Ezekiel · chapter 16 · verse 2
Ezekiel 16:2 in Kannada
ಮನುಷ್ಯಪುತ್ರನೇ, ಯೆರೂಸಲೇಮಿಗೆ ಅದರ ಅಸಹ್ಯವಾದವುಗಳನ್ನು ತಿಳಿದುಕೊಳ್ಳುವ ಹಾಗೆ ಮಾಡು.
Manushyaputrane, yeroosalemige adara asahyavaadavugalannu tilidukolluva haage maadu.
Ezekiel 16:2 in English
- King James Version (KJV)
- Son of man, cause Jerusalem to know her abominations,
- World English Bible (WEB)
- “Son of man, cause Jerusalem to know her abominations;
- American Standard Version (ASV)
- Son of man, cause Jerusalem to know her abominations;
- Bible in Basic English (BBE)
- Son of man, make clear to Jerusalem her disgusting ways,
- Darby Translation (DBY)
- Son of man, cause Jerusalem to know her abominations,
- Webster's Bible (WBS)
- Son of man, cause Jerusalem to know her abominations,
- Young's Literal Translation (YLT)
- 'Son of man, cause Jerusalem to know her abominations, and thou hast said:
Read in context
- 1ಕರ್ತನ ವಾಕ್ಯವು ನನ್ನ ಕಡೆಗೆ ಬಂದು ಹೇಳಿದ್ದೇನಂದರೆ--
- 2ಮನುಷ್ಯಪುತ್ರನೇ, ಯೆರೂಸಲೇಮಿಗೆ ಅದರ ಅಸಹ್ಯವಾದವುಗಳನ್ನು ತಿಳಿದುಕೊಳ್ಳುವ ಹಾಗೆ ಮಾಡು.
- 3ದೇವರಾದ ಕರ್ತನು ಯೆರೂಸಲೇಮಿನವರಿಗೆ ಹೀಗೆ ಹೇಳುತ್ತಾನೆ--ನಿನ್ನ ಹುಟ್ಟುವಿಕೆಯೂ ನಿನ್ನ ಹುಟ್ಟಿದ ಸ್ಥಳವೂ ಕಾನಾನ್ ದೇಶದಿಂದಾದದ್ದೇ; ನಿನ್ನ ತಂದೆ ಅಮೋರಿಯನು, ನಿನ್ನ ತಾಯಿ ಹಿತ್ತಿಯಳು
- 4ನಿನ್ನ ಜನನವನ್ನು ಕುರಿತು ನೀನು ಹುಟ್ಟಿದ ದಿನದಲ್ಲಿ ನಿನ್ನ ಹೊಕ್ಕಳು ಕತ್ತರಿಸ ಲ್ಪಡಲಿಲ್ಲ; ಶುದ್ಧವಾಗುವ ಹಾಗೆ ನೀರಿನಿಂದ ತೊಳೆ ಯಲ್ಪಡಲಿಲ್ಲ, ನಿನಗೆ ಉಪ್ಪು ಹಾಕಲಿಲ್ಲ, ನಿನ್ನನ್ನು ಬಟ್ಟೆಯಿಂದ ಸುತ್ತಲಿಲ್ಲ.
Cross references
- Ezekiel 22:2 ಯೆಹೆಜ್ಕೇಲನು 22:2ಈಗ ಮನುಷ್ಯ ಪುತ್ರನೇ, ನೀನು ನ್ಯಾಯತೀರಿಸುವೆಯಾ? ರಕ್ತಾಪರಾಧ ವುಳ್ಳ ಪಟ್ಟಣಕ್ಕೆ ನ್ಯಾಯತೀರಿಸುವೆಯಾ ಹೌದು ಅದರ ಅಸಹ್ಯವಾದವುಗಳನ್ನೆಲ್ಲಾ ಅದಕ್ಕೆ ತಿಳಿಸುವಿ.
- Ezekiel 20:4 ಯೆಹೆಜ್ಕೇಲನು 20:4ಅವರಿಗೆ ನ್ಯಾಯತೀರಿಸುವಿಯೋ? ಮನುಷ್ಯಪುತ್ರನೇ, ನೀನು ಅವರಿಗೆ ನ್ಯಾಯತೀರಿಸು ವಿಯೋ? ಅವರ ತಂದೆಗಳ ಅಸಹ್ಯವಾದವುಗಳನ್ನು ಅವರಿಗೆ ತಿಳಿಸು.
- Isaiah 58:1 ಯೆಶಾಯ 58:1ಗಟ್ಟಿಯಾಗಿ ಕೂಗು, ಹಿಂತೆಗೆಯಬೇಡ. ತುತೂರಿಯಂತೆ ನಿನ್ನ ಸ್ವರವನ್ನೆತ್ತು, ನನ್ನ ಜನರಿಗೆ ಅವರ ದ್ರೋಹವನ್ನೂ ಯಾಕೋಬನ ಮನೆಯವರಿಗೆ ಅವರ ಪಾಪವನ್ನೂ ತೋರಿಸು.
- Ezekiel 8:9–17 ಯೆಹೆಜ್ಕೇಲನು 8:9–17ಆಗ ಆತನು ನನಗೆ--ಒಳಗೆ ಹೋಗು; ಅವರು ಮಾಡುವ ಕೆಟ್ಟ ಅಸಹ್ಯಗಳನ್ನು ನೋಡು ಅಂದನು. ಹಾಗೆಯೇ ನಾನು ಒಳಗೆ ಹೋಗಿ ನೋಡಿದೆನು; ಇಗೋ, ಎಲ್ಲಾ ಜಾತಿಯ ಕ್ರಿಮಿಕೀಟಗಳೂ ಅಸಹ್ಯ ಮೃಗಗಳೂ ಇಸ್ರಾಯೇಲ್ಯರು ಪೂಜಿಸುವ ಸಕಲ ಮೂರ್ತಿಗಳೂ ಈ ಗೋಡೆಯ ಸುತ್ತಲೂ ಚಿತ್ರಿಸ ಲ್ಪಟ್ಟಿವೆ. ಇದಲ್ಲದೆ ಇಸ್ರಾಯೇಲಿನ ಮನೆತನ ದವರಲ್ಲಿ ಎಪ್ಪತ್ತು ಮಂದಿಯೂ ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ನಿಂತುಕೊಂಡಿ ದ್ದರು; ಪ್ರತಿಯೊಬ್ಬನ ಕೈಯಲ್ಲೂ ಅವನವನ ಧೂಪಾ ರತಿ ಇತ್ತು; ಧೂಪದ ಸುವಾಸನೆಯು ಮೇಘವಾಗಿ ಏರುತ್ತಿತ್ತು. ಆಗ ಆತನು ನನಗೆ ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರ ಪೂರ್ವಿಕರು ಕತ್ತಲೆ ಯಲ್ಲಿ ಪ್ರತಿಯೊಬ್ಬನೂ ತನ್ನ ಕೊಠಡಿಗಳಲ್ಲಿ ಚಿತ್ರಗಳನ್ನು ಮಾಡುವದನ್ನು ನೋಡಿದೆಯಾ?--ಕರ್ತನು ನಮ್ಮನ್ನು ನೋಡುವದಿಲ್ಲ, ಕರ್ತನು ಭೂಮಿಯನ್ನು ತೊರೆದು ಬಿಟ್ಟಿದ್ದಾನೆ ಎಂದು ಹೇಳುವರು. ಇದಲ್ಲದೆ ಆತನು ಹೇಳಿದ್ದೇನಂದರೆ--ಮತ್ತೊಂದು ಸಾರಿ ತಿರುಗಿಕೋ; ಅವರು ಮಾಡುವ ಇನ್ನೂ ಮಹಾ ಅಸಹ್ಯವಾದವು ಗಳನ್ನು ನೋಡುವಿ ಅಂದನು. ಆಗ ಅವನು ನನ್ನನ್ನು ಕರ್ತನ ಆಲಯದ ಉತ್ತರ ಕಡೆಗೆ ಎದುರಾಗಿ ಬಾಗಲಿದ್ದ ಕಡೆಗೆ ತಂದನು; ಇಗೋ, ಅಲ್ಲಿ ತಮ್ಮೂಜ್ಗೋಸ್ಕರ ಅಳುವ ಹೆಂಗಸರು ಕೂತಿದ್ದರು. ಆಮೇಲೆ ನನಗೆ ಆತನು, ಓ ನರಪುತ್ರನೇ, ನೋಡಿದಿಯೋ? ಮತ್ತೊಂದು ಸಾರಿ ತಿರುಗಿಕೋ ಇವುಗಳಿಗಿಂತ ಇನ್ನೂ ದೊಡ್ಡ ಅಸಹ್ಯವಾದವುಗಳನ್ನು ನೋಡುವಿ ಎಂದು ಹೇಳಿದನು. ಆಗ ಅವನು ನನ್ನನ್ನು ಕರ್ತನ ಆಲ ಯದ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋದನು. ಇಗೋ, ಕರ್ತನ ಮಂದಿರದ ಬಾಗಿಲಲ್ಲಿ ದ್ವಾರಾಂಗ ಳಕ್ಕೂ ಯಜ್ಞವೇದಿಗೂ ಮಧ್ಯದಲ್ಲಿ ಸುಮಾರು ಇಪ್ಪ ತ್ತೈದು ಮಂದಿಯು ಕರ್ತನ ಮಂದಿರಕ್ಕೆ ಬೆನ್ನು ಕೊಟ್ಟು, ಪೂರ್ವದಿಕ್ಕಿನ ಕಡೆಗೆ ತಮ್ಮ ಮುಖಗಳನ್ನು ತಿರು ಗಿಸಿ ಸೂರ್ಯ ನಮಸ್ಕಾರ ಮಾಡುತ್ತಿದ್ದರು. ಆಗ ಆತನು ನನಗೆ--ಓ ಮನುಷ್ಯಪುತ್ರನೇ, ನೋಡಿ ದೆಯಾ? ಅವರು ಇಲ್ಲಿ ಮಾಡುವ ಅಸಹ್ಯವಾದವುಗಳು ಯೆಹೂದನ ಮನೆತನದವರಿಗಲ್ಲವೇ? ಅವರು ದೇಶವನ್ನು ಹಿಂಸೆಯಿಂದ ತುಂಬಿಸಿದ್ದಲ್ಲದೆ ನನ್ನನ್ನು ಕೆಣಕಬೇಕೆಂದು ಮತ್ತೆ ಯತ್ನಿಸುತ್ತಿದ್ದಾರೆ. ನೋಡು, ಅವರ ಮೂಗಿಗೆ ಕೊಂಬೆಗಳನ್ನಿಟ್ಟು ಕೊಳ್ಳುತ್ತಾರೆ.ಆದದರಿಂದ ನಾನು ಸಹ ಉಗ್ರ ದಿಂದಲೇ ಇರುವೆನು. ನನ್ನ ಕಣ್ಣು ಕನಿಕರಿಸುವದೂ ಇಲ್ಲ, ನಾನು ಕಟಾಕ್ಷಿಸುವದೂ ಇಲ್ಲ, ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರಿಚಿದರೂ ನಾನು ಕೇಳಿಸಿಕೊಳ್ಳುವದೂ ಇಲ್ಲ.
- Hosea 8:1 ಹೋಶೇಯ 8:1ನಿನ್ನ ಬಾಯಿಗೆ ತುತೂರಿಯನ್ನು ಇಟ್ಟುಕೋ, ಅವರು ನನ್ನ ಒಡಂಬಡಿಕೆಯನ್ನು ವಿಾರಿ ನನ್ನ ನ್ಯಾಯಪ್ರಮಾಣಕ್ಕೆ ವಿರುದ್ಧವಾಗಿ ಅಪರಾಧ ಮಾಡಿದ್ದರಿಂದ ಅವನು ಹದ್ದಿನ ಹಾಗೆ ಕರ್ತನ ಆಲಯಕ್ಕೆ ವಿರುದ್ಧವಾಗಿ ಬರುತ್ತಾನೆ.
- Ezekiel 33:7–9 ಯೆಹೆಜ್ಕೇಲನು 33:7–9ಓ ಮನುಷ್ಯಪುತ್ರನೇ, ನಿನ್ನನ್ನು ನಾನು ಇಸ್ರಾಯೇಲಿನ ಮನೆತನದವರಿಗೆ ಕಾವಲುಗಾರನನ್ನಾಗಿ ಇಟ್ಟಿದ್ದೇನೆ; ಆದದರಿಂದ ನೀನು ನನ್ನ ಬಾಯಿಯ ವಾಕ್ಯವನ್ನು ಕೇಳು, ನನ್ನಿಂದ ಅವರನ್ನು ಎಚ್ಚರಿಸು. ನಾನು ದುಷ್ಟನಿಗೆ--ಓ ದುಷ್ಟ ಮನುಷ್ಯನೇ, ನೀನು ನಿಶ್ಚಯವಾಗಿ ಸಾಯುವಿ ಎಂದು ಹೇಳುವಾಗ ಒಂದು ವೇಳೆ ನೀನು ಅವನೊಂದಿಗೆ ಮಾತನಾಡದೆ ದುಷ್ಟನನ್ನು ಅವನ ಮಾರ್ಗದಿಂದ ಎಚ್ಚರಿಸದಿದ್ದರೆ ಆ ದುಷ್ಟ ಮನುಷ್ಯನು ಅವನ ಅಕ್ರಮಗಳಲ್ಲಿಯೇ ಸಾಯುವನು; ಅವನ ರಕ್ತವನ್ನು ನಾನು ನಿನ್ನ ಕೈಯಿಂದ ವಿಚಾರಿಸುವೆನು. ಆದಾಗ್ಯೂ ನೀನು ಒಂದು ವೇಳೆ ದುಷ್ಟನನ್ನು ಅವನ ದುಮಾರ್ಗಗಳಿಂದ ತಿರುಗಲು ಎಚ್ಚರಿಸಿದರೂ ಅವನು ತನ್ನ ದುಷ್ಟಮಾರ್ಗದಿಂದ ತಿರುಗದಿದ್ದರೆ ಅವನ ಅಕ್ರಮಗಳಲ್ಲಿಯೇ ಸಾಯುವನು; ಆದರೆ ನೀನು ನಿನ್ನ ಪ್ರಾಣವನ್ನು ತಪ್ಪಿಸಿಕೊಳ್ಳುವಿ.
- Ezekiel 23:36 ಯೆಹೆಜ್ಕೇಲನು 23:36ಇದಲ್ಲದೆ ಕರ್ತನು ನನಗೆ ಹೇಳಿದ್ದೇನಂದರೆ --ಮನುಷ್ಯಪುತ್ರನೇ, ಒಹೊಲಳಿಗೂ ಒಹೊಲೀ ಬಳಿಗೂ ನ್ಯಾಯತೀರಿಸುವಿಯೋ? ಹೌದು, ಅವರ ಅಸಹ್ಯಗಳನ್ನು ಅವರಿಗೆ ತಿಳಿಸು.