Ezekiel · chapter 16 · verse 14
Ezekiel 16:14 in Kannada
ಇದಲ್ಲದೆ, ನಿನ್ನ ಸೌಂದ ರ್ಯದಿಂದ ನಿನ್ನ ಕೀರ್ತಿಯು ಅನ್ಯಜನಾಂಗಗಳಲ್ಲಿ ಹಬ್ಬಿತು; ಯಾಕಂದರೆ ನಾನು ನಿನ್ನ ಮೇಲೆ ಇಟ್ಟ ಸಂಪೂರ್ಣ ವೈಭವದಿಂದಲೇ ಎಂದು ದೇವರಾದ ಕರ್ತನು ಹೇಳುತ್ತಾನೆ.
Idallade, ninna saunda ryadinda ninna keertiyu anyajanaangagalalli habbitu; yaakandare naanu ninna mele itta sampoorna vaibhavadindale endu devaraada kartanu heluttaane.
Ezekiel 16:14 in English
- King James Version (KJV)
- And thy renown went forth among the heathen for thy beauty: for it [was] perfect through my comeliness, which I had put upon thee, saith the Lord GOD.
- World English Bible (WEB)
- Your renown went out among the nations for your beauty; for it was perfect, through my majesty which I had put on you,” says the Lord GOD.
- American Standard Version (ASV)
- And thy renown went forth among the nations for thy beauty; for it was perfect, through my majesty which I had put upon thee, saith the Lord Jehovah.
- Bible in Basic English (BBE)
- You were so beautiful that the story of you went out into all nations; you were completely beautiful because of my glory which I had put on you, says the Lord.
- Darby Translation (DBY)
- And thy fame went forth among the nations for thy beauty; for it was perfect through my magnificence, which I had put upon thee, saith the Lord Jehovah.
- Webster's Bible (WBS)
- And thy renown went forth among the heathen for thy beauty: for it [was] perfect through my comeliness, which I had put upon thee, saith the Lord GOD.
- Young's Literal Translation (YLT)
- And go forth doth thy name among nations, Because of thy beauty — for it [is] complete, In My honour that I have set upon thee, An affirmation of the Lord Jehovah.
Read in context
- 12ನಿನ್ನ ಹಣೆಯ ಮೇಲೆ ರತ್ನಾಭರಣವನ್ನೂ ನಿನ್ನ ಕಿವಿಗಳಲ್ಲಿ ವಾಲೆಗಳನ್ನೂ ನಿನ್ನ ತಲೆಯ ಮೇಲೆ ಶೃಂಗಾರ ಕಿರೀಟವನ್ನೂ ಇಟ್ಟೆನು.
- 13ನಿನ್ನ ಒಡವೆಗಳು ಬೆಳ್ಳಿ ಬಂಗಾರಗಳು, ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ಬಟ್ಟೆ; ನಯವಾದ ಹಿಟ್ಟನ್ನೂ ಜೇನನ್ನೂ ಎಣ್ಣೆಯನ್ನೂ ತಿನ್ನುತ್ತಿದ್ದೆ, ನಿನ್ನ ಲಾವಣ್ಯವು ಅತಿ ಮನೋಹರವಾಗಿ ವೃದ್ಧಿಗೊಂಡು ನೀನು ರಾಣಿಯಾದೆ.
- 14ಇದಲ್ಲದೆ, ನಿನ್ನ ಸೌಂದ ರ್ಯದಿಂದ ನಿನ್ನ ಕೀರ್ತಿಯು ಅನ್ಯಜನಾಂಗಗಳಲ್ಲಿ ಹಬ್ಬಿತು; ಯಾಕಂದರೆ ನಾನು ನಿನ್ನ ಮೇಲೆ ಇಟ್ಟ ಸಂಪೂರ್ಣ ವೈಭವದಿಂದಲೇ ಎಂದು ದೇವರಾದ ಕರ್ತನು ಹೇಳುತ್ತಾನೆ.
- 15ಆದರೆ ನೀನು ನಿನ್ನ ಸೌಂದರ್ಯದಲ್ಲಿ ಭರವಸ ವಿಟ್ಟು ನಿನ್ನ ಕೀರ್ತಿಯ ನಿಮಿತ್ತವಾಗಿ ಸೂಳೆತನ ಮಾಡಿದೆ; ಹಾದುಹೋಗುವ ಪ್ರತಿಯೊಬ್ಬನ ಸಂಗಡ ಮಿತಿವಿಾರಿ ಹಾದರತನ ಮಾಡಿದೆ; ಒಬ್ಬೊಬ್ಬನಿಗೂ ಒಳಗಾದೆ.
- 16ನಿನ್ನ ವಸ್ತ್ರಗಳನ್ನು ತೆಗೆದುಕೊಂಡು ಚಿತ್ರ ವಿಚಿತ್ರ ಮಾಡಿ ಅಲಂಕರಿಸಿಕೊಂಡು ಪೂಜಾಸ್ಥಳದಲ್ಲಿ ವ್ಯಭಿಚಾರ ಮಾಡಿದೆ, ಇದು ನಡೆಯತಕ್ಕದ್ದಲ್ಲ ಮತ್ತು ನಡೆಯಬಾರದಂಥ ಕೆಲಸವಾಗಿದೆ.
Cross references
- Lamentations 2:15 ಪ್ರಲಾಪಗಳು 2:15ದಾರಿಯಲ್ಲಿ ಹೋಗುವವ ರೆಲ್ಲರೂ ನಿನ್ನ ವಿಷಯದಲ್ಲಿ ತಮ್ಮ ಕೈಗಳನ್ನು ತಟ್ಟುತ್ತಾರೆ; ಅವರು ಯೆರೂಸಲೇಮಿನ ಕುಮಾರ್ತೆಯ ವಿಷಯದಲ್ಲಿ ಸಿಳ್ಳು ಹಾಕಿ ತಲೆಯಾಡಿಸಿ--ಆ ಮನುಷ್ಯರು ಕರೆಯು ತ್ತಿದ್ದ ಸೌಂದರ್ಯದ ಸಂಪೂರ್ಣತೆಯೂ ಸರ್ವ ಭೂಮಿಯ ಸಂತೋಷವೂ ಆಗಿರುವ ನಗರಿಯು ಇದೇಯೋ?
- 1 Kings 10:24 1 ಅರಸುಗಳು 10:24ದೇವರು ಸೊಲೊಮೋನನ ಹೃದಯದಲ್ಲಿ ಉಂಟು ಮಾಡಿದ ಅವನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿಯಲ್ಲಿರುವ ಸಮಸ್ತರು ಅವನ ಬಳಿಗೆ ಬಂದರು.
- Deuteronomy 4:6–8 ಧರ್ಮೋಪದೇಶಕಾಂಡ 4:6–8ಹೀಗಿರುವ ದರಿಂದ ನೀವು ಅವುಗಳನ್ನು ಕೈಕೊಂಡು ಅನುಸರಿಸಿರಿ; ಯಾಕಂದರೆ ಜನಾಂಗಗಳ ಮುಂದೆ ಇರುವ ನಿಮ್ಮ ಜ್ಞಾನವೂ ನಿಮ್ಮ ವಿವೇಕವೂ ಇದೇ ಆಗಿದೆ. ಅವರು ಈ ನಿಯಮಗಳನ್ನೆಲ್ಲಾ ಕೇಳಿ--ನಿಶ್ಚಯವಾಗಿ ಈ ದೊಡ್ಡ ಜನಾಂಗವು ಜ್ಞಾನವೂ ವಿವೇಕವೂ ಉಳ್ಳ ಜನವಾಗಿದೆ ಅನ್ನುವರು. ನಾವು ಆತನಿಗೆ ಮೊರೆ ಯಿಡುವ ಎಲ್ಲಾ ವಿಷಯಗಳಲ್ಲಿ ನಮ್ಮ ದೇವರಾದ ಕರ್ತನು ನಮಗೆ ಸವಿಾಪವಿರುವ ಪ್ರಕಾರ ಬೇರೆ ಸವಿಾಪವಾದ ದೇವರುಳ್ಳ ದೊಡ್ಡ ಜನಾಂಗ ಯಾವದು? ಇದಲ್ಲದೆ ನಾನು ಈಹೊತ್ತು ನಿಮ್ಮ ಮುಂದೆ ಇಡುವ ಈ ಎಲ್ಲಾ ನ್ಯಾಯಪ್ರಮಾಣದ ಪ್ರಕಾರ ನೀತಿಯುಳ್ಳ ನಿಯಮ ನ್ಯಾಯಗಳುಳ್ಳ ದೊಡ್ಡ ಜನಾಂಗ ಯಾವದು?
- 1 Corinthians 4:7 1 ಕೊರಿಂಥದವರಿಗೆ 4:7ನಿನಗೂ ಇತರರಿಗೂ ತಾರತಮ್ಯ ಮಾಡಿ ದವರು ಯಾರು? ನೀನು ಹೊಂದದೆ ಇರುವಂಥದ್ದು ನಿನ್ನಲ್ಲಿ ಯಾವದು ಇದೆ? ಹೊಂದಿದ ಮೇಲೆ ಹೊಂದದವನಂತೆ ನೀನು ಯಾಕೆ ಹಿಗ್ಗಿಕೊಳ್ಳುತ್ತೀ?
- Deuteronomy 4:32–38 ಧರ್ಮೋಪದೇಶಕಾಂಡ 4:32–38ನಿನ್ನ ಮುಂದೆ ಇದ್ದ ಪೂರ್ವದ ದಿವಸಗಳನ್ನು ದೇವರು ಭೂಮಿಯ ಮೇಲೆ ಮನುಷ್ಯನನ್ನು ಸೃಷ್ಟಿಸಿ ದಂದಿನಿಂದ ವಿಚಾರಿಸು; ಆಕಾಶದ ಈ ಕಡೆಯಿಂದ ಆ ಕಡೆಯವರೆಗೂ ವಿಚಾರಿಸು; ಇದರಂತೆ ದೊಡ್ಡ ಕಾರ್ಯ ಉಂಟಾಯಿತೇ? ಇಲ್ಲವೆ ಇದರಂತೆ ಕೇಳ ಲ್ಪಟ್ಟಿತೇ? ನೀನು ಕೇಳಿದಂತೆ ಬೆಂಕಿಯೊಳಗಿಂದ ಮಾತನಾಡುವ ದೇವರ ಶಬ್ದವನ್ನು ಕೇಳಿ ಬದುಕಿದ ಜನರು ಇದ್ದಾರೆಯೇ? ಇಲ್ಲವೆ ನಿಮ್ಮ ದೇವರಾದ ಕರ್ತನು ಐಗುಪ್ತದಲ್ಲಿ ನಿಮ್ಮ ಕಣ್ಣುಗಳ ಮುಂದೆ ನಿಮಗೆ ಮಾಡಿದ್ದೆಲ್ಲಾದರ ಹಾಗೆ ಬೇರೆ ದೇವರು ಹೋಗಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಮಧ್ಯ ದಿಂದ ಶೋಧನೆಗಳು ಗುರುತುಗಳು ಅದ್ಭುತಗಳು ಇವುಗಳ ಮೂಲಕವಾಗಿಯೂ ಯುದ್ಧದಿಂದಲೂ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಮಹಾಭೀತಿಯಿಂದಲೂ ತಕ್ಕೊಳ್ಳುವದಕ್ಕೆ ಪ್ರಯತ್ನ ಮಾಡಿದನೋ? ಕರ್ತನೇ ದೇವರೆಂದು ನೀನು ತಿಳುಕೊಳ್ಳುವ ಹಾಗೆ ಅವು ನಿನಗೆ ತೋರಿಸಲ್ಪಟ್ಟವು; ಆತನಲ್ಲದೆ ಮತ್ತೊಬ್ಬನಿಲ್ಲ. ಆತನು ನಿನ್ನ ಶಿಕ್ಷಣಕ್ಕಾಗಿ ಆಕಾಶದೊಳಗಿಂದ ತನ್ನ ಶಬ್ದವನ್ನು ನಿನಗೆ ಕೇಳ ಮಾಡಿದನು; ಭೂಮಿಯ ಮೇಲೆ ತನ್ನ ಮಹಾಅಗ್ನಿ ಯನ್ನು ನಿನಗೆ ತೋರಿಸಿದನು; ಬೆಂಕಿಯೊಳಗಿಂದ ಆತನ ಮಾತುಗಳನ್ನು ಕೇಳಿದಿ. ಆತನು ನಿನ್ನ ಪಿತೃಗಳನ್ನು ಪ್ರೀತಿಮಾಡಿದ್ದರಿಂದ ಅವರ ತರುವಾಯ ಅವರ ಸಂತತಿಯನ್ನು ಆದು ಕೊಂಡು ನಿನ್ನನ್ನು ತನ್ನ ದೃಷ್ಟಿಯಲ್ಲಿ ತನ್ನ ಮಹಾ ಬಲ ದೊಂದಿಗೆ ಐಗುಪ್ತದೊಳಗಿಂದ ಹೊರಗೆ ಬರಮಾಡಿ ದನು. ನಿನಗಿಂತ ದೊಡ್ಡದಾದ ನಿನಗಿಂತ ಬಲಿಷ್ಠ ವಾದ ಜನಾಂಗಗಳನ್ನು ನಿನ್ನ ಮುಂದೆ ಓಡಿಸಿ ನಿನ್ನನ್ನು ಒಳಗೆ ಬರಮಾಡಿ ಈ ದಿನ ಇರುವಂತೆ ನಿನಗೆ ಅವರ ದೇಶವನ್ನು ಸ್ವಾಸ್ತ್ಯವಾಗಿ ಕೊಟ್ಟನು.
- 2 Chronicles 9:23 2 ಪೂರ್ವಕಾಲವೃತ್ತಾಂತ 9:23ದೇವರು ಸೊಲೊಮೋನನ ಹೃದಯದಲ್ಲಿ ಉಂಟುಮಾಡಿದ ಅವನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿಯ ಸಮಸ್ತ ಅರಸುಗಳು ಸೊಲೊಮೋನನ ಮುಖದರ್ಶನವನ್ನು ಹುಡುಕಿದರು.
- 2 Chronicles 2:11–12 2 ಪೂರ್ವಕಾಲವೃತ್ತಾಂತ 2:11–12ಆಗ ತೂರಿನ ಅರಸನಾದ ಹಿರಾಮನು ಪ್ರತ್ಯು ತ್ತರವನ್ನು ಬರೆದು ಸೊಲೊಮೋನನಿಗೆ ಕಳುಹಿಸಿಕರ್ತನು ತನ್ನ ಜನರನ್ನು ಪ್ರೀತಿ ಮಾಡಿದ್ದರಿಂದ ಆತನು ನಿನ್ನನ್ನು ಅವರ ಮೇಲೆ ಅರಸನಾಗಲು ಮಾಡಿದ್ದಾನೆ ಎಂದು ಹೇಳಿದನು. ಇದಲ್ಲದೆ ಹಿರಾಮನು ಕರ್ತ ನಿಗೋಸ್ಕರ ಮನೆಯನ್ನೂ ತನ್ನ ರಾಜ್ಯಕ್ಕೋಸ್ಕರ ಮನೆ ಯನ್ನೂ ಕಟ್ಟಿಸುವದಕ್ಕೆ ಅರಸನಾದ ದಾವೀದನಿಗೆ ಜ್ಞಾನವುಳ್ಳಂಥ ಬುದ್ಧಿಯನ್ನು ಗ್ರಹಿಕೆಯನ್ನು ತಿಳು ಕೊಂಡಂಥ ಮಗನನ್ನು ಕೊಟ್ಟು, ಆಕಾಶವನ್ನೂ ಭೂಮಿ ಯನ್ನೂ ಉಂಟುಮಾಡಿದ ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿಸಲ್ಪಡಲಿ.
- Joshua 2:9–11 ಯೆಹೋಶುವ 2:9–11ಕರ್ತನು ನಿಮಗೆ ದೇಶವನ್ನು ಕೊಟ್ಟಿದ್ದಾನೆಂದೂ ನಿಮ್ಮ ನಿಮಿತ್ತ ನಮಗೆ ಮಹಾಭೀತಿ ಯಾಗಿದೆ ಎಂದೂ ನಿಮಗೋಸ್ಕರ ದೇಶದ ನಿವಾಸಿ ಗಳೆಲ್ಲರು ಕಂಗೆಟ್ಟು ಹೋಗಿದ್ದಾರೆಂದೂ ನಾನು ಬಲ್ಲೆನು. ನೀವು ಐಗುಪ್ತದಿಂದ ಹೊರಡುವಾಗ ಕರ್ತನು ನಿಮಗೋಸ್ಕರ ಕೆಂಪು ಸಮುದ್ರದ ನೀರನ್ನು ಬತ್ತಿಹೋಗ ಮಾಡಿದ್ದನ್ನೂ ಯೊರ್ದನಿಗೆ ಆಚೆಯಲ್ಲಿದ್ದ ಅಮೋರಿ ಯರ ಇಬ್ಬರು ಅರಸುಗಳಾದ ಸೀಹೋನನನ್ನು ಓಗನನ್ನು ನೀವು ಸಂಪೂರ್ಣ ನಿರ್ಮೂಲ ಮಾಡಿದ್ದನ್ನೂ ನಾವು ಕೇಳಿದ್ದೇವೆ. ಇವುಗಳನ್ನು ನಾವು ಕೇಳಿದಾಗಲೇ ನಮ್ಮ ಹೃದಯವು ಕರಗಿಹೋಯಿತು. ಇನ್ನು ನಿಮ್ಮ ನಿಮಿತ್ತ ಯಾವನಲ್ಲಿಯೂ ಧೈರ್ಯವಿಲ್ಲದೆ ಹೋಯಿತು. ಯಾಕಂದರೆ ನಿಮ್ಮ ದೇವರಾದ ಕರ್ತನೇ ಮೇಲಿರುವ ಆಕಾಶದಲ್ಲಿಯೂ ಕೆಳಗಿರುವ ಭೂಮಿಯ ಮೇಲೆಯೂ ದೇವರಾಗಿದ್ದಾನೆ.
- Joshua 9:6–9 ಯೆಹೋಶುವ 9:6–9ಅವರು ಗಿಲ್ಗಾಲಿನಲ್ಲಿ ಇರುವ ಪಾಳೆಯಕ್ಕೆ ಯೆಹೋಶುವನ ಬಳಿಗೆ ಹೋಗಿ ಅವ ನಿಗೂ ಇಸ್ರಾಯೇಲ್ಯರಿಗೂ--ನಾವು ದೂರ ದೇಶ ದಿಂದ ಬಂದೆವು; ಈಗ ನಮ್ಮ ಸಂಗಡ ಒಡಂಬಡಿಕೆ ಮಾಡಿರಿ ಅಂದರು. ಆಗ ಇಸ್ರಾಯೇಲ್ ಮನುಷ್ಯರು ಹಿವ್ವಿಯರಿಗೆ--ನೀವು ಒಂದು ವೇಳೆ ನಮ್ಮ ಮಧ್ಯದಲ್ಲಿ ವಾಸಿಸುವವರು ಆಗಿರಬಹುದು; ಆದರೆ ನಿಮ್ಮ ಸಂಗಡ ಒಡಂಬಡಿಕೆಯನ್ನು ಮಾಡುವದು ಹೇಗೆ ಅಂದರು. ಅದಕ್ಕವರು ಯೆಹೋಶುವನಿಗೆ--ನಾವು ನಿನ್ನ ಸೇವ ಕರು ಅಂದರು. ಆಗ ಯೆಹೋಶುವನು ಅವರಿಗೆ-- ನೀವು ಯಾರು, ಎಲ್ಲಿಂದ ಬಂದಿರಿ ಅಂದನು. ಅವರು ಅವನಿಗೆ--ನಿಮ್ಮ ದೇವರಾದ ಕರ್ತನ ಹೆಸರಿಗೋಸ್ಕರ ನಿನ್ನ ಸೇವಕರಾದ ನಾವು ದೂರದೇಶದಿಂದ ಬಂದೆವು. ಯಾಕಂದರೆ ಆತನ ಕೀರ್ತಿಯನ್ನೂ ಆತನು ಐಗುಪ್ತದಲ್ಲಿ ಮಾಡಿದ ಎಲ್ಲವನ್ನೂ
- 1 Kings 10:1–13 1 ಅರಸುಗಳು 10:1–13ಶೆಬದ ರಾಣಿಯು ಕರ್ತನ ನಾಮವನ್ನು ಕುರಿತೂ ಸೊಲೊಮೋನನ ಕೀರ್ತಿ ಯನ್ನೂ ಕೇಳಿದಾಗ ಒಗಟುಗಳಿಂದ ಅವನನ್ನು ಪರೀಕ್ಷಿ ಸಲು ಬಂದಳು. ಅವಳು ಮಹಾ ಗುಂಪಿನ ಸಂಗಡ ಸುಗಂಧದ್ರವ್ಯಗಳನ್ನೂ ಬಹು ಹೆಚ್ಚಾದ ಚಿನ್ನವನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಹೊರುವ ಒಂಟೆಗಳ ಸಂಗಡ ಬಂದಳು. ಅವಳು ಸೊಲೊಮೋನನ ಬಳಿಗೆ ಬಂದ ಮೇಲೆ ತನ್ನ ಹೃದಯದಲ್ಲಿದ್ದ ಎಲ್ಲವನ್ನು ಕುರಿತು ಅವನ ಸಂಗಡ ಮಾತನಾಡಿದಳು. ಆಗ ಸೊಲೊ ಮೋನನು ಅವಳ ಪ್ರಶ್ನೆಗಳಿಗೆಲ್ಲಾ ಉತ್ತರಿಸಿದನು. ಅವಳಿಗೆ ತಿಳಿಸದಂಥ ಅರಸನಿಗೆ ಮರೆಯಾಗಿದ್ದಂಥದ್ದು ಒಂದೂ ಇರಲಿಲ್ಲ. ಶೆಬದ ರಾಣಿಯು ಸೊಲೊ ಮೋನನ ಸಮಸ್ತ ಜ್ಞಾನವನ್ನೂ ಅವನು ಕಟ್ಟಿಸಿದ ಮಂದಿರವನ್ನೂ ಅವನ ಮೇಜಿನ ಭೋಜನವನ್ನೂ ದಾಸರ ಕೂತಿರುವಿಕೆಯ ರೀತಿಯನ್ನೂ ಸೇವಕರು ನಿಂತಿರುವದನ್ನೂ ಅವರ ವಸ್ತ್ರಗಳನ್ನೂ ಅವನ ಪಾನ ದಾಯಕರನ್ನೂ ಅವನು ಕರ್ತನ ಮಂದಿರಕ್ಕೆ ಹೋಗುವ ಮಾರ್ಗವನ್ನೂ ನೋಡಿದಾಗ ಸ್ತಬ್ಧಳಾದಳು; ಅವಳು ಅರಸನಿಗೆ-- ನಾನು ನನ್ನ ದೇಶದಲ್ಲಿ ನಿನ್ನ ಕ್ರಿಯೆ ಗಳನ್ನು ಕುರಿತೂ ನಿನ್ನ ಜ್ಞಾನವನ್ನು ಕುರಿತೂ ಕೇಳಿದ ಮಾತು ಸತ್ಯವು. ಆದರೆ ನಾನು ಬಂದು ನನ್ನ ಕಣ್ಣು ಗಳಿಂದ ನೋಡುವವರೆಗೂ ಆ ಮಾತುಗಳನ್ನು ನಂಬದೆ ಹೋದೆನು. ಇಗೋ, ಇದರಲ್ಲಿ ಅರ್ಧವೂ ನನಗೆ ಹೇಳಲ್ಪಟ್ಟಿದ್ದಿಲ್ಲ; ನಿನ್ನ ಜ್ಞಾನವೂ ಸಂಪತ್ತೂ ನಾನು ಕೇಳಿದ ಕೀರ್ತಿಗಿಂತ ಅಧಿಕವಾಗಿರುವದು. ನಿನ್ನ ಮನುಷ್ಯರು ಭಾಗ್ಯವಂತರು; ನಿನ್ನ ಮುಂದೆ ಯಾವಾ ಗಲೂ ನಿಂತು ನಿನ್ನ ಜ್ಞಾನವನ್ನು ಕೇಳುವ ಈ ನಿನ್ನ ಸೇವಕರು ಭಾಗ್ಯವಂತರು. ನಿನ್ನನ್ನು ಇಸ್ರಾಯೇಲಿನ ಸಿಂಹಾಸನದ ಮೇಲೆ ಕೂಡ್ರಿಸುವ ಹಾಗೆ ನಿನ್ನಲ್ಲಿ ಇಷ್ಟಪಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ. ಕರ್ತನು ಯುಗಯುಗಕ್ಕೂ ಇಸ್ರಾಯೇಲನ್ನು ಪ್ರೀತಿ ಮಾಡಿದ್ದರಿಂದ ನ್ಯಾಯವನ್ನೂ ನೀತಿಯನ್ನೂ ನಡಿಸಲು ಆತನು ನಿನ್ನನ್ನು ಅರಸನಾಗ ಮಾಡಿದನು ಅಂದಳು. ಅವಳು ಅರಸನಿಗೆ ನೂರ ಇಪ್ಪತ್ತು ತಲಾಂತು ಚಿನ್ನವನ್ನೂ ಬಹುಸಮೃದ್ಧಿಯಾದ ಸುಗಂಧದ್ರವ್ಯಗ ಳನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟ ಅಪರಿಮಿತವಾದ ಸುಗಂಧಗಳ ಹಾಗೆ ಇನ್ನೆಂದೂ ಬಂದದ್ದಿಲ್ಲ. ಇದಲ್ಲದೆ ಹೀರಾಮನ ಹಡಗುಗಳು ಓಫಿರಿನಿಂದ ಬಂಗಾರವನ್ನೂ ಅನೇಕ ಅಲ್ಮುಗ್ ಮರಗಳನ್ನೂ ಅಮೂಲ್ಯವಾದ ಕಲ್ಲುಗಳನ್ನೂ ತಂದವು. ಅರಸನು ಅಲ್ಮುಗ್ ಮರಗಳಿಂದ ಕರ್ತನ ಮಂದಿರಕ್ಕೋಸ್ಕರವೂ ಅರಸನ ಮನೆಗೋಸ್ಕರವೂ ಸ್ತಂಭಗಳನ್ನು ಮಾಡಿಸಿ ದನು. ಇದಲ್ಲದೆ ಅವುಗಳಿಂದ ಹಾಡುವವರಿಗೋಸ್ಕರ ಕಿನ್ನರಿಗಳನ್ನೂ ವೀಣೆಗಳನ್ನೂ ಮಾಡಿಸಿದನು; ಅಂದಿ ನಿಂದ ಈ ದಿನದ ವರೆಗೂ ಅಂಥ ಅಲ್ಮುಗ್ ಮರಗಳು ಬಂದದ್ದೂ ಇಲ್ಲ, ಕಂಡದ್ದೂ ಇಲ್ಲ. ಅರಸನಾದ ಸೊಲೊಮೋನನು ಶೆಬದ ರಾಣಿಗೆ ರಾಜನ ದಾನವಾಗಿ ಕೊಟ್ಟದ್ದು ಹೊರತಾಗಿ ಅವಳು ಇಚ್ಚೈಸಿ ಕೇಳಿದ್ದನ್ನೆಲ್ಲಾ ಸೊಲೊಮೋನನು ಅವಳಿಗೆ ಕೊಟ್ಟನು. ಆಕೆಯು ಹಿಂತಿರುಗಿ ತನ್ನ ಸೇವಕರ ಕೂಡ ತನ್ನ ಸ್ವದೇಶಕ್ಕೆ ಹೋದಳು.