Ezekiel · chapter 16 · verse 22
Ezekiel 16:22 in Kannada
ನಿನ್ನ ಎಲ್ಲಾ ಅಸಹ್ಯಗಳ ಲ್ಲಿಯೂ ನಿನ್ನ ವ್ಯಭಿಚಾರಗಳಲ್ಲಿಯೂ ನಿನ್ನ ಎಳೆಯ ಪ್ರಾಯದ ದಿವಸಗಳನ್ನು ನೀನು ಬರೀ ಬೆತ್ತಲೆಯಾಗಿ ನಿನ್ನ ರಕ್ತದಲ್ಲಿ ಹೊರಳಾಡುತ್ತಿದ್ದದ್ದನ್ನು ನೀನು ಜ್ಞಾಪಕ ಮಾಡಲಿಲ್ಲ.
Ninna ellaa asahyagala lliyoo ninna vyabhichaaragalalliyoo ninna eleya praayada divasagalannu neenu baree bettaleyaagi ninna raktadalli horalaaduttiddaddannu neenu jnyaapaka maadalilla.
Ezekiel 16:22 in English
- King James Version (KJV)
- And in all thine abominations and thy whoredoms thou hast not remembered the days of thy youth, when thou wast naked and bare, [and] wast polluted in thy blood.
- World English Bible (WEB)
- In all your abominations and your prostitution you have not remembered the days of your youth, when you were naked and bare, and were wallowing in your blood.
- American Standard Version (ASV)
- And in all thine abominations and thy whoredoms thou hast not remembered the days of thy youth, when thou wast naked and bare, and wast weltering in thy blood.
- Bible in Basic English (BBE)
- And in all your disgusting and false behaviour you had no memory of your early days, when you were uncovered and without clothing, stretched out in your blood.
- Darby Translation (DBY)
- And in all thine abominations and thy whoredoms thou hast not remembered the days of thy youth, when thou wast naked and bare, when thou wast weltering in thy blood.
- Webster's Bible (WBS)
- And in all thy abominations and thy deeds of lewdness thou hast not remembered the days of thy youth, when thou wast naked and bare, [and] wast polluted in thy blood.
- Young's Literal Translation (YLT)
- And with all thine abominations and thy whoredoms, Thou hast not remembered the days of thy youth, When thou wast naked and bare, Trodden down in thy blood thou wast!
Read in context
- 20ಇದಾದ ಮೇಲೆ ನನಗೆ ಹುಟ್ಟಿದ್ದ ನನ್ನ ಕುಮಾರರನ್ನೂ ಕುಮಾರ್ತೆ ಯರನ್ನೂ ಅವರ ಆಹಾರಕ್ಕಾಗಿ ಅರ್ಪಿಸಿದಿ. ಈ ನಿನ್ನ ವ್ಯಭಿಚಾರ ಸಾಮಾನ್ಯವಾದದ್ದಲ್ಲ,
- 21ನೀನು ನನ್ನ ಮಕ್ಕಳನ್ನು ಕೊಂದು ಅವರಿಗೆ ಬೆಂಕಿಯನ್ನು ದಾಟುವ ಹಾಗೆ ಒಪ್ಪಿಸಿದಿಯಲ್ಲಾ;
- 22ನಿನ್ನ ಎಲ್ಲಾ ಅಸಹ್ಯಗಳ ಲ್ಲಿಯೂ ನಿನ್ನ ವ್ಯಭಿಚಾರಗಳಲ್ಲಿಯೂ ನಿನ್ನ ಎಳೆಯ ಪ್ರಾಯದ ದಿವಸಗಳನ್ನು ನೀನು ಬರೀ ಬೆತ್ತಲೆಯಾಗಿ ನಿನ್ನ ರಕ್ತದಲ್ಲಿ ಹೊರಳಾಡುತ್ತಿದ್ದದ್ದನ್ನು ನೀನು ಜ್ಞಾಪಕ ಮಾಡಲಿಲ್ಲ.
- 23ಇದಲ್ಲದೆ ಈ ನಿನ್ನ ಎಲ್ಲಾ ಕೆಟ್ಟತನಗಳ ತರುವಾಯ ಆಗಿದ್ದೇನಂದರೆ (ಅಯ್ಯೋ! ಅಯ್ಯೋ ಎಂದು ನಿನಗೆ ದೇವರಾದ ಕರ್ತನು ಹೇಳುತ್ತಾನೆ;)
- 24ನೀನು ಪ್ರತಿಯೊಂದು ಬೀದಿಯಲ್ಲಿಯೂ ಉನ್ನತ ಸ್ಥಳಗಳನ್ನು ಕಟ್ಟಿ ನಿನಗೆ ಉತ್ತಮವಾದ ಸ್ಥಳಗ ಳನ್ನು ಮಾಡಿಕೊಂಡಿರುವಿ.
Cross references
- Jeremiah 2:2 ಯೆರೆಮೀಯ 2:2ನೀನು ಹೋಗಿ ಯೆರೂಸಲೇಮಿನ ಕಿವಿಗಳಲ್ಲಿ ಕೂಗಿ ಹೇಳ ಬೇಕಾದದ್ದೇನಂದರೆ, ಕರ್ತನು ಹೀಗೆ ಹೇಳುತ್ತಾನೆ --ನಾನು ನಿನ್ನನ್ನು ನಿನ್ನ ಯೌವನದ ವಾತ್ಸಲ್ಯವನ್ನೂ ನಿನ್ನ ನಿಶ್ಚಿತಾರ್ಥದ ಪ್ರೀತಿಯನ್ನೂ ನೀನು ಅರಣ್ಯದಲ್ಲಿ ಬಿತ್ತಲ್ಪಡದ ದೇಶದಲ್ಲಿ ನನ್ನನ್ನು ಹಿಂಬಾಲಿಸಿದ್ದನ್ನೂ ಜ್ಞಾಪಕಮಾಡಿಕೊಳ್ಳುತ್ತೇನೆ.
- Ezekiel 16:43 ಯೆಹೆಜ್ಕೇಲನು 16:43ನೀನು ನಿನ್ನ ಯೌವನ ದಿವಸಗಳನ್ನು ಜ್ಞಾಪಕಮಾಡಿಕೊಳ್ಳದೆ ಈ ಸಂಗತಿಗಳಿಂದ ನೀನು ನನಗೆ ಬೇಸರಪಡಿಸಿದ್ದರಿಂದ ಇಗೋ, ನಾನು ಸಹ ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು ಎಂದು ದೇವರಾದ ಕರ್ತನು ಹೇಳುತ್ತಾನೆ. ನಿನ್ನ ಎಲ್ಲಾ ಅಸಹ್ಯವಾದವುಗಳ ಮೇಲೆ ಈ ಅಪವಿತ್ರತೆಯನ್ನು ನೀನು ಮಾಡಬಾರದು.
- Hosea 11:1 ಹೋಶೇಯ 11:1ಇಸ್ರಾಯೇಲನು ಮಗುವಾಗಿದ್ದಾಗ ನಾನು ಅವನನ್ನು ಪ್ರೀತಿಮಾಡಿದೆನು, ಮತ್ತು ನನ್ನ ಮಗನನ್ನು ಐಗುಪ್ತದೊಳಗಿಂದ ಕರೆದೆನು.
- Ezekiel 16:60–63 ಯೆಹೆಜ್ಕೇಲನು 16:60–63ಆದಾಗ್ಯೂ ನಿನ್ನ ಯೌವನದ ದಿನಗಳಲ್ಲಿ ನಾನು ನಿನ್ನ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಜ್ಞಾಪಕ ಮಾಡಿಕೊಂಡು ನಿನಗಾಗಿ ನಿತ್ಯವಾದ ಒಡಂಬಡಿಕೆ ಯೊಂದನ್ನು ಸ್ಥಾಪಿಸುವೆನು. ಆಗ ನೀನು ನಿನ್ನ ಮಾರ್ಗಗಳನ್ನು ಜ್ಞಾಪಕಮಾಡಿಕೊಂಡು ನಿನ್ನ ಸಹೋ ದರಿಗಳಾದ ನಿನ್ನ ಅಕ್ಕತಂಗಿಯರನ್ನು ಸೇರುವಾಗ ನಾಚಿಕೆಪಡುವಿ. ಅವರನ್ನು ನಿನ್ನ ಕುಮಾರ್ತೆಗಳಂತೆ ಕೊಡುವೆನು. ಆದರೆ ಇದು ನಿನ್ನ ಒಡಂಬಡಿಕೆ ಯಿಂದಲ್ಲ. ನಾನು ಈ ಒಡಂಬಡಿಕೆಯನ್ನು ನಿಮ್ಮೊಂದಿಗೆ ಸ್ಥಾಪಿಸುವೆನು; ಆದದರಿಂದ ನಾನೇ ಕರ್ತ ನೆಂದು ನಿಮಗೆ ಗೊತ್ತಾಗುವದು.ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ ನೀನು ಅವು ಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿನ್ನ ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ. ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ ನೀನು ಅವು ಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿನ್ನ ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
- Hosea 2:3 ಹೋಶೇಯ 2:3ಇಲ್ಲದಿದ್ದರೆ ನಾನು ಅವಳನ್ನು ಬೆತ್ತಲೆಯಾಗಿ ಮಾಡಿ ಅವಳು ಹುಟ್ಟಿದ ದಿನದಲ್ಲಾದ ಹಾಗೆ ನಿಲ್ಲಿಸಿ ಅವಳನ್ನು ಅರಣ್ಯ ದಂತೆ ಮಾಡುವೆನು. ಅವಳನ್ನು ಒಣಗಿದ ಭೂಮಿ ಯಂತೆ ಇಟ್ಟು ದಾಹದಿಂದ ಅವಳನ್ನು ಕೊಲ್ಲುತ್ತೇನೆ.
- Ezekiel 16:3–7 ಯೆಹೆಜ್ಕೇಲನು 16:3–7ದೇವರಾದ ಕರ್ತನು ಯೆರೂಸಲೇಮಿನವರಿಗೆ ಹೀಗೆ ಹೇಳುತ್ತಾನೆ--ನಿನ್ನ ಹುಟ್ಟುವಿಕೆಯೂ ನಿನ್ನ ಹುಟ್ಟಿದ ಸ್ಥಳವೂ ಕಾನಾನ್ ದೇಶದಿಂದಾದದ್ದೇ; ನಿನ್ನ ತಂದೆ ಅಮೋರಿಯನು, ನಿನ್ನ ತಾಯಿ ಹಿತ್ತಿಯಳು ನಿನ್ನ ಜನನವನ್ನು ಕುರಿತು ನೀನು ಹುಟ್ಟಿದ ದಿನದಲ್ಲಿ ನಿನ್ನ ಹೊಕ್ಕಳು ಕತ್ತರಿಸ ಲ್ಪಡಲಿಲ್ಲ; ಶುದ್ಧವಾಗುವ ಹಾಗೆ ನೀರಿನಿಂದ ತೊಳೆ ಯಲ್ಪಡಲಿಲ್ಲ, ನಿನಗೆ ಉಪ್ಪು ಹಾಕಲಿಲ್ಲ, ನಿನ್ನನ್ನು ಬಟ್ಟೆಯಿಂದ ಸುತ್ತಲಿಲ್ಲ. ನಿನ್ನನ್ನು ಕರುಣಿಸಿ ಕಟಾಕ್ಷಿಸಿ ಯಾರೂ ನಿನಗೆ ಇಂಥ ಒಂದು ಸಹಾಯವನ್ನು ಮಾಡ ಲಿಲ್ಲ, ಆದರೆ ನೀನು ಹುಟ್ಟಿದ ದಿನದಲ್ಲಿ ಅಸಹ್ಯಪಟ್ಟು ನಿನ್ನನ್ನು ಹೊಲದಲ್ಲಿ ಬಿಸಾಡಿದರು. ನಾನು ನಿನ್ನ ಬಳಿಯಲ್ಲಿ ಹಾದು ಹೋಗುವಾಗ ನೀನು ನಿನ್ನ ಸ್ವಂತ ರಕ್ತದಲ್ಲಿ ಬಿದ್ದು ಹೊರಳಾಡುತ್ತಿದ್ದ ನಿನ್ನನ್ನು ನಾನು ನಿನ್ನ ರಕ್ತದಲ್ಲಿ ನೋಡಿದಾಗ ಬದುಕು ಎಂದೆನು; ಹೌದು, ನೀನು ನಿನ್ನ ರಕ್ತದಲ್ಲಿ ಬಿದ್ದಿರುವಾಗ ನಾನು ಬದುಕು ಅಂದೆನು. ಭೂಮಿಯಲ್ಲಿಯ ಮೊಳಿಕೆಯೋ ಎಂಬಂತೆ ನಾನು ನಿನ್ನನ್ನು ಬೆಳೆಸಲು (ಹೆಚ್ಚಿಸಲು) ನೀನು ಬಲಿತು ಪ್ರಾಯವು ತುಂಬಿ ಅತಿ ಸೌಂದರ್ಯವಂತೆಯಾದೆ; ನಿನ್ನ ಸ್ತನಗಳು ರೂಪಗೊಂಡವು; ನಿನ್ನ ಕೂದಲು ಬೆಳೆಯಿತು; ಆದರೆ ಮೊದಲು ನೀನು ಬರೀ ಬೆತ್ತಲೆ ಯಾಗಿದ್ದೆ.