Ezekiel · chapter 14 · verse 23
Ezekiel 14:23 in Kannada
ನೀವು ಅದರ ದುರ್ಮಾರ್ಗಗಳನ್ನೂ ದುಷ್ಕೃತ್ಯ ಗಳನ್ನೂ ನೋಡುವಾಗ ಅದರಿಂದಲೇ ನಿಮಗೆ ಸಮಾಧಾನವಾಗುವದು; ನಾನು ಅದರೊಳಗೆ ಮಾಡಿದ್ದೆಲ್ಲವು ಕಾರಣವಿಲ್ಲದೆ ಮಾಡಲಿಲ್ಲವೆಂದು ತಿಳಿದುಕೊಳ್ಳುವಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.
Neevu adara durmaargagalannoo dushkrutya galannoo noduvaaga adarindale nimage samaadhaanavaaguvadu; naanu adarolage maadiddellavu kaaranavillade maadalillavendu tilidukolluviri endu devaraada kartanu heluttaane.
Ezekiel 14:23 in English
- King James Version (KJV)
- And they shall comfort you, when ye see their ways and their doings: and ye shall know that I have not done without cause all that I have done in it, saith the Lord GOD.
- World English Bible (WEB)
- They will comfort you, when you see their way and their doings; then you will know that I have not done all that I have done in it without cause,” says the Lord GOD.
- American Standard Version (ASV)
- And they shall comfort you, when ye see their way and their doings; and ye shall know that I have not done without cause all that I have done in it, saith the Lord Jehovah.
- Bible in Basic English (BBE)
- They will give you comfort when you see their ways and their doings: and you will be certain that not for nothing have I done all the things I have done in it, says the Lord.
- Darby Translation (DBY)
- And they shall comfort you, when ye see their way and their doings; and ye shall know that I have not done without cause all that I have done in it, saith the Lord Jehovah.
- Webster's Bible (WBS)
- And they shall comfort you, when ye see their ways and their doings: and ye shall know that I have not done without cause all that I have done in it, saith the Lord GOD.
- Young's Literal Translation (YLT)
- And they have comforted you, for ye see their way and their doings, and ye have known that not for nought have I done all that which I have done in her — an affirmation of the Lord Jehovah.'
Read in context
- 21ದೇವರಾದ ಕರ್ತನು ಹೀಗೆ ಹೇಳುತ್ತಾನೆ; ನಾನು ಕತ್ತಿ ಬರಗಾಲ ದುಷ್ಟಮೃಗ ವ್ಯಾಧಿಗಳೆಂಬ ನನ್ನ ನಾಲ್ಕು ಕಠಿಣವಾದ ನ್ಯಾಯತೀರ್ಪುಗಳನ್ನು ಯೆರೂಸ ಲೇಮಿನ ಮೇಲೆ ಕಳುಹಿಸಿ ಮನುಷ್ಯರನ್ನೂ ಮೃಗಗಳನ್ನೂ ಕಡಿದು ಬಿಟ್ಟ ಮೇಲೆ ಮತ್ತೆ ಏನಾಗುವದು?
- 22ಆದಾಗ್ಯೂ ಇಗೋ, ಅದರಲ್ಲಿ ಕುಮಾರ ಕುಮಾರ್ತೆಯರಲ್ಲಿ ಕೆಲವರು ಹೇಗೂ ತಪ್ಪಿಸಿಕೊಂಡು ಅಲ್ಲಿಂದ ಉಳಿದು ಒಯ್ಯಲ್ಪಡುವರು. ಇಗೋ, ಅವರು ನಿಮ್ಮ ಬಳಿಗೆ ಬಂದಾಗ ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ಕಂಡು ನಾನು ಯೆರೂಸಲೇಮಿನ ಮೇಲೆ ತಂದ ಕೇಡಿನ ವಿಷಯವಾಗಿಯೂ ನಾನು ಅವರ ಮೇಲೆ ತಂದ ಎಲ್ಲವುಗಳ ವಿಷಯವಾಗಿಯೂ ಸಮಾಧಾನ ಹೊಂದು ವಿರಿ.ನೀವು ಅದರ ದುರ್ಮಾರ್ಗಗಳನ್ನೂ ದುಷ್ಕೃತ್ಯ ಗಳನ್ನೂ ನೋಡುವಾಗ ಅದರಿಂದಲೇ ನಿಮಗೆ ಸಮಾಧಾನವಾಗುವದು; ನಾನು ಅದರೊಳಗೆ ಮಾಡಿದ್ದೆಲ್ಲವು ಕಾರಣವಿಲ್ಲದೆ ಮಾಡಲಿಲ್ಲವೆಂದು ತಿಳಿದುಕೊಳ್ಳುವಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.
- 23ನೀವು ಅದರ ದುರ್ಮಾರ್ಗಗಳನ್ನೂ ದುಷ್ಕೃತ್ಯ ಗಳನ್ನೂ ನೋಡುವಾಗ ಅದರಿಂದಲೇ ನಿಮಗೆ ಸಮಾಧಾನವಾಗುವದು; ನಾನು ಅದರೊಳಗೆ ಮಾಡಿದ್ದೆಲ್ಲವು ಕಾರಣವಿಲ್ಲದೆ ಮಾಡಲಿಲ್ಲವೆಂದು ತಿಳಿದುಕೊಳ್ಳುವಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.
Cross references
- Jeremiah 22:8–9 ಯೆರೆಮೀಯ 22:8–9ಅನೇಕ ಜನಾಂಗಗಳು ಈ ಪಟ್ಟಣವನ್ನು ಹಾದುಹೋಗುವರು, ಕರ್ತನು ಈ ದೊಡ್ಡ ಪಟ್ಟಣಕ್ಕೆ ಯಾಕೆ ಈ ಪ್ರಕಾರ ಮಾಡಿ ದ್ದಾನೆಂದು ನೆರೆಯವರು ಒಬ್ಬರಿಗೊಬ್ಬರು ಹೇಳಿಕೊಳ್ಳು ವರು. ಆಗ ಅವರು--ತಮ್ಮ ದೇವರಾದ ಕರ್ತನ ಒಡಂಬಡಿಕೆಯನ್ನು ಬಿಟ್ಟು, ಬೇರೆ ದೇವರುಗಳಿಗೆ ನಮ ಸ್ಕರಿಸಿ ಸೇವಿಸಿದ್ದರಿಂದಲೇ ಎಂದು ಅವರು ಉತ್ತರ ಕೊಡುವರು.
- Nehemiah 9:33 ನೆಹೆಮೀಯ 9:33ಆದರೆ ನೀನು ನಮ್ಮ ಮೇಲೆ ಬರಮಾಡಿದ ಎಲ್ಲಾದರಲ್ಲಿ ನೀತಿಪರನಾಗಿದ್ದಿ. ಯಾಕಂದರೆ ನೀನು ಮಾಡಿದ್ದು ಸತ್ಯವಾದದ್ದು; ಆದರೆ ನಾವು ದುಷ್ಟರಾಗಿ ನಡೆದೆವು.
- Jeremiah 7:17–28 ಯೆರೆಮೀಯ 7:17–28ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸ ಲೇಮಿನ ಬೀದಿಗಳಲ್ಲಿಯೂ ಅವರು ಮಾಡುವದನ್ನು ನೀನು ನೋಡುವದಿಲ್ಲವೋ? ಆಕಾಶದ ರಾಣಿಗೆ ದೋಸೆಗಳನ್ನು ಮಾಡುವದಕ್ಕೂ ಬೇರೆ ದೇವರುಗಳಿಗೆ ಪಾನದರ್ಪಣೆಯನ್ನು ಹೊಯ್ಯುವದಕ್ಕೂ ಮಕ್ಕಳು ಕಟ್ಟಿಗೆ ಕೂಡಿಸುತ್ತಾರೆ, ಅವರು ನನಗೆ ಕೋಪವೆಬ್ಬಿಸು ವದಕ್ಕಾಗಿಯೇ ತಂದೆಗಳು ಬೆಂಕಿ ಹಚ್ಚುತ್ತಾರೆ, ಹೆಂಗಸರು ಹಿಟ್ಟು ನಾದುತ್ತಾರೆ. ಕರ್ತನು ಅನ್ನುತ್ತಾನೆ--ಅವರು ನಿನಗೆ ಕೋಪವನ್ನೆಬ್ಬಿಸುತ್ತಾರೋ? ಅವರ ಸ್ವಂತ ಮುಖ ಗಳು ಗಲಿಬಿಲಿಗೊಳ್ಳುವ ಹಾಗೆ ತಮಗೆ ತಾವೇ ರೇಗಿಸಿಕೊಳ್ಳುತ್ತಾರಲ್ಲವೋ? ಆದದರಿಂದ ಕರ್ತ ನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಈ ಸ್ಥಳದ ಮೇಲೆಯೂ ಮನುಷ್ಯರ ಮೇಲೆಯೂ ಮೃಗಗಳ ಮೇಲೆಯೂ ಹೊಲದ ಮರಗಳ ಮೇಲೆಯೂ ಭೂಮಿಯ ಫಲದ ಮೇಲೆಯೂ ನನ್ನ ಕೋಪವೂ ಮತ್ತು ಉಗ್ರತೆಯೂ ಹೊಯ್ಯಲ್ಪಡುವದು; ಅದು ಉರಿಯುವದು ಆರಿಹೋಗುವದಿಲ್ಲ. ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ದಹನಬಲಿಗಳನ್ನು ನಿಮ್ಮ ಬಲಿಗಳ ಸಂಗಡ ಕೂಡಿಸಿ ಮಾಂಸವನ್ನು ತಿನ್ನಿರಿ. ನಾನು ನಿಮ್ಮ ಪಿತೃಗಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದ ದಿನದಲ್ಲಿ ದಹನ ಬಲಿಗಳ ಮತ್ತು ಬಲಿಗಳ ಕುರಿತು ಅವರ ಸಂಗಡ ಮಾತಾಡಲಿಲ್ಲ, ಇಲ್ಲವೆ ಅವರಿಗೆ ಆಜ್ಞಾಪಿಸಲಿಲ್ಲ. ಆದರೆ ನಾನು ಅವರಿಗೆ--ನನ್ನ ಶಬ್ದಕ್ಕೆ ವಿಧೇಯರಾಗಿರಿ. ಆಗ ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಜನರಾಗಿರುವಿರಿ; ನಿಮಗೆ ಒಳ್ಳೇದಾಗುವ ಹಾಗೆ ನಾನು ನಿಮಗೆ ಆಜ್ಞಾ ಪಿಸಿದ ಎಲ್ಲಾ ಮಾರ್ಗಗಳಲ್ಲಿ ನಡೆಯಿರಿ ಎಂದು ಆಜ್ಞಾ ಪಿಸಿ ಹೇಳಿದೆನು. ಆದರೆ ಅವರು ಕೇಳಲಿಲ್ಲ, ಇಲ್ಲವೆ ಕಿವಿಗೊಡಲಿಲ್ಲ; ಅವರು ತಮ್ಮ ದುಷ್ಟ ಹೃದಯದ ಆಲೋಚನೆಯ ಪ್ರಕಾರವೂ ಕಲ್ಪನೆಯ ಪ್ರಕಾರವೂ ನಡಕೊಂಡು ಮುಂದಕ್ಕೆ ಅಲ್ಲ, ಹಿಂದಕ್ಕೆ ಹೋದರು. ನಿಮ್ಮ ಪಿತೃಗಳು ಐಗುಪ್ತ ದೇಶವನ್ನು ಬಿಟ್ಟು ಹೋದಂದಿನಿಂದ ಇಂದಿನ ವರೆಗೂ ನಾನು ನನ್ನ ದಾಸರಾಗಿರುವ ಸಕಲ ಪ್ರವಾದಿಗಳನ್ನು ದಿನ ದಿನವೂ ಬೆಳಿಗ್ಗೆ ಎದ್ದು ನಿಮ್ಮ ಬಳಿಗೆ ಕಳುಹಿಸಿದೆನು. ಆದಾಗ್ಯೂ ಅವರು ನನ್ನ ಮಾತನ್ನು ಕೇಳದೆ ಕಿವಿಗೊಡದೆ ತಮ ಕುತ್ತಿಗೆಯನ್ನು ಕಠಿಣಮಾಡಿಕೊಂಡು ತಮ್ಮ ಪಿತೃಗಳಿಗಿಂತ ಕೆಟ್ಟದ್ದನ್ನು ಮಾಡಿದರು. ಆದದರಿಂದ ನೀನು ಈ ಮಾತುಗಳನ್ನೆಲ್ಲಾ ಅವ ರಿಗೆ ಹೇಳಬೇಕು, ಆದರೆ ಅವರು ನಿನ್ನ ಮಾತನ್ನು ಕೇಳುವದಿಲ್ಲ; ಅವರನ್ನು ನೀನು ಕರೆಯುವಿ, ಆದರೆ ಅವರು ನಿನಗೆ ಉತ್ತರ ಕೊಡುವದಿಲ್ಲ. ಹಾಗಾದರೆ ನೀನು ಅವರಿಗೆ--ತನ್ನ ದೇವರಾದ ಕರ್ತನ ಸ್ವರಕ್ಕೆ ವಿಧೇಯವಾಗದಂಥ ಇಲ್ಲವೆ ಶಿಕ್ಷೆಯನ್ನು ಅಂಗೀಕರಿಸ ದಂಥ ಜನಾಂಗವಾಗಿದೆ; ಸತ್ಯವು ನಾಶವಾಯಿತು, ಅದು ಅವರ ಬಾಯಿಯೊಳಗಿಂದ ಕಡಿದುಹಾಕಲ್ಪಟ್ಟಿದೆ.
- Ezekiel 9:8–9 ಯೆಹೆಜ್ಕೇಲನು 9:8–9ಅವರು ಹತಮಾಡುತ್ತಿರುವಾಗ ನಾನು ಬಿಡಿಸಲ್ಪಟ್ಟೆನು. ಆಗ ನಾನು ಮೋರೆ ಕೆಳಗಾಗಿ ಬಿದ್ದು ಕೂಗಿ--ಹಾ, ದೇವರಾದ ಕರ್ತನೇ, ನೀನು ಯೆರೂಸಲೇಮಿನ ಮೇಲೆ ನಿನ್ನ ಕೋಪಾಗ್ನಿಯನ್ನು ಸುರಿಯುವದರಲ್ಲಿಯೇ ಇಸ್ರಾ ಯೇಲ್ಯರಲ್ಲಿ ಉಳಿದವರನ್ನೆಲ್ಲಾ ನಾಶಮಾಡುವಿಯಾ ಎಂದೆನು. ಆಗ ಆತನು ನನಗೆ ಹೇಳಿದ್ದೇನಂದರೆಇಸ್ರಾಯೇಲಿನ ಮತ್ತು ಯೆಹೂದ ಮನೆತನದವರ ಅಕ್ರಮವು ಅತಿ ದೊಡ್ಡದಾಗಿದೆ; ದೇಶವು ರಕ್ತದಿಂದ ತುಂಬಿದೆ; ಪಟ್ಟಣವು ವಕ್ರತ್ವದಿಂದ ತುಂಬಿದೆ; ಯಾಕಂದರೆ ಕರ್ತನು ಭೂಮಿಯನ್ನು ತೊರೆದುಬಿಟ್ಟಿದ್ದಾನೆ; ಕರ್ತನು ನೋಡುವದಿಲ್ಲ ಎಂದು ಅವರು ಹೇಳುತ್ತಾರೆ.
- Ezekiel 8:6–18 ಯೆಹೆಜ್ಕೇಲನು 8:6–18ಇದಲ್ಲದೆ ಆತನು ನನಗೆ ಹೇಳಿದ್ದೇನಂದರೆ --ಮನುಷ್ಯಪುತ್ರನೇ, ಅವರು ಮಾಡುತ್ತಿರುವದನ್ನು ನೋಡುತ್ತಿರುವಿಯಾ? ನಾನು ನನ್ನ ಪರಿಶುದ್ಧ ಸ್ಥಳವನ್ನು ಬಿಟ್ಟು ದೂರ ಹೋಗುವ ಹಾಗೆ ಇಸ್ರಾಯೇಲಿನ ಮನೆತನದವರು ಇಲ್ಲಿ ನಡೆಸುತ್ತಿರುವ ದೊಡ್ಡ ಅಸಹ್ಯ ಗಳನ್ನು ನೋಡುತ್ತಿರುವಿಯಾ? ಆದರೆ ಮತ್ತೆ ತಿರು ಗಿಕೋ, ನೀನು ಇನ್ನೂ ದೊಡ್ಡ ಅಸಹ್ಯಗಳನ್ನು ನೋಡುವಿ ಅಂದನು. ಆಗ ಅವನು ನನ್ನನ್ನು ಅಂಗಳದ ಬಾಗಲಿಗೆ ತಂದನು; ಮತ್ತು ನಾನು ನೋಡುವಾಗ ಇಗೋ, ಗೋಡೆಯಲ್ಲಿ ಒಂದು ರಂಧ್ರವನ್ನು ಕಂಡೆನು ಆಮೇಲೆ ಆತನು ನನಗೆ--ಮನುಷ್ಯಪುತ್ರನೇ, ಈಗ ಗೋಡೆಯಲ್ಲಿ ಕೊರೆ ಎಂದು ಹೇಳಿದನು. ಯಾವಾಗ ನಾನು ಗೋಡೆಯನ್ನು ಕೊರೆದೆನೋ ಒಂದು ಬಾಗಿಲು ಕಾಣಿಸಿತು. ಆಗ ಆತನು ನನಗೆ--ಒಳಗೆ ಹೋಗು; ಅವರು ಮಾಡುವ ಕೆಟ್ಟ ಅಸಹ್ಯಗಳನ್ನು ನೋಡು ಅಂದನು. ಹಾಗೆಯೇ ನಾನು ಒಳಗೆ ಹೋಗಿ ನೋಡಿದೆನು; ಇಗೋ, ಎಲ್ಲಾ ಜಾತಿಯ ಕ್ರಿಮಿಕೀಟಗಳೂ ಅಸಹ್ಯ ಮೃಗಗಳೂ ಇಸ್ರಾಯೇಲ್ಯರು ಪೂಜಿಸುವ ಸಕಲ ಮೂರ್ತಿಗಳೂ ಈ ಗೋಡೆಯ ಸುತ್ತಲೂ ಚಿತ್ರಿಸ ಲ್ಪಟ್ಟಿವೆ. ಇದಲ್ಲದೆ ಇಸ್ರಾಯೇಲಿನ ಮನೆತನ ದವರಲ್ಲಿ ಎಪ್ಪತ್ತು ಮಂದಿಯೂ ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ನಿಂತುಕೊಂಡಿ ದ್ದರು; ಪ್ರತಿಯೊಬ್ಬನ ಕೈಯಲ್ಲೂ ಅವನವನ ಧೂಪಾ ರತಿ ಇತ್ತು; ಧೂಪದ ಸುವಾಸನೆಯು ಮೇಘವಾಗಿ ಏರುತ್ತಿತ್ತು. ಆಗ ಆತನು ನನಗೆ ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರ ಪೂರ್ವಿಕರು ಕತ್ತಲೆ ಯಲ್ಲಿ ಪ್ರತಿಯೊಬ್ಬನೂ ತನ್ನ ಕೊಠಡಿಗಳಲ್ಲಿ ಚಿತ್ರಗಳನ್ನು ಮಾಡುವದನ್ನು ನೋಡಿದೆಯಾ?--ಕರ್ತನು ನಮ್ಮನ್ನು ನೋಡುವದಿಲ್ಲ, ಕರ್ತನು ಭೂಮಿಯನ್ನು ತೊರೆದು ಬಿಟ್ಟಿದ್ದಾನೆ ಎಂದು ಹೇಳುವರು. ಇದಲ್ಲದೆ ಆತನು ಹೇಳಿದ್ದೇನಂದರೆ--ಮತ್ತೊಂದು ಸಾರಿ ತಿರುಗಿಕೋ; ಅವರು ಮಾಡುವ ಇನ್ನೂ ಮಹಾ ಅಸಹ್ಯವಾದವು ಗಳನ್ನು ನೋಡುವಿ ಅಂದನು. ಆಗ ಅವನು ನನ್ನನ್ನು ಕರ್ತನ ಆಲಯದ ಉತ್ತರ ಕಡೆಗೆ ಎದುರಾಗಿ ಬಾಗಲಿದ್ದ ಕಡೆಗೆ ತಂದನು; ಇಗೋ, ಅಲ್ಲಿ ತಮ್ಮೂಜ್ಗೋಸ್ಕರ ಅಳುವ ಹೆಂಗಸರು ಕೂತಿದ್ದರು. ಆಮೇಲೆ ನನಗೆ ಆತನು, ಓ ನರಪುತ್ರನೇ, ನೋಡಿದಿಯೋ? ಮತ್ತೊಂದು ಸಾರಿ ತಿರುಗಿಕೋ ಇವುಗಳಿಗಿಂತ ಇನ್ನೂ ದೊಡ್ಡ ಅಸಹ್ಯವಾದವುಗಳನ್ನು ನೋಡುವಿ ಎಂದು ಹೇಳಿದನು. ಆಗ ಅವನು ನನ್ನನ್ನು ಕರ್ತನ ಆಲ ಯದ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋದನು. ಇಗೋ, ಕರ್ತನ ಮಂದಿರದ ಬಾಗಿಲಲ್ಲಿ ದ್ವಾರಾಂಗ ಳಕ್ಕೂ ಯಜ್ಞವೇದಿಗೂ ಮಧ್ಯದಲ್ಲಿ ಸುಮಾರು ಇಪ್ಪ ತ್ತೈದು ಮಂದಿಯು ಕರ್ತನ ಮಂದಿರಕ್ಕೆ ಬೆನ್ನು ಕೊಟ್ಟು, ಪೂರ್ವದಿಕ್ಕಿನ ಕಡೆಗೆ ತಮ್ಮ ಮುಖಗಳನ್ನು ತಿರು ಗಿಸಿ ಸೂರ್ಯ ನಮಸ್ಕಾರ ಮಾಡುತ್ತಿದ್ದರು. ಆಗ ಆತನು ನನಗೆ--ಓ ಮನುಷ್ಯಪುತ್ರನೇ, ನೋಡಿ ದೆಯಾ? ಅವರು ಇಲ್ಲಿ ಮಾಡುವ ಅಸಹ್ಯವಾದವುಗಳು ಯೆಹೂದನ ಮನೆತನದವರಿಗಲ್ಲವೇ? ಅವರು ದೇಶವನ್ನು ಹಿಂಸೆಯಿಂದ ತುಂಬಿಸಿದ್ದಲ್ಲದೆ ನನ್ನನ್ನು ಕೆಣಕಬೇಕೆಂದು ಮತ್ತೆ ಯತ್ನಿಸುತ್ತಿದ್ದಾರೆ. ನೋಡು, ಅವರ ಮೂಗಿಗೆ ಕೊಂಬೆಗಳನ್ನಿಟ್ಟು ಕೊಳ್ಳುತ್ತಾರೆ.ಆದದರಿಂದ ನಾನು ಸಹ ಉಗ್ರ ದಿಂದಲೇ ಇರುವೆನು. ನನ್ನ ಕಣ್ಣು ಕನಿಕರಿಸುವದೂ ಇಲ್ಲ, ನಾನು ಕಟಾಕ್ಷಿಸುವದೂ ಇಲ್ಲ, ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರಿಚಿದರೂ ನಾನು ಕೇಳಿಸಿಕೊಳ್ಳುವದೂ ಇಲ್ಲ. ಆದದರಿಂದ ನಾನು ಸಹ ಉಗ್ರ ದಿಂದಲೇ ಇರುವೆನು. ನನ್ನ ಕಣ್ಣು ಕನಿಕರಿಸುವದೂ ಇಲ್ಲ, ನಾನು ಕಟಾಕ್ಷಿಸುವದೂ ಇಲ್ಲ, ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರಿಚಿದರೂ ನಾನು ಕೇಳಿಸಿಕೊಳ್ಳುವದೂ ಇಲ್ಲ.
- Revelation 16:6 ಪ್ರಕಟನೆ 16:6ಅವರು ಪರಿಶುದ್ಧರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದರು; ನೀನು ಅವರಿಗೆ ರಕ್ತವನ್ನೇ ಕುಡಿಯುವದಕ್ಕೆ ಕೊಟ್ಟಿದ್ದೀ;ಇದಕ್ಕೆ ಅವರು ಪಾತ್ರರು ಎಂದು ಹೇಳುವದನ್ನು ನಾನು ಕೇಳಿದೆನು.
- Daniel 9:7 ದಾನಿಯೇಲನು 9:7ಓ ಕರ್ತನೇ, ನೀನು ನೀತಿವಂತನು; ಆದರೆ ನಾವು ಈ ದಿನದ ಪ್ರಕಾರ ನಾಚಿಕೆಗೀಡಾದವರು; ಯೆಹೂದದ ಮನುಷ್ಯರನ್ನೂ ಯೆರೂಸಲೇಮಿನ ನಿವಾ ಸಿಗಳನ್ನೂ ಸಮಸ್ತ ಇಸ್ರಾಯೇಲ್ಯರನ್ನೂ ಹತ್ತಿರದಲ್ಲಿ ರುವವರನ್ನೂ ಮತ್ತು ದೂರದಲ್ಲಿರುವವರನ್ನೂ ಅವರು ನಿನಗೆ ವಿರುದ್ಧವಾಗಿ ಮಾಡಿರುವ ಅವರ ಅಪರಾಧದ ನಿಮಿತ್ತ ನೀನು ಅವರನ್ನು ಎಲ್ಲಾ ದೇಶಗಳಲ್ಲಿಯೂ ಓಡಿಸಿ ಬಿಟ್ಟಿದ್ದೀ.
- Revelation 15:4 ಪ್ರಕಟನೆ 15:4ಓ ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರಿ ದ್ದಾರೆ? ಯಾಕಂದರೆ ನೀನೊಬ್ಬನೇ ಪರಿಶುದ್ಧನು; ನಿನ್ನ ತೀರ್ಪುಗಳು ಪ್ರಕಟವಾದದ್ದರಿಂದ ಎಲ್ಲಾ ಜನಾಂಗ ಗಳು ಬಂದು ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು ಎಂದು ಹೇಳಿದರು.
- Daniel 9:14 ದಾನಿಯೇಲನು 9:14ಆದದರಿಂದ ಕರ್ತನು ಕೇಡಿ ಗಾಗಿ ಕಾದುಕೊಂಡು ಅದನ್ನು ನಮ್ಮ ಮೇಲೆ ತಂದಿ ದ್ದಾನೆ. ನಮ್ಮ ದೇವರಾದ ಕರ್ತನು ತಾನು ಮಾಡುವ ಎಲ್ಲಾ ಕೆಲಸಗಳಲ್ಲೂ ನೀತಿವಂತನೇ; ನಾವಾದರೋ ಆತನ ಸ್ವರಕ್ಕೆ ವಿಧೇಯರಾಗಲಿಲ್ಲ.
- Proverbs 26:2 ಜ್ಞಾನೋಕ್ತಿಗಳು 26:2ಅಲೆದಾಡುವ ಪಕ್ಷಿಯಂತೆಯೂ ಹಾರಾ ಡುವ ಬಾನಕ್ಕಿಯಂತೆಯೂ ಕಾರಣವಿಲ್ಲದ ನಾಶವು ಬರುವದಿಲ್ಲ.
- Deuteronomy 8:2 ಧರ್ಮೋಪದೇಶಕಾಂಡ 8:2ನೀನು ತಗ್ಗಿಸಿಕೊಳ್ಳುವ ನಿಮಿತ್ತವೂ ಹೃದಯದಲ್ಲಿ ಇರುವದನ್ನು ಅಂದರೆ ನೀನು ಆತನ ಆಜ್ಞೆಗಳನ್ನು ಕಾಪಾಡುವಿಯೋ ಇಲ್ಲವೋ ಎಂದು ತಿಳುಕೊಳ್ಳುವ ದಕ್ಕೂ ನಿನ್ನ ದೇವರಾದ ಕರ್ತನು ನಿನ್ನನ್ನು ಈ ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿದ ಮಾರ್ಗವನ್ನೆಲ್ಲಾ ಜ್ಞಾಪಕಮಾಡಿಕೊಳ್ಳಬೇಕು.
- Genesis 18:22–33 ಆದಿಕಾಂಡ 18:22–33ಆ ಮನುಷ್ಯರು ಅಲ್ಲಿಂದ ತಮ್ಮ ಮುಖಗಳನ್ನು ತಿರುಗಿಸಿಕೊಂಡು ಸೊದೋಮಿನ ಕಡೆಗೆ ಹೋದರು. ಆದರೆ ಅಬ್ರಹಾಮನು ಇನ್ನೂ ಕರ್ತನ ಮುಂದೆ ನಿಂತುಕೊಂಡಿದ್ದನು. ಆಗ ಅಬ್ರಹಾಮನು ಹತ್ತಿರ ಬಂದು--ದುಷ್ಟರ ಸಂಗಡ ನೀತಿವಂತರನ್ನೂ ನಾಶಮಾಡು ವಿಯಾ? ಒಂದು ವೇಳೆ ಆ ಪಟ್ಟಣದಲ್ಲಿ ಐವತ್ತು ಮಂದಿ ನೀತಿವಂತರಿದ್ದರೆ ಅದರೊಳಗಿರುವ ಆ ಐವತ್ತು ನೀತಿವಂತರಿಗೋಸ್ಕರ ಆ ಸ್ಥಳವನ್ನು ಉಳಿಸದೆ ನಾಶಮಾಡುವಿಯೋ? ಆ ಪ್ರಕಾರ ಮಾಡಿ ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವದು ನಿನಗೆ ದೂರವಾಗಿರಲಿ; ಹಾಗೆ ನೀತಿವಂತರನ್ನು ದುಷ್ಟರಿಗೆ ಸಮಾನಮಾಡುವದು ನಿನಗೆ ದೂರ ವಾಗಿರಲಿ; ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿ ರುವಾತನು ನ್ಯಾಯವಾದದ್ದನ್ನು ಮಾಡದೆ ಇರುವನೇ ಅಂದನು. ಅದಕ್ಕೆ ಕರ್ತನು--ನನಗೆ ಸೊದೋಮ್ ಪಟ್ಟಣದೊಳಗೆ ಐವತ್ತು ಮಂದಿ ನೀತಿವಂತರು ಸಿಕ್ಕಿದರೆ ಅವರಿಗೊಸ್ಕರ ಆ ಸ್ಥಳವನ್ನೆಲ್ಲಾ ಉಳಿಸುವೆನು ಅಂದನು. ಆಗ ಅಬ್ರಹಾಮನು--ಇಗೋ, ಮಣ್ಣೂ ಬೂದಿಯೂ ಆಗಿರುವ ನಾನು ಕರ್ತನ ಸಂಗಡ ಮಾತನಾಡುವದಕ್ಕೆ ಮುಂಗೊಂಡಿದ್ದೇನೆ. ಒಂದು ವೇಳೆ ಐವತ್ತು ನೀತಿವಂತರಲ್ಲಿ ಐದು ಕಡಿಮೆ ಇದ್ದರೆ ಆ ಐದು ಮಂದಿ ಇಲ್ಲದ್ದರಿಂದ ಆ ಪಟ್ಟಣವನ್ನು ನಾಶಮಾಡುವಿಯೋ ಎಂದು ಪ್ರತ್ಯುತ್ತರವಾಗಿ ಅಂದನು. ಆದಕ್ಕೆ ಆತನು--ನಾಲ್ವತ್ತೈದು ಮಂದಿ ಅಲ್ಲಿ ಸಿಕ್ಕಿದರೆ ನಾನು ನಾಶಮಾಡುವದಿಲ್ಲ ಅಂದನು. ಅಬ್ರಹಾಮನು ಆತನ ಸಂಗಡ ಇನ್ನೂ ಮಾತನಾಡಿ--ಒಂದು ವೇಳೆ ಅಲ್ಲಿ ನಾಲ್ವತ್ತು ಮಂದಿ ಸಿಕ್ಕಾರು ಅಂದನು. ಅದಕ್ಕೆ ಆತನು--ನಾಲ್ವತ್ತು ಮಂದಿಗೋಸ್ಕರ ಅದನ್ನು ನಾನು ನಾಶಮಾಡುವದಿಲ್ಲ ಅಂದನು. ಅವನು-- ಕರ್ತನಿಗೆ ಕೋಪಬಾರದೆ ಇರಲಿ; ನಾನು ಮಾತನಾ ಡುತ್ತೇನೆ--ಒಂದು ವೇಳೆ ಅಲ್ಲಿ ಮೂವತ್ತು ಮಂದಿ ಸಿಕ್ಕಾರು ಅಂದಾಗ ಆತನು--ನನಗೆ ಅಲ್ಲಿ ಮೂವತ್ತು ಮಂದಿ ಸಿಕ್ಕಿದರೆ ನಾಶಮಾಡುವದಿಲ್ಲ ಅಂದನು. ಅವನು--ಇಗೋ, ಕರ್ತನ ಸಂಗಡ ಮಾತನಾಡು ವದಕ್ಕೆ ಮುಂಗೊಂಡಿದ್ದೇನೆ; ಒಂದು ವೇಳೆ ಇಪ್ಪತ್ತು ಮಂದಿ ಅಲ್ಲಿ ಸಿಕ್ಕಾರು ಅಂದಾಗ ಆತನು-- ಆ ಇಪ್ಪತ್ತು ಮಂದಿಗೋಸ್ಕರ ನಾನು ಅದನ್ನು ನಾಶಮಾಡುವದಿಲ್ಲ ಅಂದನು. ಅವನು--ಹಾ, ಕರ್ತನೇ, ನಿನಗೆ ಕೋಪಬಾರದೆ ಇರಲಿ; ಇನ್ನು ಒಂದೇ ಸಾರಿ ಮಾತನಾಡುತ್ತೇನೆ--ಒಂದು ವೇಳೆ ಅಲ್ಲಿ ಹತ್ತು ಮಂದಿ ಸಿಕ್ಕಾರು ಅಂದಾಗ ಆತನು--ಹತ್ತು ಮಂದಿಗೋಸ್ಕರ ನಾಶಮಾಡೆನು ಅಂದನು.ಕರ್ತನು ಅಬ್ರಹಾಮನ ಸಂಗಡ ಮಾತನಾಡು ವದನ್ನು ಮುಗಿಸಿದ ಕೂಡಲೆ ಹೊರಟುಹೋದನು. ಅಬ್ರಹಾಮನು ತನ್ನ ಸ್ಥಳಕ್ಕೆ ತಿರುಗಿಕೊಂಡನು. ಕರ್ತನು ಅಬ್ರಹಾಮನ ಸಂಗಡ ಮಾತನಾಡು ವದನ್ನು ಮುಗಿಸಿದ ಕೂಡಲೆ ಹೊರಟುಹೋದನು. ಅಬ್ರಹಾಮನು ತನ್ನ ಸ್ಥಳಕ್ಕೆ ತಿರುಗಿಕೊಂಡನು.