Ezekiel · chapter 16 · verse 10
Ezekiel 16:10 in Kannada
ಇದಲ್ಲದೆ ನಾನು ಕಸೂ ತಿಯ ಬಟ್ಟೆಯನ್ನು ನಿನಗೆ ತೊಡಿಸಿ, ಕಡಲ ಪ್ರಾಣಿಯ ಜೋಡುಗಳನ್ನು ಕೊಟ್ಟೆನು, ನಯವಾದ ನಾರುಮಡಿ ಯನ್ನು ನಿನಗೆ ಉಡಿಸಿದೆನು, ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆನು.
Idallade naanu kasoo tiya batteyannu ninage todisi, kadala praaniya jodugalannu kottenu, nayavaada naarumadi yannu ninage udisidenu, reshmeya hodikeyannu ninage hodisidenu.
Ezekiel 16:10 in English
- King James Version (KJV)
- I clothed thee also with broidered work, and shod thee with badgers’ skin, and I girded thee about with fine linen, and I covered thee with silk.
- World English Bible (WEB)
- I clothed you also with embroidered work and put leather sandals on you. I dressed you with fine linen and covered you with silk.
- American Standard Version (ASV)
- I clothed thee also with broidered work, and shod thee with sealskin, and I girded thee about with fine linen, and covered thee with silk.
- Bible in Basic English (BBE)
- And I had you clothed with needlework, and put leather shoes on your feet, folding fair linen about you and covering you with silk.
- Darby Translation (DBY)
- and I clothed thee with embroidered work, and shod thee with badgers' skin, and I bound thee about with byssus, and covered thee with silk.
- Webster's Bible (WBS)
- I clothed thee also with broidered work, and shod thee with badgers' skin, and I girded thee with fine linen, and I covered thee with silk.
- Young's Literal Translation (YLT)
- And I clothe thee with embroidery, And I shoe thee with badger's skin, And I gird thee with fine linen, And I cover thee with figured silk.
Read in context
- 8ಈಗ ನಾನು ನಿನ್ನ ಬಳಿ ಹಾದು ಹೋಗು ವಾಗ ನಿನ್ನನ್ನು ನೋಡಲು ಇಗೋ, ನಿನ್ನ ಕಾಲವು ಪ್ರೇಮಿಸುವ ಕಾಲವಾಗಿತ್ತು; ಆಗ ನಾನು ನನ್ನ ಸೆರಗನ್ನು ನಿನ್ನ ಮೇಲೆ ಹೊದಿಸಿ, ನಿನ್ನ ಬೆತ್ತಲೆಯನ್ನು ಮುಚ್ಚಿದೆನು. ಹೌದು, ನಾನು ನಿನಗೆ ಆಣೆಯಿಟ್ಟು ಒಡಂಬಡಿಕೆ ಮಾಡಿಕೊಂಡದ್ದರಿಂದ ನೀನು ನನ್ನವಳಾದೆ ಎಂದು ದೇವರಾದ ಕರ್ತನು ಹೇಳುತ್ತಾನೆ.
- 9ಆಮೇಲೆ ನಿನ್ನನ್ನು ನೀರಿನಿಂದ ತೊಳೆದೆನು; ಹೌದು, ನಿನ್ನ ರಕ್ತವನ್ನು ಶುದ್ಧವಾಗಿ ನಿನ್ನಿಂದ ತೊಳೆದೆನು; ನಿನಗೆ ಎಣ್ಣೆಯಿಂದ ಅಭಿಷೇಕ ಮಾಡಿದೆನು.
- 10ಇದಲ್ಲದೆ ನಾನು ಕಸೂ ತಿಯ ಬಟ್ಟೆಯನ್ನು ನಿನಗೆ ತೊಡಿಸಿ, ಕಡಲ ಪ್ರಾಣಿಯ ಜೋಡುಗಳನ್ನು ಕೊಟ್ಟೆನು, ನಯವಾದ ನಾರುಮಡಿ ಯನ್ನು ನಿನಗೆ ಉಡಿಸಿದೆನು, ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆನು.
- 11ನಾನು ಆಭರಣಗಳಿಂದಲೂ ನಿನ್ನನ್ನು ಅಲಂಕರಿಸಿದೆನು; ನಾನು ನಿನ್ನ ಕೈಗಳಿಗೆ ಕಡಗ ಗಳನ್ನು, ನಿನ್ನ ಕೊರಳಿಗೆ ಸರವನ್ನು ಹಾಕಿದೆನು.
- 12ನಿನ್ನ ಹಣೆಯ ಮೇಲೆ ರತ್ನಾಭರಣವನ್ನೂ ನಿನ್ನ ಕಿವಿಗಳಲ್ಲಿ ವಾಲೆಗಳನ್ನೂ ನಿನ್ನ ತಲೆಯ ಮೇಲೆ ಶೃಂಗಾರ ಕಿರೀಟವನ್ನೂ ಇಟ್ಟೆನು.
Cross references
- Ezekiel 16:18 ಯೆಹೆಜ್ಕೇಲನು 16:18ನಿನ್ನ ಕಸೂತಿಯ ಬಟ್ಟೆಗಳನ್ನು ತೆಗೆದು ಅವರಿಗೆ ಹೊದಿಸಿ ನನ್ನ ಎಣ್ಣೆಯನ್ನೂ ಧೂಪ ವನ್ನೂ ಅವರ ಮುಂದೆ ಇಟ್ಟೆ.
- Ezekiel 16:13 ಯೆಹೆಜ್ಕೇಲನು 16:13ನಿನ್ನ ಒಡವೆಗಳು ಬೆಳ್ಳಿ ಬಂಗಾರಗಳು, ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ಬಟ್ಟೆ; ನಯವಾದ ಹಿಟ್ಟನ್ನೂ ಜೇನನ್ನೂ ಎಣ್ಣೆಯನ್ನೂ ತಿನ್ನುತ್ತಿದ್ದೆ, ನಿನ್ನ ಲಾವಣ್ಯವು ಅತಿ ಮನೋಹರವಾಗಿ ವೃದ್ಧಿಗೊಂಡು ನೀನು ರಾಣಿಯಾದೆ.
- Psalm 45:13–14 ಕೀರ್ತನೆಗಳು 45:13–14ಅರಸನ ಮಗಳು ತನ್ನಲ್ಲಿ ಪೂರ್ಣ ಘನವುಳ್ಳವ ಳಾಗಿದ್ದಾಳೆ; ಅವಳ ವಸ್ತ್ರವು ಚಿನ್ನದಿಂದ ನೆಯಿದದೆ. ಇವಳು ಕಸೂತಿ ವಸ್ತ್ರಗಳನ್ನುಟ್ಟು ಅರಸನ ಬಳಿಗೆ ತರಲ್ಪಡುತ್ತಾಳೆ; ಅವಳ ಹಿಂದೆ ಇರುವ ಕನ್ಯೆಯರಾದ ಅವಳ ಸಂಗಡಿಗರು ನಿನ್ನ ಬಳಿಗೆ ತರಲ್ಪಡುತ್ತಾರೆ.
- Isaiah 61:10 ಯೆಶಾಯ 61:10ನಾನು ಕರ್ತನಲ್ಲಿ ಬಹಳವಾಗಿ ಸಂತೋಷಿ ಸುವೆನು; ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸ ಪಡುವದು; ಯಾಕಂದರೆ ಮದಲಿಂಗನು ಸೌಂದರ್ಯ ವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ ಮದಲ ಗಿತ್ತಿಯು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ ಆತನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ, ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು.
- Exodus 26:36 ವಿಮೋಚನಕಾಂಡ 26:36ಗುಡಾರದ ಬಾಗಲಿಗೆ ನೀಲಿ ಧೂಮ್ರ ರಕ್ತವರ್ಣ ಗಳಿರುವ ನಯವಾಗಿ ಹೊಸೆದ ನಾರುಗಳಿಂದ ಕಸೂತಿ ಕೆಲಸದ ತೆರೆಯನ್ನು ತೂಗುಹಾಕಬೇಕು.ಆ ತೆರೆಗೆ ಜಾಲೀ ಮರದ ಐದು ಸ್ತಂಭಗಳನ್ನು ಮಾಡಿ ಅವುಗಳನ್ನು ಬಂಗಾರದಿಂದ ಹೊದಿಸಬೇಕು. ಅವುಗಳ ಕೊಂಡಿಗಳು ಬಂಗಾರದವುಗಳಾಗಿರಬೇಕು. ಅವುಗಳಿಗೆ ಹಿತ್ತಾಳೆಯ ಐದು ಕುಳಿಗಳನ್ನು ಎರಕ ಹೊಯ್ಯಬೇಕು.
- Exodus 26:14 ವಿಮೋಚನಕಾಂಡ 26:14ಕೆಂಪು ಬಣ್ಣದ ಟಗರಿನ ಚರ್ಮಗಳಿಂದ ಗುಡಾರಕ್ಕೆ ಹೊದಿಕೆಯನ್ನೂ ಕಡಲು ಹಂದಿಯ ಚರ್ಮ ಗಳಿಂದ ಮೇಲು ಹೊದಿಕೆಯನ್ನೂ ಮಾಡಬೇಕು.
- Ezekiel 27:16 ಯೆಹೆಜ್ಕೇಲನು 27:16ನಿನ್ನ ಕೈಕೆಲಸದ ವಸ್ತುಗಳು ಅಪಾರವಾಗಿದ್ದದರಿಂದ ಅರಾಮಿನವರು ನಿನ್ನವರಾಗಿ ವ್ಯಾಪಾರಮಾಡಿ ಕೆಂಪರಳು, ರಕ್ತಾಂಬರ, ಕಸೂತಿಯ ವಸ್ತ್ರ, ನಾರುಬಟ್ಟೆ, ಹವಳ, ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿದರು.
- Luke 15:22 ಲೂಕನು 15:22ಆದರೆ ತಂದೆಯು ತನ್ನ ಸೇವಕರಿಗೆ--ಶ್ರೇಷ್ಠವಾದ ನಿಲುವಂಗಿಯನ್ನು ತಂದು ಇವನಿಗೆ ತೊಡಿಸಿರಿ; ಇವನ ಕೈಗೆ ಉಂಗುರವನ್ನೂ ಪಾದಗಳಿಗೆ ಕೆರಗಳನ್ನೂ ಹಾಕಿರಿ;
- Isaiah 61:3 ಯೆಶಾಯ 61:3ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.
- Genesis 41:42 ಆದಿಕಾಂಡ 41:42ಇದಲ್ಲದೆ ಫರೋಹನು ತನ್ನ ಕೈಯೊಳಗಿನ ಉಂಗುರವನ್ನು ತೆಗೆದು ಯೋಸೇಫನ ಕೈಯಲ್ಲಿಟ್ಟು ನಾರುಮಡಿಯ ವಸ್ತ್ರವನ್ನು ತೊಡಿಸಿ ಚಿನ್ನದ ಸರವನ್ನು ಅವನ ಕೊರಳಿಗೆ ಹಾಕಿದನು.
- Exodus 39:27–28 ವಿಮೋಚನಕಾಂಡ 39:27–28ಆರೋನನಿಗೂ ಅವನ ಮಕ್ಕಳಿಗೂ ನಾರು ನೂಲಿನಿಂದ ಮಾಡಿದ ನೇಯ್ಗೆ ಕೆಲಸದ ಅಂಗಿಗಳನ್ನೂ ನಾರಿನ ಮುಂಡಾಸವನ್ನೂ ಸೌಂದರ್ಯವುಳ್ಳ ನಾರಿನ ಕುಲಾವಿಗಳನ್ನೂ ನಾರು ಗಳಿಂದ ಮಾಡಿದ ಇಜಾರುಗಳನ್ನೂ
- Exodus 28:5 ವಿಮೋಚನಕಾಂಡ 28:5ಅವರು ಬಂಗಾರವನ್ನೂ ನೀಲಿ ಧೂಮ್ರ ರಕ್ತವರ್ಣದ ನೂಲನ್ನೂ ನಯವಾದ ನಾರು ಮಡಿಯನ್ನೂ ತಕ್ಕೊಳ್ಳಬೇಕು.