ ತಮ್ಮ ಸಾಮಗ್ರಿಗಳನ್ನು ಹೊರಗೆ ಸಾಗಿಸುವರು. ಅವನು ತನ್ನ ಕಣ್ಣುಗಳಿಂದ ನೆಲವನ್ನು ನೋಡದ ಹಾಗೆ ಮುಖ ವನ್ನು ಮುಚ್ಚಿಕೊಳ್ಳುವನು.
Cross references
- Isaiah 13:1 ಯೆಶಾಯ 13:1ಆಮೋಚನ ಮಗನಾದ ಯೆಶಾಯನಿಗೆ ಬಾಬೆಲಿನ ವಿಷಯವಾಗಿ ಕಂಡುಬಂದ ದೈವೋಕ್ತಿ.
- 2 Kings 9:25 2 ಅರಸುಗಳು 9:25ಆಗ ಯೇಹುವು ತನ್ನ ಅಧಿಪತಿ ಯಾದ ಬಿದ್ಕರನಿಗೆ--ನೀನು ಅವನನ್ನು ತೆಗೆದುಕೊಂಡು ಹೋಗಿ ಇಜ್ರೇಲ್ಯನಾದ ನಾಬೋತನ ಪಾಲಾಗಿರುವ ಹೊಲದಲ್ಲಿ ಹಾಕಿಬಿಡು.
- Ezekiel 7:27 ಯೆಹೆಜ್ಕೇಲನು 7:27ಅರಸನು ದುಃಖಿಸುವನು, ಪ್ರಧಾನನು ನಿರ್ಗತಿಕನಾ ಗುವನು; ದೇಶದ ಜನರ ಕೈಗಳು ತೊಂದರೆಗೊಳ್ಳು ವವು; ಅವರ ಮಾರ್ಗಗಳ ಪ್ರಕಾರ ಅವರ ಹಾಗೆಯೇ ಮಾಡುವೆನು; ಅವರ ನ್ಯಾಯಗಳ ಪ್ರಕಾರ ಅವರಿಗೆ ನ್ಯಾಯತೀರಿಸುವೆನು. ನಾನೇ ಕರ್ತನೆಂದು ಅವರಿಗೆ ತಿಳಿಯುವದು.
- Jeremiah 24:8 ಯೆರೆಮೀಯ 24:8ತಿನ್ನಕೂಡದ ಹಾಗೆ ಅಷ್ಟು ಕೆಟ್ಟವುಗಳಾಗಿರುವ ಆ ಕೆಟ್ಟ ಅಂಜೂರದ ಹಣ್ಣುಗಳ ಹಾಗೆ ನಿಶ್ಚಯವಾಗಿ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಪ್ರಧಾನರನ್ನೂ ಈ ದೇಶದಲ್ಲಿ ಉಳಿಯುವ ಯೆರೂಸಲೇಮಿನ ಶೇಷವನ್ನೂ ಐಗುಪ್ತದೇಶದಲ್ಲಿ ವಾಸಿಸುವವರನ್ನೂ ಒಪ್ಪಿಸುತ್ತೇನೆಂದು ಕರ್ತನು ಹೇಳುತ್ತಾನೆ.
- Malachi 1:1 ಮಲಾಕಿಯ 1:1ಇಸ್ರಾಯೇಲಿಗೆ ಮಲಾಕಿಯಿಂದ ಉಂಟಾದ ಕರ್ತನ ವಾಕ್ಯದ ದೈವೋಕ್ತಿ.
- Ezekiel 21:25–27 ಯೆಹೆಜ್ಕೇಲನು 21:25–27ದುಷ್ಟನಾದ ಭ್ರಷ್ಟ ಇಸ್ರಾಯೇಲನ ಪ್ರಭುವೇ, ನೀನು ಮಾಡಿದ ಅಕ್ರಮಗಳಿಂದ ನಿನಗೆ ಅಂತ್ಯ ದಿವಸವು ಬಂದಿತು. ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಮುಂಡಾಸವನ್ನು ಎತ್ತಿಡು, ಕಿರೀಟವನ್ನು ತೆಗೆದುಹಾಕು; ಅದು ಹಾಗೆಯೇ ಇರುವದಿಲ್ಲ; ತಗ್ಗಿಸಲ್ಪಟ್ಟವನನ್ನು ಹೆಚ್ಚಿಸಿ ಹೆಚ್ಚಿಸಲ್ಪಟ್ಟವನನ್ನು ತಗ್ಗಿಸು. ನಾನು ತಳ್ಳಿಬಿಡು ವೆನು, ತಳ್ಳಿಬಿಡುವೆನು, ಅದನ್ನು ತಳ್ಳಿಬಿಡುವೆನು; ನ್ಯಾಯ ಯಾರದು? ಅವನು ಬರುವ ವರೆಗೂ ಇದು ಇರುವದಿಲ್ಲ; ನಾನು ಅವನಿಗೆ ಇದನ್ನು ಕೊಟ್ಟು ಬಿಡುತ್ತೇನೆ.
- Jeremiah 38:18 ಯೆರೆಮೀಯ 38:18ನೀನು ಬಾಬೆಲಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋಗದಿದ್ದರೆ ಈ ಪಟ್ಟಣವು ಕಸ್ದೀಯರ ಕೈಯಲ್ಲಿ ಒಪ್ಪಿಸಲ್ಪಡುವದು; ಅವರು ಅದನ್ನು ಬೆಂಕಿಯಿಂದ ಸುಡುವರು; ನೀನು ಅವರ ಕೈಯಿಂದ ತಪ್ಪಿಸಿಕೊಳ್ಳುವದಿಲ್ಲ ಅಂದನು.
- Isaiah 14:28 ಯೆಶಾಯ 14:28ಅರಸನಾದ ಆಹಾಜನು ಸತ್ತ ವರುಷದಲ್ಲಿ ಈ ದೇವವಾಣಿಯಾಯಿತು.
- Jeremiah 21:7 ಯೆರೆಮೀಯ 21:7ಇದಲ್ಲದೆ ಕರ್ತನು ಅನ್ನುವದೇನಂದರೆ--ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಸೇವಕರನ್ನೂ ಜನರನ್ನೂ ಈ ಪಟ್ಟಣದಲ್ಲಿ ಜಾಡ್ಯದಿಂದಲೂ ಕತ್ತಿಯಿಂದಲೂ ಕ್ಷಾಮದಿಂದಲೂ ಉಳಿದವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ ಅವರ ಶತ್ರುಗಳ ಕೈಗೂ ಅವರ ಪ್ರಾಣವನ್ನು ಹುಡುಕುವವರಕೈಗೂ ಒಪ್ಪಿಸುವೆನು; ಅವನು ಅವರನ್ನು ಕತ್ತಿಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವದಿಲ್ಲ, ಕನಿಕರಿಸುವದಿಲ್ಲ ಅಂತಃಕರುಣೆ ಪಡುವದಿಲ್ಲ.
- Ezekiel 17:13–21 ಯೆಹೆಜ್ಕೇಲನು 17:13–21ಅರಸನ ಸಂತಾನ ದವರನ್ನು ಕರೆದುಕೊಂಡು ಅವನ ಸಂಗಡ ಒಡಂಬಡಿಕೆ ಮಾಡಿ ಅವನಿಂದ ಪ್ರಮಾಣಮಾಡಿಸಿ ದೇಶದ ಬಲಿಷ್ಠರನ್ನು ತೆಗೆದುಕೊಂಡು ಹೋಗಿದ್ದಾನೆ. ಆ ರಾಜ್ಯವು ತಗ್ಗಾಗಿ ಮೇಲೇಳದ ಹಾಗಿದ್ದರೂ ಅವನು ಒಡಂಬಡಿಕೆಯನ್ನು ಕೈಕೊಳ್ಳುವದರಿಂದ ಅದು ನಿಲ್ಲುವದು. ಆದರೆ ಇವನು ಅವನಿಗೆ ವಿರುದ್ಧವಾಗಿ ತಿರುಗಿಬಿದ್ದು ತನ್ನ ರಾಯಭಾರಿಗಳನ್ನು ಐಗುಪ್ತಕ್ಕೆ ಕಳು ಹಿಸಿ ತನಗೆ ಕುದುರೆಗಳನ್ನೂ ಬಹಳ ಜನರನ್ನೂ ಕೊಡ ಬೇಕೆಂದು ಹೇಳಿ ಕಳುಹಿಸಿದನು. ಇವನು ಅಭಿವೃದ್ಧಿ ಯಾಗುವನೋ? ಇಂಥಾ ಸಂಗತಿಗಳನ್ನು ಮಾಡುವ ವನು ತಪ್ಪಿಸಿಕೊಳ್ಳುವನೋ? ಅಥವಾ ಒಡಂಬಡಿಕೆ ಯನ್ನು ಮುರಿದು ತಪ್ಪಿಸಿಕೊಳ್ಳಲಾಗುವದೋ? ನಿಶ್ಚ ಯವಾಗಿ ಅವನಿಗೆ ಅರಸುತನವನ್ನು ಕೊಟ್ಟ ಅರಸನೂ ಅಂದರೆ ಯಾವನ ಪ್ರಮಾಣವನ್ನು ತಿರಸ್ಕರಿಸಿದನೋ ಯಾವನ ಒಡಂಬಡಿಕೆಯನ್ನು ವಿಾರಿದನೋ ಅವನು ಇರುವಲ್ಲಿಯೇ ಬಾಬೆಲಿನ ಮಧ್ಯದಲ್ಲಿ ನನ್ನ ಜೀವದಾಣೆ, ಇವನು ಸಾಯುವನು ಎಂದು ದೇವರಾದ ಕರ್ತನು ಹೇಳುತ್ತಾನೆ. ಇಲ್ಲವೆ ಫರೋಹನೂ ಅವನ ಮಹಾ ಸೈನ್ಯವೂ ದೊಡ್ಡ ಪರಿವಾರವೂ ಬಂದು ಬಹಳ ಜನ ರನ್ನು ಕೊಲ್ಲುವದಕ್ಕೆ ದಿಬ್ಬಗಳನ್ನು ಕೋಟೆಗಳನ್ನೂ ಕಟ್ಟುವಾಗಲೂ ಅವನಿಗೆ ಯುದ್ಧದಲ್ಲಿ ಸಹಾಯ ಮಾಡುವದಿಲ್ಲ. ಅವನು ಪ್ರಮಾಣವನ್ನು ತಿರಸ್ಕರಿಸಿ ಕೈಕೊಟ್ಟಾಗ್ಯೂ; ಇಗೋ, ಒಡಂಬಡಿಕೆಯನ್ನು ವಿಾರಿ ಇವುಗಳನ್ನೆಲ್ಲಾ ಮಾಡಿದ್ದ ರಿಂದ ತಪ್ಪಿಸಿಕೊಳ್ಳುವದಿಲ್ಲ. ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಅವನು ತಿರಸ್ಕರಿಸಿದ ನನ್ನ ಪ್ರಮಾಣವನ್ನೂ ಅವನು ವಿಾರಿದ ಒಡಂಬಡಿಕೆಯನ್ನೂ ನನ್ನ ಜೀವ ದಾಣೆ ನಿಶ್ಚಯವಾಗಿ ಅವನ ತಲೆಯ ಮೇಲೆಯೇ ಮುಯ್ಯಿ ತೀರಿಸುವೆನು. ನಾನು ಅವನ ಮೇಲೆ ನನ್ನ ಬಲೆಯನ್ನು ಬೀಸುತ್ತೇನೆ; ಆಗ ಅವನು ನನ್ನ ಉರ್ಲಿನಲ್ಲಿ ಸಿಕ್ಕಿಬೀಳುವನು; ನಾನು ಅವನನ್ನು ಬಾಬೆಲಿಗೆ ಒಯ್ದು ಅವನು ನನಗೆ ವಿರೋಧವಾಗಿ ಮಾಡಿರುವ ಅಪರಾಧದ ವಿಷಯದಲ್ಲಿ ನಾನು ಅವರೊಂದಿಗೆ ವಾದಿಸುವೆನು. ಅವನ ಸೈನ್ಯಗಳೆಲ್ಲಾ ಚದರಿಸಲ್ಪಟ್ಟು ಓಡಿಹೋಗಿ ಅವನ ಸಂಗಡ ಕತ್ತಿಯಿಂದ ಬೀಳುವರು; ಉಳಿದವರು ಎಲ್ಲಾ ದಿಕ್ಕುಗಳಿಗೆ ಚದರಿಸ ಲ್ಪಡುವರು; ಆಗ ಕರ್ತನಾದ ನಾನೇ ಅದನ್ನು ಹೇಳಿ ದೆನೆಂದು ನಿಮಗೆ ತಿಳಿಯುವದು.