Ezekiel · chapter 13 · verse 8
Ezekiel 13:8 in Kannada
ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನೀವು ವ್ಯರ್ಥವಾಗಿ ಮಾತನಾಡಿದ್ದರಿಂದಲೂ ಸುಳ್ಳನ್ನು ಕಂಡದ್ದರಿಂದಲೂ ಇಗೋ, ನಾನು ನಿಮಗೆ ವಿರೋಧವಾಗಿರುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
Aadadarinda devaraada kartanu heege helu ttaane--neevu vyarthavaagi maatanaadiddarindaloo sullannu kandaddarindaloo igo, naanu nimage virodhavaagiruvenendu devaraada kartanu heluttaane.
Ezekiel 13:8 in English
- King James Version (KJV)
- Therefore thus saith the Lord GOD; Because ye have spoken vanity, and seen lies, therefore, behold, I [am] against you, saith the Lord GOD.
- World English Bible (WEB)
- “‘Therefore the Lord GOD says: “Because you have spoken falsehood and seen lies, therefore, behold, I am against you,” says the Lord GOD.
- American Standard Version (ASV)
- Therefore thus saith the Lord Jehovah: Because ye have spoken falsehood, and seen lies, therefore, behold, I am against you, saith the Lord Jehovah.
- Bible in Basic English (BBE)
- So this is what the Lord has said: Because your words are without substance and your visions are false, see, I am against you, says the Lord.
- Darby Translation (DBY)
- Therefore thus saith the Lord Jehovah: Because ye speak vanity, and have seen lies, therefore behold, I am against you, saith the Lord Jehovah.
- Webster's Bible (WBS)
- Therefore thus saith the Lord GOD; Because ye have spoken vanity, and seen lies, therefore, behold, I [am] against you, saith the Lord GOD.
- Young's Literal Translation (YLT)
- Therefore, thus said the Lord Jehovah: Because ye have spoken vanity, and seen a lie, Therefore, lo, I [am] against you, An affirmation of the Lord Jehovah.
Read in context
- 6ಅವರು ವ್ಯರ್ಥವಾದದ್ದನ್ನೂ ಸುಳ್ಳು ಭವಿಷ್ಯ ವಾದದ್ದನ್ನೂ ನೋಡಿದ್ದಾರೆಂದು ಕರ್ತನು ಹೇಳುತ್ತಾನೆ; ಆದರೆ ಕರ್ತನು ಅವರನ್ನು ಕಳುಹಿಸಲಿಲ್ಲ; ತಾವು ನುಡಿದ ಮಾತು ಬೇರೆಯವರು ನಿರೀಕ್ಷಿಸುವಂತೆ ಮಾಡುತ್ತಾರೆ.
- 7ವ್ಯರ್ಥ ದರ್ಶನವನ್ನು ನೋಡಿರುವಿ ರಲ್ಲಾ. ಸುಳ್ಳಾದ ಭವಿಷ್ಯವನ್ನು ಹೇಳಿದ್ದೀರಲ್ಲಾ. ನಾನು ಮಾತನಾಡದೆ ಇದ್ದರೂ--ಕರ್ತನೇ ಹೇಳಿದನೆಂದು ಹೇಳಿದ್ದಿರಲ್ಲಾ.
- 8ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನೀವು ವ್ಯರ್ಥವಾಗಿ ಮಾತನಾಡಿದ್ದರಿಂದಲೂ ಸುಳ್ಳನ್ನು ಕಂಡದ್ದರಿಂದಲೂ ಇಗೋ, ನಾನು ನಿಮಗೆ ವಿರೋಧವಾಗಿರುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
- 9ವ್ಯರ್ಥವಾದದ್ದನ್ನು ದರ್ಶಿಸಿ, ಸುಳ್ಳು ಭವಿಷ್ಯಗಳನ್ನು ಹೇಳುವ ಪ್ರವಾದಿಗಳ ಮೇಲೆ ನನ್ನ ಕೈ ಮಾಡುವೆನು. ಅವರು ನನ್ನ ಜನರ ಸಭೆಯಲ್ಲಿ ಇರುವದೂ ಇಲ್ಲ, ಇಸ್ರಾಯೇಲನ ಮನೆತನದವರ ಪಟ್ಟಿಯಲ್ಲಿ ಬರೆಯಲ್ಪಡುವದೂ ಇಲ್ಲ; ಇಸ್ರಾಯೇಲಿನ ದೇಶದಲ್ಲಿ ಪ್ರವೇಶಿಸುವದೂ ಇಲ್ಲ; ನಾನೇ ದೇವರಾದ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
- 10ಸಮಾಧಾನ ವಿಲ್ಲದಿರುವಾಗ ಅವರು ಸಮಾಧಾನವೆಂದು ಹೇಳಿದ್ದರಿಂ ದಲೂ ಮತ್ತು ಇಗೋ, ಒಬ್ಬನು ಗೋಡೆಯನ್ನು ಕಟ್ಟಿದರೆ ಮತ್ತೊಬ್ಬನು ಅದಕ್ಕೆ ಸುಣ್ಣ ಹಚ್ಚಿದ್ದರಿಂದಲೂ
Cross references
- Ezekiel 21:3 ಯೆಹೆಜ್ಕೇಲನು 21:3ಇಸ್ರಾ ಯೇಲ್ ದೇಶಕ್ಕೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ; ಇಗೋ, ನಾನು ನಿಮಗೆ ವಿರೋಧವಾಗಿದ್ದೇನೆ ಮತ್ತು ನನ್ನ ಕತ್ತಿಯನ್ನು ಅದರ ಒರೆಯಿಂದ ಹೊರಗೆ ತೆಗೆದು ನಿನ್ನೊಳಗಿರುವ ನೀತಿ ವಂತನನ್ನೂ ದುಷ್ಟನನ್ನೂ ಕಡಿದುಬಿಡುವೆನು.
- Ezekiel 5:8 ಯೆಹೆಜ್ಕೇಲನು 5:8ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು, ನಾನೇ, ನಿನಗೆ ವಿರೋಧವಾಗಿದ್ದೇನೆ; ಜನಾಂಗಗಳ ಕಣ್ಣುಗಳ ಮುಂದೆ ನಿನ್ನ ಮಧ್ಯದಲ್ಲಿ ನ್ಯಾಯತೀರ್ಪನ್ನು ಮಾಡುತ್ತೇನೆ.
- Ezekiel 28:22 ಯೆಹೆಜ್ಕೇಲನು 28:22ನೀನು ಹೇಳಬೇಕಾದದ್ದೇನಂದರೆ -- ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಚಿದೋನೇ ನಾನು ನಿನಗೆ ವಿರೋಧವಾಗಿದ್ದೇನೆ; ನಿನ್ನ ಮಧ್ಯದಲ್ಲಿ ಘನವನ್ನು ಹೊಂದುವೆನು. ಆಗ ನಾನು ಅದರಲ್ಲಿ ನ್ಯಾಯಗಳನ್ನು ತೀರಿಸಿ, ಪರಿಶುದ್ಧನಾಗುವಾಗ ನಾನೇ ಕರ್ತನೆಂದು ತಿಳಿಯುವರು.
- Ezekiel 26:3 ಯೆಹೆಜ್ಕೇಲನು 26:3ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ತೂರ್ ದೇಶವೇ, ನಾನು ನಿನಗೆ ವಿರೋಧವಾಗಿದ್ದೇನೆ, ಸಮುದ್ರವು ತನ್ನ ಅಲೆಗಳನ್ನು ಹೇಗೆ ಬರಮಾಡುವದೋ ಹಾಗೆಯೇ ನಾನು ನಿನಗೆ ವಿರೋಧವಾಗಿ ಅನೇಕ ಜನಾಂಗಗಳನ್ನು ನಿನ್ನ ಮೇಲೆ ಬರಮಾಡುವೆನು.
- Ezekiel 35:3 ಯೆಹೆಜ್ಕೇಲನು 35:3ಅದಕ್ಕೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಸೇಯಾರ್ ಪರ್ವತವೇ, ನಾನು ನಿನಗೆ ವಿರುದ್ಧವಾಗಿ ದ್ದೇನೆ. ನಾನು ನನ್ನ ಕೈಯನ್ನು ನಿನಗೆ ವಿರುದ್ಧವಾಗಿ ಚಾಚುತ್ತೇನೆ. ನಾನು ನಿನ್ನನ್ನು ಸಂಪೂರ್ಣವಾಗಿ ನಾಶಮಾಡುತ್ತೇನೆ.
- Nahum 2:13 ನಹೂಮ 2:13ಸೈನ್ಯಗಳ ಕರ್ತನು ಹೇಳುವದೇನಂದರೆ -- ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ; ಅದರ ರಥಗಳನ್ನು ಹೊಗೆಯಾ ಗಲು ಸುಡುತ್ತೇನೆ; ಕತ್ತಿಯು ನಿನ್ನ ಎಳೇ ಸಿಂಹಗಳನ್ನು ನುಂಗಿಬಿಡುವದು; ನಿನ್ನ ಕೊಳ್ಳೆಯನ್ನು ಭೂಮಿಯ ಮೇಲಿನಿಂದ ಕಡಿದುಬಿಡುತ್ತೇನೆ; ನಿನ್ನ ಸೇವಕರ ಶಬ್ದವು ಇನ್ನು ಕೇಳಲ್ಪಡುವದಿಲ್ಲ.
- Nahum 3:5–6 ನಹೂಮ 3:5–6ಸೈನ್ಯಗಳ ಕರ್ತನು ಹೇಳುವದೇ ನಂದರೆ--ಇಗೋ, ನಾನು ನಿನಗೆ ವಿರೋಧವಾಗಿ ದ್ದೇನೆ; ನಿನ್ನ ಸೆರಗುಗಳನ್ನು ನಿನ್ನ ಮುಖದ ಮೇಲೆ ಎತ್ತಿ ಜನಾಂಗಗಳಿಗೆ ನಿನ್ನ ನಾಚಿಕೆಯನ್ನೂ ರಾಜ್ಯಗಳಿಗೆ ನಿನ್ನ ನಿಂದೆಯ ಬೆತ್ತಲೆತನವನ್ನೂ ತೋರಿಸುತ್ತೇನೆ. ಅಸಹ್ಯವಾದವುಗಳನ್ನು ನಿನ್ನ ಮೇಲೆ ಹಾಕಿ ನಿನ್ನನ್ನು ನೀಚಳನ್ನಾಗಿ ಮಾಡಿ ನಿನ್ನನ್ನು ನೋಟಕ್ಕೆ ಇಡುತ್ತೇನೆ.
- Ezekiel 29:10 ಯೆಹೆಜ್ಕೇಲನು 29:10ಆದದರಿಂದ ಇಗೋ, ನಾನು ನಿನಗೆ ವಿರೋಧ ವಾಗಿಯೂ ನಿನ್ನ ನದಿಗಳಿಗೆ ವಿರುದ್ಧವಾಗಿಯೂ ಇದ್ದೇನೆ. ಐಗುಪ್ತದೇಶವನ್ನು ಸೆವೇನೆಯ ಗೋಪುರ ಮೊದಲುಗೊಂಡು ಕೂಷಿನ ಪ್ರಾಂತ್ಯದವರೆಗೂ ಸಂಪೂರ್ಣವಾಗಿ ಕಾಡಾಗಿಯೂ ಹಾಳಾಗಿಯೂ ಮಾಡುತ್ತೇನೆ.
- Ezekiel 29:3–4 ಯೆಹೆಜ್ಕೇಲನು 29:3–4ನೀನು ಮಾತನಾಡಿ ಹೇಳಬೇಕಾದ ದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಐಗುಪ್ತದ ಅರಸನಾದ ಫರೋಹನೇ, ತನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು--ಈ ನದಿ ನನ್ನದು, ನಾನೇ ಅದನ್ನು ನನಗೋಸ್ಕರ ಮಾಡಿ ಕೊಂಡಿದ್ದೇನೆಂದು ಹೇಳಿಕೊಂಡ ದೊಡ್ಡ ಘಟ ಸರ್ಪವೇ, ಇಗೋ, ನಾನು ನಿನಗೆ ವಿರುದ್ಧವಾಗಿದ್ದೇನೆ. ಆದರೆ ನಿನ್ನ ದವಡೆಗಳಲ್ಲಿ ಗಾಳಗಳನ್ನು ಹಾಕಿ, ನದಿಗಳ ವಿಾನುಗಳನ್ನು ಬೆನ್ನು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡಿ ನಿನ್ನನ್ನು ನಿನ್ನ ನದಿಗಳೊಳಗಿಂದ ಮೇಲೆ ಎಳೆದು ನಿನ್ನ ವಿಾನುಗಳು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡುವೆನು. ನಿನ್ನನ್ನೂ ನಿನ್ನ ನದಿಗಳ ವಿಾನುಗಳನ್ನೂ ಅರಣ್ಯದಲ್ಲಿ ಹಾಕುವೆನು; ನೀನು ಬಯಲುಗಳ ಮೇಲೆ ಬಿದ್ದಿರುವಿ; ನಿನ್ನನ್ನು ಯಾರೂ ಒಟ್ಟುಗೂಡಿಸುವದು ಇಲ್ಲ, ಸೇರಿಸುವದೂ ಇಲ್ಲ.
- Jeremiah 50:31–32 ಯೆರೆಮೀಯ 50:31–32ಅತಿ ಗರ್ವಿಷ್ಠನೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ; ನಿನ್ನ ದಿವಸವೂ ನಿನ್ನ ವಿಚಾರಣೆಯ ಕಾಲವೂ ಬಂತು. ಆಗ ಅತಿ ಗರ್ವದ (ರಾಜ್ಯವು) ಎಡವಿ ಬೀಳುವದು; ಅದನ್ನು ಎಬ್ಬಿಸುವದಕ್ಕೆ ಯಾರೂ ಇರುವದಿಲ್ಲ; ಅದರ ಪಟ್ಟಣಗಳಲ್ಲಿ ನಾನು ಬೆಂಕಿ ಹಚ್ಚುವೆನು, ಅದು ಅದರ ಸುತ್ತಲಿರುವದನ್ನೆಲ್ಲಾ ನುಂಗಿಬಿಡುವದು.
- 1 Timothy 4:1 1 ತಿಮೊಥೆಯನಿಗೆ 4:1ಕಡೇಕಾಲಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ನಂಬಿಕೆಯಿಂದ ತೊಲಗಿಹೋಗುವ ರೆಂದು ಆತ್ಮನು ಸ್ಪಷ್ಟವಾಗಿ ಹೇಳುತ್ತಾನೆ.
- 1 Timothy 4:8 1 ತಿಮೊಥೆಯನಿಗೆ 4:8ದೇಹಸಾಧನೆಯು ಸ್ವಲ್ಪ ಮಟ್ಟಿಗೆ ಲಾಭಕರವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಲಾಭಕರವಾದದ್ದು; ಆದಕ್ಕೆ ಈಗಲೂ ಮುಂದೆ ಬರುವದಕ್ಕೂ ಜೀವಾಗ್ದಾನ ಉಂಟು.