Ezekiel · chapter 12 · verse 24
Ezekiel 12:24 in Kannada
ಇಸ್ರಾಯೇಲಿನ ಮನೆತನದವರೊಳಗೆ ಇನ್ನು ಮೇಲೆ ಯಾವ ವ್ಯರ್ಥ ದರ್ಶನವೂ ಮೋಸದ ಶಕುನವೂ ಇರುವದಿಲ್ಲ.
Israayelina manetanadavarolage innu mele yaava vyartha darshanavoo mosada shakunavoo iruvadilla.
Ezekiel 12:24 in English
- King James Version (KJV)
- For there shall be no more any vain vision nor flattering divination within the house of Israel.
- World English Bible (WEB)
- For there will be no more any false vision nor flattering divination within the house of Israel.
- American Standard Version (ASV)
- For there shall be no more any false vision nor flattering divination within the house of Israel.
- Bible in Basic English (BBE)
- For there will be no more false visions or smooth use of secret arts in Israel.
- Darby Translation (DBY)
- For there shall be no more any vain vision nor flattering divination in the midst of the house of Israel.
- Webster's Bible (WBS)
- For there shall no more be any vain vision nor flattering divination within the house of Israel.
- Young's Literal Translation (YLT)
- For there is no more any vain vision, and flattering divination, In the midst of the house of Israel.
Read in context
- 22ಮನುಷ್ಯಪುತ್ರನೇ, ದಿನಗಳು ಬಹಳವಾ ಗುತ್ತಿವೆ; ಪ್ರತಿ ದರ್ಶನವು ತಪ್ಪುತ್ತದೆ ಎಂದು ಇಸ್ರಾ ಯೇಲ್ ದೇಶದಲ್ಲಿ ಹೇಳಿಕೊಳ್ಳುವ ಆ ಗಾದೆ ಏನು?
- 23ಆದದರಿಂದ ಅವರಿಗೆ ಹೀಗೆ ಹೇಳು ದೇವರಾದ ಕರ್ತನು ಹೇಳುವದೇನಂದರೆ--ನಾನು ಈ ಗಾದೆ ಯನ್ನು ನಿಲ್ಲಿಸುತ್ತೇನೆ, ಅದನ್ನು ಇನ್ನು ಮೇಲೆ ಇಸ್ರಾ ಯೇಲಿನಲ್ಲಿ ಗಾದೆಯಂತೆ ಉಪಯೋಗಿಸುವದಿಲ್ಲ; ದಿನಗಳು ಹತ್ತಿರವಾಗಿವೆ ಪ್ರತಿ ದರ್ಶನವು ಸವಿಾಪ ವಾಗಿದೆ ಎಂದು ಅವರಿಗೆ ಹೇಳು.
- 24ಇಸ್ರಾಯೇಲಿನ ಮನೆತನದವರೊಳಗೆ ಇನ್ನು ಮೇಲೆ ಯಾವ ವ್ಯರ್ಥ ದರ್ಶನವೂ ಮೋಸದ ಶಕುನವೂ ಇರುವದಿಲ್ಲ.
- 25ನಾನೇ ಕರ್ತನು, ನಾನೇ ಮಾತನಾಡುತ್ತೇನೆ. ನಾನು ಆಡುವ ಮಾತು ನೆರವೇರುವದು, ಅದು ಇನ್ನು ನಿಧಾನವಾಗುವದಿಲ್ಲ. ಓ ತಿರುಗಿ ಬೀಳುವ ಮನೆತನ ದವರೇ, ನಿಮ್ಮ ದಿವಸಗಳಲ್ಲಿ ನಾನು ನುಡಿದದ್ದನ್ನು ನಡಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
- 26ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ --
Cross references
- Zechariah 13:2–4 ಜೆಕರ್ಯ 13:2–4ಸೈನ್ಯಗಳ ಕರ್ತನು--ಆ ದಿನದಲ್ಲಿ ಆಗುವದೇನಂದರೆ, ನಾನು ವಿಗ್ರಹಗಳ ಹೆಸರುಗಳನ್ನು ದೇಶದೊಳಗಿಂದ ಕಡಿದುಬಿಡುವೆನು; ಅವು ಇನ್ನು ಮೇಲೆ ಜ್ಞಾಪಕಕ್ಕೆ ಬರುವದಿಲ್ಲ; ಪ್ರವಾದಿಗಳನ್ನೂ ಅಶುದ್ಧ ಆತ್ಮವನ್ನೂ ದೇಶದೊಳಗಿಂದ ತೊಲಗಿ ಹೋಗುವಂತೆ ಮಾಡುವೆನು ಎಂದು ಅನ್ನುತ್ತಾನೆ. ಆಗುವದೇನಂದರೆ, ಯಾವನಾದರೂ ಇನ್ನು ಪ್ರವಾದಿ ಸಿದರೆ ಅವನ ಹೆತ್ತವರಾದ ತಂದೆತಾಯಿಗಳು ಅವ ನಿಗೆ--ನೀನು ಬದುಕಬಾರದು, ಕರ್ತನ ಹೆಸರಿನಲ್ಲಿ ಸುಳ್ಳು ಹೇಳುತ್ತೀ ಎಂದು ಹೇಳುವರು; ಅವನು ಪ್ರವಾದಿಸುವಾಗ ಅವನ ಹೆತ್ತವರಾದ ತಂದೆತಾಯಿ ಗಳು ಅವನನ್ನು ನೂಕಿಬಿಡುವರು. ಆ ದಿವಸದಲ್ಲಿ ಆಗುವದೇನಂದರೆ, ಪ್ರವಾದಿಗಳು ಪ್ರವಾದಿಸುವಾಗ ಅವರು ತಮ್ಮ ತಮ್ಮ ದರ್ಶನಗಳಿಗೆ ನಾಚಿಕೆಪಡುವರು; ವಂಚಿಸುವ ಹಾಗೆ ಒರಟಾದ ವಸ್ತ್ರವನ್ನು ಹಾಕಿಕೊಳ್ಳರು.
- Ezekiel 13:23 ಯೆಹೆಜ್ಕೇಲನು 13:23ಆದದರಿಂದ ನೀವು ಇನ್ನು ಮೇಲೆ ವ್ಯರ್ಥವಾದದ್ದನ್ನು ಕಾಣುವದಿಲ್ಲ; ಭವಿಷ್ಯವನ್ನೂ ಕಾಣು ವದಿಲ್ಲ; ಯಾಕಂದರೆ ನಾನು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
- Jeremiah 14:13–16 ಯೆರೆಮೀಯ 14:13–16ಆಗ ನಾನು--ಹಾ, ದೇವರಾದ ಕರ್ತನೇ, ಇಗೋ, ಪ್ರವಾದಿಗಳು ಅವರಿಗೆ--ನೀವು ಕತ್ತಿಯನ್ನು ನೋಡುವದಿಲ್ಲ, ನಿಮಗೆ ಕ್ಷಾಮವು ಬಾರದು, ಆದರೆ ಕರ್ತನು ನಿಮಗೆ ಈ ಸ್ಥಳದಲ್ಲಿ ಸ್ಥಿರ ಸಮಾಧಾನ ಕೊಡುತ್ತಾನೆಂದು ಹೇಳುತ್ತಾರೆ ಅಂದೆನು. ಆಗ ಕರ್ತನು ನನಗೆ ಹೇಳಿದ್ದೇನಂದರೆ --ಪ್ರವಾದಿಗಳು ನನ್ನ ಹೆಸರಿನಲ್ಲಿ ಸುಳ್ಳಾಗಿ ಪ್ರವಾದಿ ಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ; ಅವ ರಿಗೆ ಆಜ್ಞೆ ಕೊಡಲಿಲ್ಲ; ಅವರ ಸಂಗಡ ಮಾತಾಡ ಲಿಲ್ಲ; ಸುಳ್ಳಿನ ದರ್ಶನವನ್ನೂ ಶಕುನವನ್ನೂ ಶೂನ್ಯ ವನ್ನೂ ತಮ್ಮ ಹೃದಯದ ಕಪಟವನ್ನೂ ನಿಮಗೆ ಪ್ರವಾದಿಸುತ್ತಾರೆ. ಆದದರಿಂದ ಕರ್ತನು ತಾನು ಕಳುಹಿಸದೆ ತನ್ನ ಹೆಸರಿನಲ್ಲಿ ಪ್ರವಾದಿಸುವಂಥ ಮತ್ತು ಈ ದೇಶದಲ್ಲಿ ಕತ್ತಿಯೂ ಬರವೂ ಇರುವದಿಲ್ಲವೆಂದು ಹೇಳುವಂಥ ಪ್ರವಾದಿಗಳನ್ನು ಕುರಿತು ಹೇಳುವದೇನಂದರೆ--ಕತ್ತಿ ಯಿಂದಲೂ ಕ್ಷಾಮದಿಂದಲೂ ಆ ಪ್ರವಾದಿಗಳು ತಾವೇ ನಿರ್ಮೂಲವಾಗುತ್ತಾರೆ. ಅವರ ಪ್ರವಾದನೆಯನು ಕೇಳುವ ಜನರು ಕ್ಷಾಮದ ಮತ್ತು ಕತ್ತಿಯ ನಿಮಿತ್ತ ಯೆರೂಸಲೇಮಿನ ಬೀದಿಗಳಲ್ಲಿ ಬಿಸಾಡಲ್ಪಡುವರು; ಅವರನ್ನೂ ಹೆಂಡತಿಯರನ್ನೂ ಕುಮಾರರನ್ನೂ ಕುಮಾರ್ತೆಯರನ್ನೂ ಹೂಣಿಡುವದಕ್ಕೆ ಯಾರೂ ಇರು ವದಿಲ್ಲ; ನಾನು ಅವರ ಕೆಟ್ಟತನವನ್ನು ಅವರ ಮೇಲೆ ಹೊಯಿದು ಬಿಡುವೆನು.
- Jeremiah 23:14–29 ಯೆರೆಮೀಯ 23:14–29ಯೆರೂಸಲೇಮಿನ ಪ್ರವಾದಿಗಳಲ್ಲಿ ಭಯಂಕರವಾದದ್ದನ್ನು ನೋಡಿದ್ದೇನೆ; ಅವರು ವ್ಯಭಿಚಾರಮಾಡಿ ಸುಳ್ಳಿನಲ್ಲಿ ನಡಕೊಂಡದ್ದ ಲ್ಲದೆ ದುಷ್ಟರು ತಮ್ಮ ದುಷ್ಟತ್ವವನ್ನು ಬಿಟ್ಟು ತಿರುಗದ ಹಾಗೆ ಅವರ ಕೈಗಳನ್ನು ಬಲಪಡಿಸುತ್ತಾರೆ; ಅವರೆಲ್ಲರೂ ನನಗೆ ಸೊದೋಮಿನ ಹಾಗೆಯೂ ಅದರ ನಿವಾಸಿಗಳು ಗೊಮೋರದ ಹಾಗೆಯೂ ಇದ್ದಾರೆ. ಆದದರಿಂದ ಸೈನ್ಯಗಳ ಕರ್ತನು ಪ್ರವಾದಿಗಳ ವಿಷಯದಲ್ಲಿ ಹೇಳುವದೇನಂದರೆ--ಇಗೋ, ನಾನು ಅವರಿಗೆ ಮಾಚಿಪತ್ರೆಯನ್ನು ತಿನ್ನುವದಕ್ಕೆ ಕೊಡುತ್ತೇನೆ ವಿಷದ ನೀರನ್ನು ಕುಡಿಯಕೊಡುತ್ತೇನೆ; ಯೆರೂಸಲೇ ಮಿನ ಪ್ರವಾದಿಗಳ ಕಡೆಯಿಂದ ಭ್ರಷ್ಟತ್ವವು ದೇಶಕ್ಕೆಲ್ಲಾ ಹರಡಿದೆ. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ನಿಮಗೆ ಪ್ರವಾದಿಸುವ ಪ್ರವಾದಿಗಳ ವಾಕ್ಯಕ್ಕೆ ಕಿವಿ ಗೊಡಬೇಡಿರಿ; ಅವರು ನಿಮ್ಮನ್ನು ನಿಷ್ಫಲಮಾಡುತ್ತಾರೆ; ಕರ್ತನ ಬಾಯಿಂದಲ್ಲ, ಸ್ವಂತ ಹೃದಯದಿಂದ ದರ್ಶನ ವನ್ನು ಹೇಳುತ್ತಾರೆ. ಆದರೂ ನನ್ನನ್ನು ಅಸಹ್ಯಿಸುವವ ರಿಗೆ ಅವರು--ನಿಮಗೆ ಸಮಾಧಾನವಾಗುವದೆಂದು ಕರ್ತನು ಹೇಳುತ್ತಾನೆ ಎಂದು ಹೇಳುತ್ತಲೇ ಇದ್ದಾರೆ; ತಮ್ಮ ಹೃದಯದ ಕಲ್ಪನೆಯ ಪ್ರಕಾರ ನಡಕೊಳ್ಳುವವ ರೆಲ್ಲರಿಗೆ--ನಿಮ್ಮ ಮೇಲೆ ಕೇಡು ಬರುವದಿಲ್ಲ ಅನ್ನುತ್ತಾರೆ. ಆದರೆ ಯಾರು ಕರ್ತನ ಆಲೋಚನೆಯಲ್ಲಿ ನಿಂತು ಆತನ ವಾಕ್ಯವನ್ನು ತಿಳುಕೊಂಡು ಕೇಳಿದ್ದಾರೆ? ಯಾರು ಆತನ ವಾಕ್ಯದಲ್ಲಿ ಲಕ್ಷ್ಯವಿಟ್ಟು ಕೇಳಿದ್ದಾರೆ? ಇಗೋ, ಕರ್ತನ ಬಿರುಗಾಳಿ ಉಗ್ರವಾಗಿ ಹೊರಟಿದೆ; ಅಘೋರ ವಾದ ಬಿರುಗಾಳಿಯು ದುಷ್ಟರ ತಲೆಯ ಮೇಲೆ ಕಠಿಣ ವಾಗಿ ಬೀಳುವದು. ಆತನು ತನ್ನ ಹೃದಯದ ಅಲೋ ಚನೆಗಳನ್ನು ನಡೆಸಿ ತೀರಿಸುವ ವರೆಗೂ ಕರ್ತನ ಕೋಪವು ತಿರುಗುವದಿಲ್ಲ; ಅಂತ್ಯದಿನಗಳಲ್ಲಿ ಅದನ್ನು ಸಂಪೂರ್ಣವಾಗಿ ಯೋಚನೆ ಮಾಡುವಿರಿ. ನಾನು ಪ್ರವಾದಿಗಳನ್ನು ಕಳುಹಿಸಲಿಲ್ಲ, ಆದಾಗ್ಯೂ ಅವರು ಓಡಿದರು; ನಾನು ಅವರ ಸಂಗಡ ಮಾತನಾಡಲಿಲ್ಲ ಆದಾಗ್ಯೂ ಪ್ರವಾದಿಸಿದರು. ಆದರೆ ಅವರು ನನ್ನ ಆಲೋಚನೆಯಲ್ಲಿ ನಿಂತಿದ್ದರೆ, ಅವರು ಜನರಿಗೆ ನನ್ನ ವಾಕ್ಯಗಳನ್ನು ಕೇಳಕೊಟ್ಟು ಅವರನ್ನು ತಮ್ಮ ಕೆಟ್ಟ ಮಾರ್ಗದಿಂದಲೂ ತಮ್ಮ ಕ್ರಿಯೆಗಳ ಕೆಟ್ಟತನದಿಂದಲೂ ತಿರುಗಿಸುತ್ತಿದ್ದರು. ಕರ್ತನು ಅನ್ನುತ್ತಾನೆ--ನಾನು ಸವಿಾಪದಲ್ಲಿ ದೇವರಾಗಿದ್ದು ದೂರದಲ್ಲಿ ದೇವರ ಲ್ಲವೋ? ನಾನು ಅವನನ್ನು ನೋಡದ ಹಾಗೆ ಒಬ್ಬನು ಮರೆಯಾದ ಸ್ಥಳಗಳಲ್ಲಿ ತನ್ನನ್ನು ಅಡಗಿಸಿಕೊ ಳ್ಳಬಹುದೋ ಎಂದು ಕರ್ತನು ಅನ್ನುತ್ತಾನೆ; ನಾನು ಆಕಾಶದಲ್ಲಿಯೂ ಭೂಮಿಯಲ್ಲಿಯೂ ವ್ಯಾಪಿಸಿರುವವ ನಲ್ಲವೋ? ಎಂದು ಕರ್ತನು ಅನ್ನುತ್ತಾನೆ. ನನ್ನ ಹೆಸರಿನಲ್ಲಿ ಸುಳ್ಳನ್ನು ಪ್ರವಾದಿಸುವ ಪ್ರವಾದಿಗಳು ಹೇಳುವದನ್ನು ಕೇಳಿದ್ದೇನೆ. ಅವರು--ನಾನು ಕನಸು ಕಂಡಿದ್ದೇನೆ, ಕನಸು ಕಂಡಿದ್ದೇನೆ ಅನ್ನುತ್ತಾರೆ. ಸುಳ್ಳು ಪ್ರವಾದಿಸುವ ಪ್ರವಾದಿಗಳ ಹೃದಯದಲ್ಲಿ ಇದು ಎಷ್ಟರ ವರೆಗೆ ಇರುವದು? ಹೌದು, ಅವರು ತಮ್ಮ ಹೃದಯದ ಮೋಸವನ್ನು ಪ್ರವಾದಿಸುವವರೇ; ಅವರ ತಂದೆ ಗಳು ಬಾಳನಿಂದ ನನ್ನ ಹೆಸರನ್ನು ಹೇಗೆ ಮರೆತರೋ ಹಾಗೆಯೇ ಇವರು ತಮ್ಮ ತಮ್ಮ ನೆರೆಯವರಿಗೆ ತಿಳಿಸುವ ಕನಸುಗಳಿಂದ ನನ್ನ ಜನರು ನನ್ನ ಹೆಸರನ್ನು ಮರೆತು ಬಿಡುವಂತೆ ಮಾಡುವದಕ್ಕೆ ಯೋಚಿಸುತ್ತಾರೆ. ಕನಸು ಉಂಟಾದ ಪ್ರವಾದಿಯು ಕನಸನ್ನು ತಿಳಿಸಲಿ, ನನ್ನ ವಾಕ್ಯ ಉಂಟಾದವನು ನನ್ನ ವಾಕ್ಯವನ್ನು ನಂಬಿಗಸ್ತನಾಗಿ ಹೇಳಲಿ; ಗೋಧಿಗೂ ಹೊಟ್ಟಿಗೂ ಸಂಬಂಧವೇನೆಂದು ಕರ್ತನು ಅನ್ನುತ್ತಾನೆ. ನನ್ನ ವಾಕ್ಯವು ಬೆಂಕಿಯ ಹಾಗಲ್ಲವೋ ಎಂದು ಕರ್ತನು ಅನ್ನುತ್ತಾನೆ. ಅದು ಬಂಡೆಯನ್ನು ತುಂಡು ಮಾಡುವ ಸುತ್ತಿಗೆಯ ಹಾಗಲ್ಲವೋ?
- 1 Thessalonians 2:5 1 ಥೆಸಲೊನೀಕದವರಿಗೆ 2:5ನಿಮಗೆ ತಿಳಿದಿ ರುವ ಪ್ರಕಾರ ನಾವು ಎಂದಿಗೂ ಮುಖಸ್ತುತಿಯನ್ನು ಮಾಡುವವರಾಗಿ ಕಾಣಬಂದಿಲ್ಲ. ದ್ರವ್ಯಾಶೆಯನ್ನು ಮರೆಮಾಡುವದಕ್ಕಾಗಿ ವೇಷವನ್ನು ಹಾಕಿಕೊಂಡವ ರಾಗಿಲ್ಲ; ಇದಕ್ಕೆ ದೇವರೇ ಸಾಕ್ಷಿ.
- Romans 16:18 ರೋಮಾಪುರದವರಿಗೆ 16:18ಅಂಥವರು ನಮ್ಮ ಕರ್ತನಾದ ಯೇಸು ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿ ಗಳಿಂದಲೂ ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪ ಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.
- Lamentations 2:14 ಪ್ರಲಾಪಗಳು 2:14ನಿನ್ನ ಪ್ರವಾದಿಗಳು ನಿನಗಾಗಿ ವ್ಯರ್ಥವಾದ ಮೂರ್ಖತನದ ವಿಷಯಗಳನ್ನು ನೋಡಿದ್ದಾರೆ. ಅವರು ನಿನ್ನ ದುರವಸ್ಥೆಯನ್ನು ನೀಗಿಸುವದಕ್ಕಾಗಿ ನಿನ್ನ ದುಷ್ಟತನ ವನ್ನು ಬಯಲಿಗೆ ತರಲಿಲ್ಲ; ಆದರೆ ನಿನಗಾಗಿ ಸುಳ್ಳಿನ ಭಾರಗಳನ್ನು ಮತ್ತು ಗಡೀಪಾರು ಮಾಡುವ ಕಾರಣ ಗಳನ್ನು ನೋಡಿದ್ದಾರೆ.
- 1 Kings 22:17 1 ಅರಸುಗಳು 22:17ಅದಕ್ಕ ವನು ಕಾಯುವವನಿಲ್ಲದ ಕುರಿಗಳ ಹಾಗೆಯೇ ಬೆಟ್ಟ ಗಳ ಮೇಲೆ ಚದರಿಸಲ್ಪಟ್ಟ ಸಮಸ್ತ ಇಸ್ರಾಯೇಲನ್ನು ನೋಡಿದೆನು. ಆಗ ಕರ್ತನು--ಇವರಿಗೆ ಯಜಮಾ ನನು ಇಲ್ಲದೆ ಪ್ರತಿ ಮನುಷ್ಯನು ತನ್ನ ತನ್ನ ಮನೆಗೆ ಸಮಾಧಾನವಾಗಿ ಹಿಂತಿರಿಗಿ ಹೋಗಲಿ ಅಂದನು.
- Ezekiel 13:6 ಯೆಹೆಜ್ಕೇಲನು 13:6ಅವರು ವ್ಯರ್ಥವಾದದ್ದನ್ನೂ ಸುಳ್ಳು ಭವಿಷ್ಯ ವಾದದ್ದನ್ನೂ ನೋಡಿದ್ದಾರೆಂದು ಕರ್ತನು ಹೇಳುತ್ತಾನೆ; ಆದರೆ ಕರ್ತನು ಅವರನ್ನು ಕಳುಹಿಸಲಿಲ್ಲ; ತಾವು ನುಡಿದ ಮಾತು ಬೇರೆಯವರು ನಿರೀಕ್ಷಿಸುವಂತೆ ಮಾಡುತ್ತಾರೆ.
- Proverbs 26:28 ಜ್ಞಾನೋಕ್ತಿಗಳು 26:28ಸುಳ್ಳು ನಾಲಿಗೆಯಿಂದ ಬಾಧಿಸಲ್ಪ ಟ್ಟವರನ್ನೇ ಅದು ಹಗೆಮಾಡುವದು; ಮುಖಸ್ತುತಿ ಮಾಡುವ ಬಾಯಿಯು ನಾಶನವನ್ನುಂಟುಮಾಡುತ್ತದೆ.
- 2 Peter 2:2–3 2 ಪೇತ್ರನು 2:2–3ಅವರ ಕೆಡುಕಿನ ಮಾರ್ಗಗಳನ್ನು ಅನೇಕರು ಅನುಸರಿಸುವರು; ಅವರ ನಿಮಿತ್ತ ಸತ್ಯ ಮಾರ್ಗಕ್ಕೆ ದೂಷಣೆ ಉಂಟಾಗುವದು. ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತು ಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸ ಬೇಕೆಂದಿರುವರು. ಅಂಥವರಿಗೆ ಬಹಳ ಕಾಲದಿಂದಿದ್ದ ತೀರ್ಪು ತಡವಾಗುವದಿಲ್ಲ. ಅವರಿಗಾಗುವ ನಾಶನವು ತೂಕಡಿಸುವದಿಲ್ಲ.
- 1 Kings 22:11–13 1 ಅರಸುಗಳು 22:11–13ಆಗ ಕೆನಾನನ ಮಗನಾದ ಚಿದ್ಕೀಯನು ತನಗೆ ಕಬ್ಬಿಣದ ಕೊಂಬುಗಳನ್ನು ಮಾಡಿಕೊಂಡು--ಇವುಗಳಿಂದ ನೀನು ಅರಾಮ್ಯರನ್ನು ನಿರ್ಮೂಲ ಮಾಡುವವರೆಗೂ ಇರಿದು ಹಾಕುವಿ ಎಂದು ಕರ್ತನು ಹೇಳುತ್ತಾನೆ ಅಂದನು ಸಮಸ್ತ ಪ್ರವಾದಿಗಳೂ ಹಾಗೆಯೇ ಪ್ರವಾದಿಸಿ--ಗಿಲ್ಯಾದಿನ ರಾಮೋತಿಗೆ ಹೋಗಿ ಸಾಫಲ್ಯ ಹೊಂದು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು. ಆದರೆ ವಿಾಕಾಯೆಹುನನ್ನು ಕರೆಯಲು ಹೋದ ದೂತನು ಅವನಿಗೆ--ಇಗೋ, ಪ್ರವಾದಿಗಳ ವಾಕ್ಯಗಳು ಒಂದೇ ಬಾಯಿಂದ ಅರಸನಿಗೆ ಒಳ್ಳೇದನ್ನೇ ಪ್ರಕಟಿಸುತ್ತವೆ; ನಿನ್ನ ವಾಕ್ಯವು ಅವರಲ್ಲಿರುವ ಒಬ್ಬನ ವಾಕ್ಯದ ಹಾಗೆಯೇ ಇರಲಿ; ಒಳ್ಳೇ ಮಾತು ಆಡು ಅಂದನು.