Ezekiel · chapter 15 · verse 2
Ezekiel 15:2 in Kannada
ಮನುಷ್ಯಪುತ್ರನೇ, ದ್ರಾಕ್ಷೇಗಿಡವು ಬೇರೆ ಗಿಡಗಳಿಗಿಂತಲೂ ಇಲ್ಲವೆ ಅಡವಿ ಯಲ್ಲಿರುವ ಮರಗಳ ಕೊಂಬೆಗಳಿಗಿಂತಲೂ ಹೆಚ್ಚೇನು?
Manushyaputrane, draakshegidavu bere gidagaligintaloo illave adavi yalliruva maragala kombegaligintaloo hechchenu?
Ezekiel 15:2 in English
- King James Version (KJV)
- Son of man, What is the vine tree more than any tree, [or than] a branch which is among the trees of the forest?
- World English Bible (WEB)
- “Son of man, what is the vine tree more than any tree, the vine branch which is among the trees of the forest?
- American Standard Version (ASV)
- Son of man, what is the vine-tree more than any tree, the vine-branch which is among the trees of the forest?
- Bible in Basic English (BBE)
- Son of man, what is the vine-tree more than any branching tree which is among the trees of the woods?
- Darby Translation (DBY)
- Son of man, what is the wood of the vine more than any wood, the vine-branch, which is among the trees of the forest?
- Webster's Bible (WBS)
- Son of man, What is the vine-tree more than any tree, [or than] a branch which is among the trees of the forest?
- Young's Literal Translation (YLT)
- 'Son of man, What is the vine-tree more than any tree? The vine-branch that hath been, Among trees of the forest?
Read in context
- 1ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
- 2ಮನುಷ್ಯಪುತ್ರನೇ, ದ್ರಾಕ್ಷೇಗಿಡವು ಬೇರೆ ಗಿಡಗಳಿಗಿಂತಲೂ ಇಲ್ಲವೆ ಅಡವಿ ಯಲ್ಲಿರುವ ಮರಗಳ ಕೊಂಬೆಗಳಿಗಿಂತಲೂ ಹೆಚ್ಚೇನು?
- 3ಕಟ್ಟಿಗೆಯನ್ನು ತೆಗೆದುಕೊಂಡು ಅದರಿಂದ ಯಾವ ಕೆಲಸವನ್ನಾದರೂ ಮಾಡುವರೋ? ಅಥವಾ ಅದರ ಮೇಲೆ ಯಾವ ಸಾಮಗ್ರಿಯನನ್ನಾದರೂ ನೇತುಹಾಕು ವದಕ್ಕೆ ಅದರಿಂದ ಗೂಟವನ್ನು ಮಾಡಿಕೊಳ್ಳುವರೋ?
- 4ಇಗೋ, ಅದು ಸೌದೆಗಾಗಿ ಬೆಂಕಿಗೆ ಹಾಕಲ್ಪಡುತ್ತದೆ; ಬೆಂಕಿಯು ಅದರ ಎರಡು ಕೊನೆಗಳನ್ನು ತಿಂದುಬಿಡು ತ್ತದೆ; ಅದರ ಮಧ್ಯಭಾಗವು ಸುಟ್ಟುಹೋಗುತ್ತದೆ. ಇದೇನಾದರೂ ಕೆಲಸಕ್ಕೆ ಬರುವದೋ?
Cross references
- Hosea 10:1 ಹೋಶೇಯ 10:1ಇಸ್ರಾಯೇಲು ಬರಿದಾದ ದ್ರಾಕ್ಷೇಬಳ್ಳಿಯಾಗಿದೆ, ಅವನು ತನಗಾಗಿ ಫಲಫಲಿ ಸುತ್ತಾನೆ; ತನ್ನ ಬಹಳ ಫಲದ ಪ್ರಕಾರವಾಗಿ ಅವನು ಬಲಿಪೀಠಗಳನ್ನೂ ಹೆಚ್ಚಿಸಿದ್ದಾನೆ. ತನ್ನ ದೇಶದ ಒಳ್ಳೆಯ ತನದ ಪ್ರಕಾರ ಅಂದವಾದ ವಿಗ್ರಹಗಳನ್ನು ಮಾಡಿ ದ್ದಾನೆ.
- Psalm 80:8–16 ಕೀರ್ತನೆಗಳು 80:8–16ನೀನು ದ್ರಾಕ್ಷೇಗಿಡವನ್ನು ಐಗುಪ್ತದಿಂದ ತಂದಿ; ಜನಾಂಗಗಳನ್ನು ಹೊರಡಿಸಿ ಅದನ್ನು ನೆಟ್ಟಿ. ಅದರ ಮುಂದೆ ಸ್ಥಳ ಸಿದ್ಧಮಾಡಿದಿ; ಆಗ ಅದು ಬೇರೂರಿ ದೇಶವನ್ನು ತುಂಬಿತು. ಅದರ ನೆರಳಿನಿಂದ ಬೆಟ್ಟ ಗಳೂ ಕೊಂಬೆಗಳಿಂದ ದೇವದಾರುಗಳೂ ಮುಚ್ಚಲ್ಪ ಟ್ಟವು. ಅದು ತನ್ನ ರೆಂಬೆಗಳನ್ನು ಸಮುದ್ರದ ವರೆಗೂ ತನ್ನ ಬಳ್ಳಿಗಳನ್ನು ನದಿಗೂ ಹರಡಿಸಿತು. ಮಾರ್ಗ ದಲ್ಲಿ ಹಾದು ಹೋಗುವವರೆಲ್ಲರು ಅದನ್ನು ಕೀಳುವ ಹಾಗೆ ಯಾಕೆ ಅದರ ಬೇಲಿಗಳನ್ನು ನೀನು ಮುರಿದು ಬಿಟ್ಟಿದ್ದೀ? ಅಡವಿಯಿಂದ ಬಂದ ಹಂದಿಯು ಅದನ್ನು ಹಾಳುಮಾಡುತ್ತದೆ ಕಾಡಿನ ಮೃಗವು ಅದನ್ನು ಮೇಯ್ದು ಬಿಡುತ್ತದೆ. ಓ ಸೈನ್ಯಗಳ ದೇವರೇ, ತಿರುಗಿಕೋ ಎಂದು ನಾವು ನಿನ್ನನ್ನು ಬೇಡುತ್ತೇವೆ. ಆಕಾಶದಿಂದ ದೃಷ್ಟಿಸಿ ನೋಡು; ಈ ದ್ರಾಕ್ಷೇಗಿಡವನ್ನೂ ನಿನ್ನ ಬಲಗೈ ನೆಟ್ಟ ಸಸಿಯನ್ನೂ ನೀನು ನಿನಗೆ ಬಲಪಡಿಸಿ ಕೊಂಡ ಕೊಂಬೆಯನ್ನೂ ಪರಾಮರಿಸು. ಅದು ಈಗ ಕೊಯ್ಯಲ್ಪಟ್ಟು ಬೆಂಕಿಯಿಂದ ಸುಡಲ್ಪಟ್ಟಿದೆ; ನಿನ್ನ ಬಾಯಿ ಗದರಿಕೆಯಿಂದ ಅವರು ನಾಶವಾಗುತ್ತಾರೆ.
- Isaiah 5:1–7 ಯೆಶಾಯ 5:1–7ನನ್ನ ಪ್ರಿಯನ ದ್ರಾಕ್ಷೇ ತೋಟದ ವಿಷಯವಾದ ಹಾಡನ್ನು ನನ್ನ ಅತಿ ಪ್ರಿಯನಿಗೆ ನಾನು ಹಾಡುವೆನು. ಫಲವತ್ತಾದ ಗುಡ್ಡದಲ್ಲಿ ನನ್ನ ಅತಿಪ್ರಿಯನಿಗೆ ದ್ರಾಕ್ಷೆಯ ತೋಟವಿದೆ. ಅವನು ಅದಕ್ಕೆ ಬೇಲಿ ಹಾಕಿ, ಅದರೊಳಗಿಂದ ಕಲ್ಲುಗಳನ್ನು ಆರಿಸಿ ತೆಗೆದು ಹಾಕಿ ಒಳ್ಳೇ ದ್ರಾಕ್ಷೆಯನ್ನು ನೆಟ್ಟು, ಅದರ ಮಧ್ಯದಲ್ಲಿ ಒಂದು ಬುರುಜನ್ನು ಕಟ್ಟಿ, ದ್ರಾಕ್ಷೇ ತೊಟ್ಟಿಯನ್ನು ಕೊರೆಯಿಸಿ, ತೋಟವು ಒಳ್ಳೆ ದ್ರಾಕ್ಷೇ ಹಣ್ಣನ್ನು ಕೊಡುವದೆಂದು ಎದುರು ನೋಡು ತ್ತಿರಲು, ಅದು ಕಾಡುಹಣ್ಣನ್ನು ಬಿಟ್ಟಿತು. ಓ ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ, ನನಗೂ ನನ್ನ ದ್ರಾಕ್ಷೆಯ ತೋಟಕ್ಕೂ ನ್ಯಾಯತೀರಿಸಿರಿ ಎಂದು ನಿಮ್ಮನ್ನು ಪ್ರಾರ್ಥಿಸುತ್ತೇನೆ. ನನ್ನ ದ್ರಾಕ್ಷೇ ತೋಟದಲ್ಲಿ ನಾನು ಮಾಡಿದ್ದಕ್ಕಿಂತ ಇನ್ನೂ ಹೆಚ್ಚಾಗಿ ಅದಕ್ಕೆ ಏನು ಮಾಡಬೇಕಾಗಿತ್ತು? ಹೀಗಿರಲು ಅದು ಒಳ್ಳೇ ದ್ರಾಕ್ಷೇ ಫಲವನ್ನು ಫಲಿಸುವದೆಂದು ನಾನು ನಿರೀಕ್ಷಿಸುತ್ತಿರಲು ಅದು ಕಾಡುಹಣ್ಣನ್ನು ಕೊಟ್ಟಿದ್ದು ಯಾಕೆ? ನನ್ನ ದ್ರಾಕ್ಷೇ ತೋಟಕ್ಕೆ ನಾನು ಮಾಡುವದು ಏನೆಂದು ನಾನು ನಿಮಗೆ ತಿಳಿಸುತ್ತೇನೆ. ನಾನು ಅದರ ಬೇಲಿ ಯನ್ನು ತೆಗೆದುಹಾಕುವೆನು. ಆಗ ಅದು ಮೇಯಲ್ಪಡು ವದು. ಅದರ ಗೋಡೆಯನ್ನು ಕೆಡವಿಬಿಡುವೆನು, ಆಗ ಅದು ತುಳಿದಾಟಕ್ಕೆ ಈಡಾಗುವದು. ಅದನ್ನು ನಾನು ಹಾಳಾಗಲು ಬಿಡುವೆನು: ಅದನ್ನು ಯಾರೂ ಕುಡಿ ಕತ್ತರಿಸುವದಿಲ್ಲ; ಅಗೆಯುವದೂ ಇಲ್ಲ. ಆದರೆ ಅಲ್ಲಿ ಮುಳ್ಳುಪೊದೆಗಳು ಬೆಳೆಯುವವು; ಅಲ್ಲದೆ ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಆಜ್ಞಾ ಪಿಸುವೆನು. ಸೈನ್ಯಗಳ ಕರ್ತನ ದ್ರಾಕ್ಷೇ ತೋಟವು ಇಸ್ರಾಯೇಲಿನ ಮನೆಯೇ, ಯೆಹೂದದ ಜನವೋ, ಆತನ ಇಷ್ಟದ ಗಿಡವೇ. ಆತನು ನ್ಯಾಯವನ್ನು ನಿರೀ ಕ್ಷಿಸಲು, ಇಗೋ, ಹಿಂಸೆಯೇ; ನೀತಿಯನ್ನು ನಿರೀಕ್ಷಿಸಲು ಗೋಳಾಟವೇ ಸಿಕ್ಕೀತು.
- Song of Solomon 8:11–12 ಪರಮಗೀತೆ 8:11–12ಆಗ, ನಾನು ಅವನ ದೃಷ್ಟಿಯಲ್ಲಿ ದಯ ಹೊಂದಿದವಳ ಹಾಗಿದ್ದೆನು. ಬಾಲ್ಹಾಮೋನಿನಲ್ಲಿ ಸೊಲೊಮೋನನಿಗೆ ಒಂದು ದ್ರಾಕ್ಷೇ ತೋಟ ಇತ್ತು. ಅವನು ಆ ದ್ರಾಕ್ಷೇ ತೋಟವನ್ನು ಒಕ್ಕಲಿಗರಿಗೆ ಗುತ್ತಿ ಗೆಗೆ ಕೊಟ್ಟನು. ಒಬ್ಬೊಬ್ಬನು ಅದರ ಫಲಕ್ಕೋಸ್ಕರ ಸಾವಿರ ಬೆಳ್ಳಿಯ ನಾಣ್ಯಗಳನ್ನು ತರಬೇಕಾಗಿತ್ತು. ನನ್ನದಾದ ನನ್ನ ದ್ರಾಕ್ಷೇ ತೋಟವು ನನ್ನ ಮುಂದೆ ಅದೆ. ಓ ಸೊಲೊಮೋನನೇ, ನಿನಗೆ ಒಂದು ಸಾವಿರ ಇರತಕ್ಕದ್ದು. ಅದರ ಫಲವನ್ನು ಕಾಪಾಡುವವರಿಗೆ ಇನ್ನೂರು ಆಗಲಿ.
- Song of Solomon 6:11 ಪರಮಗೀತೆ 6:11ತಗ್ಗಿನ ಫಲಗಳನ್ನು ನೋಡುವದಕ್ಕೂ ದ್ರಾಕ್ಷೇ ಬಳ್ಳಿಯು ಬೆಳೆದು? ದಾಳಿಂಬರ ಗಿಡಗಳು ಚಿಗುರಿ ವೆಯೋ ಎಂದು ನೋಡುವದಕ್ಕೂ ನಾನು ಬಾದಾ ಮಿಯ ತೋಟಕ್ಕೆ ಹೋದೆನು.
- John 15:1–6 ಯೋಹಾನನು 15:1–6ನಾನೇ ನಿಜವಾದ ದ್ರಾಕ್ಷೇ ಬಳ್ಳಿ ನನ್ನ ತಂದೆ ವ್ಯವಸಾಯಗಾರನು. ನನ್ನಲ್ಲಿ ಫಲಫಲಿಸದ ಪ್ರತಿಯೊಂದು ಕೊಂಬೆಯನ್ನು ಆತನು ತೆಗೆದುಹಾಕುತ್ತಾನೆ; ಫಲಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚಾಗಿ ಫಲಕೊಡುವ ಹಾಗೆ ಅದನ್ನು ಶುದ್ಧಿ ಮಾಡುತ್ತಾನೆ. ನಾನು ನಿಮಗೆ ಹೇಳಿದ ಮಾತಿನ ದೆಸೆಯಿಂದ ನೀವು ಈಗ ಶುದ್ಧರಾಗಿದ್ದೀರಿ. ನನ್ನಲ್ಲಿ ನೆಲೆಗೊಂಡಿರ್ರಿ, ನಾನು ನಿಮ್ಮಲ್ಲಿ ನೆಲೆ ಗೊಂಡಿರುವೆನು. ಕೊಂಬೆಯು ದ್ರಾಕ್ಷೇಯಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೆ ತಾನೇ ಫಲ ಕೊಡಲಾರದೋ ಹಾಗೆಯೇ ನೀವೂ ನನ್ನಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ. ನಾನೇ ದ್ರಾಕ್ಷೇಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿ ಮತ್ತು ನಾನು ಅವನಲ್ಲಿ ನೆಲೆಗೊಂಡಿದ್ದರೆ ಅವನೇ ಬಹಳ ಫಲವನ್ನು ಕೊಡುವನು; ಯಾಕಂದರೆ ನಾನಿಲ್ಲದೆ ನೀವು ಏನೂ ಮಾಡಲಾರಿರಿ. ಒಬ್ಬನು ನನ್ನಲ್ಲಿ ನೆಲೆಗೊಂಡಿರದಿದ್ದರೆ ಅವನು ಕೊಂಬೆಯಂತೆ ಬಿಸಾಡಲ್ಪಟ್ಟು ಒಣಗಿ ಹೋಗುವದರಿಂದ ಜನರು ಅವುಗಳನ್ನು ಕೂಡಿಸಿ ಬೆಂಕಿಯೊಳಗೆ ಹಾಕುವರು; ಅವು ಸುಡಲ್ಪಡುವವು.
- Jeremiah 2:21 ಯೆರೆಮೀಯ 2:21ಆದಾಗ್ಯೂ ನಾನು ನಿನ್ನನ್ನು ಉತ್ತಮ ದ್ರಾಕ್ಷೇಬಳ್ಳಿಯಾಗಿಯೂ ಪೂರ್ಣ ವಾಗಿ ನಿಜ ಬೀಜವಾಗಿಯೂ ನೆಟ್ಟಿದ್ದೆನು; ಆದರೆ ನೀನು ಹೀಗೆ ನನಗೆ ಅನ್ಯ ದ್ರಾಕ್ಷೇ ಬಳ್ಳಿಯ ಹಾಗೆ ಕೆಟ್ಟುಹೋಗಿ ಬದಲಾದಿ?
- Song of Solomon 7:12 ಪರಮಗೀತೆ 7:12ನಾವು ಉದಯದಲ್ಲಿ ಎದ್ದು,ದ್ರಾಕ್ಷೇ ತೋಟಗಳಿಗೆ ಹೋಗಿ, ದ್ರಾಕ್ಷೇ ಬಳ್ಳಿಯು ಬೆಳೆಯುವದೋ? ಅದರ ಎಳೆಗಾಯಿಗಳು ಕಾಣಿ ಸುತ್ತವೋ? ದಾಳಿಂಬರ ಗಿಡಗಳು ಚಿಗುರುತ್ತವೋ ನೋಡುವ. ಅಲ್ಲಿ ನನ್ನ ಪ್ರೀತಿಯನ್ನು ನಿನಗೆ ತೋರಿಸುವೆನು.ಓ ನನ್ನ ಪ್ರಿಯನೇ, ದುದಾಯಗಳು ವಾಸನೆಕೊಡುತ್ತವೆ; ನಮ್ಮ ಬಾಗಲುಗಳ ಬಳಿಯಲ್ಲಿ ನಿನಗೋಸ್ಕರ ನಾನು ಇಟ್ಟುಕೊಂಡ ವಿವಿಧ ಹೊಸ ಹಳೇ ರಮ್ಯವಾದ ಫಲಗಳು ಅವೆ.
- Song of Solomon 2:15 ಪರಮಗೀತೆ 2:15ನರಿಗಳನ್ನೂ ದ್ರಾಕ್ಷೇ ಗಿಡಗಳನ್ನು ಕೆಡಿಸುವ ಚಿಕ್ಕ ನರಿಗಳನ್ನೂ ನಮಗಾಗಿ ಹಿಡಿಯಿರಿ; ನಮ್ಮ ದ್ರಾಕ್ಷೇಗಿಡಗಳಲ್ಲಿ ಎಳೆಗಾಯಿಗಳಾಗಿವೆ.
- Luke 20:9–16 ಲೂಕನು 20:9–16ಇದಲ್ಲದೆ ಆತನು ಜನರಿಗೆ ಈ ಸಾಮ್ಯವನ್ನು ಹೇಳುವದಕ್ಕೆ ಪ್ರಾರಂಭಿಸಿ--ಒಬ್ಬಾನೊಬ್ಬ ಮನುಷ್ಯನು ದ್ರಾಕ್ಷೇತೋಟವನ್ನು ನೆಟ್ಟು ಅದನ್ನು ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ಬಹುಕಾಲದ ವರೆಗೆ ಒಂದು ದೂರ ದೇಶಕ್ಕೆ ಹೊರಟುಹೋದನು. ಫಲ ಕಾಲದಲ್ಲಿ ಅವನು ತನಗೆ ಬರಬೇಕಾಗಿದ್ದ ದ್ರಾಕ್ಷೇ ತೊಟದ ಫಲವನ್ನು ಕೊಡುವಂತೆ ಅವನು ತನ್ನ ಆಳನ್ನು ಅವರ ಬಳಿಗೆ ಕಳುಹಿಸಿಕೊಟ್ಟನು. ಆದರೆ ಆ ಒಕ್ಕಲಿಗರು ಅವನನ್ನು ಹೊಡೆದು ಬರಿದಾಗಿ ಕಳುಹಿಸಿಬಿಟ್ಟರು. ಅವನು ಇನ್ನೊಬ್ಬ ಆಳನ್ನು ತಿರಿಗಿ ಕಳುಹಿಸಿದನು. ಅವರು ಅವನನ್ನು ಸಹ ಹೊಡೆದು ಅವಮಾನಪಡಿಸಿ ಬರಿದಾಗಿ ಕಳುಹಿಸಿಬಿಟ್ಟರು. ಅವನು ತಿರಿಗಿ ಮೂರನೆಯವನನ್ನು ಕಳುಹಿಸಿದನು; ಆಗ ಅವರು ಅವನನ್ನು ಸಹ ಗಾಯಪಡಿಸಿ ಹೊರಗೆ ಹಾಕಿದರು. ಆಗ ದ್ರಾಕ್ಷೇತೋಟದ ಯಜಮಾನನು--ನಾನೇನು ಮಾಡಲಿ? ನಾನು ನನ್ನ ಪ್ರಿಯ ಮಗನನ್ನೇ ಕಳುಹಿ ಸುವೆನು. ಅವರು ಇವನನ್ನು ನೋಡಿಯಾದರೂ ಇವ ನನ್ನು ಗೌರವಿಸಿಯಾರು ಎಂದು ಅಂದುಕೊಂಡನು. ಆದರೆ ಒಕ್ಕಲಿಗರು ಅವನನ್ನು ನೋಡಿದಾಗ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನು; ಬನ್ನಿರಿ, ಇವ ನನ್ನು ಕೊಂದುಹಾಕೋಣ ಬಾಧ್ಯತೆಯು ನಮ್ಮದಾಗು ತ್ತದೆ ಎಂದು ಆಲೋಚನೆ ಮಾಡಿಕೊಂಡರು. ಅವರು ಅವನನ್ನು ದ್ರಾಕ್ಷೇ ತೋಟದ ಹೊರಗೆಹಾಕಿ ಕೊಂದರು. ಹೀಗಿರಲು ದ್ರಾಕ್ಷೇತೋಟದ ಯಜ ಮಾನನು ಅವರಿಗೆ ಏನು ಮಾಡುವನು? ಅವನು ಬಂದು ಈ ಒಕ್ಕಲಿಗರನ್ನು ಸಂಹರಿಸಿ ದ್ರಾಕ್ಷೇತೋಟ ವನ್ನು ಬೇರೆಯವರಿಗೆ ಕೊಡುವನು ಅಂದನು. ಅವರು ಇದನ್ನು ಕೇಳಿ--ಹಾಗೆ ಎಂದಿಗೂ ಆಗಬಾರದು ಅಂದರು.
- Matthew 21:33–41 ಮತ್ತಾಯನು 21:33–41ಮತ್ತೊಂದು ಸಾಮ್ಯವನ್ನು ಕೇಳಿರಿ: ಒಬ್ಬ ಮನೇ ಯಜಮಾನನು ದ್ರಾಕ್ಷೇತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿ ಅದರೊಳಗೆ ತೊಟ್ಟಿಯನ್ನು ಅಗೆದು ಗೋಪುರವನ್ನು ಕಟ್ಟಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ದೂರದೇಶಕ್ಕೆ ಹೋದನು. ಫಲದ ಕಾಲವು ಸಮಾಪಿಸಿದಾಗ ತನ್ನ ಫಲಗಳನ್ನು ಪಡಕೊಳ್ಳು ವದಕ್ಕೆ ತನ್ನ ಸೇವಕರನ್ನು ಒಕ್ಕಲಿಗರ ಬಳಿಗೆ ಕಳುಹಿಸಿಕೊಟ್ಟನು. ಆಗ ಒಕ್ಕಲಿಗರು ಅವನ ಸೇವಕರನ್ನು ಹಿಡಿದು ಒಬ್ಬನನ್ನು ಹೊಡೆದು ಇನ್ನೊಬ್ಬ ನನ್ನು ಕೊಂದು ಹಾಕಿದರು. ಮತ್ತೊಬ್ಬನ ಮೇಲೆ ಕಲ್ಲೆಸೆದರು. ಅವನು ತಿರಿಗಿ ಮೊದಲನೆಯವರಿಗಿಂತ ಹೆಚ್ಚು ಸೇವಕರನ್ನು ಕಳುಹಿಸಿಕೊಟ್ಟನು; ಅವರು ಅದೇ ರೀತಿಯಲ್ಲಿ ಅವರಿಗೂ ಮಾಡಿದರು. ಆದರೆ ಅವನು-- ನನ್ನ ಮಗನನ್ನಾದರೂ ಅವರು ಸನ್ಮಾನಿ ಸಾರು ಎಂದು ಅಂದುಕೊಂಡು ಕಟ್ಟಕಡೆಗೆ ಅವನನ್ನು ಅವರ ಬಳಿಗೆ ಕಳುಹಿಸಿದನು. ಆದರೆ ಒಕ್ಕಲಿಗರು ಆ ಮಗನನ್ನು ನೋಡಿ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನಾಗಿದ್ದಾನೆ, ಬನ್ನಿರಿ; ನಾವು ಇವನನ್ನು ಕೊಂದು ಇವನ ಸ್ವಾಸ್ತ್ಯವನ್ನು ಸ್ವಾಧೀನಮಾಡಿಕೊ ಳ್ಳೋಣ ಎಂದು ಅಂದು ಕೊಂಡರು. ಅವರು ಅವನನ್ನು ಹಿಡಿದು ದ್ರಾಕ್ಷೇ ತೋಟದಿಂದ ಹೊರಗೆ ಹಾಕಿ ಅವನನ್ನು ಕೊಂದು ಹಾಕಿದರು. ಹೀಗಿರುವ ದರಿಂದ ದ್ರಾಕ್ಷೇ ತೋಟದ ಯಜಮಾನನು ಬಂದಾಗ ಆ ಒಕ್ಕಲಿಗರಿಗೆ ಏನು ಮಾಡಾನು ಅಂದನು. ಅವರು ಆತನಿಗೆ--ಅವನು ಆ ದುಷ್ಟ ಮನುಷ್ಯರನು ಕ್ರೂರವಾಗಿ ಸಂಹರಿಸುವನು; ಮತ್ತು ತಕ್ಕಕಾಲದಲ್ಲಿ ತನಗೆ ಫಲಗಳನ್ನು ಸಲ್ಲಿಸುವ ಬೇರೆ ಒಕ್ಕಲಿಗರಿಗೆ ತನ್ನ ದ್ರಾಕ್ಷೇತೋಟವನ್ನು ವಾರಕ್ಕೆ ಕೊಡುವನು ಎಂದು ಹೇಳಿದರು.
- Song of Solomon 2:13 ಪರಮಗೀತೆ 2:13ಅಂಜೂರದ ಗಿಡವು ಅದರ ಹೀಚುಗಳನ್ನು ಬಿಡುತ್ತದೆ. ದ್ರಾಕ್ಷೇ ಬಳ್ಳಿಗಳ ಹೂವು ಅದರ ಸುವಾಸನೆಯನ್ನು ಕೊಡು ತ್ತದೆ. ಏಳು, ನನ್ನ ಪ್ರಿಯಳೇ, ನನ್ನ ಸುಂದರಿಯೇ, ಹೊರಟು ಬಾ ಎಂಬದು.