Ezekiel · chapter 16 · verse 17
Ezekiel 16:17 in Kannada
ಇದಲ್ಲದೆ ನಾನು ನಿನಗೆ ಬೆಳ್ಳಿ ಬಂಗಾರದಿಂದ ಮಾಡಿಸಿಕೊಟ್ಟಿದ್ದ ನಿನ್ನ ಅಂದವಾದ ಆಭರಣಗಳನ್ನು ತೆಗೆದು ಅವುಗಳಿಂದ ಪುರುಷ ರೂಪಗಳನ್ನು ಮಾಡಿಕೊಂಡು ಅದರ ಸಂಗಡ ವ್ಯಭಿಚಾರ ಮಾಡಿದಿ.
Idallade naanu ninage belli bangaaradinda maadisikottidda ninna andavaada aabharanagalannu tegedu avugalinda purusha roopagalannu maadikondu adara sangada vyabhichaara maadidi.
Ezekiel 16:17 in English
- King James Version (KJV)
- Thou hast also taken thy fair jewels of my gold and of my silver, which I had given thee, and madest to thyself images of men, and didst commit whoredom with them,
- World English Bible (WEB)
- You also took your beautiful jewels of my gold and of my silver, which I had given you, and made for yourself images of men, and played the prostitute with them.
- American Standard Version (ASV)
- Thou didst also take thy fair jewels of my gold and of my silver, which I had given thee, and madest for thee images of men, and didst play the harlot with them;
- Bible in Basic English (BBE)
- And you took the fair jewels, my silver and gold which I had given to you, and made for yourself male images, acting like a loose woman with them;
- Darby Translation (DBY)
- And thou didst take thy fair jewels of my gold and of my silver, which I had given thee, and madest to thyself images of males, and didst commit fornication with them.
- Webster's Bible (WBS)
- Thou hast also taken thy fair jewels of my gold and of my silver, which I had given thee, and hast made to thyself images of men, and hast committed lewdness with them.
- Young's Literal Translation (YLT)
- And thou dost take thy beauteous vessels Of My gold and My silver that I gave to thee, And dost make to thee images of a male, And dost go a-whoring with them,
Read in context
- 15ಆದರೆ ನೀನು ನಿನ್ನ ಸೌಂದರ್ಯದಲ್ಲಿ ಭರವಸ ವಿಟ್ಟು ನಿನ್ನ ಕೀರ್ತಿಯ ನಿಮಿತ್ತವಾಗಿ ಸೂಳೆತನ ಮಾಡಿದೆ; ಹಾದುಹೋಗುವ ಪ್ರತಿಯೊಬ್ಬನ ಸಂಗಡ ಮಿತಿವಿಾರಿ ಹಾದರತನ ಮಾಡಿದೆ; ಒಬ್ಬೊಬ್ಬನಿಗೂ ಒಳಗಾದೆ.
- 16ನಿನ್ನ ವಸ್ತ್ರಗಳನ್ನು ತೆಗೆದುಕೊಂಡು ಚಿತ್ರ ವಿಚಿತ್ರ ಮಾಡಿ ಅಲಂಕರಿಸಿಕೊಂಡು ಪೂಜಾಸ್ಥಳದಲ್ಲಿ ವ್ಯಭಿಚಾರ ಮಾಡಿದೆ, ಇದು ನಡೆಯತಕ್ಕದ್ದಲ್ಲ ಮತ್ತು ನಡೆಯಬಾರದಂಥ ಕೆಲಸವಾಗಿದೆ.
- 17ಇದಲ್ಲದೆ ನಾನು ನಿನಗೆ ಬೆಳ್ಳಿ ಬಂಗಾರದಿಂದ ಮಾಡಿಸಿಕೊಟ್ಟಿದ್ದ ನಿನ್ನ ಅಂದವಾದ ಆಭರಣಗಳನ್ನು ತೆಗೆದು ಅವುಗಳಿಂದ ಪುರುಷ ರೂಪಗಳನ್ನು ಮಾಡಿಕೊಂಡು ಅದರ ಸಂಗಡ ವ್ಯಭಿಚಾರ ಮಾಡಿದಿ.
- 18ನಿನ್ನ ಕಸೂತಿಯ ಬಟ್ಟೆಗಳನ್ನು ತೆಗೆದು ಅವರಿಗೆ ಹೊದಿಸಿ ನನ್ನ ಎಣ್ಣೆಯನ್ನೂ ಧೂಪ ವನ್ನೂ ಅವರ ಮುಂದೆ ಇಟ್ಟೆ.
- 19ನಾನು ನಿನಗೆ ನನ್ನ ಆಹಾರವನ್ನೂ ನಿನಗೆ ನಯವಾದ ಹಿಟ್ಟನ್ನೂ ಎಣ್ಣೆ ಮತ್ತು ಜೇನುಗಳನ್ನೂ ಸುವಾಸನೆಗಾಗಿ ಕೊಟ್ಟೆ. ಆದರೆ ನೀನು ಅವುಗಳನ್ನು ಅವರ ಮುಂದೆ ಇಟ್ಟೆ ಎಂದು ದೇವರಾದ ಕರ್ತನು ಹೇಳುತ್ತಾನೆ.
Cross references
- Ezekiel 23:14–21 ಯೆಹೆಜ್ಕೇಲನು 23:14–21ಅವಳು ತನ್ನ ವ್ಯಭಿಚಾರವನ್ನು ಇನ್ನು ಹೆಚ್ಚಿಸಿದಳು; ಗೋಡೆಯ ಮೇಲೆ ಬರೆಯಲ್ಪಟ್ಟ ಮನುಷ್ಯರನ್ನೂ ಕುಂಕುಮ ಇಟ್ಟುಕೊಂಡ ಕಸ್ದೀಯರ ಹಾಗೆ ಕಂಡು ಬರುವ ಪ್ರತಿಮೆಗಳನ್ನೂ (ಮನುಷ್ಯ ಆಕಾರಗಳನ್ನೂ) ನೋಡಿದಾಗ, ಸೊಂಟಕ್ಕೆ ನಡುಕಟ್ಟನ್ನು ಕಟ್ಟಿ ಕೊಂಡಂಥ ತನ್ನ ತಲೆಗಳಲ್ಲಿ ಅಲಂಕಾರವಾದ ರುಮಾ ಲನ್ನು ಧರಿಸಿದಂಥ ಎಲ್ಲರೂ ನೋಟದಲ್ಲಿ ಅವರ ಸ್ವದೇಶವಾದ ಕಸ್ದೀಯಕ್ಕೆ ಸೇರಿದ ಬಾಬೆಲಿನ ಕುಮಾರರ ಹಾಗಿರುವದನ್ನು; ಅವಳು ಅವಳ ಕಣ್ಣುಗಳಿಂದ ತಕ್ಷಣವೇ ಅವರನ್ನು ನೋಡಿದಾಗ ಅವರನ್ನು ಮೋಹಿಸಿ ದಳು; ಅವರ ಬಳಿಗೆ ಕಸ್ದೀಯಕ್ಕೆ ದೂತರನ್ನು ಕಳುಹಿಸಿ ದಳು. ಬಾಬೆಲಿನವರು ಅವಳ, ಪ್ರೀತಿಯ ಹಾಸಿ ಗೆಯ ಮೇಲೆ ಬಂದು ಅವಳನ್ನು ವ್ಯಭಿಚಾರದಿಂದ ಅಪವಿತ್ರಪಡಿಸಿದರು; ಅವಳು ಅವರಿಂದ ಹಾಳಾದ ಮೇಲೆ ತನ್ನ ಮನಸ್ಸನ್ನು ಅವರ ಕಡೆಯಿಂದ ಅಗಲಿಸಿ ಕೊಂಡಳು. ಹೀಗೆ ಅವಳು ವ್ಯಭಿಚಾರವನ್ನು ಕಂಡುಹಿಡಿದು ತನ್ನ ಬೆತ್ತಲೆತನವನು ಬಯಲುಪಡಿಸಿ ಕೊಂಡಾಗ, ತನ್ನ ಅನುರಾಗವು ಮೊದಲು ಇವಳ ಸಹೋದರಿಯಿಂದ ಅಗಲಿದ ಹಾಗೆ ಇವಳಿಂದಲೂ ಅಗಲಿತು. ಆದರೂ ಅವಳು ಐಗುಪ್ತದೇಶದಲ್ಲಿ ವ್ಯಭಿಚಾರ ಮಾಡಿದಾಗ ತನ್ನ ಯೌವನದ ದಿನಗಳನ್ನು ಜ್ಞಾಪಕಮಾಡಿಕೊಂಡು ತನ್ನ ವ್ಯಭಿಚಾರವನ್ನು ಹೆಚ್ಚಿಸಿ ದಳು. ಹೇಗಂದರೆ, ಕತ್ತೆಗಳ ಮಾಂಸದಂತೆ ಮಾಂಸ ವುಳ್ಳವರಾಗಿಯೂ ಕುದುರೆಗಳ ವೀರ್ಯದಂತೆ ವೀರ್ಯ ವುಳ್ಳವರಾಗಿಯೂ ಇರುವ ತನ್ನ ಉಪಪತಿಗಳನ್ನು ಮೋಹಿಸಿದರು. ಹೀಗೆ ಐಗುಪ್ತರಿಂದ ನಿನ್ನ ಯೌವ ನದ ಸ್ತನಗಳ ತೊಟ್ಟುಗಳನ್ನು ಒತ್ತಿಸಿಕೊಂಡು ನಿನ್ನ ಯೌವನದ ದುಷ್ಕರ್ಮವನ್ನು ನೆನಪಿಗೆ ತಂದುಕೋ.
- Jeremiah 2:27–28 ಯೆರೆಮೀಯ 2:27–28ಅವರು ಮರಕ್ಕೆ ನೀನು ನನ್ನ ತಂದೆ ಎಂದೂ ಕಲ್ಲಿಗೆ--ನೀನು ನನ್ನನ್ನು ಹೆತ್ತಿದ್ದೀ ಎಂದೂ ಹೇಳುತ್ತಾರಲ್ಲಾ? ಯಾಕಂದರೆ ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ; ಆದರೂ ಅವರ ಕಷ್ಟ ಕಾಲದಲ್ಲಿ--ಎದ್ದು, ನಮ್ಮನ್ನು ರಕ್ಷಿಸು ಎಂದು ಹೇಳುವರು. ಆದರೆ ನೀನು ನಿನಗೋಸ್ಕರ ಮಾಡಿಕೊಂಡ ನಿನ್ನ ದೇವರುಗಳು ಎಲ್ಲಿ? ನಿನ್ನ ಕಷ್ಟ ಕಾಲದಲ್ಲಿ ನಿನ್ನನ್ನು ರಕ್ಷಿಸಲು ಸಾಧ್ಯವಾದರೆ ಅವರೇ ಏಳಲಿ, ಯಾಕಂದರೆ ಓ ಯೆಹೂದವೇ, ನಿನ್ನ ಪಟ್ಟಣಗಳ ಲೆಕ್ಕದ ಹಾಗೆ ನಿನ್ನ ದೇವರುಗಳು ಇದ್ದಾರೆ.
- Ezekiel 7:19–20 ಯೆಹೆಜ್ಕೇಲನು 7:19–20ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು; ಅವರ ಬಂಗಾರವು ತೆಗೆದುಹಾಕಲ್ಪಡುವದು, ಅವರ ಬೆಳ್ಳಿ ಬಂಗಾರಗಳು ಕರ್ತನ ಕೋಪದ ದಿವಸದಲ್ಲಿ ಅವರನ್ನು ತಪ್ಪಿಸಲಾರವು ಮತ್ತು ಅವರ ಪ್ರಾಣಗಳನ್ನು ತೃಪ್ತಿಪಡಿ ಸುವದಿಲ್ಲ. ಅವರ ಕರುಳುಗಳನ್ನು ತುಂಬಿಸುವದಿಲ್ಲ. ಯಾಕಂದರೆ ಅದು ಅವರ ಅಕ್ರಮಗಳ ಎಡತಡೆಯ ಭಾಗವಾಗಿದೆ. ಅವನ ಆಭರಣದ ಸೌಂದರ್ಯವಾ ದರೋ ಅವನು ಅದನ್ನು ಘನತೆಗಾಗಿ ಇಟ್ಟನು. ಆದರೆ ಅವರು ತಮ್ಮ ಅಸಹ್ಯಗಳ ವಿಗ್ರಹಗಳನ್ನೂ ಹೇಸಿಗೆ ಗಳನ್ನೂ ಅದರಲ್ಲಿ ಮಾಡಿದ್ದರಿಂದ ಅದನ್ನು ನಾನು ಅವರಿಂದ ದೂರಮಾಡಿದ್ದೇನೆ.
- Jeremiah 3:9 ಯೆರೆಮೀಯ 3:9ಅವಳ ಸೂಳೆತನದ ಸುದ್ದಿಯಿಂದ ಅವಳು ದೇಶವನ್ನು ಅಪವಿತ್ರ ಮಾಡಿ ಕಲ್ಲುಗಳ ಸಂಗ ಡಲೂ ಮರಗಳ ಸಂಗಡಲೂ ವ್ಯಭಿಚಾರ ಮಾಡಿದಳು.
- Exodus 32:1–4 ವಿಮೋಚನಕಾಂಡ 32:1–4ಮೋಶೆಯು ಬೆಟ್ಟದಿಂದ ಇಳಿದುಬರುವದರಲ್ಲಿ ತಡವಾದದ್ದನ್ನು ಜನರು ನೋಡಿದಾಗ ಅವರು ಆರೋನನ ಬಳಿಗೆ ಕೂಡಿ ಬಂದು ಅವನಿಗೆ--ನೀನು ಎದ್ದು ನಮ್ಮ ಮುಂದೆ ಹೋಗುವ ದೇವರುಗಳನ್ನು ನಮಗಾಗಿ ಮಾಡು, ಐಗುಪ್ತದೇಶದೊಳಗಿಂದ ನಮ್ಮನ್ನು ಕರೆದುಕೊಂಡು ಬಂದ ಮನುಷ್ಯನಾದ ಈ ಮೋಶೆಗೆ ಏನಾಯಿತೋ ನಮಗೆ ತಿಳಿಯದು ಅಂದರು. ಅದಕ್ಕೆ ಆರೋನನು ಅವರಿಗೆ--ನಿಮ್ಮ ಹೆಂಡತಿಯರ ಮತ್ತು ನಿಮ್ಮ ಕುಮಾರ ಕುಮಾರ್ತೆಯರ ಕಿವಿಗಳಲ್ಲಿರುವ ಚಿನ್ನದ ವಾಲೆಗಳನ್ನು ಕಿತ್ತು ನನ್ನ ಬಳಿಗೆ ತನ್ನಿರಿ ಅಂದನು. ಆಗ ಜನರೆಲ್ಲರು ತಮ್ಮ ಕಿವಿಗಳಲ್ಲಿದ್ದ ಚಿನ್ನದ ವಾಲೆಗಳನ್ನು ಕಿತ್ತು ಆರೋನನ ಬಳಿಗೆ ತಂದರು. ಅವನು ಅವುಗಳನ್ನು ಅವರ ಕೈಗಳಿಂದ ತೆಗೆದುಕೊಂಡು ಉಳಿಯಿಂದ ರೂಪಿಸಿ ಎರಕಹೊಯ್ದ ಕರುವಾಗಿ ಮಾಡಿದನು. ಆಗ ಅವರು--ಓ ಇಸ್ರಾ ಯೇಲೇ, ನಿನ್ನನ್ನು ಐಗುಪ್ತದೇಶದೊಳಗಿಂದ ಬರ ಮಾಡಿದ ನಿನ್ನ ದೇವರುಗಳು ಇವೇ ಆಗಿರಲಿ ಅಂದರು.
- Hosea 10:1 ಹೋಶೇಯ 10:1ಇಸ್ರಾಯೇಲು ಬರಿದಾದ ದ್ರಾಕ್ಷೇಬಳ್ಳಿಯಾಗಿದೆ, ಅವನು ತನಗಾಗಿ ಫಲಫಲಿ ಸುತ್ತಾನೆ; ತನ್ನ ಬಹಳ ಫಲದ ಪ್ರಕಾರವಾಗಿ ಅವನು ಬಲಿಪೀಠಗಳನ್ನೂ ಹೆಚ್ಚಿಸಿದ್ದಾನೆ. ತನ್ನ ದೇಶದ ಒಳ್ಳೆಯ ತನದ ಪ್ರಕಾರ ಅಂದವಾದ ವಿಗ್ರಹಗಳನ್ನು ಮಾಡಿ ದ್ದಾನೆ.
- Isaiah 44:19–20 ಯೆಶಾಯ 44:19–20ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು; ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ ಮಾಂಸವನ್ನು ಸುಟ್ಟು ತಿಂದೆ ನಲ್ಲಾ; ಮಿಕ್ಕಿದ್ದರಲ್ಲಿ ಅಸಹ್ಯವಾದದ್ದನ್ನು ಮಾಡಲೋ, ಮರದ ತುಂಡಿಗೆ ಅಡ್ಡಬೀಳಬಹುದೋ ಅಂದುಕೊಳ್ಳು ವಷ್ಟು ಜ್ಞಾನವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿಗೆತಾರರು. ಅವನು ತಿನ್ನುವದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿ ತಪ್ಪಿಸಿದ ಕಾರಣ ನನ್ನ ಬಲಗೈಯಲ್ಲಿ ಸುಳ್ಳು ಇದೆಯಲ್ಲಾ ಎಂದು ಅಂದುಕೊಳ್ಳಲೂ ತನ್ನ ಪ್ರಾಣ ವನ್ನು ಕಾಪಾಡಿಕೊಳ್ಳಲೂ ಅವನಿಂದಾಗದು.
- Hosea 2:13 ಹೋಶೇಯ 2:13ತರುವಾಯ ಅವಳು ನನ್ನನ್ನು ಮರೆತು ಕಿವಿಯೋಲೆ ಮೊದಲಾದ ಒಡವೆಗಳಿಂದ ಸಿಂಗರಿಸಿಕೊಂಡು, ಮಿಂಡರ ಹಿಂದೆ ಹೋಗಿ ಬಾಳ್ ದೇವತೆಗಳ ದಿವಸಗಳಲ್ಲಿ ಧೂಪ ಸುಟ್ಟಿದ್ದಕ್ಕೆ ನಾನು ಅವಳನ್ನು ದಂಡಿಸುವೆನು ಎಂದು ಕರ್ತನು ಹೇಳುತ್ತಾನೆ.
- Isaiah 57:7–8 ಯೆಶಾಯ 57:7–8ಮಹೋನ್ನತ ಪರ್ವತದಲ್ಲಿ ನೀನು ಹಾಸಿಗೆಯನ್ನು ಹಾಕಿಕೊಂಡಿದ್ದೀ. ಬಲಿ ಅರ್ಪಿಸುವ ದಕ್ಕೂ ಅಲ್ಲಿಗೆ ಏರಿದ್ದೀ. ಕದಗಳ ಮತ್ತು ನಿಲುವಿನ ಹಿಂಭಾಗದಲ್ಲಿ ನಿನ್ನ ಜ್ಞಾಪಕ ಚಿಹ್ನೆಯನ್ನು ಇಟ್ಟಿದ್ದೀ. ನನ್ನನ್ನು ಬಿಟ್ಟು ಬೇರೊಬ್ಬನಿಗೆ ನಿನ್ನನ್ನು ತೋರ್ಪಡಿಸಿ ಕೊಂಡಿದ್ದೀ; ಏರಿಹೋಗಿ ನಿನ್ನ ಮಂಚವನ್ನು ಅಗಲ ಮಾಡಿಕೊಂಡು ಅವರೊಂದಿಗೆ ಒಪ್ಪಂದ ಮಾಡಿಕೊಂಡಿದ್ದೀ; ಅವರ ಮಂಚವನ್ನು ಕಂಡಲ್ಲಿ ಅದನ್ನು ಪ್ರೀತಿಮಾಡಿದ್ದೀ.
- Ezekiel 16:11 ಯೆಹೆಜ್ಕೇಲನು 16:11ನಾನು ಆಭರಣಗಳಿಂದಲೂ ನಿನ್ನನ್ನು ಅಲಂಕರಿಸಿದೆನು; ನಾನು ನಿನ್ನ ಕೈಗಳಿಗೆ ಕಡಗ ಗಳನ್ನು, ನಿನ್ನ ಕೊರಳಿಗೆ ಸರವನ್ನು ಹಾಕಿದೆನು.